ಕುಂದಾಪುರ: ಡಾ. ಸುಬ್ರಹ್ಮಣ್ಯ.ಬಿ ಇವರು ಪ್ರೊ.ಡಿ.ಕೃಷ್ಣ ಭಟ್ ಇವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ ಮಂಡಿಸಿದ ‘ ಸಿಂಥೆಸಿಸ್ ಆಫ್ ಗ್ರಾಫೇನ್ ಎಂಡ್ ಇಟ್ಸ್ ಕಾಂಪೊಸಿಟ್ಸ್ ಫಾರ್ ಎನರ್ಜಿ ಎಪ್ಲಿಕೇಶನ್ಸ್’ ಎನ್ನುವ ಮಹಾ ಪ್ರಬಂಧಕ್ಕೆ ಸುರತ್ಕಲ್ನ ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯವು ಪಿಎಚ್ಡಿ ಪದವಿ ನೀಡಿ ಗೌರವಿಸಿದೆ. ಬೈಂದೂರಿನ ಭದ್ರಯ್ಯನ ಮಂಜುನಾಥ ಶೇರುಗಾರ್ ಮತ್ತು ಪಾರ್ವತಿ ಶೇರುಗಾರ್ ದಂಪತಿಯ ಪುತ್ರನಾಗಿದ್ದು, ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜು ಮತ್ತು ಬೈಂದೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿರುತ್ತಾರೆ. ಪ್ರಸ್ತುತ ಇವರು ಮಂಬಯಿಯ ಪ್ರತಿಷ್ಠಿತ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಪೋಸ್ಟ್ ಡಾಕ್ಟರಲ್ ಫೆಲೊ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.
Author: ನ್ಯೂಸ್ ಬ್ಯೂರೋ
ಬೈಂದೂರು: ಶ್ರೀರಾಮ್ ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್ ನಿಯಮಿತ ಬೈಂದೂರು ಇದರ ನೂತನ ನಾಗೂರು ಶಾಖೆಯ ಉದ್ಘಾಟನಾ ಸಮಾರಂಭದ ಪ್ರಯುಕ್ತ ಸಹಕಾರಿ ಧುರೀಣ, ಬೈಂದೂರು ಕ್ಷೇತ್ರದ ಮಾಜಿ ಶಾಸಕ ದಿ. ಜಿ.ಎಸ್.ಆಚಾರ್ ಅವರ ಭಾವಚಿತ್ರ ಅನಾವರಣಗೊಳಿಸಲಾಯಿತು. ರಾಜ್ಯಸಭಾ ಸದಸ್ಯ, ಮಾಜಿ ಕೇಂದ್ರ ಸಚಿವ ಆಸ್ಕರ್ ಫೆನಾಂಡೀಸ್ ಭಾವಚಿತ್ರ ಅನಾವರಣಗೊಳಿಸಿ ಮಾತನಾಡಿ, ಸಹಕಾರಿ ಕ್ಷೇತ್ರ ಮುನ್ನೆಡೆಯಲು ಭದ್ರ ಬುನಾದಿ ಹಾಕಿದ ಜಿ.ಎಸ್ ಆಚಾರ್ ಅವರನ್ನು ನೆನಪಿಸಿಕೊಳ್ಳುವುದು ಬಹಳ ಮುಖ್ಯ. ಅವರು ಸಹಕಾರಿ ಕ್ಷೇತ್ರಕ್ಕೆ ನೀಡಿದ ಕೊಡುಗೆ ಮರೆಯುವಂತಿಲ್ಲ. ತನ್ನ ಸಹಕಾರಿ ಸಂಸ್ಥೆಯಲ್ಲಿ ಅವರ ನೆನಪು ಚಿರಸ್ಥಾಯಿಯಾಗುವಲ್ಲಿ ಅವರ ಭಾವಚಿತ್ರವನ್ನು ಅನಾವರಣಗೊಳಿಸಿದ್ದಕ್ಕಾಗಿ ಸಂಸ್ಥೆಯ ಅಧ್ಯಕ್ಷ ಎಸ್. ರಾಜು ಪೂಜಾರಿ ಅಭಿನಂದನಾರ್ಹರು ಎಂದರು. ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಕೇಂದ್ರ ಬ್ಯಾಂಕ್ ನಿರ್ದೇಶಕ ಬಿ. ರಘುರಾಮ ಶೆಟ್ಟಿ, ರಾಜ್ಯ ಕಾಂಗ್ರೆಸ್ನ ಕಾರ್ಯದರ್ಶಿ ಎಂ.ಎ ಗಫೂರ್, ತಾಪಂ ಮಾಜಿ ಸದಸ್ಯ ಹೆಚ್. ವಿಜಯ ಶೆಟ್ಟಿ, ಬೈಂದೂರು-ಉಪ್ಪುಂದ ಲಯನ್ಸ್ ಕ್ಲಬ್ ಅಧ್ಯಕ್ಷ ಜಿ. ಗೋಕುಲ್ ಶೆಟ್ಟಿ, ಕಿರಿಮಂಜೇಶ್ವರ ಗ್ರಾಪಂ ಮಾಜಿ ಅಧ್ಯಕ್ಷ…
ಗಂಗೊಳ್ಳಿ: ವಿಶ್ವಸಾಗರ ಕ್ರಿಕೆಟರ್ಸ್ ಮತ್ತು ಸಹರಾ ಕ್ರಿಕೆಟರ್ಸ್ ಇವರ ಜಂಟಿ ಆಶ್ರಯದಲ್ಲಿ ಗುಜ್ಜಾಡಿ ಶಾಲಾ ವಠಾರದಲ್ಲಿ ಜರಗಿದ ಜಿಲ್ಲಾ ಮಟ್ಟದ 30ಗಜಗಳ ಸೀಮಿತ ಓವರ್ಗಳ ಕ್ರಿಕೆಟ್ ಪಂದ್ಯಾಟದಲ್ಲಿ ನಾಯಕವಾಡಿ ಫ್ರೆಂಡ್ಸ್ ತಂಡವು ನ್ಯೂಸ್ಟಾರ್ ಕುಂದಾಪುರ ತಂಡವನ್ನು ಸೋಲಿಸಿ ಪ್ರಥಮ ಸ್ಥಾನ ಪಡೆದು ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ನಾಯಕವಾಡಿ ಫ್ರೆಂಡ್ಸ್ ತಂಡದ ಪ್ರಸಿದ್ಧ ಉತ್ತಮ ದಾಂಡಿಗ ಮತ್ತು ನ್ಯೂಸ್ಟಾರ್ ಕುಂದಾಪುರ ತಂಡದ ಆದಿತ್ಯ ಖಾರ್ವಿ ಉತ್ತಮ ಎಸೆತಗಾರ ಪ್ರಶಸ್ತಿಯನ್ನು ಪಡೆದುಕೊಂಡರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ರಾಮನಾಥ ಚಿತ್ತಾಲ್ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು. ಗಂಗೊಳ್ಳಿ ಹಿಂದು ಜಾಗರಣ ವೇದಿಕೆಯ ಸಹಸಂಚಾಲಕ ಶಂಕರ ದೇವಾಡಿಗ, ಗಂಗೊಳ್ಳಿಯ ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ನ ಕಾರ್ಯದರ್ಶಿ ನಾಗರಾಜ ಖಾರ್ವಿ, ಸಹರಾ ಕ್ರಿಕೆಟರ್ಸ್ನ ಅಧ್ಯಕ್ಷ ಚೇತನ್ ಆರ್ಕಾಟಿ ಉಪಸ್ಥಿತರಿದ್ದರು. ರೋಹಿತ್ ಆರ್ಕಾಟಿ ಸ್ವಾಗತಿಸಿದರು. ಸುಂದರ ಜಿ. ಕಾರ್ಯಕ್ರಮ ನಿರೂಪಿಸಿದರು. ವಿಶ್ವಸಾಗರ ಕ್ರಿಕೆಟರ್ಸ್ನ…
ಗಂಗೊಳ್ಳಿ: ಬೈಂದೂರು ವಲಯದ ಗುಜ್ಜಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 96ನೇ ವಾರ್ಷಿಕೋತ್ಸವ ಸಮಾರಂಭ ಡಿ.12ರಂದು ಶಾಲೆಯ ಶಿವರಾಜ್ ಸ್ಮಾರಕ ರಂಗಮಂಟಪದಲ್ಲಿ ನಡೆಯಲಿದೆ. ಬೆಳಿಗ್ಗೆ ನಡೆಯಲಿರುವ ಧ್ವಜಾರೋಹಣ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗುಜ್ಜಾಡಿ ಗ್ರಾಪಂ ಅಧ್ಯಕ್ಷ ಹರೀಶ ಮೇಸ್ತ ವಹಿಸಲಿದ್ದು, ಗಿರೀಶ ಕೊಡಂಚ ಗುಜ್ಜಾಡಿ ಮತ್ತು ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಸೀತಾರಾಮ ಶೆಟ್ಟಿ ಬಹುಮಾನ ವಿತರಿಸಲಿದ್ದಾರೆ. ಸಂಜೆ ನಡೆಯಲಿರುವ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ ವಹಿಸಲಿದ್ದು, ಕುಂದಾಪುರ ಉದ್ಯಮಿ ಶೇಷಯ್ಯ ಕೊತ್ವಾಲ್ ಬಹುಮಾನ ವಿತರಿಸಲಿದ್ದಾರೆ ಎಂದು ಶಾಲೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಗಂಗೊಳ್ಳಿ: ಗಂಗೊಳ್ಳಿಯ ಶ್ರೀ ವೀರೇಶ್ವರ ಮತ್ತು ಉಮಾಮಹೇಶ್ವರ ದೇವರ ಕಾರ್ತಿಕ ಲಕ್ಷದೀಪೋತ್ಸವ ಡಿ.10 ರಂದು ನಡೆಯಲಿದೆ. ದೀಪೋತ್ಸವದ ಅಂಗವಾಗಿ ಲೋಕ ಕಲ್ಯಾಣಾರ್ಥ ಶ್ರೀದೇವರಿಗೆ ೫೦೫ ಸಿಯಾಳ ಅಭಿಷೇಕ, ಮಧ್ಯಾಹ್ನ ಮಹಾ ಅನ್ನಸಂತರ್ಪಣೆ, ಸಂಜೆ 7 ಗಂಟೆಗೆ ಶ್ರೀದೇವರ ಪುಷ್ಪರಥದ ಉತ್ಸವ ಪುರಮೆರವಣಿಗೆ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಗಂಗೊಳ್ಳಿ: ಪ್ರತಿಯೊಬ್ಬ ಪುರುಷನೂ ಮಹಿಳೆಯರನ್ನು ಮತ್ತು ಅವರ ಅಭಿಪ್ರಾಯಗಳನ್ನು ಗೌರವಿಸುವುದನ್ನು ಕಲಿಯಬೇಕು.ಹಾಗಾದಾಗ ತನ್ನಿಂದ ತಾನೆ ಸಮಾಜದಲ್ಲಿ ಸ್ತ್ರೀ ಪುರುಷರ ನಡುವೆ ಸಮಾನತೆ ಎನ್ನುವುದು ನಿಜವಾದ ರೂಪದಲ್ಲಿ ಜಾರಿಗೆ ಬರುವುದನ್ನು ಕಾಣಲು ಸಾಧ್ಯ.ಎಂದು ಸರಸ್ವತಿ ವಿದ್ಯಾಲಯದ ಪ್ರಾಂಶುಪಾಲ ಆರ್, ಎನ್.ರೇವಣ್ಕರ್ ಹೇಳಿದರು ಅವರು ಇತ್ತೀಚೆಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿನಿಯರಿಗಾಗಿ ವಿಶೇಷವಾಗಿ ಹಮ್ಮಿ ಕೊಂಡಿದ್ದ ಮಹಿಳಾ ವೇದಿಕೆ ಕಾರ್ಯಕ್ರಮದ ಅಧ್ಯಕ್ಷ ಸ್ಥಾನದಿಂದ ಮಾತನಾಡಿದರು. ಮಹಿಳಾ ಹಕ್ಕು ,ಶಿಕ್ಷಣ,ಸಮಾನತೆ, ಸಬಲೀಕರಣ ಇತ್ಯಾದಿ ವಿಚಾರಗಳ ಕುರಿತಂತೆ ವಿದ್ಯಾರ್ಥಿನಿಯರಾದ ಬಬಿತಾಶ್ರೀ, ಆಯಿಷಾ, ಅನುಷಾ, ಜಯಲಕ್ಷ್ಮಿ, ಪೂರ್ಣಿಮಾ, ಅಶ್ವಿನಿ, ತನಿಶಾ, ಬಿಂದು, ರಾಧಿಕಾ, ದಿಶಾ, ಐಶ್ವರ್ಯ, ಲಾಸ್ಯ, ದಿವ್ಯಜ್ಯೋತಿ, ಸ್ವಾತಿ, ರಕ್ಷಿತಾ ಮತ್ತು ಸುಶ್ಮಿತಾ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು ಸರಸ್ವತಿ ವಿದ್ಯಾಲಯ ಕಾಲೇಜಿನ ಉಪನ್ಯಾಸಕಿಯರಾದ ಕವಿತಾ ಎಮ್ ಸಿ, ಆರ್.ಕೆ ಸುಗುಣ, ಸುಮತಿ ಉಡುಪ ಮತ್ತು ಸಿಂಡ್ರೆಲ್ಲಾ ಗೊನ್ಸಾಲ್ವಿಸ್ ಅವರು…
ಕುಂದಾಪುರ: ಬೆಂಗಳೂರಿನ ಕಲಾಗ್ರಾಮದಲ್ಲಿ ನಡೆದ ಚೈತನ್ಯ ಆರ್ಟ್ಸ್ ಅಕಾಡೆಮಿ (ಸಾಂಸ್ಕೃತಿಕ ಪ್ರತಿಭಾನ್ವೇಷಣ ಕೇಂದ್ರ) ಸಂಸ್ಥೆಯಿಂದ ಗುರು ಪುರಸ್ಕಾರ್ ನೀಡಿ ಗೌರವಿಸಲಾಯಿತು. ಸಂದೀಪ್ ಅವರ ಸಾಹಿತ್ಯ, ಪತ್ರಿಕೋದ್ಯಮ ಹಾಗೂ ಇತರೇ ಸಾಂಸ್ಕೃತಿಕ ವಿಭಾಗದ ಸಾಧನೆ ಗಮನಿಸಿ ಈ ಪ್ರಶಸ್ತಿ ನೀಡಲಾಗಿದೆ.
ಗಂಗೊಳ್ಳಿ : ವಿಶ್ವಸಾಗರ ಕ್ರಿಕೆಟರ್ಸ್ ಮತ್ತು ಸಹರಾ ಕ್ರಿಕೆಟರ್ಸ್ ಇವರ ಜಂಟಿ ಆಶ್ರಯದಲ್ಲಿ ಜಿಲ್ಲಾ ಮಟ್ಟದ 30 ಗಜಗಳ ಸೀಮಿತ ಓವರ್ಗಳ ಕ್ರಿಕೆಟ್ ಪಂದ್ಯಾಟ ಶನಿವಾರ ಗುಜ್ಜಾಡಿ ಶಾಲಾ ವಠಾರದಲ್ಲಿ ಜರಗಿತು. ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ಕ್ರಿಕೆಟ್ ಪಂದ್ಯಾಟ ಉದ್ಘಾಟಿಸಿ ಶುಭ ಹಾರೈಸಿದರು. ಗುಜ್ಜಾಡಿ ಗ್ರಾಪಂ ಅಧ್ಯಕ್ಷ ಹರೀಶ ಮೇಸ್ತ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿಯ ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ನ ಕಾರ್ಯದರ್ಶಿ ನಾಗರಾಜ ಖಾರ್ವಿ, ಸಹರಾ ಕ್ರಿಕೆಟರ್ಸ್ನ ಅಧ್ಯಕ್ಷ ಚೇತನ್ ಆರ್ಕಾಟಿ, ವಿಶ್ವಸಾಗರ ಕ್ರಿಕೆಟರ್ಸ್ನ ಅಧ್ಯಕ್ಷ ಅಕ್ಷಯ ಖಾರ್ವಿ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಚೇತನ ಖಾರ್ವಿ ಸ್ವಾಗತಿಸಿದರು. ಸಉಂದರ ಜಿ. ಕಾರ್ಯಕ್ರಮ ನಿರೂಪಿಸಿದರು. ರೋಹಿತ್ ಆರ್ಕಾಟಿ ವಂದಿಸಿದರು. ಉಡುಪಿ ಜಿಲ್ಲೆಯ ಸುಮಾರು ೨೫ ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಿದೆ.
ಬೈಂದೂರು: ಸಮಾಜದಲ್ಲಿ ಇತ್ತೀಚಿಗೆ ಯುವಜನರು ಅದರಲ್ಲಿಯೂ ಪದವೀಧರರು ಸಂಗದೋಷದಿಂದ ತಪ್ಪುದಾರಿಯಲ್ಲಿ ಸಾಗಿ ಅಪರಾಧ ಕೃತ್ಯಗಳನ್ನು ಎಸಗುತ್ತಿರುವುದು ಆಘಾತಕಾರಿಯಾಗಿದೆ. ಭವಿಷ್ಯದ ಸಮಾಜಕ್ಕೆ ಆಸ್ತಿಯಾಗಿರುವ ಇಂದಿನ ವಿದ್ಯಾರ್ಥಿಗಳಿಗೆ ತಮ್ಮ ಕರ್ತವ್ಯ ಹಾಗೂ ಜವಾಬ್ದಾರಿಗಳ ಬಗ್ಗೆ ಸರಿಯಾದ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಶಿಕ್ಷಕರು ಶ್ರಮಿಸಬೇಕು ಎಂದು ತಾಪಂ ಸದಸ್ಯ, ಕಾಲೇಜಿನ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಎಸ್. ರಾಜು ಪೂಜಾರಿ ಹೇಳಿದರು. ಬೈಂದೂರು ಪದವಿಪೂರ್ವ ಕಾಲೇಜಿನ ಪ್ರಸಕ್ತ ಸಾಲಿನ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಇಂದಿನ ಕೆಲವು ಸರ್ಕಾರ ಹಾಗೂ ಖಾಸಗಿ ಸಂಸ್ಥೆಗಳ ವ್ಯವಸ್ಥೆಗಳು ಎತ್ತಲೋ ಸಾಗುತ್ತಿರುವುದನ್ನು ಕಾಣುತ್ತಿದ್ದೇವೆ. ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವುದರಿಂದ ದೇಶಕ್ಕೆ ಅಭಿವೃದ್ದಿಗೆ ಪೂರಕವಾದ ಕೊಡುಗೆ ನೀಡಿದಂತಾಗುತ್ತದೆ. ಜ್ಞಾನ ಭಂಡಾರವಾಗಿರುವ ಶಿಕ್ಷಕರು ತಮ್ಮ ಜವಾಬ್ದಾರಿ ಅರಿತು ಕೆಲಸ ನಿರ್ವಹಿಸಿದರೆ ಸಧೃಡ ದೇಶ ನಿರ್ಮಾಣ ಹಾಗೂ ಸಮಾಜಕ್ಕೆ ಉತ್ತಮ ಸಾಧಕರನ್ನು ಕೊಡುಗೆಯಗಿ ನೀಡಬಹುದು. ಗ್ರಾಮೀಣ ಭಾಗದಲ್ಲಿರುವ ಮಕ್ಕಳು ಬೇರೆ ಬೇರೆ ತಂತ್ರಜ್ಞಾನದ ಮೂಲಕ ವೈಜ್ಞಾನಿಕವಾಗಿಯೂ ಮುಂದಿದ್ದು, ಅಂತಹ ವಿದ್ಯಾರ್ಥಿಗಳಲ್ಲಿ ಒಳ್ಳೆಯ ಚಿಂತನೆಗಳನ್ನು ತುಂಬಿ ಅವರನ್ನು…
ಹಕ್ಲಾಡಿಯ ಶ್ರೀ ಕೊಳ್ಕೆಬೈಲು ಸೂರಪ್ಪ ಶೆಟ್ಟಿ ಪ್ರೌಢಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಸಂಪನ್ನ ಕುಂದಾಪುರ: ಆಂಗ್ಲ ಮಾಧ್ಯಮ ಶಾಲೆಗಳಲ್ಲಿನ ಶಿಕ್ಷಣದ ಗುಣಮಟ್ಟವನ್ನು ಕನ್ನಡ ಮಾಧ್ಯಮ ಶಾಲೆಗಳಲ್ಲೂ ಅಳವಡಿಸಿಕೊಂಡು ಮುನ್ನಡೆದರೆ ಕನ್ನಡ ಮಾಧ್ಯಮದತ್ತ ಪೋಷಕರು ಒಲವು ತೋರುತ್ತಾರೆ. ಸರಕಾರ ಶಿಕ್ಷಣಕ್ಕೆ ನೂರಾರು ಕೋಟಿ ವ್ಯಯಿಸುತ್ತಿರುವಾಗ ಉತ್ತಮ ಶಿಕ್ಷಣವನ್ನು ನೀಡಿ ಕನ್ನಡ ಮಾಧ್ಯಮ ಶಾಲೆಗಳಿಗೆ ಮರುಜೀವ ನೀಡಬೇಕಿದೆ. ಕನ್ನಡ ಮಾಧ್ಯಮದ ಸೋಲು ಕನ್ನಡದ ಸೋಲು ಎಂದೇ ತಿಳಿಯಬೇಕಾಗುತ್ತದೆ ಎಂದು ಎಂದು ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ್ ಆಳ್ವ ಹೇಳಿದರು. ಅವರು ಹಕ್ಲಾಡಿಯ ಶ್ರೀ ಕೊಳ್ಕೆಬೈಲು ಸೂರಪ್ಪ ಶೆಟ್ಟಿ ಪ್ರೌಢಶಾಲೆಯ ಸುವರ್ಣ ಮಹೋತ್ಸವದಲ್ಲಿ ಸುವರ್ಣ ಮಹೋತ್ಸವ ವೇದಿಕೆ 3ರಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಶಿಕ್ಷಣ ಸಂಸ್ಥೆಗಳು ಐವತ್ತು ವರ್ಷಗಳನ್ನು ಪೂರೈಸುವುದು ಮಹತ್ವದ್ದಾಗಿರುತ್ತದೆ. ಅಂದಿನ ದಿನಗಳಲ್ಲಿಯೇ ಶಿಕ್ಷಣದ ಬಗ್ಗೆ ಕಾಳಜಿಯಿಂದ ಶಿಕ್ಷಣ ಸಂಸ್ಥೆಗಳನ್ನು ಹುಟ್ಟುಹಾಕಿದ ಹಿನ್ನೆಲೆಯನ್ನು ಯಾರೂ ಮರೆಯಬಾರದು. ಇಂಥಹ ಗ್ರಾಮೀಣ ಭಾಗದ ಶಿಕ್ಷಣ ಸಂಸ್ಥೆಗಳು ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು ಎಂದರು. ಸುವರ್ಣ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಬಾಳೆಮನೆ…
