ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎ ರ ಮಲ್ಪೆಯಿಂದ ಕರಾವಳಿ ಬೈಪಾಸ್ವರೆಗಿನ ಬಾಕಿ ಉಳಿದಿರುವ ಭೂ ಸ್ವಾಧೀನ ಪ್ರಕ್ರಿಯೆಯನ್ನು ಅತೀ ಶೀಘ್ರದಲ್ಲಿ ಪೂರ್ಣಗೊಳಿಸಿ ಹೆದ್ದಾರಿ ಕಾಮಗಾರಿಗಳನ್ನು ಕೈಗೊಳ್ಳಬೇಕು. ಭೂ ಮಾಲೀಕರಿಗೆ ಪರಿಹಾರ ಧನವನ್ನು ಪಾವತಿಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ ರಾಷ್ಟ್ರೀಯ ಹೆದ್ದಾರಿ 169 ಎ ಕಾಮಗಾರಿಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿ 169 ಎ ರ ಮಲ್ಪೆ – ತೀರ್ಥಹಳ್ಳಿವರೆಗಿನ ಕಾಮಗಾರಿ ಜಿಲ್ಲೆಯಲ್ಲಿ ಅಂತಿಮ ಹಂತದಲ್ಲಿದೆ. ಆದರೆ ಕಾಮಗಾರಿ ನಡೆಯುತ್ತಿರುವ ಕೆಲವು ಕಡೆಗಳಲ್ಲಿ ಭೂ ಸ್ವಾಧೀನ ಪ್ರಕ್ರಿಯೆಯು ಪೂರ್ಣ ಪ್ರಮಾಣದಲ್ಲಿ ಆಗದ ಕಾರಣ ಕಾಮಗಾರಿಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಭೂ ಸ್ವಾಧೀನ ಕಾರ್ಯಗಳನ್ನು ಕಂದಾಯ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಅಭಿಯಂತರರ ಇಲಾಖೆಯವರು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ, ಪೂರ್ಣಗೊಳಿಸಬೇಕು ಎಂದರು. ಭೂ ಮಾಲೀಕರಿಗೆ ವೈಜ್ಞಾನಿಕವಾಗಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ನೇತೃತ್ವದಲ್ಲಿ ಸರಕಾರಿ ಪ್ರೌಢ ಶಾಲೆ ಸಿದ್ದಾಪುರದಲ್ಲಿ ಅಂಪಾರು ವೃತ್ತ ಮಟ್ಟದ ಕ್ರೀಡಾಕೂಟವು ಜರುಗಿತು. ಕಾರ್ಯಕ್ರಮವನ್ನು ಸಚ್ಚಿದಾನಂದ ಚಾತ್ರ ಇವರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಬ್ಯಾಂಡುಗಳನ್ನು ಹೊಂದಿ ವಿವಿಧ ಸಮವಸ್ತ್ರದಲ್ಲಿ ಕಂಗೊಳಿಸಿದ ಕ್ರೀಡಾಳುಗಳ ಆಕರ್ಷಕ ಪಥಸಂಚಲನದ ಗೌರವವನ್ನು ಮೋಹನದಾಸ ಶೆಟ್ಟಿ ಸಿದ್ದಾಪುರ ಅವರು ಗೌರವವನ್ನು ಸ್ವೀಕರಿಸಿದರು. ಕ್ರೀಡಾ ಧ್ವಜವನ್ನು ಉದ್ಯಮಿ ಸುರೇಶ್ ಶೆಟ್ಟಿ ಸಿದ್ದಾಪುರ ಅವರು ಅರಳಿಸಿದರು. ಶ್ರೀ ಮಹಾಗಣಪತಿ ದೇವಸ್ಥಾನದಿಂದ ಕ್ರೀಡಾಳುಗಳು ತಂದ ಕ್ರೀಡಾ ಜ್ಯೋತಿಯನ್ನು ರಾಮದಾಸ್ ಮಡಿವಾಳ ಬಾಂಡ್ಯ ಅವರು ಬೆಳಗಿಸಿ ಕ್ರೀಡಾಕೂಟವನ್ನು ಅಧಿಕೃತವಾಗಿ ಚಾಲನೆಗೊಳಿಸಿದರು. ಕ್ರೀಡಾಕೂಟದ ಪ್ರತಿಜ್ಞೆಯನ್ನು ಶಾಲಾ ನಾಯಕಿ ಚೈತ್ರ ಪ್ರಭು ಎಲ್ಲಾ ಕ್ರೀಡಾಪಟುಗಳಿಗೆ ಬೋಧಿಸಿದರು. ಕಾರ್ಯಕ್ರಮದಲ್ಲಿ ವಾರ್ಷಿಕೋತ್ಸವ ಸಮಿತಿಯ ಅಧ್ಯಕ್ಷ ಶ್ರೀಕಾಂತ್ ನಾಯಕ್, ಗೌರವಾಧ್ಯಕ್ಷರಾದ ಸಂಜೀವ್ ಶೆಟ್ಟಿ, ಸಿದ್ದಾಪುರ ಹಿರಿಯ ವಿದ್ಯಾರ್ಥಿ ಸಂಘಟನೆ ಪ್ರವೀಣ್ ಪಟೇಲ್, ಸಿದ್ದಾಪುರ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಚಂದ್ರಕುಲಾಲ್, ವಾರ್ಷಿಕೋತ್ಸವ ಸಮಿತಿ ಖಜಾಂಚಿ ಗಣೇಶ ಶೇಟ್, ಸಿದ್ದಾಪುರ ಸರ್ಕಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸ. ಪ. ಪೂ ಕಾಲೇಜು ಕುಂದಾಪುರದಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕುಸ್ತಿ ಸ್ಪರ್ಧೆಯಲ್ಲಿ ಕೋಟ ವಿವೇಕ ಪ.ಪೂ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು 4 ಚಿನ್ನ, 3 ಬೆಳ್ಳಿ, 1 ಕಂಚಿನ ಪದಕದೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ ವಂಶಿತ್, ನಿಹಾನ್, ಅಭಿಷೇಕ್ ಹಾಗೂ ರಿತ್ವಿಕ್ ಒಟ್ಟು ನಾಲ್ಕು ವಿದ್ಯಾರ್ಥಿಗಳು ಹೊಸಪೇಟೆಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ ಭಂಡಾರ್ಸ್ಕಾರ್ಸ್ ಪದವಿಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಕುಂದಾಪುರ ಗಾಂಧೀ ಮೈದಾನದಲ್ಲಿ ನಡೆದ ಕುಂದಾಪುರ ತಾಲೂಕು ಪದವಿಪೂರ್ವ ಬಾಲಕ/ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ 2 ತಂಡಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಯಕ್ಷಗಾನದ ಬಗ್ಗೆ ಎಳೆ ವಯಸ್ಸಿನಲ್ಲೇ ಅಭಿರುಚಿ ದೊರೆತರೆ ಭಾಷಾ ಜ್ಞಾನದ ಜೊತೆಗೆ ಸುಸಂಸ್ಕೃತರಾಗಿಸಲು ಸಾಧ್ಯ ಎಂದು ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ ಇದರ ಅಧ್ಯಕ್ಷ ಆನಂದ್ ಸಿ ಕುಂದರ್ ಅಭಿಪ್ರಾಯಪಟ್ಟರು. ಅವರು ಸಾಸ್ತಾನದ ಹಂಗಾರಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ (ದೂಳಂಗಡಿ) ಇಲ್ಲಿ ಯಕ್ಷಗಾನ ಕಲಾಕೇಂದ್ರ ಇವರ ಸಂಯೋಜನೆಯಲ್ಲಿ ಯಕ್ಷಗಾನ ಹೆಜ್ಜೆ ತರಬೇತಿ ಕಾರ್ಯಕ್ರಮವನ್ನು ಚಂಡೆ ಭಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿ ಮಕ್ಕಳಲ್ಲಿ ಪೌರಾಣಿಕ ಕಥೆಗಳ ಬಗ್ಗೆ ವಿವರವಾಗಿ ತಿಳಿಪಡಿಸಲು ಯಕ್ಷಗಾನ ಪೂರಕ ವಾತಾವರಣ ಕಲ್ಪಿಸುತ್ತದೆ,ಅಲ್ಲದೆ ಮುಂದಿನ ತಲೆಮಾರಿಗೆ ಕೊಂಡ್ಯೋಯಲ್ಲು ಸಹಕಾರಿಯಾಗಲಿದೆ ಎಂದರು. ಸಭಾಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಂಸಿ ಅಧ್ಯಕ್ಷ ರಾಮ್ ಕುಮಾರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಬ್ಯಾಂಕ್ ಪ್ರಭಂಧಕ ರಘುರಾಮ್ ಬೈಕಾಡಿ,ಕಲಾಕೇಂದ್ರದ ಕಾರ್ಯದರ್ಶಿ ರಾಜಶೇಖರ್ ಹೆಬ್ಬಾರ್ ಉಪಸ್ಥಿತರಿದ್ದರು. ಶಾಲಾಮುಖ್ಯ ಶಿಕ್ಷಕಿ ಪ್ರಸಿಲ್ಲಾ ಸ್ವಾಗತಿಸಿದರು. ಕಾರ್ಯಕ್ರಮವನ್ನುಸಹಶಿಕ್ಷಕಿ ಉಷಾರಾಣಿ ನಿರೂಪಿಸಿದರು. ಶಿಕ್ಷಕಿ ವೀಣಾ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡಬಿದಿರೆ: ದಕ್ಷಿಣ ಕನ್ನಡ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮತ್ತು ಸಂತ ಅಲೋಶಿಯಸ್ ಪದವಿಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನಲ್ಲಿ ಜರುಗಿದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಹುಡುಗರ ವಿಭಾಗದಲ್ಲಿ 04 ಚಿನ್ನ 02 ಬೆಳ್ಳಿ ಹಾಗೂ 03 ಕಂಚಿನೊಂದಿಗೆ ಒಟ್ಟು 09 ಪದಕ ಪಡೆದು ಪ್ರಥಮ ಸ್ಥಾನವನ್ನು ಪಡೆದುಕೊಂಡರು. ಹುಡುಗಿಯರ ವಿಭಾಗದಲ್ಲಿ 05 ಚಿನ್ನ 04 ಬೆಳ್ಳಿ ಹಾಗೂ 01 ಕಂಚಿನೊAದಿಗೆ ಒಟ್ಟು 10 ಪದಕಗಳನ್ನು ಪಡೆದು ಪ್ರಥಮ ಸ್ಥಾನವನ್ನು ಪಡೆದುಕೊಂಡರು.ಹುಡುಗರ ವಿಭಾಗದಲ್ಲಿ : 57 ಕೆಜಿ – ಪ್ರಥ್ವಿರಾಜ್ (ಪ್ರಥಮ), 61 ಕೆಜಿ – ಆಕಾಶ್ (ದ್ವಿತೀಯ), 65 ಕೆಜಿ – ಅನೂಪ್ (ದ್ವಿತೀಯ), 70 ಕೆಜಿ – ಪ್ರಣವ್ (ಪ್ರಥಮ), ರೋಹನ್ ಎಸ್ (ತೃತೀಯ), 74 ಕೆಜಿ – ರಜತ್ ಬಸು (ಪ್ರಥಮ), 86 ಕೆಜಿ – ರಿತ್ವಿಕ್ (ಪ್ರಥಮ), 92 ಕೆಜಿ – ಮಹಮ್ಮದ್ ಶಿಹಾಮ್ ಶಬೀರ್ (ತೃತೀಯ), 97+ ಕೆಜಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ರಷ್ಯಾದಕರೇಲಿಯಾ ಗಣರಾಜ್ಯದ ಪೆಟ್ರೋಜಾವೊಡ್ಸ್ಕ್ದಲ್ಲಿ ಸೆಪ್ಟೆಂಬರ್ 15 ರಿಂದ 17ರ ವರೆಗೆ ನಡೆಯಲಿರುವ ’ಬ್ರಿಕ್ಸ್ ರಾಷ್ಟ್ರಗಳ ಪ್ರಾದೇಶಿಕ ಸಹಕಾರದ ಮೂಲಕ ಪರಿಸರ ಮತ್ತು ಪ್ರಕೃತಿ ನಿರ್ವಹಣೆ’ಯ ಕುರಿತು ನಡೆಯಲಿರುವ ಮೂರನೇ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಉಪನ್ಯಾಸ ನೀಡಲಿದ್ದಾರೆ. ”ಪಶ್ಚಿಮಘಟ್ಟಗಳ ಸಂರಕ್ಷಣೆ: ಜಾಗೃತಿಯಿಂದ ಸಮುದಾಯದ ಕಾರ್ಯದತ್ತ” ಕುರಿತ ವಿಶೇಷ ಅಧಿವೇಶನದಲ್ಲಿ ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿಯಲ್ಲಿ ಸಮುದಾಯಗಳು ಹಾಗೂ ಯುವಜನರ ಪಾತ್ರವನ್ನು