ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ವಿದ್ಯಾರ್ಥಿಯನ್ನು ಶಾಲೆಯಿಂದ ಮನೆಗೆ ಕರೆದುಕೊಂಡು ಹೋಗಲು ಸಿದ್ದಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ತಂದೆಯ ಜತೆಯಲ್ಲಿ ಬೈಕಿನಲ್ಲಿ ಕುಳಿತಿರುವಾಗ ಟಿಪ್ಪರ್ ಚಾಲಕ ಅತೀ ವೇಗವಾಗಿ ಬಂದು ಬೈಕಿಗೆ ಢಿಕ್ಕಿ ಹೊಡೆದಿದ್ದು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿದ್ದಾಪುರ ಕೆಳಪೇಟೆಯ ಮಕ್ಕಿಮನೆ ರಾಘವೇಂದ್ರ ಪೂಜಾರಿ (38) ಅವರು ತಂದೆ ಕೃಷ್ಣ ಪೂಜಾರಿ. ಅವರನ್ನು ತನ್ನ ಬೈಕ್‌ನಲ್ಲಿ ಮನೆಯಿಂದ ಕುಳ್ಳಿರಿಸಿಕೊಂಡು ಬಂದು ಶಾಲೆಯ ಬಳಿ ನಿಂತುಕೊಂಡಿದ್ದರು. ಆ ಸಂದರ್ಭದಲ್ಲಿ ಅತೀ ವೇಗವಾಗಿ ಬಂದ ಟಿಪ್ಪರ್ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಇಬ್ಬರೂ ರಸ್ತೆಗೆ ಬಿದ್ದು ಗಾಯಗೊಂಡರು. ಗಂಭೀರವಾಗಿ ಗಾಯಗೊಂಡ ಕೃಷ್ಣ ಪೂಜಾರಿ ಅವರನ್ನು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಚಾಮರಾಜನಗರದಲ್ಲಿ ನಡೆದ ರಾಜ್ಯ ಮಟ್ಟದ ಟೆನ್ನಿಸ್ ವಾಲಿಬಾಲ್ ಪಂದ್ಯಾವಳಿಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರಾವ್ಯ ಬಾಲಕಿಯರ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ, ಬಾಲಕರ ವಿಭಾಗದಲ್ಲಿ ಸೃಜನ್ ದ್ವಿತೀಯ ಸ್ಥಾನ ಪಡೆದು ಸಾಧನೆ ಮೆರೆದಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳು ಹೆಬ್ರಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿದವು. ಜಿಲ್ಲೆಯ ವಿವಿಧ ಪದವಿ ಪೂರ್ವ ಕಾಲೇಜುಗಳಿಂದ ಆಗಮಿಸಿದ ಪ್ರತಿಭಾವಂತ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿದರು. ಈ ಸ್ಪರ್ಧೆಗಳಲ್ಲಿನ ಕನ್ನಡ ಭಾಷಣ ವಿಭಾಗದಲ್ಲಿ ಕ್ರಿಯೇಟಿವ್ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಆದ್ಯ ಎಸ್. ಪಡ್ರೆ ಅವರು ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಕಾಲೇಜಿಗೆ ಹಾಗೂ ಕಾರ್ಕಳ ತಾಲೂಕಿನಿಗೆ ಹೆಮ್ಮೆಯನ್ನು ತಂದಿದ್ದಾರೆ. ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಮೇಲಿನ ಆಳವಾದ ಅಭಿಮಾನವನ್ನು ತಮ್ಮ ಭಾಷಣದಲ್ಲಿ ಸ್ಪಷ್ಟವಾಗಿ ಪ್ರತಿಬಿಂಬಿಸಿದ ಆದ್ಯ ಅವರು, ಸುಸ್ಪಷ್ಟ ಉಚ್ಚಾರಣೆ, ವಿಚಾರಬದ್ಧ ವಿಷಯ ಪ್ರಸ್ತುತಿ ಹಾಗೂ ಆತ್ಮವಿಶ್ವಾಸಪೂರ್ಣ ನಿರೂಪಣೆಯಿಂದ ಮೆಚ್ಚುಗೆಗೆ ಪಾತ್ರರಾದರು. ಸ್ಪರ್ಧೆಯ ವೇಳೆ ಆದ್ಯ ಅವರು ಸಮಕಾಲೀನ ವಿಚಾರಗಳನ್ನು ಕನ್ನಡದ ಸೊಗಸಿನ ಭಾಷೆಯೊಂದಿಗೆ ಜೋಡಿಸಿ ಮಂಡಿಸಿದ ರೀತಿಗೆ ಪ್ರೇಕ್ಷಕರಿಂದಲೂ ಪ್ರಶಂಸೆ ವ್ಯಕ್ತವಾಯಿತು. ವಿದ್ಯಾರ್ಥಿನಿಯ ಶ್ರಮ, ನಿರಂತರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಪದವಿ ಬದುಕಿನಲ್ಲಿ ಆರಂಭಿಕ ಅವಕಾಶವನ್ನು ಒದಗಿಸಿದರೆ, ಶ್ರೇಷ್ಟತೆಯ ಶಿಖರ ತಲುಪುವುದು ನಮ್ಮ ನಿಲುವು ಹಾಗೂ ಚಿಂತನೆಯಿಂದ ಎಂದು ಪ್ರೊವಿಟ್ ಫುಡ್ಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕವಿನ್ಸೆಂಟ್ ಕುಟಿನ್ಹಾ ನುಡಿದರು.ಅವರು ಸೋಮವಾರ ಡಾ. ವಿಎಸ್ ಆಚಾರ್ಯ ಸಭಾಂಗಣದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಹಾಗೂ ಕಲಾ ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ವಾರ್ಷಿಕ ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಯ ನೆಲೆಯಲ್ಲಿ ಮಾತನಾಡಿದರು. ಬದುಕಿನ ಸಫಲತೆ ಕೇವಲ ಹುದ್ದೆ ಅಥವಾ ಪ್ರಮಾಣ ಪತ್ರದಲ್ಲಿಲ್ಲ. ಜ್ಞಾನ ಮೌಲ್ಯವನ್ನು ಉಂಟುಮಾಡಿ, ಕೆಲಸ ಸಮಾಜದ ಮೇಲೆ ಪ್ರಭಾವ ಬೀರಿ, ವ್ಯಕ್ತಿತ್ವದಿಂದ ವಿಶ್ವಾಸ ಬೆಳೆದಾಗ ಬದುಕು ಸಾರ್ಥಕ್ಯದೆಡೆಗೆ ಸಾಗಲು ಸಾಧ್ಯ. ಪ್ರಾಮಾಣಿಕತೆ ಮತ್ತು ಶಿಸ್ತು ಜೀವನದ ಯಶಸ್ಸಿನ ಕೀಲಿಕೈ, ಪ್ರಾಮಾಣಿಕತೆ ಮತ್ತು ಶಿಸ್ತು ಒಂದಕ್ಕೊಂದು ಪೂರಕ. ಪ್ರಾಮಾಣಿಕತೆ ವ್ಯಕ್ತಿತ್ವಕ್ಕೆ ನೈತಿಕ ಬಲ ನೀಡಿದರೆ, ಶಿಸ್ತು ಜೀವನಕ್ಕೆ ವೈಯಕ್ತಿಕ ಬಲ ನೀಡುತ್ತದೆ. ಈ ಎರಡು ಗುಣಗಳು ಬೆರೆತಾಗ ವ್ಯಕ್ತಿ ಯಶಸ್ವಿಯಾಗುತ್ತಾನೆ. 