Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೃಷಿ ಉತ್ಪಾದನೆ ಹೆಚ್ಚಿಸುವ ಕಾರ್ಯಕ್ರಮಗಳು ಆಗಾಗ ನಡೆಯಬೇಕು ಈ ಮೂಲಕ ಕೃಷಿ ಆದಾಯ ದ್ವಿಗುಣಗೊಳ್ಖಬೇಕು ಎಂದು ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಅಬಿದ್ ಗುದ್ಯಾಳ್ ನುಡಿದರು. ಅವರು ಭಾನುವಾರ ಕೋಟದ ಗಾಂಧಿ ಮೈದಾನದಲ್ಲಿ ಸಂಸ್ಕ್ರತಿ ಸಂಭ್ರಮ ಟ್ರಸ್ಟ್ ಕೋಟ ಕುಂದಾಪುರ, ವಿಧಾತ್ರಿ ರೈತ ಉತ್ಪಾದಕ. ಸಂಸ್ಥೆ ಕೋಟ, ಗೀತಾನಂದ ಫೌಂಡೇಶನ್ ಮಣೂರು, ಕೋಟ ಸಹಕಾರಿ ವ್ಯವಸಾಯಕ ಸಂಘ ಇವರುಗಳ ಜಂಟಿ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆದ ಹಲಸು ಮತ್ತು ಮಾವು ಕೃಷಿ ಮೇಳದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಕೃಷಿ ಉತ್ಸವಗಳು ಕೃಷಿಗೆ ಪೂರಕ ವಾತಾವರಣವನ್ನು ಕಲ್ಪಿಸುತ್ತದೆ ಈ ದಿಸೆಯಲ್ಲಿ ಇಂತಹ ಕಾರ್ಯಕ್ರಮಗಳು ಎಲ್ಲಾ ಭಾಗದಲ್ಲಿ ಹೆಚ್ಚು ನಡೆಯಬೇಕು ಎಂದರು. ಇದೇ ವೇಳೆ ಸ್ಥಳೀಯ ರೈತ ಸಾಧಕರಾದ ಒಳಮಾಡು ಆನಂದ ಮರಕಾಲ, ಚಂದ್ರಶೇಖರ್ ಗಾಣಿಗ, ನಿಶಾ ದೇವಾಡಿಗ ಬೇಳೂರು ಅವರುಗಳನ್ನು ಗೌರವಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಸಂಸ್ಕ್ರತಿ ಸಂಭ್ರಮ ಟ್ರಸ್ಟ್ ನ ಶ್ರೀಧರ ಮರವಂತೆ ವಹಿಸಿದ್ದರು. ಮುಖ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನ ವಾರ್ಷಿಕೋತ್ಸವದ ಕಾರ್ಯಕ್ರಮವು ಕಾಲೇಜಿನ ವೀರರಾಜೇಂದ್ರ ಹೆಗ್ಡೆ ಸಭಾಂಗಣದಲ್ಲಿ ಜರುಗಿತು. ಕಾಲೇಜಿನ ಸಂಚಾಲಕರಾದ ಅಪ್ಪಣ್ಣ ಹೆಗ್ಡೆ, ಪ್ರಾಸ್ತಾವಿಕ ಮಾತನಾಡಿ, ಮಕ್ಕಳು ಉತ್ತಮವಾದ ಹವ್ಯಾಸಗಳನ್ನು ಬೆಳೆಸುವ ಮೂಲಕ ಮಕ್ಕಳಲ್ಲಿ ಮಾನಸಿಕ ದೃಢತೆಯನ್ನು ಬೆಳೆಸಬೇಕು ಎಂದು ಹೇಳಿದರು. ಮಾನ್ಯ ಅತಿಥಿಗಳಾಗಿ ಆಗಮಿಸಿದ ವಿಶ್ರಾಂತ ಪ್ರಾಂಶುಪಾಲರಾದ ಹಾಗೂ ಮಾಹೆಯ ಆಡಳಿತಾಧಿಕಾರಿಯಾದ ಡಾ. ವಿ. ಜಗದೀಶ ಶೆಟ್ಟಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಕ್ಷೇತ್ರಗಳಲ್ಲಿ ಸಾಧನೆ ಮಾಡುವುದರ ಮೂಲಕ ಕಾಲೇಜಿನ ಕೀರ್ತಿ ಹೆಚ್ಚಿಸಬೇಕು. ಶಿಕ್ಷಣ ಮಕ್ಕಳ ಪರಿಪೂರ್ಣತೆ, ಆತ್ಮ ವಿಶ್ವಾಸ, ಸ್ವತಂತ್ರವಾದ ತಿಳುವಳಿಕೆ, ಸೇವಾ ಮನೋಭಾವ ದೇಶಾಭಿಮಾನ, ಬೆಳೆಸುವಂತೆ ಮಾಡಬೇಕು ಹಾಗೂ ಶಿಕ್ಷಕರು