ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಂದಿನ ಯುವ ವಿದ್ಯಾರ್ಥಿಗಳು ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗಿ ತಮ್ಮ ಶೈಕ್ಷಣಿಕ ಮಾನಸಿಕ ದೈಹಿಕ ಆರೋಗ್ಯವನ್ನು ಕಳೆದುಕೊಳ್ಳುತ್ತಿರುವ ಆಘಾತಕಾರಿ ಬೆಳವಣಿಗೆ ಹೆಚ್ಚಾಗುತ್ತದೆ. ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ಗುಣಗಳನ್ನು ಮೈಗೂಡಿಸಿಕೊಂಡು ಸತ್ಪ್ರಜೆಗಳಾಗಬೇಕು ಎಂದು ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಪವನ್ ನಾಯಕ್ ಹೇಳಿದರು. ಅವರು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ಗಂಗೊಳ್ಳಿ ಹಾಗೂ ರೋಟರಿ ಕ್ಲಬ್ ಗಂಗೊಳ್ಳಿ ಇದರ ಜಂಟಿ ಆಶ್ರಯದಲ್ಲಿ “ಡ್ರಗ್ಸ್ ಬೇಡ ಬ್ರೋ” ಅಭಿಯಾನ ದಡಿ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಜರಗಿದ ಜಾಗೃತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ನಶಾಮುಕ್ತದ ಪ್ರತಿಜ್ಞಾ ವಿಧಿಯನ್ನು ಬೋಧಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲೆ ಕವಿತೆ ಎಂ. ಸಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕ್ಲಬ್ಬಿನ ಅಧ್ಯಕ್ಷೆ ಮಾಲಾಶ್ರೀ ಖಾರ್ವಿ ಹಾಗೂ ಉಪಪ್ರಾಂಶುಪಾಲ ಗೋಪಾಲ ದೇವಾಡಿಗ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಸಾನಿಕ ಹಾಗೂ ನಿಸರ್ಗ ಪ್ರಾರ್ಥನೆಗೈದರು. ಕಾರ್ಯಕ್ರಮದ ಸಮನ್ವಯ ಅಧಿಕಾರಿ, ಉಪನ್ಯಾಸಕ ಪಿ. ಎ. ತೋಮಸ್ ಪ್ರಾಸ್ತಾವಿಕ ಮಾತುಗಳನ್ನಾನಾಡಿದರು. ಸಂಖ್ಯಾಶಾಸ್ತ್ರ ಉಪನ್ಯಾಸಕಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಈ ಬಾರಿ ಮಳೆ ಕೊರತೆಯ ಕಾರಣಕ್ಕೆ ಶೀಘ್ರವೇ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ. ಎಲ್ಲ ಸ್ಥಳೀಯಾಡಳಿತ ಸಂಸ್ಥೆಗಳು ಈಗಿನಿಂದಲೇ ಪರಿಸ್ಥಿತಿ ಎದುರಿಸಲು ಸಿದ್ದರಾಗಿರಬೇಕು. ಬೇಕಾದ ತಯಾರಿ ಮಾಡಿಕೊಳ್ಳಬೇಕು ಎಂದು ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ಶುಕ್ರವಾರ ಇಲ್ಲಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಕುಂದಾಪುರ ವಿಧಾನಸಭ ಕ್ಷೇತ್ರ ವ್ಯಾಪ್ತಿಯ ಟಾಸ್ಕ್ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕ್ಷೇತ್ರದಲ್ಲಿ ಕಳೆದ ಬಾರಿಯೂ ಅಂತಹ ನೀರಿನ ಸಮಸ್ಯೆ ಏನು ಇರಲಿಲ್ಲ. ಈ ಬಾರಿಯೂ ಕಾಣಿಸಲ್ಲ ಅನ್ನುವ ಭರವಸೆಯಿದೆ. ಬಹುತೇಕ ಎಲ್ಲ ಗ್ರಾಮ ಪಂಚಾಯಿತಿಗಳು ವಾರಾಹಿ ನೀರನ್ನೇ ಬೇಗ ಆಶ್ರಯಿಸಿದ್ದಾರೆ. ಆದಷ್ಟು ಬಾಕಿಯಿರುವ ಜೆಜೆಎಂ, ಅಮೃತ್ ಯೋಜನೆ ಕಾಮಗಾರಿ ಮುಗಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ಕಾರ್ಯನಿರ್ವಹಿಸಿ, ನೀರಿನ ಕುರಿತಾದ ಬೇಡಿಕೆಗಳನ್ನು ಆದ್ಯತೆ ನೆಲೆಯಲ್ಲಿ ಬಗೆಹರಿಸಬೇಕು ಎಂದು ತಿಳಿಸಿದರು. ಆವರ್ಸೆಯಲ್ಲಿ 2 ಕಡೆ ಬೋರ್ವೆಲ್ ಬೇಡಿಕೆ, ಬೀಜಾಡಿ, ಗೋಪಾಡಿ, ತೆಕ್ಕಟ್ಟೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಸಭೆ ಇಲ್ಲಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಮೋಹನ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ವೇಳೆ ಪ್ರಗತಿ ಪರಿಶೀಲನೆ ಮಾಡಿದ ಅಧ್ಯಕ್ಷರು, ಅನ್ನ ಭಾಗ್ಯ ಯೋಜನೆಯಡಿ ಇದುವರೆಗೆ 22313 ಬಿಪಿಎಲ್ ಫಲಾನುಭವಿಗಳಿಗೆ 477720 ಕ್ವಿಂಟಾಲ್ ಅಕ್ಕಿ ಹಾಗೂ 3219 ಅಂತ್ಯೋದಯ ಫಲಾನುಭವಿಗಳಿಗೆ 85525 ಕ್ವಿಂಟಾಲ್ ಅಕ್ಕಿ ವಿತರಿಸಿರುವ ಕುರಿತು ಪ್ರಗತಿ ಪರಿಶೀಲನೆ ಮಾಡಿದರು ನಂತರ ಶಿರೂರು ಹಡವಿನಕೋಣೆಯಲ್ಲಿ ಹೊಸದಾಗಿ ಪಡಿತರ ವಿತರಣಾ ಕೇಂದ್ರ ಆರಂಭಿಸಲು, ಮುಂದಿನ ವಾರದೊಳಗೆ ಅನುಮತಿ ಸಿಗುವುದಾಗಿ ಸಭೆಯಲ್ಲಿ ಅಧ್ಯಕ್ಷರು ತಿಳಿಸಿದರು. ಗೃಹ ಲಕ್ಷ್ಮಿ ಯೋಜನೆಯಡಿ ಫೆಬ್ರವರಿ ಮಾಹೆಯವರೆಗೆ ಫಲಾನುಭವಿಗಳ ಖಾತೆಗೆ ಅನುದಾನ ಜಮೆ ಆಗಿದ್ದು, ಎಪ್ರಿಲ್ ಮಾಹೆಯ ಗೃಹಲಕ್ಷ್ಮಿ ಅನುದಾನ ಜುಲೈ ಮಾಹೆಯಲ್ಲಿ ಫಲಾನುಭವಿಗಳ ಖಾತೆಗೆ ಜಮೆ ಆಗಿರುವುದಾಗಿ ಹಾಗೂ ಮಾರ್ಚ ಮೇ ಜೂನ್ ಮಾಹೆಯ ಹಣ ಪಾವತಿಗೆ ಬಾಕಿ ಇರುವುದಾಗಿ ಅಧಿಕಾರಿಗಳು ನೀಡಿದ ಪ್ರಗತಿ ವರದಿಯನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪಂಚಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿದ್ದು, ಪ್ರಸ್ತುತ ಗೃಹಜ್ಯೋತಿ ಯೋಜನೆಯ ಪರಿಷ್ಕರಣೆ ಆಗುತ್ತಿದೆ. ಮುಂದಿನ ದಿನಗಳಲ್ಲಿ ಗೃಹಲಕ್ಷ್ಮೀ ಯೋಜನೆಯ ಪರಿಷ್ಕರಣೆಯೂ ಆಗಲಿದ್ದು ಅಧಿಕಾರಿಗಳು ಯಾವುದೇ ಫಲಾನುಭವಿ ತಪ್ಪಿ ಹೋಗದಂತೆ ಎಚ್ಚರಿಕೆ ವಹಿಸಬೇಕು ಎಂದು ಕು೦ದಾಪುರ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್. ಹರಿಪ್ರಸಾದ್ ಶೆಟ್ಟಿ ಹೇಳಿದರು. ಅವರು ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ನಡೆದ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹೆಚ್ಚು ಅನುಭವ ಇರುವ ಸಿಬ್ಬಂದಿಗಳನ್ನು ಈ ಪರಿಷ್ಕರಣೆ ಕಾರ್ಯದಲ್ಲಿ ನಿಯೋಜನೆ ಮಾಡುವ ಮೂಲಕ ಯಾರಿಗೂ ಸಮಸ್ಯೆಯಾಗದಂತೆ ಪರಿಷ್ಕರಣೆ ಪ್ರಕ್ರಿಯೆ ನಡೆಯಬೇಕು ಎಂದರು. ಗೃಹಜ್ಯೋತಿ ಯೋಜನೆಯ ಪರಿಷ್ಕರಣೆ ನಡೆಯುತ್ತಿದ್ದು, ಈ ಯೋಜನೆಯಡಿ ಒಟ್ಟು 73868 ನೊಂದಣಿಯಾಗಿದ್ದು, 48322 ಪೂರ್ಣ ಪರಿಷ್ಕರಣೆಯಾಗಿದ್ದು, 25546 ಅರ್ಜಿಗಳು ಬಾಕಿ ಇದೆ. ಬಾಕಿ ಇರುವ ಅರ್ಜಿಗಳ ಪೈಕಿ ಸಮಾಜದ ಕಟ್ಟಕಡೆಯ ವ್ಯಕ್ತಿಗಳು ಇರುವ ಸಾಧ್ಯತೆಗಳಿರುತ್ತದೆ ಅಲ್ಲದೆ ಮೊಬೈಲ್ ಇಲ್ಲದಿರುವವರು ಇರುವ ಸಾಧ್ಯತೆ ಇರುತ್ತದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸರಕಾರಿ ಕನ್ನಡ ಮಾಧ್ಯಮ ಶಾಲೆಗಳ ಉಳಿವಿಗೆ ಕರಾವೇ ನಿರಂತರವಾಗಿ ಕಾರ್ಯೋನ್ಮುಖವಾಗಿದ್ದು ಈ ನಿಟ್ಟಿನಲ್ಲಿ ವಿವಿಧ ಜಿಲ್ಲೆಗಳಲ್ಲಿ ಈ ಬಗ್ಗೆ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಕರಾವೇ ಉಡುಪಿ ಜಿಲ್ಲಾ ಗೌರವಾಧ್ಯಕ್ಷ ಅನ್ಸಾರ್ ಅಹಮದ್ ಹೇಳಿದರು. ಅವರು ಶುಕ್ರವಾರ ಇಲ್ಲಿನ ಹಂಗಾರಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ (ದೂಳಂಗಡಿ) ಇಲ್ಲಿಗೆ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ ಬಣ) ಉಡುಪಿ ಜಿಲ್ಲೆ ಹಾಗೂ ಕರವೇ ಮಹಿಳಾ ಘಟಕದ ವತಿಯಿಂದ ಎಲ್ ಕೆಜಿ ಯುಕೆಜಿ ಮಕ್ಕಳಿಗೆ ಕುರ್ಚಿ, ಟೇಬಲ್, ಆಟಿಕೆ ಪರಿಕರ ಹಸ್ತಾಂತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಸರಕಾರಿ ಶಾಲೆ ಎಂಬ ಕೀಳರಿಮೆ ಸಲ್ಲ ಬದಲಾಗಿ ಆಯಾ ಭಾಗಗಳ ಕನ್ನಡ ಮಾಧ್ಯಮ ಶಾಲೆಗಳ ಉಳಿಸುವ ಕಾರ್ಯವನ್ನು ದಾನಿಗಳು ಸಂಘಸಂಸ್ಥೆಗಳ ಮೂಲಕ ಆಗಲಿ ಎಂದರಲ್ಲದೆ ಕರ್ನಾಟಕ ರಕ್ಷಣಾ ವೇದಿಕೆ ಈ ಕಾರ್ಯದಲ್ಲಿ ನಿರತವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಕರವೇ ರಾಜ್ಯ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ಅವರ ನೇತೃತ್ವ ಹಾಗೂ ರಾಜ್ಯ ಸಂಚಾಲಕರಾದ ಸಿ.ಎಮ್.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸ್ಥಳೀಯ ಹೋಟೆಲೊಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ವಿಶ್ರಾಂತಿ ಪಡೆಯುತ್ತಿದ್ದಾಗ ಅಸ್ವಸ್ಥಗೊಂಡು ಸಾವನ್ನಪ್ಪಿದ ಘಟನೆ ಸಾಸ್ತಾನದಲ್ಲಿ ಸಂಭವಿಸಿದೆ. ಕಾವಾಡಿ ಗ್ರಾಮದ ನಿವಾಸಿ ಕರುಣಾಕರ ಪೂಜಾರಿ (60) ಮೃತಪಟ್ಟ ವ್ಯಕ್ತಿ. ಅವರು ಜುಲೈ 23ರಂದು ಬೆಳಿಗ್ಗೆ ಎಂದಿನಂತೆ ಹೋಟೆಲ್ನಲ್ಲಿ ತಿಂಡಿ ತಯಾರಿಸಿದ ಬಳಿಕ, ತನಗೆ ಸುಸ್ತಾಗುತ್ತಿದೆ ಎಂದು ಸಹೋದ್ಯೋಗಿ ಬಳಿ ತಿಳಿಸಿ ವಿಶ್ರಾಂತಿ ಕೊಠಡಿಗೆ ತೆರಳಿದ್ದರು. ಬಹಳ ಸಮಯವಾದರೂ ಅವರು ಹೊರಗೆ ಬಾರದಿದ್ದಾಗ ಸಹೋದ್ಯೀಗಿಗಳು ಕರೆಯಲು ತೆರಳಿದ್ದಾರೆ. ಈ ವೇಳೆ ಕರುಣಾಕರ ಅವರು ಯಾವುದೇ ಪ್ರತಿಕ್ರಿಯೆ ನೀಡದಿದ್ದಾಗ, ತಕ್ಷಣ ಅವರನ್ನು ಬ್ಯಹ್ಮಾವರ ಸರ್ಕಾರಿ ಆಸ್ಪತ್ರಗೆ ಕರೆದೊಯ್ಯಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಬೈಂದೂರಿನ ಹೊಸ ಬಸ್ ನಿಲ್ದಾಣದ ಜಂಕ್ಷನ್ ಬಳಿ ಸಂಭವಿಸಿದೆ. ಕಳವಾಡಿ ನಿವಾಸಿ ಸುಧಾಕರ ಶೆಟ್ಟಿ (78) ಮೃತಪಟ್ಟ ವ್ಯಕ್ತಿ . ಅವರು ಒತ್ತಿನೆಣೆ ಕಡೆಯಿಂದ ಬೈಂದೂರು ಕಡೆಗೆ ತಮ್ಮ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದಾಗ, ಹಿಂಬದಿಯಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ತೀವ್ರ ಗಾಯಗೊಂಡ ಅವರನ್ನು ತಕ್ಷಣವೇ ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ. ನಮ್ಮ ಹತ್ತಿರದಲ್ಲಿ ಇರುವ ಇಂತಹ ಯುವ ಲೇಖಕರನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವನ್ನು ಸಮಾಜ ಮಾಡಬೇಕಿದೆ ಎಂದು ಗಂಗೊಳ್ಳಿಯ ಶ್ರೀ ನಾರಾಯಣ ಗುರು ಜನ ಸೇವಾ ಬಳಗದ ಅಧ್ಯಕ್ಷ ಜಿ. ಗೋಪಾಲ ಪೂಜಾರಿ ಹೇಳಿದರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಎಸ್.ವಿ ಕಾಮರ್ಸ್ ಕ್ಲಬ್ ಮತ್ತು ಸಂಜೀವ ಪಾರ್ವತಿ ಪ್ರಕಾಶನ ಗಂಗೊಳ್ಳಿಯ ಆಶ್ರಯದಲ್ಲಿ ನಡೆದ ಲೇಖಕ ನರೇಂದ್ರ ಎಸ್. ಗಂಗೊಳ್ಳಿ ಅವರ ಏಳನೆಯ ಪುಸ್ತಕ ‘ರೂಮಿನೊಳಗಿಂದ’ ಕಥಾ ಸಂಕಲನವನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಸರಸ್ವತಿ ವಿದ್ಯಾಲಯ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಅಧ್ಯಕ್ಷತೆ ವಹಿಸಿದ್ದರು. ಲೇಖಕ ರಾಘವೇಂದ್ರ ಬಿಲ್ಲವ ಪುಸ್ತಕವನ್ನು ಪರಿಚಯಿಸಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ರಾಘವೇಂದ್ರ ದೇವಾಡಿಗ ಶುಭ ಹಾರೈಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಸುಗುಣ ಆರ್.