30 ಸಾವಿರದಿಂದ 450…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ಎಂಬಿಎ ವಿಭಾಗದ ವತಿಯಿಂದ ಅಂತಿಮ ವರ್ಷದ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ಹಮ್ಮಿಕೊಳ್ಳಲಾಯಿತು. ಈ ಸಭೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಶಿಸ್ತು ಹಾಜರಾತಿ ಭವಿಷ್ಯದ ವೃತ್ತಿ ಅವಕಾಶಗಳ ಕುರಿತು ಚರ್ಚಿಸಲಾಯಿತು. ಎಂಬಿಎ ಮುಖ್ಯಸ್ಥೆ ಡಾ. ಸುಚಿತ್ರಾ ಪೂಜಾರಿ ಕಾಲೇಜಿನ ಬಗ್ಗೆ ಸಂಕ್ಷಿಪ್ತವಾಗಿ ಪರಿಚಯವನ್ನು ನೀಡಿದರು. ತರಗತಿ ಉಪನ್ಯಾಸಕರಾದ ತಿಲಕಲಕ್ಷ್ಮೀ ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಕುರಿತು ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಎಂಬಿಎ, ವಿಭಾಗದ ಉಪನ್ಯಾಸಕರು ಉಪಸ್ಥಿತರಿದ್ದರು. ಸಹಾಯಕ ಪ್ರಾಧ್ಯಾಪಕಿ ನಾಗವೇಣಿ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಕೈಗಾರಿಕಾ ಘಟಕ ಸ್ಥಾಪನೆಗೆ ಹಂಚಿಕೆಯಾಗಿರುವ ನಿವೇಶನದಲ್ಲಿ ಉದ್ದಿಮೆದಾರರು ನಿಯಮಾನುಸಾರ ಆರು ತಿಂಗಳ ಒಳಗಾಗಿ ಕೈಗಾರಿಕಾ ಚಟುವಟಿಕೆ ಆರಂಭಿಸಬೇಕು. ತಪ್ಪಿದ್ದಲ್ಲಿ ನಿವೇಶನಗಳನ್ನು ಮರು ಹಂಚಿಕೆ ಮಾಡಲಾಗುವುದೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ, ಕೈಗಾರಿಕಾ ಸ್ಪಂದನ, ಜಿಲ್ಲಾ ಮಟ್ಟದ ರಫ್ತು ಉತ್ತೇಜನ ಸಮಿತಿ ಸಭೆ, ಪ್ರಧಾನಮಂತ್ರಿಯವರ ಉದ್ಯೋಗ ಸೃಜನ ಯೋಜನೆಯ ಡಿ.ಎಲ್.ಎಂ.ಸಿ ಸಭೆ ಹಾಗೂ ಪಿ.ಎಂ ವಿಶ್ವಕರ್ಮ ಯೋಜನೆಯ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೈಗಾರಿಕೋದ್ಯಮಿಗಳು ಕೈಗಾರಿಕಾ ಘಟಕ ಸ್ಥಾಪನೆಗೆ ಪಡೆದಿರುವ ನಿವೇಶನಗಳಲ್ಲಿ ಉದ್ದಿಮೆ ಆರಂಭಿಸದೇ ಹೆಚ್ಚುವರಿ ಕಾಲಾವಕಾಶ ಕೋರಿ ಪದೇ ಪದೇ ಮನವಿ ಸಲ್ಲಿಸುತ್ತಿದ್ದಾರೆ. ಉತ್ಪನ್ನ ಹಾಗೂ ಘಟಕದ ಹೆಸರು ಬದಲಾವಣೆ, ಹೆಚ್ಚುವರಿ ಕಾಲಾವಕಾಶ ಸೇರಿದಂತೆ ಮತ್ತಿತರ ಅಸಮರ್ಪಕ ಕಾರಣ ನೀಡಿ ಕಾರ್ಯಚಟುವಟಿಕೆ ಆರಂಭಿಸದೇ ಇರುವವರ ನಿವೇಶನಗಳನ್ನು, ಕೈಗಾರಿಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಕುಂದಾಪುರ ಪುರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ನಿಯಂತ್ರಣ, ಪಾಲನೆ ಮತ್ತು ಪ್ರಾಣಿ ಸಂರಕ್ಷಣಾ ಸೇವೆಗಳನ್ನು ನೀಡಲು ಆಸಕ್ತಿವುಳ್ಳ ಅನುಭವ ಹೊಂದಿರುವ ಅರ್ಹ ಅನುಭವಿ ಸರ್ಕಾರೇತರ ಸಂಸ್ಥೆಗಳು (ಎನ್.ಜಿ.