Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಆಶ್ರಯದಲ್ಲಿ ದೇಶದ 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಫ್ರೀಡಂ ಪ್ರೆನ್ಯೂರ್ 2026 – ಅಂತರ್ ತರಗತಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನದ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಏಕಪಾತ್ರಾಭಿನಯ ಸ್ಪರ್ಧೆಯನ್ನು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ನಂದಾ ರೈ, ಕಾರ್ಯಕ್ರಮದ ಸಂಯೋಜಕರಾದ ರಜತ್ ಬಂಗೇರ ಹಾಗೂ ವಿಭಾಗದ ಪ್ರಾಧ್ಯಾಪಕರಾದ ಅವಿತಾ ಕೊರೆಯಾ, ಹರೀಶ್ ಬಿ. ಹಾಗೂ ತೀರ್ಪುಗಾರರಾಗಿ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಯೋಗೀಶ್ ಶ್ಯಾನುಭೋಗ್, ಕನ್ನಡ ವಿಭಾಗದ ಪ್ರಾಧ್ಯಾಪಕಿ ರಶ್ಮಿತಾ ಶೆಟ್ಟಿ, ವ್ಯವಹಾರ ಆಡಳಿತ ವಿಭಾಗದ ಪ್ರಾಧ್ಯಾಪಕರಾದ ರವಿನಂದನ್ ಎಸ್.ಟಿ. ಉಪಸ್ಥಿತರಿದ್ದರು. ಸ್ಪರ್ಧೆಯಲ್ಲಿ ದ್ವಿತೀಯ ಬಿಬಿಎ ವಿದ್ಯಾರ್ಥಿನಿ ನಾಗರತ್ನ ಪ್ರಥಮ ಸ್ಥಾನ, ತೃತೀಯ ಬಿಬಿಎ ವಿದ್ಯಾರ್ಥಿ ಶ್ರೇಯಾ, ದ್ವಿತೀಯ ಬಿ.ಕಾಂ. (ಡಿ)…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರಾಷ್ಟ್ರೀಯ ಹೆದ್ದಾರಿ ಸುಂಕ ವಸೂಲಾತಿ ಕೇಂದ್ರವು ಸಾಸ್ತಾನ ಮತ್ತು ಶಿರೂರುಗಳ ಟೋಲ್‌ಗಳಲ್ಲಿ ಸ್ಥಳೀಯ ಜಿಲ್ಲಾ ಪಂಚಾಯತ್‌ ವ್ಯಾಪ್ತಿಯ ಸಾರ್ವಜನಿಕರಿಗೆ ನೀಡುತ್ತಿರುವ ರಿಯಾಯಿತಿಯನ್ನು ಹೆಜಮಾಡಿ ಭಾಗದ ಟೋಲ್ ವ್ಯಾಪ್ತಿಯ ಸ್ಥಳೀಯರಿಗೂ ನೀಡುವಂತೆ ಕೋರಿ ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿಗೆ ಶಿಫಾರಸ್ಸು ಪತ್ರ ಬರೆಯುವುದಾಗಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಭರವಸೆ ನೀಡಿದ್ದಾರೆ. ಅವರು ಮಂಗಳವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ ಟೋಲ್ ಸುಂಕ ವಸೂಲಾ ತಿಗೆ ಸಂಬಂಧಿಸಿದಂತೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಸಾಸ್ತಾನ ಹಾಗೂ ಶಿರೂರುಗಳಲ್ಲಿರುವ ರಾಷ್ಟ್ರೀಯ ಹೆದ್ದಾರಿ ಸುಂಕ ವಸೂಲಾತಿ ಕೇಂದ್ರಗಲು ಸ್ಥಳೀಯ ವಾಹನಗಳಿಗೆ ಈ ಹಿಂದೆ ನೀಡುತ್ತಿರುವ ರಿಯಾಯಿತಿಯನ್ನು ಮುಂದುವರಿಸಿದ್ದು, ಹೆಜಮಾಡಿ ವ್ಯಾಪ್ತಿಯಲ್ಲಿ ಮಾತ್ರ ಈ ನಿಯಮ ಪಾಲನೆಯಾಗುತ್ತಿಲ್ಲ ಎಂಬ ದೂರುಗಳು ಸಾರ್ವಜನಿಕರಿಂದ ಕೇಳಿ ಬರುತ್ತಿವೆ ಎಂದು ಜಿಲ್ಲಾಧಿಕಾರಿ ನುಡಿದರು. ಸಾಸ್ತಾನದಲ್ಲಿ 10 ಕಿ.ಮೀ ವ್ಯಾಪ್ತಿಯಲ್ಲಿ ಸ್ಥಳೀಯರಿಗೆ ವಿನಾಯಿತಿ ನೀಡಲಾಗಿದೆ. ಈ ಮಾದರಿಯನ್ನೇ ಹೆಜಮಾಡಿ ಯಲ್ಲಿ ಅನುಸರಿಸಿದ್ದಲ್ಲಿ ಸ್ಥಳೀಯರಿಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮುಂದಿನ ಅಕ್ಟೋಬರ್‌ನಿಂದ ಗೃಹಲಕ್ಷ್ಮೀ ಯೋಜನೆಯ ಪರಿಷ್ಕರಣೆ ಕಾರ್ಯ ನಡೆಯಲಿದ್ದು, ಸಂಬಂಧಪಟ್ಟವರು ತಮ್ಮ ಆಧಾರ ಕಾರ್ಡ್ ಅಪ್ಲೇಟ್ ಮಾಡಿ ಇಟ್ಟುಕೊಂಡರೆ ಪರಿಷ್ಕರಣೆಗೆ ಅನುಕೂಲವಾಗಲಿದೆ. ಸದಸ್ಯರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಆಧಾಕಾರ್ಡ್ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು ಎಂದು ಕುಂದಾಪುರ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ಅಧ್ಯಕ್ಷ ಎಚ್‌. ಹರಿಪ್ರಸಾದ್‌ ಶೆಟ್ಟಿ ಹೇಳಿದ್ದಾರೆ. ಅವರು ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗೃಹಲಕ್ಷ್ಮೀ ಯೋಜನೆಯಲ್ಲಿ ಕುಂದಾಪುರ ತಾಲೂಕಿನಲ್ಲಿ ಸುಮಾರು 1705 ಮರಣ ಹೊಂದಿದವರ ಖಾತೆಗೆ ಸುಮಾರು 50 ಲಕ್ಷ ರೂ. ಜಮೆ ಆಗಿದ್ದು, ಈ ಪೈಕಿ 16 ಲಕ್ಷ ರೂ.ಗಳನ್ನು ಬ್ಯಾಂಕ್‌ ಖಾತೆಯಿಂದ ಡ್ರಾ ಮಾಡಿ ಕೊಂಡಿದ್ದಾರೆ. 13 ಲಕ್ಷ ರೂ.ಗಳನ್ನು ಫ್ರೀಜ್ ಮಾಡಲಾಗಿದ್ದು, 19 ಲಕ್ಷ ರೂ. ವಾಪಾಸ್ ಸಂಬಂಧಪಟ್ಟ ಇಲಾಖೆಯ ಖಾತೆಗೆ ಜಮೆ ಮಾಡಲಾಗಿದೆ ಎಂದು ಅವರು ತಿಳಿಸಿದರು. ಗೃಹಜ್ಯೋತಿ ಪರಿಷ್ಕರಣೆ:ಗೃಹಜ್ಯೋತಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ರೋಟರಿ ಕೋಟ ಸಿಟಿ ವತಿಯಿಂದ ಮಹಿಳಾ ಸಬಲೀಕರಣ ಯೋಜನೆಯ ಅಂಗವಾಗಿ ಸುಪ್ರಜಿತ್ ಫೌಂಡೇಶನ್ ಬೆಂಗಳೂರು ಇವರು ಕೊಡಮಾಡಿದ ಹೊಲಿಗೆ ಯಂತ್ರವನ್ನು ಫಲಾನುಭವಿಗಳಿಗೆ ಉಚಿತವಾಗಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಸಿ ಎಸ್ ಆರ್ ಇನಿಷೇಯಿಟಿವ್ ಚಯರ್ ಮೆನ್ ಪ್ರಭಾಕರ್ ಕುಂಭಾಶಿ, ಮಾಜಿ ಅಸಿಸ್ಟೆಂಟ್ ಗವರ್ನರ್ ಗಳಾದ ಸತೀಶ್ ಶೆಟ್ಟಿ, ಶ್ಯಾಮ್ ಸುಂದರ ನಾಯರಿ, ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ರಾಧಾಕೃಷ್ಣ ಬ್ರಹ್ಮಾವರ್ ವಹಿಸಿ ಸಭೆಗೆ ಬಂದ ಸದಸ್ಯರನ್ನು ಸ್ವಾಗತಿಸಿದರು. ಮುಖ್ಯ ಅತಿಥಿಗಳು ಹೊಲಿಗೆ ಯಂತ್ರಗಳನ್ನು ಪಲಾನುಭವಿಗಳಿಗೆ ಹಸ್ತಾಂತರಿಸಿ ಶುಭ ಹಾರೈಸಿದರು. ಆನ್ಸ್ ಕ್ಲಬ್ ಕೋಟ ಸಿಟಿ ಅಧ್ಯಕ್ಷೆ ದೀಪರಾಣಿ ಶರತ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಜ್ಯೋತಿ ನಿತ್ಯಾನಂದ, ಆನ್ಸ್ ಕ್ಲಬ್ ಸದಸ್ಯೆ ಸವಿತ ಸತೀಶ್ ಕುಮಾರ್, ರೂಪಶ್ರೀ ಶಿವಾನಂದ, ರೋಟರಿ ಸದಸ್ಯರಾದ ಕೃಷ್ಣ ಪೂಜಾರಿ, ಶರತ್ ಕುಮಾರ್ ಶೆಟ್ಟಿ, ಗಿರೀಶ್ ಕುಂದರ್, ನಾಗರಾಜ್ ಐತಾಳ್, ಸುಬ್ರಮಣ್ಯ ಪೂಜಾರಿ,ಕಾರ್ಯಕ್ರಮ ದ ಸಭಾಪತಿ ಸತೀಶ್ ಕುಮಾರ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಪ್ರತಿಭೆ ನಿಮ್ಮದು, ವೇದಿಕೆ ನಮ್ಮದು ವಿನೂತನ ಕಾರ್ಯಕ್ರಮ ಸರಣಿಯಡಿ ಸಂಸ್ಕೃತಿ, ಸಂಸ್ಕಾರ, ಸಂಪ್ರದಾಯ ಉಳಿಸಿ ಬೆಳೆಸುವಲ್ಲಿ ವಿಶೇಷ ಪ್ರಯತ್ನ ಸತತ 122ನೇ ತಿಂಗಳ ಕಾರ್ಯಕ್ರಮ ಹಾಗೂ ಸ್ವಾತಂತ್ರ್ಯೋತ್ಸವ ಸಮಾರಂಭ ಗೊಂಬೆ ಮನೆಯಲ್ಲಿ ವಿಜೃಂಭಣೆಯಿಂದ ಜರುಗಿತು.  ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ನೇತಾಜಿ ಕಮಿಟಿ ಫ್ರೆಂಡ್ಸ್ , ಉಪ್ಪಿನಕುದ್ರು ಇವರು ಈ ಸಮಾರಂಭವನ್ನು ಆಯೋಜಿಸಿದ್ದರು. ಸೇವಾ ಕಾರ್ಯಕರ್ತ ರಾಘವೇಂದ್ರ ನೆಂಪು ಅವರು ಅಧ್ಯಕ್ಷತೆ ವಹಿಸಿದ್ದರು. ಆರ್ ಎಸ್ ಎಸ್ ಸೇವಾ ಕಾರ್ಯಕರ್ತ ಸಂದೀಪ್ ಮಹಾರಾಜ್ ನವದೆಹಲಿ, ಬ್ಯಾಂಕ್ ಉದ್ಯೋಗಿ ಹರೀಶ್, ವಸಂತಿ ಆರ್. ಪಂಡಿತ್, ನೇತಾಜಿ ಕಮಿಟಿ ಫ್ರೆಂಡ್ಸ್ ನ ಅಧ್ಯಕ್ಷ ರಾಘವೇಂದ್ರ ಪೈ, ಅರುಣ್ ಕುಮಾರ್ ಉಪ್ಪಿನಕುದ್ರು ಹಾಗೂ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಉಪಸ್ಥಿತರಿದ್ದರು. ಅಕಾಡೆಮಿಯ ವತಿಯಿಂದ ಜಯ ಪ್ರಕಾಶ್ ಅವರನ್ನು ಸಮ್ಮಾನಿಸಲಾಯಿತು. ನಂತರ ಊರ ಹಾಗೂ ಪರವೂರ ವಿದ್ಯಾರ್ಥಿಗಳಿಂದ ನೃತ್ಯ ಹಾಗೂ ವಿವಿಧ ಮನೋರಂಜನಾ ಕಾರ್ಯಕ್ರಮ ನೆರೆದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೆಂಗಳೂರು: ರಾಜಧಾನಿ ಬೆಂಗಳೂರಿನ ಕುಂದಾಪ್ರ ಕನ್ನಡ ಪ್ರತಿಷ್ಠಾನ ರಿ. ಕಳೆದ ಎಂಟು ವರ್ಷಗಳಿಂದ ಆಚರಿಸಿಕೊಂಡು ಬರುತ್ತಿರುವ ‘ವಿಶ್ವ ಕುಂದಾಪ್ರ ಕನ್ನಡ ಹಬ್ಬ’ ಈ ಸಲ ಜಾಗತಿಕ ಸ್ವರೂಪ ತಳೆದಿದ್ದು, ‘ವಿಶ್ವ ಕುಂದಾಪ್ರ ಕನ್ನಡ ಸಮ್ಮೇಳನ-2027’ ಎಂಬ ಹೆಸರಿನಲ್ಲಿ ಅದ್ಧೂರಿಯಾಗಿ ಆಚರಣೆ ಆಗಲಿದೆ. ವಿಜಯನಗರದ ಬಂಟರ ಸಂಘದಲ್ಲಿ ಶನಿವಾರ ಆಯೋಜಿಸಿದ ‘ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ’ಯಲ್ಲಿ ಹಲವು ಅತಿಥಿ ಗಣ್ಯರ ಸಮ್ಮುಖದಲ್ಲಿ ಈ ಬಗ್ಗೆ ಬೃಹತ್ ಘೋಷಣೆ ಮಾಡಲಾಯಿತು. ‘ವಿಶ್ವದ ಎಲ್ಲ ಕಡೆಯಲ್ಲಿ ನಡೆಯುತ್ತಿರುವ ಕುಂದಾಪ್ರ ಕನ್ನಡ ದಿನಾಚರಣೆಯನ್ನು ಬೃಹತ್ ಪ್ರಮಾಣದಲ್ಲಿ ಒಂದೇ ಕಡೆ ಆಯೋಜಿಸಿದರೆ ಹೇಗೆ ಎಂಬ ಕಲ್ಪನೆ-ಕನಸಿನಲ್ಲಿ ಈ ಸಾಹಸಕ್ಕೆ ಮುಂದಾಗಿದ್ದೇವೆ’ ಎಂದು ಕುಂದಾಪ್ರ ಕನ್ನಡ ಪ್ರತಿಷ್ಠಾನದ ಅಧ್ಯಕ್ಷ ಡಾ. ದೀಪಕ್ ಶೆಟ್ಟಿ ಬಾರ್ಕೂರು ಘೋಷಿಸಿದ್ದಾರೆ. ಅರಮನೆ ಮೈದಾನದ ರಾಯಲ್ ತ್ರಿಪುರವಾಸಿನಿಯಲ್ಲಿ 2027ರ ಜನವರಿ 30-31ರಂದು ಹಿಂದೆಂದಿಗಿಂತಲೂ ಅದ್ಭುತ ರೀತಿಯಲ್ಲಿ ‘ವಿಶ್ವ ಕುಂದಾಪ್ರ ಕನ್ನಡ ಸಮ್ಮೇಳನ-2027’ ನಡೆಯಲಿದ್ದು, ಇದರಲ್ಲಿ ಸುಮಾರು ಮೂರು ಲಕ್ಷಕ್ಕೂ ಅಧಿಕ ಜನರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಮೈಸೂರು ಸಂಗೀತ ಮತ್ತು ಗಾಯನ ಸಮಿತಿ ಅವರು ಏರ್ಪಡಿಸಿದ ರಾಜ್ಯ ಮಟ್ಟದ ದೇಶಭಕ್ತಿ ಗೀತೆ ಸಮೂಹ ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟದಲ್ಲಿ ಟಾಪ್ -10 ವಿಭಾಗದಲ್ಲಿ 7ನೇ ಸ್ಥಾನವನ್ನು ಸಿದ್ದಾಪುರದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿಯ ವಿದ್ಯಾರ್ಥಿನಿಯರ ತಂಡ ಪಡೆದಿರುತ್ತದೆ. 6ನೇ ತರಗತಿಯ ವಿದ್ಯಾರ್ಥಿಗಳಾದ ಶ್ರೀಬ್ರಾಹ್ಮೀ ಉಡುಪ, ಆರಾಧ್ಯ, ಆದ್ರಿಕಾ, ಸಂದ್ಯಾ, ಶ್ರೀನಿಧಿ, ಸಾನ್ವಿ, ಶ್ರೀರಕ್ಷಾ ಇವರ ತಂಡವು ರಾಜಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಮಾಣ ಪತ್ರವನ್ನು ನೀಡಿ ಗೌರವಿಸಲಾಗಿದೆ. ಹಾಗೇ ಶಾಲೆಯ ವಿದ್ಯಾರ್ಥಿಗಳಾದ 7ನೇ ತರಗತಿಯ ಸ್ರಜನ್ ವೈ, ಮೌಲ್ಯ, ದೀಕ್ಷಾ, ಪ್ರೀತಮ್, ಚೈತ್ರ ಪ್ರಭು, ಅನುಶ್ರೀ ಎಸ್, ಲಹರಿ, ನಿಧಿ, ಪ್ರಜ್ಞಾ 6ನೇ ತರಗತಿಯ ಆದ್ಯ, ಸಂಜನಾ, ಸಾನ್ವಿಕಾ, ಶಾನವಿ, ಶ್ರಾವ್ಯ 5ನೇ ತರಗತಿಯ ಪ್ರಾಪ್ತಿ ಪಿ ಶೆಟ್ಟಿ, ಕೃತಿಕ್, ವಿಧಾತ್ರಿ, ವಿಕ್ರಂ, ಬ್ರಾಹ್ಮೀ, ಅಮೂಲ್ಯ, ಸ್ರಷ್ಟಿ, ಆದ್ಯ, ಕೃತಿಕಾ ಕೆ, ಇಂಪನಾ, ಪ್ರಣಮ್ಯ, ಸನ್ಮತಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಬೇಳೂರು, ದೇಲಟ್ಟು ಗ್ರಾಮದ ಪುಟಾಣಿ ಪ್ರತಿಭೆ ಪ್ರದ್ಯುಮ್ನ ಅಡಿಗಗೆ ʼಇಂಟರ್ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್’ನಲ್ಲಿ ಜಾಗತಿಕ ಗೌರವ ಲಭಿಸಿದೆ. ಪದ್ಮರಾಜ ಅಡಿಗ ಹಾಗೂ ಪದ್ಮನಿ ಅಡಿಗ ದಂಪತಿಯ ಪುತ್ರ 1.7 ವರ್ಷದ ಪುಟಾಣಿ ಪ್ರದ್ಯುಮ್ನ ಅಡಿಗ ಅತ್ಯಂತ ಕಿರಿಯ ವಯಸ್ಸಿನಲ್ಲಿಯೇ ಅಸಾಧಾರಣ ಜ್ಞಾಪಕ ಶಕ್ತಿ ಪ್ರದರ್ಶಿಸುವ ಮೂಲಕ ಇಂಟರ್‌ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ಜಾಗತಿಕ ದಾಖಲೆ ಬರೆದಿದ್ದಾರೆ. ಈ ವಿಶಿಷ್ಟ ಸಾಧನೆಗಾಗಿ ಸಂಸ್ಥೆಯು ಮಗುವಿಗೆ ಸೂಪರ್ ಟ್ಯಾಲೆಂಟೆಡ್ ಕಿಡ್ ಎಂಬ ಬಿರುದು ನೀಡಿ ಗೌರವಿಸಿದೆ. ಪ್ರಾಣಿಗಳು, ವಾಹನಗಳು, ರಾಷ್ಟ್ರಧ್ವಜಗಳು, ಬಾಹ್ಯಾಕಾಶದ ಅಂಶಗಳು ಹಾಗೂ ದೇಹದ ಭಾಗಗಳು ಸೇರಿದಂತೆ ಒಟ್ಟು 300 ಫ್ಲ್ಯಾಶ್‌ಕಾರ್ಡ್‌ಗಳನ್ನು ಅತ್ಯಂತ ನಿಖರವಾಗಿ ಗುರುತಿಸುವ ಮೂಲಕ ಪ್ರದ್ಯುಮ್ನ ಅಪರೂಪದ ಸಾಧನೆ ಮಾಡಿದ್ದಾನೆ. ಮಗುವಿನ ಚಟುವಟಿಕೆಗಳ 42ಕ್ಕೂ ಅಧಿಕ ವಿಡಿಯೋಗಳನ್ನು ಸಂಸ್ಥೆಗೆ ಕಳುಹಿಸಿಕೊಡಲಾಗಿದ್ದು, ಇದನ್ನು ವಿಶ್ಲೇಷಿಸಿ ಪ್ರಸ್ತುತ ಮಗುವಿಗೆ ಸಂಸ್ಥೆಯಿಂದ ಅಧಿಕೃತ ಪದಕ ಹಾಗೂ ಪ್ರಮಾಣ ಪತ್ರ ನೀಡಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಸಾರ್ವಜನಿಕರ ಸುರಕ್ಷತೆ, ಸುಗಮ ಸಂಚಾರ ಹಾಗೂ ರಸ್ತೆ ಅಪಘಾತಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿಯ ಬಾಕಿ ಇರುವ ಸರ್ವೀಸ್ ರಸ್ತೆ ಮತ್ತು ಇತರ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ, ಸಾರ್ವಜನಿಕರ ಉಪಯೋಗಕ್ಕೆ ಅನುವು ಮಾಡಿಕೊಡಬೇಕು ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ರಾಷ್ಟ್ರೀಯ ಹೆದ್ದಾರಿಯ ಅಭಿಯಂತರರುಗಳಿಗೆ ಸೂಚನೆ ನೀಡಿದರು. ಅವರು ಮಂಗಳವಾರ ಮಣಿಪಾಲ ರಜತಾದ್ರಿಯ ಸಂಸದರ ಕಚೇರಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66ಕ್ಕೆ ಸಂಬಂಧಿಸಿದಂತೆ ಸರ್ವೀಸ್ ರಸ್ತೆ, ಮೇಲ್ಸೇತುವೆ ಸೇರಿದಂತೆ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66 ಕ್ಕೆ ಸಂಬಂಧಿಸಿದಂತೆ ಪ್ರಮುಖವಾಗಿ ಕೋಟೇಶ್ವರ ಜಂಕ್ಷನ್‌ನಿಂದ ಬೀಜಾಡಿ ಕ್ರಾಸ್ ವರೆಗಿನ ಸುಮಾರು 830 ಮೀಟರ್, ಅನ್ನಪೂರ್ಣ ಹೋಟೆಲ್‌ನಿಂದ ಬೀಜಾಡಿ–ಕುಂಭಾಶಿ–ತೆಕ್ಕಟ್ಟೆ ಭಾಗದಲ್ಲಿ ಎರಡು ಬದಿ ಸುಮಾರು 3,500 ಮೀಟರ್, ತೆಕ್ಕಟ್ಟೆ ಭಾಗದಲ್ಲಿ ಸುಮಾರು 1,020 ಮೀಟರ್, ಬ್ರಹ್ಮಾವರ ಭಾಗದಲ್ಲಿ ಸುಮಾರು 400 ಮೀಟರ್,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕಟಪಾಡಿಯಲ್ಲಿ ಆ. 16 ರಂದು ನಡೆದ KEN – MABUNI SHITO – RYU – KARATE SCHOOL OF INDIA ಹಾಗೂ ಆರ್. ವಿ. ಕನ್ಸ್ಟ್ರಕ್ಷನ್ ಜಂಟಿಯಾಗಿ ಆಯೋಜಿಸಿದ್ದ ‘COMPETE 5.0’ 3ನೇ ಆಹ್ವಾನಿತ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಮಣೂರು ಪಡುಕೆರೆಯ ನಿವಾಸಿ ಪ್ರೇರಣಾ ಎನ್. ಮೊಗವೀರ ಅವರು ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡರು. ವಿಜೇತರಾದ ಪ್ರೇರಣಾ ಅವರಿಗೆ ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಅವರು ಟ್ರೋಫಿ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು. ಪ್ರೇರಣಾ ಅವರು ಪ್ರಸ್ತುತ ಕೋಟದ ವಿವೇಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ೮ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಮಣೂರು ಪಡುಕೆರೆ ದಾರೊಜ್ಜಿಮನೆಯ ಪ್ರೇಮ ಮತ್ತು ನಾಗೇಶ್ ದಂಪತಿಯ ಪುತ್ರಿಯಾಗಿದ್ದಾರೆ. ಇವರಿಗೆ MUKEN KAI KARATE DO FEDERATION OF INDIA ತರಬೇತುದಾರರಾದ ಮಂಜುನಾಥ್ ಮೊಗವೀರ ಅವರು ಕರಾಟೆ ತರಬೇತಿ ನೀಡಿದ್ದಾರೆ.ಪ್ರೇರಣಾ ಅವರ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕ…

Read More