ಕೆ ಮತ್ತು ವಿದ್ಯಾರ್ಥಿ ಪ್ರತಿನಿಧಿ ಭಾವನಾ ಉಪಸ್ಥಿತರಿದ್ದರು. ಲೇಖಕ ನರೇಂದ್ರ ಎಸ್. ಗಂಗೊಳ್ಳಿ ಪ್ರಸ್ತಾವಿಕ ಮಾತುಗಳನ್ನಾಡಿದರು. ಸಾನಿಕ ಮತ್ತು ಐಶು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಪ್ರತಿನಿಧಿಗಳ ನೇರ ನೇಮಕಾತಿಗೆ ಸಂದರ್ಶನವು ಆಗಸ್ಟ್ 19 ರಂದು ಬೆಳಗ್ಗೆ 10.15 ಕ್ಕೆ ಉಡುಪಿಯ ಪ್ರಧಾನ ಅಂಚೆ ಕಚೇರಿಯ ಮೊದಲ ಮಹಡಿಯಲ್ಲಿರುವ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನಡೆಯಲಿದ್ದು, ಆಸಕ್ತ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ, 18 ವರ್ಷ ಮೇಲ್ಪಟ್ಟ ಅಭ್ಯರ್ಥಿಗಳು ಅರ್ಜಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ನಿವೃತ್ತ ಸರ್ಕಾರಿ / ಖಾಸಗಿ ನೌಕರರು, ಸ್ವ-ಸಹಾಯ ಸಂಘದ ಸದಸ್ಯರು, ನಿರುದ್ಯೋಗಿಗಳು, ಸ್ವಯಂ ಉದ್ಯೋಗ ನಿರತರು, ಅರೆಕಾಲಿಕ ಉದ್ಯೋಗಿಗಳು, ಮಾಜಿ ವಿಮಾ ಪ್ರತಿನಿಧಿಗಳು/ ಸಲಹೆಗಾರರು, ಮಾಜಿ ಸೈನಿಕರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳಿ ಸದಸ್ಯರು, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರು, ನಿವೃತ್ತ ಶಿಕ್ಷಕರು, ಪಿ.ಓ.ಎಸ್.ಬಿ ಏಜೆಂಟರು ಮೊದಲಾದವರಿಗೆ ಅವಕಾಶವಿದ್ದು, ಉತ್ತಮ ಸಂವಹನ ಕೌಶಲ್ಯ ಹಾಗೂ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಮೀಪದ ಅಂಚೆ ಕಚೇರಿ ಅಥವಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಪಬ್ಲಿಕ್ ಸ್ಕೂಲ್ ಬಿದ್ಕಲ್ಕಟ್ಟೆ ( ಪ್ರೌಢ ಸ್ಕೂಲ್ ) ಇಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಇದರ ಮತ್ತು ಶಿವ ಶಾಂತಿ ಲಯನ್ಸ್ ಕ್ಲಬ್ ಮೊಳಹಳ್ಳಿ ಇದರ ಜಂಟಿ ಆಶ್ರಯದಲ್ಲಿ “ಮಾನವ ಕಳ್ಳ ಸಾಗಣೆ ಜಾಗ್ರತಿ ಶಿಬಿರ “ಕಾರ್ಯಕ್ರಮವು ಶುಕ್ರವಾರ ಜರುಗಿತು. ಕಾರ್ಯಕ್ರಮದ ಅಧ್ಯಕ್ಷರಾದ ಕಾಲೇಜಿನ ಉಪ ಪ್ರಿನ್ಸಿಪಾಲರಾದ ಹಾಗೂ ಶಿವಶಾಂತಿ ಲಯನ್ಸ್ ಕ್ಲಬ್ ಮೊಳಹಳ್ಳಿ ಇದರ ಅಧ್ಯಕ್ಷರಾದ ಎಂ. ಕರುಣಾಕರ ಶೆಟ್ಟಿ ವಹಿಸಿದರು. ಕಾರ್ಯಕ್ರಮ ಉದ್ಘಾಟನೆಯನ್ನು ಎಸ್ಡಿಎಮ್ಸಿ ಉಪಾಧ್ಯಕ್ಷರಾದ ಗೌತಮ್ ಶೆಟ್ಟಿ ಉದ್ಘಾಟಿಸಿದರು. ನಂತರ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ರಾಘವೇಂದ್ರ ಎಸ್. ವಕೀಲರು ಹಾಗೂ ಕಾನೂನು ನೆರವು ಅಭಿರಕ್ಷಕರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಅವರು ಬಹಳ ಸರಳವಾಗಿ ವಿದ್ಯಾರ್ಥಿಗಳಿಗೆ ಮಾನವ ಕಳ್ಳ ಸಾಗಾಣಿಕೆಯ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳಿಗೆ ಆಮಿಶ ತೋರಿಸಿ ಕದ್ದೋವೈದು ವೇಶ್ಯವಾಟಿಕೆ, ಬಾಲಕಾರ್ಮಿಕ ಪದ್ಧತಿಗೆ ದೂಡುವಾ ಸ0ಭವ ವಿದ್ದು ಜಾಗ್ರತಿ ವಹಿಸುವಂತೆ ಸಲಹೆ, ವಿದ್ಯಾರ್ಥಿಗಳ ಹಕ್ಕುಗಳು ಮತ್ತು…
