ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜೆಸಿಐ ಹಾಲಾಡಿ ವಾರಾಹಿ ಇದರ ವತಿಯಿಂದ ಸ್ವಾಮಿ ವಿವೇಕಾನಂದರ ದಿನಾಚರಣೆ ಅಂಗವಾಗಿ ಯುವ ದಿನಾಚರಣೆ ಕಾರ್ಯಕ್ರಮ ಹಾಲಾಡಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನೆರವೇರಿತು. ಮಂಜುಳಾ ಶೆಟ್ಟಿ ಅವರು ಜೆಸಿ ವಾಣಿಯನ್ನು ವಾಚಿಸುವುದರೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಜೆಸಿ ಹಾಲಾಡಿ ವಾರಾಹಿ ಘಟಕದ ಅಧ್ಯಕ್ಷರಾದ ಜೆಸಿ ಪ್ರದೀಪ್ ಹಾಲಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರು ನಾರಾಯಣ ಕುಲಾಲ್ ಮುಖ್ಯ ಅತಿಥಿ ನೆಲೆಯಲ್ಲಿ ಉಪಸ್ಥಿತರಿದ್ದು ಸ್ವಾಮಿ ವಿವೇಕಾನಂದರ ಜೀವನವನ್ನು ವಿವರಿಸಿದರು. ಬ್ರೈಟ್ ಪರ್ಲ್ ಶಾಲಾ ಶಿಕ್ಷಕಿ ಆಶಾ ರಾಜೀವ್ ಕುಲಾಲ್ ವಿವೇಕಾನಂದರ ಶಿಸ್ತು ಹಾಗೂ ಸಾಧನೆಯ ಬಗ್ಗೆ ಮಕ್ಕಳಿಗೆ ಅರ್ಥೈಸಿದರು. ವಿವೇಕಾನಂದರ ಜೀವನ ಚರಿತ್ರೆ ಬಗ್ಗೆ ಭಾಷಣ ಸ್ಪರ್ಧೆಯನ್ನು ಏರ್ಪಡಿಸಿ ಉತ್ತಮ ಭಾಷಣ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಲಾಯಿತು ಹಾಗೂ ಎಲ್ಲಾ ಮಕ್ಕಳಿಗೆ ಸಿಹಿತಿಂಡಿಯನ್ನು ವಿತರಿಸಲಾಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ಜೆಸಿಐ ಶಂಕರನಾರಾಯಣ ಘಟಕದ ನಿಕಟ ಪೂರ್ವ ಅಧ್ಯಕ್ಷರಾದ ಪ್ರವೀಣ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇಗುಲದ ಜ್ಞಾನ ಮಂದಿರದಲ್ಲಿ ಜ.16ರಂದು ವಾರ್ಷಿಕ ಬ್ರಹ್ಮ ರಥೋತ್ಸವಕ್ಕೆ ಸಂಬಂಧಿಸಿದಂತೆ ಪೂರ್ವಭಾವಿ ಸಿದ್ಧತಾ ಸಭೆಯನ್ನು ಅಧ್ಯಕ್ಷ ಡಾ. ಕೆ.ಎಸ್. ಕಾರಂತರ ಅಧ್ಯಕ್ಷತೆಯಲ್ಲಿ ಜರುಗಿತು. ದೇಗುಲದ ಅಧ್ಯಕ್ಷರು ಹಬ್ಬದ ಸಿದ್ಧತೆಗೆ ಸಂಬಂಧಿಸಿದಂತೆ ಸ್ಥಳೀಯಾಡಳಿತೆಯವರ ಸಭೆಯಲ್ಲಿ ಭಾಗವಹಿಸಿದ್ದರ ಕುರಿತಂತೆ ವಿಸ್ತೃತ ಮಾಹಿತಿಯನ್ನು ಸಭೆಯ ಮುಂದಿರಿಸಿ ಕಳೆದ ನಾಲ್ಕು ವರ್ಷಗಳಲ್ಲಿ ಹಬ್ಬಕ್ಕೆ ಮುಂಚಿತವಾಗಿ ನಡೆಸುತ್ತಿರುವ ಸಿದ್ಧತಾ ಸಭೆ ಮತ್ತು ಹಬ್ಬದ ನಂತರದ ಅವಲೋಕನಾ ಸಭೆಗಳ ಉದ್ದೇಶವು ಸಾರ್ವಜನಿಕ ಸಹಕಾರದ ಮತ್ತು ಸಹಭಾಗಿತ್ವವಾಗಿದ್ದು, ವರ್ಷದಿಂದ ವರ್ಷಕ್ಕೆ ಭಕ್ತ ಸಮುದಾಯ ಮತ್ತು ವಿವಿಧ ಇಲಾಖೆ ಹಾಗು ಸಂಘ ಸಂಸ್ಥೆಗಳ ಸ್ಪಂದನೆಯ ಫಲಶ್ರುತಿಯೋ ಎಂಬಂತೆ ಇತ್ತೀಚಿನ ದಿನಗಳಲ್ಲಿ ಸಾಲಿಗ್ರಾಮ ಹಬ್ಬವು ಸ್ಥಳೀಯ ದಸರೆಯ ರೂಪವನ್ನು ಪಡೆದಿರುವುದು ಜಗದೊಡೆಯ ನರಸಿಂಹನ ಅನುಗ್ರಹವೆಂದರು. ವೇದಿಕೆಯಲ್ಲಿ ಕಾರ್ಯದರ್ಶಿ ಲಕ್ಷ್ಮೀನಾರಾಯಣ ತುಂಗ, ಕೂಟ ಮಹಾ ಜಗತ್ತಿನ ಕೇಂದ್ರ ಸಂಸ್ಥೆಯ ಅಧ್ಯಕ್ಷ ಸತೀಶ ಹಂದೆ, ಪಟ್ಟಣ ಪಂಚಾಯತಿಯ ಪ್ರಾತಿನಿಧಿಕ ಅಧಿಕಾರಿ ಚಂದ್ರಶೇಖರ ಸೋಮಯಾಜಿ ಉಪಸ್ಥಿತರಿದ್ದರು. ಸಲಹೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಇಲ್ಲಿನ ಸ್ವರಾಜ್ಯ ಮೈದಾನದಲ್ಲಿ ಹಮ್ಮಿಕೊಂಡ ಐದು ದಿನಗಳ ‘85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಫ್ 2025-26’ ಸೋಮವಾರ ಅಚ್ಚುಕಟ್ಟಾದ ಮೂಲಸೌಕರ್ಯ, ತಾಂತ್ರಿಕ ನಿಖರತೆ, ಸಮಯ ನಿರ್ವಹಣೆ, ಆತಿಥ್ಯ ವ್ಯವಸ್ಥೆಗಳ, ಶಿಸ್ತುಬದ್ಧತೆ, ಅದ್ಧೂರಿ ಮೆರವಣಿಗೆಗಳ ಜೊತೆ ಆರಂಭಗೊಂಡಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆತಿಥ್ಯದಲ್ಲಿ 6ನೇ ಬಾರಿಗೆ (72, 75, 80, 79 ಹಾಗೂ 81) ನಡೆಯುತ್ತಿರುವ 85ನೇ ಕ್ರೀಡಾಕೂಟವನ್ನು ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್ ಫರೀದ್ ಉದ್ಘಾಟಿಸಿ ಮಾತನಾಡಿ, ‘ಆಳ್ವಾಸ್‌ನಲ್ಲಿ ನಡೆಯುವ ಕ್ರೀಡಾಕೂಟವು ಜಾಗತಿಕ ಕೂಟದ ಮಾದರಿ. ದೇಶದ ಎಲ್ಲ ಕ್ರೀಡಾಕೂಟಗಳಿಗೂ ಹೆಗ್ಗುರುತು’ ಎಂದು ಶ್ಲಾಘಿಸಿದರು. ‘ವಿಶ್ವದ ಸಂಸ್ಕೃತಿಗಳ ಸಾರ ಭಾರತದ ಸಂಸ್ಕೃತಿಗಳ, ಭಾರತದ ಸಂಸ್ಕೃತಿ ಸಾರ ಕರ್ನಾಟಕ, ಕರ್ನಾಟಕದ ಸಂಸ್ಕೃತಿಗಳ ಸಾರ ದಕ್ಷಿಣ ಕನ್ನಡ, ದಕ್ಷಿಣ ಕನ್ನಡದ ಸಂಸ್ಕೃತಿಯ ಸಾರ ಆಳ್ವಾಸ್ ನಲ್ಲಿ’ ಎಂದು ಬಣ್ಣಿಸಿದರು. ಸತ್ಪಪ್ರಜೆಗಳ ನಿರ್ಮಿಸುವ ಹಾಗೂ ಬಲಿಷ್ಠ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಶಾಲೆಯ ಆಡಳಿತ ಮಂಡಳಿಯ ಶಿಕ್ಷಕರ ಮತ್ತು ಪಾಲಕರ ಸಭೆಯನ್ನು ನಡೆಸಿ, ವಿದ್ಯಾರ್ಥಿಗಳ ಅಧ್ಯಯನದ ವಿಚಾರಗಳನ್ನು ಚರ್ಚಿಸಲಾಯಿತು. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣ ಹುಳ್ಳಾಲ ಎಸ್.ಜಿಎಫ್‌ಐ ಬಗ್ಗೆ ಮಾಹಿತಿ ನೀಡುತ್ತಾ, ನಮ್ಮ ಶಾಲೆಯ ಮಕ್ಕಳ ರಾಜ್ಯ- ರಾಷ್ಟ್ರಮಟ್ಟದ ಕ್ರೀಡಾ ಸಾಧನೆಯನ್ನು ಪೋಷಕರಿಗೆ ತಿಳಿಸಿದರು. ಶ್ರೀ ಸಿದ್ಧಿ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಸಂಸ್ಥೆಯ ಪ್ರಾಂಶುಪಾಲರಾದ ಶರಣ ಕುಮಾರ ಪೋಷಕರ ಅಹವಾಲುಗಳಿಗೆ ಸ್ಪಂದಿಸಿ, ಮಾತನಾಡುತ್ತಾ ಮಕ್ಕಳ ನೈಜ ಬೆಳವಣಿಗೆ ಹಂತ ಹಂತವಾಗಿ ಸಾಗುತ್ತಿದ್ದು, ಅವರ ಅಧ್ಯಯನದಲ್ಲಿ ಪೋಷಕರ ಪಾಲೂ ಮಹತ್ತ್ವದ್ದಾಗಿದ್ದು, ಪೋಷಕರೂ ಸಹ ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕಾಗುತ್ತದೆ. ಮಕ್ಕಳು ಸಮಸ್ಯೆಗಳಿಗೆ ಒಳಗಾದರೆ ತಕ್ಷಣ ಶಾಲೆಯ ಗಮನಕ್ಕೆ ತರುವುದು ಪೋಷಕರ ಕರ್ತವ್ಯವಾಗಿರುತ್ತದೆ. ಹಾಗಾದರೆ ಅದರ ಬಗ್ಗೆ ನಾವು ಕೂಡಲೆ ಕಾರ್ಯೋನ್ಮುಖರಾಗಲು ಸಾಧ್ಯವಾಗುತ್ತದೆ ಎಂದು ತಿಳಿಸುತ್ತಾ ಮಕ್ಕಳ ಸುರಕ್ಷತೆಯ ಬಗ್ಗೆ ಕೆಲವಷ್ಟು ಮಾಹಿತಿಗಳನ್ನು ಹಂಚಿಕೊಂಡರು. ವೇದಿಕೆಯಲ್ಲಿ ಉಪ ಪ್ರಾಂಶುಪಾಲರಾದ ರಾಮ ದೇವಾಡಿಗ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರತೀ ವರ್ಷದಂತೆ ಈ ಬಾರಿಯೂ ಜನವರಿ 26 ರಂದು ನಡೆಯಲಿರುವ ಭಾರತದ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಯೋಜಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚನೆ ನೀಡಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಆಚರಣೆಯ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವು ಜನವರಿ 26ರಂದು ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆ 8.30ಕ್ಕೆ ಆರಂಭವಾಗಲಿದ್ದು, 8.30 ರಿಂದ 8.50 ರ ವರೆಗೆ ದೇಶ ಭಕ್ತಿಗೀತೆ ಕಾರ್ಯಕ್ರಮ, ನಂತರ ಹುತಾತ್ಮ ಯೋಧರಿಗೆ ಗೌರವ ಸಮರ್ಪಣೆ ನಡೆಯಲಿದೆ. ಬೆ. 9 ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕಾರ ಮಾಡಿ ಗಣರಾಜ್ಯೋತ್ಸವ ಸಂದೇಶ ನೀಡಲಿದ್ದಾರೆ. ನಂತರ ಶಾಲಾ – ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಕರಾವಳಿಯ ಜನರ ಜೀವನಾಡಿಯಾದ ತೆಂಗು ಬೆಳೆಯು ಬೇರಿನಿಂದ ಹಿಡಿದು ನಾರಿನವರೆಗೆ ಸರ್ವ ರೀತಿಯಲ್ಲೂ ಉಪಯೋಗಿಯಾಗಿ ಕಲಿಯುಗದ ಕಲ್ಪವೃಕ್ಷವೆನಿಸಿಕೊಂಡಿದೆ. ತೆಂಗು ಬೆಳೆಗಾರರ ಸರ್ವತೋಮುಖ ಏಳಿಗೆಗಾಗಿ ಹಮ್ಮಿಕೊಂಡ ವಿಶಿಷ್ಟ ಮಾಹಿತಿ ಕಾರ್ಯಕ್ರಮದಿಂದಾಗಿ ಕಲ್ಪವೃಕ್ಷವಾದ ತೆಂಗು ಬೆಳೆಗೆ ಹೊಸ ಕಾಯಕಲ್ಪ ದೊರೆತ ಉಡುಪಿ ಜಿಲ್ಲೆಯು ತಮಿಳುನಾಡು ಮತ್ತು ಕೇರಳವನ್ನು ಹಿಂದಿಕ್ಕಿ ದೇಶಕ್ಕೇ ಮಾದರಿಯಾಗಲಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಸೋಮವಾರ ಕೋಟೇಶ್ವರದ ಸರಸ್ವತಿ ಕಲ್ಯಾಣ ಮಂಟಪದಲ್ಲಿ, ತೆಂಗು ಅಭಿವೃದ್ದಿ ಮಂಡಳಿ ಕೊಚ್ಚಿ, ತೋಟಗಾರಿಕೆ ಇಲಾಖೆ ಉಡುಪಿ, ಕೃಷಿ ಇಲಾಖೆ, ಭಾರತೀಯ ಕಿಸಾನ್ ಸಂಘ, ಕರ್ನಾಟಕ ಪ್ರದೇಶ ರಿ. ಉಡುಪಿ ಜಿಲ್ಲೆ, ಉಡುಪಿ ಕಲ್ಪರಸ ಕೊಕೊನಟ್ & ಆಲ್ ಸ್ಪೈಸಸ್ ಪ್ರೊಡ್ಯೂಸರ್ ಕಂಪನಿ ಲಿಮಿಟೆಡ್ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ತೆಂಗು ಅಭಿವೃದ್ದಿ ಮಂಡಳಿಯ ಸ್ಥಾಪನಾ ದಿನಾಚರಣೆ ಹಾಗೂ ತೆಂಗು ಬೆಳೆ ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಛತ್ತೀಸ್‌ಗಢದಲ್ಲಿ ನಡೆಯಬೇಕಾಗಿದ್ದ ಕಾರ್ಯಕ್ರಮವನ್ನು ವಿಶೇಷ ಮುತುವರ್ಜಿ ವಹಿಸಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯುನ್ಮಾನ ವಿಭಾಗದಲ್ಲಿ ಸಂಶೋಧನೆ ನಡೆಸುತ್ತಿದ್ದ ಸಾಯಿರಾಜ್ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ನೀಡಿದ್ದಾರೆ. ‘ರೋಲ್ ಆಫ್ ಕಮ್ಯುನಿಕೇಷನ್ ಇನ್ ಎನ್ಹ್ಯಾನ್ಸಿಂಗ್ ಎನ್ವಿರಾನ್ಮೆಂಟಲ್ ಲಿಟರೆಸಿ: ಎನ್ ಎಸ್ಪ್ಲೋರಟೋರಿ ಸ್ಟಡಿ ಇನ್ ಕರ್ನಾಟಕ’ ಎಂಬ ವಿಷಯದಲ್ಲಿ ಮಂಡಿಸಿದ ಪ್ರಭಂದಕ್ಕೆ ಈ ಪದವಿ ಲಭಿಸಿದೆ. ಅವರು ಉ.ಜಿ.ಸಿ.ಜೆ ಆರ್ ಎಫ್ ಸ್ಕಾಲರ್ಷಿಪ್‌ಗೆ ಭಾಜನರಾಗಿದ್ದರು. ಅವರಿಗೆ ವಿದ್ಯುನ್ಮಾನ ಮಾಧ್ಯಮ ವಿಭಾಗದ ಪ್ರಾಧ್ಯಾಪಕರಾದ ವಾಹಿನಿ ಅರವಿಂದ್ ಅವರು ಮಾರ್ಗದರ್ಶನ ಮಾಡಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ ಇನ್‌ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟಿಂಗ್ ಆಫ್ ಇಂಡಿಯಾ ನಡೆಸುವ ಸಿಎಂಎ ಫೌಂಡೇಶನ್, ಡಿಸೆಂಬರ್ 2025ರಲ್ಲಿ ನಡೆದ ಪರೀಕ್ಷೆಯಲ್ಲಿ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ ಸಾಧನೆಗೈದಿದ್ದಾರೆ. ಪ್ರಗತಿ, ದೀಕ್ಷಿತಾ, ಐಶ್ವರ್ಯ, ತಿಲಕ್ ಹಾಗೂ ಶಬ್ದಿಕಾ ಪೂಜಾರಿ ಉತ್ತೀರ್ಣರಾಗಿದ್ದಾರೆ. ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವಿ-ರೀಚ್ ಸಂಸ್ಥೆಯ ಪಠ್ಯ ಪ್ರವಚನ, ಮಧ್ಯಂತರ ಮಾದರಿ ಪರೀಕ್ಷೆ ಹಾಗೂ ನುರಿತ ತರಬೇತುದಾರರಿಂದ ತರಬೇತಿ, ಸಲಹೆ ಮತ್ತು ಮಾರ್ಗದರ್ಶನ ಪಡೆದು ವಿದ್ಯಾರ್ಥಿಗಳು ಈ ಸಾಧನೆಗೈದಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಹಿಂದೂ ಸಂಗಮ ಆಯೋಜನಾ ಸಮಿತಿ ಸಾಲಿಗ್ರಾಮ ತಾಲೂಕು ನೇತೃತ್ವದಲ್ಲಿ ಇದೇ ಜ.25ರಂದು ಸಾಸ್ತಾನದಲ್ಲಿ ಬೃಹತ್ ಹಿಂದೂ ಸಂಗಮ ಏರ್ಪಡಿದ್ದು ಈ ಕಾರ್ಯಕ್ರಮದ ಕುರಿತು ಪೂರ್ವಭಾವಿ ಸಭೆ ಹಾಗೂ ಪೋಸ್ಟರ್ ಅನಾವರಣ ಕಾರ್ಯಕ್ರಮವು ಭಾನುವಾರ ಪಾಂಡೇಶ್ವರ ನಂದಿಕೇಶ್ವರ ದೇಗುಲದಲ್ಲಿ ಜರಗಿತು. ಈ ಕುರಿತು ಮಾತನಾಡಿದ ಸಮಿತಿಯ ಪ್ರಮುಖರಾದ ಸುರೇಂದ್ರ ಕೋಡಿ ದೇಶದ ಏಕತೆ ಮತ್ತು ಅಖಂಡತೆಗಾಗಿ ಹಿಂದೂ ಸಮುದಾಯದಲ್ಲಿ ಸಾಮರಸ್ಯದ ಜೀವನ ಒಂದೇ ಐಕ್ಯ ಮಂತ್ರ ಉದ್ದೇಶದಿಂದ ಹಿಂದೂ ಜಾಗೃತಿ ಸಂಗಮವನ್ನು ಪಕ್ಷಭೇದ ಮರೆತು ಎಲ್ಲೆಡೆ ಆಯೋಜಿಸಲಾಗುತ್ತಿದೆ. ಈ ಹಿನ್ನಲ್ಲೆಯಲ್ಲಿ ಸಾಸ್ತಾನದ ಶಿವಕೃಪಾ ಕಲ್ಯಾಣ ಮಂದಿರದಿಂದ ಬೃಹತ್ ಶೋಭಯಾತ್ರೆ ಕೈಗೊಂಡು ಸಾಸ್ತಾನದ ಕಾರ್ತಿಕೇಯ ಎಸ್ಟೇಟ್‌ನಲ್ಲಿ ಹಿಂದೂ ಸಂಗಮ ಸಭೆ ನಡೆಯಲಿದೆ ಎಂದು ಮಾಹಿತಿ ನೀಡಿದರು. ಇನ್ನೊರ್ವ ಪ್ರಮುಖರಾದ ಪಂಜು ಪೂಜಾರಿ ಯಡಬೆಟ್ಟು ಮಾತನಾಡಿ, ರಾಜಕೀಯ ಹಿತಾಸಕ್ತಿ ಬದಿಗಿರಿಸಿ ಹಿಂದೂ ಸಮುದಾಯಯವನ್ನು ಒಗ್ಗೂಡಿಸುವ ಜತೆಗೆ ಜಾಗೃತ ಸಮಾಜಕ್ಕೆ ಮುನ್ನುಡಿ ಇಡಲಿದೆ ಎಂದು ಎಲ್ಲರೂ ಏಕ ಮನಸ್ಸಿನಿಂದ ಭಾಗಿಯಾಗಲು ಕರೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಟೇಶ್ವರ–ಕುಂದಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಮನೋಹರ್ ಉಪ್ಪುಂದ ಅವರು ಮಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಡಾ. ಸಿ. ಕುಸುಮಾಕರ ಹೆಬ್ಬಾರ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “Merger and Acquisition of Commercial Banks: A Study with Special Reference to the Merger of SBI and its Associates” ಎಂಬ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪದವಿ ಪಡೆದಿದ್ದಾರೆ. ಮನೋಹರ್ ಉಪ್ಪುಂದ ಅವರು ಉಪ್ಪುಂದದ ಮತ್ಸ್ಯೋದ್ಯಮಿ ಈಶ್ವರ ಬಬ್ರಿ ಹಾಗೂ ಧರ್ಮಾವತಿ ದಂಪತಿಗಳ ಪುತ್ರರಾಗಿದ್ದು, ಹಲವು ಸರ್ಕಾರಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ರ್ಯಾಂಕ್ ಪಡೆದು ಉತ್ತೀರ್ಣರಾಗಿದ್ದಾರೆ. ಶೈಕ್ಷಣಿಕ ಸಾಧನೆಯ ಜೊತೆಗೆ ಅವರು ಉತ್ತಮ ಕ್ರೀಡಾಪಟುವಾಗಿಯೂ ಗುರುತಿಸಿಕೊಂಡಿದ್ದಾರೆ.