ಮಕ್ಕಳಲ್ಲಿ ಜ್ಞಾನ ಹೆಚ್ಚಿಸುವ, ಆತ್ಮ ವಿಶ್ವಾಸ ತುಂಬುವ ಕೆಲಸ ಮಾಡಬೇಕು ಎಂದರು. ಕಾಲೇಜಿನ ಪ್ರಾಕ್ತಾನ ವಿದ್ಯಾರ್ಥಿ ಮತ್ತು ಎಕ್ಸಪರ್ಟ್ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಕರುಣಾಕರ ಬಳ್ಕೂರು ಸ್ವಸ್ತಿ ವಾಚನ ಗೈದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ಕಾಲೇಜಿನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸ್ಪಂದನ ಕೇಂದ್ರದಲ್ಲಿ ಗೌರವಧನ ಆಧಾರದ ಮೇಲೆ ಯುವ ಪರಿವರ್ತಕರ ಹುದ್ದೆಯ ಕರ್ತವ್ಯ ನಿರ್ವಹಿಸಲು ಯಾವುದೇ ಪದವಿ ಅಥವಾ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ 21 ರಿಂದ 35 ವರ್ಷದೊಳಗಿನ ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕನ್ನಡ ಸ್ಪಷ್ಠವಾಗಿ ಮಾತನಾಡಬಲ್ಲ, ಸಂವಹನ ಕಲೆ ಕೌಶಲ್ಯ ಹೊಂದಿರುವ ಹಾಗೂ ಸಮುದಾಯದಲ್ಲಿ ಕೆಲಸ ಮಾಡಿದವರಿಗೆ ಆದ್ಯತೆ ನೀಡಲಾಗುವುದು. ಸ್ವ-ವಿವರ ಹಾಗೂ ಮೂಲ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ಮೇ 15 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಜ್ಜರಕಾಡು, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ರಸ್ತೆ ದಾಟುಲು ನಿಂತಿದ್ದ ವ್ಯಕ್ತಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡ ಘಟನೆ ಉಪ್ಪುಂದ ಶಾಲೆಬಾಗಿಲಿನಲ್ಲಿ ಸಂಭವಿಸಿದೆ. ಜಯಶೀಲ ಗಾಯಗೊಂಡ ವ್ಯಕ್ತಿ. ಉಪ್ಪುಂದ ಕಡೆಯಿಂದ ಬೈಂದೂರು ಕಡೆಗೆ ಬರುತ್ತಿದ್ದ ಕಾರು ರಸ್ತೆಯ ಬದಿಯಲ್ಲಿ ರಸ್ತೆ ದಾಟಲು ನಿಂತಿದ್ದ ಜಯಶೀಲ ಅವರಿಗೆ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದು ಗಂಭೀರ ‌ ಗಾಯಗೊಂಡಿದ್ದು ಮಣಿಪಾಲ ದಾಖಲಿಸಲಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ವಿವಿಧ ಕಾರಣಗಳಿಂದ ತೆರವಾಗಿರುವ ಜಿಲ್ಲೆಯ ಬ್ರಹ್ಮಾವರ ತಾಲೂಕಿನ 11 ನೇ ಆವರ್ಸೆ ಗ್ರಾಮ ಪಂಚಾಯತ್‌ನ ಮುಂದಿನ ಅವಧಿಗೆ ಅಧ್ಯಕ್ಷ ಸ್ಥಾನವನ್ನು (ಮೀಸಲಾತಿ-ಹಿಂದುಳಿದ ವರ್ಗ ಅ) ಆಯ್ಕೆ ಮಾಡುವ ಸಲುವಾಗಿ ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಂಜುಂ ಅವರನ್ನು ಹಾಗೂ ಬಿಲ್ಲಾಡಿ ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷ ಸ್ಥಾನವನ್ನು (ಮೀಸಲಾತಿ-ಸಾಮಾನ್ಯ) ಆಯ್ಕೆ ಮಾಡುವ ಸಲುವಾಗಿ ಕೋಟ ವಲಯ ಕೃಷಿ ಅಧಿಕಾರಿ ಸುಪ್ರಭ ಅವರನ್ನು ಗೊತ್ತು ಪಡಿಸಿದ ಅಧಿಕಾರಿಯನ್ನಾಗಿ ನೇಮಿಸಲಾಗಿದೆ. ಸದ್ರಿರವರು ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 45 ಹಾಗೂ (ಗ್ರಾಮ ಪಂಚಾಯತ್ ಅಧ್ಯಕ್ಷ ಚುನಾವಣೆ) ನಿಯಮಗಳು 1995 ರ ನಿಯಮ 4 ರಿಂದ 11 ರವರೆಗಿನ ನಿಯಮದಂತೆ ಚುನಾವಣೆ ನಡೆಸಿ, ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನವನ್ನು ಆಯ್ಕೆ ಮಾಡುವಂತೆ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕುಂದಾಪ್ರ ಕನ್ನಡದ ನಿಜವಾದ ಸೊಗಡು ಕಾಣ ಸಿಗುವುದು ಗ್ರಾಮಾಂತರ ಭಾಗದಲ್ಲಿ. ಗ್ರಾಮೀಣ ಭಾಗದ ನಟ್ಟಿ ನೆಡುವ ಹೆಂಗಸರು, ಉಳುಮೆ ಮಾಡುವ ಗಂಡಸರು, ಭತ್ತ ತುಳಿಯುವವರು ಹೀಗೆ ಹತ್ತಾರು ವಿಭಾಗಗಳಿಂದ ಕುಂದಾಪ್ರ ಕನ್ನಡದ ಸೊಗಡು ಹರಿದು ಬಂದಿದೆ. ಅವೆಲ್ಲದರ ದಾಖಲೀಕರಣ ಅಗತ್ಯ ಎಂದು ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಅಧ್ಯಕ್ಷ ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ತಿಳಿಸಿದರು. ಅವರು ಭಾನುವಾರ ಕೋಟ ಡಾ. ಶಿವರಾಮ ಕಾರಂತ ಪ್ರತಿಷ್ಠಾನ, ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ, ಕೋಟತಟ್ಟು ಗ್ರಾ.ಪಂ., ಉಸಿರು ಸಂಸ್ಥೆ ಕೋಟ, ಗೀತಾನಂದ ಫೌಂಡೇಶನ್, ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಆಶ್ರಯದಲ್ಲಿ ಕೋಟದ ಕಾರಂತ ಥೀಮ್ ಪಾರ್ಕನ್‌ಲ್ಲಿ ನಡೆದ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ಕಾಂಬ ಉದ್ಘಾಟನೆ ಮಾಡಿ ಮಾತನಾಡಿದರು. ಭಾಷಿ ಬೆಳ್ಸಕರೆ ಮೊದಲ್ ಮಕ್ಕಳಿಗ್ ಹೇಳಿ ಕೊಡ್ಕ್. ಸರಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕುಂದಾಪ್ರ ಭಾಷಿ ಬಗ್ಗೆ ಕೆಲಸ ಮಾಡಬೇಕು ಎಂದರು. ಸಮ್ಮೇಳನದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: 2024-25ನೇ ಸಾಲಿನಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್‌ ಪಡೆದ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮನಾಲಿ ಅವರನ್ನು ಗಂಗೊಳ್ಳಿಯ ಜಿ.