ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ವಿದ್ಯಾರ್ಥಿಗಳು ಬಾಲ್ಯದಲ್ಲಿ ಶಿಸ್ತು, ಸಂಯಮ ಹಾಗೂ ನಾಯಕತ್ವ ಗುಣಗಳನ್ನು ಅಳವಡಿಸಿಕೊಂಡರೆ ಭವಿಷ್ಯದಲ್ಲಿ ಆದರ್ಶ ವ್ಯಕ್ತಿಗಳಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರಾಗಿರುವ ಸುಕೇಶ ಶೆಟ್ಟಿ ಹೊಸಮಠ ಹೇಳಿದರು. ಅವರು 2026-27ನೇ ಸಾಲಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ, ಅರೆಶಿರೂರು-ಗೋಳಿಹೊಳೆ ಇಲ್ಲಿನ ವಿದ್ಯಾರ್ಥಿ ಸಂಸತ್ತನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಅರೆಶಿರೂರು ಸ.ಹಿ.ಪ್ರಾ.ಶಾಲೆಯ ಇಲ್ಲಿನ ಮುಖ್ಯ ಶಿಕ್ಷಕಿ ಲಕ್ಷ್ಮಿ ಅವರು ವಿದ್ಯಾರ್ಥಿ ಚುನಾವಣೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ದಿನಕರ ನಾಯ್ ಬಿ.ಅವರು ಸಮಾರಂಭದ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿ ನಾಯಕರಿಗೆ ಪ್ರಮಾಣ ವಚನ ಬೋಧಿಸಿ, ಶ್ರೀ ದೇವಳದಿಂದ ಉಚಿತವಾಗಿ ನೀಡಿದ ವಿವಿಧ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಶಿಕ್ಷಣ, ಪ್ರೇಮ ಸಾಹಿತ್ಯ ಕ್ಷೇತದಲ್ಲಿ ಉತ್ತಮ ಸಾಧನೆ ಮಾಡಿ ಶಾಲೆಗೆ ಕೀರ್ತಿ ತರಬೇಕೆಂದು ಶುಭ ಹಾರೈಸಿದರು. ಕೊಲ್ಲೂರು ಶ್ರೀ ದೈವಳದಿಂದ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಮರವಂತೆ ಗ್ರಾಮದ ಮಾರುತಿ ಕಾಂಪ್ಲೆಕ್ಸ್ನಲ್ಲಿ ಮಾಂಗಲ್ಯ ಎಂಬ ಚಿನ್ನದ ಅಂಗಡಿಗೆ ಶನಿವಾರ ರಾತ್ರಿ ವೇಳೆ ನುಗ್ಗಿದ ಕಳ್ಳರು, ಲಕ್ಷಾಂತರ ರೂ. ಮೌಲ್ಯದ ಬೆಳ್ಳಿ ಗಟ್ಟಿ, ನಗದು ಕಳವಾಗಿರುವ ಘಟನೆ ಬೆಳಕಿಗೆ ಬಂದಿದೆ. ಮರವಂತೆ ಗ್ರಾಮದ ಹರಿಶ್ಚಂದ್ರ ರಸ್ತೆಯ ಚಳ್ಳಿಕಳ್ಳಿ ನಿವಾಸಿ ವಿಶ್ವನಾಥ (35) ಅವರು ಈ ಅಂಗಡಿಯನ್ನು ನಡೆಸುತ್ತಿದ್ದು, ಜುಲೈ 4ರಂದು ರಾತ್ರಿ 9.00 ಗಂಟೆಯಿಂದ ಜುಲೈ 5ರಂದು ಬೆಳಿಗ್ಗೆ 5.40 ಗಂಟೆಯ ನಡುವಿನ ಅವಧಿಯಲ್ಲಿ ಕಳ್ಳರು ಅಂಗಡಿಯ ಶಟರ್ ಮುರಿದು ಒಳನುಗ್ಗಿದ್ದಾರೆ. ಬಳಿಕ ಅಂಗಡಿಯ ಡ್ರಾವರ್ ಹಾಗೂ ಕ್ಯಾಬಿನ್ನಲ್ಲಿದ್ದ ಸುಮಾರು 600 ಗ್ರಾಂ ಬೆಳ್ಳಿಗಟ್ಟಿ (ಅಂದಾಜು ಮೌಲ್ಯ ₹1,44,000) ಹಾಗೂ ₹1,000 ನಗದನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳು ಯಶಸ್ಸಿನ ಪಥದಲ್ಲಿ ಮುನ್ನಡೆಯಲು ಪೋಷಕರು, ಸಕಾರಾತ್ಮಕ ಮನೋಭಾವ ಮತ್ತು ಪ್ರತಿಭೆ ಎಂಬ ಮೂರು ಅಂಶಗಳು ಅತ್ಯಂತ ಮಹತ್ವ ಪಡೆಯುತ್ತವೆ. ದೇಶದ ಪ್ರಗತಿಯಲ್ಲಿ ಯುವಜನತೆಯ ಪಾತ್ರ ಮಹತ್ವಪೂರ್ಣ. ಮಾನವೀಯ ಮೌಲ್ಯಗಳೊಂದಿಗೆ ಹೊಸ ಆಲೋಚನೆಗಳು, ನಿರ್ದಿಷ್ಟ ಗುರಿ ಹಾಗೂ ನವೀನ ಪರಿಹಾರಗಳನ್ನು ರೂಪಿಸುವ ಮನೋಭಾವವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಧಾರವಾಡ ಕರ್ನಾಟಕ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ. ಎ.ಎಂ. ಖಾನ್ ಪದವೀಧರರಿಗೆ ಹೇಳಿದರು. ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ವತಿಯಿಂದ ಆಯೋಜಿಸಲಾದ ‘ಗ್ರಾಜುಯೇಷನ್ ಡೇ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕುಂದಾಪುರ ಎಜುಕೇಶನ್ ಸೊಸೈಟಿಯ ಅಧ್ಯಕ್ಷ ಬಿ.ಎಂ. ಸುಕುಮಾರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ಕೆ. ಉಮೇಶ್ ಶೆಟ್ಟಿ ಆಶಯ ನುಡಿಗಳನ್ನಾಡಿದರು. ಡೀನ್ ಅಕಾಡೆಮಿಕ್ ಗಿರಿರಾಜ್ ಭಟ್ ನೆoಪು ಉಪಸ್ಥಿತರಿದ್ದರು. ಐಕ್ಯೂಎಸಿ ಸಂಯೋಜಕಿ ದೀಪಿಕಾ ಜಿ. ಸ್ವಾಗತಿಸಿ, ಸಹ ಸಂಯೋಜಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಜೀವನದಲ್ಲಿ ನಾನಾ ರೀತಿಯ ಸವಾಲುಗಳು ಬರುವುದು ಸರ್ವೇ ಸಾಮಾನ್ಯ ಆದರೆ ಅದನ್ನು ಮೆಟ್ಟಿ ಮುಂದೆ ಸಾಗುವುದು ಜೀವನದ ಪರಮ ಗುರಿಗಳಲ್ಲೊಂದಾಗಿದೆ ಎಂದು ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅಭಿಪ್ರಾಯಪಟ್ಟಿದ್ದಾರೆ. ಅವರು ಭಾನುವಾರ ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ವಿ-ಶೈನ್ ಕೋಚಿಂಗ್ ಸೆಂಟರ್ ಕೋಟ ಹಾಗೂ ಓಂ ಫ್ರೆಂಡ್ಸ್ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ “ಉದ್ಯೋಗ ಸಂಕಲ್ಪ” ಎಂಬ ವಿಶೇಷ ಅಭಿಯಾನದಡಿ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ಲಿಖಿತ ಪರೀಕ್ಷೆಯ ಉಚಿತ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಪೋಲಿಸ್ ಇಲಾಖೆಯಲ್ಲಿ ಸಾಕಷ್ಟು ಸವಾಲುಗಳು ಬರುತ್ತವೆ ಎಂದರೆ ಅವುಗಳು ನಮ್ಮ ನಿರೀಕ್ಷೆಯನ್ನು ಮೀರಿ ಇರುತ್ತದೆ. ಆ ಸವಾಲುಗಳು ಬಂದಾಗ ತಾಳ್ಮೆ ಸಹನೆ ಸಮಯ ಸಂದರ್ಭಕ್ಕೆ ತಕ್ಕಂತೆ ರೂಡಿಸಿಕೊಂಡಾಗ ಪೆದೆಯಾಗಿ ಸಾರ್ಥಕ್ಯ ಸೇವೆಯನ್ನು ಕಂಡಂತೆ. ಕಾನ್ಸ್ಟೇಬಲ್ ಹುದ್ದೆಯ ಬಗ್ಗೆ ತಾತ್ಸಾರದ ಮನೋಭಾವನೆ ಸಲ್ಲ ಅದರಿಂದ ಹೊರಬಂದು ಹಂತ ಹಂತವಾಗಿ ಇಲಾಖೆಯಲ್ಲಿ ಮೇಲೆತ್ತರಕ್ಕೆ ಏರಲು ಸಾಧ್ಯವಿದೆ. ಉಡುಪಿ ಜಿಲ್ಲೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ವಿದ್ಯಾರ್ಥಿ ದೆಸೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ ತೊಡಗಿಸಿಕೊಂಡರೆ ವ್ಯಕ್ತಿತ್ವ ವಿಕಸನ ನಾಯಕತ್ವ ಗುಣ ಸಹಕಾರ ಭ್ರಾತೃತ್ವ ಮೈಗೂಡಿಸಿಕೊಂಡರೆ ಮುಂದಿನ ಬದುಕು ಸುಮಧುರವಾಗುವುದು ಎಂದು ರೋಟರಿ ಕ್ಲಬ್ ಕುಂದಾಪುರ ಅಧ್ಯಕ್ಷ ನಾಗರಾಜ್ ಶೆಟ್ಟಿ ಹೇಳಿದರು. ಅವರು ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಪದವಿ ಪೂರ್ವ ವಿಭಾಗ, ಗಂಗೊಳ್ಳಿಯ ಜಿ.ಎಸ್.ವಿ.ಎಸ್ ಅಸೋಸಿಯೇಶನ್ ಪ್ರಾಯೋಜಿತ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿದ್ದ ಬೈಂದೂರು ವಲಯದ ಅರಣ್ಯ ಉಪ ವಿಭಾಗಾಧಿಕಾರಿ ಕೆ. ಸದಾಶಿವ ಅವರು, ಪರಿಸರದ ಕಾಳಜಿಯನ್ನು ಬೆಳೆಸಿಕೊಂಡರೆ ಮುಂದಿನ ಭವಿಷ್ಯ ಉತ್ತಮವಾಗಿರುವುದು. ಪರಿಸರದ ನಾಶವನ್ನು ಮಾಡಿದರೆ ಮನಕುಲದ ನಾಶ ಕಂಡಿತ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ವಹಿಸಿದ್ದರು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಕೃಷ್ಣ ಪೂಜಾರಿ ಶುಭಾಶಂಸನೆಗೈದರು. ಕಾಲೇಜಿನ ಸಂಚಾಲಕ ಎನ್. ಸದಾಶಿವ ನಾಯಕ್, ವಿದ್ಯಾರ್ಥಿ ಪ್ರತಿನಿಧಿಗಳಾದ ಪ್ರಾರ್ಥನಾ ಪೈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕತಾರ್: ಕತಾರ್ನಲ್ಲಿರುವ ಭಾರತೀಯ ಸಮುದಾಯದ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವ ಹಾಗೂ ಭಾರತದ ಭವ್ಯ ಪರಂಪರೆಯನ್ನು ಇಲ್ಲಿನ ನೆಲದಲ್ಲಿ ವಿಸ್ತಾರವಾಗಿ ಪಸರಿಸುವ ನಿಟ್ಟಿನಲ್ಲಿ, ಕರ್ನಾಟಕ ಸಂಘ ಕತಾರ್ (ಕೆ ಎಸ್ ಕ್ಯೂ) ನೂತನ ವ್ಯವಸ್ಥಾಪನಾ ಸಮಿತಿಯು ಭಾರತೀಯ ರಾಯಭಾರ ಕಚೇರಿಯ ಉಪ ರಾಯಭಾರಿಗಳಾದ (ಡೆಪ್ಯುಟಿ ಚೀಫ್ ಆಫ್ ಮಿಷನ್) ಮಾನ್ಯ ಸಂದೀಪ್ ಕುಮಾರ್ ಅವರನ್ನು ಭೇಟಿ ಮಾಡಿ ಮಹತ್ವದ ಸಮಾಲೋಚನೆ ನಡೆಸಿತು. ಸಂಘದ ಅಧ್ಯಕ್ಷರಾದ ಮಾನ್ಯ ಸುಬ್ರಮಣ್ಯ ಹೆಬ್ಬಾಗಿಲು ಅವರ ನೇತೃತ್ವದಲ್ಲಿ ನಡೆದ ಈ ಭೇಟಿಯ ಸಂದರ್ಭದಲ್ಲಿ, 2026-28ನೇ ಸಾಲಿನ ನೂತನ ಸಮಿತಿಯು ತನ್ನ ಪದಾಧಿಕಾರಿಗಳನ್ನು ಪರಿಚಯಿಸಿತಲ್ಲದೆ, ಮುಂಬರುವ ಎರಡು ವರ್ಷಗಳ ಅವಧಿಯಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿರುವ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಸಮುದಾಯ ಸಮಾಜಮುಖಿ ಕಾರ್ಯಕ್ರಮಗಳ ಪ್ರಗತಿಪರ ರೂಪುರೇಷೆಗಳನ್ನು ಅಧಿಕಾರಿಗಳ ಮುಂದೆ ಪ್ರಸ್ತುತಪಡಿಸಿತು. ಸಭೆಯಲ್ಲಿ ಕತಾರ್ನಲ್ಲಿರುವ ವಿಶಾಲ ಭಾರತೀಯ ಸಮುದಾಯದ ಕ್ರಿಯಾಶೀಲತೆ ಮತ್ತು ಬೆಳವಣಿಗೆಯನ್ನು ಶ್ಲಾಘಿಸಿದ ಉಪ ರಾಯಭಾರಿ ಮಾನ್ಯ ಶ್ರೀ ಸಂದೀಪ್ ಕುಮಾರ್ ಅವರು, ಸಮುದಾಯದ ಒಟ್ಟಾರೆ ಏಳಿಗೆಗಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೇ.2026 ರಲ್ಲಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಂಟ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಗಳಾದ ಸೃಜನ್ ಜೆ.ಪಿ. 276 ಅಂಕಗಳನ್ನು ಹಾಗೂ ಸಿಂಚನಾ ಸಿ. ಪೂಜಾರಿ 229 ಅಂಕಗಳನ್ನು ಗಳಿಸಿ ತೇರ್ಗಡೆ ಹೊಂದಿ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ವಿವೇಕ್ ಆಳ್ವ ಅವರನ್ನು ನವದೆಹಲಿ ಕೇಂದ್ರ ಕಚೇರಿಯ ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಸಂಸ್ಥೆಯ ಸಾಂಸ್ಕೃತಿಕ ವಿನಿಮಯ ವಿಭಾಗದ ಉಪರಾಷ್ಟ್ರೀಯ ಆಯುಕ್ತರಾಗಿ ನೇಮಕ ಮಾಡಲಾಗಿದೆ. ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತರಾದ ಡಾ ಪಿ.ಜಿ.ಆರ್. ಸಿಂಧಿಯಾ ರವರ ಶಿಫಾರಸಿನ ಮೇರೆಗೆ, ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ನ ಮುಖ್ಯ ರಾಷ್ಟ್ರೀಯ ಆಯುಕ್ತರು ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಡಾ. ಕೆ.ಕೆ. ಖಂಡೇಲ್ವಾಲ್ ಇವರನ್ನು ಸಾಂಸ್ಕೃತಿಕ ವಿನಿಮಯ ವಿಭಾಗದ ಉಪ ರಾಷ್ಟ್ರೀಯ ಆಯುಕ್ತರನ್ನಾಗಿ ನೇಮಕಗೊಳಿಸಿ ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ನೇಮಕಾತಿಯು ಕರ್ನಾಟಕಕ್ಕೆ ಹಾಗೂ ಕರಾವಳಿ ಭಾಗಕ್ಕೆ ಹೆಮ್ಮೆಯ ವಿಷಯವಾಗಿದ್ದು, ರಾಷ್ಟ್ರೀಯ ಮಟ್ಟದಲ್ಲಿ ಯುವಜನರಲ್ಲಿ ಸಾಂಸ್ಕೃತಿಕ ಸಾಮರಸ್ಯ, ರಾಷ್ಟ್ರೀಯ ಏಕತೆ ಹಾಗೂ ಅಂತರರಾಷ್ಟ್ರೀಯ ಸ್ನೇಹ ಸಂಬಂಧಗಳನ್ನು ಬಲಪಡಿಸುವ ಜವಾಬ್ದಾರಿಯನ್ನು ಅವರಿಗೆ ವಹಿಸಲಾಗಿದೆ.ಉಪ ರಾಷ್ಟ್ರೀಯ ಆಯುಕ್ತ (ಸಾಂಸ್ಕೃತಿಕ ವಿನಿಮಯ) ಹುದ್ದೆಯಲ್ಲಿ ವಿವೇಕ್ ಆಳ್ವರು ದೇಶದ ವಿವಿಧ ರಾಜ್ಯಗಳ ನಡುವೆ ಸಾಂಸ್ಕೃತಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟ ಕ್ರಿಯಾಶೀಲ ಸಂಘಟನೆಯಾದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ಕಛೇರಿಯನ್ನು ಕೋಟ ಶಿವರಾಮ ಕಾರಂತ ಹುಟ್ಟಿದ ಮನೆಯ ಕಟ್ಟಡಕ್ಕೆ ಭಾನುವಾರ ಸ್ಥಳಾಂತರಗೊಂಡಿತು. ಕಛೇರಿಯನ್ನು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಮಾಜಿ ಅಧ್ಯಕ್ಷ ಕೆ. ಅನಂತಪದ್ಮನಾಭ ಐತಾಳ್ ಉದ್ಘಾಟಿಸಿದರು. ಪಾಂಡೇಶ್ವರ ರಕ್ತೇಶ್ವರಿ ದೇಗುಲದ ಧರ್ಮದರ್ಶಿ ಕೆ.ವಿ ರಮೇಶ್ ರಾವ್ ದೀಪ ಬೆಳಗಿಸಿ ಶುಭಹಾರೈಸಿದರು. ಸಾಲಿಗ್ರಾಮ ದೇಗುಲದ ಟ್ರಸ್ಟಿ ಕೆ. ತಾರಾನಾಥ ಹೊಳ್ಳ, ಕೋಟತಟ್ಟು ಪಂಚಾಯತ್ ಮಾಜಿ ಅಧ್ಯಕ್ಷ ಸತೀಶ್ ಕುಂದರ್, ಜಿ.ಪಂ ಮಾಜಿ ಸದಸ್ಯ ರಾಘವೇಂದ್ರ ಕಾಂಚನ್, ಸಾಮಾಜಿಕ ಕಾರ್ಯಕರ್ತ ದಿನೇಶ್ ಗಾಣಿಗ, ಸಕಡ್ ಫೌಂಡೇಶನ್ ಪ್ರವರ್ತಕ ಶ್ರೀಕಾಂತ್ ಶೆಣೈ, ಕೋಟ ಜಾಮೀಯಾ ಮಸೀದಿಯ ಅಧ್ಯಕ್ಷ ಬಷೀರ್ ಸಾಹೇಬ್, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ, ಮಾಜಿ ಅಧ್ಯಕ್ಷ ಗಿರೀಶ್ ಆಚಾರ್, ಅಜಿತ್ ಆಚಾರ್, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಸಂಚಾಲಕಿ ಸುಜಾತ ಬಾಯರಿ, ಕಾರ್ಯದರ್ಶಿ ವಸಂತಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ, ಕಾಪು ಮತ್ತು ಬ್ರಹ್ಮಾವರ ತಾಲೂಕಿನ ಎಲ್ಲಾ ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಅರ್ಹ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ಎಸ್.ಎಸ್.ಪಿ ವಿದ್ಯಾರ್ಥಿವೇತನ ಮಂಜೂರಾತಿಗಾಗಿ ಸಂಬಂಧಪಟ್ಟ ಕಾಲೇಜು ಪ್ರಾಂಶುಪಾಲರು ದಾಖಲೆಗಳೊಂದಿಗೆ ನೇರವಾಗಿ ಪರಿಶಿಷ್ಟ ಜಾತಿಯವರು ಇಲಾಖಾ ವೆಬ್ಸೈಟ್ SW.KAR.NIC.IN, ಪರಿಶಿಷ್ಟ ಪಂಗಡದವರು ವೆಬ್ಸೈಟ್ TW.KAR.NIC.INಅಥವಾ http://ssp.postmatric.karnataka.gov.in ಲಿಂಕ್ಗೆ ಲಾಗಿನ್ ಆಗಿ ಸಂಪೂರ್ಣ ಮಾಹಿತಿಯನ್ನು ನೀಡಿ ಕಡ್ಡಾಯವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದ ಪ್ರತಿ ವಿದ್ಯಾರ್ಥಿಗಳು ಬ್ಯಾಂಕ್ ಖಾತೆಗೆ ಆಧಾರ್ ಸೀಡ್ ಹಾಗೂ ಎನ್.ಪಿ.ಸಿ.ಐ ಮ್ಯಾಪಿಂಗ್ ಮಾಡಿಸುವುದು ಕಡ್ಡಾಯವಾಗಿರುತ್ತದೆ ಹಾಗೂ ಪರಿಶಿಷ್ಟ ಪಂಗಡದ ಎಲ್ಲಾ ವಿದ್ಯಾರ್ಥಿಗಳು ಎನ್.ಎಸ್.ಪಿ ಓ.ಟಿ.ಆರ್ ರಿಜಿಸ್ಟರ್ ಮಾಡಿಸುವುದು ಕಡ್ಡಾಯವಾಗಿರುತ್ತದೆ. ಇಲ್ಲವಾದಲ್ಲಿ ಎಸ್.ಎಸ್.ಪಿ ವಿದ್ಯಾರ್ಥಿವೇತನದ ಅರ್ಜಿ ಸಲ್ಲಿಕೆ ಸಂಪೂರ್ಣವಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಮೊ.ನಂ:9480843209 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ…
