ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸೈಂಟ್ ಥಾಮಸ್ ಸಿ.ಬಿ.ಎಸ್.ಇ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಉತ್ಸಾಹಭರಿತವಾಗಿ ಆಚರಿಸಲಾಯಿತು. “ಪರಿಸರ ಸಂರಕ್ಷಿಸಿ ಜೀವ ಉಳಿಸಿ”ಎಂಬ ಘೋಷವಾಕ್ಯದಡಿ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿಗಳು ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರಿದರು. ಕಾರ್ಯಕ್ರಮದ ಮುಖ್ಯ ಉದ್ದೇಶ ಪರಿಸರ ರಕ್ಷಣೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದಾಗಿತ್ತು. ಕಾರ್ಯಕ್ರಮವನ್ನು ಶಾಲೆಯ ಪ್ರಾಂಶುಪಾಲರಾದ ಫಾದರ್ ಫಿಲಿಪ್ ನೆಲ್ಲಿವಿಲ್ಲಾ ಉದ್ಘಾಟಿಸಿ ಮಾತನಾಡಿ, “ಪ್ರತಿ ವಿದ್ಯಾರ್ಥಿಯೂ ಕನಿಷ್ಠ ಒಂದು ಗಿಡವನ್ನು ನೆಟ್ಟು ಅದನ್ನು ಪೋಷಿಸುವ ಹೊಣೆಗಾರಿಕೆಯನ್ನು ತೆಗೆದುಕೊಳ್ಳಬೇಕು. ಪರಿಸರ ಉಳಿದರೆ ಮಾತ್ರ ಮಾನವ ಜೀವನ ಸುರಕ್ಷಿತವಾಗಿರುತ್ತದೆ”ಎಂದು ಹೇಳಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಘೋಷಣೆಗಳು, ಭಾಷಣಗಳು ಹಾಗೂ ಜಾಗೃತಿ ಸಂದೇಶಗಳನ್ನು ನೀಡಲಾಯಿತು. ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದು, ನೀರನ್ನು ಉಳಿಸುವುದು ಮತ್ತು ಹೆಚ್ಚು ಗಿಡಗಳನ್ನು ನೆಡುವುದು ನಮ್ಮೆಲ್ಲರ ಕರ್ತವ್ಯ ಎಂದು ಶಿಕ್ಷಕರು ತಿಳಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಎಲ್ಲರೂ ಪರಿಸರ ಸಂರಕ್ಷಣೆಗಾಗಿ ಪ್ರತಿಜ್ಞೆ ಸ್ವೀಕರಿಸಿದರು. ಪ್ರಾಂಶುಪಾಲರು, ಉಪಪ್ರಾಂಶುಪಲರು, ಶಿಕ್ಷಕರು , ವಿದ್ಯಾರ್ಥಿಗಳೊಂದಿಗೆ ಗಿಡವನ್ನು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪರಿಚಯ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿ ಯು .ಎಸ್ . ಶೆಣೈ ಅಧ್ಯಕ್ಷೀಯ ನುಡಿಗಳನಾಡಿದರು. ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರ ಆಚಾರಿ ವಿದ್ಯಾರ್ಥಿಗಳಿಗೆ ಕಾಲೇಜಿನ ಸವಿವರ ಮಾಹಿತಿಯನ್ನು ನೀಡಿದರು. ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ರಾಜ್ಯ ಮಟ್ಟದ ಅತ್ಯುತ್ತಮ ಅಂಕ ಪಡೆದು ರ್ಯಾಂಕ್ ವಿದ್ಯಾರ್ಥಿಗಳಾದ ಸಂಕಲ್ಪ್ ಕುಮಾರ್, ಮನೋಜ್, ಭೂಮಿಕಾ, ಗೌರಿ ಹಾಗೂ ಗಂಗಾ ಅವರನ್ನು ಗುರುತಿಸಿ ಗೌರವಿಸಲಾಯಿತು. ವಾಣಿಜ್ಯ ವಿಭಾಗ ಉಪನ್ಯಾಸಕಿ ಗೀತಾ ಪ್ರಭು, ವಿಜ್ಞಾನ ವಿಭಾಗ ಉಪನ್ಯಾಸಕಿ ಸ್ಮಿತಾ, ಎನ್ ಸಿ.ಸಿ ಘಟಕದ ಮುಖ್ಯಸ್ಥರು ಹಾಗೂ ಗ್ರಂಥಪಾಲಕರಾದ ಮನೋಹರ್, ದೈಹಿಕ ಶಿಕ್ಷಣ ನಿರ್ದೇಶಕ ಶಂಕರ್ ನಾರಾಯಣ ಹಾಗೂ 89.6 ಎಫ್.ಎಮ್ ರೇಡಿಯೋ ಕುಂದಾಪ್ರ ಸಮುದಾಯ ಬಾನುಲಿ ಕೇಂದ್ರದ ಕಾರ್ಯಕ್ರಮ ನಿರ್ವಾಹಕಿ ಜ್ಯೋತಿ ಸಾಲಿಗ್ರಾಮ ಕಾಲೇಜಿನ ವಿವಿಧ ಸೌಲಭ್ಯಗಳ ಬಗ್ಗೆ ಮಾಹಿತಿಗಳನ್ನು ನೀಡಿದರು. ಪ್ರಾಂಶುಪಾಲೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಮುಂಗಾರು ಮಳೆಯ ಸಂದರ್ಭದಲ್ಲಿ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪವನ್ನು ಸಮರ್ಥವಾಗಿ ನಿಭಾಯಿಸಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂಟ್ರೋಲ್ ರೂಂ ನಿರ್ಮಿಸಲಾಗಿದೆ. ದೂ.ಸಂಖ್ಯೆ: 0820-2574802, ಟೋಲ್ ಫ್ರೀ ನಂಬರ್ 1077 ತಾಲೂಕು ತಹಶೀಲ್ದಾರರ ಕಚೇರಿಗಳಾದಉಡುಪಿ ದೂ.ಸಂಖ್ಯೆ: 0820-2520417, ಕುಂದಾಪುರ ದೂ.ಸಂಖ್ಯೆ: 08254-230357, ಕಾರ್ಕಳ ದೂ.ಸಂಖ್ಯೆ: 08258-230201, ಬೈಂದೂರು ದೂ.ಸಂಖ್ಯೆ: 08254-251657, ಬ್ರಹ್ಮಾವರ ದೂ.ಸಂಖ್ಯೆ: 0820-2560494, ಕಾಪು ದೂ.ಸಂಖ್ಯೆ: 0820-2551444 ಹಾಗೂ ಹೆಬ್ರಿ ತಾಲೂಕು ದೂ.ಸಂಖ್ಯೆ: 08253-250201 ಗಳಲ್ಲಿ ಮತ್ತು ಸ್ಥಳೀಯ ಸಂಸ್ಥೆಗಳಾದ ಪೌರಾಯುಕ್ತರು ಉಡುಪಿ ನಗರಸಭೆ ದೂ.ಸಂಖ್ಯೆ: 0820-2520306, ಮುಖ್ಯಾಧಿಕಾರಿಗಳ ಕಚೇರಿಗಳಾದ ಪುರಸಭೆ ಕುಂದಾಪುರ ದೂ.ಸಂಖ್ಯೆ: 08254-230410, ಪುರಸಭೆ ಕಾರ್ಕಳ ದೂ.ಸಂಖ್ಯೆ: 08258-230292, ಪುರಸಭೆ ಕಾಪು ದೂ.ಸಂಖ್ಯೆ: 0820-2551061, ಬೈಂದೂರು ಪಟ್ಟಣ ಪಂಚಾಯತ್ ದೂ.