Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಸಹಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕರ್ಣಾಟಕ ಬ್ಯಾಂಕ್ ವತಿಯಿಂದ ಶಾಲಾ ವಾಹನವನ್ನು ಗುರುವಾರ ಜರಗಿತು. ಶಾಲಾ ಮುಖ್ಯ ಶಿಕ್ಷಕಿ ಶೀಲಾ ಅವರಿಗೆ ಕರ್ಣಾಟಕ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಛೇರಿಯ ಪ್ರಬಂಧಕ ರಾಮಚಂದ್ರ ವೈದ್ಯ ಕೀ ನೀಡುವ ಮೂಲಕ  ಮೂಲಕ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕರ್ಣಾಟಕ ಬ್ಯಾಂಕ್ ಉಡುಪಿ ಚೀಫ್ ಮ್ಯಾನೇಜರ್ ಪ್ರಕಾಶ್ಚಂದ್ರ ಶೆಟ್ಟಿ,ಕೋಟ ಶಾಖಾ ಪ್ರಭಂಧಕ ಗುರುರಾ ಸರಳಾಯ, ಅತಿಥಿಗಳಾಗಿ ಕೋಟ ವಿವೇಕ ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿಭಾದ  ಮುಖ್ಯ ಶಿಕ್ಷಕರಾದ ಪ್ರೇಮಾನಂದ, ರತಿ, ಶಿಕ್ಷಕ ಗಣೇಶ್ ಶೆಟ್ಟಿ, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಮೋದ್ ಹಂದೆ,ಶಾಲಾ ವಾಹನ ಸಮಿತಿ ಅಧ್ಯಕ್ಷ ಉಪೇಂದ್ರ ಸೋಮಯಾಜಿ,ಎಸ್‌ಡಿಎಂಸಿ ಅಧ್ಯಕ್ಷೆ ಮಹಾಲಕ್ಷ್ಮಿ ಸೋಮಯಾಜಿ,ಮಾಜಿ ಪ್ರಾಂಶುಪಾಲ ರಾಘವೇಂದ್ರ ಭಟ್, ಕರ್ಣಾಟಕ ಬ್ಯಾಂಕ್ ನಿವೃತ್ತ ಪ್ರಭಂಧಕ ಕೋಡಿ ಚಂದ್ರಶೇಖರ್ ನಾವಡ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿಕ್ಷಕಿ ಪುಷ್ಭಾವತಿ ಹೊಳ್ಳ ನಿರೂಪಿಸಿದರು. ಶಿಕ್ಷಕಿ ವಿನಯ ಕುಮಾರಿ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಾಂಸ್ಕೃತಿಕ ವಿಶ್ವ ಮನ್ನಣೆ ಪಡೆಯಲು ರಾಜ್ಯದ ಎಲ್ಲಾ ಭಾಗವು ತನ್ನದೇ ಆದ ಕೊಡುಗೆಯನ್ನು ನೀಡಿದೆ. ಕರಾವಳಿ ಕರ್ನಾಟಕದಲ್ಲಿ ಯಕ್ಷಗಾನವು ಶಾಸ್ತ್ರೀಯ ಶಿಸ್ತು ಮತ್ತು ಜಾನಪದ ಸ್ವಾತಂತ್ರ್ಯದಿಂದ ಜನಮನ್ನಣೆಯನ್ನು ಪಡೆದಿದೆ. ಚೌಕಟ್ಟು ಮೀರಿದರೂ ಸರಿ ತಪ್ಪು ಹೇಳುವ ಕೋರ್ಟು ಸೃಷ್ಟಿಯಾಗಿಲ್ಲ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಮಾಜಿ ಅಧ್ಯಕ್ಷ ಎಂ.ಎಲ್.ಸಾಮಗ ಹೇಳಿದ್ದಾರೆ. ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೈಸೂರು ವಿಭಾಗ ಹಾಗೂ ಉಡುಪಿ ಜಿಲ್ಲೆ ವತಿಯಿಂದ ಕುಂಜಿಬೆಟ್ಟು ಶಾರದಾ ರೆಸಿಡೆನ್ಸಿಯಲ್ ಸ್ಕೂಲಿನ ಸಭಾಂಗಣದಲ್ಲಿ ಬುಧವಾರ ನಡೆದ ಸಾಧಕರೊಂದಿಗೆ ಸಂವಾದದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಶಾಸ್ತ್ರೀಯ ಕಲಾವಿದರಿಗೆ ಪಂಚ ತಾರಾ ಆತಿಥ್ಯ, ಯಕ್ಷಗಾನ/ಜನಪದ ಕಲಾವಿದರಿಗೆ ಕಲ್ಯಾಣ ಮಂಟಪದಲ್ಲಿ ಉಳಿದುಕೊಳ್ಳಬಹುದಾದ ವ್ಯವಸ್ಥೆಯ ತಾರತಮ್ಯ ಸಲ್ಲದು. ಯಕ್ಷಗಾನ ಗಂಡಸರಿಗೆ ಸೀಮಿತವಾದ ಕಲೆಯಲ್ಲ, ಎಲ್ಲರಿಗೂ ಸೇರಿದ ಕಲೆ. ಸಾಹಿತ್ಯ ಕಾರ್ಯಕ್ರಮದಲ್ಲಿ ತೊಡಗುವಿಕೆ  ಸಂತೋ? ನೀಡುತ್ತದೆ. ಬದುಕಿನಲ್ಲಿ  ಉತ್ತಮ ಕಲಾವಿದರಾಗಲು ಅನುಭವ ವಿಸ್ತಾರ, ವೀಕ್ಷಣೆಯ ಕುತೂಹಲ ಬಹುಮುಖ್ಯ ಎಂದರು. ತಮ್ಮ ಸುದೀರ್ಘ ಆರವತ್ತು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಸಾಮಾಜಿಕ ಕಳಕಳಿ, ದೂರದೃಷ್ಟಿ ಮತ್ತು ಸೇವಾ ಮನೋಭಾವ ಹೊಂದಿದ್ದ ಸುಬ್ಬರಾವ್ ಪೈ ಅವರು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ದೂರದೃಷ್ಟಿಯ ಫಲವಾಗಿ ಆರಂಭಗೊಂಡ ಕೆನರಾ ಬ್ಯಾಂಕ್ ಇಂದು ದೇಶದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಒಂದಾಗಿ ಬೆಳೆದಿದೆ. ಅಮ್ಮೆಂಬಳ ಸುಬ್ಬರಾವ್ ಪೈ ಅವರ ಜೀವನ ಸಾಧನೆ ಬ್ಯಾಂಕಿಂಗ್ ಕ್ಷೇತ್ರಕ್ಕೆ ಮಾತ್ರವಲ್ಲದೆ, ಸಮಾಜಮುಖಿ ಸೇವೆಗೆ ಮಾದರಿಯಾಗಿದೆ ಎಂದು ಕೆನರಾ ಬ್ಯಾಂಕಿನ ನಿವೃತ್ತ ಉದ್ಯೋಗಿ ಜಿ.ಗಂಗಾಧರ ಪೈ ಹೇಳಿದರು. ಅವರು ಕೆನರಾ ಬ್ಯಾಂಕ್ ಗಂಗೊಳ್ಳಿ ಶಾಖೆಯಲ್ಲಿ ಗುರುವಾರ ಜರಗಿದ ಕೆನರಾ ಬ್ಯಾಂಕಿನ ಸಂಸ್ಥಾಪಕ ಅಮ್ಮೆಂಬಳ ಸುಬ್ಬರಾವ್ ಪೈ ಅವರ 174ನೇ ಜನ್ಮದಿನಾಚರಣೆ ಅಂಗವಾಗಿ ನಡೆದ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಟ್ಟಡದ ಮಾಲೀಕ, ಉದ್ಯಮಿ ಎಂ.ಜಿ. ಅಜಿತ್ ನಾಯಕ್, ಪತ್ರಕರ್ತ ಬಿ. ರಾಘವೇಂದ್ರ ಪೈ, ಕೆನರಾ ಬ್ಯಾಂಕ್ ಸಿಬ್ಬಂದಿಗಳಾದ ಸಾಗರ್ ಕೆ.ಶಿವದಾಸ್, ನವನೀತ್ ಕೃಷ್ಣ, ಜಯಮುರುಕೇಶ್ ಕೆ.ಕೆ., ರಾಘವೇಂದ್ರ ಗಾಣಿಗ, ಗಣೇಶ್, ವಾಣಿ ಶೇರುಗಾರ್ ಮತ್ತು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಮಿಲಾಗ್ರೀಸ್ ಪದವಿ ಪೂರ್ವ ಕಾಲೇಜು ಕಲ್ಯಾಣಪುರ, ಲಯನ್ಸ್ ಕ್ಲಬ್ ಕೆಮ್ಮಣ್ಣು, ಲಯನ್ಸ್ ಕ್ಲಬ್ ಕಲ್ಯಾಣಪುರ ಹಾಗೂ ಮೂಲತ್ವ ಫೌಂಡೇಶನ್ ಟ್ರಸ್ಟ್ ರಿ., ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮವು ಬುಧವಾರದಂದು ಕಾಲೇಜಿನ ಸಭಾಂಗಣದಲ್ಲಿ ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಲಯನ್ಸ್ ಕ್ಲಬ್ ಕೆಮ್ಮಣ್ಣಿನ ಅಧ್ಯಕ್ಷರಾದ ಶ್ರೀ ಲಯನ್ ಜಗದೀಶ್ ಕೆಮ್ಮಣ್ಣು ಅವರು ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥನೆ ಸಲ್ಲಿಸಿದರು. ಮಿಲಾಗ್ರೀಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಫಾದರ್ ಮೆಲ್ವಿನ್ ಎಂ. ಮೊಂಡೋನ್ಸ ಎಸ್.ಜೆ. ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮೂಲತ್ವ ಫೌಂಡೇಶನ್ ಟ್ರಸ್ಟ್ ರಿ., ಮಂಗಳೂರು ಇದರ ಸಂಸ್ಥಾಪಕರಾದ ಪ್ರಕಾಶ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಮೂಲತ್ವ ಫೌಂಡೇಶನ್ ವತಿಯಿಂದ ನಡೆಯುತ್ತಿರುವ ವಿವಿಧ ಸಮಾಜಮುಖಿ ಸೇವಾ ಕಾರ್ಯಗಳ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾ. ಕುಸುಮ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಒಂದು ಭಾಷೆ ಬೆಳೆಯಲು ವಿವಿಧ ಭಾಷೆಗಳ ನಡುವೆ ಸಮನ್ವಯ ಅಗತ್ಯವಿದೆ. ಭಾಷೆಯನ್ನು ಬಳಸುವುದು ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಮೂಲ ದಾರಿ. ನಮ್ಮ ಮಾತೃಭಾಷೆಯನ್ನು ಪ್ರೀತಿಸುವುದರ ಜೊತೆಯಲ್ಲಿ ವಿವಿಧ ಭಾಷೆಗಳನ್ನು ಗೌರವಿಸೋಣ ಎಂದು ಕನ್ನಡ ಉಪನ್ಯಾಸಕರಾದ  ಹೆಚ್. ಸುಜಯೀoದ್ರ ಹಂದೆ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಎಸ್ ವಿ ಕಾಮರ್ಸ್ ಕ್ಲಬ್ ವತಿಯಿಂದ ನಡೆದ ಕನ್ನಡ ಸಿರಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಸಮಾಜ ಸೇವಕ ಆನಂದ ಬಿಲ್ಲವ ಬೈಲುಮನೆ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ವಿದ್ಯಾರ್ಥಿ ಪ್ರತಿನಿಧಿಗಳಾದ ಅದಿತಿ ಎಸ್. ಖಾರ್ವಿ, ನಿಸರ್ಗ ಖಾರ್ವಿ ಮತ್ತು ಸನ್ಮಿತಾ ಖಾರ್ವಿ ಕನ್ನಡದ ಬಗೆಗೆ ಅಭಿಪ್ರಾಯಗಳನ್ನು ಹಂಚಿಕೊಂಡರು.  ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ ಅಧ್ಯಕ್ಷತೆ ವಹಿಸಿದ್ದರು. ಎಸ್‌ವಿ ಕಾಮರ್ಸ್ ಕ್ಲಬ್ ಸಂಯೋಜಕ ನರೇಂದ್ರ ಎಸ್. ಗಂಗೊಳ್ಳಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮಾನ್ವಿ ಮತ್ತು ಸಹನಾ ಕನ್ನಡ ಗೀತೆಯನ್ನು ಹಾಡಿದರು. ವರದ ಹೆಬ್ಬಾರ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಬೆಂಗಳೂರು ಕರ್ನಾಟಕ ರಾಜ್ಯ ಕಾನೂನು ಪ್ರಾಧಿಕಾರ, ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ, ನೂಜಾಡಿ ಆಂಗ್ಲ ಮಾಧ್ಯಮ ಶಾಲೆ ಸಹಭಾಗಿತ್ವದಲ್ಲಿ ಮಕ್ಕಳಿಗೆ “ಬಚ್ಪನ್ ಸುರಕ್ಷಾ ಅಭಿಯಾನದಡಿ, ಕಾನೂನು ಅರಿವು ಕಾರ್ಯಕ್ರಮವು ಬುಧವಾರ ನಡೆಯಿತು. ಮುಖ್ಯ ಸಂಪನ್ಮೂಲ ಅಥಿತಿಯಾಗಿ ಭಾಗವಹಿಸಿದ್ದ ಉಡುಪಿ ನ್ಯಾಯಾವಾದಿ ಮತ್ತು ಕಾನೂನು ನೆರವು ಅಭಿರಕ್ಷಕರಾದ ರಾಘವೇಂದ್ರ ಎಸ್., ಅವರು ಮಕ್ಕಳಿಗೆ ಮಕ್ಕಳ ರಕ್ಷಣಾ ನೀತಿ 2016, ತಿದ್ದುಪಡಿ ನಿಯಮ 2023, ಕಡ್ಡಾಯ ಅನುಷ್ಠಾನ, ಮಕ್ಕಳ ಸುರಕ್ಷತೆ ಕ್ರಮ, ಅಗತ್ಯ ಜಾಗೃತಿ, ಸಂಕ್ಷಿಪ್ತವಾಗಿ ವಿವರಿಸುತ್ತಾ, ಮಕ್ಕಳಿಗೆ ಪೋಕ್ಸೋ ಕಾಯ್ದೆ, ಮಾಧಕ ದ್ರವ್ಯ ನಿರ್ಮೂಲನ ಕಾಯ್ದೆ, ಬಾಲ ಕಾರ್ಮಿಕ ಪದ್ಧತಿ, ಸಂಚಾರಿ ನಿಯಮ ಜಾಗೃತಿ ಮತ್ತು ಪಾಲನೆ ಬಗ್ಗೆ ಸಂಸ್ಷಿಪ್ತಾವಾಗಿ ಅರಿವು ಮತ್ತು ಜಾಗೃತಿ ಮೂಡಿಸಿದರು. ಶಾಲೆಯ ಮುಖ್ಯೋಪಾಧ್ಯಾಯರುಯಾದ ಶೈಲಜಾ ವಿ. ಶೆಟ್ಟಿ ಸ್ವಾಗತ ಭಾಷಣ ನಿರ್ವಹಿಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಕೂಡ ನಿವೃತ್ತ ಮುಖ್ಯೋಪಾಧ್ಯಾಯರಾದ ಬಿ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕೆದೂರು ಗ್ರಾಮದ ಹೊಸಮಠ ಧರ್ಮಗೋಳಿ ಹಳೆಯಮ್ಮ ದೈವಸ್ಥಾನದ ಅಡುಗೆ ಕೋಣೆಯ ಬೀಗ ಒಡೆದು ಒಳನುಗ್ಗಿದ ಕಳ್ಳರು ಸುಮಾರು 99 ಸಾವಿರ ರೂ. ಮೌಲ್ಯದ ತಾಮ್ರದ ಪಾತ್ರೆಗಳನ್ನು ಕಳವು ಮಾಡಿಕೊಂಡು