Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ತಗ್ಗರ್ಸೆಯ ಶ್ರೀ ಬ್ರಹ್ಮದೇವರ ವಠಾರದ ಶ್ರೀ ನಾಗಬನದಲ್ಲಿ ಜರುಗುವ 37ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವದ ಉತ್ಸವ ಸಮಿತಿಯ ಅಧ್ಯಕ್ಷರಾಗಿ ಸೋಮಶೇಖರ್ ಆಚಾರ್ಯ ಹಾಗೂ ಕಾರ್ಯದರ್ಶಿಯಾಗಿ ನಾಗರಾಜ್ ಚಂದನ್ ಆಯ್ಕೆಯಾಗಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಕಲ್ಪನಾಶಕ್ತಿ ಮತ್ತು ಪರಿಣಾಮಕಾರಿ ಸಂವಹನ ಕೌಶಲ್ಯವನ್ನು ಬೆಳೆಸುವ ಉದ್ದೇಶದಿಂದ ಸುಜ್ಞಾನ ನ್ಯಾಷನಲ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಇತ್ತೀಚೆಗೆ ‘Add-Venture’ ಜಾಹೀರಾತು ಸ್ಪರ್ಧೆಯನ್ನು ಆಯೋಜಿಸಲಾಯಿತು. “Where Ideas Turn to Impact” ಎಂಬ ಆಶಯದೊಂದಿಗೆ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾದ ಸುಜ್ಞಾನ ಪಿಯು ಕಾಲೇಜಿನ ಪ್ರಾಂಶುಪಾಲರಾದ ರಂಜನ್ ಬಿ. ಶೆಟ್ಟಿ ಮಾತನಾಡಿ, “ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕ ಜ್ಞಾನಕ್ಕೆ ಸೀಮಿತಗೊಳ್ಳದೆ, ನೂತನ ಆಲೋಚನೆಗಳನ್ನು ಮೈಗೂಡಿಸಿಕೊಂಡು ಅವುಗಳನ್ನು ಸಮಾಜದ ಮುಂದೆ ಪರಿಣಾಮಕಾರಿಯಾಗಿ ಪ್ರಸ್ತುತಪಡಿಸುವ ಕೌಶಲ್ಯವನ್ನು ರೂಢಿಸಿಕೊಳ್ಳಬೇಕು” ಎಂದು ಹೇಳಿದರು. ತೀರ್ಪುಗಾರರಾಗಿ ಆಗಮಿಸಿದ್ದ ಕುಂದಾಪುರದ ಸುಜ್ಞಾನ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರಮಥ್ ಶೆಟ್ಟಿ ಮಾತನಾಡಿ, “ಜಾಹೀರಾತು ಎಂದರೆ ಕೇವಲ ಉತ್ಪನ್ನದ ಪರಿಚಯವಲ್ಲ, ಅದೊಂದು ಉತ್ತಮ ಆಲೋಚನೆಯನ್ನು ಜನರ ಮನಸ್ಸಿಗೆ ತಲುಪಿಸುವ ಕಲೆ” ಎಂದು ಅಭಿಪ್ರಾಯಪಟ್ಟರು. ಮತ್ತೋರ್ವ ತೀರ್ಪುಗಾರರಾದ ವಾಣಿಜ್ಯ ವಿಭಾಗದ ಉಪನ್ಯಾಸಕಿ ಪೂಜಾ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಉಡುಪಿ ಜಿಲ್ಲಾ ರಾಮಕ್ಷತ್ರಿಯ ಒಕ್ಕೂಟದ ಉದ್ಘಾಟನೆ ಮತ್ತು ನೂತನ ಪದಾಧಿಕಾರಿಗಳ ಪದ ಪ್ರದಾನ ಸ್ವೀಕಾರ ಸಮಾರಂಭವು ಅ.11ರ ಭಾನುವಾರ ಬೆಳಗ್ಗೆ 9.30ಕ್ಕೆ ಬೈಂದೂರಿನ ಯಡ್ತರೆಯ ಜೆಎನ್‌ಆರ್‌ ಕಲಾ ಮಂದಿರದಲ್ಲಿ ಜರುಗಲಿದೆ. ಉಡುಪಿ ಜಿಲ್ಲೆಯ ಕೋಟೆಗಾರ ಮತ್ತು ರಾಮಕ್ಷತ್ರಿಯ ಸಮಾಜದ ಸದಸ್ಯರನ್ನು ಒಂದೇ ವೇದಿಕೆಯಡಿ ಒಗ್ಗೂಡಿಸುವ ಒಂದು ಉಪಕ್ರಮವಾಗಿ ಉಡುಪಿ ಜಿಲ್ಲಾ ರಾಮಕ್ಷತ್ರಿಯ ಒಕ್ಕೂಟವನ್ನು ರಚಿಸಲಾಗುತ್ತಿದೆ. ಬಲಿಷ್ಠ, ಸಮೃದ್ಧ ಮತ್ತು ಸುಸ್ಥಿರ ಭವಿಷ್ಯದ ದೃಷ್ಟಿಕೋನದೊಂದಿಗೆ ಸ್ಥಾಪಿತವಾಗಿರುವ ಈ ಒಕ್ಕೂಟವು, ಸಮಾಜದ ಒಳಿತಿಗಾಗಿ ಸಮುದಾಯದ ಎಲ್ಲಾ ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ಸಂಯೋಜಿಸುವ ಗುರಿಯನ್ನು ಹೊಂದಿದೆ. ಕಾರ್ಯಕ್ರಮವನ್ನು ಮಾಜಿ ಸಚಿವರಾದ ಜೆ. ಕೃಷ್ಣ ಪಾಲೆಮಾರ್‌ ಉದ್ಘಾಟಿಸಲಿದ್ದಾರೆ. ಕರ್ನಾಟಕ ಕೋಟೆಗಾರ ಸಂಘದ ಅಧ್ಯಕ್ಷ ನಾಡೋಜ ಡಾ. ಕೊಡ್ಲು ಕೃಷ್ಣಪ್ರಸಾದ್‌ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ರಾಮಕ್ಷತ್ರಿಯ ಒಕ್ಕೂಟದ ಚುನಾಯಿತ ಅಧ್ಯಕ್ಷ ಕೊತ್ವಾಲ್‌ ಪದ್ಮನಾಭ ಶೇರುಗಾರ್‌ ಗಂಗೊಳ್ಳಿ ಉಪಸ್ಥಿತರಿರಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಶ್ವ ರಾಮಕ್ಷತ್ರಿಯ ಮಹಾ ಸಂಘದ ಅಧ್ಯಕ್ಷ ಶಶಿಧರ್‌ ನಾಯ್ಕ್‌, ಉತ್ತರ ಕನ್ನಡ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಸಕ್ಷಮಾ–ಆಳ್ವಾಸ್ ಮಹಿಳಾ ಸಂಘ ಹಾಗೂ ಆಳ್ವಾಸ್ ಹೋಮಿಯೋಪಥಿ ಮೆಡಿಕಲ್ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಲಾಗಿದ್ದ 15 ದಿನಗಳ ‘ಆರಿ ಲಹರಿ’– ಸ್ವಾವಲಂಬನೆಯತ್ತ ಮೊದಲ ಹೆಜ್ಜೆ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಮಂಗಳವಾರ ಮಿಜಾರ್‌ನ ಆಳ್ವಾಸ್ ಹೋಮಿಯೋಪಥಿ ಮೆಡಿಕಲ್ ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ನಡೆಯಿತು. ಉಜಿರೆಯ ರುಡ್‌ಸೆಟಿ ಅಧ್ಯಾಪಕ ಅಬ್ರಹಾಂ ಜೇಮ್ಸ್ ಪಿ.ವಿ. ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ನಾವು ಕಲಿಯುವ ಪ್ರತಿಯೊಂದು ಕೌಶಲ್ಯವೂ ಬದುಕಿನಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಉಪಯೋಗಕ್ಕೆ ಬರುತ್ತದೆ. ಕಲಿತ ಕೌಶಲ್ಯವನ್ನು ಕೇವಲ ಪ್ರಮಾಣಪತ್ರಕ್ಕೆ ಸೀಮಿತಗೊಳಿಸದೆ, ಅದನ್ನು ಆದಾಯದ ಮೂಲವನ್ನಾಗಿ ಪರಿವರ್ತಿಸಿಕೊಳ್ಳಬೇಕು. ನಿರಂತರ ಅಭ್ಯಾಸ, ಆತ್ಮವಿಶ್ವಾಸ ಹಾಗೂ ಪರಿಶ್ರಮದ ಮೂಲಕ ಮಹಿಳೆಯರು ತಮ್ಮದೇ ಆದ ಉದ್ಯೋಗದ ಅವಕಾಶಗಳನ್ನು ಸೃಷ್ಟಿಸಿಕೊಳ್ಳಬಹುದು ಎಂದರು. ಭಾರತ್ ಇನ್‌ಫ್ರಾಟೆಕ್‌ನ ಆಡಳಿತ ನಿರ್ದೇಶಕ ಮೊಹಮ್ಮದ್ ಮುಸ್ತಫಾ ಮಾತನಾಡಿ, ಕೌಶಲ್ಯ ತರಬೇತಿ ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುವುದರ ಜೊತೆಗೆ ಸ್ವಾವಲಂಬನೆಯ ದಾರಿಯನ್ನು ತೆರೆಯುತ್ತದೆ. ಕಸೂತಿ ಕೌಶಲ್ಯಕ್ಕೆ ಸ್ಥಳೀಯವಾಗಿ ಉತ್ತಮ ಅವಕಾಶಗಳಿದ್ದು, ಕಲಿತ ಜ್ಞಾನವನ್ನು ಸಣ್ಣ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸರಕಾರ ಹಿರಿಯ ನಾಗರಿಕರ ಸುರಕ್ಷತೆ, ಘನತೆ ಮತ್ತು ಉತ್ಪಾದಕ ಜೀವನ ನಡೆಸಲು ಹಿರಿಯ ನಾಗರಿಕರ ಕಲ್ಯಾಣಕ್ಕಾಗಿ ಕಾಯಿದೆ ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇದನ್ನು ಸಮರ್ಪಕವಾಗಿ ಅಧಿಕಾರಿಗಳು ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪಾಲಕರ ಪೋಷಣೆ, ಸಂರಕ್ಷಣೆ ಮತ್ತು ಹಿರಿಯ ನಾಗರಿಕರ ರಕ್ಷಣಾ ಕಾಯಿದೆ 2007 ರಡಿ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿರಿಯ ನಾಗರಿಕರ ನಿರ್ವಹಣೆ ಹಾಗೂ ರಕ್ಷಣೆ ಕಾಯ್ದೆಯನ್ವಯ ಹಿರಿಯ ನಾಗರಿಕರ ಮಕ್ಕಳು, ಹಿರಿಯ ನಾಗರಿಕರನ್ನು ನಿರ್ಲಕ್ಷಿಸುವುದು, ತ್ಯಜಿಸುವುದು ಕಂಡುಬಂದಲ್ಲಿ ಅಂತಹ ಮಕ್ಕಳು ಹಾಗೂ ಪೋಷಕರಿಗೆ ಮೂರು ತಿಂಗಳ ಜೈಲು ವಾಸ ಹಾಗೂ 5,000 ದಂಡ ವಿಧಿಸಲು ಅವಕಾಶವಿದೆ ಎಂದ ಅವರು, ಪಾಲನೆ ಪೋಷಣೆಗೆ ಅರ್ಜಿಗಳು ಹಾಗೂ ಆಸ್ತಿ ಸಂರಕ್ಷಣೆ ಅರ್ಜಿಗಳು ನ್ಯಾಯಾಧೀಕರಣದ ಮುಂದೆ ಬಂದಾಗ ಸಕಾಲದಲ್ಲಿ ನ್ಯಾಯ ಸಮ್ಮತವಾಗಿ ವಿಲೇವಾರಿ ಮಾಡಿ, ನ್ಯಾಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕಟ್ಕೇರೆ ಸಮೀಪ ಕಾಳಾವರ ನಿವಾಸಿ ಪುರೋಹಿತ ನಾಗರಾಜ ನಾವುಡ (45) ಅವರು ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶ್ರದ್ಧೆಯಿಂದ ಪೌರೋಹಿತ್ಯ ವೃತ್ತಿಯನ್ನು ಮಾಡುತ್ತಾ, ಎಲ್ಲರ ವಿಶ್ವಾಸಕ್ಕೆ ಭಾಜನರಾಗಿದ್ದ ನಾವುಡರು ಯಕ್ಷಗಾನದ ಬಗ್ಗೆ ಅಪಾರವಾದ ಒಲವುಳ್ಳವರಾಗಿದ್ದರು. ತನ್ನ ಸಂಪಾದನೆಯ ಬಹುಭಾಗವನ್ನು ಕಲೆ ಕಲಾವಿದರಿಗಾಗಿ ವಿನಿಯೋಗಿಸುತ್ತಾ ಬಂದ ನಾವುಡರು ತಂದೆ, ತಾಯಿ, ಪತ್ನಿ, ಪುತ್ರಿಯನ್ನು ಅಗಲಿದ್ದಾರೆ. ಯಕ್ಷಗಾನ ಕಲಾರಂಗದ ಆಜೀವ ಸದಸ್ಯರಾಗಿದ್ದ ಇವರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಮಕ್ಕಳ ಹಾಗೂ ಗರ್ಭಿಣಿಯರ ಆರೋಗ್ಯ ರಕ್ಷಣೆ, ರಕ್ತಹೀನತೆ ತಡೆಗಟ್ಟುವುದು ಮತ್ತು ಪೌಷ್ಟಿಕ ಆಹಾರದ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹೊಸಬೇಂಗ್ರೆ ಅಂಗನವಾಡಿ ಕೇಂದ್ರದಲ್ಲಿ ಕೇಂದ್ರ ಸರಕಾರದ ಪೋಷಣ್ ಅಭಿಯಾನ ಮತ್ತು ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಸೋಮವಾರ ಆಯೋಜಿಸಲಾಯಿತು.  ಮುಖ್ಯ ಅಭ್ಯಾಗತರಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಡುಪಿ ಜಿಲ್ಲಾ ಉಪನಿರ್ದೇಶಕರಾದ ಪ್ರೇಮಮೂರ್ತಿ ಮಾತನಾಡಿ, ಕೇಂದ್ರ ಸರ್ಕಾರದ ಪೋಷಣ್ ಅಭಿಯಾನ ಯೋಜನೆಯು ತಾಯಿ ಮತ್ತು ಮಗುವಿನ ಆರೋಗ್ಯವನ್ನು ಉತ್ತಮಪಡಿಸುವ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳ ಅಪೌಷ್ಟಿಕತೆ ಮತ್ತು ರಕ್ತಹೀನತೆ ತಡೆಗಟ್ಟಲು ಮನೆಯಲ್ಲಿಯೇ ವಹಿಸಬೇಕಾದ ಕಾಳಜಿಗಳ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಬೇಕು ಎಂದು ಕರೆ ನೀಡಿದರು. ಜಿಲ್ಲಾ ನಿರೂಪಣಾಧಿಕಾರಿ ಅನುರಾಧ ಹಾದಿಮನಿ ಅವರು ಪೋಷಣ್ ಅಭಿಯಾನದ ವಿವರ ನೀಡಿ, ಸೀಮಂತ, ಅನ್ನಪ್ರಾಶನ ಮುಂತಾದ ಸಾಂಪ್ರದಾಯಿಕ ಆಚರಣೆಗಳ ಮೂಲಕ ಜಾಗೃತಿ ತಲುಪಿಸುವ ಕಾರ್ಯವನ್ನು ಶ್ಲಾಘಿಸಿದರು. ಗ್ರಾಮ ಪಂಚಾಯತ್ ಪಿಡಿಒ ರವೀಂದ್ರರಾವ್ ಮಾತನಾಡಿ, ಗ್ರಾಮಸ್ಥರು ಪೌಷ್ಟಿಕ ಆಹಾರ, ಶುದ್ಧ ಕುಡಿಯುವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತ್ರಾಸಿಯಲ್ಲಿ ನಡೆದ ರಾಪಿಡ್ ಚೆಸ್ ಟೂರ್ನಮೆಂಟ್‌ನಲ್ಲಿ ಇತಿಹಾಸಿನಿ ಪಡುಕೋಣೆ ಪ್ರಥಮ ಸ್ಥಾನ ಗಳಿಸಿದ್ದಾಳೆ. ಅವಳು ಪಡುಕೋಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಸಂಭವಿಸುವ ಪ್ರತಿಯೊಂದು ಜನನ ಮತ್ತು ಮರಣದ ವಿವರಗಳನ್ನು ಯಾವುದೇ ತಪ್ಪುಗಳಿಗೆ ಆಸ್ಪದ ನೀಡದಂತೆ ನಿಖರವಾಗಿ ಮಾಹಿತಿ ದಾಖಲು ಮಾಡುವಂತೆ ನೋಂದಣಿ ಪ್ರಾಧಿಕಾರದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜನನ ಮರಣ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನನ ಮತ್ತು ಮರಣ ನೋಂದಣಿಯು ಭವಿಷ್ಯದ ಕೆಲಸ ಕಾರ್ಯಗಳಿಗೆ ಇವುಗಳ ಪ್ರಮಾಣಪತ್ರವು ಅವಶ್ಯವಿದ್ದು, ಇದನ್ನು ಮನಗಂಡು ನೋಂದಣಿಯನ್ನು ಕಡ್ಡಾಯವಾಗಿ ಮಾಡಿಸಬೇಕು. ಜನನ ಮತ್ತು ಮರಣದ ವಿವರಗಳನ್ನು ದಾಖಲು ಮಾಡುವ ಕಾರ್ಯವನ್ನು ನೋಂದಣಾಧಿಕಾರಿಗಳು ಎಚ್ಚರಿಕೆಯಿಂದ ಜವಾಬ್ದಾರಿಯುತವಾಗಿ ತಪ್ಪುಗಳು ಆಗದಂತೆ ನೋಡಿಕೊಳ್ಳಬೇಕು. ನೋಂದಣಿ ಸಮಯದಲ್ಲಿ ತಂದೆ-ತಾಯಿಯರ ಹೆಸರು ಲಿಂಗ ತಪ್ಪು ನಮೂದು, ಬದಲು, ಸ್ಥಳ ಮಹಜರು ಮಾಡದೇ ಮರಣ ಪ್ರಮಾಣಪತ್ರ ಸೃಜನೆ, ನೋಂದಣಿ ಘಟಕದ ವ್ಯಾಪ್ತಿ ಮೀರಿ ನೋಂದಣಿ, ಮೂಲ ದಾಖಲೆಗಳನ್ನು ಪರಿಶೀಲಿಸದೇ ಘಟನೆಗಳ ಹೆಸರು, ದಿನಾಂಕ ಮತ್ತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿವರ್ಷ ನಡೆಸಲ್ಪಡುವ ಕನ್ನಡ ರಾಜ್ಯೋತ್ಸವ ಸದ್ಭಾವನಾ 2026ರ ನಾಡುನುಡಿಗೆ ಭಾವ ನಮನ ಕಾರ್ಯಕ್ರಮ ಇದೇ ಬರುವ ನವೆಂಬರ್ 06ರಂದು ಶುಕ್ರವಾರ ಸಂಜೆ ಕೋಟದ ಮಾಂಗಲ್ಯಮಂದಿರದ ಎದುರಿನ ಮೈದಾನದಲ್ಲಿ ಜರಗಲಿದೆ. ಈ ಪ್ರಯುಕ್ತ ರಾಜ್ಯದ ಪ್ರಸಿದ್ಧ ಸಾಧಕರಿಗೆ ಪಂಚವರ್ಣ ರಾಜ್ಯೋತ್ಸವ ಗೌರವ ಪ್ರದಾನ ಕಾರ್ಯಕ್ರಮ ಜರಗಲಿದ್ದು ಕನ್ನಡ ನಾಡುಕಂಡ ಶ್ರೇಷ್ಠ ಸಮಾಜ ಸುಧಾರಕ ಡಾ.ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ನಾಡೋಜ ಡಾ.ಜಿ ಶಂಕರ್ ಇವರಿಗೆ ಪಂಚವರ್ಣ ರಾಜ್ಯೋತ್ಸವ ಗೌರವ ಗಣ್ಯರ ಸಮ್ಮುಖದಲ್ಲಿ ಪ್ರದಾನಿಸಲಿದೆ.ಉದ್ಯಮ ಕ್ಷೇತ್ರದ ಸಾಧಕ ಕಂಡ್ಲೂರು ಕೆ.ಎನ್ ಶ್ರೀನಿವಾಸ ಜೋಗಿ ಬೆಂಗಳೂರು ಇವರಿಗೆ ವಿಶೇಷ ಪುರಸ್ಕಾರ, ಅಂತಾರಾಷ್ಟ್ರೀಯ ಕರಾಟೆಪಟು ವಿಜಯ ಪೂಜಾರಿ ಹರ್ತಟ್ಟು ಇವರಿಗೆ ವಿಶೇಷ ಅಭಿನಂದನೆ ಕಾರ್ಯಕ್ರಮಗಳು ನಡೆಯಲಿದೆ ಎಂದು ಪಂಚವರ್ಣ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಅಧ್ಯಕ್ಷ ಮನೋಹರ್ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More