Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಾಂಸ್ಕೃತಿಕ ವಿಶ್ವ ಮನ್ನಣೆ ಪಡೆಯಲು ರಾಜ್ಯದ ಎಲ್ಲಾ ಭಾಗವು ತನ್ನದೇ ಆದ  ಕೊಡುಗೆಯನ್ನು ನೀಡಿದೆ. ಕರಾವಳಿ ಕರ್ನಾಟಕದಲ್ಲಿ ಯಕ್ಷಗಾನವು ಶಾಸ್ರ್ತೀಯ ಶಿಸ್ತು ಮತ್ತು ಜಾನಪದ ಸ್ವಾತಂತ್ರ್ಯದಿಂದ ಜನಮನ್ನಣೆಯನ್ನು ಪಡೆದಿದೆ. ಚೌಕಟ್ಟು ಮೀರಿದರೂ ಸರಿ ತಪ್ಪು ಹೇಳುವ ಕೋರ್ಟು ಸೃಷ್ಟಿಯಾಗಿಲ್ಲ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಮಾಜಿ ಅಧ್ಯಕ್ಷ ಎಂ.ಎಲ್.ಸಾಮಗ ಹೇಳಿದ್ದಾರೆ. ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೈಸೂರು ವಿಭಾಗ ಹಾಗೂ ಉಡುಪಿ ಜಿಲ್ಲೆ ವತಿಯಿಂದ ಕುಂಜಿಬೆಟ್ಟು ಶಾರದಾ ರೆಸಿಡೆನ್ಸಿಯಲ್ ಸ್ಕೂಲಿನ ಸಭಾಂಗಣದಲ್ಲಿ ಬುಧವಾರ ನಡೆದ ಸಾಧಕರೊಂದಿಗೆ ಸಂವಾದದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಶಾಸ್ರ್ತೀಯ ಕಲಾವಿದರಿಗೆ ಪಂಚ ತಾರಾ ಆತಿಥ್ಯ, ಯಕ್ಷಗಾನ/ಜನಪದ ಕಲಾವಿದರಿಗೆ ಕಲ್ಯಾಣ ಮಂಟಪದಲ್ಲಿ ಉಳಿದುಕೊಳ್ಳಬಹುದಾದ ವ್ಯವಸ್ಥೆಯ ತಾರತಮ್ಯ ಸಲ್ಲದು. ಯಕ್ಷಗಾನ ಗಂಡಸರಿಗೆ ಸೀಮಿತವಾದ ಕಲೆಯಲ್ಲ, ಎಲ್ಲರಿಗೂ ಸೇರಿದ ಕಲೆ. ಸಾಹಿತ್ಯ ಕಾರ್ಯಕ್ರಮದಲ್ಲಿ ತೊಡಗುವಿಕೆ ಸಂತೋಷ ನೀಡುತ್ತದೆ. ಬದುಕಿನಲ್ಲಿ  ಉತ್ತಮ ಕಲಾವಿದರಾಗಲು ಅನುಭವ ವಿಸ್ತಾರ, ವೀಕ್ಷಣೆಯ ಕುತೂಹಲ ಬಹುಮುಖ್ಯ ಎಂದರು. ತಮ್ಮ ಸುದೀರ್ಘ ಅರವತ್ತು ವರ್ಷದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಅಂಚೆ ಕಚೇರಿಯ ಬ್ಯಾಂಕ್ ಆದ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB), ಉಡುಪಿ ಶಾಖೆಯು ಜಿಲ್ಲೆಯ ಜನರಿಗೆ ಅಗತ್ಯ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸಲು ಕಮಿಷನ್ ಆಧಾರಿತ ವೈಯಕ್ತಿಕ ಬಿಸಿನೆಸ್ ಕರೆಸ್ಪಾಂಡೆಂಟ್‌ಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಉಡುಪಿ ಶಾಖೆಯಲ್ಲಿ ಒಟ್ಟು 30 ಹುದ್ದೆಗಳು ಲಭ್ಯವಿದ್ದು, ಜಿಲ್ಲೆಯ ಆಸಕ್ತರು, ನಿವೃತ್ತ ನೌಕರರು, ಸಾಮಾನ್ಯ ಸೇವಾ ಕೇಂದ್ರಗಳ ನಿರ್ವಾಹಕರು ಅಥವಾ ಇತರ ವ್ಯಾಪಾರ ಸಂಸ್ಥೆಗಳು ಮತ್ತು ಉದ್ಯಮಗಳನ್ನು ನಡೆಸುತ್ತಿರುವ 18 ರಿಂದ 70 ವರ್ಷದೊಳಗಿನ, ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಇದು ಕಮಿಷನ್ ಆಧಾರಿತ ಕೆಲಸವಾಗಿದ್ದು, ನಿಗದಿತ ಮಾಸಿಕ ವೇತನ ಇರುವ ಉದ್ಯೋಗವಲ್ಲ. ಅಭ್ಯರ್ಥಿಗಳು ಒದಗಿಸುವ ಬ್ಯಾಂಕಿಂಗ್ ಸೇವೆಗಳು ಮತ್ತು ನಡೆಸುವ ವಹಿವಾಟುಗಳ ಆಧಾರದ ಮೇಲೆ ಕಮಿಷನ್ ಪಡೆಯಲಿದ್ದಾರೆ. ಅರ್ಜಿ ಸಲ್ಲಿಸಲು ಡಿಸೆಂಬರ್ 5 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್, ಉಡುಪಿ ಶಾಖೆ ದೂ.ಸಂಖ್ಯೆ: 0820-2522005, ಮೊ.ನಂ: 7899971688…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಶ್ರೀ ವೆಂಕಟೇಶ ಕೃಪಾ ಟ್ರೇಡರ್ಸ್ ಇವರು ಹಮ್ಮಿಕೊಂಡಿದ್ದ ದೀಪಾವಳಿ ಧಮಾಕ 2026ರ ಸಮಾರೋಪ ಸಮಾರಂಭವು ಇಲ್ಲಿನ ಶಾರದ ಮಂಟಪದಲ್ಲಿ ಇತ್ತೀಚೆಗೆ ನಡೆಯಿತು. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಮಾತನಾಡಿ, ಇಂದಿನ ಈ ಸ್ಪರ್ಧಾತ್ಮಕ ಯುಗದಲ್ಲಿ ಗ್ರಾಹಕರ ಜೊತೆಗಿನ ಬಾಂಧವ್ಯ ವೃದ್ಧಿ ಬಹಳ ಅಗತ್ಯವಾದದು. ಅದರ ಜೊತೆಯಲ್ಲಿಯೇ ವ್ಯವಹಾರಸ್ಥರು ವೈಯಕ್ತಿಕವಾಗಿ ಉತ್ತಮ ನಡೆ-ನುಡಿಗಳನ್ನು ಅಳವಡಿಸಿಕೊಂಡಾಗ ಅದು ಸಂಸ್ಥೆಗೆ ಹೆಚ್ಚಿನ ಮೌಲ್ಯವನ್ನು ತಂದುಕೊಡುತ್ತದೆ. ಅಂತಹ ಕಾರ್ಯವನ್ನು ವೆಂಕಟೇಶ್ ಕೃಪಾ ಟ್ರೇಡರ್ಸ್ ನವರು ಮಾಡುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು. ಗಂಗೊಳ್ಳಿಯ ಹಿರಿಯ ಕಲಾವಿದರಾದ ಜಿ. ಪಾಂಡುರಂಗ ಮಡಿವಾಳ ಕಾರ್ಯಕ್ರಮಕ್ಕೆ ಶುಭ ಕೋರಿದರು. ಸಾನ್ವಿ ಏಜೇನ್ಸಿಸ್ ಮಾಲಕ ಪ್ರಶಾಂತ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಭಾಸ್ಕರ ಶೆಣೈ ಮತ್ತು ಜಯಶ್ರೀ ಶೆಣೈ ದಂಪತಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಗಂಗೊಳ್ಳಿಯಲ್ಲಿ ತುರ್ತು ಚಿಕಿತ್ಸಾ ವಾಹನಗಳ ಚಾಲಕರುಗಳಾದ ಸಚಿನ್ ಖಾರ್ವಿ ಮತ್ತು  ಮಹಮ್ಮದ್ ಹಬೀಬಿ ತಾಶಮ್ ರನ್ನು ಸನ್ಮಾನಿಸಲಾಯಿತು. ವಿವಿಧ ಕ್ರೀಡೆಗಳಲ್ಲಿ  ಸಾಧನೆಗೈದ ವಿದ್ಯಾರ್ಥಿಗಳನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವು ಶುಕ್ರವಾರ ಕಾಲೇಜಿನ ಕ್ರೀಡಾಂಗಣದಲ್ಲಿ ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ನೆರವೇರಿತು. ಕ್ರೀಡಾ ಜ್ಯೋತಿ ಬೆಳಗಿಸುವುದರೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಆಲೂರು ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ವೀರೇಂದ್ರ ಜೋಗಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ನಿರಂತರ ಪರಿಶ್ರಮ ಮತ್ತು ಸಾಧನೆಯ ಮನೋಭಾವದೊಂದಿಗೆ ಮುನ್ನಡೆಯಬೇಕು. ಭವಿಷ್ಯದಲ್ಲಿ ಒಲಿಂಪಿಕ್ಸ್‌ನಂತಹ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ದೇಶಕ್ಕೆ ಕೀರ್ತಿ ತರುವ ಅವಕಾಶ ವಿದ್ಯಾರ್ಥಿಗಳಿಗೆ ದೊರೆಯಲಿ ಎಂದು ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ವೆಂಕಟರಮಣ ಎಜುಕೇಶನಲ್ & ಕಲ್ಚರಲ್ ಟ್ರಸ್ಟ್‌ನ ಕಾರ್ಯದರ್ಶಿಗಳಾದ ಕೆ. ರಾಧಾಕೃಷ್ಣ ಶೆಣೈ ಅವರು ವಹಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕ್ರೀಡೆಯು ಕೇವಲ ಗೆಲುವು-ಸೋಲಿನ ಸ್ಪರ್ಧೆಯಲ್ಲ; ಅದು ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಧೈರ್ಯದಿಂದ ಎದುರಿಸುವ ಮನೋಬಲವನ್ನು ಬೆಳೆಸುವ ಪ್ರಮುಖ ವೇದಿಕೆಯಾಗಿದೆ ಎಂದು ಪ್ರೇರಣಾದಾಯಕ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜೇಯ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತವಾಗಿ ಗುಪ್ತವಾಗಿ ಪ್ರತಿಭೆಯನ್ನು ಹೊರತರುವುದೇ ಶಿಕ್ಷಣದ ಮೂಲ ಉದ್ದೇಶ ಎಂದು ಗಂಗೊಳ್ಳಿ ಕ್ಲಸ್ಟರ್ ಸಿಆರ್‌ಪಿ ಮಹೇಶ್ ವಕ್ವಾಡಿ ಹೇಳಿದರು. ಅವರು ಗಂಗೊಳ್ಳಿಯ ಜಿ.ಎಸ್.ವಿ.ಎಸ್. ಅಸೋಸಿಯೇಶನ್ ಪ್ರಾಯೋಜಿತ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವತಿಯಿಂದ ಕಾಲೇಜಿನ ನೆಕ್ಸೋರ ಎಸ್.ವಿ. ಸೈನ್ಸ್ ಕ್ಲಬ್ ಸಹಯೋಗದೊಂದಿಗೆ ಹೈಸ್ಕೂಲು ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಗಂಗೊಳ್ಳಿ ಕ್ಲಸ್ಟರ್ ಮಟ್ಟದ ಇಂಟರ್ ಸ್ಕೂಲ್ ಸೈನ್ಸ್ ಕಾಂಪಿಟೇಶನ್ ’ಇಗ್ನೋವೇಟ್’ ನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. ತಂತ್ರಜ್ಞಾನ, ಕೃತಕ ಬುದ್ಧಿಮತ್ತೆಯ ಈ ಯುಗದಲ್ಲಿ ತಮ್ಮ ಬದುಕನ್ನು ರೂಪಿಸಿಕೊಳ್ಳುವ ಯುವ ಪೀಳಿಗೆ ಉತ್ತಮ ರೀತಿಯಲ್ಲಿ ಆವಿಷ್ಕಾರದ ರೀತಿಯಲ್ಲಿ ಹೊಸ ಹೊಸ ಯೋಜನೆ, ಚಿಂತನೆ ಮಾಡಿಕೊಂಡಾಗ, ಸಂಶೋಧನಾ ಪ್ರವೃತ್ತಿ ಬಂದಾಗ, ಅವರಲ್ಲಿರುವ ಜ್ಞಾನ ಪ್ರಕಟವಾದಾಗ ಜಗತ್ತಿಗೆ ಹೊಸ ನಾವಿನ್ಯತೆಯನ್ನು, ಕಲ್ಪನೆಯನ್ನು ಕಟ್ಟಿಕೊಳ್ಳಬಹುದು. ಹೊಸ ಹೊಸ ಕಾರ್ಯಕ್ರಮದ ಮುಖೇನ ಆವಿಷ್ಕಾರದ ತಂತ್ರಜ್ಞಾನದ ಯೋಚನೆಯನ್ನು ಬೆಳೆಸಿಕೊಳ್ಳಬೇಕು. ಸಂಸ್ಕಾರಯುತ ವಿದ್ಯಾರ್ಥಿಗಳ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಶ್ರಮಿಸುತ್ತಿದೆ ಎಂದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸ್ವಯಂಸೇವಕ ಕಿರಣ್ ಕುಮಾರ್ ಎನ್. ಅವರು ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿ 2023-24ನೇ ಸಾಲಿನ ಕರ್ನಾಟಕ ರಾಜ್ಯದ ಅತ್ಯುತ್ತಮ ಎನ್.ಎಸ್.ಎಸ್. ಸ್ವಯಂಸೇವಕ ಪ್ರಶಸ್ತಿಯನ್ನು ಪಡೆದಿದ್ದಾರೆ. ಹಿಂದೆ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಿ ಅತ್ಯುತ್ತಮ ಸಾಂಸ್ಕೃತಿಕ ಪ್ರತಿಭೆ ಎಂಬ ಮನ್ನಣೆ ಪಡೆದ ಇವರು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ವಳಗೆರೆ ಗ್ರಾಮದ ಹಿನ್ಸೋಡಿಯ ನಾಗರಾಜ ಮತ್ತು ಲಕ್ಷ್ಮೀ ದಂಪತಿಯ ಪುತ್ರ. ಇವರಿಗೆ ಕಾಲೇಜಿನ ಅಧ್ಯಕ್ಷ ಬಿ.