Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಿವವೊಗ್ಗ ಜಿಲ್ಲೆಯ ಮಂಡಗದ್ದೆಯಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಇಲ್ಲಿನ ತೆಕ್ಕಟ್ಟೆ ಮೂಲದ ಮಹಿಳೆ ಮೃತಪಟ್ಟಿದ್ದಾರೆ. ಆರು ಮಂದಿ ಕುಟುಂಬ ಸದಸ್ಯರು ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಶಿವವೊಗ್ಗ ಜಿಲ್ಲೆಯ ಮಂಡಗದ್ದೆಯಲ್ಲಿ ಘಟನೆ ಆದಿತ್ಯವಾರದಂದು ಬೆಳಗ್ಗೆ 11ರ ಸುಮಾರಿಗೆ ಸಂಭವಿಸಿದೆ. ತೆಕ್ಕಟ್ಟೆಯ ಮಣಿಕಂಠ ಟ್ರಾನ್ಸ್‌ಪೋರ್ಟ್ ಮಾಲಕ ದೇವಾಡಿಗ ಶಿವಮೊಗ್ಗದಲ್ಲಿರುವ ಮಗಳ ಮನೆಗೆ ಮಾರುತಿ ಸ್ವಿಫ್ಟ್ ಕಾರಿನಲ್ಲಿ ಕುಟುಂಬ ಸದಸ್ಯರೊಂದಿಗೆ ತೆರಳುತ್ತಿದ್ದರು. ಸುರಿಯುತ್ತಿದ್ದ ಭಾರೀ ಮಳೆ ಹಾಗೂ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ರಸ್ತೆ ಸಮೀಪದ ನದಿಗೆ ಉರುಳಿತು. ಕಾರು ನೀರಿನಲ್ಲಿ ಮುಳುಗುತ್ತಿದಂತೆ ಸ್ಥಳೀಯರು ಧಾವಿಸಿ ಬಂದು ರಕ್ಷಣೆಗಿಳಿದರೂ ಶಂಕರ ದೇವಾಡಿಗ ಅವರ ಪತ್ನಿ ಸವಿತಾ ದೇವಾಡಿಗ (57) ಅಸುನೀಗಿದರು. ಶಂಕರ ದೇವಾಡಿಗ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪುತ್ರರಾದ ಅರುಣ್ ದೇವಾಡಿಗ ಹಾಗೂ ಎಂಜಿನಿಯರ್ ಅಶ್ವತ್ಥ ದೇವಾಡಿಗ, ಪುತ್ರಿ ಅಮೃತಾ, ಅಳಿಯ ಸುರೇಶ್ ದೇವಾಡಿಗ ಹಾಗೂ 2.5 ವರ್ಷದ ಅಭಿಶ್ರೇಯ್ ಅವರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅಖಿಲ ಭಾರತೀಯ ಗಂಧರ್ವ ಮಹಾವಿದ್ಯಾಲಯ ಮಂಡಲ ಮುಂಬೈ ಇದರ 2024-25ರ ಸಾಲಿನ ಭರತನಾಟ್ಯ ಪ್ರಾವೇಶಿಕ ಪೂರ್ಣ ಪರೀಕ್ಷೆಯಲ್ಲಿ ಕುಂದಾಪುರದ ಸಾಧನ ಕಲಾ ಸಂಗಮದ ಭರತನಾಟ್ಯ ವಿದ್ಯಾರ್ಥಿನಿ ಹಾಗೂ ಕುಂದಾಪುರದ ವಿ.ಕೆ.ಆರ್. ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಪ್ರಾಪ್ತಿ ಮಡಪ್ಪಾಡಿ 125ರಲ್ಲಿ 119 ಅಂಕಗಳನ್ನು ಪಡೆದು ಡಿಸ್ಟಿಕ್ಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ. ಹೊನ್ನಾವರದ ಸೆಂಟರ್ ನಲ್ಲಿ ಪರೀಕ್ಷೆ ಬರೆದಿದ್ದ ಪ್ರಾಪ್ತಿ ಮಡಪ್ಪಾಡಿ, ಪರೀಕ್ಷಾ ಕೇಂದ್ರದಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದು ಮೊದಲಿಗರಾಗಿದ್ದಾರೆ. ಅವರು ಕುಂದಾಪುರದ ಪತ್ರಕರ್ತ ಜಯಶೇಖರ್ ಮಡಪ್ಪಾಡಿ ಹಾಗೂ ಮಧುಸ್ಮಿತಾ ಜಯಶೇಖರ್ ಅವರ ದಂಪತಿಯ ಪುತ್ರಿ. ಉಡುಪಿಯ ಭರತನಾಟ್ಯ ಗುರು, ವಿದುಷಿ. ಲಕ್ಷ್ಮೀ ಗುರುರಾಜ್ ಅವರ ಶಿಷ್ಯೆ ಅರ್ಪಿತಾ ಹೆಗಡೆ ಅವರ ಶಿಷ್ಯೆ. ಪ್ರಾಪ್ತಿ ಮಡಪ್ಪಾಡಿ ಅವರ ಸಾಧನೆಗೆ ಸಾಧನಾ ಕಲಾ ಸಂಗಮದ ವಿಶ್ವಸ್ಥ ನಾರಾಯಣ ಐತಾಳ್ ಹಾಗೂ ಆಡಳಿತ ಮಂಡಳಿ, ಭರತನಾಟ್ಯ ಗುರು ವಿದುಷಿ ಅರ್ಪಿತಾ ಹೆಗಡೆ ಹಾಗೂ ಕುಂದಾಪುರ ಎಜ್ಯುಕೇಶನ್ ಸೊಸೈಟಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರಕ್ತದಾನ ಮಹಾದಾನವಾಗಿದ್ದು, ಆಪತ್ತಿನಲ್ಲಿರುವ ಮತ್ತೊಬ್ಬರ ಜೀವ ಉಳಿಸಲು ಸಹಾಯವಾಗುತ್ತದೆ. ಇಂತಹ ಕಾರ್ಯಕ್ಕೆ ಹೆಚ್ಚು ಜನರು ಮುಂದೆ ಬರಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾಧಿಕಾರಿಯವರ ಕಚೇರಿ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ (ರಿ) ಉಡುಪಿ ಜಿಲ್ಲಾ ಶಾಖೆ, ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕೇಂದ್ರ ಉಡುಪಿ ಹಾಗೂ ರಕ್ತನಿಧಿ ಕೇಂದ್ರ ಕೆ.ಎಂ.ಸಿ ಮಣಿಪಾಲ ಇವರ ಸಹಯೋಗದೊಂದಿಗೆ ನಡೆದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಒಂದು ಬಾರಿ ರಕ್ತದಾನ ಮಾಡುವುದರಿಂದ ಮೂರು ಜನರ ಜೀವಗಳನ್ನು ಉಳಿಸಲು ಸಾಧ್ಯ. ವೈದ್ಯಕೀಯ ಪದ್ಧತಿಯಲ್ಲಿ ಒಂದು ರಕ್ತದಾನವನ್ನು ವಿಭಿನ್ನ ಘಟಕಗಳಾಗಿ ಬೇರ್ಪಡಿಸಬಹುದು. ಪ್ರತಿಯೊಂದು ವಿಶಿಷ್ಟ ಉದ್ದೇಶವನ್ನು ಪೂರೈಸುತ್ತದೆ. ಇಂದು ನಡೆದ ರಕ್ತದಾನ ಶಿಬಿರದಲ್ಲಿಯೂ 100 ಕ್ಕೂ ಹೆಚ್ಚು ಜನ ಉತ್ಸಾಹಕರಾಗಿ ರಕ್ತದಾನ ಮಾಡಿರುವುದು ಅಭಿನಂದನಾರ್ಹ ಕಾರ್ಯ ಎಂದರು. ಒಂದೇ ಸೂರಿನಡಿ ಹೆಚ್ಚು ಕಚೇರಿಗಳು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಆಧುನಿಕ ಕೃಷಿ ಪದ್ದತಿಯ ಅಳವಡಿಕೆಯಿಂದ ಕೃಷಿಯನ್ನು ಲಾಭದಾಯಕವಾಗಿ ಬೆಳೆಸಬಹುವುದಾಗಿದೆ. ಕಾಲದ ಬದಲಾವಣೆಗೆ ಒಗ್ಗಿಕೊಂಡಂತೆ ಕೃಷಿ ಕ್ಷೇತ್ರದಲ್ಲಾಗುವ ಬದಲಾವಣೆಗಳು ರೈತರಿಗೆ ಲಾಭವನ್ನು ಹೆಚ್ಚಿಸುತ್ತದೆ ಎಂದು ಉದ್ಯಮಿ ಜಿ. ಗೋಕುಲ್‌ ಶೆಟ್ಟಿ ಉಪ್ಪುಂದ ಹೇಳಿದರು. ಅವರು ಯಡ್ತರೆ ಬಂಟರಯಾನೆ ನಾಡವರ ಸಂಕೀರ್ಣದಲ್ಲಿ ಉತ್ಸವ ಸಮಿತಿ ಬೈಂದೂರು, ಸಮಷ್ಠಿ ಪ್ರತಿಷ್ಠಾನ, ರೈತೋತ್ಧಾನ ಬಳಗ ಹಾಗೂ ರೋಟರಿ ಕ್ಲಬ್ ಬೈಂದೂರು ಇವರ ಸಹಯೋಗದಲ್ಲಿ ಶುಕ್ರವಾರ ಆರಂಭಗೊಂಡು ಮೂರು ದಿನಗಳ ಕಾಲ ನಡೆಯುವ ಹಲಸು ಹಾಗೂ ಕೃಷಿ ಮೇಳವನ್ನು ಉದ್ಘಾಟಿಸಿ ಮಾತನಾಡಿದರು. ರೈತರು ಬೆಳೆದ ಬೆಳೆಗಳು ನೇರವಾಗಿ ಗ್ರಾಹಕರಿಗೆ ದೊರೆತಾಗ ಕೃಷಿ ಕ್ಷೇತ್ರ ಇನ್ನಷ್ಟು ಯಶಸ್ವಿಯಾಗಿ ಮುನ್ನೆಡೆಯುತ್ತದೆ. ಇಂತಹ ಮೇಳಗಳ ಮುಖಾಂತರ ಗ್ರಾಮೀಣ ಭಾಗದ ರೈತರಿಗೆ ಹೊಸ ವಿಧಾನಗಳ ಪರಿಚಯವಾಗುತ್ತದೆ. ಈ ಮೇಳವು ಮೂರು ದಿನಗಳ ವರೆಗೆ ನಡೆಯಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಸಮೃದ್ದ ಜನಸೇವಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬಿ. ಎಸ್. ಸುರೇಶ ಶೆಟ್ಟಿ, ಜಿಪಂ ಮಾಜಿ ಅಧ್ಯಕ್ಷ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ  ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಕರಾವಳಿ ಕಾವಲು ಪೋಲಿಸ್ ಪಡೆ ಗಂಗೊಳ್ಳಿಯ ಸಬ್ ಇನ್ಸ್ಪೆಕ್ಟರ್ ಮುಕ್ತಾ ಬಾಯಿ ಅವರು ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ಪೋಕ್ಸೊ ಕಾಯಿದೆಯ ಬಗ್ಗೆ ತಿಳಿಸಿದರು. ವಿದ್ಯಾರ್ಥಿಗಳು ಕೈಗೊಳ್ಳಬೇಕಾದ ಮುಂಜಾಗ್ರತೆ ಕುರಿತು ನಿದರ್ಶನಗಳ ಮೂಲಕ ಮಾಹಿತಿ ನೀಡಿದರು. ಪೋಲಿಸ್ ಕಾನ್ ಸ್ಟೇಬಲ್ ರಾಘವೇಂದ್ರ ಪ್ರಸಾದ್ ಅವರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಕೃಷ್ಣ ಅಡಿಗ ಅವರು ಸ್ವಾಗತಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಪಡುವರಿ ಗ್ರಾಮದ ಸೋಮೇಶ್ವರ ಸಮುದ್ರ ತೀರದಲ್ಲಿ ದೇಗುಲದ ಗೋಪುರಕ್ಕೆ ಅಳವಡಿಸುವ ಸುಮಾರು 3 ಕೆ.ಜಿ. ತಾಮ್ರದ ಕಲಶ ಪತ್ತೆಯಾಗಿದೆ‌. ಗಂಗೊಳ್ಳಿ ಕರಾವಳಿ ಕಾವಲು ಠಾಣೆಯ ಇನ್ಸ್ಪೆಕ್ಟರ್ ವಸಂತ ರಾಮ ಆಚಾರ್, ಉಪನಿರೀಕ್ಷಕ ಸುಬ್ರಹ್ಮಣ್ಯ ಎಚ್, ಗೃಹರಕ್ಷಕ ದಳದ ನಾಗೇಂದ್ರ ಸ್ಥಳಕ್ಕೆ ಭೇಟಿ ನೀಡಿ ಕಲಶವನ್ನು ಪರಿಶೀಲಿಸಿದ್ದಾರೆ. ಇದರ ವಾರಸುದಾರರು ಯಾರಾದರೂ ಇದ್ದರೆ ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆ ಸಂಪರ್ಕಿಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ವ್ಯಸನದ ವಿರುದ್ಧ ಮಾಹಿತಿ ಕಾರ್ಯಕ್ರಮ ನಡೆಯಿತು. ಕಂಡ್ಲೂರು ಪೋಲಿಸ್ ಠಾಣೆಯ ಢಾಣಾಧಿಕಾರಿಗಳಾಗಿರುವ ಭೀಮಾಶಂಕರ್ ಅವರು ಮಾದಕ ವ್ಯಸನದ ವಿರುದ್ಧದ ಕುರಿತಾಗಿ ಮಾಹಿತಿ ನೀಡಿ, ಇಂದಿನ ಈ ಯುಗದಲ್ಲಿ ಆರೋಗ್ಯಕ್ಕೆ ಹಾನಿಯುಂಟುಮಾಡುವ ಮಾದಕ ವ್ಯಸನಗಳು ತುಂಬಾ ಸುಲಭವಾಗಿ ಕೈಗೆ ಸಿಗುತ್ತಿದ್ದು, ಅವೆಲ್ಲವನ್ನೂ ಸ್ವೀಕರಿಸಬೇಡಿ ಆರೋಗ್ಯದ ಕುರಿತಾಗಿ ಜಾಗ್ರತಿ ವಹಿಸಿ ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಠಾಣಾ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು. ಉಪನ್ಯಾಸಕರಾದ ಉದಯ ನಾಯ್ಕ ಕಾರ್ಯಕ್ರಮ ನಿರ್ವಹಿಸಿ ಸ್ವಾಗತಿಸಿ, ಅಭಿಜಿತ್ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಕಾಲೇಜು ವಿದ್ಯಾಭ್ಯಾಸವನ್ನು ಮುಗಿಸಿ ವೃತ್ತಿ ಜೀವನಕ್ಕೆ ಕಾಲಿಡುವ ಪ್ರತಿ ವಿದ್ಯಾರ್ಥಿಯೂ ಸಂದರ್ಶನವನ್ನು ಎದುರಿಸುವ ಕಲೆಯನ್ನು ಕರಗತ ಪಡಿಸಿಕೊಂಡಿರಬೇಕು. ಪ್ರತಿ ನಿರ್ಧಾರವನ್ನು ಜಾಗರೂಕತೆಯಿಂದ ತೆಗೆದುಕೊಳ್ಳುವ ಮನೋಭಾವವನ್ನು ಬೆಳೆಸಿಕೊಂಡರೆ ಯಶಸ್ಸು ಸುಲಭ ಸಾಧ್ಯ ಎಂದು ಬನ್ನಡ್ಕ ಎಸ್ ಕೆಎಫ್ ಎಲಿಕ್ಸರ್ ಪ್ರೈವೇಟ್ ಲಿಮಿಟೆಡ್‌ನ ಮಾನವ ಸಂಪನ್ಮೂಲ ವ್ಯವಸ್ಥಾಪಕ ವಿವೇಕ್ ವಲ್ಲಭ್ ನುಡಿದರು. ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ  “ಸಮಾಜಕಾರ್ಯ ಫೋರಮ್‌ನ’ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.  ವೃತ್ತಿ ಬದುಕಿಗೆ ಕಾಲಿಡುವಾಗ ವೃತ್ತಿಪರತೆಯನ್ನು ರೂಡಿಸಿಕೊಳ್ಳುವುದರೊಂದಿಗೆ ಹೊಸ ಉದ್ಯಮಕ್ಕಿಂತ ಸ್ಥಾಪಿತ ಕಂಪನಿಗೆ ಸೇರುವುದು ಉತ್ತಮ. ಪ್ರತಿ ಹಂತದಲ್ಲೂ ಅಲ್ಲಿ ಸಿಗುವ ವೃತ್ತಿಯ ಅನುಭವ ಮತ್ತಷ್ಟು ವೈಯಕ್ತಿಕ ಅಭಿವೃದ್ಧಿಯ ಪಥದಲ್ಲಿ ಸಾಗಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು. ಸಮಾಜಕಾರ್ಯ ಎನ್ನುವುದು ಎಂದಿಗೂ ಸಮುದಾಯವನ್ನು ಕಟ್ಟುವ ಮತ್ತು ಅಭಿವೃದ್ಧಿ ಪೋಷಿಸುವ ಕಾರ್ಯದಲ್ಲಿ ತನ್ನೊಂದಿಗೆ ತನ್ನವರನ್ನು ಬೆಳೆಸುವ ಕ್ಷೇತ್ರ. ಹಾಗಾಗಿ ಎಂತಹ ಪರಿಸ್ಥಿಯಲ್ಲಿಯೂ ಮನುಷತ್ವವನ್ನು ಮರೆತು ವರ್ತಿಸದಿರಿ. ನಿಮ್ಮ ಸುತ್ತಮುತ್ತಲಿನ ಸಮುದಾಯದ ಒಳಿತಿಗೆ ಸದಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಫಾರ್ಮಸಿಸ್ಟ್ ಆಗಿ ಕರ್ತವ್ಯ ನಿರ್ವಹಿಸಿ ಸ್ವಯಂ ನಿವೃತ್ತಿ ಹೊಂದಿದ ಎನ್.ವಿಶ್ವನಾಥ ನಾಯಕ್ ಅವರನ್ನು ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಬುಧವಾರ ಬೀಳ್ಕೊಡಲಾಯಿತು. ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಅಮಿತಾ ಅವರು ವಿಶ್ವನಾಥ ನಾಯಕ್ ಅವರ ಸೇವೆಯನ್ನು ಶ್ಲಾಘಿಸಿ ಅವರನ್ನು ಸನ್ಮಾನಿಸಿ ಗೌರವಿಸಿದರು. ಆಸ್ಪತ್ರೆಯ ಸಿಎಚ್‌ಒ ಗಳಾದ ನಯನಾ ತಾಂಡೇಲ, ರಕ್ಷಿತಾ, ಹರಿಣಾಕ್ಷಿ ಮತ್ತು ನಯನಾ, ಶುಶ್ರೂಷಕಿಯರಾದ ಶೋಭಾ ಕೆ., ಸುಜಾತಾ ಎನ್., ಆಸ್ಪತ್ರೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅಕ್ರಮ-ಸಕ್ರಮ ಯೋಜನೆಯಡಿಯಲ್ಲಿ ಅರ್ಜಿ ನಮೂನೆ 94 ಸಿ ಮತ್ತು 94 ಸಿ ಸಿ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಸಾವಿರಾರು ಅರ್ಜಿಗಳು ತಿರಸ್ಕಾರವಾಗಲು ಶಾಸಕರ ವೈಫಲ್ಯ ಕಾರಣ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಆರೋಪಿಸಿದ್ದಾರೆ. ಕುಂದಾಪುರದ ಶಾಸಕರು ಅಕ್ರಮ-ಸಕ್ರಮ ಯೋಜನೆಯಡಿ ಅರ್ಜಿ ನಮೂನೆ 94 ಸಿ ಮತ್ತು 94 ಸಿ ಸಿ ಅಡಿ ಕೆಲವೊಂದು ಅರ್ಜಿದಾರರಿಗೆ ಹಕ್ಕುಪತ್ರ ನೀಡಿ ಅದನ್ನೇ ದೊಡ್ಡ ಸಾಧನೆ ಎಂದು ಪ್ರಚಾರ ನೀಡುತ್ತಿದ್ದು, ಅಧಿಕೃತ ಮಾಹಿತಿಯಂತೆ ಕುಂದಾಪುರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಂದಾಪುರ ತಾಲ್ಲೂಕಿನಲ್ಲಿ 7128 ಅರ್ಜಿ, ಬ್ರಹ್ಮಾವರ ತಾಲ್ಲೂಕಿನಲ್ಲಿ 4365 ಅರ್ಜಿ ಹಾಗೂ ಹೆಬ್ರಿ ತಾಲ್ಲೂಕಿನಲ್ಲಿ 2257 ಅರ್ಜಿ ತಿರಸ್ಕಾರಗೊಂಡಿವೆ. ಈ ತಿರಸ್ಕಾರ ಅಧಿಕಾರಿಗಳ ಬೇಜವಾಬ್ದಾರಿ ತನ ಹಾಗೂ ಭೂ ರಹಿತರ ಬಗೆಗಿನ ತಾತ್ಸಾರ ಹಾಗೂ ಲಂಚದ ಬೇಡಿಕೆಗೆ ಆರ್ಥಿಕವಾಗಿ ಸಮರ್ಥನಲ್ಲದ ಅರ್ಜಿದಾರ ಸ್ಪಂದಿಸದ ಕಾರಣ ಅರ್ಜಿಗಳನ್ನು ತಿರಸ್ಕಾರ ಮಾಡಲಾಗಿದೆ. ಅರ್ಜಿದಾರರ ಪರವಾಗಿ ನಿಂತು ಅಧಿಕಾರಿಗಳಿಂದ…

Read More