ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಗಂಗೊಳ್ಳಿ ಪೊಲೀಸ್ ಠಾಣೆಯು ಇಡೀ ರಾಜ್ಯದಲ್ಲಿ 7ನೇ ಅತ್ಯುತ್ತಮ ಠಾಣೆಯಾಗಿ ಹೊರಹೊಮ್ಮಿರುವ ಬಗ್ಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಅವರು ಪೊಲೀಸ್ ಠಾಣೆಯ ಠಾಣಾಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಗೌರವನ್ನು ಸಮರ್ಪಿಸಿದರು. ಬಳಿಕ ಮಾತನಾಡಿದ ಶಾಸಕರು ಕಳೆದ 10 ವರ್ಷಗಳ ಅವಧಿಯಲ್ಲಿ ರಾಜ್ಯದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ರಾಜ್ಯದ 10 ಠಾಣೆಗಳ ಪೈಕಿ ಬೈಂದೂರು ವಿಧಾನಸಭಾ ಕ್ಷೇತ್ರದ ಗಂಗೊಳ್ಳಿ ಪೊಲೀಸ್ ಠಾಣೆಯು ಅಪರಾಧಗಳ ಪತ್ತೆ ಹಚ್ಚುವಿಕೆ, ಸಾರ್ವಜನಿಕರೊಂದಿಗೆ ಸಂಪರ್ಕ, ಜನಸ್ನೇಹಿ ಪೊಲೀಸಿಂಗ್, ಮಾದಕ ದ್ರವ್ಯ ತಡೆ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನ ಸಂಬಂಧ ಇಡೀ ರಾಜ್ಯದಲ್ಲಿಯೇ 7ನೇ ಸ್ಥಾನ ಪಡೆದಿರುವುದು ಸಂತೋಷದ ವಿಚಾರ. ಈ ನಿಟ್ಟಿನಲ್ಲಿ ಈ ಸಾಧನೆಗಾಗಿ ದುಡಿದ ಈ ಹಿಂದಿನ ಠಾಣಾಧಿಕಾರಿಗಳು ಸೇರಿದಂತೆ ಎಲ್ಲಾ ಸಿಬ್ಬಂದಿ ವರ್ಗದವರಿಗೆ ಅಭಿನಂದನೆಗಳು. ಗಂಗೊಳ್ಳಿ ಠಾಣೆಯ ಕಾರ್ಯ ವೈಖರಿಯು ಕ್ಷೇತ್ರದ ಹಾಗೂ ಜಿಲ್ಲೆಯ ಇತರ ಠಾಣೆಗಳಿಗೂ ಮಾದರಿಯಾಗಲಿ, ಎಂದು ಶಾಸಕರು ಇದೇ ಸಂದರ್ಭದಲ್ಲಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು,ಅ.28: ಇಲ್ಲಿನ ಪೀಣ್ಯದ ಎಚ್ಎಂಟಿ ಲೇಔಟ್ನಲ್ಲಿರುವ ‘ರಥನ್ ಬೇಕರಿ’ಯಲ್ಲಿ ಮಂಗಳವಾರ ರಾತ್ರಿ ಪುಡಿರೌಡಿಗಳು ದಾಂದಲೆ ನಡೆಸಿ, ಬೇಕರಿ ಸಿಬ್ಬಂದಿ ಹಾಗೂ ಮಹಿಳಾ ಮಾಲೀಕರ ಮೇಲೆ ದೌರ್ಜನ್ಯ ಎಸಗಿರುವ ಘಟನೆ ನಡೆದಿದೆ. ಬೇಕರಿಗೆ ತೆರಳಿದ ಮಹೇಶ್ ಹಾಗೂ ರಜತ್ ಎಂಬ ಪುಂಡರು, ಅಲ್ಲಿ ಟೀ ಮತ್ತು ಕಾಫಿ ಕುಡಿದಿದ್ದಾರೆ. ಬಳಿಕ ಬೇಕರಿ ಸಿಬ್ಬಂದಿ ಬಿಲ್ ಪಾವತಿಸುವಂತೆ ಕೇಳಿದಾಗ, ಒಮ್ಮೆಲೇ ಕೆರಳಿ ಅಸಭ್ಯ ಶಬ್ದಗಳಿಂದ ನಿಂದಿಸಲು ಪ್ರಾರಂಭಿಸಿದ್ದಾರೆ. “ನಾನು ಜೈಲಿಗೆ ಹೋಗಿ ಬಂದವನು ಗೊತ್ತಾ? ದೊಡ್ಡ ರೌಡಿ ನಾನು, ನನ್ನ ಹತ್ತಿರವೇ ದುಡ್ಡು ಕೇಳ್ತಿಯಾ?” ಎಂದು ಅಹಂಕಾರದ ಮಾತುಗಳನ್ನಾಡುತ್ತಾ ಅಂಗಡಿಯಲ್ಲಿದ್ದವರ ಮೇಲೆ ಅಟ್ಯಾಕ್ ಮಾಡಲು ಮುಂದಾಗಿದ್ದಾರೆ. ಬೇಕರಿ ಆವರಣದಲ್ಲಿದ್ದ ಗಾಜಿನ ಬಾಟಲಿಗಳನ್ನು ಎತ್ತಿ ನೆಲಕ್ಕೆ ಅಪ್ಪಳಿಸಿ ಪುಡಿಪುಡಿ ಮಾಡಿ ಸೃಷ್ಟಿಸಿದ ಆತಂಕ ಸಣ್ಣದಾಗಿರಲಿಲ್ಲ. ಅಷ್ಟೇ ಅಲ್ಲದೆ, “ಇನ್ಮುಂದೆ ನಾನು ಮಾತ್ರವಲ್ಲ, ನಮ್ಮ ಹುಡುಗರು ಬಂದರೂ ಸರಿ, ಯಾರ ಹತ್ತಿರವೂ ದುಡ್ಡು ಕೇಳುವಂತಿಲ್ಲ! ಎಲ್ಲರಿಗೂ ಫ್ರೀಯಾಗಿ ಟೀ, ಕಾಫಿ ಕೊಡಬೇಕು” ಎಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಕ್ಷೇತ್ರದ ಮುದೂರು ಗ್ರಾಮದ ಉದಯ ನಗರ ಶಶಿಧರ ಕೊರಗ ಅವರ ಮನೆಯಲ್ಲಿ ಆ ಭಾಗದ ಕೊರಗ ಸಮುದಾಯದ ಬಂಧುಗಳು ಹಾಗೂ ಪ್ರಮುಖರ ಜೊತೆ ಸಂವಾದ ನಡೆಸಿದರು. ಹಾಗೂ ಕೊರಗ ಬಂಧುಗಳ ದೈನಂದಿನ ಜೀವನದ ಬಗ್ಗೆ ಉಭಯ ಕುಶಲೋಪರಿ ನಡೆಸಿದರು. ಆ ಭಾಗದಲ್ಲಿ ಸುಮಾರು 60 ಮನೆಗಳು ಹಕ್ಕು ಪತ್ರ ಪಡೆಯುವಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ, ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಬಾರದೇ ಇರುವುದು ಹಾಗೂ ರೇಷನ್ ಕಾರ್ಡ್ ಸಮಸ್ಯೆಗಳ ಬಗ್ಗೆ ಅರಿತುಕೊಂಡು ತಕ್ಷಣ ಫೋನ್ ಮೂಲಕ ಅಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಕ್ರಮ ವಹಿಸಲು ಸೂಚನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಶಾಸಕರ ಜೊತೆಗೆ ಬೈಂದೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಮಂಡಲ ಅಧ್ಯಕ್ಷರಾದ ಅನಿತಾ ಆರ್.