ಓ), ಸಂಘ ಸಂಸ್ಥೆಗಳು ಹಾಗೂ ವ್ಯಕ್ತಿಗಳಿಂದ ಪ್ರಸ್ತಾವನೆಯನ್ನು ಆಹ್ವಾನಿಸಲಾಗಿದೆ. ಆಸಕ್ತ ಸಂಸ್ಥೆಗಳು ಅಥವಾ ವ್ಯಕ್ತಿಗಳು ತಮ್ಮ ಜಾಗದಲ್ಲಿ ಬೀದಿ ನಾಯಿಗಳಿಗೆ ಆಶ್ರಯ ತಾಣ ನಿರ್ಮಾಣ ಹಾಗೂ ಸಂತಾನಹರಣ ಚಿಕಿತ್ಸೆ ಕೈಗೊಳ್ಳುವುದರೊಂದಿಗೆ ಪಾಲನಾ ಪೊಷಣೆಯನ್ನು ನಿರ್ವಹಿಸಬೇಕು ಅಥವಾ ಆಸಕ್ತ ಸಂಸ್ಥೆಗಳು ಅಥವಾ ವ್ಯಕ್ತಿಗಳು ಪುರಸಭಾ ವತಿಯಿಂದ ನೀಡುವ ಸ್ಥಳದಲ್ಲಿ ಬೀದಿ ನಾಯಿಗಳಿಗೆ ಆಶ್ರಯ ತಾಣ ನಿರ್ಮಾಣ ಹಾಗೂ ಸಂತಾನಹರಣ ಚಿಕಿತ್ಸೆ ಕೈಗೊಳ್ಳುವುದರೊಂದಿಗೆ ಪಾಲನಾ ಪೊಷಣೆಯನ್ನು ನಿರ್ವಹಿಸಬೇಕು. ಕುಂದಾಪುರ ಪುರಸಭಾ ವತಿಯಿಂದ ಬೀದಿ ನಾಯಿಗಳನ್ನು ದತ್ತು ನೀಡುವ ಪ್ರಕ್ರಿಯ ಚಾಲ್ತಿಯಲ್ಲಿದ್ದು, ಆಸಕ್ತ ಸಂಸ್ಥೆಗಳು ಅಥವಾ ವ್ಯಕ್ತಿಗಳು ಪ್ರಸ್ತಾವನೆಯನ್ನು ಸಲ್ಲಿಸಬಹುದಾಗಿದೆ. ಅರ್ಹ ಆಸಕ್ತ ಸಂಸ್ಥೆಗಳು ಅಥವಾ ವ್ಯಕ್ತಿಗಳು ಮುಚ್ಚಿದ ಲಕೋಟೆಯಲ್ಲಿ ಪ್ರಸ್ತಾವನೆಯನ್ನು ಹಾಗೂ ಅಗತ್ಯ ದಾಖಲೆಗಳನ್ನು ಮುಖ್ಯಾಧಿಕಾರಿಗಳು, ಪುರಸಭೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟ ಮಣೂರು ಪಡುಕರೆಯ ಇಂಡಿಕಾ ಕಲಾ ಬಳಗ ಪ್ರತಿ ವರ್ಷ ನೀಡುವ ಮೊಳಹಳ್ಳಿ ಹೆರಿಯ ನಾಯ್ಕ ಇಂಡಿಕಾ ಪುರಸ್ಕಾರಕ್ಕೆ, ಹಿರಿಯ ಯಕ್ಷಗಾನ ಕಲಾವಿದ ಯಕ್ಷತೀರ್ಥ ತೀರ್ಥಹಳ್ಳಿ ಗೋಪಾಲ ಆಚಾರ್ ಆಯ್ಕೆಯಾಗಿದ್ದಾರೆ. ಫೆ.8ರಂದು ಮಣೂರು ಪಡುಕರೆ ಸರ್ಕಾರಿ ಸಂಯುಕ್ತ ಪ್ರೌಢಶಾಲಾ ವಠಾರದ ಗೀತಾನಂದ ರಂಗಮಂಟಪದಲ್ಲಿ ಇಂಡಿಕಾ 16ನೇ ವರ್ಷದ ಸಂಭ್ರಮ ಕಾರ್ಯಕ್ರಮ ಜರುಗಲಿದೆ. ಪ್ರತಿಭಾ ಪುರಸ್ಕಾರ, ವಿಶೇಷ ಅಭಿನಂದನೆ, ಅಶಕ್ತರಿಗೆ ನೆರವು ಈ ವೇದಿಕೆಯಲ್ಲಿ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಭಾಗವಾಗಿ ಸ್ಥಳೀಯ ಅಂಗನವಾಡಿ ಹಾಗೂ ಶಾಲಾ ಮಕ್ಕಳ ನೃತ್ಯ ವೈವಿಧ್ಯ, ಪಿಂಗಾರ ಕಲಾವಿದರು ಬೆದ್ರ ಮಂಗಳೂರು ಅವರಿಂದ ಓಂಕಾರ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಇಂಡಿಕಾ ಕಲಾಬಳಗದ ಸಂಚಾಲಕ ಪ್ರಭಾಕರ್ ಪಡುಕರೆ, ಅಧ್ಯಕ್ಷ ಎಂ. ಜಯರಾಮ ಶೆಟ್ಟಿ, ಸಮಿತಿಯ ಪ್ರಮುಖರಾದ ನಾಗರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಬಾರ್ ಅಸೋಸಿಯೇಷನ್ ರಿ. (ವಕೀಲರ ಸಂಘ) ಇದರ ನೂತನ ಪಧಾಧಿಕಾರಿಗಳ ಅಧಿಕಾರ ಹಸ್ತಾಂತರ ಕಾಯಕ್ರಮ ಇತ್ತೀಚಿಗೆ ನಡೆಯಿತು. 