ಹೋದ ಘಟನೆ ಬೆಳಕಿಗೆ ಬಂದಿದೆ. ದೈವಸ್ಥಾನದ ಆಡಳಿತ ಮಂಡಳಿಯ ಮೊತ್ತೇಸರರಾದ ಅವಿನಾಶ್ ಅವರು ನ.7ರಂದು ಬೆಳಿಗ್ಗೆ 6 ಗಂಟೆಯ ಸುಮಾರಿಗೆ ದೈವಸ್ಥಾನದ ಕಾರ್ಯಕ್ರಮವೊಂದಕ್ಕೆ ಅಗತ್ಯವಿದ್ದ ಪಾತ್ರೆಗಳನ್ನು ತರಲು ಸಭಾಭವನದ ಸಮೀಪವಿರುವ ಅಡುಗೆ ಕೋಣೆಗೆ ತೆರಳಿದ್ದರು. ಈ ವೇಳೆ ಅಡುಗೆ ಕೋಣೆಯ ಬೀಗ ಒಡೆದಿರುವುದು ಕಂಡುಬಂದಿದೆ. ಪರಿಶೀಲಿಸಿದಾಗ ಅಡುಗೆ ಕೋಣೆಯಲ್ಲಿದ್ದ ತಲಾ ದೊಡ್ಡ ಗಾತ್ರದ ಆರು ತಾಮ್ರದ ಜೋಡು ಕೊಳಗಗಳು (ಹಂಡೆಗಳು) ಹಾಗೂ ಒಂದು ದೊಡ್ಡ ತಾಮ್ರದ ಬಾಣಲೆ ಕಳವಾಗಿರುವುದು ಬೆಳಕಿಗೆ ಬಂದಿದೆ. ಅ.18ರ ಸಂಜೆ 7 ಗಂಟೆಯಿಂದ ನ.7ರ ಬೆಳಿಗ್ಗೆ 6 ಗಂಟೆಯ ನಡುವಿನ ಅವಧಿಯಲ್ಲಿ ಕಳ್ಳರು ಅಡುಗೆ ಕೋಣೆಯ ಬೀಗ ಮುರಿದು ಒಳನುಗ್ಗಿ ಈ ಕೃತ್ಯ ಎಸಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಕಳವಾದ ಸೊತ್ತುಗಳ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ರೈಲಿನಲ್ಲಿ ಪ್ರಯಾಣಿಕರ ಮೊಬೈಲ್‌ಗಳನ್ನು ಕಳವು ಮಾಡಿ, ಅದರ ಮೂಲಕ ಯುಪಿಐ ಬಳಸಿ ಹಣ ವರ್ಗಾವಣೆ ಮಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ.ಬಂಧಿತನಿಂದ ಕಳವು ಮಾಡಲಾಗಿದ್ದ ಮೂರು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಾಸ್ತಾನ ಐರೋಡಿ ಗ್ರಾಮದ ಗೋಳಿಬೆಟ್ಟು ನಿವಾಸಿ ಪ್ರಹ್ಲಾದ್ (32) ಬಂಧಿತ ಆರೋಪಿ. ಕಳೆದ ಆ.2ರಂದು ರುಬೆನ್ ಫೆರ್ನಾಂಡಿಸ್‌ ಎಂಬವರು ಮಂಗಳೂರಿನಿಂದ ಮಡಗಾಂವ್‌ಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಬೆಳಗಿನ ಜಾವ ಸುಮಾರು 2 ಗಂಟೆಗೆ ಬೈಂದೂರು ರೈಲು ನಿಲ್ದಾಣದ ಸಮೀಪ ಅವರ ಬಳಿಯಿದ್ದ ಸುಮಾರು 17 ಸಾವಿರ ರೂ. ಮೌಲ್ಯದ ಮೊಬೈಲ್‌ನ್ನು ಅಪರಿಚಿತ ವ್ಯಕ್ತಿಯೊಬ್ಬ ಕಳವು ಮಾಡಿದ್ದ ಬಳಿಕ ಕಳವು ಮಾಡಿದ ಮೊಬೈಲ್ ಮೂಲಕ ಯುಪಿಐ ಬಳಸಿ 19,847 ರೂ. ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಲಾಗಿತ್ತು. ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಕೈಗೊಂಡ ಬೈಂದೂರು ವೃತ್ತ ನಿರೀಕ್ಷಕ ಶಿವಕುಮಾರ್ ಬಿ. ನೇತೃತ್ವದ ತಂಡ ಆರೋಪಿಯನ್ನು ಬಂಧಿಸುವಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಕೌಶಲ್ಯಾಭಿವೃದ್ಧಿ ಇಮ್ಮಡಿಗೊಳಿಸಲು ಪ್ರತಿಭಾ ಕಾರಂಜಿ ವೇದಿಕೆ ಕಲ್ಪಿಸಲಿದೆ. ಈ ದಿಸೆಯಲ್ಲಿ ವಿದ್ಯಾರ್ಥಿಗಳು ಹೆಚ್ಚು ಭಾಗಿಯಾಗಬೇಕು ಎಂದು ಶಿಕ್ಷಣ ತಜ್ಞ ಗಣೇಶ್ ಜಿ ಹೇಳಿದರು. ಅವರು ಬುಧವಾರ‌ ಚೇತನಾ ಪ್ರೌಢಶಾಲೆ, ಹಂಗಾರಕಟ್ಟೆ ಇಲ್ಲಿ ಕರ್ನಾಟಕ ಸರ್ಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ, ಬ್ರಹ್ಮಾವರ ವಲಯದ ಸಹಯೋಗದೊಂದಿಗೆ ಚೇತನಾ ಪ್ರೌಢಶಾಲೆ, ಹಂಗಾರಕಟ್ಟೆ ಇವರ ಸಹಭಾಗಿತ್ವದಲ್ಲಿ ಹಂಗಾರಕಟ್ಟೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2026-27 ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಮಕ್ಕಳ‌ಮನೋವಿಕಾಸ ಬಲಗೊಳ್ಳಲು ಸಹಕಾರಿ ಎಂದರಲ್ಲದೆ ಒಂದು ಶಿಕ್ಷಣ ಸಂಸ್ಥೆ ಸಮರ್ಪಕವಾಗಿ ನಡೆಯಬೇಕಾದರೆ ಅಲ್ಲಿನ ಆಡಳಿತ ವ್ಯವಸ್ಥೆ ಅಷ್ಟು ಬಹುಮುಖ್ಯ ಪಾತ್ರ ವಹಿಸಲಿದೆ ಈ ನಿಟ್ಟಿನಲ್ಲಿ ಚೇತನಾ ಪ್ರೌಢಶಾಲೆ ಸಾಮಾಜಿಕ ,ಸಾಂಸ್ಕೃತಿಕ ,ಶೈಕ್ಷಣಿಕವಾಗಿ ಮುಂಚೂಣಿಗೆ ನಿಂತಿದೆ ಎಂದರು. ಕಾರ್ಯಕ್ರಮವನ್ನು ಫಾರ್ಚುನ ಅಕಾಡೆಮಿಯ ಮುಖ್ಯಸ್ಥ ತಾರಾನಾಥ ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು. ಸಭಾಧ್ಯಕ್ಷತೆಯನ್ನು ಶಾಲಾ ಆಡಳಿತ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಎಸ್.ಸಿ ನರ್ಸಿಂಗ್ ಮತ್ತು ಜಿ.ಎನ್.ಎಮ್ ನರ್ಸಿಂಗ್ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನ ಸೌಲಭ್ಯ ಪಡೆಯಲು ವೆಬ್‌ಸೈಟ್  https://sevaone.karnataka.gov.in/service ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ: 8277799990, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂ: 0820-2574596 ಅಥವಾ ಜಿಲ್ಲಾ / ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More