ಸಂಖ್ಯೆ: 08254-251058, 7019166640 ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯತ್ ದೂ.ಸಂಖ್ಯೆ: 9035627273, 7353449984 ಅನ್ನು ಸ್ಥಾಪಿಸಲಾಗಿದ್ದು, ತುರ್ತು ಸಂದರ್ಭದಲ್ಲಿ ಸಾರ್ವಜನಿಕರು ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಪುರಸಭೆ ವ್ಯಾಪ್ತಿಯಲ್ಲಿ ಮಳೆಗಾಲದ ಸಮಯದಲ್ಲಿ ಅವಘಡಗಳನ್ನು ತಪ್ಪಿಸಲು ಮತ್ತು ಸಾರ್ವಜನಿಕರ ಸುರಕ್ಷತೆಗಾಗಿ ಕುಂದಾಪುರ ಪುರಸಭೆಯ ವತಿಯಿಂದ 24×7 ಕಾರ್ಯ ನಿರ್ವಹಿಸುವ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ. ಮಳೆಗಾಲದಲ್ಲಿ ಎದುರಾಗಬಹುದಾದ ಪ್ರವಾಹ, ಸಾಂಕ್ರಾಮಿಕ ರೋಗಗಳು ಮತ್ತು ಇತರೆ ತುರ್ತು ಪರಿಸ್ಥಿತಿಗಳನ್ನು ನಿಭಾಯಿಸಲು ಸಾರ್ವಜನಿಕರು ಸಹಾಯ ವಾಣಿ ಸಂಖ್ಯೆ: 08254-230410 ಕರೆ ಮಾಡಬಹುದಾಗಿದೆ. ಇದಲ್ಲದೆ ಮಳೆಗಾಲದ ಸಂದರ್ಭದಲ್ಲಿ ಯಾವುದೇ ರೀತಿಯ ತುರ್ತು ಪರಿಸ್ಥಿತಿ ಎದುರಾದಲ್ಲಿ ಪುರಸಭೆಯ ಮುಖ್ಯಾಧಿಕಾರಿ ಮೊ.ಸಂಖ್ಯೆ: 9880034793, ಪರಿಸರ ಅಭಿಯಂತ ಮೊ.ಸಂಖ್ಯೆ: 7353255268, ಹಿರಿಯ ಆರೋಗ್ಯ ನಿರೀಕ್ಷಕರು ಮೊ. ಸಂಖ್ಯೆ: 6360027331 ಹಾಗೂ ಕಿರಿಯ ಅಭಿಯಂತ ಮೊ.ಸಂಖ್ಯೆ: 9902377287 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಪುರಸಭೆ ಮುಖ್ಯಾಧಿಕಾರಿಗಳ ಕಚೇರಿ ಪ್ರಕಟನೆ ತಿಳಿಸಿದೆ. ಸಾರ್ವಜನಿಕರಲ್ಲಿ ಮನವಿ:ಮಳೆಗಾಲದ ಸಮಯದಲ್ಲಿ ಸಾರ್ವಜನಿಕರು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಪುರಸಭೆ ಮನವಿ ಮಾಡಿಕೊಂಡಿದೆ.ಅಪಾಯಕಾರಿ ಕಟ್ಟಡಗಳಿಂದ ದೂರವಿರಬೇಕು. ಮಳೆಯಿಂದಾಗಿ ಕುಸಿಯುವ ಹಂತದಲ್ಲಿರುವ ಹಳೆಯ ಗೋಡೆ ಅಥವಾ ಕಟ್ಟಡಗಳ ಆಸುಪಾಸಿನಲ್ಲಿ ಆಶ್ರಯ ಪಡೆಯಬಾರದು.ವಿದ್ಯುತ್ ಕಂಬಗಳಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು/ಮಾಧ್ಯಮ ಸಂಸ್ಥೆಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ ಹೊಸ ಮಾರ್ಗಸೂಚಿಯನ್ವಯ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪತ್ರಕರ್ತರು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳಲ್ಲಿ “ಪೂರ್ಣಾವಧಿ/ಅರೆಕಾಲಿಕ ವರದಿಗಾರರಾಗಿ ನೇಮಕವಾಗಿದ್ದಲ್ಲಿ ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರ/ ಸ್ಥಾನಿಕ ಸಂಪಾದಕರ/ ಮುಖ್ಯಸ್ಥರ ಶಿಫಾರಸ್ಸು ಪತ್ರ ಮತ್ತು ಸೇವಾ ಪ್ರಮಾಣ ಪತ್ರವನ್ನು ಲಗತ್ತಿಸಿ “ಸೇವಾಸಿಂಧು” ಪೋರ್ಟಲ್ https://sevasindhu.karnataka.gov.in iಟಿ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. 2025 ರ ಸೆಪ್ಟೆಂಬರ್ 12 ರ ನಂತರ ಅರ್ಜಿಗಳನ್ನು ಸಲ್ಲಿಸಿದ್ದಲ್ಲಿ, ಮತ್ತೊಮ್ಮೆ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಈ ಹಿಂದೆ ಇದ್ದ ಮಾರ್ಗಸೂಚಿಯಲ್ಲಿ 11 ತಿಂಗಳ ವೇತನ ಪತ್ರ ಸಲ್ಲಿಸಬೇಕು ಎಂಬ ಷರತ್ತನ್ನು ಸಡಿಲಿಸಿ, ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರ, ಸ್ಥಾನಿಕ ಸಂಪಾದಕರ/ಮುಖ್ಯಸ್ಥರ ಶಿಫಾರಸ್ಸು ಪತ್ರವನ್ನು ಪರಿಗಣಿಸಲು ಅವಕಾಶ ಕಲ್ಪಿಸಲಾಗಿದೆ. ಆನ್‌ಲೈನ್‌ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಣಿಪಾಲದ ಶಿಕ್ಷಕ, ಸಂಶೋಧಕ, ಪರಿಸರವಾದಿ ಮತ್ತು ಸಮಾಜ ಸೇವಕ ಡಾ. ಬಾಲಕೃಷ್ಣ ಶ್ರೀನಿವಾಸ್ ಮದ್ದೋಡಿ ಅವರಿಗೆ ಭಾರತ ಸರ್ಕಾರದಿಂದ ಗುರುತಿಸಲ್ಪಟ್ಟ ಜೀವ್ರಾನ್ ಫೌಂಡೇಶನ್ ನಿಂದ ಚಾಣಕ್ಯ ರಾಷ್ಟ್ರೀಯ ನಾಯಕತ್ವ ಶ್ರೇಷ್ಠತೆ ಪ್ರಶಸ್ತಿ 2026 ನೀಡಲಾಗಿದೆ. ಜೀವ್ರಾನ್ ಫೌಂಡೇಶನ್ ರಿ. ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ, MSME, ಭಾರತ ಸರ್ಕಾರ, NITI ಆಯೋಗ್ ಮತ್ತು ಡಿಜಿಟಲ್ ಇಂಡಿಯಾದ ಆಶ್ರಯದಲ್ಲಿ ನೋಂದಾಯಿಸಲಾಗಿದೆ. ಶಿಕ್ಷಣ, ಸಂಶೋಧನೆ, ಪರಿಸರ ಸಂರಕ್ಷಣೆ ಮತ್ತು ಸಮುದಾಯ ಅಭಿವೃದ್ಧಿ ಕ್ಷೇತ್ರಗಳಲ್ಲಿ ಎರಡು ದಶಕಗಳಿಗೂ ಹೆಚ್ಚು ಕಾಲ ಡಾ. ಮದ್ದೋಡಿ ಅವರ ಅತ್ಯುತ್ತಮ ಕೊಡುಗೆ ಮತ್ತು