ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸರಕಾರ ಮಹಿಳೆಯರಿಗಾಗಿ ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದು ಇದರ ಭಾಗವಾಗಿ ಸಂಜೀವಿನಿ ಸಂಘ ರಚನೆಯ ಮೂಲಕ ಸ್ವಾವಲಂಬಿ ಬದುಕಿಗೆ ಮುನ್ನುಡಿ ಬರೆಯುತ್ತಿದೆ ಎಂದು ಕೋಟತಟ್ಟು ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ಹೇಳಿದರು. ಅವರು ಮಂಗಳವಾರ ಕೋಟತಟ್ಟು ಕಾರಂತ ಥೀಂ ಪಾರ್ಕ್ ನಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ಎನ್ ಆರ್ ಎಂ ಎಲ್ ಸಂಜೀವಿನಿ,ಜಿಲ್ಲಾ ಹಾಗೂ ತಾಲೂಕು ಪಂಚಾಯತ್, ಕೋಟತಟ್ಟು ಗ್ರಾಮಪಂಚಾಯತ್, ಸಿಂಧೂರ ಸಂಜೀವಿನಿ ಗ್ರಾಮ ಒಕ್ಕೂಟದ ವಾರ್ಷಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಆರ್ಥಿಕ ವಹಿವಾಟು ತಮ್ಮ ಸ್ವ ಉದ್ಯೋಗಕ್ಕೆ ಪೂರಕ ವಾತಾವರಣ ಕಲ್ಪಿಸಿಕೊಂಡು ಸರಕಾರದ ಅನುದಾನವನ್ನು ಸದ್ವಿನಿಯೋಗ ಮಾಡಿಕೊಳ್ಳಬೇಕು ತನ್ಮೂಲಕ ಆರ್ಥಿಕ ಸ್ವಾವಲಂಬನೆ ಸಾಧ್ಯ ಎಂದು ಒತ್ತಿ ಹೇಳಿದ ಅವರು ಸಂಜೀವಿನಿ ಹಣಕಾಸು ವಹಿವಾಟುಗಳನ್ನು ಶಿಸ್ತುಬದ್ಧ ರೀತಿಯಲ್ಲಿ ನಿರ್ವಹಿಸಿ ಎಂದರಲ್ಲದೆ ಸಾಲ ಪಡೆದ ಹಣದಲ್ಲಿ ವಯಕ್ತಿಕ ಕಾರ್ಯಕ್ಕೆ ಬಳಕೆಯಾಗದೆ ಅದನ್ನು ತಮ್ಮ ಉತ್ಪಾದನಾ ಕ್ಷೇತ್ರಕ್ಕೆ ವಿನಿಯೋಗಿಸಿ ಎಂದು ಕರೆ ನೀಡಿದರು. ಕೋಟ ಆರಕ್ಷಕ ಠಾಣೆಯ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ, ಕೋಟೇಶ್ವರ ಘಟಕ ಹಾಗೂ ಮಹಿಳಾ ಸಂಘಟನೆಯ ವತಿಯಿಂದ “ಸೇವೆಗೆ ಸುದಿನ ಎಂಬ ಶೀರ್ಷಿಕೆಯಡಿ ಸಮಾಜದ ಕಣ್ಮಣಿ ನಾಡೋಜ ಡಾ. ಜಿ. ಶಂಕರ್ ಜನ್ಮ ದಿನಾಚರಣೆ ಅಂಗವಾಗಿ ತೆಕ್ಕಟ್ಟೆ ಗ್ರಾಮ ಪಂಚಾಯತ್ ಹಾಗೂ ಎಸ್ ಎಲ್ಆರ್ ಎಂ ಘಟಕದ ಸಹಯೋಗದಲ್ಲಿ ಕೊಮೆ ಬೀಚ್ ಕ್ಲಿನಿಂಗ್ ಹಾಗೂ ವಿವಿಧ ಸಮಾಜ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಭಾನುವಾರ ಹಮ್ಮಿಕೊಂಡಿತು. ಈ ಹಿನ್ನಲೆಯಲ್ಲಿ ಡಾ. ಜಿ. ಶಂಕರ್ ಅವರ ಶೈಕ್ಷಣಿಕ ಚಿಂತನೆಯಂತೆ, ಬೀಜಾಡಿ ಸರ್ಕಾರಿ ಪ್ರೌಢಶಾಲೆಗೆ, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕುರ್ಚಿಗಳನ್ನು ವಿತರಿಸಲಾಯಿತು. ಆರೋಗ್ಯ ಚಿಂತನೆಯಂತೆ ಅಶಕ್ತರಿಗೆ ಸಹಾಯಧನ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಮಾನವರ ಅಂತ್ಯಕ್ರಿಯೆಯ ಪುಣ್ಯದ ಮೋಕ್ಷ ಕಾರ್ಯದಲ್ಲಿ ಅತ್ಯಂತ ಮಹತ್ವದ ಸೇವೆಗೈದ ಕೋಟೇಶ್ವರದ ಮೋಕ್ಷ ಸೂರಿ ಹಾಗೂ ತೆಕ್ಕಟ್ಟೆಯ ಚಂದ್ರ ದೇವಾಡಿಗ ಅವರನ್ನು ಗುರುತಿಸಿ ಸನ್ಮಾನಿಸಲಾಯಿತು. ತೆಕ್ಕಟ್ಟೆ ಎಸ್ಎಲ್ಆರ್ಎಂ ಘಟಕದ ಮುಖ್ಯಸ್ಥೆ ರೇವತಿ ತೆಕ್ಕಟ್ಟೆ ಇವರನ್ನು ಅಭಿನಂದಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೊಗವೀರ ಸಂಘಟನೆಯ ಅಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಯಾವುದೇ ಕೆಲಸ ಮಾಡುವಾಗ ನಮ್ಮಲ್ಲಿ ಆತ್ಮವಿಶ್ವಾಸ ಇರಬೇಕು. ಮೊದಲು ನಮ್ಮಲ್ಲಿ ನಾವು ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬೇಕು. ಶಿಶು ಮಂದಿರಗಳಲ್ಲಿ ಶಿಬಿರಗಳ ಮೂಲಕ ಮಕ್ಕಳಲ್ಲಿ ಆತ್ಮವಿಶ್ವಾಸ ವೃದ್ಧಿಸುವ ಪ್ರಯತ್ನ ನಡೆಯುತ್ತಿದೆ. ನಮ್ಮ ಸಂಸ್ಕೃತಿ, ಸಂಸ್ಕಾರ, ಆಚಾರ ವಿಚಾರಗಳ ಬಗ್ಗೆ ಸಮಗ್ರವಾಗಿ ತಿಳಿದುಕೊಂಡು ಸಮಾಜದ ಆಸ್ತಿಯಾಗಬೇಕು ಎಂದು ಹಿಂದುಪರ ಸಂಘಟನೆಯ ಮುಖಂಡ ಶ್ರೀಧರ ನಾಯ್ಕ್ ಹೇಳಿದರು. ಅವರು ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಗಂಗೊಳ್ಳಿ ಇದರ ವತಿಯಿಂದ ಗಂಗೊಳ್ಳಿಯ ಎಸ್.ವಿ. ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಎರಡು ದಿನಗಳ ದಸರಾ ಶಿಬಿರದ ಸಮಾರೋಪ ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಶಿಶು ಮಂದಿರದ ಅಧ್ಯಕ್ಷ ಬಿ. ರಾಘವೇಂದ್ರ ಪೈ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾದ ಮಮತಾ ಜಿ.ಪೈ, ಸವಿತಾ ಆಚಾರ್ಯ, ಶಿಶು ಮಂದಿರದ ಸದಸ್ಯೆ ವಸಂತಿ ಎನ್.ಖಾರ್ವಿ, ಮಾತಾಜಿ ಪ್ರೇಮಾ, ಸಹಾಯಕಿ ರತ್ನ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಬಿ. ಲಕ್ಷ್ಮೀಕಾಂತ ಮಡಿವಾಳ ನಿರ್ವಹಿಸಿ, ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಮೊಗವೀರ ಯುವ ಸಂಘಟನೆ ರಿ. ಉಡುಪಿ ಜಿಲ್ಲೆ ಹಾಲಾಡಿ ಶಂಕರನಾರಾಯಣ ಘಟಕ ಮತ್ತುಜಿ. ಶಂಕರ್ ಪ್ಯಾಮಿಲಿ ಟ್ರಸ್ಟ್ ರಿ. ಅಂಬಲಪಾಡಿ, ಉಡುಪಿ ಇವರ ನೇತ್ರತ್ವದಲ್ಲಿ ಸದಾ ಮೊಗವೀರ ಸಮಾಜದ ಒಳಿತನ್ನೇ ಬಯಸುವ, ಬಡವರ ಪಾಲಿನ ಆಶಾಕಿರಣ, ಅನಾರೋಗ್ಯ ಪೀಡಿತರ ಜೀವ ರಕ್ಷಕ, ವಿದ್ಯಾ ಪೋಷಕ, ಕೊಡುಗೈ ದಾನಿ, ನಮ್ಮೆಲ್ಲರ ಮಾರ್ಗದರ್ಶಕರಾದ ನಾಡೋಜ ಡಾ. ಜಿ. ಶಂಕರ್ ಅವರ ಹುಟ್ಟುಹಬ್ಬದ ಸಂಭ್ರಮದಲ್ಲಿ ನಮ್ಮ ಘಟಕ ವ್ಯಾಪ್ತಿಯ ಯುವಕರು ಮತ್ತು ಯುವತಿಯರಿಗಾಗಿ ʼಯುವ ಪ್ರೇರಣಾ ನಾಯಕತ್ವ ತರಬೇತಿʼ ಉದ್ಯೋಗದ ಕುರಿತು ಮಾಹಿತಿ ಕಾರ್ಯಗಾರವನ್ನು ಆಯೋಜಿಸಿ ಹಲವಾರು ವಿಷಯಗಳ ಕುರಿತು ಮಾಹಿತಿ ವಿನಿಮಯವಾಯಿತು. ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ರಾಜು ಮೊಗವೀರ ಬಿದ್ಕಲ್ಕಟ್ಟೆ , ಶಿಕ್ಷಕರಾಗಿರುವ ಗಣೇಶ್ ಕಾಂಚನ್ ಮತ್ತು ಶಿಕ್ಷಕರಾಗಿರುವ ನಾಗರಾಜ್ ಎನ್. ಪುತ್ರನ್ ಸಂಪನ್ಮೂಲ ವ್ಯಕ್ತಿಗಳಾಗಿ ಉದ್ಯೋಗದ ಮಾಹಿತಿ, ನಾಯಕತ್ವ, ಸಂಘಟನೆಯಲ್ಲಿ ನಮ್ಮ ಜವಾಬ್ದಾರಿಯ ಕುರಿತು ಮಾಹಿತಿ ವಿನಿಮಯವಾಯಿತು. ಘಟಕದ ಅಧ್ಯಕ್ಷ ಶರತ್ ಸೌಡ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜಗದೀಶ್ ಬಿದ್ಕಲಕಟ್ಟೆ…
ಕುಂದಾಪ್ರ ಡಾಟ್ ಕಾಂ ಸುದ್ದಿಕೋಟ: ಹೆಣ್ಣಿನ ಬದುಕನ್ನು ನಿಯಂತ್ರಿಸುವ ಸಾಮಾಜಿಕ ಸಂಪ್ರದಾಯಗಳು ವಿಧವಾ ಪದ್ಧತಿ ಪುರುಷಧಿಪತ್ಯ, ವಿವಾಹದ ಕುರಿತಾದ ಏಕಮುಖ ನೈತಿಕತೆ ಮತ್ತು ಆರ್ಥಿಕ ಅಸಹಾಯಕತೆಯ ಪರಿಣಾಮವಾಗಿ ರೂಪುಗೊಂಡ ಸಾಮಾಜಿಕ ದುರಂತಗಳನ್ನು ವಿರೋಧಿಸಿ ಹೆಣ್ಣಿನ ಸಮಾನತೆ ಹಕ್ಕನ್ನು ಒತ್ತಿ ಹೇಳುವ ಕನ್ಯಾಬಲಿಯು ಕಾರಂತರ ಪ್ರಾತಿನಿಧಿಕ ಕಾದಂಬರಿ ಎಂದು ಹಿರಿಯಡ್ಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ಶಾಲಿನಿ ಯು.ಬಿ. ಹೇಳಿದರು. ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ.ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಕಾಳಾವರ ವರದರಾಜ್ ಎಂ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಕೋಟೇಶ್ವರ ಇಲ್ಲಿ ಕಾರಂತರ ಜನ್ಮದಿನೋತ್ಸವದ ಅಂಗವಾಗಿ ನಡೆದ ಅರಿವಿನ ಬೆಳಕು ಉಪನ್ಯಾಸ ಮಾಲೆ-18 ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಡಾ. ಸುಬ್ಮಹ್ಮಣ್ಯ ಅವರು ಕಾರಂತರ ಕುರಿತು ಇಂದಿನ ಯುವ ಪೀಳಿಗೆಗೆ ಅರಿವು ಮೂಡಿಸುವುದು ಅತೀ ಅಗತ್ಯವಾಗಿದೆ. ಸಾಹಿತ್ಯದ ಕಡೆಗೆ ವಿದ್ಯಾರ್ಥಿಗಳಿಗೆ ಅಭಿರುಚಿಯನ್ನು ಬೆಳೆಸುವುದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಬೆಂಗಳೂರಿನ ಪಿಸಿಪಿಎ ಸಭಾಂಗಣದಲ್ಲಿ ನಡೆದ ಸಂಜೋಗ್ ಸಂಗೀತ ಮಹೋತ್ಸವ- ಗುರುವಂದನಾ ಕಾರ್ಯಕ್ರಮದಲ್ಲಿ ಸಂಜೋಗ್ ಬಾನ್ಸುರಿ ಮಹಾವಿದ್ಯಾಲಯದ 25ನೇ ವಾರ್ಷಿಕೋತ್ಸವದ ಅಂಗವಾಗಿ ಕೊಳಲು ವಾದನದಲ್ಲಿ ಅತ್ಯುತ್ತಮ ಪ್ರತಿಭೆ ಹಾಗೂ ಶ್ರೇಷ್ಠತೆಗಾಗಿ ಗಂಗೊಳ್ಳಿಯ ಎಸ್.ವಿ. ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಶಾಮ್ ಅವರಿಗೆ ಈಶಾನ್ ಭಾರದ್ವಾಜ್ ಸ್ಮಾರಕ ವಿದ್ಯಾರ್ಥಿವೇತನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಕಾವೇರಿ ಭಾರದ್ವಾಜ್ ಅವರು ಶಾಮ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಕಾರ್ಯಕ್ರಮದಲ್ಲಿ ಪ್ರಸಿದ್ಧ ಕೊಳಲು ವಾದಕ ಡಾ. ಪಂಡಿತ್ ಪ್ರವೀಣ್ ಗೋಡ್ಕಿಂಡಿ, ಸಾರಿಕಾ ಪ್ರವೀಣ್ ಗೋಡ್ಕಿಂಡಿ, ಡಾ.ಪಂಡಿತ್ ಕಿರಣ್ ಗೋಡ್ಕಿಂಡಿ, ರಾಧಿಕಾ ಕಿರಣ್ ಗೋಡ್ಕಿಂಡಿ, ಪದ್ಮಜಾ ಗೋಡ್ಕಿಂಡಿ ಹಾಗೂ ಭಾರದ್ವಾಜ್ ಕುಟುಂಬದವರು ಉಪಸ್ಥಿತರಿದ್ದರು. ಶಾಮ್ ಗಂಗೊಳ್ಳಿಯ ಛಾಯಾಗ್ರಾಹಕ ಗಣೇಶ ಹಾಗೂ ಮಾಲತಿ ದಂಪತಿ ಪುತ್ರ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕು ಮಣಿಪಾಲದಲ್ಲಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್ ಹಾಗೂ ಬೌದ್ಧ ವರ್ಗದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ನವೀಕರಣ ವಿದ್ಯಾರ್ಥಿಗಳ ಸೀಟು ಹಂಚಿಕೆಯಾಗಿ ಉಳಿಕೆ ಸೀಟುಗಳ ಪ್ರವೇಶಾತಿಗೆ ಸ್ಟೇಟ್ ಹಾಸ್ಟೆಲ್ ಪೋರ್ಟಲ್ ತಂತ್ರಾಂಶದ ಮೂಲಕ ಪಿ.ಯು.ಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ ಹಾಗೂ ತಾಂತ್ರಿಕ ಮತ್ತು ವೃತ್ತಿಪರ ಕೋರ್ಸಿನ ವಿದ್ಯಾರ್ಥಿಗಳಿಂದ ವೆಬ್ಸೈಟ್ https://shp.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಚೇರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574596, ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ದೂ.