ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾಷೆಯನ್ನು ಬೆಳೆಸುವ ದಿನಗಳ ಬದಲಾಗಿ ಉಳಿಸಿಕೊಳ್ಳುವ ದಿನಗಳು ಬಂದಿವೆ. ಜಾಗತೀಕರಣ, ಉದಾರೀಕರಣದ ಕಾರಣದಿಂದ ಕೊಚ್ಚಿ ಹೋಗುತ್ತಿರುವ ಕನ್ನಡ ಭಾಷೆಯನ್ನು ಮತ್ತಷ್ಟು ಸಮೃದ್ಧಗೊಳಿಸುವ ಅಗತ್ಯತೆ ನಮ್ಮ ಮುಂದಿದೆ. ಕನ್ನಡಕ್ಕೆ ಅನ್ಯಾಯವಾದಾಗ ಪ್ರತಿಭಟಿಸುವ ಕೆಚ್ಚನ್ನು ಬೆಳೆಸಿಕೊಂಡು ಒಗ್ಗಟ್ಟಾಗಿ ಹೋರಾಡುವ ಕೆಲಸವಾಗಬೇಕಿದೆ ಎಂದು ಮನೋರೋಗ ತಜ್ಞ ಡಾ. ಕೆ.ಎಸ್. ಕಾರಂತ್ ಹೇಳಿದರು. ಅವರು ಇಲ್ಲಿನ ಸಾಧನ ಸಂಗಮ ಟ್ರಸ್ಟ್ ಸಭಾಂಗಣದಲ್ಲಿ ನಡೆದ ೧೦೧ನೇ ಸಂಸ್ಥಾಪನಾ ದಿನಾಚರಣೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಸಾಹಿತ್ಯ ಪರಿಷತ್ತೆಂದರೆ ಸಾಹಿತ್ಯ ಹಾಗೂ ಸಾಹಿತಿಗಳಿಗೆ ಮಾತ್ರ ಸೀಮಿತವಾದುದಲ್ಲ. ಅದು ನಾಡು, ನುಡಿ, ಸಂಸ್ಕೃತಿ, ಸಾಹಿತ್ಯಕ್ಕೆ ಸಂಬಂಧಿಸಿದ್ದು. ಎಲ್ಲರನ್ನೂ ಒಳಗೊಳ್ಳುವ ಪ್ರಾತಿನಿಧಿಕ ಸಂಸ್ಥೆಯಾಗಿ ಕನ್ನಡ ಸಾಹಿತ್ಯ ಪರಿಷತ್ತು ಬೆಳೆದುಬಂದಿದ್ದು ಅದು ಹೀಗೆಯೇ ಮುಂದುವರಿಯಬೇಕಿದೆ ಎಂದವರು ಹೇಳಿದರು. ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ನುಡಿಗಳನ್ನಾಡಿ ಕನ್ನಡ ಭಾಷಾ ಸಂಪತ್ತು ಹಾಗೂ ಜ್ಞಾನ ಸಂಪತ್ತನ್ನು ಹೆಚ್ಚಿಸಬೇಕು ಎಂಬ ಉದ್ದೇಶದೊಂದಿಗೆ ಹುಟ್ಟಿಕೊಂಡದ್ದು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ವಿಶೇಷ ವರದಿ. ಕುಂದಾಪುರ: ಫೇಸ್ಬುಕ್ನಲ್ಲಿ ಪೋಸ್ಟ್ ಲೈಕ್, ಕಾಮೆಂಟ್ ಹಾಕುತ್ತಾ ತಮ್ಮೂರಿನ ವಿಚಾರ ವಿನಿಮಯ ಮಾಡಿಕೊಳ್ಳುತ್ತಿದ್ದ ಮಂದಿಯೆಲ್ಲ ಒಂದೆಡೆ ಸೇರಿದ್ದರು. ಆನ್ಲೈನ್ನಲ್ಲೇ ಹರಟುತ್ತಿದ್ದವರು ಮುಖತಃ ಭೇಟಿಯಾಗಿ ಶುಭಾಷಯ ವಿನಿಮಯ ಮಾಡಿಕೊಂಡ್ರು. ಒಂದಿಷ್ಟು ಗಂಭೀರ ಚಿಂತನೆಗಳು ನಡೆದವು. ಕೆಲವು ಅಲ್ಲಿಯೇ ಕಾರ್ಯರೂಪಕ್ಕೂ ಬಂತು. ಹುಟ್ಟೂರಿನ ನೆನಪುಗಳು ಮೆಲಕಾದವು. ಸಾಧಕರಿಗೆ ಅಭಿನಂದನೆಯೂ ನಡೆಯಿತು. ಇದರ ನಡುವೆಯೇ ಒಂದಿಷ್ಟು ನಗು, ಮನೋಲ್ಲಾಸದ ಆಟ, ಹೊಟ್ಟೆಯೊಂದಿಗೆ ಮನವೂ ತುಂಬಿ ಬಂದ ಊಟ! ಅಂದಹಾಗೆ ಈ ಅಪರೂಪದ ಕ್ಷಣಗಳಿಗೆ ಸಾಕ್ಷಿಯಾದದ್ದು ‘ನಮ್ಮ ಕುಂದಾಪ್ರ’ ಫೇಸ್ಬುಕ್ ಗ್ರೂಪಿನ ಗೆಳೆಯರ ಸಹಮಿಲನ ಕಾರ್ಯಕ್ರಮ. ಕುಂದಾಪುರ ಶರೋನ್ ಹೋಟೆಲ್ನಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ನಮ್ಮ ಕುಂದಾಪ್ರ ಗ್ರೂಪಿನ ಗೆಳೆಯರೆಲ್ಲ ಸೇರಿ ಒಂದಿಷ್ಟು ಹೊತ್ತು ಸಂತಸ ಹಂಚಿಕೊಂಡರು. ಹಿರಿಯ ಸಾಹಿತಿ, ನ್ಯಾಯವಾದಿ ಎ.ಎಸ್.ಎನ್ ಹೆಬ್ಬಾರ್ ಕೇಕ್ ಕತ್ತರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಸಾಮಾಜಿಕ ತಾಣಗಳಲ್ಲಿ ಸಕ್ರಿಯವಾಗಿರುವ ಕುಂದಾಪುರಿಗರು ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿರುವ ಸಹಮಿಲನದ ಆಯೋಜಕರ ಪರಿಶ್ರಮ ಶ್ಲಾಘನೀಯ. ನಮ್ಮ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಗಂಗೊಳ್ಳಿಯಜಿಎಸ್ವಿಎಸ್ ಅಸೋಸಿಯೇಶನ್ ಪ್ರಾಯೋಜಿತ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಗೆ ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.97 ಫಲಿತಾಂಶ ದಾಖಲಿಸಿದೆ. ಪರೀಕ್ಷೆ ಹಾಜರಾದ ಒಟ್ಟು 38 ವಿದ್ಯಾರ್ಥಿಗಳ ಪೈಕಿ 37 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಈ ಪೈಕಿ 14 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 10 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಚೈತ್ರಾ ಶ್ಯಾನುಭಾಗ್ (622), ಪ್ರಕಾಶ ಪೈ (611), ಮಲ್ಲಿಕ್ ನಾಯಕ್ (608), ಶರತ್ (606), ಸುಜನ್ (605), ಸುಪ್ರೀತಾ (604), ಧನುಶ್ರೀ (601). ಪರೀಕ್ಷೆಯಲ್ಲಿ ಅತ್ಯುತ್ತುಮ ಸಾಧನೆಗೈದ ಹಾಗೂ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ ಸದಸ್ಯರು, ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ವಿ.ಕೆ.ಆರ್.ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯು ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100ಫಲಿತಾಂಶ ಗಳಿಸಿದೆ. ಹಾಜರಾದ 143 ವಿದ್ಯಾರ್ಥಿಗಳಲ್ಲಿ 67 ವಿದ್ಯಾರ್ಥಿಗಳು ವಿಶಿಷ್ಟ ದರ್ಜೆಯಲ್ಲಿ ಮತ್ತು 76 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ. ವಿವೇಕ್ ಗಿರಿಧರ್ ಪೈ 622 ಅಂಕಗಳೊಂದಿಗೆ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯಕ್ಕೆ ನಾಲ್ಕನೇ ಸ್ಥಾನ ಗಳಿಸಿರುತ್ತಾನೆ. ಶಾಲಾ ಸಂಚಾಲಕರಾದ ಬಿ. ಎಮ್. ಸುಕುಮಾರ ಶೆಟ್ಟಿಯವರು ವಿದ್ಯಾರ್ಥಿಗಳನ್ನು ಅಭಿನಂದಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿನ ಮೂವರು ವಿದ್ಯಾರ್ಥಿಗಳು 625ರಲ್ಲಿ 622ಅಂಕಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಕುಂದಾಪುರ ಎಜುಕೇಶನ್ ಸೊಸೈಟಿಯ ಪ್ರವರ್ತಿತ ವಿ.ಕೆ.ಆರ್. ಆಚಾರ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಎಚ್. ವಿವೇಕ್ ಗಿರಿಧರ ಪೈ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 622 ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಚೈತ್ರ ಶಾನುಭೋಗ್ 622 ಅಂಕಗಳಿಸಿ ಉತ್ತಮ ಸಾಧನೆಗೈಧಿದ್ದಾಳೆ. ತಾಲೂಕಿನ ಬಸ್ರೂರು ಸರಕಾರಿ ಪ್ರೌಢಶಾಲೆಯ ಆಂಗ್ಲ ಮಾಧ್ಯಮ ವಿಭಾಗದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ವೆಂಕಟೇಶ್ ಪುರಾಣಿಕ್ 625ರಲ್ಲಿ 622 ಅಂಕ ಗಳಿಸಿ ತಾಲೂಕಿಗೆ ಮಾದರಿ ಸಾಧನೆಗೈದಿದ್ದಾನೆ. ► ವಿ.ಕೆ.ಆರ್ ಆಚಾರ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿವೇಕ್ಗೆ ಎಸ್ಎಸ್ಎಲ್ಸಿಯಲ್ಲಿ 622 ಅಂಕ – http://kundapraa.com/?p=14210 . ►ಬಸ್ರೂರು ಸರಕಾರಿ ಶಾಲೆಯ ವಿದ್ಯಾರ್ಥಿ ವೆಂಕಟೇಶ್ಗೆ 622 ಅಂಕ – http://kundapraa.com/?p=14215 .
ಟ್ಯೂಷನ್ಗೆ ಹೋಗಿಲ್ಲ. ಸರಕಾರಿ ಶಾಲೆಯಲ್ಲಿಯೇ ಸಾಧಿಸಿದ ಛಲ ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ತಾಲೂಕಿನ ಬಸ್ರೂರು ಸರಕಾರಿ ಪ್ರೌಢಶಾಲೆಯ ಆಂಗ್ಲ ಮಾಧ್ಯಮ ವಿಭಾಗದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ವೆಂಕಟೇಶ್ ಪುರಾಣಿಕ್ 625ರಲ್ಲಿ 622 ಅಂಕ ಗಳಿಸಿ ತಾಲೂಕಿಗೆ ಮಾದರಿ ಸಾಧನೆಗೈದಿದ್ದಾನೆ. ಚುರುಕಿನ ವಿದ್ಯಾರ್ಥಿಯಾದ ವೆಂಕಟೇಶ್ ಯಾವುದೇ ಟ್ಯೂಷನ್ ಪಡೆಯದೇ ಶಾಲೆಯಲ್ಲಿ ಕಲಿಸಿದ್ದಷ್ಟನ್ನೇ ಓದಿಕೊಂಡು ಅತ್ಯಧಿಕ ಅಂಕ ಗಳಿಸಿದ್ದಾನೆ. ಈತ ಬಸ್ರೂರು ಪುರಾಣಿವಳಾಲ್ ನಿವಾಸಿಯಾಗಿರುವ ಸುಬ್ರಮಣ್ಯ ಪುರಾಣಿಕ ಹಾಗೂ ಅನ್ನಪೂರ್ಣ ದಂಪತಿಗಳ ಪುತ್ರ. ಕುಂದಾಪ್ರ ಡಾಟ್ ಕಾಂ ‘ಕುಂದಾಪ್ರ ಡಾಟ್ ಕಾಂ’ಗೆ ಪ್ರತಿಕ್ರಿಯಿಸಿರುವ ವೆಂಕಟೇಶ್, ಪೋಷಕರ ಪ್ರೋತ್ಸಾಹ, ಶಿಕ್ಷಕರುಗಳ ಮಾರ್ಗದರ್ಶನ ತನ್ನೀ ಯಶಸ್ಸಿಗೆ ಕಾರಣವಾಗಿದೆ. ಮುಂದೆ ಕಾಮರ್ಸ್ ವಿಭಾಗವನ್ನು ತೆಗೆದುಕೊಂಡು ಚಾರ್ಟೆಡ್ ಅಕೌಂಟೆಂಟ್ ಆಗುವ ಬಯಕೆ ಇದೆ ಎಂದು ಹೇಳಿಕೊಂಡಿದ್ದಾನೆ. / ಕುಂದಾಪ್ರ ಡಾಟ್ ಕಾಂ ವರದಿ/
ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಕುಂದಾಪುರ ಎಜುಕೇಶನ್ ಸೊಸೈಟಿಯ ಪ್ರವರ್ತಿತ ವಿ.ಕೆ.ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಎಚ್. ವಿವೇಕ್ ಗಿರಿಧರ ಪೈ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625ರಲ್ಲಿ 622ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ರಾಜ್ಯ ಸಾರಿಗೆ ಸಂಸ್ಥೆಯಲ್ಲಿ ಅಧಿಕಾರಿಯಾಗಿರುವ ಹೆಚ್. ಗಿರಿಧರ ಪೈ ಹಾಗೂ ಕುಂದಾಪುರ ಭಂಡಾರ್ಕಾರ್ಸ್ಕಾಲೇಜಿನ ಪ್ರಾಧ್ಯಾಪಕಿ ಪ್ರೊ. ಗಾಯತ್ರಿ ಗಿರಿಧರ್ ಪೈ ಅವರ ಮಗನಾದ ವಿವೇಕ್ ಅತ್ಯಧಿಕ ಅಂಕಗಳ ಪಡೆದು ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾನೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿವೇಕ್, ತಾನು ನಿರೀಕ್ಷಿಸಿದ್ದಕ್ಕಿಂತ ಅಂಕಗಳು ದೊರೆತಿದೆ. ನನ್ನ ವಿದ್ಯಾಭ್ಯಾಸದಲ್ಲಿ ತಂದೆ-ತಾಯಿಯರ ಬೆಂಬಲ ಹಾಗೂ ಎಸ್ಎಸ್ಎಲ್ಸಿಯಲ್ಲಿ ವಿ.ಕೆ.ಆರ್. ಆಚಾರ್ಯ ಶಾಲೆ ಶಿಕ್ಷಕರುಗಳ ಮಾರ್ಗದರ್ಶನದಿಂದ ಈ ಸಾಧನೆಗೈಯಲು ಸಾಧ್ಯವಾಗಿದೆ ಎಂದಿದ್ದಾರೆ. ಟುಟೋರಿಯಲ್ಸ್ಗೆ ತೆರಳದೇ, ಆಟ-ಪಾಠಗಳಲ್ಲಿ ಸಮಾನವಾಗಿ ತೊಡಗಿಸಿಕೊಂಡಿದ್ದು ಯಶಸ್ಸಿಗೆ ಕಾರಣವಾಗಿದೆ. ಮೆಡಿಕಲ್ ಓದುವ ಹಂಬಲವಿದ್ದು, ಹೆಬ್ರಿಯ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣಕ್ಕೆ ಸೇರಿಕೊಳ್ಳುವುದಾಗಿ ತಿಳಿಸಿದ್ದಾನೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಮಗನ ಯಶಸ್ಸು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ವತ್ತಿನಕಟ್ಟೆ ಮಹಾಸತಿ ಅಮ್ಮನವರ ದೇವಸ್ಥಾನ ಅನುವಂಶಿಕ ಅರ್ಚಕ- ಮೊಕ್ತೇಸರ ಬಿ. ಕೃಷ್ಠಮೂರ್ತಿ ನಾವಡರಿಗೆ ನಾಗೂರು ಒಡೆಯರ ಮಠ ಕಲಾಮಂದಿರದಲ್ಲಿ ನಡೆದ ಶ್ರೀ ಶಂಕರ ಜಯಂತಿ -ತತ್ವಜ್ಙಾನಿಗಳ ದಿನಾಚರಣೆ ಸಮಾಂಭದಲ್ಲಿ ಶೃಂಗೇರಿ ದಕ್ಷಿಣಾಮ್ನಾಯ ಪೀಠದ ಶ್ರೀ ಶಂಕರ ತತ್ತ ಪ್ರಸರಣಾ ಸಮಿತಿಯ ಪರವಾಗಿ ವಿದ್ವತ್ ಸನ್ಮಾನ ಪತ್ರ ನೀಡಿ ಗೌರವಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಸರಾಫ್ ರಮಾನಂದ ಪೈ, ಶಂಕರರ ಭಕ್ತಿ ಸಾಹಿತ್ಯದ ’ಭಜ ಗೋವಿಂದಂ’ ಕುರಿತು ಉಪನ್ಯಾಸ ನೀಡಿದರು. ಯು. ವರಲಕ್ಮ್ಷೀ ಹೊಳ್ಳ ಮತ್ತು ಬಳಗದವರು ಶಂಕರಚಾರ್ಯರು ರಚಿಸಿದ ಸೋತ್ರಗಳನ್ನು ಹಾಡಿದರು. ಶ್ರೀ ಅಗಸ್ತೇಶ್ವರ ದೇವಸ್ಥಾನ ಕೇಂದ್ರದಿಂದ ಶ್ರೀ ಶಂಕರ ಅಷ್ಟೋತ್ತರ ಶತನಾಮ ಜಪ ವೃತ ಕೈಗೊಂಡ ಶ್ರದ್ಧಾಳುಗಳು ಪಾರಾಯಣವನ್ನು ಶ್ರೀ ಗುರುಗಳ ಸನ್ನಿಧಿಯಲ್ಲಿ ಸಮರ್ಪಣೆ ಗೈದರು. ರಾಮಕೃಷ್ಡ ಜೋಷಿಯವರು ಶಂಕರಾರ್ಚಾರ ಭಾವಚಿತ್ರಕ್ಕೆ ಶಾಸ್ತ್ರೊಪ ಪೂಜೆಗೈದು ಆಶೀರ್ವದಿಸಿದರು. ಕೂಟ ಮಹಾ ಜಗತ್ತಿನ ಕಾರ್ಯದರ್ಶಿ ಮಂಜುನಾಥ ಹೊಳ್ಳ ಉಪಸ್ಥಿತರಿದ್ದರು. ದ್ರಾವಿಡ ಬ್ರಾಹಣ ಪರಿಷತ್ತು ಉಪ್ಪುಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಿದ್ದು, ಸಮಾಜದಲ್ಲಿ ಸಾಮಾಜಿಕ ಪರಿವರ್ತನೆಗೆ ಕಾರಣವಾಗಿದೆ. ಸ್ವಸಸಹಾಯ ಸಂಘಗಳ ಸ್ಥಾಪನೆಯಿಂದ ಮಹಿಳೆಯರು ಪುರುಷರಿಗೆ ಸರಿಸಮಾನವಾಗಿ ಬೆಳೆಯಲು ಸಹಕಾರಿಯಾಗಿದೆ. ಒಕ್ಕೂಟದ ಸದಸ್ಯರು ಒಗ್ಗಟ್ಟಿನಿಂದ ಯಾವುದೇ ಫಲಾಪೇಕ್ಷೆಯಿಲ್ಲದೆ ಕಾರ್ಯನಿರ್ವಹಿಸದರೆ ಇನ್ನಷ್ಟು ಅಭಿವೃದ್ಧಿ ಕಾಣಲು ಸಾಧ್ಯವಿದೆ ಎಂದು ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಸುಮನಾ ಪಡಿಯಾರ್ ಹೇಳಿದರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಜರಗಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತ್ರಾಸಿ ವಲಯದ ಗಂಗೊಳ್ಳಿ ಕಾರ್ಯಕ್ಷೇತ್ರದ ಪ್ರಗತಿಬಂಧು ಸ್ವಸಹಾಯ ಸಂಘಗಳ ಎಂ.