ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ರಾಜ್ಯ ಸರಕಾರದ ಅಧಿಸೂಚನೆಯಂತೆ ಜಿಲ್ಲೆಯಲ್ಲಿ ಯಾವುದೇ ಬಲೆಗಳನ್ನು/ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್ಬೋರ್ಡ್ ಅಥವಾ ಔಟ್ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು 2025 ರ ಜೂನ್ 1 ರಿಂದ ಜುಲೈ 31 ರ ವರೆಗೆ ಒಟ್ಟು 61 ದಿನಗಳ ಕಾಲ ನಿಷೇಧವನ್ನು ಹೊರಡಿ ಆದೇಶವನ್ನು ಹೊರಡಿಸಿರುತ್ತದೆ. ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ/ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ ಹಾಗೂ ಹವಾಮಾನದ ವೈರ್ಯತೆಯ ಮುನ್ಸೂಚನೆ ನೀಡಿದಲ್ಲಿ ಎಲ್ಲಾ ಮೀನುಗಾರರು ಕಡ್ಡಾಯವಾಗಿ ಪಾಲಿಸಬೇಕು. ಮೀನುಗಾರಿಕೆ ನಿಷೇಧ ಹಿನ್ನೆಲೆ, ಕಡ್ಡಾಯವಾಗಿ ಎಲ್ಲಾ ಬೋಟುಗಳು ಮೇ 31 ರ ಒಳಗಾಗಿ ಬಂದರು ಪ್ರವೇಶ ಮಾಡಬೇಕು. ತದನಂತರ ಬಂದರು ಪ್ರವೇಶ ಮಾಡುವ ದೋಣಿಗಳ ಮೇಲೆ ಕಾನೂನು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಿಐಟಿಯು ಕುಂದಾಪುರ ತಾಲೂಕು ವತಿಯಿಂದ ಕಟ್ಟಡ ಕಾರ್ಮಿಕರ ಸೆಸ್ ಕಾಯ್ದೆ ಹಾಗೂ ನೂತನ ಕಾರ್ಮಿಕ ಸಂಹಿತೆ ವಿರೋಧಿಸಿ ಮಂಗಳವಾರ ಕುಂದಾಪುರ ಶಾಸ್ತ್ರೀ ವೃತ್ತದಲ್ಲಿ ಸಂಹಿತೆಗಳ ಪ್ರತಿಗಳನ್ನು ದಹಿಸಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ದೇಶದ ಹತ್ತು ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು ದೇಶದ ಪರಿಸ್ಥಿತಿ ಗಮನಿಸಿ ಜುಲೈ 9ಕ್ಕೆ ಮುಂದೂಡಲಾಗಿದೆ. ದೇಶದ ಕಾರ್ಮಿಕ ವರ್ಗ ಕಷ್ಟಪಟ್ಟು ಗಳಿಸಿದ ಕಾರ್ಮಿಕರ ಕಾನೂನು ಬಂಡವಾಳಗಾರರ ಪಾದದಡಿಯಲ್ಲಿಟ್ಟು ನವಗುಲಾಮಗಿರಿಗೆ ತಳ್ಳುವ ಸಂಹಿತೆಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ನಾಲ್ಕು ಕೇಂದ್ರದ ಸಂಹಿತೆ ಪ್ರತಿಗಳನ್ನು ಕಾರ್ಮಿಕ ದಹಿಸುವುದರ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಸಿಐಟಿಯು ತಾಲೂಕು ಸಂಚಾಲಕ ಚಂದ್ರಶೇಖರ ವಿ., ಸಂಘದ ಗೌರವ ಅಧ್ಯಕ್ಷ ಚಿಕ್ಕ ಮೊಗವೀರ ಗಂಗೊಳ್ಳಿ, ವಿಜೇಂದ್ರ ಕೋಣಿ, ಸುಧೀರ್ ಕುಮಾರ್, ಶಶಿಕಾಂತ್ ಎಸ್., ರಾಘವೇಂದ್ರ ಡಿ. ಮೊದಲಾದವರು ಉಪಸ್ಥಿತರಿದ್ದರು. ಕುಂದಾಪುರ ಹೆಂಚು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಂದಿನ ಕಾಲದಲ್ಲಿ ಮಕ್ಕಳು ಹೆಚ್ಚು ಮೊಬೈಲ್ ಬಳಸುತ್ತಿದ್ದು ಅದರ ಗೀಳಿನಿಂದ ಹೊರಬರಲು ಬೇಸಿಗೆ ಶಿಬಿರಗಳ ಸಹಕಾರಿ ಎಂದು ಪಾಂಡೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಶೀಲಾ ಸದಾನಂದ ಪೂಜಾರಿ ನುಡಿದರು. ಅವರು ಬುಧವಾರ ಪಾಂಡೇಶ್ವರ ಗ್ರಾಮಪಂಚಾಯತ್ ಹಾಗೂ ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಇವರುಗಳ ಸಹಭಾಗಿತ್ವದಡಿ 15ರಿಂದ 21ರ ತನಕ ನಡೆದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಎಷ್ಟೋ ಮಕ್ಕಳಲ್ಲಿ ಪ್ರತಿಭೆಗಳು ಮರಿಚಿಕೆಯಾಗಿ ಉಳಿಯುತ್ತದೆ. ಇದಕ್ಕೆ ಗ್ರಾಮೀಣ ಶಿಬಿರಗಳು ಅತ್ಯಂತ ಪರಿಣಾಮಕಾರಿಯಾಗಿದೆ. ಶಿಬಿರಗಳ ಜತೆ ಪರಿಸರ ಜಾಗೃತಿ ಹೊಂದಬೇಕು ಎಂದರು. ಮುಖ್ಯ ಅಭ್ಯಾಗತರಾಗಿ ಪಂಚಾಯತ್ ಉಪಾಧ್ಯಕ್ಷ ವೈ ಬಿ. ರಾಘವೇಂದ್ರ, ಅಭಿವೃದ್ಧಿ ಅಧಿಕಾರಿ ಲೋಲಾಕ್ಷಿ ಸದಸ್ಯರಾದ ಸುಜಾತ ವೆಂಕಟೇಶ್ ಪೂಜಾರಿ, ಸಂಜೀವಿನಿ ಒಕ್ಕೂಟದ ಎಂಬಿಕೆ ಉಷಾ ಗಣೇಶ್ ಪೂಜಾರಿ, ವಿಆರ್ ಡಬ್ಲ್ಯೂ ಶಾಂತಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿವಿಧ ತಂಡಗಳಿಗೆ ಸ್ಪರ್ಧೆ ಏರ್ಪಡಿಸಿದ್ದು ಹೆಚ್ಚು ಅಂಕ ಪಡೆದ ತಂಡಗಳಿಗೆ ಗಿಡ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಬುಧವಾರದಂದು ಭಯೋತ್ಪಾದನಾ ವಿರೋಧಿ ದಿನವನ್ನು ಆಚರಿಸಲಾಯಿತು. ಆ ಪ್ರಯುಕ್ತ ವಿದ್ಯಾರ್ಥಿಗಳಿಗೆ ಹಾಗೂ ಉಪನ್ಯಾಸಕರುಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ, ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ಉಪನ್ಯಾಸಕರುಗಳು ಭಾಗವಹಿಸಿರುತ್ತಾರೆ. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ. ರವಿಚಂದ್ರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ನಗರಸಭಾ ನಿಧಿಯ ಶೇ.5 ರ ವಿಕಲಚೇತನರ ಕಲ್ಯಾಣ ಕಾರ್ಯಕ್ರಮ ಯೋಜನೆಯಡಿ ರಾಜ್ಯ, ರಾಷ್ಟ್ರೀಯ ಮಟ್ಟದ ಕ್ರೀಡೆ, ಕಲೆ, ಸಾಂಸ್ಕೃತಿಕ ಹಾಗೂ ಇತರೆ ವ್ಯಾಸಂಗೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ವಸತಿ, ಶಿಕ್ಷಣ, ಸರ್ಕಾರಿ ಕಛೇರಿಗಳು, ಸಮುದಾಯ ಭವನ ಕಟ್ಟಡಗಳಿಗೆ ಜಾರುಹಾದಿ ಹಾಗೂ ವಿಕಲಚೇತನ ಸ್ನೇಹಿ ಶೌಚಾಲಯಗಳನ್ನು ನಿರ್ಮಿಸಲು ಇಚ್ಛಿಸುವ ಆಸಕ್ತ ಸಂಸ್ಥೆಗಳು ನಿಗದಿತ ಅರ್ಜಿಯೊಂದಿಗೆ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಪ್ರಸಕ್ತ ಸಾಲಿನ ತೆರಿಗೆ ಪಾವತಿ ಚಲನ್ ಪ್ರತಿ, ಆಧಾರ್ಕಾರ್ಡ್ ಪ್ರತಿ, ಪಡಿತರ ಚೀಟಿ ಪ್ರತಿ, ಅಂಗವಿಕಲತೆಯ ಬಗ್ಗೆ ಜಿಲ್ಲಾ ಸರ್ಜನ್ರಿಂದ ಪಡೆದುಕೊಂಡ ಪ್ರಮಾಣ ಪತ್ರ ಮತ್ತು ಕ್ರೀಡೆ, ಕಲೆ, ಸಾಂಸ್ಕೃತಿಕ ಹಾಗೂ ಇತರೆ ವ್ಯಾಸಂಗೇತರ ಚಟುವಟಿಕೆಗಳ ಪ್ರಮಾಣ ಪತ್ರ ಇತ್ಯಾದಿ ದಾಖಲಾತಿಗಳನ್ನು ಮೇ 26 ರ ಒಳಗೆ ಪೌರಾಯುಕ್ತರು, ನಗರಸಭೆ, ಉಡುಪಿ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾದ್ಯಂತ ಮುಂಗಾರು ಪೂರ್ವ ಮಳೆ ಅಬ್ಬರಿಸಿದೆ. ಸೋಮವಾರ ರಾತ್ರಿ ಲಘುವಾಗಿ ಆರಂಭಗೊಂಡ ಮಳೆ ಮಂಗಳವಾರ ಹಾಗೂ ಗುರುವಾರ ಬೆಳಗ್ಗಿನಿಂದ ಎಡೆಬಿಡದೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಮಂಗಳವಾರ ಬೆಳಿಗ್ಗೆಯಿಂದ ಮಧ್ಯಾಹ್ನ ತನಕ ಎಡಬಿಡದೆ ಸುರಿದ ಮಳೆ ಮಧ್ಯಾಹ್ನದ ಬಳಿಕ ವಿರಾಮದಲ್ಲಿ ಬಿಳತೊಡಗಿತ್ತು. ಮಂಗಳವಾರ ರಾತ್ರಿ ಹಾಗೂ ಬುಧವಾರ ಬೆಳಿಗ್ಗೆ ನಿರಂತರ ಮಳೆಯಾಗಿದೆ. ಕುಂದಾಪುರದಲ್ಲಿ ಹೆದ್ದಾರಿ ಹಾಗೂ ಸರ್ವಿಸ್ ರಸ್ತೆಗಳು ನೀರುಮಯವಾಗಿದ್ದು ಸುಗಮ ವಾಹನ ಸಂಚಾರಕ್ಕೆ ಅಡೆತಡೆ ಎದುರಾಗಿದೆ. ಬಸ್ರೂರು ಮೂರುಕೈ ಬಳಿ ಹಾಗೂ ಟಿಟಿ ರಸ್ತೆ ಮುಂಭಾಗದ ಸರ್ವಿಸ್ ರಸ್ತೆಯಲ್ಲಿ ನೀರು ನಿಂತು ಅಡೆಚಣೆ ಉಂಟಾಯಿತು. ತೆಕ್ಕಟ್ಟೆ ಜಂಕ್ಷನ್ನಲ್ಲಿ ಹೆದ್ದಾರಿ ಬದಿ ಹೊಳೆಯಂತಾಗಿದ್ದು ಕುಂದಾಪುರ ವಿನಾಯಕ ಪ್ರೈವುಡ್ ಅಂಗಡಿ ಎದುರು ಸರ್ವಿಸ್ ರಸ್ತೆ ಮಳೆ ನೀರಿನಲ್ಲಿ ಮುಳುಗಡೆಯಾಗಿದೆ. ಬೈಂದೂರು-ರಾಣಿಬೆನ್ನೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕೊಲ್ಲೂರು ದೇವಸ್ಥಾನ ಎದುರು ಹಾದು ಹೋಗುತ್ತಿದ್ದು ಇಲ್ಲಿ ನಡೆಯುತ್ತಿರುವ ಅವೈಜ್ಞಾನಿಕ, ನಿಧಾನಗತಿ ಕಾಮಗಾರಿಯಿಂದಾಗಿ ವಾಹನ ಸವಾರರು ಮತ್ತು ಭಕ್ತಾಧಿಗಳು ಪರಿತಪಿಸುವಂತಾಗಿದೆ. ದೇವಸ್ಥಾನದ ಎದುರೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಇಡೂರು-ಕುಂಜ್ಞಾಡಿ ಗ್ರಾಮದ ಜನ್ನಾಲ್ ರಾಜ್ಯ ಹೆದ್ದಾರಿಯಲ್ಲಿ ಮಿನಿ ಗೂಡ್ಸ್ ವಾಹನ ಆಲ್ಟೋ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ಮೃತಪಟ್ಟ ಘಟನೆ ಇತ್ತೀಚಿಗೆ ನಡೆದಿದೆ. ಕೊಲ್ಲೂರಿನಿಂದ ಕುಂದಾಪುರದ ಕಡೆಗೆ ಸಾಗುತ್ತಿದ್ದ ಮಿನಿ ಗೂಡ್ಸ್ ವಾಹನ ಆಲ್ಟೋ ಕಾರಿಗೆ ಎದುರಿನಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ಜೋಸ್ ಪಿಟಿ ಯಾನೆ ರಿನ್ನೊ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಯ ಬಗ್ಗೆ ಇಲ್ಲಿನ ಖಾಸಗಿ ಆಸ್ಪತ್ರೆಗೆ ಕರೆತರಲಾಗಿದ್ದು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ಹೇಳಿದ್ದಾರೆ. ಕಾರಿನಲ್ಲಿ ಪ್ರಯಣಿಸುತ್ತಿದ್ದ ತ್ರೇಸಿಯಮ್ಮ ಯಾನೆ ಶಾಂತಿ ಗಂಭೀರ ಗಾಯಗೊಂಡಿದ್ದು, ಅವರನ್ನು ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಮಿನಿ ಗೂಡ್ಸ್ ವಾಹನ ಚಾಲಕ ಶಬರೀಶ ಕೂಡ ಗಾಯಗೊಂಡಿದ್ದು, ಅವರು ಒಳರೋಗಿಯಾಗಿ ದಾಖಲಾಗಿದ್ದಾರೆ. ಈ ಬಗ್ಗೆ ಕೊಲ್ಲೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರಿನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನ ಐ.ಟಿ.ಐ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ವೆಬ್ಸೈಟ್ www.cite.karnataka.gov.in ಮೂಲಕ ಅಥವಾ ಸಂಸ್ಥೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಎಲೆಕ್ಟ್ರೀಷಿಯನ್, ಫಿಟ್ಟರ್, ಮೆಕ್ಯಾನಿಕ್ ಎಲೆಕ್ಟಿçಕ್ ವೆಹಿಕಲ್, ಸಿ.