ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕ್ರೀಡೆಯಲ್ಲಿ ಭಾಗವಹಿಸಲು ನಿರಂತರವಾದ ಅಭ್ಯಾಸ, ತರಬೇತಿ ಅವಶಕ್ಯ. ಇತ್ತೀಚಿನ ಕ್ರೀಡೆಯಲ್ಲಿ ಭಾಗವಹಿಸುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಪಾಠದ ಜೊತೆಗೆ ಪಾಠೇತರ ಚಟುವಟಿಕೆಗಳಲ್ಲಿ ಭಾಗವಹಿಸುವಂತಾಗಬೇಕು. ಶಿಕ್ಷಕರನ್ನು ಹಾಗೂ ಹೆತ್ತವರನ್ನು ಗೌರವಿಸಿ ಪ್ರೀತಿಸಿದರೆ ಉತ್ತಮ ವಿದ್ಯಾರ್ಥಿಗಳಾಗಿ ಬೆಳೆದು ಜೀವನದಲ್ಲಿ ಸಾಧನೆ ಮಾಡಲು ಸಾಧ್ಯವಿದೆ. ಕ್ರೀಡಾಕೂಟದಲ್ಲಿ ಕ್ರೀಡಾ ಮನೋಭಾವದಿಂದ ಭಾಗವಹಿಸಿ ಉತ್ತಮ ಕ್ರೀಡಾಪಟುವಾಗಿ ಗುರುತಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಕುಂದಾಪುರ ಶ್ರೀ ಸೀತಾರಾಮ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸುರೇಂದ್ರ ಕೊಠಾರಿ ಹೇಳಿದರು. ಅವರು ಎಸ್.ವಿ.ಎಸ್. ಅಸೋಸಿಯೇಶನ್ ಗಂಗೊಳ್ಳಿ ಪ್ರವರ್ತಿತ ಎಸ್.ವಿ. ಪದವಿಪೂರ್ವ ಕಾಲೇಜು, ಎಸ್.ವಿ. ಕನ್ನಡ ಮಾಧ್ಯಮ ಪ್ರೌಢಶಾಲೆ ಮತ್ತು ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಗಳ ವಾರ್ಷಿಕ ಕ್ರೀಡಾಕೂಟವನ್ನು ಎಸ್.ವಿ. ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಅಧ್ಯಕ್ಷತೆ ವಹಿಸಿದ್ದರು. ಎಸ್.ವಿ. ವಿದ್ಯಾಸಂಸ್ಥೆಗಳ ಸಂಚಾಲಕ ಎನ್.ಸದಾಶಿವ ನಾಯಕ್ ಶುಭ ಹಾರೈಸಿದರು. ಎಸ್.ವಿ. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರಾರ್ಥನಾ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಕುಡೂರು ಮನೆಯವರ ಯಜಮಾನಿಕೆಯ ಎಲ್ಲೂರು ಕಂಬಳ ಗುರುವಾರ ಸಂಜೆ ವೈಭವದಿಂದ ನಡೆಯಿತು. ಜಿಲ್ಲೆಯ ಹಿರಿಯ ಧಾರ್ಮಿಕ ಮುಖಂಡರಾದ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರ ಮಾರ್ಗದರ್ಶನದಲ್ಲಿ ನಡೆದ ಕಂಬಳ ಮಹೋತ್ಸವಕ್ಕೆ ಕುಡೂರು ಮನೆಯ ಯಜಮಾನರಾದ ರಾಮ್‌ಕಿಶನ್ ಹೆಗ್ಡೆ ಅವರು ಕೋಣದ ಮಾಲಿಕರಿಗೆ ತಾಂಬೂಲ ಗೌರವ ನೀಡುವ ಮೂಲಕ ಚಾಲನೆ ನೀಡಿದರು. ಶಾಸಕ ಗುರುರಾಜ್ ಗಂಟಿಹೊಳೆ, ಬಾಂಡ್ಯ ಸುಭಾಶ್ಚಂದ್ರ ಶೆಟ್ಟಿ, ರಾಮ್‌ರತನ್ ಹೆಗ್ಡೆ, ಅನುಪಮಾ ಎಸ್ ಶೆಟ್ಟಿ, ಪ್ರೀತಮ್ ಎಸ್ ರೈ, ಶ್ರೀಶಾ ರೈ, ವೈಷ್ಣಮಿ ಆರ್ ಹೆಗ್ಡೆ, ಸರ್ಜಿತ್ ಶೆಟ್ಟಿ ಕುಡೂರು, ಮೋಹನ್‌ದಾಸ್ ಶೆಟ್ಟಿ ಕುಡೂರು, ಎಂ.ಆರ್.ಶೆಟ್ಟಿ, ಎಂ.ರಘುರಾಮ್ ಶೆಟ್ಟಿ ಇದ್ದರು. ಉಡುಪಿ ಹಾಗೂ ಕಾರವಾರ ಜಿಲ್ಲೆಯ 48 ಜೊತೆ ಕೋಣಗಳು, ಕಂಬಳ ಗದ್ದೆಯಲ್ಲಿ ಓಟ ನಡೆಸಿದ್ದವು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ ತಗ್ಗರ್ಸೆ, ಮಂಗಳೂರು ವಿಶ್ವವಿದ್ಯಾಲಯದ ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಸದಸ್ಯ ರಾಜೇಶ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಪ್ರಯುಕ್ತ ಅಂತರ್ ಕಾಲೇಜು ಸಂಗೀತ ಸ್ಪರ್ಧೆ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಯು.ಎಸ್.ಶೆಣೈ ಇತ್ತೀಚೆಗೆ ಭಾರತೀಯ ಸಂಗೀತ ಕಲೆಯ ಕುರಿತು ಆಸಕ್ತಿ ಹೆಚ್ಚುತ್ತಿದೆ. ಸಂಗೀತಕ್ಕೆ ಜಾತಿ ಮತ ಪಂಥ ಮತ್ತು ಧರ್ಮ ಇವುಗಳ ಬೇಧವಿಲ್ಲ. ಸಂಗೀತ ಎಲ್ಲರೂ ಆಸಕ್ತಿ ಬೆಳೆಸಿಕೊಳ್ಳಬಹುದು ಹೇಳಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಾಮೂಲಿನ ಸರಸ್ವತಿ ಸಂಗೀತ ಶಾಲೆಯ ನಿರ್ದೇಶಕರಾದ ಶಾರದಾ ಹೊಳ್ಳ ಮಾತನಾಡಿ, ಸಂಗೀತವು ಚಿಂತೆ ಮರೆಸುವ ಕಲೆ. ಮನಸಿಗೆ ಸಂತೋಷ, ಸಮಾಧಾನ ಮತ್ತು ನೆಮ್ಮದಿಯನ್ನು ಕೊಡುತ್ತದೆ. ಈ ಹಿಂದೆ ಸಂಗೀತ ಕಲಿಯುವುದು ಕಷ್ಟ ಆಗಿತ್ತು. ಪ್ರಸ್ತುತ ಸಂಗೀತ ಮತ್ತು ಇತರ ಕಲೆಗಳನ್ನು ಕಲಿಯಲು ಸಾಕಷ್ಟು ಅವಕಾಶಗಳಿವೆ. ಉತ್ತಮ ಏಕಾಗ್ರತೆ ಪಡೆಯಲು ಯಾವುದೇ ಒಂದು ಕಲೆಯ ಕುರಿತು ಆಸಕ್ತಿ ಬೆಳೆಸಿಕೊಳ್ಳಿ ಎಂದು ಅವರು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು. ಭಂಡಾರ್ಕಾರ್ಸ್ ಪದವಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತೆಕ್ಕಟ್ಟೆಯ ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್‌ನಲ್ಲಿ ಮಕ್ಕಳಿಗೆ ಏರ್ಪಡಿಸಿದ ಸಾಂಸ್ಕ್ರತಿಕ ಮತ್ತು ಸಾಹಿತ್ಯಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಏರ್ಪಡಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕುಂಭಾಶಿ ಬ್ಯಾಂಕ್ ಬರೋಡ ಮುಖ್ಯ ಪ್ರಬಂಧಕರಾದ ಬೇಳೂರು ಕರುಣಾಕರ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಕ್ಕಳಿಗೆ ಬಹುಮಾನ ವಿತರಣೆಯನ್ನು ಮಾಡಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅಭಿನಂದಿಸಿ ಶಾಲೆಯ ಉತೃಷ್ಠ ಸಾಧನೆಗಳ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಗ್ರಾಮೀಣ ಪ್ರದೇಶದಲ್ಲಿ ಇರುವ ಇಂತಹ ಶಾಲೆಗಳಲ್ಲಿ ರಾಷ್ಟ್ರ, ಅಂತ ರಾಷ್ಟ್ರೀಯ ಮಟ್ಟದ ಪ್ರತಿಭೆಗಳು ಹುಟ್ಟಿಕೊಳ್ಳುತ್ತವೆ. ಇಂತಹ ಮಕ್ಕಳನ್ನು ಪ್ರೋತ್ಸಾಹಿಸಿ ಮುಂದಿನ ಸಾಧನೆಗೆ ಶಾಲೆ ಹಾಗೂ ಪೋಷಕರು ಸಹಕಾರಿಯಾಗಬೇಕೆಂದು ತಿಳಿಸಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿ ಅವರು ಮಾತನಾಡಿ, ಬಹುಮಾನ ಎನ್ನುವುದು ಮುಂದಿನ ಸಾಧನೆಗೆ ದಾರಿಯಾಗಬೇಕು ಹಾಗೂ ವಿದ್ಯಾರ್ಥಿಗಳು ಇನ್ನಷ್ಟು ಸಾಧನೆ ಮಾಡುವಂತಾಗಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ ಚಿತ್ರ ಕಲಾ ಸ್ಪರ್ಧೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕು ಯುವ ಬಂಟರ ಸಂಘ, ಲಯನ್ ಕ್ಲಬ್ ಕುಂದಾಪುರ ಕೋಸ್ಟಲ್, ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್, ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಜಂಟಿಯಾಗಿ ಬೃಹತ್ ರಕ್ತದಾನ ಶಿಬಿರವು ಇಲ್ಲಿನ ಆರ್. ಎನ್. ಶೆಟ್ಟಿ ಸಭಾಂಗಣದಲ್ಲಿ ನಡೆಯಿತು. ಶಿಬಿರವನ್ನು ಉತ್ತಮ್ ಹೋಮಿಯೋ ಕ್ಲಿನಿಕ್ ನ ವೈದ್ಯಾಧಿಕಾರಿ ಡಾ. ಉತ್ತಮ್ ಕುಮಾರ್ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ನಿತೀಶ್ ಶೆಟ್ಟಿ ಬಸ್ರೂರು ವಹಿಸಿದ್ದರು. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸಭಾಪತಿ ಜಯಕರ ಶೆಟ್ಟಿ ಶಾನಾಡಿ, ಗಿಳಿಯಾರು ಕುಶಲ್ ಹೆಗ್ಡೆ ಮೆಮೊರಿಯಲ್ ಟ್ರಸ್ಟಿನ ಉದಯ್ ಕುಮಾರ್ ಹೆಗ್ಡೆ, ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕರಾದ ಶ್ರ ಬಿ. ಅರುಣ್ ಕುಮಾರ್ ಶೆಟ್ಟಿ, ಬಂಟರ ಯಾನೆ ನಾಡವರ ಮಾತ್ರ ಸಂಘದ ಮಾಜಿ ಸಂಚಾಲಕರಾದ ಆವರ್ಸೆ ಸುಧಾಕರ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಮದರ್ ತೆರೆಸಾ ಶಿಕ್ಷಣ ಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟವನ್ನು ಅತ್ಯುತ್ಸಾಹದಿಂದ ಆಯೋಜಿಸಲಾಯಿತು. ಸಂಸ್ಥೆಯ ಸಂಸ್ಥಾಪಕರಾದ ಶಮಿತಾ ರಾವ್ ಅವರು ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ಉದ್ಘಾಟನಾ ಸಮಾರಂಭದಲ್ಲಿ ಸಂಸ್ಥೆಯ ಸಂಸ್ಥಾಪಕರು, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಶಾಲಾ ಮುಖ್ಯೋಪಾಧ್ಯಾಯಿನಿ, ಉಪ ಮುಖ್ಯೋಪಾಧ್ಯಾಯರು, ಹಿರಿಯ ಶಿಕ್ಷಕರು ಭಾಗವಹಿಸಿದ್ದರು. ಪ್ರಾಥಮಿಕ ಹಾಗೂ ಹೈಸ್ಕೂಲ್ ವಿಭಾಗದ ವಿದ್ಯಾರ್ಥಿನಿಯರು ಪ್ರಾರ್ಥನಾ ಗೀತೆ ಹಾಡಿದರು. ಸಂಸ್ಥೆಯ ಸಂಸ್ಥಾಪಕರಾದ ರೆನಿಟಾ ಲೋಬೊ ಹಾಗೂ ಸಾಧಕ ಕ್ರೀಡಾಪಟುಗಳು ಕ್ರೀಡಾ ಜ್ಯೋತಿಯನ್ನು ಬೆಳಗಿಸಿ ಕ್ರೀಡಾಕೂಟಕ್ಕೆ ವಿದ್ಯುಕ್ತ ಚಾಲನೆ ನೀಡಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜೈಸನ್ ಲೂವಿಸ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿ ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆಯ ಮಹತ್ವದ ಬಗ್ಗೆ ಅರಿವು ಮೂಡಿಸಿದರು. ವಿದ್ಯಾರ್ಥಿನಿ ಶ್ರಾವಣಿ ವಿದ್ಯಾರ್ಥಿಗಳಿಗೆ ಶ್ರದ್ಧೆಯಿಂದ ಕ್ರೀಡಾ ವಚನ ಬೋಧಿಸಿದರು. ದೈಹಿಕ ಶಿಕ್ಷಕರಾದ ಸತೀಶ್, ಪ್ರದೀಪ, ಚಿದಾನಂದ ಹಾಗೂ ಜಯಲಕ್ಷ್ಮಿ ಅವರು ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ತೀರ್ಪುಗಾರರಾಗಿ, ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಿದರು. ದ್ವಿತೀಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಆಶ್ರಯದಲ್ಲಿ ಪ್ರಥಮ ವರ್ಷದ ಬಿಬಿಎ ವಿದ್ಯಾರ್ಥಿಗಳಿಗೆ ಲಾಜಿಸ್ಟಿಕ್ ಹಾಗೂ ಸಪ್ಲೆöÊ ಚೈನ್ ಮ್ಯಾನೇಜ್ಮೆಂಟ್ ಹಾಗೂ ಇ-ಕಾಮರ್ಸ್ ವಿಷಯಕ್ಕೆ ಸಂಬಂಧಿಸಿದ ವಿಶೇಷ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಫ್ರೀ ಲೆನ್ಸ್ ತರಬೇತುದಾರರು ಹಾಗೂ ಬಿಸಿನೆಸ್ ಕೋಚ್ ಆಗಿರುವ ಗೌತಮ್ ಎಚ್. ಶೆಟ್ಟಿಗಾರ್ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ನಂದಾ ರೈ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ನಾಗರತ್ನ ಪ್ರಾರ್ಥಿಸಿ, ಚೇತನ್ ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿ, ಸೌರವ್ ಸ್ವಾಗತಿಸಿ, ನಿಶ್ಮಿತಾ ಕಾರ್ಯಕ್ರಮ ನಿರೂಪಿಸಿ, ಮಣಿಕಂಠ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟ ಅಮೃತೇಶ್ವರೀ ಮೇಳದಲ್ಲಿ ಹಲವು ಸಂವತ್ಸರಗಳ ಸಾರ್ಥಕ ಕಲಾಯಾನದ ಮೂಲಕ ಹಿರಿಯ ಕಲಾವಿದರಾಗಿ ರೂಪುಗೊಂಡ ಪ್ರತಿಭಾವಂತ ಸೌಮ್ಯ ಸ್ವಭಾವದ ನಿಷ್ಠಾವಂತ ಯಕ್ಷ ಕಲಾವಿದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೋಟ ಸುರೇಶ ಬಂಗೇರ ಅವರಿಗೆ ಕೋಟ ಗಿಳಿಯಾರು ಹಿರಿಯ ನಾಗರಿಕರ ವೇದಿಕೆ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಮಹಾಸತಿ ಪ್ರಾಥಮಿಕ ಮೀನುಗಾರರ ಮಹಿಳಾ ವಿವಿದ್ಧೋದ್ದೇಶ ಸಹಕಾರಿ ಸಂಘಕ್ಕೆ ರಾಜ್ಯ ಮಟ್ಟದ ಉತ್ತಮ ಮಹಿಳಾ ಮೀನುಗಾರರ ಸಹಕಾರಿ ಸಂಘ ಪ್ರಶಸ್ತಿ ದೊರೆತಿದೆ. ಬೆಂಗಳೂರಿನಲ್ಲಿ ನಡೆದ ವಿಶ್ವ ಮೀನುಗಾರಿಕೆ ದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಗಂಗೊಳ್ಳಿಯ ಮಹಾಸತಿ ಪ್ರಾಥಮಿಕ ಮೀನುಗಾರರ ಮಹಿಳಾ ವಿವಿದ್ಧೋದ್ದೇಶ ಸಹಕಾರಿ ಸಂಘಕ್ಕೆ ರಾಜ್ಯ ಮಟ್ಟದ ಉತ್ತಮ ಮಹಿಳಾ ಮೀನುಗಾರರ ಸಹಕಾರಿ ಸಂಘ ಪ್ರಶಸ್ತಿಯನ್ನು ಸಂಘದ ಅಧ್ಯಕ್ಷೆ ನೀಲಾವತಿ ಎಸ್. ಖಾರ್ವಿ ಅವರಿಗೆ ಪ್ರದಾನಿಸಿ ಗೌರವಿಸಿದರು. ಮೀನುಗಾರಿಕೆ ಸಚಿವ ಮಂಕಾಳ್ ವೈದ್ಯ, ಸಚಿವರು, ಮೀನುಗಾರಿಕೆ ಇಲಾಖೆ ನಿರ್ದೇಶಕ ದಿನೇಶ ಕಳ್ಳೇರ್, ಇಲಾಖೆ ಅಧಿಕಾರಿಗಳು, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಣಪತಿ ಖಾರ್ವಿ, ನಿರ್ದೇಶಕರು, ಸಿಬ್ಬಂದಿಗಳು ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯವಹಿಸುತ್ತಿರುವ ನೋಂದಾಯಿತ ಸಂಘ ಸಂಸ್ಥೆಗಳಿಗೆ ಪ್ರೋತ್ಸಾಹ ನೀಡಲು ಹಾಗೂ ಅಸಂಘಟಿತ ಕಲಾವಿದರಿಗೆ ವಾದ್ಯ ಪರಿಕರ / ವೇಷಭೂಷಣ ಖರೀದಿಸಲು ಮತ್ತು ಚಿತ್ರಕಲೆ / ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಧನಸಹಾಯ ನೀಡಲು ಪ್ರಸಕ್ತ ಸಾಲಿನ ಸಾಮಾನ್ಯ, ವಿಶೇಷ ಘಟಕ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ಸೇವಾ ಸಿಂಧು ವೆಬ್‌ಸೈಟ್ Sevasindhu.karnataka.gov.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿ. 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2986168, 7026506627 ಅಥವಾ 9591475884 ಅನ್ನು ಕಚೇರಿ ಅವಧಿಯಲ್ಲಿ ಅಥವಾ ವೆಬ್‌ಸೈಟ್ www.kannadasiri.karnataka.gov.in ಅನ್ನು ಸಂರಕ್ಷಿಸಬಹುದಾಗಿದೆ. ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅರ್ಜಿಗಳನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ…
