ಕುಂದಾಪ್ರ ಡಾಟ್ ಕಾಂ ಸುದ್ದಿಕೋಟ: ಸ್ವಾತಂತ್ರ್ಯ ಪೂರ್ವದಲ್ಲಿ ಹುಟ್ಟಿಕೊಂಡ ಗಣೇಶೋತ್ಸವ ಈ ದೇಶದ ಐಕ್ಯತೆ ಸಂಕೇತವಾಗಿ ಧಾರ್ಮಿಕ ಪರಂಪರೆಯೊಂದಿಗೆ ವಿಶ್ವಪ್ರಸಿದ್ಧಿಯಾಗಿದೆ ಎಂದು ಸಾಹಿತಿ ಎ.ಎಸ್.ಎನ್ ಹೆಬ್ಬಾರ್ ಹೇಳಿದರು. ಅವರು ಕೋಟದ ಅಮೃತೇಶ್ವರೀ ದೇಗುಲದಲ್ಲಿ ಕೋಟದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಸುವರ್ಣ ಸಂಭ್ರಮದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಹಿರಿಯರು ಕಟ್ಟಿಕೊಟ್ಟು ಈ ಹಬ್ಬ ಹರಿದಿನಗಳು ನಮ್ಮನ್ನು ಶ್ರೀಮಂತಗೊಳಿಸಿದೆ, ನಮ್ಮಲ್ಲಿರುವ ಸಾಂಸ್ಕೃತಿಕ ಪರಂಪರೆ, ಭಗವದ್ಗೀತೆಯಂತಹ ಕೃತಿಗಳು ವಿಶ್ವಸಂದೇಶಕ್ಕೆ ಸಾಕ್ಷಿಯಾಗಿದೆ. ಭಾರತವನ್ನು ಬಗ್ಗು ಬಡಿಯುವ ತಂತ್ರ ಹುನ್ನಾರ ಎಸೆಗಿದ ಅಮೇರಿಕಾದಂತ ದೈತ್ಯ ದೇಶಗಳಿಗೆ ಗುದ್ದು ನೀಡುವ ಮಟ್ಟಕ್ಕೆ ಈ ಭಾರತ ಎದ್ದು ನಿಂತಿದೆ ಎಂದರು. ಸಭೆಯಲ್ಲಿ ಸುವರ್ಣ ಮಹೋತ್ಸವದ ಅಂಗವಾಗಿ ಐವತ್ತು ಜನ ಸ್ಥಳೀಯ ಸಾಧಕರಿಗೆ ಸುವರ್ಣ ಸಂಭ್ರಮದ ಸನ್ಮಾನ ನೀಡಿ ಗೌರವಿಸಲಾಯಿತು. ಕೋಟ ದೊಡ್ಡ ಗಣೇಶನಿಗೆ ಬೆಳ್ಳಿ, ಚಿನ್ನದ ಆಭರಣಗಳ ಪರಿಕರ ನೀಡಿದ ದಾನಿಗಳನ್ನು ಗೌರವಿಸಲಾಯಿತು. ಸುವರ್ಣ ಸಂಭ್ರಮದ ಸಾರ್ಥಕ ಶ್ರಮಜೀವಿಗಳಿಗೆ ಅಭಿನಂದಿಸಲಾಯಿತು. ಕೋಟ ಪಡುಕರೆ ಲಕ್ಷ್ಮೀ ಸೋಮ ಬಂಗೇರ ಸರಕಾರಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಆಯೋಜಿಸಿದ ಜಿಲ್ಲಾಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಜನತಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಮರಿಯಾ ವೈಯೊಲ ಬರೆಟ್ಟೋ ಜಿಲ್ಲಾ ಮಟ್ಟದಲ್ಲಿ ವಿಜೇತಳಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2025-26ನೇ ಸಾಲಿನ ಉಡುಪಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಬೈಂದೂರು ವಲಯದ ಕಂಚಿಕಾನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ತಿಮ್ಮಪ್ಪ ಗಾಣಿಗ ತಗ್ಗರ್ಸೆ ಅವರು ಆಯ್ಕೆಯಾಗಿರುತ್ತಾರೆ. ಅವರು ಕಾರ್ಕಳ ತಾಲೂಕಿನ ಜೋಗುಳ ಬೆಟ್ಟು, ಬೈಂದೂರು ವಲಯದ ಕೋಯಾನಗರ, ನಾಯ್ಕನಕಟ್ಟೆ, ಬೈಂದೂರು ಶಾಲೆಗಳಲ್ಲಿ 