ಜಿ.ರೋಡ್ ಮತ್ತು ಬಂದರು ಒಕ್ಕೂಟಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ನೂತನ ಪದಾಧಿಕಾರಿಗಳಿಗೆ ಪದಗ್ರಹಣ ನೆರವೇರಿಸಿ ಮಾತನಾಡಿದ ತ್ರಾಸಿ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ರಾಜು ದೇವಾಡಿಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ನಮ್ಮ ಸರ್ವತೋಮುಖ ಬೆಳವಣಿಗೆಗೆ ಅವಶ್ಯವಿರುವ ಅನೇಕ ಕಾರ್ಯಕ್ರಮಗಳಿವೆ. ಮಹಿಳೆ ಸ್ವಾವಲಂಬಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವೃಕ್ಷ, ನದಿತಟ, ಬನ, ಗುಡ್ಡ-ಬೆಟ್ಟಗಳಲ್ಲಿ ದೈವ-ದೇವರುಗಳು ನೆಲೆಸಿರುವ ಕಾರಣ ನಮ್ಮ ಹಿಂದಿನವರು ಪ್ರಕೃತಿಯನ್ನು ದೇವರೆಂದು ನಂಬಿ ಆರಾಧಿಸುಕೊಂಡು ಬಂದರು. ಮುಂದಿನ ಪೀಳಿಗೆಗೆ ಅನುಕೂಲವಾಗಲೆಂದು ಹಾಗೂ ಪರಿಸರ ಪ್ರಜ್ಞೆ ಮೂಡಿಸುವ ಸಲುವಾಗಿ ದೈವ, ದೇವರ ಆಲಯಗಳನ್ನು ಇಂತಹ ಪರಿಸರದಲ್ಲಿ ನಿರ್ಮಾಣ ಮಾಡಿದ್ದಾರೆ. ಆದರೆ ಇಂದು ಮಾನವನ ಸ್ವಯಂಕೃತ ಅಪರಾಧಗಳಿಂದ ಪ್ರಕೃತಿ ಮುನಿದು ಕಾಲಕಾಲಕ್ಕೆ ಆಗಬೇಕಿದ್ದ ಮಳೆ-ಬೆಳೆ ಕೂಡಾ ವೈಪರಿತ್ಯಕ್ಕೆ ಮುಟ್ಟುವ ಸ್ಥಿತಿ ಬಂದೊದಗಿದೆ ಎಂದು ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಳದ ಆಡಳಿತ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಹೇಳಿದರು. ಉಪ್ಪುಂದ ಜನತಾ ಕಾಲೋನಿಯ ಶ್ರೀ ಜೈನ ಬೊಬ್ಬರ್ಯ ಮತ್ತು ಪರಿವಾರ ದೈವಗಳ ದೈವಸ್ಥಾನದ ನೂತನ ಹೆಬ್ಬಾಗಿಲು ಉದ್ಘಾಟಿಸಿ ಅನಂತರ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು. ವೈಜ್ಞಾನಿಕವಾಗಿ ಜಗತ್ತು ಮುಂದುವರಿದಿದ್ದು, ನಾವುಗಳು ಅದನ್ನು ಅಂಗೈಯಲ್ಲಿ ನೋಡಬಹುದಾಗಿದೆ. ದುರದೃಷ್ಟವಶಾತ್ ಹಿಂದಿನ ಗುಲಾಮಗಿರಿಯ ವ್ಯಾಮೋಹ ನಮ್ಮಲ್ಲಿ ಇನ್ನೂ ಹೋಗಲಿಲ್ಲ. ಈ ಗುಂಗಿನಿಂದ ಹೊರಬಂದು ನಮ್ಮ ಕರ್ತವ್ಯ, ಸುತ್ತಮುತ್ತಲಿನವರ…