ಎಮ್ . ಸುಕುಮಾರ್ ಶೆಟ್ಟಿ, ಪ್ರಾಂಶುಪಾಲ ಡಾ. ಕೆ. ಉಮೇಶ್ ಶೆಟ್ಟಿ, ಮಾರ್ಗದರ್ಶನ ನೀಡಿದ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿಗಳಾದ ಡಾ. ಚೇತನ್ ಶೆಟ್ಟಿ ಕೋವಾಡಿ ಹಾಗೂ ದೀಪಾ ಪೂಜಾರಿ ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬ್ರಹ್ಮಾವರ: ಕೆನರಾ ಬ್ಯಾಂಕಿನ ಸಂಸ್ಥಾಪಕರಾದ ದಿವಂಗತ ಅಮ್ಮೆಂಬಳ ಸುಬ್ಬರಾವ್ ಪೈ ಅವರ 174ನೇ ಜನ್ಮದಿನಾಚರಣೆಯನ್ನು ಬ್ರಹ್ಮಾವರದ ರುಡ್‌ಸೆಟ್ ಸಂಸ್ಥೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಈ ವಿಶೇಷ ಸಂದರ್ಭದಲ್ಲಿ ಸಂಸ್ಥೆಯಲ್ಲಿ ಸಿಸಿಟಿವಿ ಅಳವಡಿಕೆ, ದುರಸ್ತಿ ಮತ್ತು ಸೇವಾ ತರಬೇತಿ ಕಾರ್ಯಕ್ರಮಕ್ಕೆ ಗಣ್ಯರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕ್ ಹರಾಡಿ ಶಾಖೆಯ ಹಿರಿಯ ಪ್ರಬಂಧಕರಾದ ಮಹೇಂದ್ರ ಬಾಬು ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಬ್ರಹ್ಮಾವರದ ರೂಪ್ಫ್ಲಾಸ್ಟ್ ಕನ್ಸ್ಟ್ರಕ್ಷನ್ ಕಂಪನಿಯ ಮಾಲೀಕರಾದ ಕೆ. ಸಿ. ಅಮೀನ್ ಹಾಗೂ ಸಂಸ್ಥೆಯ ವ್ಯವಸ್ಥಾಪಕರಾದ ಕಮಲಾ ಕೆ.ಸಿ. ಅಮೀನ್ ಅವರು ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಗಣ್ಯರು ಅಮ್ಮೆಂಬಳ ಸುಬ್ಬರಾವ್ ಪೈ ಅವರ ಅಮೂಲ್ಯ ಕೊಡುಗೆಗಳನ್ನು ಸ್ಮರಿಸಿ, ಯುವಜನತೆಯ ಸ್ವಾವಲಂಬನೆಗೆ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆಯ ಮಹತ್ವವನ್ನು ವಿವರಿಸಿದರು. ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳಿಗೆ ಶುಭ ಹಾರೈಸಿ, ತಮ್ಮ ಕಲಿಕಾ ಅವಧಿಯನ್ನು ಸದುಪಯೋಗಪಡಿಸಿಕೊಂಡು ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡುವಂತೆ ಪ್ರೇರೇಪಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರುಡ್‌ಸೆಟ್ ಸಂಸ್ಥೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಸರ್ಕಾರದ ಪ್ರತಿಯೊಂದು ಮನೆಗೂ ನಳ್ಳಿ ನೀರು ಎನ್ನುವ ಮಹತ್ವಕಾಂಕ್ಷಿ ಯೋಜನೆಯಾದ ಜಲ ಜೀವನ್ ಮಿಷನ್ ಯೋಜನೆಯ ಕಳಪೆ ಕಾಮಗಾರಿ ಹಾಗೂ ಕೋಟ್ಯಂತರ ರೂಪಾಯಿ ಸಾರ್ವಜನಿಕ ಹಣದ ದುರುಪಯೋಗದ ಬಗ್ಗೆ ಸಂಸದರು ಹಾಗೂ ಶಾಸಕರುಗಳು ಮೌನವಹಿಸಿರುವ ಕಾರಣವೇನೆಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ಪ್ರಶ್ನಿಸಿದ್ದಾರೆ. ಪ್ರತಿಯೊಂದು ಗ್ರಾಮ ಪಂಚಾಯತುಗಳಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಕೋಟ್ಯಂತರ ರೂಪಾಯಿ ಅನುದಾನದಡಿ ಪೈಪ್ ಲೈನ್, ನೀರು ಶೇಖರಣ ಟ್ಯಾಂಕ್, ಮನೆ ಮುಂದೆ ನಳ್ಳಿ ಅಳವಡಿಸಲಾಗಿದೆ ಬಿಟ್ಟರೆ ಯಾವ ನಳ್ಳಿಯಲ್ಲೂ ಒಂದು ಹನಿ ನೀರು ಬರುತ್ತಿಲ್ಲ. ಹೆಚ್ಚಿನ ಕಡೆ ಈ ಕಾಮಗಾರಿ ಹೆಸರಲ್ಲಿ ಗುಣಮಟ್ಟದ ಕಾಂಕ್ರೀಟ್ ರಸ್ತೆಗಳನ್ನು ಅಗೆದು ಹಾಕಿ ಅದನ್ನು ಕೂಡ ಸರಿ ಪಡಿಸದೆ ಹಾಗೆಯೇ ಬಿಡಲಾಗಿದೆ. ಇನ್ನು ಎಷ್ಟೋ ಕಡೆ ನೀರಿನ ಮೂಲಗಳನ್ನೇ ಗುರುತಿಸದೆ ನೀರು ಶೇಖರಣ ಟ್ಯಾಂಕ್ ನಿರ್ಮಾಣ ಮಾಡಿ ಈಗ ನೀರಿಲ್ಲದೆ ಟ್ಯಾಂಕ್ ಗಳು ಬಿಸಿಲಿನಲ್ಲಿ ಒಣಗುತ್ತಿವೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೆಸಾ ಶಿಕ್ಷಣ ಸಂಸ್ಥೆಯಲ್ಲಿ ಪ್ರೌಢಶಾಲಾ ಹಾಗೂ ಪದವಿ ಪೂರ್ವ ವಿಭಾಗದ ವಾರ್ಷಿಕೋತ್ಸವ ‘ಆವಿರ್ಭವ 2026–27’ ಕಾರ್ಯಕ್ರಮವು ಸಂಭ್ರಮದಿಂದ ಜರುಗಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಉಡುಪಿ ಕರ್ನಾಟಕ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಸಹಾಯಕ ಮಹಾಪ್ರಬಂಧಕರು ಹಾಗೂ ಪ್ರಾದೇಶಿಕ ಮುಖ್ಯಸ್ಥರಾದ ರಮೇಶ್ ವೈದ್ಯ ಅವರು ಮಾತನಾಡಿ, “ಮೂರು ದಶಕಗಳ ಸುದೀರ್ಘ ಪಯಣದಲ್ಲಿಯೂ ಶಿಕ್ಷಣದ ಗುಣಮಟ್ಟವನ್ನು ಒಂದೇ ರೀತಿಯಲ್ಲಿ ಕಾಯ್ದುಕೊಂಡು ಬಂದಿರುವುದು ಸಂಸ್ಥೆಯ ಹೆಗ್ಗಳಿಕೆ. ಕಾಲ ಬದಲಾದರೂ ಶಿಕ್ಷಣದ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳದ ಸಂಸ್ಥೆಯ ಕಾರ್ಯ ಶ್ಲಾಘನೀಯ” ಎಂದು ರಮೇಶ್ ವೈದ್ಯ ಅವರು ಪ್ರಶಂಸಿದರು. ಶಿಕ್ಷಣದ ಗುಣಮಟ್ಟವನ್ನು ಕಾಪಾಡಿಕೊಂಡು, ಉತ್ತಮ ನಿರ್ವಹಣೆಯೊಂದಿಗೆ ಸಂಸ್ಥೆಯನ್ನು ಮುನ್ನಡೆಸುತ್ತಿರುವ ಆಡಳಿತ ಮಂಡಳಿಯ ಪರಿಶ್ರಮ ನಿಜಕ್ಕೂ ಮೆಚ್ಚುವಂತಹದ್ದು” ಎಂದರು. ಮುಖ್ಯ ಅತಿಥಿ, ಸಂಸ್ಥೆಯ 2016ನೇ ಸಾಲಿನ ಹಳೆ ವಿದ್ಯಾರ್ಥಿ ಹಾಗೂ ಅಕ್ಷಯಕಲ್ಪ ಆರ್ಗ್ಯಾನಿಕ್ ಸಂಸ್ಥೆಯ ಡೈರೆಕ್ಟ್ ಡಿಸ್ಟ್ರಿಬ್ಯೂಷನ್ ವಿಭಾಗದ ಮುಖ್ಯಸ್ಥರಾದ ಚಂದನ್ ಶೆಟ್ಟಿ ಅವರು “ವಿದ್ಯಾರ್ಥಿಗಳಿಗೆ ಬದಲಾಗುತ್ತಿರುವ ಸ್ಪರ್ಧಾತ್ಮಕ ಜಗತ್ತಿಗೆ ಈಗಿನಿಂದಲೇ ಸಿದ್ಧರಾಗುವಂತೆ ಕರೆ ನೀಡಿದರು. ಕೇವಲ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಸೆಳ್ಕೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಕ್ಷರ ಪರ್ವ-2026ರ ಅಂಗವಾಗಿ ವಾರ್ಷಿಕ ಕ್ರೀಡೋತ್ಸವವು ನಡೆಯಿತು. ಕೊಲ್ಲೂರು ಪೊಲೀಸ್ ಠಾಣೆಯ ಎ.ಎಸ್.ಐ ನರೇಶ್ ಅವರು ಪಥಸಂಚಲನದ ಗೌರವ ರಕ್ಷೆ ಸ್ವೀಕರಿಸಿ, ಗ್ರಾಮೀಣ ಪ್ರದೇಶದ ಈ ಶಾಲೆಯಲ್ಲಿ ಅತ್ಯಂತ ವ್ಯವಸ್ಥಿತವಾಗಿ ಕ್ರೀಡಾಚಟುವಟಿಕೆಗಳನ್ನು ಆಯೋಜಿಸಿ ವಿದ್ಯಾರ್ಥಿಗಳ ಕ್ರೀಡಾಪ್ರತಿಭೆಯನ್ನು ಪ್ರೋತ್ಸಾಹಿಸುತ್ತಿರುವುದು ಶ್ಲಾಘನಾರ್ಹ ಕಾರ್ಯ ಎಂದರು. ಕ್ರೀಡಾಜ್ಯೋತಿಯನ್ನು ಪ್ರಜ್ವಲಿಸಿದ ಚಿತ್ತೂರು ಪಿಎಂಶ್ರೀ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಬಾಲಕೃಷ್ಣ ಶೆಟ್ಟಿ ಮಾತನಾಡಿ, ಶಾಲಾ ವಾರ್ಷಿಕ ಕ್ರೀಡಾಕೂಟಗಳು ವಿದ್ಯಾರ್ಥಿಗಳಿಗೆ ಮಹತ್ವವಾದುದು. ವಿದ್ಯಾರ್ಥಿಗಳಲ್ಲಿ ಕ್ರೀಡಾಸ್ಪೂರ್ತಿಯನ್ನು ವೃದ್ಧಿಸಲು ಅನುಕೂಲ ಎಂದು ಶುಭ ಹಾರೈಸಿದರು. ಮೂಕಾಂಬಿಕಾ ದೇವಳ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಬಡಿಯ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿದರು. ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸುಬ್ಬಯ್ಯ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಮೂಹ ಸಂಪನ್ಮೂಲ ವ್ಯಕ್ತಿ ಶೈಲಜಾ, ಸುವರ್ಣನಿಧಿ ಯೋಜನೆಯ ಅಧ್ಯಕ್ಷ ನೇತ್ರಾಡಿ ಸುರೇಂದ್ರ ನಾಯ್ಕ, ಸಭಾಭವನ ಸಮಿತಿ ಅಧ್ಯಕ್ಷೆ ಪ್ರೇಮಾ ಎಸ್ ನಾಯ್ಕ್, ಎಸ್,ಡಿ,ಎಂ.ಸಿ ಉಪಾಧ್ಯಕ್ಷೆ ನಾಗರತ್ನ ಶೆಟ್ಟಿ, ಮೂಕಾಂಬಿಕಾ ಪ್ರೌಢಶಾಲೆಯ…

Read More