ಸಮರ್ಪಿತ ಸೇವೆಯನ್ನು ಈ ಪ್ರಶಸ್ತಿ ಗುರುತಿಸುತ್ತದೆ. ಶಿಕ್ಷಕ ಮತ್ತು ಶೈಕ್ಷಣಿಕ ಆಡಳಿತಾಧಿಕಾರಿಯಾಗಿ, ಡಾ. ಮದ್ದೋಡಿ ಬೋಧನೆ, ವೈಜ್ಞಾನಿಕ ಸಂಶೋಧನೆ ಮತ್ತು ವೃತ್ತಿ ಮಾರ್ಗದರ್ಶನದ ಮೂಲಕ ಅಸಂಖ್ಯಾತ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ. ಎನ್ಎಸ್ಎಸ್ ರಾಜ್ಯ ತರಬೇತುದಾರ ಮತ್ತು ಪರಿಸರ ವಕೀಲರಾಗಿ, ಅವರು ಪರಿಸರ ಜಾಗೃತಿ ಕಾರ್ಯಕ್ರಮಗಳು, ರಕ್ತದಾನ ಅಭಿಯಾನಗಳು, ಜಲ ಸಂರಕ್ಷಣಾ ಯೋಜನೆಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೊಸಂಗಡಿ ಮತ್ತು ಮಾಸ್ತಿಕಟ್ಟೆ ಮದ್ಯದಲ್ಲಿ ಬಾಳೆಬರೆ ಘಾಟಿ ಕುಸಿದು ತಿಂಗಳುಗಳೇ ಕಳೆದರೂ ಸಹ ಘಾಟಿ ರಸ್ತೆ ಇನ್ನೂ ಘನ ವಾಹನಗಳ ಸಂಚಾರಕ್ಕೆ ಯೋಗ್ಯವಾಗದ ಕಾರಣ ಕುಂದಾಪುರ-ಬಸ್ರೂರು-ಸಿದ್ದಾಪುರ ಮಾರ್ಗವಾಗಿ ಸಾಗರ, ನಗರ, ತೀರ್ಥಹಳ್ಳಿ, ಶಿವಮೊಗ್ಗ ಮುಂತಾದ ನಗರಗಳಿಗೆ ಸಂಚರಿಸುವ ಬಸ್ಸುಗಳು ತಮ್ಮ ಸಂಚಾರವನ್ನು ನಿಲ್ಲಿಸಿದ ಕಾರಣ ವಿದ್ಯಾರ್ಥಿಗಳಿಗೆ ಶಾಲಾ, ಕಾಲೇಜುಗಳಿಗೆ ತೆರಳಲು ಮತ್ತು ಉದ್ಯೋಗ ನಿಮಿತ್ತ ದೂರದ ಊರುಗಳಿಗೆ ಹೋಗುವ ಮಹಿಳೆಯರಿಗೆ ಹಾಗೂ ಪುರುಷರಿಗೆ ಉದ್ಯೋಗಕ್ಕೆ ತೆರಳಲು ಹಾಗೂ ಸಂಜೆ ಮೇಲೆ ಮನೆಗೆ ವಾಪಾಸ್ಸಾಗಲು ಅತೀವ ತೊಂದರೆಯಾಗುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದರು. ಬಾಳೆಬರೆ ಘಾಟಿ ಘನ ವಾಹನ ಸಂಚಾರಕ್ಕೆ ಯೋಗ್ಯವಾಗುವ ತನಕ ಈ ಮಾರ್ಗದಲ್ಲಿ ಖಾಸಗಿ ಬಸ್ಸುಗಳು ಸಂಚರಿಸದೆ ಇರುವುದರಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದವರು ಕುಂದಾಪುರದಿಂದ ಹೊಸಂಗಡಿ ತನಕ ಹೆಚ್ಚುವರಿ ಬಸ್ಸುಗಳನ್ನು ಓಡಿಸುವುದರ ಮೂಲಕ ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕೆಂದು ಅವರು ಪತ್ರಿಕಾ ಹೇಳಿಕೆ ಮೂಲಕ ಆಗ್ರಹಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ದೋಹಾ: ಕತಾರ್‌ನ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಅಂಗಸಂಸ್ಥೆಯಾದ ‘ಕರ್ನಾಟಕ ಸಂಘ ಕತಾರ್’ (ಕೆಎಸ್‌ಕ್ಯು) ಸಂಸ್ಥೆಯ 2026-28ನೇ ಸಾಲಿನ ನೂತನ ವ್ಯವಸ್ಥಾಪನಾ ಸಮಿತಿಯು, ಅಧ್ಯಕ್ಷರಾದ ಮಾನ್ಯ ಸುಬ್ರಮಣ್ಯ ಹೆಬ್ಬಾಗಿಲು ಅವರ ನೇತೃತ್ವದಲ್ಲಿ ಇತ್ತೀಚೆಗೆ ಭಾರತದ ರಾಯಭಾರಿಗಳಾದ ಘನತೆವೆತ್ತ ಮಾನ್ಯ ವಿಪುಲ್ ಅವರನ್ನು ರಾಯಭಾರ ಕಚೇರಿಯಲ್ಲಿ ಸೌಜನ್ಯದ ಭೇಟಿ ಮಾಡಿತು. ನೂತನ ಸಮಿತಿಯ ಅಧಿಕಾರಾವಧಿಯ ಆರಂಭದ ಅಂಗವಾಗಿ ನಡೆದ ಈ ಉನ್ನತ ಮಟ್ಟದ ಸಭೆಯು ಉಭಯ ಕಡೆಯಿಂದ ಅತ್ಯಂತ ಸಕಾರಾತ್ಮಕವಾಗಿ ಮೂಡಿಬಂತು. ನಿಯೋಗವನ್ನು ಅತ್ಯಂತ ಆತ್ಮೀಯವಾಗಿ ಸ್ವಾಗತಿಸಿದ ರಾಯಭಾರಿ ಮಾನ್ಯ ವಿಪುಲ್ ಅವರು, ನೂತನ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಮಾತುಕತೆಯ ವೇಳೆ ಸಾಂಸ್ಕೃತಿಕ ಬೇರುಗಳನ್ನು ಗಟ್ಟಿಗೊಳಿಸುವ ವಿಷಯಕ್ಕೆ ಒತ್ತು ನೀಡಿದ ಅವರು, ಕತಾರ್‌ನಲ್ಲಿ ವಾಸಿಸುತ್ತಿರುವ ಅನಿವಾಸಿ ಕನ್ನಡಿಗರಲ್ಲಿ ಕನ್ನಡ ಭಾಷೆಯ ಬೆಳವಣಿಗೆ ಹಾಗೂ ಪ್ರಚಾರಕ್ಕಾಗಿ ಸಮಿತಿಯು ಸಕ್ರಿಯವಾಗಿ ಮತ್ತು ಮುಂಚೂಣಿಯಲ್ಲಿ ನಿಂತು ಶ್ರಮಿಸಬೇಕು ಎಂದು ಕರೆ ನೀಡಿದರು. ಕತಾರ್‌ನಲ್ಲಿ ಬೆಳೆಯುತ್ತಿರುವ ಮುಂದಿನ ಪೀಳಿಗೆಯ ಮಕ್ಕಳಿಗೆ ಕನ್ನಡ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಭಾರತ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ) 2.0 ಯೋಜನೆಡಿ “ಸರ್ವರಿಗೂ ಸೂರು” ಒದಗಿಸಲು 2024 ರ ಸೆಪ್ಟಂಬರ್ 01 ರಿಂದ ಅನ್ವಯವಾಗುವಂತೆ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಯೋಜನೆಯಡಿ ಮುಂದಿನ 05 ವರ್ಷಗಳಲ್ಲಿ ದೇಶಾದ್ಯಂತ ನಗರ ಪ್ರದೇಶಗಳಲ್ಲಿ ಒಂದು ಕೋಟಿ ಬಡವರು, ಕೊಳಚೆ ನಿವಾಸಿಗಳನ್ನು ಒಳಗೊಂಡಂತೆ ಮಧ್ಯಮ ವರ್ಗದವರಿಗೆ ಸೂರು ಒದಗಿಸಲು ಸಹಾಯಧನ ಒದಗಿಸಲಾಗುವುದು. ಯೋಜನೆಯಡಿ ಕಾಪು ಪುರಸಭಾ ವ್ಯಾಪ್ತಿಯಲ್ಲಿ ವಾಸಿಸುವ ವಸತಿ ರಹಿತರು ಮತ್ತು ನಿವೇಶನ ರಹಿತರಿಂದ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಕೇಂದ್ರ ಸರ್ಕಾರದ Unified Web Portal