Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ವಸತಿ ಹಾಗೂ ಬಹುಮಹಡಿ ವಸತಿ ಸಮುಚ್ಛಯಗಳು ಕೊಳಚೆ ಹಾಗೂ ತ್ಯಾಜ್ಯ ನೀರುಗಳನ್ನು ಶುದ್ದೀಕರಣ ನಿರ್ವಹಣೆ ಮಾಡದೇ ತೋಡುಗಳ ಮೂಲಕ ನದಿಗೆ ಬಿಟ್ಟು ಜಲಮಾಲಿನ್ಯ ಉಂಟುಮಾಡಿದರೆ ಅಂತಹ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಲತ್ಯಾಜ್ಯ ನಿರ್ವಹಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ವಸತಿ ಸಮುಚ್ಛಯಗಳು, ತ್ಯಾಜ್ಯ ನಿರ್ವಹಣಾ ಘಟಕಗಳ ಇರುವಿಕೆ, ಅವುಗಳ ನಿರ್ವಹಣೆ, ತ್ಯಾಜ್ಯ ನಿರ್ವಹಣಾ ಘಟಕ ಇಲ್ಲದೇ ಇರುವುದು, ಕಲುಷಿತ ನೀರುಗಳನ್ನು ವೈಜ್ಞಾನಿಕವಾಗಿ ನಿರ್ವಹಣೆ ಮಾಡದೇ ತೋಡುಗಳಿಗೆ ಬಿಟ್ಟು ಇಂದ್ರಾಳಿ ನದಿ ಮೂಲಗಳಿಗೆ ಬಿಡುವುದರ ಬಗ್ಗೆ ಸವಿಸ್ತಾರವಾದ ಸರ್ವೇ ಕಾರ್ಯಗಳನ್ನು ಎಂ.ಐ.ಟಿ ಸಂಸ್ಥೆಯ ವತಿಯಿಂದ ಕೈಗೊಂಡಿದ್ದು, ಕೆಲವು ವಸತಿ ಹಾಗೂ ಸಮುಚ್ಛಯಗಳು ನೇರವಾಗಿ ನದಿಗೆ ಬಿಡುತ್ತಿರುವ ಬಗ್ಗೆ ಡ್ರೋನ್ ಸರ್ವೇಗಳಲ್ಲಿ ಕಂಡುಬಂದಿದೆ. ಇವುಗಳ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಉಡುಪಿ ನಗರಸಭೆಯ 2025-26ನೇ ಸಾಲಿನ ಎಸ್.ಎಫ್.ಸಿ ಶೇ.5 ರ ವಿಕಲಚೇತನರ ಕಲ್ಯಾಣ ಕಾರ್ಯಕ್ರಮದಡಿ ಅನುದಾನದ ವ್ಯಕ್ತಿ ಸಂಬಂಧಿತ ಕಾರ್ಯಕ್ರಮದಡಿ ಸಣ್ಣ ಉದ್ದಿಮೆಗೆ ಸಹಾಯಧನ ನೀಡುವ ಸಲುವಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನಿಗಧಿತ ಅರ್ಜಿಯೊಂದಿಗೆ ಪೂರಕ ದಾಖಲೆಗಳನ್ನು ಸಲ್ಲಿಸಲು ಮೇ.28 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ -1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗಗಳ ಪಿ.ಯು.ಸಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in/bcwd  ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8050770004 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿನ ಘನ ತ್ಯಾಜ್ಯ ವಸ್ತುಗಳನ್ನು ಮೂಲದಲ್ಲಿಯೇ ವಿವಿಧ ತ್ಯಾಜ್ಯಗಳನ್ನು ವಿಂಗಡಣೆ ಮಾಡಿ, ಸಂಗ್ರಹಣೆ, ಸಾಗಾಣಿಕೆ, ಸಂಸ್ಕರಣೆ ಹಾಗೂ ಅವುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಸಮರ್ಪಕವಾಗಿ ನಿರ್ವಹಣೆ ಮಾಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಘನತ್ಯಾಜ್ಯ ನಿರ್ವಹಣೆ – ನಿಯಮಗಳು 2026 ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ವಿಶೇಷ ಸೆಲ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಘನ ತ್ಯಾಜ್ಯಗಳ ನಿರ್ಲಕ್ಷಿಸುವುದರಿಂದ ಆರ್ಥಿಕತೆ ಅಷ್ಟೇ ಅಲ್ಲದೇ ಆರೋಗ್ಯದ ಮೇಲೆಯೂ ಪರಿಣಾಮ ಬೀರುತ್ತದೆ. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡಾಗ ಮಾತ್ರ ಮನುಷ್ಯ ಉತ್ತಮ ಆರೋಗ್ಯವನ್ನು ಹೊಂದಲು ಸಾಧ್ಯ. ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯಗಳನ್ನು ಮೂಲದಲ್ಲಿಯೇ ನಾಲ್ಕು ವಿಧಧ ತ್ಯಾಜ್ಯಗಳಾದ ಹಸಿ ತ್ಯಾಜ್ಯ, ಒಣ ತ್ಯಾಜ್ಯ, ಸ್ಯಾನಿಟರಿ ತ್ಯಾಜ್ಯ ಹಾಗೂ ಸ್ಪೆಷಲ್ ಕೇರ್ ತ್ಯಾಜ್ಯಗಳ ( ಬಲ್ಬ್ಗಳು, ಬ್ಯಾಟರಿಗಳು, ಅವಧಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಧರ್ಮಸ್ಥಳ ಡಾ. ವಿರೇಂದ್ರ ಹೆಗಡೆ ಅವರ ಮಹತ್ವಾಕಾಂಕ್ಷೆಯ ಕೆರೆ ನವೀಕರಣ ಯೋಜನೆಯ ಮೂಲಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಭರವನ್ನು ನಿಗಿಸಲಿದೆ ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ಗುರುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬ್ರಹ್ಮಾವರ ತಾಲೂಕು, ಗ್ರಾಮ ಪಂಚಾಯತ್ ಕೋಟ ಹಾಗೂ ಮಣೂರು ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನ ಕೆರೆ ಅಭಿವೃದ್ಧಿ ಸಮಿತಿ ಇವುಗಳ ಜಂಟಿ ಆಶ್ರಯದಲ್ಲಿ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಹಾಗೂ ಮಾತೃಶ್ರೀ ಡಾ. ಹೇಮಾವತಿ ವಿ. ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ’ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದಡಿ ಪುನಶ್ಚೇತನಗೊಳಿಸಲಾದ ಮಣೂರು ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆಯ ಹಸ್ತಾಂತರ ಕಾರ್ಯಕ್ರಮದಲ್ಲಿ ಲೋಕಾರ್ಪಣೆಗೊಳಿಸಿ ಮಾತನಾಡಿ\ದರು. ಹಿಂದಿನ ಕಾಲಘಟ್ಟದಲ್ಲಿ ನಮ್ಮ ಹಿರಿಯರು ಕೆರೆಗಳನ್ನು ಸುಸ್ಥಿತಿಯಲ್ಲಿಟ್ಟಿದ್ದರು ಆದರೆ ಇಂದು ಹೆಚ್ಚಿನ ಕೆರೆಗಳು ಅವನತಿಗೆ ತಳ್ಳಲ್ಲಪಟ್ಟಿದೆ ಇಂತಹ ಸಂದರ್ಭಗಳಲ್ಲಿ ಗ್ರಾಮಾಭಿವೃದ್ಧಿ ಯೋಜನೆ ಕೆರೆಗಳ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ (IMJISC) ತರಬೇತಿ ಮತ್ತು ಉದ್ಯೋಗ ಕೋಶವು ಬುಧವಾರ ಆಯೋಜಿಸಿದ್ದ ಕ್ಯಾಂಪಸ್ ನೇಮಕಾತಿ ಅಭಿಯಾನದಲ್ಲಿ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು ಇಂಟರ್ನ್‌ಶಿಪ್ ಸಹಿತ ಉದ್ಯೋಗಾವಕಾಶಗಳಿಗೆ ಆಯ್ಕೆಯಾಗಿದ್ದಾರೆ. ಕ್ಯೂಸ್ಪೈಡರ್ಸ್, ಪ್ರೋಸ್ಪೈಡರ್ಸ್ ಮತ್ತು ಜಿಕ್ಯೂಟಿ ಸಂಸ್ಥೆಗಳ ಸಹಯೋಗದೊಂದಿಗೆ ನಡೆದ ಈ ಅಭಿಯಾನದಲ್ಲಿ ಬಿಸಿಎ, ಬಿಬಿಎ ಮತ್ತು ಬಿ.ಕಾಂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಆಪ್ಟಿಟ್ಯೂಡ್ ಪರೀಕ್ಷೆ, ಗುಂಪು ಚರ್ಚೆ ಮತ್ತು ಮುಖಾಮುಖಿ ಸಂದರ್ಶನ ಸೇರಿದಂತೆ ಮೂರು ಹಂತದ ನೇಮಕಾತಿ ಪ್ರಕ್ರಿಯೆಯ ಮೂಲಕ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಯಿತು.ಶೈಕ್ಷಣಿಕ ಹಂತದ ಆರಂಭದಲ್ಲೇ ವಿದ್ಯಾರ್ಥಿಗಳಿಗೆ ಉದ್ಯಮ ಪರಿಚಯ ಮತ್ತು ಪ್ರಾಯೋಗಿಕ ಅನುಭವ ದೊರಕಿಸುವ ಉದ್ದೇಶದಿಂದ ಈ ಅಭಿಯಾನವನ್ನು ಆಯೋಜಿಸಲಾಗಿತ್ತು. ಇದು ವಿದ್ಯಾರ್ಥಿಗಳ ಅಂತಿಮ ವರ್ಷದ ಉದ್ಯೋಗಾವಕಾಶಗಳಿಗೆ ಪೂರಕವಾಗಲಿದೆ ಎಂದು ತರಬೇತಿ ಮತ್ತು ಉದ್ಯೋಗ ಕೋಶದ ಸಂಯೋಜಕರು ತಿಳಿಸಿದ್ದಾರೆ. ಆಯ್ಕೆಯಾದ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಅಧ್ಯಾಪಕ ವೃಂದ ಅಭಿನಂದಿಸಿದೆ. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ತರಬೇತಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಾಲಾಡಿ ಜಮದಗ್ನಿ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಥಮ ವರ್ಷದ ವರ್ಧಂತಿ ಉತ್ಸವವು ಸೋಮವಾರದಂದು  ವಿಜೃಂಭಣೆಯಿಂದ ಸಂಪನ್ನಗೊಂಡಿತು. ಬೆಳಿಗ್ಗೆ 9.00 ರಿಂದ ಜ್ಯೋತಿಷ್ಯ ವಿದ್ವಾನ್  ತಟ್ಟುವಟ್ಟು ವಾಸುದೇವ ಜೋಯಿಸರ ನೇತೃತ್ವದಲ್ಲಿ 24 ಪರಿಕಲಸ ಸಹಿತ ಪ್ರಧಾನ ಬ್ರಹ್ಮ ಕುಂಭಾಭಿಷೇಕ, ಕಲಾತತ್ವಪೂರ್ವಕ ಪ್ರಧಾನ ಅಧಿವಾಸ ಹೋಮ, ಶ್ರೀ ನಾಗದೇವರಿಗೆ ನವಕ ಪ್ರಧಾನ ಹೋಮ ನಡೆಯಿತು. ಮಧ್ಯಾಹ್ನ 12.00 ರಿಂದ ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ, 12.30 ರಿಂದ ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ 6.00 ರಿಂದ ರಂಗಪೂಜೆ ಮತ್ತು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿ ಹಾಲಾಡಿ ಮತ್ತು ಶ್ರೀ ಮಹಾ ವಿಷ್ಣುಮೂರ್ತಿ ಭಜನಾ ಮಂಡಳಿ ಗೋರಾಜೆ ಇವರಿಂದ ಭಜನಾ ಕಾರ್ಯಕ್ರಮ ಹಾಗೂ ಶ್ರೀ ಸ್ವಾಮಿ ಚಂಡೆ ಬಳಗ ಹಾಲಾಡಿ ಇವರಿಂದ ಚಂಡೆ ವಾದನ ನಡೆಯಿತು. ನಂತರ ಮಹಾ ಮಂಗಳಾರತಿ, ತೀರ್ಥಪ್ರಸಾದ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಭಾಸ್ಕರ ಅಡಿಗ, ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು ಸೇರಿದಂತೆ ಸಮಿತಿಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಮಂಗಳೂರು ವಿವಿ ಕ್ಯಾಂಪಸ್‌ನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯದ ಅಂತರ ಕಾಲೇಜು ಮಹಿಳೆಯರ ತ್ರೋಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿಯರು ಅದ್ಭುತ ಪ್ರದರ್ಶನ ನೀಡಿ 21ನೇ ಬಾರಿ ಚಾಂಪಿಯನ್ ಕಿರೀಟವನ್ನು ಮುಡಿಗೇರಿಸಿಕೊಂಡು, ಪೂರ್ಣಪ್ರಜ್ಞಾ ರೋಲಿಂಗ್ ಟ್ರೋಪಿಯನ್ನು ತನ್ನದಾಗಿಸಿಕೊಂಡರು.     ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮಡಂತ್ಯಾರ್‌ನ ಸೇಕ್ರೆಡ್ ಹಾರ್ಟ್ ಕಾಲೇಜಿನ ತಂಡವನ್ನು ಆಳ್ವಾಸ್ ತಂಡವು 25-10 ಹಾಗೂ 25-12 ಅಂಕಗಳ ನೇರ ಸೆಟ್‌ನಲ್ಲಿ ಮಣಿಸಿತು. ಸೆಮಿಫೈನಲ್‌ನಲ್ಲಿ ಹಂಪನಕಟ್ಟೆಯ ವಿಶ್ವವಿದ್ಯಾಲಯ ಕಾಲೇಜಿನ ವಿರುದ್ಧ 25-18 ಹಾಗೂ 25-12 ಅಂಕಗಳ ಅಂತರದಲ್ಲಿ ಭರ್ಜರಿ ಜಯ ಸಾಧಿಸಿತು. ಅಂತಿಮ ಫೈನಲ್ ಹಣಾಹಣಿಯಲ್ಲಿ ಮಂಗಳೂರು ವಿಶ್ವವಿದ್ಯಾಲಯ ಕ್ಯಾಂಪಸ್ ತಂಡವನ್ನು 25-18 ಮತ್ತು 25-16 ಅಂಕಗಳ ನೇರ ಸೆಟ್‌ನಿಂದ ಸೋಲಿಸಿ ಆಳ್ವಾಸ್ ಚಾಂಪಿಯನ್‌ಶಿಫ್ ಕಿರೀಟವನ್ನು 18ನೇ ಬಾರಿ ತನ್ನದಾಗಿಸಿಕೊಂಡಿತು. ವಿಜೇತ ತಂಡವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಅಂಪಾರು ಗ್ರಾಮದ ಬಲಾಡಿ ಕಲ್‌ತ್ತೋಡ್ಮಿ ಮನೆ ಕುಟುಂಬಸ್ಥರು ವರ್ತೆ ಪಂಜುರ್ಲಿ ಹಾಗೂ ಸಪರಿವಾರ ದೈವಸ್ಥಾನಗಳಿಗೆ ಮೂರನೇ ವರ್ಷದ ವರ್ಧಂತ್ಯೋತ್ಸವ ಪ್ರಯುಕ್ತ ಶ್ರೀ ಪಂಜುರ್ಲಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಗೋಳಿಗರಡಿ ಇವರಿಂದ ಯಕ್ಷಗಾನ ಪ್ರದರ್ಶನವನ್ನು ಆಯೋಜಿಸಿದರು. ಈ ಸಂದರ್ಭ ಯಕ್ಷರಂಗದಲ್ಲಿ ಸುದೀರ್ಘ 50 ವರ್ಷಕ್ಕೂ ಮೇಲ್ಪಟ್ಟು ಕಲಾ ಸೇವೆಗೈದ ಹಿರಿಯ ಯಕ್ಷಗಾನ ಕಲಾವಿದರಾದ ಜಮದಗ್ನಿ ಶೀನ ನಾಯ್ಕ ಹಾಗೂ ಬೇಲ್ತೂರು ರಮೇಶ್ ಅವರನ್ನು ಸನ್ಮಾನಿಸಲಾಯಿತು. ಬಲಾಡಿಯ ಶ್ರೀ ಸ್ವಾಮಿಲಿಂಗೇಶ್ವರ ದೇವಸ್ಥಾನದ ಆಡಳಿತ ಮುಕ್ತೇಸರರಾದ ಪ್ರಭಾಕರ ಶೆಟ್ಟಿ, ಮೇಳದ ಯಜಮಾನರಾದ ವಿಠಲ ಪೂಜಾರಿ, ವರ್ತೆ ಪಂಜುರ್ಲಿ ದೈವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಶಂಕರ ಎಸ್ ಕಾಂಚನ್, ಸದಸ್ಯರಾದ ಕೇಶವ ಕಾಂಚನ್, ಮಂಜುನಾಥ ಗುಡ್ರಿ, ವಿಜಯ್ ಕಾಂಚನ್, ರಾಘವೇಂದ್ರ ನೆಂಪು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಸನ್ಮಾನಿತರನ್ನು ಪರಿಚಯಿಸಿ, ಕಾರ್ಯಕ್ರಮ ನಿರ್ವಹಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ನೂತನ ಶಿಲಾದೇಗುಲ ಲೋಕಾರ್ಪಣೆ, ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮ ಕುಂಭಾಭಿಷೇಕ ಕಾರ್ಯಕ್ರಮವು ಇತೀಚಿಗೆ ನಡೆಯಿತು. ಮೇ.13ರ ಸಂಜೆ ಪರಿವಾರ ದೈವಗಳ ಪ್ರತಿಷ್ಠಾಪನೆ, 6.00 ರಿಂದ ಭಜನಾ ಕಾರ್ಯಕ್ರಮ, ರಾತ್ರಿ 8.00 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು  ವಹಿಸಿಕೊಂಡ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದ ದಿನಕರ ತೋಳಾರ್  ಮಾತನಾಡಿ, ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನವು ಅತಿ ಪುರಾತನ ದೇವಸ್ಥಾನವಾಗಿದ್ದು, ರಸ್ತೆಯ ವಿಸ್ತರಣೆಯಿಂದ ರಸ್ತೆಯ ಪಕ್ಕಕ್ಕೆ ಬಂದಿರುವುದರಿಂದ ದಾನಿಗಳ ನೆರವಿನಿಂದ ನೂತನ ಶಿಲಾ ದೇಗುಲ ನಿರ್ಮಾಣ ಮಾಡಲಾಗಿದೆ. ಈ ಕಾರ್ಯಕ್ಕೆ ಭಕ್ತಾಧಿಗಳು ಕೈ ಜೋಡಿಸಿದ ಕಾರಣ ಆಕರ್ಷಕ ದೇವಸ್ಥಾನ ನಿರ್ಮಾಣವಾಗಿದೆ ಎಂದರು. ಅವಧಾನಿ ಗುಂಡಿಬೈಲು ಸುಬ್ರಮಣ್ಯ ಭಟ್ ಧಾರ್ಮಿಕ ಉಪನ್ಯಾಸಗೈದರು. ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಧರ್ಮದರ್ಶಿ ಸಚ್ಚಿದಾನಂದ ಚಾತ್ರರು ಹಿಂದೆ ದೇವಸ್ಥಾನದಲ್ಲಿ ಪೂಜೆ ಪುನಸ್ಕಾರಗಳು, ಅನ್ನದಾನ ನಡೆಸುವುದು ಕಷ್ಟಕರವಾಗಿದ್ದು, ಇಂದು ಭಕ್ತಾದಿಗಳ…

Read More