ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಇಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ಎಂ.ಕಾಂ. ವಿದ್ಯಾರ್ಥಿನಿ ಅಮೃತಾ ಅವರು ವಿದ್ಯಾರ್ಥಿಗಳಿಗೆ ಸಂವಿಧಾನದ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ನಾಗರಾಜ ವೈದ್ಯ ಎಂ. ಅವರು ವಿದ್ಯಾರ್ಥಿಗಳಿಗೆ ಸಂವಿಧಾನದ ಆಶೋತ್ತರಗಳ ಬಗ್ಗೆ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಬ್ರಮಣ್ಯ ಎ. ಅವರು ವಿದ್ಯಾರ್ಥಿಗಳಿಗೆ ಸಂವಿಧಾನದ ಬಗ್ಗೆ ಚೆನ್ನಾಗಿ ಅರಿತುಕೊಂಡು ಜೀವನದಲ್ಲಿ ಉತ್ತಮ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವಂತೆ ಕರೆ ನೀಡಿದರು. ಈ ಕಾರ್ಯಕ್ರಮದ ಸಂಘಟಕರಾದ ಡಾ. ಭಾಗೀರಥಿ ನಾಯ್ಕ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಅತಿಥಿಗಳನ್ನು ಸ್ವಾಗತಿಸಿದರು. ವಾಣಿಜ್ಯಶಾಸ್ತ್ರದ ಪ್ರಾಧ್ಯಾಪಕರಾದ ಡಾ. ಉದಯ ಶೆಟ್ಟಿ ಕೆ. ಇವರು ಕಾರ್ಯಕ್ರಮವನ್ನು ನಿರೂಪಣೆ ಮಾಡಿದರು ಮತ್ತು ಎಂ.ಕಾಂ.ನ ಸಂಯೋಜಕರಾದ ಕಾರ್ತಿಕ್ ಪೈ ವಂದಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪರಮ ಪವಿತ್ರವಾದ ತುಳಸಿಯನ್ನು ಪೂಜಿಸುವ ಸಂಸ್ಕೃತಿ ಭಾರತದ್ದು. ಅದರಂತೆ ಉತ್ಥಾನ ದ್ವಾದಶಿಯ ಪರ್ವ ಸಮಯದಲ್ಲಿ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ತುಳಸಿಯ ಕಟ್ಟೆಯಲ್ಲಿತುಳಸಿ ಮತ್ತು ಕಾರ್ತಿಕ ದಾಮೋದರರ ಪೂಜೆಯನ್ನು ಸಡಗರದಿಂದ ಆಚರಿಸಲಾಯಿತು. ಈ ಸಮಯದಲ್ಲಿ ಶಾಲೆಯ ವಿದ್ಯಾರ್ಥಿಗಳು ದೀಪಗಳನ್ನು ಬೆಳಗಿಸಿ, ತುಳಸಿ ಮತ್ತು ಕಾರ್ತಿಕ ದಾಮೋದರ – ನಾಮಕನಾದ ಶ್ರೀ ಹರಿಯನ್ನು ಭಜನೆಗಳ ಮೂಲಕ ಆರಾಧಿಸಿದರು. ಶಾಲಾ ಶಿಕ್ಷಕರಾದ ರಾಮಕೃಷ್ಣ ಉಡುಪ ತುಳಸಿ ಪೂಜೆಯನ್ನು ನೆರವೇರಿಸಿ, ತುಳಸಿಯನ್ನು ಪ್ರಾರ್ಥಿಸುತ್ತಾ ಶರೀರವು ದೇವರು ನಮಗೆ ಕೊಟ್ಟ ದೊಡ್ಡ ವರ. ಅದರ ಸಂರಕ್ಷಣೆಗೆ ಪ್ರಕೃತಿಯಲ್ಲಿ ಕೆಲವಷ್ಟು ಔಷಧೀಯ ಗಿಡಗಳನ್ನು ಸೃಷ್ಟಿಸಿ, ಅವುಗಳ ಪಾಲನೆ ಪೋಷಣೆ ಮತ್ತು ಆದರಭಾವಗಳನ್ನು