ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲ್ಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಬಸ್ರೂರು ಶ್ರೀ ಶಾರದಾ ಪ್ರಥಮ ದರ್ಜೆ ಕಾಲೇಜಿನ ಆಡಳಿತ ಮಂಡಳಿಯ ನೂತನ ಸಂಚಾಲಕರನ್ನಾಗಿ ಅನುಪಮಾ ಎಸ್ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ. ಫೆ.11 ರಂದು ನಡೆದ ಶ್ರೀಶಾರದಾ ಕಾಲೇಜು ಟ್ರಸ್ಟ್ ರಿ. ಇದರ ಸಭೆಯಲ್ಲಿ ಹಿಂದಿನ ಆಡಳಿತ ಮಂಡಳಿಯ ಸಂಚಾಲಕರಾಗಿದ್ದ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ನೂತನ ಸಂಚಾಲಕರ ಆಯ್ಕೆ ನಡೆಸಲಾಗಿದೆ. ಆಡಳಿತ ಮಂಡಳಿಯ ನೂತನ ಸಂಚಾಲಕರಾಗಿ ಆಯ್ಕೆಯಾಗಿರುವ ಅನುಪಮಾ ಎಸ್ ಶೆಟ್ಟಿ ಅವರು, ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾಗಿ ಕಾಲೇಜಿನ ಅಭಿವೃಧ್ಧಿಗೆ ಗಣನೀಯ ಸೇವೆ ಸಲ್ಲಿಸಿದ್ದರು. ಅವರು ಪ್ರತಿಷ್ಠಿತ ಬಾಂಡ್ಯ ಎಜುಕೇಶನಲ್ ಟ್ರಸ್ಟ್ನ ಅಧೀನದಲ್ಲಿ ವಕ್ವಾಡಿಯ ಗುರುಕುಲ ಸಮೂಹ ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ಅನುಪಮ ಅವರು ಜಂಟಿ ಕಾರ್ಯನಿರ್ವಾಹಕ ಟ್ರಸ್ಟಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬಾಂಡ್ಯ ಎಜುಕೇಶನಲ್ ಟ್ರಸ್ಟ್ ದತ್ತು ಸ್ವೀಕಾರ ಮಾಡಿರುವ ಕೊಡ್ಲಾಡಿ-ಬಾಂಡ್ಯ ಸರ್ಕಾರಿ ಪ್ರಾಥಮಿಕ ಶಾಲೆಯ ಅಭಿವೃದ್ಧಿಯಲ್ಲಿಯೂ ¸ÁPÀµÀÄÖÖ ಅವರು ಕೊಡುಗೆ ನೀಡಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟ ಶ್ರೀ ವಿರಾಡ್ವಿಶ್ವಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ ಇವರ ಆಶ್ರಯದಲ್ಲಿ ವಿಶ್ವಜ್ಯೋತಿ ಮಹಿಳಾ ಬಳಗ ಸಾಲಿಗ್ರಾಮ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ವಿಶ್ವಕರ್ಮ ಸಾಂಸ್ಕೃತಿಕ ಸಭಾಭವನದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ವಾರಿಜಾ ರಾಘವೇಂದ್ರ ಆಚಾರ್ಯ, ಶ್ರೀರಂಗ ಸಾಹೇಬರಕಟ್ಟೆ ಇವರನ್ನು ಗುರುತಿಸಿ ಸನ್ಮಾನಿಸಲಾಯಿತು. ಇದೇ ವೇಳೆ ಸದಸ್ಯರಿಗೆ ಆಟೋಟ ಸ್ಪರ್ಧೆಗಳನ್ನು ನಡೆಸಿ ಬಹುಮಾನ ನೀಡಲಾಯಿತು. ವೇದಿಕೆಯಲ್ಲಿ ಮಹಿಳಾ ಬಳಗದ ಅಧ್ಯಕ್ಷ ರಮ್ಯಾ ರಮೇಶ್ ಆಚಾರ್, ಗೌರವಾಧ್ಯಕ್ಷರಾದ ಸವಿತಾ ಚಂದ್ರಶೇಖರ್ ಆಚಾರ್, ಉಪಾಧ್ಯಕ್ಷರಾದ ಸರಿತಾ ಚಂದ್ರ ಆಚಾರ್ ಉಪಸ್ಥಿತರಿದ್ದರು. ಸಭೆಯಲ್ಲಿ ಗೌರವ ಸಲಹೆಗಾರರು, ಕಾರ್ಯಕಾರಿ ಮಂಡಳಿಯ ಸದಸ್ಯರು, ಹಾಗೂ ಸರ್ವ ಸದಸ್ಯರು ಭಾಗಿಯಾದರು.ಮಹಿಳಾ ಬಳಗದ ಕಾರ್ಯದರ್ಶಿ ಸಹನಾ ರಾಘವೇಂದ್ರ ಆಚಾರ್ಯ ಸ್ವಾಗತಿಸಿ, ನಿರೂಪಿಸಿದರು. ಕೋಶಾಧಿಕಾರಿ ಸುಶೀಲಾ ಸತೀಶ್ ಆಚಾರ್ಯ ವಂದನಾರ್ಪಣೆಗೈದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಉಡುಪಿ ಜಿಲ್ಲೆಯ ಸಾಮಾಜಿಕ ಕಳಕಳಿ ಹಾಗೂ ರಕ್ತದಾನದಂತಹ ಕಾರ್ಯಕ್ರಮಗಳಿಂದ ಮನೆಮಾತಾದ ಸಂಸ್ಥೆ ಕುಂದಾಪುರದ ಜೈ ಕುಂದಾಪುರ ಸೇವಾ ಟ್ರಸ್ಟ್ ಇದೇ ಮೊದಲ ಬಾರಿಗೆ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಮುನ್ನುಡಿ ಬರೆಯುತ್ತಿದ್ದು ಇದೇ ಬರುವ ಎಪ್ರಿಲ್ 12 ರಂದು ಕೋಟ ಆರಕ್ಷಕ ಠಾಣೆಯ ಮುಂಭಾಗ ಜೈ ಕುಂದಾಪುರ ಸಂಭ್ರಮ-2026 ಎಂಬ ಶೀರ್ಷಿಕೆಯಡಿ ಸಾಮಾಜಿಕ ಕಾಳಜಿಯ ಕಾರ್ಯಕ್ರಮ ಆಯೋಜಿಸಿದೆ. ಈ ವೇದಿಕೆಯಲ್ಲಿ ಕೋಟದ ಕ್ರಿಯಾಶೀಲ ಸಂಘಟನೆಯಾದ ಪಂಚವರ್ಣ ಸಂಘಟನೆಗೆ ಜೈ ಕುಂದಾಪುರ ಸೇವಾ ಪುರಸ್ಕಾರ ನೀಡಿ ಗೌರವಿಸಲಿದೆ ಅಲ್ಲದೆ ಸಾಮಾಜಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡ ಸಮಾಜಸೇವಕ ಕೋಟ ಶ್ರೀಕಾಂತ್ ಶೆಣೈ,ಪ್ರಗತಿಪರ ಕೃಷಿಕ ಪಾರಂಪಳ್ಳಿ ರವೀಂದ್ರ ಐತಾಳ್, ಧಾರ್ಮಿಕ ಮುಖಂಡ ಕೆ.ಭಾಸ್ಕರ್ ಸ್ವಾಮಿ ಇವರುಗಳಿಗೆ ವಿಶೇಷ ಅಭಿನಂದನೆ ಹಾಗೂ ಅಶಕ್ತರಿಗೆ ನೆರವು, ವಿಶೇಷ ಚೇತನರಿಗೆ ಕಿಟ್ ವಿತರಣೆ, ಸಾಂಸ್ಕೃತಿಕ ಕಾರ್ಯಕ್ರಮ, ತ್ರಿನೇತ್ರ ಕಲಾವಿದರು ಕುಡ್ಲ ಇವರಿಂದ ನಾಟಕ ಬ್ರಹ್ಮ ರಕ್ಕಸೆ ಪ್ರದರ್ಶನಗೊಳ್ಳಲಿದೆ ಎಂದು ಸಂಸ್ಥೆಯ ಪ್ರಮುಖರಾದ ಪುಂಡಲಿಕ ಮೊಗವೀರ,ಜಯರಾಜ್ ಸಾಲಿಯಾನ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ದೇಶ ಮಹಿಳೆಯರಿಂದ ಸುಭದ್ರವಾಗಿ ಅಭಿವೃದ್ಧಿ ಹೊಂದುತ್ತಿದೆ ಇದಕ್ಕೆ ಇತ್ತೀಚಿಗಿನ ಕೆಲ ಹುದ್ದೆಗಳನ್ನು ಅಲಂಕೃರಿಸಿದ ಮಹಿಳಾ ಮಣಿಗಳ ಕಾರ್ಯವೈಕರಿಯೇ ಸಾಕ್ಷಿ ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಲತಾ ಸುರೇಶ್ ಶೆಟ್ಟಿ ಹೇಳಿದರು. ಸೋಮವಾರ ಕೋಟದ ಸಮುದ್ಯತಾ ಬ್ಯಾಂಕೇಟ್ ಹಾಲ್ನಲ್ಲಿ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲ ಇವರ ಮಾರ್ಗದರ್ಶನದಲ್ಲಿ ಸ್ನೇಹಕೂಟ ಮಣೂರು ಇವರ ಸಹಯೋಗದೊಂದಿಗೆ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಶುಭಾಶಂಸನೆಗೈದು ಮಾತನಾಡಿ ದೇಶದ ಒಟ್ಟು ವ್ಯವಸ್ಥೆಯಲ್ಲಿ ಮಹಿಳೆ ಮುಂಚೂಣಿಯಲ್ಲಿದ್ದಾಳೆ ಅದರೆ ದೇಶದ ಮೊದಲ ಮುಖ್ಯ ನ್ಯಾಯಧೀಶ ಮಹಿಳೆಯಾಗಬೇಕು ಅದೊಂದು ಶ್ರೀಘ್ರದಲ್ಲಿ ನೆರವೆರಲಿ ಎಂದರಲ್ಲದೆ ಸಾಧಕರನ್ನು ಗುರುತಿಸುವ ಕಾಯಕ ಶ್ರೇಷ್ಠವಾದದ್ದು ಅದರಲ್ಲೂ ಪಂಚವರ್ಣ ಎಂಬ ಸಂಸ್ಥೆಯ ಗೌರವ ದೊರಕಿರುವುದು ಯಾವುದೇ ಸಾಧಕರು ಹೆಮ್ಮೆ ಪಡುವ ಗೌರವವಾಗಿದೆ ಎಂದರು. ಅಭಿನಂದನಾ ನುಡಿಗಳನ್ನಾಡಿದ ಸಾಲಿಗ್ರಾಮ ಪಟ್ಟಣಪಂಚಾಯತ್ ಮಾಜಿ ಅಧ್ಯಕ್ಷೆ ಸುಲತಾ ಎಸ್ ಹೆಗ್ಡೆ ಮಹಿಳೆ ಇಂದು ಬಹು ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದಾಳೆ,ಸಮಾಜಿಕ ಕಾರ್ಯದಲ್ಲಿ ಪುರುಷರಂತೆ ಮಹಿಳೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಮಾನ್ಯ ಸರ್ವೋಚ್ಚ ನ್ಯಾಯಾಲಯವು ಹೊರಡಿಸಿರುವ ಆದೇಶದಲ್ಲಿರುವ ಮಾರ್ಗಸೂಚಿಗಳನ್ನು ಮಾನವೀಯ ಹಾಗೂ ವೈಜ್ಞಾನಿಕ ದೃಷ್ಟಿಕೋನದಿಂದ ಅನುಷ್ಠಾನ ಮಾಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ಕುರಿತ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನಸಾಮಾನ್ಯರಿಗೆ ಬೀದಿ ನಾಯಿಗಳಿಂದ ಉಂಟಾಗುವ ಉಪಟಳಗಳನ್ನು ತಪ್ಪಿಸುವ ಉದ್ದೇಶದಿಂದ ಮಾನ್ಯ ಸರ್ವೋಚ್ಚ ನ್ಯಾಯಾಲಯವು ಕೆಲವೊಂದು ಮಾರ್ಗದರ್ಶನಗಳನ್ನು ಸೂಚಿಸಿದೆ. ಇವುಗಳನ್ನು ಜಿಲ್ಲಾ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವುದರೊಂದಿಗೆ ಬೀದಿ ನಾಯಿಗಳಿಂದ ಉಂಟಾಗುವ ತೊಂದರೆಗಳನ್ನು ನಿಯಂತ್ರಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದನ್ವಯ ಸಂಬಂಧಪಟ್ಟ ಇಲಾಖೆಗಳು ಹಾಗೂ ಸ್ಥಳೀಯ ಸಂಸ್ಥೆಗಳು ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು, ಎ.ಬಿ.ಸಿ ಕಾರ್ಯಕ್ರಮಗಳನ್ನು ತೀವ್ರಗೊಳಿಸಲು, ರೇಬೀಸ್ ಹರಡದಂತೆ ತಡೆಗಟ್ಟಲು ಲಸಿಕಾ ಕಾರ್ಯಕ್ರಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಮಣೂರು ಶ್ರೀ ಹೇರಂಬ ಮಹಾಗಣಪತಿ ಹಾಗೂ ಮಹಾಲಿಂಗೇಶ್ವರ ದೇವಸ್ಥಾನ ಇದರ ವಾರ್ಷಿಕ ರಥೋತ್ಸವದ ಹಿನ್ನಲ್ಲೆಯಲ್ಲಿ ಮಣೂರು ಫ್ರೆಂಡ್ಸ್ ಮಣೂರು ಹಮ್ಮಿಕೊಂಡು ಬರುತ್ತಿರುವ ವಾರ್ಷಿಕೋತ್ಸವಕ್ಕೆ ಇದೀಗ ರಜತ ಮಹೋತ್ಸವ ಸಂಭ್ರಮ. ಈ ದಿಸೆಯಲ್ಲಿ ಇದೇ ಬರುವ ಎಪ್ರಿಲ್ 1ರಂದು ಮಣೂರು ದೇಗುಲದ ವಠಾರದಲ್ಲಿ ರಜತ ಸಂಭ್ರಮ ಎಂಬ ಶೀರ್ಷಿಕೆಯಡಿ ಸಾಂಸ್ಕೃತಿಕ , ಸಂಗೀತಗಾಯನ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಿದ್ದು ಇದರ ಫೋಸ್ಟರ್ ಅನ್ನು ಶುಕ್ರವಾರ ಕೋಟ ಅಮೃತೇಶ್ವರೀ ದೇಗುಲದಲ್ಲಿ ಗೀತಾನಂದ ಟ್ರಸ್ಟ್ ಪ್ರವರ್ತಕ ಆನಂದ್ ಸಿ. ಕುಂದರ್ ಬಿಡುಗಡೆಗೊಳಿಸಿ ಕಾರ್ಯಕ್ರಮದ ಯಶಸ್ಸಿಗೆ ಶುಭಹಾರೈಸಿದರು. ಈ ಸಂದರ್ಭದಲ್ಲಿ ಮಣೂರು ಮಹಾಲಿಂಗೇಶ್ವರ ದೇಗುಲದ ಅಧ್ಯಕ್ಷ ಸತೀಶ್ ಹೆಚ್ ಕುಂದರ್ ,ಮಣೂರು ಫ್ರೆಂಡ್ಸ್ ಗೌರವ ಸಲಹೆಗಾರ ಎಂ. ಸುಬ್ರಾಯ ಆಚಾರ್, ಮಣೂರು ಫ್ರೆಂಡ್ಸ್ ಅಧ್ಯಕ್ಷ ರಾಘವೇಂದ್ರ ಆಚಾರ್, ಗೌರವಾಧ್ಯಕ್ಷ ಸುರೇಶ್ ಆಚಾರ್, ಮಾಜಿ ಅಧ್ಯಕ್ಷರಾದ ಸುಧಾಕರ್ ಆಚಾರ್, ದಿನೇಶ್ ಆಚಾರ್ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಪೋಸ್ಟರ್ ಬಿಡುಗಡೆ ಕಾರ್ಯಕ್ರಮವನ್ನು ಸುಜಾತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಿರಿಮಂಜೇಶ್ವರದ ಜನತಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯುಕೆಜಿ ವಿದ್ಯಾರ್ಥಿಗಳ ಪದವಿ ಪ್ರದಾನ ಕಾರ್ಯಕ್ರಮವು ಅತ್ಯಂತ ಅದ್ದೂರಿಯಾಗಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಅಂತಾರಾಷ್ಟ್ರೀಯ ಮಟ್ಟದ ಜಾದೂಗಾರರಾದ ಸತೀಶ ಹೆಮ್ಮಾಡಿ ಅವರು ದೀಪವನ್ನು ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರತಿಯೊಬ್ಬ ವಿದ್ಯಾರ್ಥಿಯ ಭವಿಷ್ಯ ಉಜ್ವಲವಾಗಲು ಶಿಕ್ಷಕರ ಜೊತೆಗೆ ಪೋಷಕರು ಕೈಜೋಡಿಸಬೇಕು. ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ವಿಪುಲ ಅವಕಾಶಗಳನ್ನು ಒದಗಿಸುತ್ತಿರುವ ಈ ಸಂಸ್ಥೆಯ ಬಗ್ಗೆ ಹೆಮ್ಮೆಯೆನಿಸುತ್ತದೆ ಎಂದರು. ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಜನತಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿರುವ ಗಣೇಶ ಮೊಗವೀರ ಅವರು ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ ಕರಾವಳಿ ಭಾಗದಲ್ಲಿ ಗುಣಮಟ್ಟದ ಶಿಕ್ಷಣವನ್ನು ತಳಮಟ್ಟದಿಂದಲೇ ವಿದ್ಯಾರ್ಥಿಗಳಿಗೆ ನೀಡುವ ಉದ್ದೇಶದಿಂದಾಗಿ ಈ ವಿದ್ಯಾಸಂಸ್ಥೆಯನ್ನು ಸ್ಥಾಪಿಸಿದ್ದು, ವಿದ್ಯಾರ್ಥಿಗಳ ಕಲಿಕೆಯಲ್ಲಿ ಅಪಾರವಾದ ಬದಲಾವಣೆಯನ್ನು ಕಂಡುಕೊಂಡಿದ್ದೇವೆ.ಚಿಕ್ಕ ವಯಸ್ಸಿನಲ್ಲಿರುವ ವಿದ್ಯಾರ್ಥಿಗಳ ಪ್ರತಿಭೆಗೆ ಸೂಕ್ತ ಪುರಸ್ಕಾರಗಳನ್ನು ನೀಡಿದಾಗ ಅವರಲ್ಲಿ ಇನ್ನೂ ಹೆಚ್ಚಿನ ಸಾಧನೆಯನ್ನು ಮಾಡುವ ಹಂಬಲ ಮೂಡುತ್ತದೆ ಎಂದರು. ಸಮರ್ಪಣಾ ಎಜ್ಯುಕೇಶನ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಸ್ ಹಾಗೂ ಕಾರಿನ ನಡುವೆ ನಡೆದ ಅಪಘಾತದಲ್ಲಿ ವೆಬ್ ಡೆವಲಪರ್, ನೆಂಪು ಮೂಲದ ಮುಕೇಶ್ ಕೃಷ್ಣ ಶೆಟ್ಟಿ (39) ಮುಕೇಶ್ ಕೃಷ್ಣ ಎಂಬವರು ಮೃತಪಟ್ಟಿದ್ದಾರೆ. ಅವರು ಮಾರ್ಚ್ 5ರಂದು ಕುಂದಾಪುರದಿಂದ ಯಲ್ಲಾಪುರ ಮಾರ್ಗವಾಗಿ ಹುಬ್ಬಳಿಗೆ ತೆರಳುತ್ತಿದ್ದರು. ಯಲ್ಲಾಪುರ ತಾಲೂಕಿನ ಮಳಲಗಾಂವ ಬಳಿಯಲ್ಲಿ ಪ್ರಯಾಣಿಸುತ್ತಿದ್ದ ವೇಳೆಯಲ್ಲಿ ಎದುರಿನಿಂದ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ ಕಾರು ಮುಖಾಮುಖಿ ಢಿಕ್ಕಿಯಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆಯೇ 108 ವಾಹನದ ಮೂಲಕ ಮುಕೇಶ್ ಕೃಷ್ಣ ಶೆಟ್ಟಿ ಅವರನ್ನು ಯಲ್ಲಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯ್ತು. ಆದರೂ ಮುಕೇಶ್ ಶೆಟ್ಟಿ ಅವರು ಬದುಕಿ ಉಳಿಯಲಿಲ್ಲ ಎಂದು ತಿಳಿದು ಬಂದಿದೆ. ಬಸ್ ಹಾಗೂ ಕಾರಿನ ನಡುವೆ ನಡೆದ ಅಪಘಾತದಲ್ಲಿ ಕಾರಿನ ಏರ್ ಬ್ಯಾಗ್ ಬ್ಲಾಸ್ಟ್ ಆಗಿ ಸಾವು ಸಂಭವಿಸಿದೆ ಎಂದು ಮಾತುಗಳು ಕೇಳಿಬಂದಿದೆ. ಮಂಗಳೂರು ಬೆಂದೂರ್ ವೆಲ್ ನಲ್ಲಿ ಮ್ಯಾಕ್ಸ್ ಇನ್ಪೋಟೆಕ್ ಸಂಸ್ಥೆಯನ್ನು ಕಟ್ಟಿ ಡಿಜಿಟಲ್ ಮೀಡಿಯಾದಲ್ಲಿ ವೆಬ್ಡೆವಲಪರ್ ಆಗಿ ಕೆಲಸ ಮಾಡ್ತಿದ್ರು. ನಾಡಿನ ಹೆಸರಾಂತ ನೂರಾರು ಡಿಜಿಟಲ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸರ್ಕಾರ ಗರ್ಭಕಂಠದ ಕ್ಯಾನ್ಸರ್ ಅನ್ನು (cervical cancer) ತಡೆಗಟ್ಟಲು 14 ವರ್ಷ ಪೂರ್ಣಗೊಂಡ ಬಾಲಕಿಯರಿಗೆ ರಾಷ್ಟ್ರೀಯ ಹೆಚ್.ಪಿ.ವಿ ಲಸಿಕಾ ಅಭಿಯಾನವನ್ನು ಆರಂಭಿಸಿದ್ದು, ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ನೀಡಲಾಗುವುದು. ಈ ಲಸಿಕೆಯು ಗರ್ಭಕಂಠದ ಕ್ಯಾನ್ಸರ್ನಿಂದ ರಕ್ಷಣೆ ನೀಡಲಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು. ಅವರು ನಗರದ ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ನಡೆದ ಹೆಚ್.ಪಿ.ವಿ ಚುಚ್ಚುಮದ್ದು ಲಸಿಕಾ ಕಾರ್ಯಕ್ರಮದ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 14 ವರ್ಷ ಪೂರ್ಣಗೊಂಡ ಆದರೆ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಈ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು. ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಬಹುದಾದ ರೋಗವಾಗಿದ್ದು, ಹೆಚ್.ಪಿ.ವಿ ಚುಚ್ಚುಮದ್ದು ಪಡೆದುಕೊಳ್ಳುವುದರಿಂದ ಮಹಿಳೆಯರಲ್ಲಿ ಕ್ಯಾನ್ಸರ್ ಅನ್ನು ತಡೆಗಟ್ಟಬಹುದು ಎಂದರು. ಜಿಲ್ಲೆಯಲ್ಲಿ 11,274 ಮಕ್ಕಳಿಗೆ ಲಸಿಕೆ ನೀಡುವ ಗುರಿಯನ್ನು ಹೊಂದಲಾಗಿದೆ. ಲಸಿಕೆಯ 0.5mಟ ನ ಒಂದು ಡೋಸ್ ಅನ್ನು ನೀಡಲಾಗುವುದು. ಇದು ಸ್ವಯಂ ಪ್ರೇರಿತವಾಗಿದ್ದು, ಪೋಷಕರು ಅಥವಾ ಪಾಲಕರ ಒಪ್ಪಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ದೇಶದಲ್ಲಿ ಮೊದಲ ಬಾರಿಗೆ ಸಂಪೂರ್ಣ ಡಿಜಿಟಲ್ ರೂಪದಲ್ಲಿ ಜನಗಣತಿ ನಡೆಯಲಿದ್ದು, ಸ್ವಯಂ-ಗಣತಿ ಆಯ್ಕೆಯೂ ಲಭ್ಯವಿದೆ. ಮೊದಲ ಹಂತದಲ್ಲಿ ಏಪ್ರಿಲ್ 16 ರಿಂದ 30 ದಿನಗಳ ಕಾಲ ಮನೆ ಪಟ್ಟಿ ಕಾರ್ಯ ನಡೆಯಲಿದೆ. ಎರಡನೇ ಹಂತದಲ್ಲಿ ಜನಸಂಖ್ಯಾ ಎಣಿಕೆ ಕಾರ್ಯ 2027 ಫೆಬ್ರವರಿಯಿಂದ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದರು. ಅವರು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ 2027 ಜನಗಣತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸರ್ಕಾರದ ಮಾರ್ಗಸೂಚಿಯನ್ವಯ ಗಣತಿ ಕಾರ್ಯಗಳನ್ನು ಕೈಗೊಳ್ಳಲು ಅವಶ್ಯಕವಾಗಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ನೇಮಕ ಕಾರ್ಯಗಳನ್ನು ಮಾಡಿಕೊಳ್ಳಬೇಕು, ಮನೆಗಳ ಪಟ್ಟಿ, ದತ್ತಾಂಶ ಸಂಗ್ರಹಣೆ, ಪರಿಶೀಲನೆ ಮತ್ತು ಮೇಲ್ವಿಚಾರಣೆಗಾಗಿ ಮೊಬೈಲ್ ಅಪ್ಲಿಕೇಶನ್ ಮತ್ತು ಕೇಂದ್ರ ಪೋರ್ಟಲ್ ಬಳಸಲಾಗುವುದು. ಮನೆ ಗಣತಿಗೆ ಅಗತ್ಯವಿರುವ ಸಿಬ್ಬಂದಿಗಳನ್ನು ನೇಮಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಗಣತಿಗಾಗಿ ತರಬೇತುದಾರರ ಅಂತಿಮಗೊಳಿಸುವಿಕೆ, ಜಿಲ್ಲಾ ಜನಗಣತಿ ಅಧಿಕಾರಿಗಳಿಗೆ ತರಬೇತಿ ಮತ್ತು ಕ್ಷೇತ್ರ ಕಾರ್ಯಕರ್ತರ ನೇಮಕಾತಿ ಕುರಿತು ಚರ್ಚಿಸಿ…
