ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರಾವಳಿ ಕರ್ನಾಟಕದ ಯುವಜನರಿಗೆ ಉದ್ಯೋಗ ಮತ್ತು ವೃತ್ತಿ ಅವಕಾಶಗಳನ್ನು ಒದಗಿಸುವ ಉದ್ದೇಶದಿಂದ ನಡೆಯುತ್ತಿರುವ ಪ್ರಾದೇಶಿಕ ಪ್ರಮುಖ ಕಾರ್ಯಕ್ರಮವಾದ ಜಾಬ್ಸ್ ಎಕ್ಸ್ಪ್ರೆಸ್ 2026, ಸೆಪ್ಟೆಂಬರ್ 17 ಮತ್ತು 18, 2026ರಂದು ಕುಂದಾಪುರದ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT)ಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ 35ಕ್ಕೂ ಅಧಿಕ ಪ್ರಮುಖ ಕಂಪನಿಗಳು ಭಾಗವಹಿಸಲಿದ್ದು, 5,000ಕ್ಕೂ ಅಧಿಕ ಉದ್ಯೋಗಾವಕಾಶಗಳನ್ನು ಒದಗಿಸಲಿವೆ. ಇದರ ಮೂಲಕ ಕರಾವಳಿ ಕರ್ನಾಟಕದ ವಿದ್ಯಾರ್ಥಿಗಳು, ಪದವೀಧರರು ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ನೇರವಾಗಿ ಕಂಪನಿಗಳೊಂದಿಗೆ ಸಂಪರ್ಕ ಸಾಧಿಸಿ ವೃತ್ತಿ ಅವಕಾಶಗಳನ್ನು ಪಡೆಯಲು ವೇದಿಕೆ ಕಲ್ಪಿಸಲಾಗುತ್ತಿದೆ. ನುವಿನ್ ಗ್ಲೋಬಲ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ (Nuhvin Global Services Pvt. Ltd.), 24/7.ai, ಟಾಟಾ ವಿಸ್ಟ್ರಾನ್ (TATA Wistron), ಟಾಟಾ ಎಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ (Tata Electronics Pvt. Ltd.), ವಿಪ್ರೋ ಕವಾಸಕಿ ಪ್ರಿಸಿಷನ್ ಮೆಕ್ ಲಿಮಿಟೆಡ್ (Wipro Kawasaki Precision Mech Ltd.), ವಿನ್‌ಮ್ಯಾನ್ ಸಾಫ್ಟ್‌ವೇರ್ (Winman Software), ಎಮ್ಮ್ವೀ (EMMVEE), ಫ್ಲಿಪ್‌ಕಾರ್ಟ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗೋಕರ್ಣ: ಸೂರ್ಯ, ಚಂದ್ರ ಹಾಗೂ ಗಾಳಿಯ ಸಂಸರ್ಗವನ್ನು ಹೊಂದಿರುವ ನೀರು ಮಾತ್ರ ಬಳಕೆಗೆ ಯೋಗ್ಯ. ಸೂರ್ಯ ಕಿರಣ ಕ್ರಿಮಿ ನಾಶಕ ಹಾಗೂ ಜೀವ ಚೈತನ್ಯದ ಸೆಲೆಯಾದರೆ, ಚಂದ್ರ ಕಿರಣ ನೀರಿಗೆ ತಂಪು ನೀಡುವ ಜೊತೆಗೆ ಔಷಧೀಯ ಗುಣಗಳನ್ನು ತುಂಬುತ್ತದೆ ಹಾಗೂ ವಾಯುವಿನಿಂದಾಗಿ ನೀರು ಸ್ವಯಂ ಶುದ್ಧಿಯನ್ನು ಹೊಂದುತ್ತದೆ. ಹಾಗಾಗಿ ಸೂರ್ಯ, ಚಂದ್ರ ಮತ್ತು ಗಾಳಿಯ ಸಂಪರ್ಕವಿಲ್ಲದ ನೀರು ಬಳಕೆಗೆ ಅಯೋಗ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ಬುಧವಾರ ರಂದು ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ನದಿ ನೀರಿನ ಕುರಿತಾಗಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಇಂದು ಸೂರ್ಯ, ಚಂದ್ರ ಹಾಗೂ ಗಾಳಿಯ ಸಂಪರ್ಕ ಇಲ್ಲದ ನೀರನ್ನೇ ನಾವು ಬಳಸುತ್ತಿದ್ದೇವೆ. ಸೂರ್ಯನ ಬೆಳಕು ಬೀಳದಂತೆ ಸಿಮೆಂಟು ಅಥವಾ ಪ್ಲಾಸ್ಟಿಕ್ ಟ್ಯಾಂಕುಗಳಲ್ಲಿ ನೀರನ್ನು ಸಂಗ್ರಹಿಸಿ, ಪ್ಲಾಸ್ಟಿಕ್ ಪೈಪುಗಳಲ್ಲಿ ತಂದು ನೀರನ್ನು ಬಳಸುತ್ತಿದ್ದೇವೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಸೆ.10: ತಾಲೂಕಿನ ಶಿರೂರು ಕೆಳಪೇಟೆ ಸಮೀಪ ಜರುಗಿದ ಸರಣಿ ಅಪಘಾತದಲ್ಲಿ ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಬೈಕ್ ಸವಾರ ಶಿರೂರು ನಿವಾಸಿ ನಾಗೇಂದ್ರ ಮಹಾಲೆ (45) ಮೃತ ದುರ್ದೈವಿ. ಸರಣಿ ಅಪಘಾತದಲ್ಲಿ ಪೊಲೀಸ್ ವಾಹನ ಸೇರಿದಂತೆ ನಾಲ್ಕು ಬೈಕ್ ಜಖಂಗೊಂಡಿದೆ. ಶಿರೂರು ಗ್ರೀನ್ ವ್ಯಾಲಿ ಶಾಲೆಯ ಸಮೀಪದ ಬೆಳಿಗ್ಗೆ ಅಪಘಾತಗೊಂಡು ನಿಂತಿದ್ದ ವಾಹನವನ್ನು ಮೇಲೆತ್ತುವ ಸಂದರ್ಭದಲ್ಲಿ ಈ ಅವಘಡ ನಡೆದಿದೆ. ಬೈಂದೂರು ಕಡೆಯಿಂದ ಶಿರೂರು ಕಡೆಗೆ ತೆರಳುತ್ತಿದ್ದ ಲಾರಿಯು ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ್ದು, ಮುಂದೆಯೇ ಇದ್ದ ಬೈಕ್, ಹೈವೆ ಪೆಟ್ರೋಲ್ ವಾಹನ ಸೇರಿದಂತೆ ಒಟ್ಟು ನಾಲ್ಕು ಬೈಕುಗಳಿಗೆ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಓರ್ವ ಬೈಕ್ ಸವಾರ ನಾಗೇಂದ್ರ ಮಹಾಲೆ ಅವರ ತಲೆ ಭಾಗಕ್ಕೆ ಪೆಟ್ಟು ಬಿದ್ದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇನ್ನಿತರ ಬೈಕ್ ಸವಾರರು ಹಾಗೂ ಹೈವೆ ಪಟ್ರೋಲ್ ವಾಹನದಲ್ಲಿದ್ದ ಪೊಲೀಸರು ದೊಡ್ಡ ಅಪಾಯದಿಂದ ಪಾರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಧಾರ್ಮಿಕ ಮತ್ತು ಸಾಮಾಜಿಕ ಸೌಹಾರ್ದತೆಯ ಪ್ರತೀಕವಾಗಿರುವ ಸಾರ್ವಜನಿಕ ಉತ್ಸವಗಳು ಜನಮನದಲ್ಲಿ ಭಕ್ತಿಭಾವದ ಜೊತೆಗೆ ಐಕ್ಯತೆಯನ್ನು ಮೂಡಿಸುತ್ತವೆ ಎಂದು ಯು. ಬಿ. ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಇಲ್ಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ 53ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧಿಕೃತ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ದೇವಸ್ಥಾನದ ಸನ್ನಿಧಿಯಲ್ಲಿ ಕಳೆದ ಐದು ದಶಕಗಳಿಗೂ ಹೆಚ್ಚು ಕಾಲದಿಂದ ಅತ್ಯಂತ ಶ್ರದ್ಧಾ-ಭಕ್ತಿ ಹಾಗೂ ಶಿಸ್ತಿನಿಂದ ಗಣೇಶೋತ್ಸವವನ್ನು ಆಚರಿಸಿಕೊಂಡು ಬರುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಸಂದೇಶ್ ಭಟ್, ಖ್ಯಾತ ಪ್ರಶ್ನಾ ಚಿಂತಕರು ಹಾಗೂ ದೈವಜ್ಞರಾದ ವಿಷ್ಣು ಪ್ರಸಾದ್ ನಂಬೂದರಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಾರಾಯಣ ಖಾರ್ವಿ, ಪ್ರಮುಖರಾದ ದೀಪಕ್ ಕುಮಾರ್ ಶೆಟ್ಟಿ, ನಾರಾಯಣ ಹೆಗ್ಡೆ, ದಿವಾಕರ ಶೆಟ್ಟಿ, ನಿತಿನ್ ಶೆಟ್ಟಿ, ಅನಿಲ್ ಡಿ., ಪುರುಷೋತ್ತಮದಾಸ್, ಓಂಕಾರ್, ಗೋಪಾಲ, ರಂಜಿತ್ ಶೆಟ್ಟಿ, ಪ್ರಭಾಕರ್ ಶೆಟ್ಟಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜೆಸಿಐ ಕುಂದಾಪುರ ಸಿಟಿ ಆಯೋಜಿಸಿದ ಜೆಸಿಐ ಸಪ್ತಾಹದ ಉದ್ಘಾಟನೆಯಲ್ಲಿ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅವರ ಶೈಕ್ಷಣಿಕ, ಸಾಮಾಜಿಕ ಕ್ಷೇತ್ರದ ಸಾಧನೆಯನ್ನು ಗುರುತಿಸಿ, ವಿದ್ಯಾದೀವಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಕುಂದಾಪುರದ ಪೊಲೀಸ್ ವೃತ್ತನಿರೀಕ್ಷಕ ಜಯರಾಮ್ ಡಿ. ಗೌಡ, ಲಯನ್ ಜಿಲ್ಲೆ 317 ಸಿಯ ಪ್ರಥಮ ಉಪ ಗವರ್ನರ್ ಹರಿಪ್ರಸಾದ್ ರೈ ಅತಿಥಿಗಳಾಗಿ ಉಪಸ್ಥಿತರಿದ್ದರು. ಈ ಸಂದರ್ಭ ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕ ರಕ್ಷಿತ್ ರಾವ್ ಗುಜ್ಜಾಡಿ, ಜೆಸಿಐ ಸಪ್ತಾಹದ ಸಂಚಾಲಕ ರಾಘವೇಂದ್ರ ಕುಲಾಲ್, ನಿಕಟಪೂರ್ವ ಅಧ್ಯಕ್ಷ ಯುಸೂಫ್ ಸಲೀಮ್, ಜೆಸಿಐನ ಪದಾಧಿಕಾರಿಗಳಾದ ನವೀನ್ ಸಂಭ್ರಮ್, ದೀಪಾ ಉಪಸ್ಥಿತರಿದ್ದರು. ಜೆಸಿಐ ಕುಂದಾಪುರ ಸಿಟಿಯ ಅಧ್ಯಕ್ಷ ಕಿರಣ್ ದೇವಾಡಿಗ ಸ್ವಾಗತಿಸಿ, ಹುಸೇನ್ ಹೈಕಾಡಿ ಪ್ರಸ್ತಾವಿಸಿದರು. ಕಾಲೇಜಿನ ಇಂಗ್ಲೀಷ್ ಸಹಾಯಕ ಪ್ರಾಧ್ಯಾಪಕಿ ಸ್ವಾತಿ ಜಿ. ರಾವ್ ವಂದಿಸಿ, ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ, ಜಿಲ್ಲಾ ಆಸ್ಪತ್ರೆ ಉಡುಪಿ, ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ (ಕಭೀ), ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಭೌತಚಿಕಿತ್ಸೆಯ ದಿನದ ಅಂಗವಾಗಿ ಬ್ರಹ್ಮಾವರದ ರುಡ್ ಸೆಟ್ ಸಂಸ್ಥೆಯಲ್ಲಿ ಸಾರ್ವಜನಿಕ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು DLO ಮತ್ತು KaBHI ಕಾರ್ಯಕ್ರಮದ ನೋಡಲ್ ಅಧಿಕಾರಿ ಡಾ. ಲತಾ ನಾಯಕ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಮಾತನಾಡಿ, ಪಾರ್ಶ್ವವಾಯು ತಡೆಗಟ್ಟುವಿಕೆ, ಆರಂಭಿಕ ರೋಗನಿರ್ಣಯ ಮತ್ತು ಸಕಾಲಿಕ ಚಿಕಿತ್ಸೆಯ ಮಹತ್ವದ ಕುರಿತು ಮಾತನಾಡಿದರು. ಅಲ್ಲದೆ ಸಾರ್ವಜನಿಕ ಆರೋಗ್ಯವನ್ನು ಕಾಪಾಡುವಲ್ಲಿ ಭೌತಚಿಕಿತ್ಸಕರ ಪಾತ್ರವನ್ನು ಶ್ಲಾಘಿಸಿದರು.ನಂತರ ಕಭೀ ಕಾರ್ಯಕ್ರಮ ದ ಕುರಿತು ಹಾಗೂ ಪಾರ್ಶ್ವವಾಯು (ಸ್ಟ್ರೋಕ್) ತಡೆಗಟ್ಟುವಿಕೆ ಮತ್ತು ಹೃದಯರಕ್ತನಾಳದ ಆರೋಗ್ಯದ ಕುರಿತು ಸಾರ್ವಜನಿಕ ಜಾಗೃತಿ ಅಧಿವೇಶನ ನಡೆಯಿತು. ಈ ಅಧಿವೇಶನದಲ್ಲಿ ಪಾರ್ಶ್ವವಾಯು ಮತ್ತು ಹೃದಯ ಸಂಬಂಧಿ ಕಾಯಿಲೆಗಳ ತಡೆಗಟ್ಟುವಿಕೆ, ನಿರ್ವಹಣೆ ಮತ್ತು ಪುನರ್ವಸತಿಯಲ್ಲಿ ಭೌತಚಿಕಿತ್ಸಕರ ಮಹತ್ವದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜನರ ಸಮಸ್ಯೆ ಹಾಗೂ ಅಹವಾಲುಗಳನ್ನು ಅವರಿರುವಲ್ಲಿಯೇ ಆಲಿಸಿ, ಸ್ಥಳದಲ್ಲಿಯೇ ಪರಿಹಾರ ನೀಡಲು ಸರಕಾರವು ಮಹತ್ವಕಾಂಕ್ಷಿ ಯೋಜನೆಯಾದ ಪ್ರಜಾಸೇವಾ ಆಂದೋಲನ ಸಭೆಗಳನ್ನು ರಾಜ್ಯದಾದ್ಯಂತ ಆಯೋಜಿಸುವುದರೊಂದಿಗೆ ಆ ಮೂಲಕ ಜನರ ಸಮಸ್ಯೆಗಳಿಗೆ ಧ್ವನಿಯಾಗುವ ಕೆಲಸ ಮಾಡುತ್ತಿದೆ ಎಂದು ರಾಜ್ಯ ಸರ್ಕಾರದ ಆಹಾರ, ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್ ಹೇಳಿದರು. ಅವರು ಬುಧವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಪ್ರಜಾಸೇವಾ ಇಲಾಖೆ ಹಾಗೂ ಜಿಲ್ಲಾಡಳಿತ ಉಡುಪಿ ಇವರ ಸಹಯೋಗದಲ್ಲಿ ನಡೆದ ಉಡುಪಿ ತಾಲೂಕು ಮಟ್ಟದ ಪ್ರಜಾಸೇವೆ ಆಂದೋಲನ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಸೆಪ್ಟೆಂಬರ್ 5 ರಂದು ವಿಜಯನಗರ ಜಿಲ್ಲೆಯಲ್ಲಿ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಜಾಸೇವೆ ಆಂದೋಲನ ಸಭೆಗೆ ಚಾಲನೆ ನೀಡಿದ್ದು, ರಾಜ್ಯದಾದ್ಯಂತ ಏಕಕಾಲಕ್ಕೆ ಕಾರ್ಯಕ್ರಮ ಆಯೋಜಿಸಲು ನಿರ್ಧಾರಿಸಲಾಗಿತ್ತು. ಆದರೆ ಉಡುಪಿಯಲ್ಲಿ ಆ ದಿನದಂದು ಜಿಲ್ಲೆಯ ಜನತೆಯ ಅತೀ ದೊಡ್ಡ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಉಡುಪಿ ಜಿಲ್ಲಾ ಮಟ್ಟದ 14 ಮತ್ತು 17 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ 2026-27ನೇ ಸಾಲಿನ ಕರಾಟೆ ಸ್ಪರ್ಧೆಯು ಬುಧವಾರ ಕಾರ್ಕಳದ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್‌ನಲ್ಲಿ ಅತ್ಯಂತ ಯಶಸ್ವಿಯಾಗಿ ಆರಂಭಗೊಂಡಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾರ್ಕಳದ ಟಿ.ಪಿ.ಇ.ಒ ಹಾಗೂ ಡಿ.ಪಿ.ಇ.ಒ ಆಗಿರುವ ರವಿಚಂದ್ರ ಕಾರಂತ, ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹಸಂಸ್ಥಾಪಕರಾದ ಅಶ್ವತ್ ಎಸ್. ಎಲ್, ತಹಶೀಲ್ದಾರರಾದ ಪ್ರದೀಪ್ ಕೆ. ಆರ್., ಕರ್ನಾಟಕ ರಾಜ್ಯ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಉಡುಪಿ ಘಟಕದ ಅಧ್ಯಕ್ಷರಾದ ವಿಜಯಕುಮಾರ್ ಶೆಟ್ಟಿ, ಕುಸುಮಾಕರ್ ಶೆಟ್ಟಿ ಉಡುಪಿ ಜಿಲ್ಲಾ ಕರಾಟೆ ಶಿಕ್ಷಕರ ಸಂಘದ ಅಧ್ಯಕ್ಷರಾದ ರೋಹಿತಾಕ್ಷ, ಉಡುಪಿ ಜಿಲ್ಲಾ ಕರಾಟೆ ಶಿಕ್ಷಕ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ವಾಮನ್ ಪಾಲನ್ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್‌ನ ಪ್ರಾಂಶುಪಾಲೆ ಅಕ್ಷತಾ ಶೆಣೈ ಉಪಸ್ಥಿತರಿದ್ದರು. ಜಿಲ್ಲೆಯ ನಾನಾ ಭಾಗಗಳಿಂದ ಆಗಮಿಸಿರುವ ಸುಮಾರು 200ಕ್ಕೂ ಹೆಚ್ಚು ಬಾಲಕ ಬಾಲಕಿಯರು ಕರಾಟೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ರಿಯೇಟಿವ್ ಕಾಲೇಜು, ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ಮೂವರು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕದೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಗೊಂಡು ಇತಿಹಾಸ ಸೃಷ್ಟಿಸಿದ್ದಾರೆ. 17ರ ವಯೋಮಾನದ ಹುಡುಗರ -58ಕೆಜಿ ವಿಭಾಗದಲ್ಲಿ ಸಾಯಿನಾಥ್ ಆಚಾರ್ಯ, -78 ಕೆಜಿ ವಿಭಾಗದಲ್ಲಿ ಪ್ರೀತಮ್ ಹಾಗೂ 14ರ ವಯೋಮಾನದ ಬಾಲಕರ -60 ಕೆಜಿ ವಿಭಾಗದಲ್ಲಿ ಸಾಕ್ಷಿತ್ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗಳಿಸಿಕೊಂಡರು. 17ರ ವಯೋಮಾನದ ಹುಡುಗರ-54 ಕೆಜಿ ವಿಭಾಗದಲ್ಲಿ ರಜತ್ ಆರ್ ಮತ್ತು 14ರ ವಯೋಮಾನದ ಹುಡುಗರ +60ಕೆಜಿ ವಿಭಾಗದಲ್ಲಿ ಆಶೀಷ್ ಹಾಗೂ -35 ಕೆಜಿ ವಿಭಾಗದಲ್ಲಿ ಸರ್ಮಥ್ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿಯ ಪದಕ ಪಡೆದರು. ಅನುಭವಿ ಮತ್ತು ಪ್ರಭಾವಿ ತರಬೇತುದಾರರ ಮೂಲಕ ನಿತ್ಯದ ತರಬೇತಿ ತರಗತಿಗಳು, ಕಟ್ಟುನಿಟ್ಟಿನ ಫಿಟ್ನೆಸ್ ತಂತ್ರಗಳು, ಸ್ಪರ್ಧಾಳುಗಳ ನಿಯಮಿತ ಮೌಲ್ಯಮಾಪನಗಳು, ಸತ್ವಯುತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ನಕಲಿ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಕೊಠಡಿ ಕಾಯ್ದಿರಿಸುವುದಾಗಿ ಹೇಳಿ ಕೇರಳದ ಮೂಲದ ಭಕ್ತರಿಗೆ ಮೋಸ ಮಾಡಿದ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ದೂರು ದಾಖಲಾಗಿದೆ. ಕೇರಳದ ಭಕ್ತರೋರ್ವರು ನಕಲಿ ವೆಬ್‌ಸೈಟ್ ನಂಬಿ ಆನ್‌ಲೈನ್‌ನಲ್ಲಿ ಮುಂಗಡ ಕೊಠಡಿ ಕಾಯ್ದುಕೊಳ್ಳಲು 1500 ರೂ. ನೀಡಿದ್ದರು. ಅದರಂತೆ ಸೆ.7 ರಂದು ಕೊಲ್ಲೂರಿಗೆ ಆಗಮಿಸಿದ್ದ ಅವರು ಆ ವಸತಿ ಗೃಹದ ಸಿಬ್ಬಂದಿಯನ್ನು ವಿಚಾರಿಸಿ ರಶೀದಿ ತೋರಿಸಿದಾಗ ಅದು ನಕಲಿ ವೆಬ್‌ಸೈಟ್ ಅನ್ನುವುದು ಬೆಳಕಿಗೆ ಬಂತು. ಮೋಸ ಹೋದ ಭಕ್ತರು ದೇಗುಲದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಅವರನ್ನು ಸಂಪರ್ಕಿಸಿ ಕೊಲ್ಲೂರು ಠಾಣೆಗೆ ದೂರು ನೀಡಿದ್ದಾರೆ. ಈ ಹಿಂದೆ ಇದೇ ರೀತಿ ನಕಲಿ ವೆಬ್‌ಸೈಟ್ ಮೂಲಕ ಭಕ್ತರಿಗೆ ಮೋಸ ಮಾಡಿದ ಪ್ರಕರಣದಲ್ಲಿ ರಾಜಸ್ಥಾನ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿತ್ತು. ಕೊಲ್ಲೂರಿಗೆ ಆಗಮಿಸುವ ಭಕ್ತರು ಕೊಠಡಿಗಳನ್ನು ಮುಂಗಡವಾಗಿ ಕಾಯ್ದಿರಿಸುವ ಸಲುವಾಗಿ ದೇಗುಲದಿಂದ ಮಾಡಿರುವ ವ್ಯವಸ್ಥೆಯನ್ನು ಅನುಸರಿಸಬೇಕೆಂದು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ ವಿನಂತಿಸಿದ್ದಾರೆ.
