ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಆಧುನಿಕ ಕಾಲಘಟ್ಟದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗ ಪ್ರಮುಖ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳು ಇದರ ಮಹತ್ವ ಅರಿತು ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್ ಹೇಳಿದರು. ಅವರು ಸೋಮವಾರ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ – ರತ್ತೂಬಾಯಿ ಜನತಾ ಪ್ರೌಢಶಾಲೆ ನೇತೃತ್ವದಲ್ಲಿ ಶಾಲೆಯಲ್ಲಿ ಆಯೋಜಿಸಲಾದ 14 ಮತ್ತು 17ರ ವಯೋಮಾನದ ಬಾಲಕ ಮತ್ತು ಬಾಲಕಿಯರ ಬೈಂದೂರು ವಲಯ ಮಟ್ಟದ ಯೋಗಾಸನ ಸ್ಪರ್ಧೆ 2025-26 ಉದ್ಘಾಟಿಸಿ ಮಾತನಾಡಿದರು. ಬೈಂದೂರು ವಲಯದಲ್ಲಿ ಅನುದಾನಿತ ಶಾಲೆಗಳ ಪೈಕಿ ರತ್ತೂಬಾಯಿ ಪ್ರೌಢಶಾಲೆ ಮಾದರಿಯಾಗಿದೆ. ಶೇ.100ಫಲಿತಾಂಶ ದಾಖಲಿಸಿದೆ. ಪಠ್ಯೇತರ ಚಟುವಟಿಕೆಗಳಲ್ಲಿಯೂ ವಿದ್ಯಾರ್ಥಿಗಳನ್ನು ಸಕ್ರೀಯವಾಗಿ ತೊಡಗಿಸಿಕೊಳ್ಳುವಂತೆ ಮಾಡಲಾಗುತ್ತಿರುವುದು ಶ್ಲಾಘನಾರ್ಹ ಎಂದರು. ಶ್ರೀ ವಿ.ವಿ.ವಿ ಮಂಡಳಿ ನಿರ್ದೇಶಕ ರಘುರಾಮ ಕೆ. ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿಗಳಾದ ದಯಾನಂದ ಶೆಟ್ಟಿ, ಗೋಪಾಲ ಶೆಟ್ಟಿ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರತಿನಿಧಿ ರವಿಶಂಕರ ಹೆಗ್ಡೆ, ಬೈಂದೂರು ಗ್ರೇಡ್-1 ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಲ್ಫ್: ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ವಿಶ್ವದ ಕುಂದಗನ್ನಡಿಗರನ್ನು ಒಂದುಗೂಡಿಸಿ ಅಂತರ್ಜಾಲದ ಮೂಲಕ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯನ್ನು ಗುರುವಾರ ಆಚರಿಸಲಾಯಿತು. ಮುಖ್ಯ ಅತಿಥಿಗಳಾದ ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಅಧ್ಯಕ್ಷರಾದ ಜಯಪ್ರಕಾಶ ಹೆಗ್ಡೆ ಅವರು ನಮ್ಮ ಸಂಸ್ಥೆ ಈ ಹಿಂದೆ ಇಟ್ಟ ಬೇಡಿಕೆಗಳಿಗೆ ಒತ್ತು ನೀಡುವುದರ ಬಗ್ಗೆ ನಿಸ್ವಾರ್ಥ ಹೋರಾಟ ಮಾಡುತ್ತೇನೆ ಎಂದರು ಜೊತೆಗೆ ಕುಂದಾಪ್ರ ಕನ್ನಡ ಅಧ್ಯಾಯನ ಪೀಠದ ಕೆಲಸಗಳಿಗೆ ವೇಗವನ್ನು ನೀಡುದರ ನಮ್ಮ ಭಾಷೆಯ ಯಾವುದೇ ಕೆಲಸಗಳಿಗೆ ನಿಮ್ಮದೊಂದಿಗೆ ಸದಾ ಇರುತ್ತೇನೆ ಎಂದರು. ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ಸ್ಥಾಪಕ ಅಧ್ಯಕ್ಷರಾದ ಸದಾಸ್ ದಾಸ್ ಅವರು ಕಾರ್ಯಕ್ರಮದ ಅತಿಥಿಗಳ ಪರಿಚಯ ಮಾಡಿ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿ, ನಮ್ಮ ಸಂಸ್ಥೆಯಿಂದ ಮೊದಲು ಧ್ವನಿ ಎತ್ತಿದ ಬೈಂದೂರು ವಿಮಾನ ನಿಲ್ದಾಣ ಮತ್ತು ಉನ್ನತ ದರ್ಜೆಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಬಗ್ಗೆ ಮರು ಧ್ವನಿಯಾಗಿ ಅತಿಥಿಗಳಿಗೆ ಮನವರಿಕೆ ಮಾಡಿದರು. ನಮ್ಮ ಕುಂದಾಪ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಪ್ರಾಯೋಜಿತ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಇಂಟರ್ಯಾಕ್ಟ್ ಕ್ಲಬ್ ಕ್ಲಬ್ನ 2025-26ನೇ ಸಾಲಿನ ಪದಾಧಿಕಾರಿಗಳ ಪದ ಪ್ರದಾನ ಕಾರ್ಯಕ್ರಮ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಗುಜ್ಜಾಡಿ ಗೋಪಾಲ ನಾಯಕ ರೋಟರಿ ಒಳಾಂಗಣದಲ್ಲಿ ಶುಕ್ರವಾರ ನಡೆಯಿತು. ಇಂಟರ್ಯಾಕ್ಟ್ ಕ್ಲಬ್ನ 2025-26ನೇ ಸಾಲಿನ ಅಧ್ಯಕ್ಷೆ ಪ್ರಥ್ವೀ ಚಿತ್ತಾಲ್ ಹಾಗೂ ಪದಾಧಿಕಾರಿಗಳಿಗೆ ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಕೃಷ್ಣ ಪೂಜಾರಿ ಅವರು ಪದಪ್ರದಾನ ನೆರವೇರಿಸಿ ಶುಭ ಹಾರೈಸಿದರು. ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್, ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆಯ ಉಪಪ್ರಾಂಶುಪಾಲ ಗೋಪಾಲ ದೇವಾಡಿಗ, ಕೋ-ಆರ್ಡಿನೇಟರ್ ಲವಿನಾ ಸಿಕ್ವೇರಾ, ಗಂಗೊಳ್ಳಿ ರೋಟರಿ ಕಾರ್ಯದರ್ಶಿ ರಾಮನಾಥ ಚಿತ್ತಾಲ್, ಶಿಕ್ಷಕರು, ರೋಟರಿ ಸದಸ್ಯರು, ಇಂಟರ್ಯಾಕ್ಟ್ ಕ್ಲಬ್ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಶ್ರೀರಾಮ ವಿವಿಧೋದ್ದೇಶ ಟ್ರಸ್ಟ್ ಇದರ ಹದಿಮೂರನೇ ವರ್ಷದ ಟ್ರಸ್ಟ್ ದಿನಾಚರಣೆಯು ಶ್ರೀ ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಜರುಗಿತು. ಸಮಾರಂಭದ ಉದ್ಘಾಟನೆಯನ್ನು ವಿಶ್ವರಾಮ ಕ್ಷತ್ರಿಯ ಸಂಘದ ಅಧ್ಯಕ್ಷರಾದ ಶಶಿಧರ್ ನಾಯಕ್ ಅವರು ನೆರವೇರಿಸಿದರು. ಅಧ್ಯಕ್ಷತೆಯನ್ನು ಆಡಳಿತ ಟ್ರಸ್ಟ್ ಗಳಾದ ಬಿ. ರಾಮಕೃಷ್ಣ ಶೇರುಗಾರ್ ವಹಿಸಿದ್ದರು. ಸಮಾರಂಭದಲ್ಲಿ ಮಂಗಳೂರು ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತರು ಸತೀಶ್ ಬಟವಾಡಿ, ಶ್ರೀ ಪದ್ಮನಾಭ ಕೋತ್ವಾಲ್ ವಿಕ್ರಮ ಪ್ರಶಸ್ತಿ ಪುರಸ್ಕೃತರು ಹಾಗೂ ಡಾಕ್ಟರ್ ಬಿ. ಲಕ್ಷ್ಮೀನಾರಾಯಣ ನಾಯಕ್ ಅವರುಗಳ ಸೇವೆಯನ್ನು ಗುರುತಿಸಿ, ಸನ್ಮಾನಿಸಿ ಅಭಿನಂದಿಸಲಾಯಿತು. ಸಮಾರಂಭದಲ್ಲಿ ಬೈಂದೂರು ವ್ಯಾಪ್ತಿಯ ರಾಮ ಕ್ಷತ್ರಿಯ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿದ್ಯಾರ್ಥಿ ವೇತನ ವಿತರಣೆ ವಿಶೇಷ ಧನಸಹಾಯ ವಿತರಣೆ ಹಾಗೂ ಅಶಕ್ತರಿಗೆ ಮತ್ತು ಅನಾಥ ರಿಗೆ ಸಹಾಯಧನವನ್ನು ಸಮಾರಂಭದ ವೇದಿಕೆಯಲ್ಲಿ ವಿತರಿಸಲಾಯಿತು. ಮುಖ್ಯ ಅತಿಥಿಗಳಾಗಿ ಸಮಾರಂಭದಲ್ಲಿ ತೀರ್ಥಹಳ್ಳಿ ರಾಮ ಕ್ಷತ್ರಿಯ ಸಂಘದ ಅಧ್ಯಕ್ಷ ಷಣ್ಮುಖ ತೀರ್ಥಹಳ್ಳಿ, ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಲಕ್ಷ್ಮಿನಾರಾಯಣ ಪಿ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗದ ವತಿಯಿಂದ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ 2025ನೇ ಸಾಲಿನ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ- ’ಪ್ರೇರಣಾ ದಿವಸ್ 2025ʼ ನಡೆಯಿತು. ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಕರ್ನಾಟಕದ ರಾಜ್ಯಪಾಲ ಥಾವರ್ಚಾಂದ್ ಗೆಹ್ಲೋಟ್, ಶಿಕ್ಷಣ ಕ್ಷೇತ್ರಕ್ಕೆ ಉತ್ಕೃಷ್ಟ ಸೇವೆಯನ್ನು ನೀಡುತ್ತಾ ದೇಶದ ಏಳಿಗೆಗೆ ಕೊಡುಗೆ ನೀಡುತ್ತಿರುವ ಶಿಕ್ಷಕರೆಲ್ಲರೂ ಸದಾ ಸ್ಮರಣಿಯರು ಹಾಗೂ ಅನುಕರಣನೀಯರು. ಜ್ಞಾನ, ಸಂಸ್ಕಾರ ಹಾಗೂ ನೈತಿಕ ಮೌಲ್ಯವನ್ನು ನೀಡುವವರು ಶಿಕ್ಷಕರು. ವಿದ್ಯಾರ್ಥಿಗಳಿಗೆ ಜ್ಞಾನದ ಜೊತೆ ಜೊತೆಯಲ್ಲಿ ಜೀವನದ ದಾರಿಯನ್ನು ತೋರಿಸುತ್ತಾರೆ. ದೀಪ ಹೇಗೆ ಕತ್ತಲೆಯನ್ನು ದೂರ ಮಾಡುತ್ತದೋ ಹಾಗೆ ಶಿಕ್ಷಕರು ಜ್ಞಾನ, ಮೌಲ್ಯ ಹಾಗೂ ಸಂಸ್ಕಾರದ ಮೂಲಕ ವಿದ್ಯಾರ್ಥಿಗಳ ಬದುಕನ್ನು ಬೆಳಗಿಸುತ್ತಾರೆ. ಆ ಮೂಲಕ ಸಮಾಜದ ಬೆಳವಣಿಗೆಗೆ ಕಾರಣರಾಗುತ್ತಾರೆ. ಪ್ರಾಚೀನ ಕಾಲದ ಚಾಣಕ್ಯನಾಗಿರಬಹುದು ಅಥವಾ ಆಧುನಿಕ ಕಾಲದ ಸರ್ವಪಳ್ಳಿ ರಾಧಾಕೃಷ್ಣರಿರಬಹುದು, ಅವರೆಲ್ಲರೂ ವಿದ್ಯಾರ್ಥಿಗಳಿಗೆ ಜ್ಞಾನವನ್ನು ನೀಡುವುದರ ಜೊತೆಗೆ ಸಮಾಜದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟದ ದೊಡ್ಡ ಗಣೇಶ ಸಾಕಷ್ಟು ಹಿರಿತನದ ಗಣೇಶೋತ್ಸವವಾಗಿದ್ದು, ಸುವರ್ಣ ಮಹೋತ್ಸವದ ಗಣೇಶೋತ್ಸವವನ್ನು ಅರ್ಥಪೂರ್ಣಗೊಳಿಸಲು ಪ್ರತಿಯೊಬ್ಬರು ಶ್ರಮಿಸುವಂತ್ತಾಗಲಿ ಎಂದು ಕೋಟದ ಅಮೃತೇಶ್ವರೀ ದೇಗುಲದ ಆಡಳಿತ ಮಂಡಳಿ ಅಧ್ಯಕ್ಷ ಆನಂದ್ ಸಿ. ಕುಂದರ್ ಕರೆ ನೀಡಿದರು. ಅವರು ಭಾನುವಾರ ಕೋಟದ ಸಾರ್ವಜನಿಕ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಇದೇ ಬರುವ ಅಗಸ್ಟ್ 27ರಿಂದ ಸೆ.4ರ ತನಕ ಕೋಟದ ಅಮೃತೇಶ್ವರೀ ಸಭಾಂಗಣದಲ್ಲಿ ನಡೆಯಲಿರುವ 50ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಧಾರ್ಮಿಕ ಪ್ರಜ್ಞೆ ಮೂಡಿಸಲು ಪ್ರಸ್ತುತ ಗಣೇಶೋತ್ಸವವು ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು ಗಣೇಶೋತ್ಸವ ವೇದಿಕೆ ಕಲ್ಪಿಸಲಿದೆ ಅಲ್ಲದೆ ಪರಿಸರಸ್ನೇಹಿ ಸುವರ್ಣ ಸಂಭ್ರಮವನ್ನಾಗಿಸಲಿದೆ ಎಂದರು. ಇದೇ ವೇಳೆ ಗಣ್ಯರ ಉಪಸ್ಥಿತಿಯಲ್ಲಿ ಸುವರ್ಣ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಅಮೃತೇಶ್ವರೀ ದೇಗುಲದ ಟ್ರಸ್ಟಿ ಸುಭಾಷ್ ಶೆಟ್ಟಿ, ಗಣೇಶೋತ್ಸವ ಸಮಿತಿ ಅಧ್ಯಕ್ಷ ರಮಾನಾಥ ಜೋಗಿ, ಕಾರ್ಯದರ್ಶಿ ಚಂದ್ರ ಆಚಾರ್, ಕೋಶಾಧಿಕಾರಿ ಶೀಲರಾಜ್ ಕಾಂಚನ್, ಉಪಾಧ್ಯಕ್ಷರಾದ ದೇವೇಂದ್ರ ಗಾಣಿಗ, ಜತೆ ಕಾರ್ಯದರ್ಶಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಆದ್ಯತೆ ನೀಡಿ ಬಳಿಕ ಆ ಪ್ರದೇಶಕ್ಕೆ ವಿಮಾನ ನಿಲ್ದಾಣ ನಿರ್ಮಾಣ ಕುರಿತು ಚಿಂತನೆ ನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ಬೆಂಗಳೂರಿನ ʼಕುಂದಾಪ್ರ ಕನ್ನಡ ಪ್ರತಿಷ್ಠಾನ (ರಿ.)ʼ ಬೆಂಗಳೂರಿನಲ್ಲಿ ಹಮ್ಮಿಕೊಂಡ ಎರಡು ದಿನಗಳ “ಕುಂದಾಪ್ರ ಕನ್ನಡ ಹಬ್ಬ-2025″ರ ಸಮಾರೋಪ ಸಮಾರಂಭ ದಿನವಾದ ಭಾನುವಾರ ಅವರು ಮಾತನಾಡಿದರು. ಇದೇ ವೇಳೆ ಖ್ಯಾತ ಸಿನಿಮಾ ನಿರ್ದೇಶಕ ಯೋಗರಾಜ್ ಭಟ್ ಅವರಿಗೆ ಡಿಸಿಎಂ ಸಮ್ಮುಖದಲ್ಲಿ ʼಊರ ಗೌರವʼ ಎನ್ನುವ ವಿಶೇಷ ಪುರಸ್ಕಾರ ಮಾಡಲಾಯಿತು. ‘ಕುಂದಾಪುರಕ್ಕೆ ಒಂದು ಸುಸಜ್ಜಿತ ಕುಂದಾಪ್ರ ಭವನ, ಒಂದು ವೈದ್ಯಕೀಯ ಕಾಲೇಜು ಹಾಗೂ ಕುಂದಾಪ್ರ ಸಮೀಪದ ಬೈಂದೂರಿನಲ್ಲಿ ಒಂದು ವಿಮಾನ ನಿಲ್ದಾಣ ಆಗಬೇಕು’ ಎಂದು ‘ಕುಂದಾಪುರ ಕನ್ನಡ ಪ್ರತಿಷ್ಠಾನ’ ಸರ್ಕಾರಕ್ಕೆ ಸಲ್ಲಿಸಿದ ಮನವಿಗೆ ಪ್ರತಿಕ್ರಿಯಿಸಿದ ಡಿಸಿಎಂ, “340 ಕಿ.ಮೀ. ಉದ್ದದ ಕರಾವಳಿಗೆ ಪ್ರತ್ಯೇಕ ಪ್ರವಾಸ ನೀತಿ ರೂಪಿಸುವ ಚಿಂತನೆ ಸರ್ಕಾರಕ್ಕಿದೆ, ಈ ನೀತಿ ಜಾರಿ ಬಳಿಕ ವಿಮಾನ ನಿಲ್ದಾಣದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಕುಂದಾಪ್ರ ಕನ್ನಡ ಕುರಿತು ಇನ್ನಷ್ಟು ಮಾಹಿತಿ ಸಂಗ್ರಹಿಸುವ ಮೂಲಕ ‘ಕುಂದಾಪ್ರ ಕನ್ನಡ ಅಧ್ಯಯನ ಪೀಠ’ವನ್ನು ಮತ್ತಷ್ಟು ಬಲಗೊಳಿಸುವ ಪ್ರಯತ್ನ ನಡೆಯಬೇಕು ಎಂದು ಮಾಜಿ ಸಂಸದ, ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಸದಸ್ಯರೂ ಆಗಿರುವ ಕೆ. ಜಯಪ್ರಕಾಶ್ ಹೆಗ್ಡೆ ಕರೆ ನೀಡಿದರು. ಕುಂದಾಪ್ರ ಕನ್ನಡ ಪ್ರತಿಷ್ಠಾನ ರಿ. ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್ನಲ್ಲಿ ಹಮ್ಮಿಕೊಂಡಿರುವ ಎರಡು ದಿನಗಳ “ಕುಂದಾಪ್ರ ಕನ್ನಡ ಹಬ್ಬ-2025” ಕಾರ್ಯಕ್ರಮದ ಮೊದಲ ದಿನವಾದ ಶನಿವಾರ ‘ಕುಂದಾಪ್ರ ಕನ್ನಡ ಅಧ್ಯಯನ ಪೀಠ’ವನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. ನಾಲ್ಕು ವರ್ಷಗಳ ಹಿಂದೆ ಕುಂದಾಪ್ರ ಕನ್ನಡ ಹಬ್ಬದಲ್ಲಿ ಈ ಅಧ್ಯಯನ ಪೀಠಕ್ಕೆ ಬೇಡಿಕೆ ಇಟ್ಟಿದ್ದರು. ನಂತರ ಅದಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಮಾತ್ರವಲ್ಲದೆ ಸರ್ಕಾರ ಕೂಡ ಒಪ್ಪಿಗೆ ನೀಡಿತು. ಬಳಿಕ ಸಿಎಂ ಆದ ಸಿದ್ದರಾಮಯ್ಯ ಅವರು ಈ ಪೀಠಕ್ಕೆ 1.5 ಕೋಟಿ ರೂ. ಮಂಜೂರು ಮಾಡಿದರು ಎಂದು ಹೆಗ್ಡೆ ತಿಳಿಸಿದರು. ಕುಂದಾಪ್ರ ಕನ್ನಡ ಬಗ್ಗೆ ಹಳ್ಳಿಯ ಮಹಿಳೆಯರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಯುವಜನಾಂಗ ಪತ್ರಿಕೋದ್ಯಮದ ಬಗ್ಗೆ ಆಸಕ್ತಿ ಹೊಂದಬೇಕು. ಆದರೆ ಯಾವುದೋ ಸಾಮಾಜಿಕ ಜಾಲತಾಣಗಳ ಸುಳ್ಳು ಸುದ್ದಿಗಳು, ಕಾಲ್ಪನಿಕ ಕಥೆಗಳನ್ನು ನಂಬಿಕೊಂಡು ಕೆಟ್ಟ ಫ್ಯಾಷನ್ನೊಂದಿಗೆ ಈ ರಂಗಕ್ಕೆ ಬರುವುದಕ್ಕಿಂತ ಒಳ್ಳೆ ವಿಷನ್ನ್ನು ಇಟ್ಟುಕೊಂಡು ಉತ್ತಮ ವಿಚಾರಗಳನ್ನು ಮೈಗೂಡಿಸಿಕೊಂಡು ಪತ್ರಿಕೋದ್ಯಮಕ್ಕೆ ಬನ್ನಿ ಎಂದು