ಕೆ., ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲ ಪೂಜಾರಿ, ಪರಿಶಿಷ್ಟ ಪಂಗಡ ಮೋರ್ಚಾ ಅಧ್ಯಕ್ಷರಾದ ನಕ್ಷತ್ರ ನಾಯಕ್ ಹಾಗೂ ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನ ‘ಕನ್ನಡ ರಾಜ್ಯೋತ್ಸವ’ ಸಮಾರಂಭದಲ್ಲಿ ನವೆಂಬರ್ 1 ರಂದು ನೀಡಲಾಗುತ್ತಿರುವ ‘ಡಾ. ಹೆಚ್. ಶಾಂತಾರಾಮ ಯಕ್ಷಗಾನ ಪುರಸ್ಕಾರʼಕ್ಕೆ ಖ್ಯಾತ ಯಕ್ಷಗಾನ ಕಲಾವಿದ ಮಹಾಬಲೇಶ್ವರ ಭಟ್ ಕ್ಯಾದಗಿ ಆಯ್ಕೆಯಾಗಿದ್ದಾರೆ. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಕಾಡಗಿಯವರಾದ ಇವರು ಯಕ್ಷಗಾನದಲ್ಲಿ ಹಾಸ್ಯ ಪಾತ್ರಗಳಲ್ಲಿ ಹೆಚ್ಚು ಮಿಂಚಿದವರು. ಹಾಸ್ಯ ಹಾಗೂ ಸ್ತ್ರೀ ಪಾತ್ರಗಳಲ್ಲೂ ಮೆಚ್ಚುಗೆ ಪಡೆದಿದ್ದಾರೆ. ಹಾಲಾಡಿ, ಸಾಲಿಗ್ರಾಮ, ಪೆರ್ಡೂರು ಮೇಳಗಳ ಕಲಾವಿದರಾಗಿ ತಿರುಗಾಟ ನಡೆಸಿದ್ದಾರೆ. ನಾಟಕ ರಂಗದಲ್ಲೂ, ರಂಗ ತಿರುಗಾಟ ನಡೆಸಿದ್ದಾರೆ. ದೂರದರ್ಶನ ಚಾನೆಲ್ಗಳ ಕಾರ್ಯಕ್ರಮಗಳಲ್ಲಿ ಗುರುತಿಸಿಕೊಂಡಿದ್ದಾರೆ. ಧಾರಾವಾಹಿ, ಚಲನಚಿತ್ರಗಳಲ್ಲೂ ಅಭಿನಯಿಸಿದ್ದಾರೆ. ಯಕ್ಷಗಾನ ಕ್ಷೇತ್ರಕ್ಕೆ ಇವರ ಕೊಡುಗೆ ಮಹತ್ವವಾದುದು. ನವೆಂಬರ್ 1ರಂದು ಮಧ್ಯಾಹ್ನ 2:00ರಿಂದ ನಡೆಯಲಿರುವ ರಾಜ್ಯೋತ್ಸವ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮದಲ್ಲಿ ಕಾಲೇಜಿನ ಆರ್. ಎನ್. ಶೆಟ್ಟಿ ಸಭಾಂಗಣದಲ್ಲಿ ಇಂದ್ರಾಳಿ ಯಕ್ಷಗಾನ ಕೇಂದ್ರದ ವತಿಯಿಂದ “ಶ್ರೀನಿವಾಸ ಕಲ್ಯಾಣ” ಎಂಬ ಯಕ್ಷಗಾನ ಪ್ರಸಂಗ ನಡೆಯಲಿದೆ. ನಂತರ ಸಭಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಕಾಲೇಜಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಅಂಪಾರು ಸಂಜಯ ಗಾಂಧಿ ಇಂಗ್ಲಿಷ್ ಮೀಡಿಯಂ ಶಾಲೆ ಹಾಗೂ ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ ರಿ. ಅಂಪಾರು ಇದರ ವತಿಯಿಂದ ಆಯೋಜಿಸಲಾದ ‘ಸಂಜಯ ಸಿಂಚನ – ಮೌಲ್ಯಮಾಲಿಕೆ 3’ ಕಾರ್ಯಕ್ರಮ ನಡೆಯಿತು. ಮೌಲ್ಯ ಸಾರಥಿಯಾಗಿ ಭಾಗವಹಿಸಿದ ರಂಜನಾ ಪ್ರಭು ಅವರು ವಿದ್ಯಾರ್ಥಿಗಳಿಗೆ ಜೀವನಮೌಲ್ಯಗಳ ಮಹತ್ವವನ್ನು ತಿಳಿಸಿ, ಮಾತನಾಡಿ, ಪೋಷಕರನ್ನು ಗೌರವಿಸುವುದು, ಅವರನ್ನು ಪ್ರೀತಿಯಿಂದ ಕಾಣುವುದು, ಅವರ ಮಾತುಗಳಿಗೆ ಕಿವಿಗೊಡುವುದು ಹಾಗೂ ನಮ್ಮ ಮಾತುಗಳಿಂದಾಗಲಿ, ನಡವಳಿಕೆಯಿಂದಾಗಲಿ ಅವರಿಗೆ ನೋವುಂಟು ಮಾಡದಿರುವುದು ಪ್ರತಿಯೊಬ್ಬ ಮಕ್ಕಳ ಕರ್ತವ್ಯವಾಗಿದೆ ಎಂದು ತಿಳಿಸಿದರು. ತಮ್ಮ ಜೀವನದ ಅನುಭವಗಳನ್ನು ಹಾಗೂ ವಿವಿಧ ಕಥೆಗಳನ್ನು ಹಂಚಿಕೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ಜೀವನದ ಅಮೂಲ್ಯ ಪಾಠಗಳನ್ನು ಮನಮುಟ್ಟುವಂತೆ ತಿಳಿಸಿದರು. ಅವರ ಬದುಕಿನ ಪಯಣವೇ ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕ ಪಾಠವಾಗಿ ಮೂಡಿಬಂತು. ಭಯ, ಭಕ್ತಿ ಹಾಗೂ ಆಸ್ತಿಕ ಮನೋಭಾವಗಳು ನಮ್ಮನ್ನು ಸರಿಯಾದ ಮಾರ್ಗದಲ್ಲಿ ಮುನ್ನಡೆಸುತ್ತವೆ. ತಪ್ಪುಗಳನ್ನು ಮಾಡದಂತೆ ಎಚ್ಚರಿಸುತ್ತವೆ. ಇಂತಹ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಯಶಸ್ಸಿನ ಹಾದಿ ಸುಗಮವಾಗುತ್ತದೆ ಎಂಬ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಭಾರತೀಯ ಚುನಾವಣಾ ಆಯೋಗದ ಮೂಲಕ ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ- 2026 (ಎಸ್ಐಆರ್) ಪ್ರಕ್ರಿಯೆಯ ಮುಕ್ತಾಯಗೊಂಡು ಇಂದು ಪ್ರಕಟಗೊಂಡ ಅಂತಿಮ ಮತದಾರರ ಪಟ್ಟಿಯಂತೆ ಉಡುಪಿ ಜಿಲ್ಲೆಯಲ್ಲಿ ಒಟ್ಟು10,14,143 ಮಂದಿ ಮತದಾರರಿದ್ದಾರೆ ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದರು ಅವರು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಜೂನ್ ತಿಂಗಳಿನಿಂದ ನಡೆದ ಎಸ್ಐಆರ್ ಪ್ರಕ್ರಿಯೆಯ ಸಂಪೂರ್ಣ ಮಾಹಿತಿಯನ್ನು ನೀಡಿದ್ದು, ಒಟ್ಟಾರೆಯಾಗಿ ಉಡುಪಿ ಜಿಲ್ಲೆಯಲ್ಲಿ 49,733 ಮತದಾರರು ಕಡಿಮೆಯಾಗಿದ್ದಾರೆ ಎಂದು ತಿಳಿಸಿದರು. ಎಸ್ಐಆರ್ ಪ್ರಕ್ರಿಯೆಯ ಕೊನೆಯಲ್ಲಿ ಅತ್ಯಂತ ಕಡಿಮೆ ಮತದಾರರ ಇಳಿಕೆ ಕಂಡುಬಂದ ಜಿಲ್ಲೆಯಲ್ಲಿ ಉಡುಪಿ ಜಿಲ್ಲೆ ಅತ್ಯಂತ ಕನಿಷ್ಠ ಇಳಿಕೆಯ ಮೂಲಕ ಅಗ್ರಸ್ಥಾನದಲ್ಲಿದೆ. ಇಲ್ಲಿ ಒಟ್ಟಾರೆ ಮತದಾರರ ಪೈಕಿ ಶೇ. 