ನಲ್ಲಿಯೂ ಸಹ ಫಲಾನುಭವಿಗಳು ಸ್ವ-ಇಚ್ಛೆಯಿಂದ ಅರ್ಜಿಯನ್ನು ಸಲ್ಲಿಸಬಹುದು ಅಥವಾ ಸೇವಾ ಸಿಂದು ಮತ್ತು ಗ್ರಾಮ-1 ಮೂಲಕ ವೆಬ್‌ಸೈಟ್ https://pmay-urban.gov.in ನಲ್ಲಿಯೂ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿದಾರರು ಸಲ್ಲಿಸಬೇಕಾದ ದಾಖಲೆಗಳು:ಆಧಾರ್ ಕಾರ್ಡ್ (ಮನೆಯ ಯಜಮಾನ/ನಿ ಹಾಗೂ ತಂದೆ/ ತಾಯಿ/ಮತ್ತು ಪಡಿತರ ಚೀಟಿಯಲ್ಲಿ ಇರುವಂತ ಕುಟುಂಬ ಸದಸ್ಯರ ಆಧಾರ್ ಕಾರ್ಡ್) ಪ್ರತಿಗಳು, ವಸತಿ ರಹಿತರಾದಲ್ಲಿ ನಿವೇಶನಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾಹಿತ್ಯದ ಓದು ಮನುಷ್ಯನ ಮನಸ್ಸಿನಲ್ಲಿ ಆತ್ಮವಿಶ್ವಾಸವನ್ನು ಮೂಡಿಸಿ ಬದುಕಿನಲ್ಲಿ ಆಸಕ್ತಿಯನ್ನು ಹೆಚ್ಚಿಸುತ್ತದೆ. ಬದುಕಿನ ಅನುಭವವನ್ನು ಸಾಹಿತ್ಯವು ವಿಸ್ತಾರಗೊಳಿಸುತ್ತದೆ. ಸಂಸ್ಕೃತಿಯಲ್ಲಿ ಮನುಷ್ಯನನ್ನು ಸುಸಂಸ್ಕೃತಗೊಳಿಸುತ್ತದೆ. ಇದರಿಂದ ಸಾಹಿತ್ಯದ ಓದು ಅತೀ ಮುಖ್ಯವಾಗಿದೆ ’ನಮ್ಮ ಹಿರಿಯರು ಜನಪದ ಸಾಹಿತ್ಯದ ಮೂಲಕ ಈ ಪರಂಪರೆಯನ್ನು ಬೆಳೆಸಿದ್ದಾರೆ ಎಂದು ಖ್ಯಾತ ಲೇಖಕಿ ಮತ್ತು ಪ್ರಾಧ್ಯಾಪಕಿ ಡಾ. ನಿಕೇತನಾ ಹೇಳಿದರು. ಅವರು ಇಲ್ಲಿನ ಕುಂದಾಪುರದ ’ಸುರಗಂಗಾ ಕಲಾ-ಸಾಹಿತ್ಯ ಮಹಿಳಾ ವೇದಿಕೆಯು ಆಯೋಜಿಸಿದ ಸಾಹಿತ್ಯ ಗೋಷ್ಠಿಯಲ್ಲಿ ವೇದಿಕೆಯ ಸದಸ್ಯರನ್ನುದ್ದೇಶಿಸಿ ಮಾತನಾಡಿದರು. ವೇದಿಕೆಯ ಗೌರವಾಧ್ಯಕ್ಷರಾದ ಡಾ. ಪಾರ್ವತಿ ಜಿ. ಐತಾಳ್ ಮಾತನಾಡಿ, ಸಾಹಿತ್ಯ ಜಗತ್ತಿನಲ್ಲಿ ಭಾಷೆ-ಭಾಷೆಗಳ ನಡುವೆ ಅನುವಾದದ ಅನಿವಾರ್ಯತೆ ಆದರ್ಶ ಅಗತ್ಯ ಮಹತ್ವಗಳನ್ನು ವಿವರಿಸಿ ಒಂದು ಭಾಷೆಯಲ್ಲಿರುವ ಸಾಹಿತ್ಯದ ಬೆಳವಣಿಗೆಗೋಸ್ಕರ ನಿಸ್ವಾರ್ಥವಾಗಿ ದುಡಿಯುವ ಅನುವಾದಕರ ಸೇವೆಯನ್ನು ದುಡ್ಡಿನಿಂದ ಅಳೆಯಲಾಗುವುದಿಲ್ಲ ಎಂದರು. ವೇದಿಕೆಯ ಅಧ್ಯಕ್ಷರಾದ ಲೇಖಕಿ ಸುಮನಾ ಹೇರ್ಳೆ ಸಭೆಯ ಅಧ್ಯಕ್ಷ ಸ್ಥಾನದಿಂದ ಮಾತನಾಡಿ, ಸ್ಥಳೀಯ ನೆಲೆಯಲ್ಲಿ ಮಹಿಳೆಯರಿಗಾಗಿ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಬಹಳ ಮುಖ್ಯ ಎಂದರು.…