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ವಕೀಲ ಪ್ರಶಾಂತ್ ಪೂಜಾರಿ ಅವಿರೋಧವಾಗಿ ಹಾಗೂ ಕಾರ್ಯದರ್ಶಿಯಾಗಿ ಲಿಂಗಪ್ಪ ಆರ್ ಮೇಸ್ತ ಆಯ್ಕೆಯಾದರು. ಅಸೋಸಿಯೇಷನ್‌ನ ಖಜಾಂಚಿಯಾಗಿ ಪಿಂಕಿ ಕಾರ್ವಲ್ಲೋ, ಉಪಾಧ್ಯಕ್ಷರಾಗಿ ಚಿಕ್ಕಯ್ಯ ನಾರಾಯಣ ಶೆಟ್ಟಿ, ಜೊತೆ ಕಾರ್ಯದರ್ಶಿ ಗಣೇಶ್ ಮೇಸ್ತ, ಕಾರ್ಯಕಾರಿಣಿ ಸಮಿತಿ ಸದಸ್ಯರುಗಳಾಗಿ ಶ್ರೀಧರ್ ಜಿ, ಕುಮಾರಿ ಅಖಿಲ ರಾಣಿ, ಕೀರ್ತನ, ಹೇಮಲತಾ ಇವರುಗಳು ಆಯ್ಕೆಯಾಗಿರುತ್ತಾರೆ. ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ ಅವರು 2011ರಿಂದ ವಕೀಲರಾಗಿ ಕಾನೂನು ಸೇವೆ ಸಲ್ಲಿಸುತ್ತಾ ಬಂದಿದ್ದು, 2023ರಿಂದ ಬೈಂದೂರು ಬಾರ್ ಅಸೋಸಿಯೇಷನ್ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿರುತ್ತಾರೆ. ಬೈಂದೂರಿನಲ್ಲಿ ನ್ಯಾಯಾಲಯ ಸ್ಥಾಪನೆಗಾಗಿ ಹೋರಾಟ ಮಾಡಿದವರ ಪೈಕಿ ಮುಂಚೂಣಿಯಲ್ಲಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಹಿಂದಿನ ವರ್ಷಗಳಲ್ಲಿ ಸಂಸ್ಥೆಯಲ್ಲಿ ವಿದ್ಯಾರ್ಜನೆಗೈದು ಬೇರೆ ಬೇರೆ ಕಡೆಗಳಲ್ಲಿ ಇರುವ ಹಳೆಯ ವಿದ್ಯಾರ್ಥಿಗಳಿಗಾಗಿ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಹಳೆ ವಿದ್ಯಾರ್ಥಿಗಳು ವಿವಿಧ ಮೋಜಿನ ಆಟಗಳಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿಗಳಾದ ಮಹೇಶ್ ಯಾದವ್, ವಂಶಿ, ಆಯುಷ್ ಶೆಟ್ಟಿ, ಶ್ರಾವಣಿ, ಹರ್ಷಿತ್ ಹಿರೇಮಠ, ಡಾ| ಉತ್ಸವ ಶೆಟ್ಟಿ ಈ ವಸತಿ ಶಾಲೆಯ ಮಕ್ಕಳಾದ ನಮಗೆ ಶಾಲೆಯು ಸರಿಯಾದ ಮಾರ್ಗದರ್ಶನ ನೀಡಿತ್ತು. ಅದೀಗ ನಮ್ಮ ಅನುಭವಕ್ಕೆ ಬರುತ್ತಿದೆ. ಶಿಸ್ತಿನ ವಿಷಯದಲ್ಲಿ ರಾಜಿ ಇಲ್ಲದ ವ್ಯವಹಾರ ನಮ್ಮ ಜೀವನದಲ್ಲಿ ಶಿಸ್ತನ್ನು ಅನುಸರಿಸುವಂತೆ ಮಾಡಿದೆ. ಪಠ್ಯೇತರ ಚಟುವಟಿಕೆಗಳಿಗೆ ನೀಡುವ ಪ್ರೋತ್ಸಾಹದಿಂದ ನಮ್ಮ ಸಾಧನೆಯ ಮಾರ್ಗಗಳು ತೆರೆದುಕೊಂಡಿವೆ. ಶುಚಿ ರುಚಿಯಾದ ಆಹಾರ ವ್ಯವಸ್ಥೆ ನಮಗೆ ಇಲ್ಲಿ ಸಿಕ್ಕಂತೆ ಉಳಿದ ಕಡೆಗಳಲ್ಲಿ ಲಭಿಸಿಲ್ಲ. ಇದೇ ಮೊದಲಾದ ಅನುಭವಗಳನ್ನು ಹಂಚಿಕೊಂಡರು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ…
