ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ನೂತನ ಶಿಲಾದೇಗುಲ ಲೋಕಾರ್ಪಣೆ, ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮ ಕುಂಭಾಭಿಷೇಕ ಕಾರ್ಯಕ್ರಮವು ಇತೀಚಿಗೆ ನಡೆಯಿತು. ಮೇ.13ರ ಸಂಜೆ ಪರಿವಾರ ದೈವಗಳ ಪ್ರತಿಷ್ಠಾಪನೆ, 6.00 ರಿಂದ ಭಜನಾ ಕಾರ್ಯಕ್ರಮ, ರಾತ್ರಿ 8.00 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದ ದಿನಕರ ತೋಳಾರ್ ಮಾತನಾಡಿ, ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನವು ಅತಿ ಪುರಾತನ ದೇವಸ್ಥಾನವಾಗಿದ್ದು, ರಸ್ತೆಯ ವಿಸ್ತರಣೆಯಿಂದ ರಸ್ತೆಯ ಪಕ್ಕಕ್ಕೆ ಬಂದಿರುವುದರಿಂದ ದಾನಿಗಳ ನೆರವಿನಿಂದ ನೂತನ ಶಿಲಾ ದೇಗುಲ ನಿರ್ಮಾಣ ಮಾಡಲಾಗಿದೆ. ಈ ಕಾರ್ಯಕ್ಕೆ ಭಕ್ತಾಧಿಗಳು ಕೈ ಜೋಡಿಸಿದ ಕಾರಣ ಆಕರ್ಷಕ ದೇವಸ್ಥಾನ ನಿರ್ಮಾಣವಾಗಿದೆ ಎಂದರು. ಅವಧಾನಿ ಗುಂಡಿಬೈಲು ಸುಬ್ರಮಣ್ಯ ಭಟ್ ಧಾರ್ಮಿಕ ಉಪನ್ಯಾಸಗೈದರು. ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಧರ್ಮದರ್ಶಿ ಸಚ್ಚಿದಾನಂದ ಚಾತ್ರರು ಹಿಂದೆ ದೇವಸ್ಥಾನದಲ್ಲಿ ಪೂಜೆ ಪುನಸ್ಕಾರಗಳು, ಅನ್ನದಾನ ನಡೆಸುವುದು ಕಷ್ಟಕರವಾಗಿದ್ದು, ಇಂದು ಭಕ್ತಾದಿಗಳ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2025-26ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ಪಿ.ಯು.ಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್ ಇಂಜಿನಿಯರಿಂಗ್ ಮುಂತಾದ ವೃತ್ತಿಪರ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಬಹುಮಾನ ಹಣವನ್ನು ಮಂಜೂರು ಮಾಡುವ ಸಲುವಾಗಿ ಅರ್ಹ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಒಂದು ವಾರದ ಒಳಗೆ ಅರ್ಜಿಯನ್ನು ಹಾಗೂ ಸಂಬಂಧಿಸಿದ ಎಲ್ಲಾ ದಾಖಲಾತಿಗಳನ್ನು ಕಾಲೇಜಿನ ಪ್ರಾಂಶುಪಾಲರಿಂದ ದೃಢೀಕರಿಸಿ, ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ಇವರಿಗೆ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2574892 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ 1986 ರನ್ವಯ ರಾಜ್ಯ ಸರಕಾರದ ಅಧಿಸೂಚನೆಯಂತೆ ಉಡುಪಿ ಜಿಲ್ಲೆಯೂ ಸೇರಿದಂತೆ ಕರ್ನಾಟಕ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್ಬೋರ್ಡ್ ಅಥವಾ ಔಟ್ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು 2026 ರ ಜೂನ್ 1 ನೇ ತಾರೀಕಿನಿಂದ ಜುಲೈ 31 ನೇ ತಾರೀಕಿನವರೆಗೆ (ಉಭಯ ದಿನಗಳು ಸೇರಿದಂತೆ) ಅಂದರೆ ಒಟ್ಟು 61 ದಿನಗಳ ನಿಷೇಧ ಹೇರಿ ಜಿಲ್ಲಾಧಿಕಾರಿಗಳು ಆದೇಶಿಸಿರುತ್ತಾರೆ. ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿಸಿದೆ ಹಾಗೂ ಹವಾಮಾನದ ವೈಪರೀತ್ಯದ ಮುನ್ಸೂಚನೆ ನೀಡಿದಾಗ ಕಡ್ಡಾಯವಾಗಿ ಪಾಲಿಸಬೇಕು. ಮೀನುಗಾರಿಕೆ ನಿಷೇಧವಿರುವುದರಿಂದ ಕಡ್ಡಾಯವಾಗಿ ಎಲ್ಲಾ ದೋಣಿಗಳು ಮೇ 31 ರ ಒಳಗೆ ಬಂದರು ಪ್ರವೇಶ ಮಾಡಬೇಕು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೆದುಳಿಗೆ ನೀಡುವ ಶಿಕ್ಷಣಕ್ಕಿಂತ ಹೃದಯಕ್ಕೆ ನೀಡುವ ಶಿಕ್ಷಣ ಬಹಳ ಮುಖ್ಯವಾಗಿದ್ದು. ಹೃದಯವಂತಿಕೆ ಇರುವ ಮನುಷ್ಯ ಒಳ್ಳೆಯ ವಿದ್ಯಾರ್ಥಿ, ವಿಜ್ಞಾನಿ ಎನ್ನುವ ಯಾವ ಪದವಿಯನ್ನು ಬೇಕಾದರೂ ಪಡೆಯಬಹುದು. ಅಸೂಯೆಯಿಂದ ದೂರವಾಗಿ ದಯಾಗುಣಗಳನ್ನು ಬೆಳಸಿಕೊಳ್ಳುವ ಮೂಲಕ ಉತ್ತಮ ಬದುಕು ರೂಪಿಸಿಕೊಳ್ಳಿ ಎಂದು ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರಭಾಕರ್ ಶೆಟ್ಟಿ ಕೊಂಡಳ್ಳಿ ಹೇಳಿದರು. ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ಜೀವನ ಮೌಲ್ಯ ಉಪನ್ಯಾಸ ಮಾಲಿಕೆ 9ರ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ ಮತ್ತು ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ದೀಕ್ಷಾ ಅತಿಥಿಗಳನ್ನು ಪರಿಚಯಿಸಿ, ಪ್ರಥ್ವಿ ಸ್ವಾಗತಿಸಿ, ಪ್ರಥ್ವಿನಿ ವಂದಿಸಿ, ಅಭಿಷೇಕ್ ಪ್ರಾರ್ಥಿಸಿ, ನಿಶ್ಮಿತಾ ನಿರೂಪಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗ್ರಾಮೀಣ ಭಾಗದ ಮಕ್ಕಳ ರಜಾ ದಿನಗಳ ಸದ್ಬಳಕೆಗಾಗಿ ಮತ್ತು ಸುಪ್ತ ಪ್ರತಿಭೆಯನ್ನು ಹೊರತರಲು ಹಮ್ಮಿಕೊಳ್ಳಲಾಗಿದ್ದ ಒಂದು ವಾರಗಳ ಕಾಲ ನಡೆದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವು ಅತ್ಯಂತ ಯಶಸ್ವಿಯಾಗಿ ಜರುಗಿತು. ಹಾಲಾಡಿ ಗ್ರಾಮ ಪಂಚಾಯತ್, ಅರಿವು ಕೇಂದ್ರ ಹಾಗೂ ಜೆಸಿಐ ಹಾಲಾಡಿ ವಾರಾಹಿ ಇವರ ಜಂಟಿ ಸಹಭಾಗಿತ್ವದಲ್ಲಿ ನಡೆದ ಈ ವಿಶೇಷ ಶಿಬಿರದಲ್ಲಿ ಜೆಸಿಐ ಹಾಲಾಡಿ ವಾರಾಹಿ ಘಟಕದ ಅಧ್ಯಕ್ಷರಾದ ಜೆಸಿ ಪ್ರದೀಪ್ ಹಾಲಾಡಿ, ಕಾರ್ಯದರ್ಶಿಗಳಾದ ಅಶೋಕ್ ಆಚಾರಿ, ಜೆಸಿ ಸಂಯೋಜಕಿ ದೀಪಾ ಶೆಟ್ಟಿ, ನಿಕಟ ಪೂರ್ವ ಅಧ್ಯಕ್ಷರಾದ ಪ್ರವೀಣ್ ಬಾಳೆಕೋಡ್ಲು, ಉಪಾಧಕ್ಷ್ಯರಾದ ನಾಗೇಶ್ ಕಿಣಿ, ಸಹ ಕಾರ್ಯದರ್ಶಿ ಮಂಜುಳ ಶೆಟ್ಟಿ, ಪ್ರಶಾಂತ್ ಪೂಜಾರಿ, ಉಪಸ್ಥಿತರಿದ್ದರು. ಶಿಬಿರದಲ್ಲಿ ಮಕ್ಕಳಿಗೆ ವೈವಿಧ್ಯಮಯ ಮತ್ತು ಉಪಯುಕ್ತ ವಿಷಯಗಳ ಕುರಿತು ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಅತ್ಯುತ್ತಮವಾಗಿ ತರಬೇತಿ ನೀಡಿದ ಹೆಮ್ಮೆಯ ತರಬೇತುದಾರರಾದ: ಜೆಸಿ ಯೋಗೀಶ್ ದೇವಾಡಿಗ ಹಂಚಿನಮನೆ, ಜೆಸಿ ಪಲ್ಲವಿ ಪ್ರವೀಣ್ ಬಾಳೆಕೋಡ್ಲು ಅವರುಗಳು ಉಪಸ್ಥಿತರಿದ್ದರು. ಇವರ ನಿರಂತರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕುಂದಾಪುರ ತಾಲೂಕಿನ ತೆಕ್ಕಟ್ಟೆ ವಲಯದ ಕುಂಭಾಶಿ ಬಿ. ಕಾರ್ಯಕ್ಷೇತ್ರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊರವಾಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾಲಾ ಕಟ್ಟಡ ನಿರ್ಮಾಣ ಮಂಜೂರಾತಿ ಪತ್ರ ವಿತರಣೆ ಕಾರ್ಯಕ್ರಮ ಇತ್ತೀಚಿಗೆ ಜರಗಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕುಂದಾಪುರ ತಾಲೂಕಿನ ಯೋಜನಾಧಿಕಾರಿ ಸುಧೀರ್, ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶ್ಯಾಮಲಾ ಟೀಚರ್ ಅವರಿಗೆ ಮಂಜೂರಾತಿ ಪತ್ರವನ್ನು ಹಸ್ತಾಂತರಿಸಿದರು. ಈ ವೇಳೆ ಜನ ಜಾಗೃತಿ ಸದಸ್ಯರಾದ ಸುಧಾಕರ್ ಶೆಟ್ಟಿ ತೆಕ್ಕಟ್ಟೆ ಹಾಗೂ ತೆಕ್ಕಟ್ಟೆ ವಲಯದ ಮೇಲ್ವಿಚಾರಕರಾದ ಹೇಮಲತಾ ಹಾಗೂ ಊರಿನ ಗಣ್ಯರಾದ ಎಂ ರಾಮ ಕಾಂಚನ್ ಕೊರವಡಿ ಹಾಗೂ ಶಿಕ್ಷಕರಾದ ಶೋಭಾ, ನೇತ್ರ ರಕ್ಷ್ಮಿ , ಸುದೀಪ್, ಎಸ್ .