ತೋರಿಸುವ ಸಂಸ್ಕೃತಿಯನ್ನು ನಮಗೆ ತಿಳಿಸಿಕೊಟ್ಟಿದ್ದಾರೆ. ಅಂತಹ ಸಸ್ಯಗಳಲ್ಲಿ ಅಗ್ರಸ್ಥಾನವನ್ನು ಪಡೆವ ಗಿಡ ತುಳಸಿ. ವೃಂದಾಸ್ವರೂಪಳಾದ ತುಳಸಿದೇವಿಯು ನಮಗೆ ಉತ್ತಮ ಆರೋಗ್ಯವನ್ನು ನೀಡಲಿ ಎಂದರು. ಅನಂತರ ಸಿಡಿಮದ್ದುಗಳ ಪ್ರದರ್ಶನದ ಮೂಲಕ ವಿದ್ಯಾರ್ಥಿಗಳ ಮನಸ್ಸನ್ನು ರಂಜಿಸಲಾಯಿತು. ಈ ಸಮಯದಲ್ಲಿ ಶ್ರೀ ಸಿದ್ಧಿ ಶೈಕ್ಷಣಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಸೇವೆ, ಧರ್ಮ, ಸಂಸ್ಕೃತಿ, ಶಿಕ್ಷಣ ಹಾಗೂ ಸಮಾಜಮುಖಿ ಚಿಂತನೆಗಳ ಮೂಲಕ ಲಕ್ಷಾಂತರ ಜನರ ಬದುಕಿನಲ್ಲಿ ಪ್ರೇರಣೆಯ ಬೆಳಕಾಗಿರುವ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ನಮ್ಮ ನಾಡಿನ ಹೆಮ್ಮೆಯ ವ್ಯಕ್ತಿತ್ವ. ಧರ್ಮಸ್ಥಳದ ಧಾರ್ಮಿಕ ಪರಂಪರೆಯನ್ನು ಉಳಿಸಿ ಬೆಳೆಸುವುದರ ಜೊತೆಗೆ ಸಮಾಜದ ಅಭಿವೃದ್ಧಿ, ಗ್ರಾಮೀಣ ಸಬಲೀಕರಣ, ಶಿಕ್ಷಣ, ಆರೋಗ್ಯ ಹಾಗೂ ಮಹಿಳಾ ಸ್ವಾವಲಂಬನೆಯ ಕ್ಷೇತ್ರಗಳಲ್ಲಿ ಅವರ ಕೊಡುಗೆ ಅನನ್ಯವಾಗಿದೆ ಎಂದು ಗುಜ್ಜಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹರೀಶ ಮೇಸ್ತ ಹೇಳಿದರು. ಅವರು ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಜನ್ಮ ದಿನದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬೈಂದೂರು ವಲಯ ಆಶ್ರಯದಲ್ಲಿ ಕೊಡಪಾಡಿಯ ಹೋಲಿಕ್ರಾಸ್ ವೃದ್ಧಾಶ್ರಮದಲ್ಲಿ ಬುಧವಾರ ಜರಗಿದ ಸೇವಾ ದಿನ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜನಜಾಗೃತಿ ವೇದಿಕೆ ಸದಸ್ಯ ಬಿ.ರಾಘವೇಂದ್ರ ಪೈ ಮಾತನಾಡಿ, ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಜನ್ಮದಿನದ ಈ ಶುಭ ಸಂದರ್ಭದಲ್ಲಿ, ಅವರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಉಡುಪಿ ಕಿನಾರ ಮೀನುಗಾರರ ಉತ್ಪಾದಕ ಕಂಪನಿ ನಿಯಮಿತ, ಸೆಲ್ಕೋ ಫೌಂಡೇಶನ್ ಹಾಗೂ ಅಮೃತೇಶ್ವರಿ ರೈತ ಉತ್ಪಾದಕ ಕಂಪನಿ ನಿಯಮಿತ ಇವರ ಆಶ್ರಯದಲ್ಲಿ ಕೋಡಿ ಕನ್ಯಾಣ ಹೊಸ ಸೇತುವೆ ಬಳಿ ಸೀ-ವೀಡ್, ಪಂಜರ ಹಾಗೂ ಪಚ್ಚಿಲೆ ಕೃಷಿಗಳ ಮಾಹಿತಿ ಕಾರ್ಯಾಗಾರ ಬುಧವಾರ ಜರಗಿತು. ಕಾರ್ಯಕ್ರಮವನ್ನು ಎಂಪಿಇಡಿಎ ಉಪನಿರ್ದೇಶಕರಾದ ಮನೋಜ್ ಮತ್ತು ಕೆ.ವಿ.ಕೆ. ಬ್ರಹ್ಮಾವರ ಮುಖ್ಯಸ್ಥರಾದ ಭೂಮಿಕಾ ಅವರು ಪಚ್ಚಿಲೆ ಮರಿಯನ್ನು ರೋಪ್ ಗೆ ಹಾಕಿ, ಬಟ್ಟೆಯಿಂದ ಸ್ಟಿಚ್ ಮಾಡಿ ರೋಪ್ ಸಿದ್ಧಗೊಳಿಸುವ ಮೂಲಕ ಉದ್ಘಾಟಿಸಿ,ಮಾತನಾಡಿ, ಉಡುಪಿ ಕಿನಾರದ ಮೀನುಗಾರರು ಈಗಾಗಲೇ ಪಚ್ಚಿಲೆ, ಪಂಜರ, ಕಲ್ಲ, ಮುತ್ತು ಕೃಷಿ ಮಾಡುತ್ತಿರುವುದು ಹೆಮ್ಮೆಯ ವಿಚಾರ. ಕಳೆದ ವರ್ಷ ನಡೆದ ಮೀನುಗಾರರ ಸಂವಾದ ಕಾರ್ಯಕ್ರಮದಲ್ಲಿ ಸೀ-ವೀಡ್ ಬಗ್ಗೆ ಮಾಹಿತಿ ನೀಡಿದ್ದೆವು. ಅದನ್ನು ಮೀನುಗಾರರು ಅಧ್ಯಯನ ಮಾಡಿ, ಮಾರುಕಟ್ಟೆ ಲಿಂಕೇಜ್ ಪಡೆದು, ಇದೀಗ ಸೀ-ವೀಡ್ ಕೃಷಿ ಆರಂಭಿಸಿರುವುದು ನಿಜಕ್ಕೂ ಮಾದರಿ ಕಾರ್ಯ ಎಂದರು. ಕಾರವಾರದ ಸಿಎಂಎಫ್ ಆರ್ ಐ ಇಲ್ಲಿನ ವಿಜ್ಞಾನಿ ಸೋನಾಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಶಿರೂರು ಬಳಿಯ ಮುದ್ರಮಕ್ಕಿಯಲ್ಲಿ ಗುರುವಾರ ಮಧ್ಯಾಹ್ನ ಮನೆಯ ಬಾಗಿಲು ಒಡೆದು ಒಳನುಗ್ಗಿದ ಕಳ್ಳರು ನಗದು ಮತ್ತು ಚಿನ್ನಾಭರಣಗಳನ್ನು ದೋಚಿದ್ದಾರೆ. ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಶಿವರಾಮ ಪೂಜಾರಿ ಮತ್ತು ಅರುಣ್ ಮೊಗೇರ್ ಮನೆಯಲ್ಲಿಲ್ಲದ ಸಮಯದಲ್ಲಿ ಕಳ್ಳರು ಬಾಗಿಲು ಒಡೆದು ಒಳಗೆ ನುಗ್ಗಿ 1 ಲಕ್ಷ ರೂ. ನಗದು ಮತ್ತು ಎರಡು ಪಾವನ್ ಚಿನ್ನದ ಆಭರಣ ಕದ್ದು ಪರಾರಿಯಾಗಿದ್ದಾರೆ. ಗುರುವಾರ ಹಲವಾರು ಮದುವೆಗಳು ಮತ್ತು ಇತರ ಕಾರ್ಯಕ್ರಮಗಳು ನಿಗದಿಯಾಗಿದ್ದ ಕಾರಣ, ಘಟನೆ ನಡೆದಾಗ ಅಕ್ಕಪಕ್ಕದ ಮನೆಗಳಲ್ಲಿ ಜನರು ಇರಲಿಲ್ಲ. ಕೆಲಸ ಮುಗಿಸಿ ನಿವಾಸಿಗಳು ಮನೆಗೆ ಹಿಂತಿರುಗಿದಾಗ ಕಳ್ಳತನ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಬೆರಳಚ್ಚು ತಜ್ಞರು, ಶ್ವಾನದಳ ಮತ್ತು ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನ ನೂತನ ಯಕ್ಷಗಾನ ಮೇಳ, ಶ್ರೀ ಮಹಾಸತಿ ಅಮ್ಮನವರ ಕೃಪಾಪೋಷಿತ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ವತ್ತಿನಕಟ್ಟೆ ಇದರ ಪ್ರಥಮ ದೇವರ ಸೇವೆಯಾಟ ದೇವಳದ ಆವರಣದಲ್ಲಿ ಗುರುವಾರ ಜರುಗಿತು. ಹಿರಿಯ ಯಕ್ಷಗಾನ ಕಲಾವಿದ ಚಿಕ್ಕು ಪೂಜಾರಿ ಅವರು ನೂತನ ಮೇಳದ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿ, ದೇವಳದ ಭಕ್ತರ ಪ್ರೋತ್ಸಾಹ, ಆಡಳಿತ ಮಂಡಳಿಯ ಸಹಕಾರ ಹಾಗೂ ಉತ್ತಮ ಕಲಾವಿದರ ಉಪಸ್ಥಿತಿಯಲ್ಲಿ ಯಕ್ಷಗಾನ ಮೇಳ ಯಶಸ್ವಿಯಾಗಿ ಸಾಗಲು ಸಾಧ್ಯವಿದೆ. ವತ್ತಿನಕಟ್ಟೆ ಮೇಳ ಯಶಸ್ಸು ಸಾಧಿಸುವಂತಾಗಲಿ ಎಂದು ಶುಭಹಾರೈಸಿದರು. ಅರ್ಚಕರಾದ ಬಿ. ಕೃಷ್ಣಮೂರ್ತಿ ನಾವಡ ಅವರು ಪ್ರಸ್ತಾವಿಕ ಮಾತುಗಳನ್ನಾಡಿ, ವತ್ತಿನಕಟ್ಟೆ ಶ್ರೀ ಮಹಾಸತಿ ಅಮನವರು ಶಕ್ತಿಮಾತೆಯಾಗಿದ್ದು, ನಂಬಿದ ಭಕ್ತವರ್ಗವನ್ನು ಕರುಣಿಸುತ್ತಾ ಬಂದಿದ್ದಾಳೆ. ಕಳೆದ ಒಂದೂವರೆ ದಶಕದಲ್ಲಿ ದೇವಸ್ಥಾನ ವಿವಿಧ ಧಾರ್ಮಿಕ ಚಟುವಟಿಕೆಗಳ ಮೂಲಕ ಇನ್ನಷ್ಟು ಉನ್ನತಿಕಂಡಿದೆ. ನೂತನ ಯಕ್ಷಗಾನ ಮೇಳದ ಮೂಲಕ ದೇವಳದ ಐತಿಹ್ಯವನ್ನು ಸಾರುವ, ಕಲಾ ಚಟುವಟಿಕೆಗೆ ಪ್ರೋತ್ಸಾಹ ನೀಡುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಜೀವನದಲ್ಲಿ ಮರೆಯಲಾಗದ ಕ್ಷಣ ಎಂದರೆ ಅದು ನಮ್ಮ ಬಾಲ್ಯದ ಶಿಕ್ಷಣ ಪಡೆದ ದಿನಗಳು ಅದರಲ್ಲೂ ಬಹುಮುಖ್ಯವಾಗಿ ನಾವು ಕಲಿತ ಶಾಲೆ, ಗುರುಗಳ ಪಾತ್ರ ತಂದೆ – ತಾಯಿಯಷ್ಟೆ ಶ್ರೇಷ್ಠತೆಯನ್ನು ಪಡೆಯುತ್ತದೆ ಎಂದು ಯೆನೆಪೋಯ ವೈದ್ಯಕೀಯ ಕಾಲೇಜು ಯೆನೆಪೋಯ ಡೀಮ್ಡ್ ಟು ಬಿ ಯುನಿವರ್ಸಿಟಿ, ದೇರಳಕಟ್ಟೆ, ಮಂಗಳೂರು ಇದರ ಕುಲಪತಿ ಡಾ. ಕೆ. ಎಸ್. ಗಂಗಾಧರ ಸೋಮಯಾಜಿ ಹೇಳಿದರು. ಅವರು ಗುರುವಾರ ಇಲ್ಲಿನ ಪ್ರತಿಷ್ಠಿತ ವಿದ್ಯಾಸಂಸ್ಥೆ ವಿವೇಕ ವಿದ್ಯಾಸಂಸ್ಥೆ ಕೋಟ ಇದರ ವಾರ್ಷಿಕ ವಾರ್ಷಿಕೋತ್ಸವ ನಿನಾದ-2026ರ ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಮಾತನಾಡಿದರು. ನಾನು ಇಂದು ಬಹು ಎತ್ತರಕ್ಕೆ ಬೆಳೆದಿರಬಹುದು ಅದಕ್ಕೆ ನಾನು ಕಲಿತ ಈ ವಿದ್ಯಾ ಕ್ಷೇತ್ರವೇ ಕಾರಣ ಎಂದರಲ್ಲದೆ ವಿದ್ಯಾರ್ಥಿಗಳು ತಮ್ಮ ಕಾಲೇಜು ಜೀವನವನ್ನು ಮೌಲ್ಯಯುತವಾಗಿ ಉಪಯೋಗಿಸಿಕೊಂಡು ಸಾಧನೆಯ ಮಜಲುಗಳನ್ನೆರಬೇಕು,ಮೌಲ್ಯಭರಿತ ಶಿಕ್ಷಣ ಅದು ಕೋಟದ ವಿವೇಕ ವಿದ್ಯಾಸಂಸ್ಥೆಯಲ್ಲಿ ಪಡೆಯಲು ಸಾಧ್ಯ ಎಂಬುವುದಕ್ಕೆ ನಾವುಗಳೇ ಸಾಕ್ಷಿ ಎಂದರಲ್ಲದೆ ತಂದೆ ತಾಯಿ ಗುರು ಹಿರಿಯರನ್ನು ಗೌರವಿಸುವುದರ ಜೊತೆಗೆ ನಾವು ಕಲಿತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಪ್ರೌಢಶಾಲಾ ವಾರ್ಷಿಕ ಕ್ರೀಡಾಕೂಟವು ಸಂಪನ್ನಗೊಂಡಿತು. 14 ಮತ್ತು 17ರ ವಯೋಮಿತಿಯ ಬಾಲಕ ಮತ್ತು ಬಾಲಕಿಯರ ವಿಭಾಗಗಳಲ್ಲಿ ಉದ್ದಜಿಗಿತ, ಗುಂಡೆಸೆತ, 100ಮೀ, 200ಮೀ, 400ಮೀ, 800ಮೀ, 1500ಮೀ ಓಟ ಮತ್ತು ರಿಲೇ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳು ಅತ್ಯುತ್ಸಾಹದಿಂದ ಪಾಲ್ಗೊಂಡಿದ್ದರು. ಈ ಕ್ರೀಡಾಕೂಟದಲ್ಲಿ ಮುಖ್ಯಅತಿಥಿಗಳ ನೆಲೆಯಲ್ಲಿ ಉಪಸ್ಥಿತರಿದ್ದ ಶ್ರೀ ವೆಂಕಟ್ರಮಣ ಪಿಯು ಕಾಲೇಜು ಕುಂದಾಪುರದ ಪ್ರಾಂಶುಪಾಲರಾದ ಸಂದೀಪ್ ಗಾಣಿಗರು ಉದ್ಘಾಟನೆ ನಡೆಸಿ ಮಾತನಾಡಿ, ದೈಹಿಕ ಆರೋಗ್ಯಕ್ಕಾಗಿ, ಮಾನಸಿಕ ನೆಮ್ಮದಿಗಾಗಿ, ಶಿಸ್ತು, ಸಂಯಮ, ಸಮಯಪ್ರಜ್ಞೆ ಮತ್ತು ಒಗ್ಗಟ್ಟುಗಳಿಗಾಗಿ ಕ್ರೀಡೆ ಅತ್ಯವಶ್ಯ. ಭಾಗವಹಿಸುವುದೇ ದೊಡ್ಡ ಗೆಲುವು. ಗೆದ್ದಾಗ ಸಿಗೋ ಸಂತೋಷ ಅನುಭವಿಸಬೇಕು. ಅಹಂಕಾರ ಪಡಬಾರದು, ಸೋತಾಗ ಮುಂದಿನ ಅವಕಾಶಕ್ಕಾಗಿ ಕಾಯಬೇಕು. ಮಿಲ್ಕಾ ಸಿಂಗ್ ಇದಕ್ಕೆ ಅತ್ಯುತ್ತಮ ಉದಾಹರಣೆ ಎನ್ನುತ್ತಾ ಮಕ್ಕಳನ್ನು ಹುರಿದುಂಬಿಸಿದರು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶ್ರೀ ಸಿದ್ಧಿವಿನಾಯಕ ವಸತಿಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಕ್ರೀಡೆಗಳಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ರಕ್ತದಾನವು ಮತ್ತೊಂದು ಜೀವಕ್ಕೆ ಮರುಜೀವ ನೀಡುವ ಮಹತ್ವದ ಮಾನವೀಯ ಸೇವೆಯಾಗಿದ್ದು, ಆರೋಗ್ಯವಂತ ಪ್ರತಿಯೊಬ್ಬರೂ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಸಮಾಜದ ಆರೋಗ್ಯ ರಕ್ಷಣೆಯಲ್ಲಿ ಕೈಜೋಡಿಸಬೇಕು ಎಂದು ಆಳ್ವಾಸ್ ವೈದ್ಯಕೀಯ ಕಾಲೇಜಿನ ಡೀನ್ ಡಾ. ಮಹಾಬಲ ಶೆಟ್ಟಿ ನುಡಿದರು. ಅವರು ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆ ಘಟಕ, ಆಳ್ವಾಸ್ ಹೆಲ್ತ್ ಸೆಂಟರ್ ಹಾಗೂ ಆಳ್ವಾಸ್ ರೋಟರಿ ಬ್ಲಡ್ ಸೆಂಟರ್ ಸಹಯೋಗದಲ್ಲಿ ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆಯ ಅಂಗವಾಗಿ ಬುಧವಾರ ಮೂಡುಬಿದಿರೆಯ ಆಳ್ವಾಸ್ ಕಾಲೇಜ್ ಆಫ್ ನರ್ಸಿಂಗ್ನಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರ ಹಾಗೂ ರಕ್ತದಾನಿಗಳ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಕ್ತದಾನವು ಅತ್ಯಂತ ಶ್ರೇಷ್ಠ ಮಾನವೀಯ ಸೇವೆಯಾಗಿದ್ದು, ಒಬ್ಬ ವ್ಯಕ್ತಿಯ ರಕ್ತದಾನದಿಂದ ಮತ್ತೊಂದು ಜೀವವನ್ನು ಉಳಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಆರೋಗ್ಯವಂತರು ರಕ್ತದಾನಕ್ಕೆ ಮುಂದಾಗಬೇಕು ಎಂದರು. ನಿರಂತರ ರಕ್ತದಾನದ ಮೂಲಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಗ್ರಾಮೀಣ ಪ್ರದೇಶದಲ್ಲಿ ವೇಗದ ಇಂಟರ್ನೆಟ್ ವ್ಯವಸ್ಥೆ ಕಲ್ಪಿಸುವ ಭಾರತ್ ನೆಟ್ ಹಂತ-3 ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವುದರೊಂದಿಗೆ ಜನರಿಗೆ ಗುಣಮಟ್ಟದೊಂದಿಗೆ ವೇಗದ ಇಂಟರ್ನೆಟ್ ಸೌಲಭ್ಯ ಕಲ್ಪಿಸಲು ಮುತುವರ್ಜಿಯಿಂದ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಭಾರತ್ ನೆಟ್ ಹಂತ-3 ರ ಅನುಷ್ಠಾನ ಕುರಿತ ಪುನರ್ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮ ಪಂಚಾಯತ್ ಕಛೇರಿಗಳು, ಸರಕಾರಿ ಶಾಲೆಗಳು, ಅಂಗನವಾಡಿಗಳು ಹಾಗೂ ಸಾರ್ವಜನಿಕ ಸೇವಾ ಕೇಂದ್ರಗಳು ವಿಶ್ವಾಸಾರ್ಹ ಡಿಜಿಟಲ್ ಸಂಪರ್ಕ ಪಡೆಯುವುದು ಯೋಜನೆಯ ಉದ್ದೇಶವಾಗಿದೆ. ಈ ಯೋಜನೆಯ ಅನುಷ್ಠಾನದಿಂದ ಸರಕಾರದ ಸೇವೆಗಳು ಗ್ರಾಮ ಮಟ್ಟದಲ್ಲಿ ಡಿಜಿಟಲ್ ರೂಪದಲ್ಲಿ ಲಭ್ಯವಾಗಲಿದ್ದು, ಅಧಿಕಾರಿಗಳು ಇದಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದರು. ಭಾರತ್ ನೆಟ್ ಮೊದಲ ಮತ್ತು ಎರಡನೇ ಹಂತದಲ್ಲಿ ಸಂಪರ್ಕ ಕಲ್ಪಿಸಲಾಗಿತ್ತು.…