ವಿವರಿಸಲಿದ್ದಾರೆ. ವಿಶೇಷವಾಗಿ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಆಳ್ವಾಸ್ ಶೈಕ್ಷಣಿಕ ಪ್ರತಿಷ್ಠಾನ ಕೈಗೊಂಡಿರುವ ವಿವಿಧ ಪರಿಸರ ಸಂರಕ್ಷಣಾ ಚಟುವಟಿಕೆಗಳನ್ನು ಅವರು ಸಮ್ಮೇಳನದಲ್ಲಿ ಪರಿಚಯಿಸಲಿದ್ದು, ಪರಿಸರ ಸಂರಕ್ಷಣೆ, ಕೇವಲ ಜಾಗೃತಿಗೆ ಮಾತ್ರ ಸೀಮಿತವಾಗದೆ, ಸಮುದಾಯದ ನೇತೃತ್ವದಲ್ಲಿ ಸಂರಕ್ಷಣಾ ಕಾರ್ಯಗಳು ನಡೆಯಬೇಕಾದ ಅಗತ್ಯವನ್ನು ಒತ್ತಿಹೇಳಲಿದ್ದಾರೆ. ರಷ್ಯಾದ ವಿಜ್ಞಾನ ಅಕಾಡೆಮಿಯ ಕರೇಲಿಯನ್ ಸಂಶೋಧನಾ ಕೇಂದ್ರವು ರಷ್ಯಾನ್ ಬ್ರಿಕ್ಸ್ ಸಂಶೋಧನಾ ರಾಷ್ಟ್ರೀಯ ಸಮಿತಿಯ ಸಹಯೋಗದಲ್ಲಿ ಆಯೋಜಿಸಿರುವ ಈ ಸಮ್ಮೇಳನದಲ್ಲಿ ಹವಾಮಾನ ಬದಲಾವಣೆ, ಜೀವವೈವಿಧ್ಯ ಸಂರಕ್ಷಣೆ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಾಮಾಕ್ಷಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿ. ಬೈಂದೂರು ಇದರ 9ನೇ ವಾರ್ಷಿಕ ಸಾಮಾನ್ಯ ಸಭೆ ಸಂಘದ ಪ್ರಧಾನ ಕಛೇರಿಯಲ್ಲಿ ನಡೆಯಿತು. ಸಂಸ್ಥೆಯ ಅಧ್ಯಕ್ಷರಾದ ಕೆ. ವೆಂಕಟೇಶ್ ಕಿಣಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಸ್ಥೆಯು ವರದಿ ವರ್ಷದಲ್ಲಿ 24 ಕೋಟಿಗೂ ಮಿಕ್ಕಿ ವ್ಯವಹಾರ ನಡೆಸಿದ 74.64 ಲಕ್ಷ ಲಾಭ ಲಾಭ ಗಳಿಸಿದೆ. ಜಿಲ್ಲೆಯ ಸೌಹಾರ್ಧಗಳಲ್ಲಿ ಅತ್ಯುತ್ತಮ ಆರ್ಥಿಕ ವ್ಯವಹಾರದ ಮೂಲಕ ಪ್ರಗತಿ ಕಂಡಿದೆ ಹಾಗೂ ವರದಿ ವರ್ಷದಲ್ಲಿ ಸಂಘವು ಅಡಿಟ್ ವರ್ಗಿಕರಣದಲ್ಲಿ ಎ ಶ್ರೇಣಿ ಪಡೆದಿದೆ. ಈ ವರ್ಷದ ಲಾಭದಲ್ಲಿ ಸದಸ್ಯರಿಗೆ ಶೇ.14% ಡಿವಿಡೆಂಡ್ ನೀಡಲಾಗುವುದು ಎಂದರು. ಈ ಸಂಧರ್ಭದಲ್ಲಿ ಗೋರಕ್ಷಕರಾದ ಸಂಜೀವ ದೇವಾಡಿಗ ಅವರನ್ನು ಹಾಗೂ ಪಿ.ಯು.ಸಿ ವಿಭಾಗದಲ್ಲಿ ಸಾಧನೆಗೈದ ರಶ್ಮಿಅವರನ್ನು ಸಂಸ್ಥೆಯ ವತಿಯಿಂದ ಸಮ್ಮಾನಿಸಲಾಯಿತು. ಸಂಘದ ಎ ವರ್ಗದ ಸದಸ್ಯರ ಮಕ್ಕಳಿಗೆ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿ ಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ಉಡುಪಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹೈಕೋರ್ಟ್ ಹಾಗೂ ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶದಂತೆ ರಾಜ್ಯದಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿಒಪಿ) ಗಣಪತಿ ವಿಗ್ರಹ ತಯಾರಿ, ಮಾರಾಟ, ವಿಸರ್ಜನೆ ನಿಷೇಧಿಸಲಾಗಿದೆ. ಈ ರೀತಿಯ ಲೋಹ ಮಿಶ್ರಿತ, ರಾಸಾಯನಿಕ ಬಣ್ಣ ಬಳಸಿದ ವಿಗ್ರಹಗಳನ್ನು ಜಲಮೂಲಗಳಲ್ಲಿ ವಿಸರ್ಜಿಸಿದರೆ ಜಲಜೀವಿಗಳಿಗೆ ಅಪಾಯದ ಜೊತೆಗೆ ಮಾನವನಿಗೆ ಕ್ಯಾನ್ಸರ್ನಂತಹ ಮಾರಕ ರೋಗಗಳು ಬರುವ ಸಾಧ್ಯತೆ ಇದೆ ಎಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಉಡುಪಿ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಡಾ. ಮಹೇಶ್ವರಿ ಸಿಂಗ್ ತಿಳಿಸಿದ್ದಾರೆ. ಅವರು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಉಡುಪಿ ಪತ್ರಿಕಾ ಭವನದಲ್ಲಿ ಶುಕ್ರವಾರ ಆಯೋಜಿಸಲಾದ ತಿಂಗಳ ಅಂಗಳ ಸಂವಾದ ಕಾರ್ಯಕ್ರಮದಲ್ಲಿ ಸನ್ಮತಿ ಪತ್ರಿಕೆಯ ಆಗಸ್ಟ್ ತಿಂಗಳ ಸಂಚಿಕೆ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಪಿಒಪಿ ಗಣಪತಿ ವಿಗ್ರಹಗಳ ಪ್ರತಿಷ್ಠಾಪನೆಗೆ ಪರವಾನಗಿ ನೀಡುತ್ತಿಲ್ಲ. ಈ ಸಂಬಂಧ ನಿಷೇಧ ಆದೇಶವನ್ನು ಅನುಷ್ಠಾನಗೊಳಿಸುವ ಜವಾಬ್ದಾರಿ ನಗರ/ಗ್ರಾಮೀಣ ಸ್ಥಳೀಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆಯ ಐಎಂಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಕಾಮರ್ಸ್ (ಐಎಂಜೆಐಎಸ್ಸಿ)ನ ವಾಣಿಜ್ಯ ಸಂಘದ ವತಿಯಿಂದ “ಹಣಕಾಸು ಜಾಗೃತಿ ಮತ್ತು ಮಾಹಿತಿಯುಕ್ತ ಹಣಕಾಸು ಮತ್ತು ನಿವೃತ್ತಿ ಯೋಜನೆಯನ್ನು ಉತ್ತೇಜಿಸುವುದು” ಎಂಬ ವಿಷಯದ ಕುರಿತು ವೆಬಿನಾರ್ ಆಯೋಜಿಸಲಾಗಿತ್ತು. ದ್ವಿತೀಯ ಮತ್ತು ತೃತೀಯ ಬಿ.ಕಾಂ ವಿದ್ಯಾರ್ಥಿಗಳು ಹಾಗೂ ವಾಣಿಜ್ಯ ವಿಭಾಗದ ಉಪನ್ಯಾಸಕರು ಭಾಗವಹಿಸಿದ್ದರು. ಗುಜರಾತಿನ ಜಾಮ್ನಗರ ಜಿಲ್ಲೆಯ ಲಾಲ್ಪುರದ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ. ಭಾವಿಕ್ ಪಂಚಸಾರ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಅವರು ಹಣಕಾಸು ಸಾಕ್ಷರತೆ, ಬುದ್ಧಿವಂತ ಹೂಡಿಕೆ ಮತ್ತು ದೀರ್ಘಾವಧಿಯ ಹಣಕಾಸು ಯೋಜನೆ ಕುರಿತು ಮಾಹಿತಿ ನೀಡಿದರು. ಮ್ಯೂಚುವಲ್ ಫಂಡ್ ಹೂಡಿಕೆಗಳ ಪ್ರಯೋಜನಗಳು, ನಿಷ್ಕ್ರಿಯ ಆದಾಯ, ವ್ಯವಸ್ಥಿತ ಉಳಿತಾಯ ಮತ್ತು ಹೂಡಿಕೆ ಹಾಗೂ ನಿವೃತ್ತಿ ಯೋಜನೆಯ ಮಹತ್ವವನ್ನು ಅವರು ವಿವರಿಸಿದರು. ಅಲ್ಲದೆ, ಹಣಕಾಸು ವಂಚನೆಗಳ ಬಗ್ಗೆ ಜಾಗೃತಿ ಮೂಡಿಸಿ, ಸುರಕ್ಷಿತ ಹೂಡಿಕೆ ಪದ್ಧತಿಗಳ ಬಗ್ಗೆ ತಿಳಿಸಿದರು ಹಾಗೂ ಸೆಬಿ…