ಸಂಖ್ಯೆ: 0820-2574596 ಅಥವಾ ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ನವದೆಹಲಿ: ಮೂರು ದಿನಗಳ ಭಾರತ ಭೇಟಿಗಾಗಿ ಸೋಮವಾರ ನವದೆಹಲಿಗೆ ಆಗಮಿಸಿದ ಸ್ವಿಜರ್ಲೆಂಡ್ ಅಧ್ಯಕ್ಷ ಗೈ ಪರ್ಮೆಲಿನ್ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು. ನಂತರ ಪರ್ಮೆಲಿನ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ವ್ಯಾಪಾರ, ಹೂಡಿಕೆ, ಎಐ, ರಕ್ಷಣಾ ಉತ್ಪಾದನೆ, ವಿಜ್ಞಾನ ಮತ್ತು ತಂತ್ರಜ್ಞಾನ ರಂಗಗಳಲ್ಲಿ ಉಭಯ ದೇಶಗಳ ಸಹಕಾರವನ್ನು ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಹಾಗೂ ಜಾಗತಿಕ ವಿದ್ಯಮಾನಗಳ ಬಗ್ಗೆ ಇಬ್ಬರೂ ನಾಯಕರು ಚರ್ಚಿಸಿದರು. ಭಾರತ-ಸ್ವಿಜರ್ಲೆಂಡ್ ನಡುವೆ 2024ರ ಮಾರ್ಚ್ನಲ್ಲಿ ಆಗಿರುವ ಸಮಗ್ರ ವ್ಯಾಪಾರ ಮತ್ತು ಆರ್ಥಿಕ ಪಾಲುದಾರಿಕೆ ಒಪ್ಪಂದ (ಟಿಎಪಿಎ)ದಿಂದಾಗಿ ಆರ್ಥಿಕ ಸಹಕಾರದಲ್ಲಿ ಆಗುತ್ತಿರುವ ಏರುಗತಿಯನ್ನು ಉಭಯ ನಾಯಕರು ಉಲ್ಲೇಖಿಸಿದರು. ಸ್ವಿಜರ್ಲೆಂಡ್ ಅಧ್ಯಕ್ಷ ಗೈ ಪರ್ಮೆಲಿನ್ ಗೌರವಾರ್ಥ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ನವದೆಹಲಿಯ ಹೈದರಾಬಾದ್ ಹೌಸ್ನಲ್ಲಿ ಆಯ್ದ ಗಣ್ಯರಿಗೆ ಏರ್ಪಡಿಸಿದ್ದ ಔತಣಕೂಟದಲ್ಲಿ ವಿಆರ್ಎಲ್ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ.ಆನಂದ ಸಂಕೇಶ್ವರ ಅವರು ಆಹ್ವಾನಿತರಾಗಿ ಭಾಗಿಯಾಗಿದ್ದರು. ಭಾರತದ 13 ಗಣ್ಯರು ಹಾಗೂ ಸ್ವಿಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶಿಕ್ಷಣವೆಂಬುದು ಕೇವಲ ಪಠ್ಯಪುಸ್ತಕದ ಬೋಧನೆಗಷ್ಟೇ ಸೀಮಿತವಾಗಿರದೆ, ಮಗುವಿನ ಸರ್ವಾಂಗೀಣ ವಿಕಸನಕ್ಕೆ ದಾರಿದೀಪವಾಗಬೇಕು. ಅಂಥ ಸಾರ್ಥಕ ಕಾಯಕದಲ್ಲಿ ತಮ್ಮನ್ನು ತೊಡಗಿಸಿಕೊಂಡು, ಗ್ರಾಮೀಣ ಹಾಗೂ ಸರಕಾರಿ ಶಾಲಾ ಶಿಕ್ಷಣ ವ್ಯವಸ್ಥೆಯನ್ನು ಗಟ್ಟಿಗೊಳಿಸುವಲ್ಲಿ ನಿರಂತರ ಶ್ರಮಿಸುತ್ತಿರುವ ಉದ್ಯಾವರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಹಶಿಕ್ಷಕಿ ತಾರಾಮತಿ ದೇವಾಡಿಗ ಅವರಿಗೆ ‘ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ’ ಪ್ರಶಸ್ತಿ ಲಭಿಸಿದೆ. ಬ್ರಹ್ಮಾವರದ ಬಂಟರ ಭವನದಲ್ಲಿ ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ಕೇಂದ್ರ ವೇದಿಕೆ (SDMCEF), ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಜರುಗಿದ ‘ಗುರುವಂದನಾʼ ಸಮಾರಂಭದಲ್ಲಿ ಈ ಗೌರವಾರ್ಪಣೆ ನಡೆದಿದೆ. ಕೋಟೇಶ್ವರ ಗೀತಾ ಎಚ್.ಎಸ್.ಎನ್. ಫೌಂಡೇಶನ್ನ ಅಧ್ಯಕ್ಷ ಶಂಕರ ಐತಾಳ್ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ನಿತಿನ್ ವೈ. ರಾವ್ ಉಪಸ್ಥಿತಿಯಲ್ಲಿ ಈ ಸನ್ಮಾನ ನೆರವೇರಿರುವುದು ಕಾರ್ಯಕ್ರಮದ ಗಾಂಭೀರ್ಯವನ್ನು ಹೆಚ್ಚಿಸಿದೆ. ಬೇರಿನ ನಂಟು ಮತ್ತು ನಿಷ್ಠೆಯ ಪಯಣ:ಕರಾವಳಿಯ ಗ್ರಾಮೀಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕು ಕಚೇರಿಯಲ್ಲಿ ಬೈಂದೂರು ತಾಲೂಕು ವ್ಯಾಪ್ತಿಯ ಅಕ್ರಮ ಸಕ್ರಮ ಕಡತಗಳ ಹಾಗೂ 94ಸಿ ಹಾಗೂ 94ಸಿಸಿ ಅರ್ಜಿಗಳ ವಿಲೇವಾರಿಯನ್ನು ಕಳೆದ ಮೂರು ವರ್ಷಗಳಿಂದ ತಾಂತ್ರಿಕ ಸಮಸ್ಯೆಗಳ ನೆಪವೊಡ್ಡಿ ವಿನಾಕಾರಣ ವಿಳಂಬ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಆಧರಿಸಿ ಸಂಬಂಧ ಪಟ್ಟ ಅಧಿಕಾರಿಗಳ ಸಭೆ ನಡೆಸಿದ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ. ಕಳೆದ ಒಂದು ವರ್ಷದ ಅವಧಿಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಅಕ್ರಮ ಸಕ್ರಮ ಅರ್ಜಿಗಳನ್ನು ಅಧಿಕಾರಿಗಳು ರದ್ದು ಪಡಿಸಿರುವ ಬಗ್ಗೆ ಸಭೆಯಲ್ಲಿ ಕೆಂಡಾ ಮಂಡಲರಾದರು. ಅಕ್ರಮ ಸಕ್ರಮ ಅರ್ಜಿಗಳ ವಿಲೇವಾರಿಯಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಸರಕಾರ ತಂತ್ರಾಂಶಗಳನ್ನು ಅಳವಡಿಸಿದ್ದರೂ ಸದ್ರಿ ತಂತ್ರಾಂಶಗಳನ್ನು ಅರ್ಥೈಸಿಕೊಳ್ಳುವುದರಲ್ಲಿ ಅಧಿಕಾರಿಗಳ ಅಸಡ್ಡೆ ಹಾಗೂ ಗ್ರಾಮೀಣ ಭಾಗದ ಬಡ ರೈತರುಗಳ ಅಕ್ರಮ ಸಕ್ರಮ ಅರ್ಜಿಗಳು, ಆರ್ ಆರ್ ಟಿ ಅರ್ಜಿಗಳ ಬಗ್ಗೆ ಕಾಳಜಿ ತೋರಿಸದೇ ಕಳೆದ ಮೂರು ವರ್ಷಗಳಲ್ಲಿ ನೀಡಿದ ನಿರಂತರ ಸೂಚನೆಗಳ ಹೊರತಾಗಿಯೂ ಅರ್ಜಿ ವಿಲೇವಾರಿಗೆ ವಿಳಂಬ ತೋರಿಸುತ್ತಿರುವ ತಹಶೀಲ್ದಾರ್, ಸರ್ವೇ ಇಲಾಖೆ…