ಎನ್.ಸಿ ಮೆಷಿನಿಂಗ್ ಟೆಕ್ನಿಷಿಯನ್, ವರ್ಚುಯಲ್ ಅನಾಲಿಸಿಸ್ ಅಂಡ್ ಡಿಸೈನರ್ – ಎಫ್.ಇ.ಎಮ್, ಇಂಡಸ್ಟ್ರೀಯಲ್ ರೊಬೋಟಿಕ್ಸ್ ಅಂಡ್ ಡಿಜಿಟಲ್ ಮ್ಯಾನ್ಯುಫ್ಯಾಕ್ಚರಿಂಗ್ ಟೆಕ್ನಿಷಿಯನ್, ಮ್ಯಾನ್ಯುಫ್ಯಾಕ್ಚರಿಂಗ್ ಪ್ರೊಸೆಸ್ ಕಂಟ್ರೋಲ್ ಅಂಡ್ ಆಟೋಮೇಷನ್ ಹಾಗೂ ಎಂಜಿನಿಯರಿಂಗ್ ಡಿಸೈನ್ ಟೆಕ್ನಿಷಿಯನ್ ಕೋರ್ಸುಗಳು ಲಭ್ಯವಿದ್ದು, ಅರ್ಜಿ ಸಲ್ಲಿಸಲು ಮೇ 28 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಬೈಂದೂರು ದೂ.ಸಂಖ್ಯೆ : 08254-251009 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಇಡೂರು ಕುಂಜ್ಞಾಡಿ ನಿವಾಸಿ ಲಕ್ಷ್ಮೀ ಅವರ ಮನೆಗೆ ನುಗ್ಗಿದ ಕಳ್ಳರು ಕಪಾಟಿನಲ್ಲಿಟ್ಟಿದ್ದ 16 ಗ್ರಾಂ ತೂಕದ 2 ಚಿನ್ನದ ಬಳೆ ಹಾಗೂ ದೇವರ ಕೋಣೆಯ ಡಬ್ಬಿಯಲ್ಲಿದ್ದ ಚಿಲ್ಲರೆ ಹಣವನ್ನು ಕದ್ದಿದ್ದಾರೆ. ಲಕ್ಷ್ಮೀ ಅವರು ಮೇ. 16ರಂದು ಮನೆಗೆ ಬೀಗ ಹಾಕಿ ಕಾರ್ಯನಿಮಿತ್ತ ಬೇರೆಡೆಗೆ ತೆರಳಿದವರು ಮೇ. 19ರಂದು ಮರಳಿ ಬಂದು ನೋಡಿದಾಗ ಮನೆಯೊಳಗಿನ ಸೊತ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಪರಿಶೀಲಿಸಿದಾಗ ಕಳ್ಳರು ಛಾವಣಿಯ ಹೆಂಚನ್ನು ತೆಗೆದು ಒಳಪ್ರವೇಶಿಸಿ ಕೃತ್ಯ ಎಸಗಿರುವುದು ಕಂಡು ಬಂದಿತು. ಸುಮಾರು 80 ಸಾವಿರ ರೂ. ಮೌಲ್ಯದ ಸೊತ್ತು ಕಳವಾಗಿದೆ ಎಂದು ಕೊಲ್ಲೂರು ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ಪಿ.ಯು.ಸಿ, ಐ.ಟಿ.ಐ ಹಾಗೂ ಡಿಪ್ಲೋಮಾ ವ್ಯಾಸಾಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ವೆಬ್ಸೈಟ್ https://shp.karnataka.gov.in/bcwd ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 20 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8050770004, 8050770005 ಅಥವಾ ಇಲಾಖೆಯ ವೆಬ್ಸೈಟ್ https://bcwd.karnataka.gov.in/ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
