ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪ್ರ ಕನ್ನಡ ಮಾತನಾಡುವ ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ ಸಂಬಂಧಿತ ಸಂಸ್ಕೃತಿ ಬಹಳ ವಿಶಿಷ್ಟವಾದುದು. ಕೃಷಿಯ ಪ್ರತಿ ಹಂತದಲ್ಲಿ ಅಂದರೆ ಹೂಡುವಾಗ, ನಟ್ಟಿ ಮಾಡುವಾಗ, ಕೊಯ್ಲು ಮಾಡುವಾಗ, ಭತ್ತದ ಹುಲ್ಲು ಜಪ್ಪುವಾಗ… ಹೀಗೆ ಪ್ರತಿ ಹೆಜ್ಜೆಯಲ್ಲಿ ನಾನಾ ರೀತಿಯ ಹಾಡುಗಳನ್ನು ಹಾಡುತ್ತಾರೆ. ವಿಶೇಷ ಉದ್ಗಾರಗಳನ್ನು ಮಾಡುತ್ತಾರೆ. ಈ ವಿಷಯದಲ್ಲಿ ಸಾಹಿತ್ಯಾಸಕ್ತ ಪದವಿ ಕಾಲೇಜು, ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ತಾವು ಕೇಳಿದ ಜನಪದ ಹಾಡುಗಳನ್ನು ಸೇರಿಸಿ ನಾಲ್ಕು ಪುಟಗಳನ್ನು ಮೀರದಂತೆ ಲೇಖನ ಬರೆದು ಕಳುಹಿಸಬೇಕು. ಸಾರ್ವಜನಿಕರೂ ಭಾಗವಹಿಸಬಹುದು. ಭಾಗವಹಿಸಿದವರಿಗೆ ಶಿಫಾರಸು ಪತ್ರ ನೀಡಲಾಗುತ್ತದೆ. ಉತ್ತಮ ಲೇಖನಗಳಿಗೆ ಉಪಯುಕ್ತ ಬಹುಮಾನ ನೀಡಲಾಗುತ್ತದೆ. ಪತ್ರಿಕೆಯಲ್ಲೂ ಪ್ರಕಟಿಸಲಾಗುತ್ತದೆ. ಕುಂದ ಕನ್ನಡದಲ್ಲಿಯೇ ಬರೆದ ಲೇಖನಗಳಿಗೆ ವಿಶೇಷ ಪ್ರಾಶಸ್ತ್ಯವಿದೆ. ಲೇಖನ ಸ್ವೀಕರಿಸುವ ಕೊನೆಯ ದಿನಾಂಕ ಅಗಸ್ಟ್ 8. ಲೇಖನವನ್ನು ಯು. ಎಸ್. ಶೆಣೈ, ಸಂಚಾಲಕರು, ಕುಂದ ಕನ್ನಡ ಭಾಷಾಭಿವೃದ್ಧಿ ವೇದಿಕೆ, ಕುಂದಪ್ರಭ, ಶ್ರೀ ನಾರಾಯಣಗುರು ಕಾಂಪ್ಲೆಕ್ಸ್, ಕುಂದಾಪುರ-576201. ಈ ವಿಳಾಸಕ್ಕೆ ಕಳುಹಿಸಬೇಕೆಂದು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿಯ ಸೆಂಟ್ ಸಿಸಿಲಿ ಇಂಗ್ಲೀಷ್ ಮೀಡಿಯಂ ಸ್ಕೂಲ್ನಲ್ಲಿ ನಡೆದ ಎಐಸಿಎಸ್ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ 17 ವರ್ಷದೊಳಗಿನ ವಿದ್ಯಾರ್ಥಿಗಳಾದ ಶಶಿಧರ ಆರ್. ಹೆಚ್., ಕಾಲೇಶ್ವರ, ಸುಜಿತ್ ಸಿ. ಎನ್., ಮಹೇಶ್ ಎ. ಪಾಟೀಲ್ ದ್ವಿತೀಯ ಸ್ಥಾನವನ್ನು ಪಡೆಯುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಶಾಲೆಯ ಪ್ರಾಂಶುಪಾಲರು ಮತ್ತು ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳೂ ಆದ ಶರಣ ಕುಮಾರ ಈ ಯಶಸ್ಸಿಗೆ ಕಾರಣರಾದ ವಿದ್ಯಾರ್ಥಿಗಳ ಕಠಿಣ ಪರಿಶ್ರಮ ಮತ್ತು ಅವರಿಗೆ ಮಾರ್ಗದರ್ಶನ ನೀಡಿದ ಶಿಕ್ಷಕರು ಹಾಗೂ ತರಬೇತುದಾರರ ಶ್ರಮವನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಮತ್ತು ತರಬೇತುದಾರರು ಹರ್ಷ ವ್ಯಕ್ತಪಡಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಿಂದ ದೇಶದ ಲಕ್ಷಾಂತರ ವೈದ್ಯಕೀಯ ಶಿಕ್ಷಣಾಕಾಂಕ್ಷಿ ವಿದ್ಯಾರ್ಥಿಗಳ ಭವಿಷ್ಯ ನಾಶವಾಗಿದ್ದು, ಖಿನ್ನತೆಗೆ ಒಳಗಾದ ಸುಮಾರು 21 ಎಳೆ ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ದುರಂತಕರವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಹಾಗೂ ಯುವ ನ್ಯಾಯವಾದಿ ಕೋಳ್ಕೆರೆ ವಿಕಾಸ್ ಹೆಗ್ಡೆ ಹೇಳಿದ್ದಾರೆ. ಈ ಅನ್ಯಾಯದ ವಿರುದ್ಧ ದೆಹಲಿಯಲ್ಲಿ ವಿದ್ಯಾರ್ಥಿಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸಿದಾಗ ಕೇಂದ್ರ ಸರ್ಕಾರ ಪೊಲೀಸ್ ಲಾಠಿಚಾರ್ಜ್ ನಡೆಸಿ ಪ್ರತಿಭಟನೆಯನ್ನು ಹತ್ತಿಕ್ಕಲು ಯತ್ನಿಸಿತು. ಈ ವೇಳೆ ಹಲವರು ಗಾಯಗೊಂಡರೆ, ಕೆಲವರು ಮೂಳೆ ಮುರಿತ ಸೇರಿದಂತೆ ಗಂಭೀರ ಗಾಯಗಳಿಗೆ ಒಳಗಾದರು. ದೇಶವ್ಯಾಪಿ ವಿದ್ಯಾರ್ಥಿಗಳ ಆಕ್ರೋಶದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೊನೆಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಪಡೆಯಬೇಕಾಯಿತು ಎಂದು ಹೇಳಿದ್ದಾರೆ. ಆದರೆ, ಉಡುಪಿ ಸೇರಿದಂತೆ ವಿವಿಧೆಡೆ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದು ಹಾಗೂ ಅದರಲ್ಲಿ ಜಿಲ್ಲೆಯ ಬಿಜೆಪಿ ಶಾಸಕರುಗಳು ಭಾಗವಹಿಸುತ್ತಿರುವುದು ಆಶ್ಚರ್ಯಕರವಾಗಿದೆ. ಬಿಜೆಪಿಯ ನಡೆ ನೋಡಿದರೆ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೊತ್ತರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ವಿದೇಶಿ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ವೆಬ್ಸೈಟ್ https://sevasindhu.karnataka.gov.in/sevasindhu/DepartmentService ನಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ:8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2574596 ಅಥವಾ ಕಾರ್ಕಳ (ದೂ.ಸಂಖ್ಯೆ: 08258-231101) ಹಾಗೂ ಕುಂದಾಪುರ (ದೂ.