ಡಿ. ಎಂ. ಸಿ ಉಪಾಧ್ಯಕ್ಷರಾದ ಸತ್ಯನಾರಾಯಣ, ಎಸ್ ಡಿ ಎಂ ಸಿ ಸದಸ್ಯರು, ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ಕುಂಭಾಶಿ ಬಿ. ಒಕ್ಕೂಟದ ಪದಾಧಿಕಾರಿಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಸಾರ್ವಜನಿಕರಿಗೆ ಗುಣಮಟ್ಟದ ಸೇವೆ ಒದಗಿಸುವ ಮಹತ್ವದ ಹೆಜ್ಜೆಯಾಗಿದ್ದು, ಆಧುನಿಕ ತಂತ್ರಜ್ಞಾನ ಹಾಗೂ ಅತ್ಯಾಧುನಿಕ ಯಂತ್ರೋಪಕರಣಗಳ ಮೂಲಕ ಸ್ಪರ್ಧಾತ್ಮಕ ವೆಚ್ಚದಲ್ಲಿ ಉತ್ಕೃಷ್ಟ ಮುದ್ರಣ ಸೇವೆಗಳನ್ನು ನೀಡಲಾಗುವುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ನುಡಿದರು. ಅವರು ಬುಧವಾರ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆವರಣದಲ್ಲಿ ಆಳ್ವಾಸ್ ಪ್ರಿಂಟಿಂಗ್ ಯುನಿಟ್ ‘’ಲಿಪಿ” ಮುದ್ರಣಾಲಯವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಅತ್ಯಾಧುನಿಕ ತಂತ್ರಜ್ಞಾನ ಹೊಂದಿದ ಈ ಮುದ್ರಣ ಘಟಕವು ಶಿಕ್ಷಣ, ವಾಣಿಜ್ಯ ಹಾಗೂ ಸಾರ್ವಜನಿಕ ಮುದ್ರಣ ಸೇವೆಗಳ ಅಗತ್ಯಗಳನ್ನು ಪೂರೈಸುವ ಉದ್ದೇಶವನ್ನು ಹೊಂದಿದೆ. ಗ್ರಾಹಕರ ಅಗತ್ಯಕ್ಕೆ ತಕ್ಕ ವಿನ್ಯಾಸ, ಸ್ಪಷ್ಟ ಮುದ್ರಣ ಹಾಗೂ ಸಮಯಕ್ಕೆ ಸರಿಯಾದ ವಿತರಣೆಯ ಮೂಲಕ ವಿಶ್ವಾಸಾರ್ಹ ಸೇವೆಯನ್ನು ನೀಡುವ ಗುರಿಯನ್ನು ಹೊಂದಲಾಗಿದೆ. ಡಿಜಿಟಲ್ ಮತ್ತು ಆಫ್‌ಸೆಟ್ ಮುದ್ರಣ ವ್ಯವಸ್ಥೆಗಳ ಮೂಲಕ ಕಡಿಮೆ ಪ್ರಮಾಣದಿಂದ ಹಿಡಿದು ಬೃಹತ್ ಪ್ರಮಾಣದ ಮುದ್ರಣ ಕಾರ್ಯಗಳನ್ನೂ ಇಲ್ಲಿ ನಿರ್ವಹಿಸಲಾಗುತ್ತದೆ ಎಂದರು. “ಲಿಪಿ” ಮುದ್ರಣ ಘಟಕದಲ್ಲಿ ಸಿಟಿಪಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉದಯವಾಣಿ ನವ ಮಂಗಳೂರು ಬಂದರು ಪ್ರಾಧಿಕಾರ ಹಾಗೂ ಶ್ರೀ ಸಿದ್ಧಿ ವಿನಾಯಕ ವಸತಿ ಶಾಲೆ ಹಟ್ಟಿಯಂಗಡಿ ಇವರ ಸಹಯೋಗದಲ್ಲಿ ಆಯೋಜಿಸಿದ ’’ಅಕ್ಷರ ಅಂಬಾರ” ಗ್ರಾಮೀಣ ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ. ಉಪ್ಪುಂದ ಹಾಗೂ ರೈತಸಿರಿ-ರೈತ ಸೇವಾ ಒಕ್ಕೂಟ ಇವರ ಜಂಟಿ ಆಶ್ರಯದಲ್ಲಿ ನಿವೃತ್ತ ಶಾಖಾ ವ್ಯವಸ್ಥಾಪಕರಾದ ಚಂದ್ರ ಬಿ. ನಾಗೂರು ಅವರ ಬೀಳ್ಕೊಡುಗೆ ಸಮಾರಂಭ ಮತ್ತು ರೈತ ಕೂಟದ ಮಾಸಿಕ ಸಭೆಯು ಸಂಘದ ರೈತಸಿರಿ ಸಭಾಭವನದಲ್ಲಿ ನಡೆಯಿತು. ನಿವೃತ್ತರಾದ ಚಂದ್ರ ಬಿ. ನಾಗೂರು ಅವರಿಗೆ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಆಡಳಿತ ಮಂಡಳಿ ವತಿಯಿಂದ, ಸಂಘದ ಸಿಬ್ಬಂದಿಗಳಿಂದ ಹಾಗೂ ನಿವೃತ ನೌಕರರಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷರಾದ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು ಮಾತಾನಾಡಿ, ಸಹಕಾರಿ ಕ್ಷೇತ್ರದಲ್ಲಿ ಚಂದ್ರ ಬಿ. ಅವರು ಜನಸ್ನೇಹಿಯಾಗಿ ವೃತ್ತಿ ಜೀವನದಲ್ಲಿ ಸದಾ ನಗುಮೊಗದಿಂದ ಕಾರ್ಯನಿರ್ವಹಿಸಿದ್ದಾರೆ. ಅವರ ಮುಂದಿನ ನಿವೃತ್ತಿ ಜೀವನವು ಸುಖಕರವಾಗಿರಲಿ ಎಂದು ಶುಭಹಾರೈಸಿದರು. ನಿವೃತ್ತ ನೌಕರರಾದ ಕೆ. ಹಾವಳಿ ಬಿಲ್ಲವ ಹಾಗೂ ಸಂಘದ ಕೃಷಿ ಸಹಾಯಕರಾದ ಈಶ್ವರ ನಾಯ್ಕ ಅವರು ನಮ್ಮ ಸಂಘದಿಂದ ನಿವೃತ್ತರಾದ ಶಾಖಾ ವ್ಯವಸ್ಥಾಪಕರಾದ ಚಂದ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್ ಸಂಧ್ಯಾ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ ಕಾರ್ಯಕ್ರಮವು ಎಂಜಿಎಂ ಕ್ಯಾಂಪಸ್‌ನ ನೂತನ ರವೀಂದ್ರ ಮಂಟಪದಲ್ಲಿ ನಡೆಯಿತು. ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿಯ ಅಧ್ಯಕ್ಷ ಧೀರಜ್ ಪ್ರವೀಣ್ ಕುಮಾರ್ ಸ್ವಾಗತ ಭಾಷಣ ಮಾಡಿದರು. ಬಳಿಕ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿಯ ವಾರ್ಷಿಕ ವರದಿಯನ್ನು ಪ್ರಧಾನ ಕಾರ್ಯದರ್ಶಿ ಕರೇನ್ ಲಿಸಾ ಅರೋನ್ ಮಂಡಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿಯ ಡಾ. ಎಂ. ವಿಶ್ವನಾಥ್ ಪೈ ವಿದ್ಯಾರ್ಥಿಗಳ ಚಟುವಟಿಕೆಗಳ ಕುರಿತು ಮಾತನಾಡಿದರು. ಮುಖ್ಯ ಅತಿಥಿಗಳ ಪರಿಚವನ್ನು ಸೂರಜ್ ತೃತೀಯ ಬಿಸಿಎ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಖ್ಯಾತ ನೃತ್ಯ ನಿರ್ದೇಶಕ, ನಟ ಹಾಗೂ ನಿರ್ದೇಶಕರಾದ ಎಲ್ಟನ್ ಜೆಫ್ ಮತ್ತು ತುಳು-ಕನ್ನಡ ನಟಿ ಅನ್ವಿತಾ ಸಾಗರ್ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು. ಸಾಂಸ್ಕೃತಿಕ ಹಾಗೂ ವಿದ್ಯಾರ್ಥಿ ಕಲ್ಯಾಣ ಮಂಡಳಿ ಕಾರ್ಯಕ್ರಮಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಾಂಸ್ಕೃತಿಕ ಕಾರ್ಯದರ್ಶಿ ಪ್ರಜ್ಞಾ ಆಚಾರ್ಯ ಬಹುಮಾನ ವಿತರಣಾ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಎಂಜಿಎಂ ಕಾಲೇಜಿನ…