4.67ರಷ್ಟು ಮತದಾರರು ಮಾತ್ರ ಅನರ್ಹರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಶೇ. 6.95 ಇಳಿಕೆಯೊಂದಿಗೆ ಎರಡನೇ ಹಾಗೂ ಉತ್ತರ ಕನ್ನಡ ಜಿಲ್ಲೆ ಶೇ. 7.35 ಇಳಿಕೆಯೊಂದಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಹಣಕಾಸಿನ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯೊಂದು ಕ್ರಿಮಿನಲ್ ಹಿನ್ನಲೆಯುಳ್ಳ ವ್ಯಕ್ತಿಯೊಬ್ಬನ ಹತ್ಯೆಯಲ್ಲಿ ಅಂತ್ಯಗೊಂಡ ಬೈಕಾಡಿ ಸರ್ಕಲ್ ಬಳಿ ಮಂಗಳವಾರ ರಾತ್ರಿ ನಡೆದಿದೆ. ಹತ್ಯೆಯಾದ ವ್ಯಕ್ತಿಯನ್ನು ಮೂಲತಃ ಕಲ್ಯಾಣಪುರದವ, ಪ್ರಸ್ತುತ ಬೈಕಾಡಿಯಲ್ಲಿ ನೆಲೆಸಿದ್ದ ಸುಜಿತ್ ಪಿಂಟೋ (43) ಎಂದು ಗುರುತಿಸಲಾಗಿದೆ. ರೌಡಿಶೀಟರ್ ಸುಜಿತ್ ಪಿಂಟೊ ರಿಕ್ಷಾ ಚಾಲಕ ಪ್ರಮೋದ್ ಗೆ ಹಣ ನೀಡಲು ಬಾಕಿ ಇದ್ದುಇದೇ ಕಾರಣಕ್ಕೆ ಪ್ರಮೋದ್ ಸುಜಿತ್ ಪಿಂಟೋನನ್ನು ತಾನು ಇರುವ ಸ್ಥಳಕ್ಕೆ ಬರುವಂತೆ ಕರೆದಿದ್ದನು. ಅದರಂತೆ ಸುಜಿತ್ ಪಿಂಟೊ ಅಲ್ಲಿಗೆ ಹೋಗಿದ್ದು ಇಬ್ಬರು ಮದ್ಯದ ಅಮಲಿನಲ್ಲಿ ಹೊಡೆದಾಟ ಮಾಡಿಕೊಂಡಿದ್ದರೆನ್ನಲಾಗಿದೆ. ಈ ವೇಳೆ ಸಿಟ್ಟಿಗೆದ್ದ ಪ್ರಮೋದ್ ಕಬ್ಬಿಣದ ರಾಡಿನಿಂದ ಸುಜಿತ್ ಪಿಂಟೊನ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ. ರೌಡಿಶೀಟರ್ ಸುಜಿತ್ ಪಿಂಟೊ 2018ರಲ್ಲಿ ಮಣಿಪಾಲದಲ್ಲಿ ನಡೆದ ಕ್ಲಬ್ ಮಾಲಕ ಗುರುಪ್ರಸಾದ್ ಭಟ್ ಕೊಲೆ ಪ್ರಕರಣ, ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕನಿಡಿಯೂರು ಲಕ್ಷ್ಮಿನಗರದಲ್ಲಿ 2020ರಲ್ಲಿ ನಡೆದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ಸೆಟ್) ಸಂಸ್ಥೆ ಬ್ರಹ್ಮಾವರ ವತಿಯಿಂದ ಬ್ಯೂಟಿ ಪಾರ್ಲರ್ ತರಬೇತಿ ಉದ್ಘಾಟನೆ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮುಖ್ಯ ಅತಿಥಿಯಾಗಿ ಆಗಮಿಸಿದ ತೆಕ್ಕಟ್ಟೆ ಹನಿ ಬ್ಯೂಟಿ ಪಾರ್ಲರ್ ಮಾಲಕರಾದ ಪ್ರೇಮ ಮಂಜುನಾಥ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಮಾತನಾಡಿ, ಮಹಿಳೆಯರಿಗೆ ಬಹಳ ಪ್ರಿಯವಾದ ಹಾಗೂ ಆಸಕ್ತಿಯ ಕ್ಷೇತ್ರವೆಂದರೆ ಅದು ಬ್ಯೂಟಿ ಪಾರ್ಲರ್ ನಿರ್ವಹಣೆ ಎಂದು ಹೇಳಬಹುದು ಹಾಗಾಗಿ ಆಸಕ್ತಿಯ ಕ್ಷೇತ್ರವನ್ನೇ ಉದ್ಯಮವನ್ನಾಗಿ ಪರಿವರ್ತಿಸಿಕೊಂಡಲ್ಲಿ ಆರ್ಥಿಕ ಸಬಲೀಕರಣವಾಗುವುದರಲ್ಲಿ ಸಂದೇಹವಿಲ್ಲ. ಅವಕಾಶಗಳನ್ನು ಸರಿಯಾಗಿ ಬಳಸಿಕೊಂಡಲ್ಲಿ ನಾವೆಲ್ಲರೂ ಸ್ವಾವಲಂಬಿ ಬದುಕಿನತ್ತ ಹೆಜ್ಜೆ ಹಾಕಬಹುದು. ಈಗಿನ ಪ್ರಸ್ತುತ ಸಮಾಜದಲ್ಲಿ ಯಾವುದೇ ಡಿಗ್ರಿಗಳಿಗಿಂತ ಕೌಶಲ್ಯಾಧಾರಿತ ಕೆಲಸಗಳಿಗೆ ಹೆಚ್ಚಿನ ಆದ್ಯತೆ ಇರುವುದನ್ನು ನಾವು ಕಾಣುತ್ತೇವೆ. ಹಾಗಾಗಿ ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಒಂದು ಹೆಜ್ಜೆ ಮುಂದೆ ಇಟ್ಟಿದ್ದೀರಿ. ತರಬೇತಿಯನ್ನು ಪರಿಪೂರ್ಣವಾಗಿ ಪಡೆದುಕೊಂಡು ಆರ್ಥಿಕವಾಗಿ ಸಬಲತೆಯನ್ನು ಹೊಂದಿ ಎಂದು ಶುಭ ಹಾರೈಸಿದರು. ಇನ್ನೋರ್ವ ಅತಿಥಿಯಾದ ಕುಂಭಾಶಿ ಗ್ರಾಮ ಪಂಚಾಯತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸರಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಿಗಳು ಯಥಾವತ್ತಾಗಿ ಅನುಷ್ಠಾನ ಮಾಡಬೇಕು. ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ಸಮಸ್ಯೆಗಳು ಎದುರಾದಾಗ ಅದನ್ನು ಗಂಭೀರವಾಗಿ ಪರಿಗಣಿಸುವುದರೊಂದಿಗೆ ಗ್ಯಾರಂಟಿ ಯೋಜನೆಯಿಂದ ಅರ್ಹರು ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯದ ಜನಸಾಮಾನ್ಯರ ಜೀವನಮಟ್ಟ ಸುಧಾರಣೆಗೆ ರಾಜ್ಯ ಸರ್ಕಾರವು ಜಾರಿಗೆ ತಂದ ಪಂಚ ಗ್ಯಾರಂಟಿ ಯೋಜನೆಗಳು ಸಹಕಾರವಾಗಿವೆ. ಈ ಯೋಜನೆಗಳು ಜಾರಿಗೆ ಬಂದ ಬಳಿಕ ಸಾವಿರಾರು ಕುಟುಂಬಗಳಿಗೆ ಅನುಕೂಲ ಮಾಡಿಕೊಟ್ಟಿವೆ ಎಂದರು. ಶಕ್ತಿ ಯೋಜನೆಯಡಿ ಅರ್ಹ ಮಹಿಳಾ ಪ್ರಯಾಣಿಕರುಗಳಿಗೆ ಯೋಜನೆಯ ಸೌಲಭ್ಯ ದೊರಕುವಂತೆ ಮಾಡಬೇಕು. ಪಡುಬಿದ್ರೆ-ನಿಟ್ಟೆ ಹಾಗೂ ಪಳ್ಳಿ-ಬೆಳ್ವೆ ಮಾರ್ಗದ ಸಾರಿಗೆಗಳು ಸಮಯ ಬದಲಾವಣೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗ್ರಾಮೀಣ ಪ್ರದೇಶದ ಪ್ರತಿಭಾವಂತ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಬಾರ್ಕೂರು ಎಜುಕೇಶನ್ ಸೊಸೈಟಿ ರಿ. ಮತ್ತು ಕುಂದಾಪುರದ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಜಂಟಿ ಆಶ್ರಯದಲ್ಲಿ ನವೆಂಬರ್ 1ರಂದು ಬಾರ್ಕೂರಿನ ಸುಜ್ಞಾನ ನ್ಯಾಷನಲ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿವೇತನ ಪರೀಕ್ಷೆ ಆಯೋಜಿಸಲಾಗಿದೆ. ಈ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸುಜ್ಞಾನ ಎಜುಕೇಶನಲ್ ಟ್ರಸ್ಟ್ನ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಗ್ರಾಮೀಣ ವಿದ್ಯಾರ್ಥಿಗಳಿಗೆ ಸ್ಥಳೀಯವಾಗಿಯೇ ಗುಣಮಟ್ಟದ ಪಿಯು ಶಿಕ್ಷಣದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಒದಗಿಸುವುದು ಸಂಸ್ಥೆಯ ಉದ್ದೇಶವಾಗಿದೆ. ಕಳೆದ ಶೈಕ್ಷಣಿಕ ವರ್ಷದಲ್ಲಿ ಪ್ರಥಮ ಪಿಯುಸಿಗೆ ದಾಖಲಾದ 100 ವಿದ್ಯಾರ್ಥಿಗಳಲ್ಲಿ 45 ಮಂದಿಗೆ ಒಟ್ಟು ₹9.40 ಲಕ್ಷ ವಿದ್ಯಾರ್ಥಿವೇತನ ನೀಡಲಾಗಿದೆ. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್, ಜೆಇಇ ಹಾಗೂ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಸಿಎ, ಸಿಎಸ್ ತರಬೇತಿ ನೀಡುವ ವ್ಯವಸ್ಥೆಯಿದೆ ಎಂದು ತಿಳಿಸಿದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ನ ಕೋಶಾಧಿಕಾರಿ ಭರತ್ ಶೆಟ್ಟಿ ಮಾತನಾಡಿ,…
