ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗ್ರಾಮೀಣ ಪ್ರದೇಶದ ಪ್ರತಿಭಾವಂತ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಬಾರ್ಕೂರು ಎಜುಕೇಶನ್ ಸೊಸೈಟಿ ರಿ. ಮತ್ತು ಕುಂದಾಪುರದ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಜಂಟಿ ಆಶ್ರಯದಲ್ಲಿ ನವೆಂಬರ್ 1ರಂದು ಬಾರ್ಕೂರಿನ ಸುಜ್ಞಾನ ನ್ಯಾಷನಲ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿವೇತನ ಪರೀಕ್ಷೆ ಆಯೋಜಿಸಲಾಗಿದೆ. ಈ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸುಜ್ಞಾನ ಎಜುಕೇಶನಲ್ ಟ್ರಸ್ಟ್ನ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಗ್ರಾಮೀಣ ವಿದ್ಯಾರ್ಥಿಗಳಿಗೆ ಸ್ಥಳೀಯವಾಗಿಯೇ ಗುಣಮಟ್ಟದ ಪಿಯು ಶಿಕ್ಷಣದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಒದಗಿಸುವುದು ಸಂಸ್ಥೆಯ ಉದ್ದೇಶವಾಗಿದೆ. ಕಳೆದ ಶೈಕ್ಷಣಿಕ ವರ್ಷದಲ್ಲಿ ಪ್ರಥಮ ಪಿಯುಸಿಗೆ ದಾಖಲಾದ 100 ವಿದ್ಯಾರ್ಥಿಗಳಲ್ಲಿ 45 ಮಂದಿಗೆ ಒಟ್ಟು ₹9.40 ಲಕ್ಷ ವಿದ್ಯಾರ್ಥಿವೇತನ ನೀಡಲಾಗಿದೆ. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್, ಜೆಇಇ ಹಾಗೂ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಸಿಎ, ಸಿಎಸ್ ತರಬೇತಿ ನೀಡುವ ವ್ಯವಸ್ಥೆಯಿದೆ ಎಂದು ತಿಳಿಸಿದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ನ ಕೋಶಾಧಿಕಾರಿ ಭರತ್ ಶೆಟ್ಟಿ ಮಾತನಾಡಿ,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಗಾಂಧಿ ಮೈದಾನದಲ್ಲಿ ಕುಂದಾಪುರ ತಾಲೂಕು ವಾಲಿಬಾಲ್ ಅಸೋಸಿಯೇಶನ್ ಹಾಗೂ ಕುಂದಾಪುರ ಫ್ರೆಂಡ್ಸ್ ವಾಲಿಬಾಲ್ ಕ್ಲಬ್ ಆಶ್ರಯದಲ್ಲಿ ಜರುಗಿದ ಕೆ.ಎಫ್.