25 ವರ್ಷ ಸಹಶಿಕ್ಷಕರಾಗಿ, ತಗ್ಗರ್ಸೆ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ 6 ವರ್ಷಗಳ ಕಾಲ ಸೇವೆ ಸಲ್ಲಿಸಿರುತ್ತಾರೆ. ಪ್ರಸ್ತುತ ಕಳೆದ 4 ವರ್ಷಗಳಿಂದ ಕಂಚಿಕಾನು ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಒಟ್ಟು 35 ವರ್ಷಗಳ ಸೇವೆಯಲ್ಲಿ ಉತ್ತಮ ತರಗತಿ ಶಿಕ್ಷಕರಾಗಿ , ಮುಖ್ಯ ಶಿಕ್ಷಕರಾಗಿ ಶಾಲೆಯ ಅಭಿವೃದ್ಧಿಗಾಗಿ ಶ್ರಮಿಸಿರುತ್ತಾರೆ . ಅವರು ಸಂಪನ್ಮೂಲ ವ್ಯಕ್ತಿಯಾಗಿ, ಉತ್ತಮ ಕಾರ್ಯಕ್ರಮ ನಿರೂಪಕರಾಗಿ, ಸೇವೆ ಸಲ್ಲಿಸಿದ ಶಾಲೆಗಳಲ್ಲಿ ಮತ್ತು ಬೇರೆ ಬೇರೆ ಶಾಲೆಗಳ ಮಕ್ಕಳಿಗಾಗಿ ಅನೇಕ ನಾಟಕಗಳನ್ನು ರಚಿಸಿ, ನಿರ್ದೇಶಿಸಿ ರಂಗದಲ್ಲಿ ಪ್ರದರ್ಶಿಸಿ ಮಕ್ಕಳಿಗೆ ರಂಗ ಕಲೆಯಲ್ಲಿ ಆಸಕ್ತಿ ಮೂಡಿಸಿರುತ್ತಾರೆ. ಯಕ್ಷಗಾನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಪತ್ರಿಕೋದ್ಯಮ ಮತ್ತು ಇಂಗ್ಲಿಷ್ ವಿಭಾಗಗಳು, ರಾಷ್ಟ್ರೀಯ ಸೇವಾ ಯೋಜನೆ ಮತ್ತು ಎಸ್.ಎಸ್.ಎಲ್ ಇಂಡಿಯಾ ಇವರು ಸಹಯೋಗದಲ್ಲಿ ಭಾರತ ಮತ್ತು ಜರ್ಮನಿಯ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮವು ಬುಧವಾರ ನಡೆಯಿತು. ಈ ಸಂದರ್ಭದಲ್ಲಿ ಪರಸ್ಪರ ಜರ್ಮನ್ ಮತ್ತು ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಸಾಂಪ್ರದಾಯಿಕ, ಸಾಂಸ್ಕೃತಿಕ ವಿಚಾರ ವಿನಿಮಯ ಮಾಡಿಕೊಂಡರು. ಪರಸ್ಪರ ಸಂಸ್ಕೃತಿಗಳ ಶೈಕ್ಷಣಿಕ, ಆರೋಗ್ಯ, ಆಹಾರ, ಕಲೆ ಮತ್ತು ಸಂಸ್ಕೃತಿಗಳ ಕುರಿತು ವೈಶಿಷ್ಟ್ಯವಾಗಿ ಪರಿಚಯಿಸಿ ವಿನಿಮಯ ಮಾಡಿಕೊಂಡರು. ಈ ಸಂದರ್ಭದಲ್ಲಿ ಎಫ್. ಎಲ್ ಇಂಡಿಯಾ ಇದರ ಉಪನಿರ್ದೇಶಕ ರಾಗ್ಲ್ಯಾಂಡ್ ಅವರು ಕಾರ್ಯಕ್ರಮದ ರೂಪುರೇಷೆಗಳನ್ನು ತಿಳಿಸಿದರು. ಎಫ್.ಎಸ್.ಎಲ್ ಇಂಡಿಯಾ ಇದರ ಮುಖ್ಯ ಸಂಯೋಜಕಿ ನಾಗರತ್ನ, ಎಲ್.ಟಿ.ವಿ ವಿಭಾಗದ ದಿನೇಶ್ ಮತ್ತು ಶರಣ್ ಪೌಲ್ ವಿವಿಧ ಚಟುವಟಿಕೆಗಳನ್ನು ಮಾಡಿಸಿದರು. ರೇಡಿಯೋ ಕುಂದಾಪ್ರ ಇದರ ಕಾರ್ಯಕ್ರಮ ನಿರೂಪಕಿ ಉಪಸ್ಥಿತರಿದ್ದರು. ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಸುಮಲತಾ ನಾಯ್ಕ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆದಿವಾಸಿ ನಾಯಕ ಬಿರ್ಸಾ ಮುಂಡಾ ಅವರ ಜನ್ಮ ದಿನದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜಾರ್ಖಂಡ್‌ನಲ್ಲಿ ಪಿಎಂ ಜನಮನ್ ಯೋಜನೆಗೆ ಚಾಲನೆ ನೀಡಿದ್ದರು. ಈ ಯೋಜನೆಯ ಮೂಲಕ ಆದಿವಾಸಿ ಸಮುದಾಯದ ಅಭಿವೃದ್ಧಿ, ಮೂಲಸೌಕರ್ಯಗಳಿಗೆ ಒತ್ತು ನೀಡುವ ಕೆಲಸ ಆಗುತ್ತಿದೆ. ರೂ.198.48ಲಕ್ಷ ವೆಚ್ಚದಲ್ಲಿ ಇಲ್ಲಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ಈ ಭಾಗದಲ್ಲಿ ರಸ್ತೆ ಅಭಿವೃದ್ಧಿಗೆ ದೊಡ್ಡ ಮೊತ್ತ ಇಲ್ಲಿಗೆ ಲಭಿಸಿದೆ ಎಂದು ಸಂಸದ ಬಿ. ವೈ.ರಾಘವೇಂದ್ರ ಹೇಳಿದರು. ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ, ಬೈಂದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿ ಜನ್‌ಜಾತಿ ಆದಿವಾಸಿ ನ್ಯಾಯಾ ಮಹಾ ಅಭಿಯಾನ್ ಯೋಜನೆಯಡಿಯಲ್ಲಿ ಮಂಜೂರಾಗಿರುವ ಕಾಮಗಾರಿ ಎಲ್ 023 ಆತ್ರಾಡಿ ಪಿ.ವಿ.ಟಿ.ಜಿ ಹ್ಯಾಮ್ಲೆಟ್ ರಸ್ತೆ ಅಭಿವೃದ್ದಿ ಕಾಮಗಾರಿಗಳಿಗೆ ರೂ. 198.48ಲಕ್ಷ ಮಂಜೂರಾಗಿದ್ದು ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ಬೈಂದೂರು ಕ್ಷೇತ್ರದಲ್ಲಿ ಪಿಎಂ ಜನಮನ್ ಯೋಜನೆಯಲ್ಲಿ ರೂ.4.89 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣವಾಗುತ್ತಿದೆ. ರೂ.1.80 ಕೋಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಿ.ಬಿ.ಎಸ್.ಇ ಬೋರ್ಡ್ ಹಾಗೂ ಪಿ.ಎಸ್.ಎಸ್.ಇ.ಎಂ.ಆರ್ ಶಾಲೆ ದಾವಣಗೆರೆ ಆಯೋಜಿಸಿರುವ ರಾಜ್ಯಮಟ್ಟದ ಸಿಬಿಎಸ್ಇ ಶಾಲಾ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಕುಂದಾಪುರ ಟ್ರ್ಯಾಕ್ ಅಂಡ್ ಫೀಲ್ಡ್ ಕ್ರೀಡಾಪಟು ಧನ್ವೀನ್ ರಾಮಕೃಷ್ಣ ಪೂಜಾರಿ ಅವರು ಹದಿನಾಲ್ಕು ವರ್ಷದ ಒಳಗಿನ ಬಾಲಕರ ವಿಭಾಗದ ಉದ್ದ ಜಿಗಿತ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ. ವಿಜೇತ ಕ್ರೀಡಾಪಟುವಿಗೆ ಕುಂದಾಪುರ ಟ್ರ್ಯಾಕ್ ಅಂಡ್ ಫೀಲ್ಡ್ ಅಥ್ಲೆಟಿಕ್ಸ್ ಅಕಾಡೆಮಿಯ ಮುಖ್ಯಸ್ಥ ಪ್ರಶಾಂತ್ ಶೆಟ್ಟಿಯವರು ಅಭಿನಂದನೆ ತಿಳಿಸಿದ್ದಾರೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಇವರ ನೇತೃತ್ವದಲ್ಲಿ ಆಯೋಜಿಸಿರುವ ಕುಂದಾಪುರ ತಾಲೂಕು ಮಟ್ಟದ 17ರ ವಯೋಮಾನದ ಹುಡುಗರ ಕ್ರಿಕೆಟ್ ಪಂದ್ಯಾಟದಲ್ಲಿ ಯಡಾಡಿ ಮತ್ಯಾಡಿಯಲ್ಲಿರುವ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ಹುಡುಗರ ತಂಡವು ದ್ವೀತಿಯ ಸ್ಥಾನ ಪಡೆಯಿತು. ತಂಡದ ಐವರು ವಿದ್ಯಾರ್ಥಿಗಳಾದ ಆಯುಷ್ ಶೆಟ್ಟಿ, ಅನುಜ್ ಅಂಬ್ಲಿ, ಕನಿಷ್ಕ್, ಸನ್ವಿತ್ ಮತ್ತು ಅಭಿಷ್ ಜಿಲ್ಲಾ ಮಟ್ಟದ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಫಲಕ ಪದಕ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಮುಖ್ಯೋಪಾಧ್ಯಾಯರಾದ ಪ್ರದೀಪ್. ಕೆ ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕುಮಾರ್ ಹಾಗೂ ಸೂರ್ಯ ಕ್ರೀಡಾಪಟುಗಳಿಗೆ ತರಬೇತಿ ನೀಡಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ನಿರಂತರ ಸಾಧನೆಯನ್ನು ಗಮನಿಸಿ ಆಸ್ಟಿನ್‌ನಲ್ಲಿ ನೆಲೆಸಿರುವ ಪ್ರೋಜೆಕ್ಟ್ ಮೆನೇಜರ್ (ಎಸ್.ಎಲ್.ಕೆ.) ರಾಜೇಶ್ ರತ್ನಾಕರ್ ಪೈ ಅವರು ಗೊಂಬೆಯಾಟ ಅಕಾಡೆಮಿಗೆ 55 ಇಂಚಿನ ಟಿ.ಸಿ.ಎಲ್. ಟಿ.ವಿ.ಯನ್ನು ಇತ್ತೀಚಿಗೆ ಕೊಡುಗೆಯಾಗಿ ನೀಡಿದ್ದಾರೆ. ರಾಜೇಶ್ ರತ್ನಾಕರ್ ಪೈ ಅವರ ತಂದೆ ಎಮ್. ರತ್ನಾಕರ್ ಪೈ ಮತ್ತು ತಾಯಿ ರಾಜಶ್ರೀ ಆರ್.ಪೈ ಅವರು ಇದನ್ನು ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಅವರಿಗೆ ಹಸ್ತಾಂತರಿಸಿದರು. ಈ ವೇಳೆನಿವೃತ್ತ ಮುಖ್ಯೋಪಾಧ್ಯಾಯ ನಾಗೇಶ್ ಶ್ಯಾನುಭಾಗ್ ಬಂಟ್ವಾಡಿ, ನಿವೃತ್ತ ಶಿಕ್ಷಕ ಉದಯ ಭಂಡಾರ್‌ಕಾರ್ ಹಟ್ಟಿಯಂಗಡಿ ಹಾಗೂ ನೇತಾಜಿ ಕಮಿಟಿ ಫ್ರೆಂಡ್ಸ್ ನ ರಾಜೇಂದ್ರ ಪೈ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: 2025-26ನೇ ಸಾಲಿನ ಉಡುಪಿ ಜಿಲ್ಲಾ ಮಟ್ಟದ ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗಗಳಿಂದ ಒಟ್ಟು 15 ಮಂದಿ ಶಿಕ್ಷಕರುಗಳನ್ನು ಉತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕಿರಿಯ ಪ್ರಾಥಮಿಕ ಶಾಲಾ ವಿಭಾಗ:ಸರಸ್ವತಿ (ಸಹ ಶಿಕ್ಷಕರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮರೂರು ಕುಂದಾಪುರ), ವಸುಂಧರ (ಸಹ ಶಕ್ಷಕರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಡ್ಡೆಯಂಗಡಿ ಬೊಮ್ಮಾರಬೆಟ್ಟು), ಹರೀಶ್ ಪೂಜಾರಿ (ಸಹಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡುಕುಡೂರು ಕಾರ್ಕಳ ತಾಲೂಕು), ಸುಮಂಗಲಾ ಗಾಣಿಗ (ಸಹ ಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಕಿಸ್ಮತಿ ಬೈಂದೂರು ವಲಯ) ವಿಜಯ ಎ (ಸಹ ಶಿಕ್ಷಕರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮೂಡುಕೆರೆ ಅಚ್ಲಾಡಿ ಬ್ರಹ್ಮಾವರ ವಲಯ) ಹಿರಿಯ ಪ್ರಾಥಮಿಕ ಶಾಲಾ ವಿಭಾಗ:ಶೇಖರ ಕುಮಾರ (ಮುಖ್ಯ ಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಸ್ಕತ್ತೂರು ಕುಂದಾಪುರ), ವೀಣಾ (ಸಹ ಶಿಕ್ಷಕರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಂಗಾರಕಟ್ಟೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬೆಳ್ಳಾಲ, ನಾಡ ಹಾಗೂ 74 ಉಳ್ಳೂರು ಗ್ರಾಮದಲ್ಲಿ “PMJANMAN” ಯೋಜನೆಯಡಿ ಸುಮಾರು ರೂ. 1.80 ಕೋಟಿ ಅನುದಾನದಲ್ಲಿ ನಿರ್ಮಿಸಲು ಉದ್ದೇಶಿಸಿರುವ “Multi Purpose Center (MPC)” ಕಾಮಗಾರಿಗಳಿಗೆ ಸಂಸದ ಬಿ.ವೈ ರಾಘವೇಂದ್ರ ಅವರು ಗುರುವಾರದಂದು ಶಂಕು ಸ್ಥಾಪನೆ ನೆರವೇರಿಸಿದರು. ಶಾಸಕರಾದ ಗುರುರಾಜ್ ಗಂಟಿಹೊಳೆ, ಮಂಡಲದ ಅಧ್ಯಕ್ಷರಾದ ಅನಿತಾ ಆರ್ ಕೆ., ಸೇರಿದಂತೆ ಬಿಜೆಪಿ ಪಕ್ಷದ ಮುಖಂಡರು ಮತ್ತು ಗಣ್ಯರು ಉಪಸ್ಥಿತರಿದ್ದರು. ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ:ಬೈಂದೂರು ವಿಧಾನಸಭಾ ವ್ಯಾಪ್ತಿಯ ವಂಡ್ಸೆ, ಹರ್ಕೂರು, 74 ಉಳ್ಳೂರು ಗ್ರಾಮಗಳಲ್ಲಿ “PMJANMAN” ಯೋಜನೆಯಡಿ ಸುಮಾರು ರೂ. 4.35 ಕೋಟಿಗಳ ಅನುದಾನದಲ್ಲಿ ಅಭಿವೃದ್ಧಿ ಪಡಿಸಲು ಉದ್ದೇಶಿಸಿರುವ ರಸ್ತೆ ಕಾಮಗಾರಿಗಳಿಗೆ ಸಂಸದ ಬಿ.ವೈ ರಾಘವೇಂದ್ರ ಅವರು ಶಂಕು ಸ್ಥಾಪನೆ ನೆರವೇರಿಸಿ, ನೂಜಾಡಿ ಗ್ರಾಮದಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ವೀಕ್ಷಣೆ ಮಾಡಿದರು. ಈ ವೇಳೆ ಶಾಸಕರಾದ ಗುರುರಾಜ್ ಗಂಟಿಹೊಳೆ, ಮಂಡಲದ ಅಧ್ಯಕ್ಷರಾದ ಅನಿತಾ ಆರ್ ಕೆ., ಸೇರಿದಂತೆ ಬಿಜೆಪಿ ಪಕ್ಷದ ಮುಖಂಡರು ಮತ್ತು…