ಹಿರಿಯ ವರದಿಗಾರ ಲಕ್ಷ್ಮೀ ಮಚ್ಚಿನ ತಿಳಿಸಿದರು. ಅವರು ಮಣೂರು-ಪಡುಕರೆ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ ಆಶ್ರಯದಲ್ಲಿ ಶುಕ್ರವಾರ ನಡೆದ ಪತ್ರಿಕಾ ದಿನಾಚರಣೆ ಹಾಗೂ ಪತ್ರಿಕಾ ದಿನದ ಪುರಸ್ಕಾರ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಇಂದು ಸಮಾಜದಲ್ಲಿ ಸುಳ್ಳು ಯಾವುದು ಸತ್ಯ ಯಾವುದು ಎನ್ನುವುದನ್ನು ಪತ್ತೆ ಹಚ್ಚುವುದು ಕಷ್ಟವಾಗುವ ಸ್ಥಿತಿ ಇದೆ ಹಾಗೂ ಒಳ್ಳೆತನವನ್ನು ಗೌರವಿಸುವವರ ಸಂಖ್ಯೆ ಕೂಡ ಕಡಿಮೆ ಇದೆ. ಆದರೆ ಇವೆಲ್ಲದರ ನಡುವೆ ನಾವು ಒಳ್ಳೆಯ ವಿಚಾರಗಳನ್ನು ಮೈಗೂಡಿಸಿಕೊಂಡರೆ ಅದನ್ನು ಗೌರವಿಸುವ ವರ್ಗವೂ ಇದ್ದು ಒಳ್ಳೆತನವನ್ನು ಮರೆಯಬೇಡಿ ಎಂದರು. ಹಿರಿಯ ಪತ್ರಕರ್ತ ಯು.ಎಸ್. ಶೆಣೈ ಮಾತನಾಡಿ, ಪತ್ರಿಕೋದ್ಯಮದಲ್ಲಿ ಯುವಜನತೆಗೆ ಉತ್ತಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಕೆರೆಗಳ ವಿಸ್ತೀರ್ಣಕ್ಕೆ ಅನುಗುಣವಾಗಿ ಬಫರ್ ಜೋನ್ ನಿಗದಿಪಡಿಸಲು ಅನುಕೂಲವಾಗುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ಮಸೂದೆ ರಾಜ್ಯ ಸರ್ಕಾರ ತಿದ್ದುಪಡಿ ತರಲು ಮುಂದಾಗಿರುವುದಕ್ಕೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಸರಕಾರದ ಕಾರ್ಯವೈಕರಿಯ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾಲಿಗ್ರಾಮ ಪಟ್ಟಣ ಪಂಚಾಯಿತ ವ್ಯಾಪ್ತಿಯಲ್ಲಿನ ಕೆರೆಗಡಿ ಅಂಚಿನಿಂದ 30 ಮೀಟರ್ ಬಫರ್ ಜೋನ್ ಇರುವುದರಿಂದ ಸಾಲಿಗ್ರಾಮ ಪಟ್ಟಣ ಪಂಚಾಯಿತ ವ್ಯಾಪ್ತಿಯಲ್ಲಿ ಅತಿ ಕಡಿಮೆ ಜಾಗ ಹೊಂದಿರುವವರಿಗೆ ಮನೆ ನಿರ್ಮಾಣ ಹಾಗೂ ಇತರೆ ಅಭಿವೃದ್ಧಿ ಕೈಗೊಳ್ಳಲು ತುಂಬಾ ತೊಂದರೆ ಉಂಟಾಗುತ್ತಿದ್ದು ಈ ನಿಟ್ಟಿನಲ್ಲಿ ಶಾಸಕರು ಇಲಾಖಾ ಸಚಿವರು ಹಾಗೂ ಕಾರ್ಯದರ್ಶಿಗಳ ನಿರಂತರ ಸಂಪರ್ಕದಲ್ಲಿದ್ದು ಪ್ರಯತ್ನ ಫಲಪ್ರದ ಕಂಡಿದೆ. ಕೆರೆಗಳ ವಿಸ್ತೀರ್ಣಕ್ಕೆ ಅನುಗುಣವಾಗಿ ಬಫರ್ ಜೋನ್ ನಿಗದಿಯಾದಲ್ಲಿ ತುಂಡು ಭೂಮಿ ಹೊಂದಿದವರಿಗೆ ತುಂಬಾ ಅನುಕೂಲವಾಗಲಿದೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿ ಶಾಸಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