ಕೆ ಟ್ರೋಫಿ 2026 – ರಾಷ್ಟ್ರ ಮಟ್ಟದ 3 ದಿನಗಳ ವಾಲಿಬಾಲ್ ಪಂದ್ಯಾಟ ಯಶಸ್ವಿಯಾಗಿ ಸಂಪನ್ನಗೊಂಡಿತು. ಸಾವಿರಾರು ಕ್ರೀಡಾ ಪ್ರೇಕ್ಷಕರ ಅಭೂತಪೂರ್ವ ಸ್ಪಂದನೆ ಹಾಗೂ ಭಾಗವಹಿಸುವಿಕೆಯೊಂದಿಗೆ ಜರುಗಿದ ಈ ಕ್ರೀಡಾ ಹಬ್ಬ ಅದ್ಬೂತ ಯಶಸ್ಸಿಗೆ ಸಾಕ್ಷಿಯಾಯಿತು. ಫಲಿತಾಂಶ:ರೋಚಕ ಆಟ ಪ್ರದರ್ಶಿಸಿದ ಕೆ.ಎಸ್.ಇ.ಬಿ (ಕೇರಳ ವಿದ್ಯುಚ್ಛಕ್ತಿ ಮಂಡಳಿ) ತಂಡವು ಪ್ರಥಮ ಸ್ಥಾನದ ಮುಕುಟ ಮುಡಿಗೇರಿಸಿಕೊಂಡಿತು. ಇಂಡಿಯನ್ ನೇವಿ (ಭಾರತೀಯ ನೌಕಾಸೇನೆ) ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡು ಕ್ರೀಡಾಪ್ರೇಮಿಗಳ ಮನ ಗೆದ್ದಿತು. ಯಶಸ್ವಿ ಆಯೋಜನೆ:ರಾಷ್ಟ್ರ ಮಟ್ಟದ ಪಂದ್ಯಾಟವನ್ನು ಯಶಸ್ವಿಯಾಗಿ ಆಯೋಜಿಸಿದ, ಕುಂದಾಪುರ ವಾಲಿಬಾಲ್ ಫ್ರೆಂಡ್ಸ್ನ ಕೃಷ್ಣಪ್ರಸಾದ್ ಅಡ್ಯಂತಯ್ಯ ಹಾಗೂ ರಾಜೇಶ್ ಕಾರಂತ್, ಕುಂದಾಪುರ ಫ್ರೆಂಡ್ಸ್ ವಾಲಿಬಾಲ್ ಕ್ಲಬ್ನ ರಾಜೇಶ್ ಕಾವೇರಿ, ರಮಾನಂದ ಕೆ. ಮತ್ತು ಅವರ ಇಡೀ ತಂಡಕ್ಕೆ ಸಲ್ಲುತ್ತದೆ. ದೇಶದ ದಿಗ್ಗಜ ತಂಡಗಳನ್ನು ನಮ್ಮ ಊರಿಗೆ ಕರೆತಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ), ರಾಷ್ಟ್ರೀಯ ಸೇವಾ ಯೋಜನೆ, ಹಾಗೂ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳ ಇದರ ಜಂಟಿ ಆಶ್ರಯದಲ್ಲಿ ನಾಲ್ಕನೇ ವರ್ಷದ ರಾಷ್ಟ್ರೀಯ ಸೇವಾ ಯೋಜನೆಯ 2026 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಡ್ತಲದಲ್ಲಿ ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಎಂಆರ್ಪಿಎಲ್ ಸಂಸ್ಥೆಯ ಮುಖ್ಯ ಲೆಕ್ಕಾಧಿಕಾರಿಯಾದ ಅಶೋಕ್ ಕುಮಾರ್ ಹೆಗ್ಡೆ ಉದ್ಘಾಟಿಸಿ, ಎನ್ಎಸ್ಎಸ್ ಶಿಬಿರವು ಕ್ರಿಯೇಟಿವ್ ಸಂಸ್ಥೆಯು ವಿದ್ಯಾರ್ಥಿಗಳಿಗೆ ಒದಗಿಸಿದ ಒಂದು ಉತ್ತಮ ಅವಕಾಶ. ಈ ಶಿಬಿರದ ಮೂಲಕ ಉತ್ತಮ ಮೌಲ್ಯಗಳನ್ನು ಕಲಿತುಕೊಂಡು ದೇಶಕ್ಕೆ ಕೊಡುಗೆಯನ್ನು ನೀಡುವವರಾಗಬೇಕು. ವಿದ್ಯಾರ್ಥಿಗಳ ಮುಂದಿನ ಭವಿಷ್ಯತ್ತಿನಲ್ಲಿ ಶಿಸ್ತು ಬದ್ಧ ಜೀವನವನ್ನು ನಡೆಸಲು ಈ ಶಿಬಿರವು ಅಡಿಪಾಯವಾಗಲಿದೆ. ಮಾತ್ರವಲ್ಲದೆ ವಿದ್ಯಾರ್ಥಿಗಳು ಸೇವಾ ಮನೋಭಾವನೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತುಗಳನ್ನಾಡಿದರು. ಪ್ರಾಸ್ತಾವಿಕ ನುಡಿಗಳೊಂದಿಗೆ ಸರ್ವರನ್ನು ಸ್ವಾಗತಿಸಿದ ಸಹ ಸಂಸ್ಥಾಪಕರು ಹಾಗೂ ಈ ಶಿಬಿರದ ರುವಾರಿಗಳಾದ ಡಾ. ಗಣನಾಥ ಶೆಟ್ಟಿ ಬಿ. ಅವರು, ಏಳು ದಿನಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆಯ ಐಎಂಜಿ ಶಿಕ್ಷಣ ಸಂಸ್ಥೆಯಲ್ಲಿ ಅ.30 ರಂದು ಪಿಯುಸಿ ವಿದ್ಯಾರ್ಥಿಗಳಿಗಾಗಿ 3ನೇ ವರ್ಷದ ರಾಜ್ಯಮಟ್ಟದ ಉತ್ಸವ ‘ನವೋನ್ಮೇಶ್ 2026’ ಹಮ್ಮಿಕೊಳ್ಳಲಾಗಿದೆ ಎಂದು ಐಎಂಜೆ ಪದವಿ ಕಾಲೇಜಿನ ಪ್ರಾಂಶುಪಾಲೆ ಡಾ| ಪ್ರತಿಭಾ ಎಂ. ಪಟೇಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ನಾಲ್ಕು ವಿಭಾಗಗಳಲ್ಲಿ (ವಿಜ್ಞಾನ, ವಾಣಿಜ್ಯ, ಸಾಂಸ್ಕೃತಿಕ, ಸಾಮಾನ್ಯ ಮತ್ತು ಕ್ರೀಡೆ) ಸ್ಪರ್ಧೆ ನಡೆಯಲಿದ್ದು, 25 ವಿವಿಧ ಸ್ಪರ್ಧೆಗಳಿರಲಿವೆ. ಆಕರ್ಷಕ ನಗದು ಬಹುಮಾನ ಲಭಿಸಲಿದೆ. ಉತ್ತಮ ಪ್ರದರ್ಶನ ನೀಡಿದ ತಂಡಕ್ಕೆ ‘ನವೋನ್ಮೇಶ್ 2026’ ಶಾಶ್ವತ ಫಲಕದೊಂದಿಗೆ 33,333 ರೂ. ಮೊದಲ ರನ್ನರ್ ಅಪ್ 22,222 ರೂ. ಹಾಗೂ ದ್ವಿತೀಯ ರನ್ನರ್ ಅಪ್ 11,111 ರೂ. ನಗದು ಬಹುಮಾನ ಸಿಗಲಿದೆ. ಒಟ್ಟು 1.50 ಲಕ್ಷ ರೂ. ಗೂ ಮಿಕ್ಕ ಮೊತ್ತದ ಬಹುಮಾನ ವಿತರಿಸಲಾಗುವುದು ಎಂದರು. ಪ್ರಾಂಶುಪಾಲ ಡಾ| ರಾಮಕೃಷ್ಣ ಹೆಗ್ಡೆ ಮಾತನಾಡಿ, ‘ನವೋನ್ಮೇಶ್ʼ ಹಬ್ಬದಲ್ಲಿ ಬೆಂಗಳೂರು ಸಹಿತ ವಿವಿಧ ಜಿಲ್ಲೆಗಳ ಪಿಯುಸಿ ಕಾಲೇಜುಗಳ 2 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ.…
ಕುಂದಾಪ್ರ ಡಾಟ್ ಕಾಂ ಸುದ್ದಿಕೋಟ: ಕೋಟ ಜಂಕ್ಷನ್ನಲ್ಲಿ ಸೋಮವಾರ ಕಾರು ಮತ್ತು ಸೈಕಲ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾರು ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾರೆ. ಅಕ್ಟೋಬರ್ 26ರಂದು ಬೆಳ್ಳಂಬೆಳಗ್ಗೆ ಕೋಟ ಜಂಕ್ಷನ್ನಲ್ಲಿ ರಸ್ತೆ ದಾಟುತ್ತಿದ್ದ ಹಿರಿಯ ಆರ್ಎಸ್ಎಸ್ ಕಾರ್ಯಕರ್ತ ಗುರುದಾಸ್ ಶೆಣೈ ಅವರಿಗೆ ಉಡುಪಿಯಿಂದ ಕುಂದಾಪುರದತ್ತ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ತೀವ್ರತೆಗೆ ಸೈಕಲ್ ಸವಾರ ಗುರುದಾಸ್ ಶೆಣೈ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು ಈ ಅಪಘಾತದಲ್ಲಿ ಕಾರು ಚಾಲಕ, ಕೋಟೇಶ್ವರದ ಬೀಜಾಡಿ ನಿವಾಸಿ ಪ್ರದೀಪ್ ಕಾಂಚನ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಅವರು ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ – ಕೋಟದಲ್ಲಿ ಭೀಕರ ಅಪಘಾತ – ಕಾರು ಡಿಕ್ಕಿಗೆ ಆರ್ಎಸ್ಎಸ್ ಮುಖಂಡ ಗುರುದಾಸ್ ಶೆಣೈ ಸ್ಥಳದಲ್ಲೇ ಸಾವು – https://kundapraa.com/?p=103619 .
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗ್ಲೋಬಲ್ ಯೋಗ ಹಾಗೂ ರೋಟರಿ ಬೆಂಗಳೂರು ವತಿಯಿಂದ ಬೆಂಗಳೂರಿನ ಜೆ.ಸಿ. ರಸ್ತೆಯ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ಆಯೋಜಿಸಲಾದ ‘ರಾಷ್ಟ್ರೀಯ ಯೋಗ ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭ 2026’ ಕಾರ್ಯಕ್ರಮದಲ್ಲಿ ಯೋಗ ಸಾಧಕರಾದ ಮಂಜುನಾಥ ದೇವಾಡಿಗ ಇವರ ಅನುಪಮವಾದ ಯೌಗಿಕ ಸೇವೆಯನ್ನು ಗುರುತಿಸಿ ‘ರಾಷ್ಟ್ರೀಯ ಯೋಗ ಸಾಧಕ ಪ್ರಶಸ್ತಿ’ ಯೋಗಶ್ರೀ 2026ನ್ನು ಪ್ರದಾನ ಮಾಡಿ ಗೌರವಿಸಲಾಯಿತು. ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಭಾರತದ ಸಮರ್ಪಿತ ಯೋಗ ಶಿಕ್ಷಕರನ್ನು ಗುರುತಿಸಿ ಗೌರವಿಸುವ ಸಲುವಾಗಿ ಈ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಪ್ರಶಸ್ತಿ ಪಡೆದ ಯೋಗ ಸಾಧಕರಿಗೆ ವಿವಿಧ ಗಣ್ಯರು, ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಪ್ರಶಸ್ತಿ ಪುರಸ್ಕೃತರಾದ ಮಂಜುನಾಥ ದೇವಾಡಿಗ ಅವರು ಡಿಪ್ಲೋಮಾ ಇನ್ ಯೋಗ ಎಜುಕೇಶನ್ ಪದವಿಯನ್ನು ಪ್ರಥಮ ರ್ಯಾಂಕ್ ನೊಂದಿಗೆ ಚಿನ್ನದ ಪದಕ ಪಡೆದಿದ್ದು,ಯೋಗಾಸನ ಸ್ಪರ್ಧೆಯ ರಾಜ್ಯ ತೀರ್ಪುಗಾರರಾಗಿಯೂ ಆಯ್ಕೆಯಾಗಿದ್ದಾರೆ. ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ ಇದರ ರಾಜ್ಯ ಮಟ್ಟದ ಯೋಗ ಸಂಪನ್ಮೂಲ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಂಬಿಎ ವಿಭಾಗದ ವತಿಯಿಂದ ದ್ವಿತೀಯ ವರ್ಷದ ಎಂಬಿಎ ವಿದ್ಯಾರ್ಥಿಗಳಿಗೆ “ಪದವಿಯನ್ನು ಮೀರಿ: ಭವಿಷ್ಯದ ನಾಯಕರಿಂದ ಕಾರ್ಪೊರೇಟ್ ಜಗತ್ತು ನಿರೀಕ್ಷಿಸುವ ಗುಣಗಳು” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಸಂಸ್ಥೆಯ ಪ್ರಾಂಶುಪಾಲರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಕಾರ್ಯಕ್ರಮದ ಮಹತ್ವದ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ನಂತರ ಸಂಪನ್ಮೂಲ ವ್ಯಕ್ತಿಯಾದ ದಯಾನಂದ ಶೆಟ್ಟಿ, ಡೈರೆಕ್ಟರ್ ಅಂಡ್ ಸೀನಿಯರ್ ಕಂಸಲ್ಟೆಂಟ್, ಪ್ರೊಜಿನಿ ಟೆಕ್, ಬೆಂಗಳೂರು ಅವರು ಉಪನ್ಯಾಸವನ್ನು ಪ್ರಾರಂಭಿಸಿ, ಇಂದಿನ ಕಾರ್ಪೊರೇಟ್ ಜಗತ್ತಿನಲ್ಲಿ ಭವಿಷ್ಯದ ನಾಯಕರು ಹೊಂದಿರಬೇಕಾದ ಕೌಶಲ್ಯಗಳು, ನಾಯಕತ್ವದ ಗುಣಗಳು, ಸಂವಹನ ಕೌಶಲ್ಯ, ತಂಡದೊಂದಿಗೆ ಕಾರ್ಯನಿರ್ವಹಿಸುವ ಸಾಮರ್ಥ್ಯ ಹಾಗೂ ಪದವಿಯ ಜೊತೆಗೆ ಪ್ರಾಯೋಗಿಕ ಜ್ಞಾನ ಮತ್ತು ವೈಯಕ್ತಿಕ ಕೌಶಲ್ಯಗಳನ್ನು ಬೆಳೆಸಿಕೊಳ್ಳುವ ಮಹತ್ವದ ಕುರಿತು ಮಾಹಿತಿ ನೀಡಿದರು.ಉಪನ್ಯಾಸದ ಮಧ್ಯೆ ವಿದ್ಯಾರ್ಥಿಗಳು ಸಂಪನ್ಮೂಲ ವ್ಯಕ್ತಿಗಳೊಂದಿಗೆ ಸಂವಾದ ನಡೆಸಿ, ತಮ್ಮ ಪ್ರಶ್ನೆಗಳನ್ನು ಕೇಳುವ ಮೂಲಕ ಸಕ್ರಿಯವಾಗಿ ಭಾಗವಹಿಸಿದರು. ಶ್ರೀ ದಯಾನಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಕ್ಕಳ ಸೃಜನಶೀಲತೆ, ಪ್ರತಿಭೆ ಮತ್ತು ಉತ್ಸಾಹವನ್ನು ಸಂಭ್ರಮಿಸಲು ನ.1ರ ರವಿವಾರದಂದು ವಕ್ವಾಡಿಯ ಗುರುಕುಲ ವಿದ್ಯಾ ಸಂಸ್ಥೆಯಲ್ಲಿ ಅದ್ದೂರಿಯಾದ ಗುರುಕುಲ ಕಾರ್ನಿವಲ್-ಮಕ್ಕಳ ಹಬ್ಬವನ್ನು ಆಯೋಜಿಸಲಾಗಿದೆ. ಪ್ರತಿಯೊಂದು ಮಕ್ಕಳಲ್ಲಿಯೂ ಆತ್ಮವಿಶ್ವಾಸವನ್ನು ತುಂಬಿ ಕಲಿಕೆ ಹಾಗೂ ಇನ್ನಿತರ ಸಮಾಜಮುಖಿ ಚಿಂತನೆಗಳಲ್ಲಿ ತನ್ನನ್ನು ಸಂಪೂರ್ಣವಾಗಿ ತೊಡಗಿಸಿಕೊಂಡು ಸ್ಪರ್ಧಾತ್ಮಕ ಜಗತ್ತನ್ನು ಎದುರುಯಿಸುವುದಕ್ಕೆ ಬೇಕಾದ ಕೌಶಲ್ಯಗಳನ್ನು ಅಳವಡಿಸಿಕೊಳ್ಳುವಂತೆ ಮಾಡುವುದು ಈ ಗುರುಕುಲ ಕಾರ್ನಿವಲ್ 2.0ನ ಉದ್ದೇಶವಾಗಿದೆ. ಸ್ವಾವಲಂಬಿಯಾಗಿ ಬದುಕನ್ನು ಕಟ್ಟಿ ಕೊಳ್ಳುವುದಕ್ಕೆ ಬೇಕಾದ ಹೊಸ ಹೊಸ ರೀತಿಯ ಹಾದಿಗಳನ್ನು ಪರಿಚಯಿಸಿ ಸಮಾಜಕ್ಕೂ ಮತ್ತು ಪೋಷಕರಿಗೂ ಹೆಮ್ಮೆ ತರುವ ಮಕ್ಕಳಾಗಿ ರೂಪುಗೊಳ್ಳಬೇಕೆಂಬ ಸದಾಶಿವನು ಹೊಂದಿದ ಈ ಮಕ್ಕಳ ಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಸಂಯೋಜಿಸಲಾಗಿದೆ. ಈ ವಿಶಿಷ್ಟ ಪರಿಕಲ್ಪನೆಯ ಕಾರ್ಯಕ್ರಮವು 9.30ಕ್ಕೆ ಸರಿಯಾಗಿ ಉದ್ಘಾಟನೆಗೊಳ್ಳಲ್ಲಿದ್ದು, ಕನ್ನಡ ಚಿತ್ರರಂಗದ ಮೇರು ಪ್ರತಿಭೆ, ಖ್ಯಾತ ಸಂಗೀತ ನಿರ್ದೇಶಕರಾದ ರವಿ ಬಸ್ರೂರು ಅವರು ವಿಶೇಷ ಅತಿಥಿಯಾಗಿ ಆಗಮಿಸಿ ಕಾರ್ಯವನ್ನು ತಮ್ಮ ಅಮೃತ ಹಸ್ತದಿಂದ ಉದ್ಘಾಟಿಸಲಿದ್ದಾರೆ. ಬಾಂಡ್ಯಾ ಎಜುಕೇಶನಲ್ ಟ್ರಸ್ಟ್ ನ ಜಂಟಿ ಕಾರ್ಯನಿರ್ವಾಹಕರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಯೋಗ ಸಂಘಟಕ ಮಂಜುನಾಥ್ ಎಸ್. ಬಿಜೂರು ಅವರಿಗೆ ರಾಷ್ಟ್ರ ಮಟ್ಟದ ಲೈಫ್ ಟೈಮ್ ಅಚಿವ್ಮೆಂಟ್ ಇನ್ ಯೋಗ ಅವಾರ್ಡ್ ಗೌರವ ಲಭಿಸಿದೆ. ರೋಟರಿ ಬೆಂಗಳೂರು ಗ್ಲೋಬಲ್ ಯೋಗ ವತಿಯಿಂದ ಬೆಂಗಳೂರಿನ ಜೆಸಿ ರಸ್ತೆಯ ಸರ್ ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್ನಲ್ಲಿ ಆಯೋಜಿಸಲಾದ ರಾಷ್ಟ್ರೀಯ ಯೋಗ ಶಿಕ್ಷಕರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಲೈಫ್ ಟೈಮ್ ಅಚೀವ್ಮೆಂಟ್ ಇನ್ ಯೋಗ ಅವಾರ್ಡ್ ಪಡೆದಿರುವ ಮಂಜುನಾಥ್ ಎಸ್. ಬಿಜೂರು ಅವರು ಬೈಂದೂರಿನ ಯೋಗ ಸಂಘಟಕರಾಗಿ ಕಳೆದ 25 ವರ್ಷಗಳಿಂದ ಯೋಗದಲ್ಲಿ ಹಲವಾರು ವಿದ್ಯಾರ್ಥಿಗಳಿಗೆ ಜಿಲ್ಲೆ ರಾಜ್ಯ ರಾಷ್ಟ್ರಮಟ್ಟದವರೆಗೆ ಸ್ಪರ್ಧಿಸುವಲ್ಲಿ ತರಬೇತಿ ನೀಡಿ ಹಾಗೂ ಸಾರ್ವಜನಿಕರಿಗೆ ಹಲವಾರು ಉಚಿತ ಯೋಗ ತರಗತಿ ಆಯೋಜಿಸಿದ್ದಾರೆ. ಅವರು ಯೋಗ ಶಿಕ್ಷಕ ಹಾಗೂ ಮುಖ್ಯ ಶಿಕ್ಷಕರಾಗಿ ನಿವೃತ್ತರಾಗಿದ್ದಾರೆ. ಇದನ್ನೂ ಓದಿ ► ರೋಟರಿ ಬೆಂಗಳೂರು ಗ್ಲೋಬಲ್ ಯೋಗ: ಭಾರತಿ ಬಿಜೂರು ಅವರಿಗೆ ರಾಷ್ಟ್ರೀಯ ಯೋಗ ಜ್ಯೋತಿ ಪ್ರಶಸ್ತಿ ಪ್ರದಾನ – https://kundapraa.com/?p=103653…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಕಾನೂನು ಕಾಲೇಜಿನ ಪ್ರಾಂಶುಪಾಲೆ ರಶ್ಮಿ ಶೆಟ್ಟಿ, ಭಾರತೀಯ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದರು. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಘಟಿಕೋತ್ಸವದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಪದವಿ ಪ್ರದಾನ ಮಾಡಿದರು. ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಹಿರಿಯ ರಂಗಭೂಮಿ ಕಲಾವಿದೆ ಅರುಂಧತಿ ನಾಗ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ರಶ್ಮಿ ಶೆಟ್ಟಿ ಅವರು ‘ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ–2013ರ ಅನುಷ್ಠಾನ: ಕರ್ನಾಟಕದ ಗ್ರಾಮೀಣ ರಾಮನಗರ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಮುಸ್ಲಿಂ ಸಮುದಾಯಗಳ ಅನುಭವಗಳ ಅಧ್ಯಯನ’ ಎಂಬ ವಿಷಯದ ಕುರಿತು ಸಂಶೋಧನೆ ನಡೆಸಿದ್ದಾರೆ. ಆಹಾರ ಭದ್ರತೆಗೆ ಸಂಬಂಧಿಸಿದ ಕಾನೂನಿನ ಅನುಷ್ಠಾನವು ಗ್ರಾಮೀಣ ಪ್ರದೇಶಗಳ ಪರಿಶಿಷ್ಟ ಜಾತಿ ಮತ್ತು ಮುಸ್ಲಿಂ ಸಮುದಾಯಗಳ ಮೇಲೆ ಬೀರುವ ಪರಿಣಾಮಗಳು, ಕಾಯ್ದೆಯ ಅನುಷ್ಠಾನದ ಅನುಭವಗಳು ಹಾಗೂ ಅದರ ಸಾಮಾಜಿಕ ಆಯಾಮಗಳನ್ನು ಅಧ್ಯಯನ ಮಾಡಿರುವುದು ಈ ಸಂಶೋಧನೆಯ ಪ್ರಮುಖ ಅಂಶವಾಗಿದೆ. ಭಾರತೀಯ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಪ್ರೊ. ಸರಸು…