ಸಂಖ್ಯೆ: 08254-230370) ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟ ಸಹಕಾರಿ ವ್ಯವಸಾಯಕ ಸಂಘ ಕೋಟದ ತೆರವಾದ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ರವೀಂದ್ರ ಕಾಮತ್ ಅವರನ್ನು ಅವಿರೋಧವಾಗಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಸಂಘದ ಅಧ್ಯಕ್ಷ ಕೃಷ್ಣ ಕಾಂಚನ್ ಹಾಗೂ ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತಿಮ್ಮ ಪೂಜಾರಿ ಅವರ ನೇತೃತ್ವದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಈ ತಿರ್ಮಾನ ಕೈಗೊಳ್ಳಲಾಗಿದೆ. ಚುನಾವಣಾ ಪ್ರಕ್ರಿಯೆಯನ್ನು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಎಲ್ಲಾ ನಿರ್ದೇಶಕರುಗಳು, ನೂತನ ಉಪಾಧ್ಯಕ್ಷ ರವೀಂದ್ರ ಕಾಮತ್ ಅಭಿನಂದನೆ ಸಲ್ಲಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜೆಸಿಐ ಶಿರೂರು ಘಟಕ ಇದರ ವತಿಯಿಂದ ಕಾರ್ಗಿಲ್ ವಿಜಯ್ ದಿನದ ಅಂಗವಾಗಿ ಕಳೆದ ಹಲವು ವರ್ಷಗಳಿಂದ ಯೋಧರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಶಿರೂರು ಗ್ರಾಮದ ಕರಿಕಟ್ಟೆ ಆರ್ಮಿ ನಿವಾಸಿ ಸುರೇಶ ಮೇಸ್ತಾ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಜೆಸಿಐ ಶಿರೂರ್ನ ಅಧ್ಯಕ್ಷರರಾದ ವಿನೋದ್ ಮೇಸ್ತಾ. ಕಾರ್ಯದರ್ಶಿ ಪವನ್ ಪೂಜಾರಿ, ಪೂರ್ವ ಅಧ್ಯಕ್ಷರಾದ ನಾಗೇಂದ್ರ ಪ್ರಭು, ಪ್ರಕಾಶ್ ಮಾಕೋಡಿ, ನಾಗೇಶ್ ಕೆ., ಪಾಂಡುರಂಗ ಆಳ್ವಗೆದ್ದೆ, ಜಯಂತ್ ಪೂಜಾರಿ ಹಾಗೂ ಸದಸ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಡುಪಿ ಜಿಲ್ಲಾಡಳಿತ ಸಹಯೋಗದೊಂದಿಗೆ ಹಾಗೂ ಜೆಸಿಐ ಶಿರೂರು ಘಟಕ ಇದರ ವತಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜು ಶಿರೂರುಇದರ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ಕಾರ್ಯಕ್ರಮ ಜರುಗಿತು. ಶಿರೂರು ಜೆಸಿಐ ಅಧ್ಯಕ್ಷ ವಿನೋದ ಮೇಸ್ತ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ದೇವೇಂದ್ರ ಕೆ. ಮೊಗೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಜೆಸಿಐ ಕಾರ್ಯದರ್ಶಿ ಪವನ್ ಪೂಜಾರಿ, ಶಾಲೆಯ ಶಿಕ್ಷಕರ ವೃಂದದವರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು. ಕಾಲೇಜಿನ ಉಪಪ್ರಾಂಶುಪಾಲೆ ಜಯಂತಿ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ನೋಡಲ್ ಅಧಿಕಾರಿ ಶ್ರೀದೇವಿ ನಿರೂಪಿಸಿದರು. ಆರತಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ವಿಜ್ಞಾನವನ್ನು ಘನ, ದ್ರವ ಮತ್ತು ಅನಿಲ ಎಂಬ ಮೂರು ಸ್ಥಿತಿಗಳಿಗೆ ಮಾತ್ರ ಸೀಮಿತಗೊಳಿಸದೆ, ನಾಲ್ಕನೇ ಸ್ಥಿತಿಯಾದ ಪ್ಲಾಸ್ಮಾ ಕುರಿತು ವಿದ್ಯಾರ್ಥಿಗಳು ಆಸಕ್ತಿ ಮತ್ತು ಅರಿವು ಬೆಳೆಸಿಕೊಳ್ಳಬೇಕು ಎಂದು ಗಾಂಧಿನಗರದ ಇನ್ಸ್ಟಿಟ್ಯೂಟ್ ಫಾರ್ ಪ್ಲಾಸ್ಮಾ ರಿಸರ್ಚ್ (ಐಪಿಆರ್)ನ ವೈಜ್ಞಾನಿಕ ಅಧಿಕಾರಿ ಹಾಗೂ ಔಟ್ರೀಚ್ ವಿಭಾಗದ ಮುಖ್ಯಸ್ಥ ಡಾ. ಎನ್. ರಾಮಸುಬ್ರಮಣ್ಯನ್ ಹೇಳಿದರು. ಅವರು ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯವು ಭಾರತದ ಅಣುಶಕ್ತಿ ಇಲಾಖೆಯ (ಡಿಎಇ) ಅಧೀನದ ಇನ್ಸ್ಟಿಟ್ಯೂಟ್ ಫಾರ್ ಪ್ಲಾಸ್ಮಾ ರಿಸರ್ಚ್ನ (ಐಪಿಆರ್), ಸಹಯೋಗದಲ್ಲಿ ಎಐಇಟಿ ಎಂಬಿಎ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ 5 ದಿನಗಳ 4ನೇ ರಾಜ್ಯ ಮಟ್ಟದ ಪ್ಲಾಸ್ಮಾ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಯಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವದ್ದು. ಪ್ಲಾಸ್ಮಾ ವಿಜ್ಞಾನದಲ್ಲಿ ಹೆಚ್ಚಿನ ಸಂಶೋಧಕರು ಮತ್ತು ಪರಿಣಿತರ ಅಗತ್ಯವಿದೆ. ವಿದ್ಯಾರ್ಥಿಗಳು ಭೌತಶಾಸ್ತ್ರ, ಗಣಿತ ಹಾಗೂ ಎಂಜಿನಿಯರಿಂಗ್ ವಿಷಯಗಳಲ್ಲಿ ಆಸಕ್ತಿ ಬೆಳೆಸಿ ಸಂಶೋಧನಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡರೆ ದೇಶದ ವೈಜ್ಞಾನಿಕ ಅಭಿವೃದ್ಧಿಗೆ ಅಮೂಲ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕೆಂಪು ಕಲ್ಲು ಕ್ವಾರೆಯಲ್ಲಿ ಕೆಲಸ ಮಾಡುತ್ತಿದ್ದಾಗ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ರವಿವಾರ ಕಾಲ್ತೋಡು ಬೊಳ್ಳಂಬಳ್ಳಿಯಲ್ಲಿ ಸಂಭವಿಸಿದೆ. ಹೇರಂಜಾಲು ಗ್ರಾಮದ ಶಿವಾನಂದ ದೇವಾಡಿಗ (49) ಮೃತಪಟ್ಟ ದುರ್ದೈವಿ. ಶಿವಾನಂದ ಅವರು ಜು.26 ರಂದು ಬೆಳಿಗ್ಗೆ ಕಾಲ್ತೋಡು ಬೊಳ್ಳಂಬಳ್ಳಿಯಲ್ಲಿರುವ ಕೆಂಪು ಕಲ್ಲು ಕ್ವಾರೆ ಕೆಲಸಕ್ಕೆ ತೆರಳಿದ್ದರು. ಕೆಲಸ ಮಾಡುತ್ತಿದ್ದ ಸಮಯದಲ್ಲಿ ಅವರಿಗೆ ದಿಢೀರ್ ತಲೆತಿರುಗಿ ಬಿದ್ದಿದ್ದರಿಂದ ಗಾಯಗೊಂಡಿದ್ದರು ಎನ್ನಲಾಗಿದೆ. ಕೂಡಲೇ ಸ್ಥಳದಲ್ಲಿದ್ದವರು ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದರಾದರೂ, ಪರೀಕ್ಷಿಸಿದ ವೈದ್ಯರು ಅವರು ಈಗಾಗಲೇ ಮೃತಪಟ್ಟಿರುವುದಾಗಿ ತಿಳಿಸಿದರು. ವಿಷಯ ತಿಳಿದು ಆಸ್ಪತ್ರೆಗೆ ಭೇಟಿ ನೀಡಿದ ಪತ್ನಿ, ಮೃತರ ತಲೆಯ ಭಾಗದಲ್ಲಿದ್ದ ಗಾಯವನ್ನು ಕಂಡು ಪತಿಯ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ಈ ಕುರಿತು ಅವರು ನೀಡಿದ ದೂರಿನನ್ವಯ ಬೈಂದೂರು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸುಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಬಿ.ಎಸ್ಸಿ ‘ಕೃಷಿ ಮತ್ತು ಪಶುವೈದ್ಯಕೀಯ ವಿಜ್ಞಾನʼ ಕೋರ್ಸ್ಗಳ ಭವಿಷ್ಯ ಹಾಗೂ ಉದ್ಯೋಗಾವಕಾಶಗಳ ಕುರಿತು ವಿಶೇಷ ಮಾರ್ಗದರ್ಶನ ಕಾರ್ಯಾಗಾರ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿದ ಹೆಸರಾಂತ ಕೃಷಿ ಶಿಕ್ಷಣ ತಜ್ಞ ರಾಜು ಬೆಳ್ಳುಂಡಗಿ ಅವರು ವಿದ್ಯಾರ್ಥಿಗಳಿಗೆ ಕೃಷಿ ಮತ್ತು ಪ್ರಾಣಿ ವಿಜ್ಞಾನ (Farm Science) ಕ್ಷೇತ್ರದ ಮಹತ್ವವನ್ನು ಮನಮುಟ್ಟುವಂತೆ ವಿವರಿಸಿದರು. “ಹಿಂದಿನ ದಿನಗಳಲ್ಲಿ ಬಿ.ಎಸ್ಸಿ ಕೃಷಿ ಅಥವಾ ಪಶುವೈದ್ಯಕೀಯ ಶಿಕ್ಷಣದ ಕಡೆಗೆ ಹೆಚ್ಚಿನ ವಿದ್ಯಾರ್ಥಿಗಳು ಗಮನ ಹರಿಸುತ್ತಿರಲಿಲ್ಲ ಹಾಗೂ ಸ್ಪರ್ಧೆಯೂ ಕಡಿಮೆಯಿತ್ತು. ಆದರೆ, ಇಂದಿನ ಬದಲಾದ ಯುಗದಲ್ಲಿ ಈ ‘ಫಾರ್ಮ್ ಸೈನ್ಸ್’ ಕ್ಷೇತ್ರವು ಅತ್ಯಂತ ಶರವೇಗದಲ್ಲಿ ಬೆಳೆಯುತ್ತಿದೆ. ವೈಜ್ಞಾನಿಕ ಕೃಷಿ, ಆಹಾರ ಸಂಸ್ಕರಣೆ, ಪಶುಸಂಗೋಪನೆ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಜಾಗತಿಕ ಮಟ್ಟದಲ್ಲಿ ಹೊಸ ತಂತ್ರಜ್ಞಾನಗಳು ಬಂದಿರುವುದರಿಂದ ಕೋರ್ಸ್ ಮುಗಿಸಿದ ತಕ್ಷಣ ಹೇರಳ ಉದ್ಯೋಗಾವಕಾಶಗಳು ಲಭ್ಯವಿವೆ. ನಿರಂತರ ಆಸಕ್ತಿ ಮತ್ತು ಶ್ರದ್ಧೆಯಿಂದ ಅಧ್ಯಯನ ನಡೆಸಿದರೆ…