ಎಸ್.ವಿ.ಎಸ್. ಅಸೋಸಿಯೇಶನ್ ಪರವಾಗಿ ಅವರ ಸ್ವಗೃಹದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ, ಕಾರ್ಯದರ್ಶಿ ಎಚ್. ಗಣೇಶ ಕಾಮತ್, ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳ ಸಂಚಾಲಕ ಎನ್. ಸದಾಶಿವ ನಾಯಕ್, ಶಾಲೆಯ ಆಡಳಿತ ಮಂಡಳಿ ಸದಸ್ಯರಾದ ಜಿ. ಗೋವಿಂದ್ರಾಯ ಆಚಾರ್ಯ, ಕೆ. ರಾಮನಾಥ ನಾಯಕ್, ಎನ್. ಅಶ್ವಿನ್ ನಾಯಕ್, ಎಂ. ನಾಗೇಂದ್ರ ಪೈ, ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಮುಖೋಪಾಧ್ಯಾಯ ರಾಘವೇಂದ್ರ ಶೇರುಗಾರ್, ಸಹಶಿಕ್ಷಕಿ ಸುಜಾತ, ಮಂಜುನಾಥ ಖಾರ್ವಿ, ಮಂಜು ಟೈಲರ್ ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ವತಿಯಿಂದ ನೀಟ್ – ಯು.ಜಿ 2025 ಪರೀಕ್ಷೆಯು ಮೇ 4 ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಒಂದು ಪಾಳಿಯಲ್ಲಿ ಜಿಲ್ಲೆಯ ಒಟ್ಟು 8 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಜಿಲ್ಲೆಯ ಒಟ್ಟು 2,947 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳು ಪರೀಕ್ಷಾ ದಿನದಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30 ರ ಒಳಗಾಗಿ ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಹಾಜರಿರಬೇಕು. ಮೊಬೈಲ್, ಸೆಲ್ಯೂಲಾರ್ ಫೋನ್, ಟ್ಯಾಬ್ಲೆಟ್, ಪೆನ್‌ಡ್ರೈವ್, ಬ್ಲೂಟೂತ್ ಡಿವೈಸ್, ಸ್ಮಾರ್ಟ್ ವಾಚ್, ಕ್ಯಾಲ್ಕುಲೇಟರ್ ಮತ್ತು ಇತರೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳು ಅಥವಾ ಲಾಗ್ ಟೇಬಲ್, ಕೈಚೀಲ, ಪರ್ಸ್, ನೋಟುಗಳು, ಚಾರ್ಟ್, ಬಿಡಿ ಹಾಳೆಗಳು ಅಥವಾ ರೆಕಾರ್ಡಿಂಗ್ ವಸ್ತುಗಳನ್ನೂ ಸೇರಿದಂತೆ ಇನ್ನಿತರ ಯಾವುದೇ ರೀತಿಯ ಉಪಕರಣಗಳನ್ನು ಪರೀಕ್ಷಾ ಕೇಂದ್ರದೊಳಗೆ ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ. ತಿನ್ನಬಹುದಾದ ಪದಾರ್ಥಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವುದನ್ನು ಹಾಗೂ ತಿನ್ನುವುದನ್ನು ನಿಷೇಧಿಸಲಾಗಿದೆ. ಅಭ್ಯರ್ಥಿಗಳಿಗೆ ಕುಡಿಯುವ ನೀರಿನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕಾರ್ಕಳದ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಪ್ರಸಕ್ತ ಸಾಲಿನ ಡಿಪ್ಲೊಮಾ ಇಂಜಿನಿಯರಿಂಗ್ ಕೋರ್ಸುಗಳಿಗೆ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ಉತ್ತೀರ್ಣ ಹಾಗೂ ಪಿಯುಸಿ ಉತ್ತೀರ್ಣ/ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ 3 ವರ್ಷಗಳ ಅವಧಿಯ ಮೆಕ್ಯಾನಿಕಲ್ ಇಂಜಿನಿಯರಿಂಗ್, ಸಿವಿಲ್ ಇಂಜಿನಿಯರಿಂಗ್, ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಗ್ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ಕೋರ್ಸುಗಳು ಲಭ್ಯವಿದ್ದು, ಮೆರಿಟ್ ಆಧಾರಿತ ಮೊದಲು ಬಂದವರಿಗೆ ಆದ್ಯತೆ ನೆಲೆಯಲ್ಲಿ ಸೀಟು ಹಂಚಿಕೆ ಮಾಡಲಾಗುವುದು. ಅತೀ ಕಡಿಮೆ ಸರ್ಕಾರಿ ಶುಲ್ಕ, ವಿದ್ಯಾರ್ಥಿ ವೇತನ ಸೌಲಭ್ಯ, ನುರಿತ, ಅನುಭವಿ ಬೋಧಕ ವೃಂದ, ಸುಸಜ್ಜಿತ ಕಟ್ಟಡಗಳ ಸಮುಚ್ಚಯ, ಪ್ರಯೋಗಾಲಯಗಳು, ಉತ್ತಮ ಕಲಿಕಾ ವಾತಾವರಣವಿದ್ದು ಡಿಪ್ಲೊಮಾ ಪಾಸಾದ ವಿದ್ಯಾರ್ಥಿಗಳಿಗೆ ಸರ್ಕಾರಿ ಇಲಾಖೆಗಳಲ್ಲಿ ಜೆಇ/ಜೆಟಿಓ ಹುದ್ದೆಗಳು ಸೇರಿದಂತೆ ಅರೆ-ಸರಕಾರಿ ಹಾಗೂ ಖಾಸಗಿ ಉದ್ದಿಮೆಗಳಲ್ಲಿ ವಿಫುಲ ಉದ್ಯೋಗಾವಕಾಶಗಳಿವೆ. ದಾಖಲಾತಿ ಕುರಿತ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರಾದ ಕುಮಾರ ಕೆ.ಎಂ. ಮೊ.ನಂ:9731575859, ಪ್ರವೇಶ ನಿರ್ವಾಹಕ ಗುಣಪಾಲ ಜೈನ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೃಷಿ ಪದ್ದತಿಯಲ್ಲಿ ಕಾಲಕ್ಕೆ ಅನುಗುಣವಾಗಿ ಬದಲಾವಣೆಗಳು ಅವಶ್ಯ ಈ ನಿಟ್ಟಿನಲ್ಲಿ ಯಾಂತ್ರಿಕತೆಯ ಮೂಲಕ ಸಮಗ್ರ ಕೃಷಿ ಪದ್ದತಿಯನ್ನು ರೂಪಿಸಿಕೊಳ್ಳಿ ಎಂದು ಉಡುಪಿ ಜಿಲ್ಲಾ ಉಪ ಕೃಷಿ ನಿರ್ದೇಶಕ ಚಂದ್ರಶೇಖರ್ ನಾಯ್ಕ್ ಹೇಳಿದರು. ಅವರು ಕೋಟದ ಗಾಂಧಿ ಮೈದಾನದಲ್ಲಿ ಸಂಸ್ಕ್ರತಿ  ಸಂಭ್ರಮ ಟ್ರಸ್ಟ್ ಕೋಟ ಕುಂದಾಪುರ, ವಿಧಾತ್ರಿ ರೈತ ಉತ್ಪಾದಕ ಸಂಸ್ಥೆ ಕೋಟ,ಗೀತಾನಂದ ಫೌಂಡೇಶನ್ ಮಣೂರು,ಕೋಟ ಸಹಕಾರಿ ವ್ಯವಸಾಯಕ ಸಂಘ ಇವರುಗಳ ಸಹಭಾಗಿತ್ವದಡಿ ಹಲಸು ಮಾವು ಹಾಗೂ ಕೃಷಿ ಮೇಳ 2025 ಕಾರ್ಯಕ್ರಮದ ಎರಡನೇ ದಿನದ ಕಾರ್ಯಕ್ರಮದಲ್ಲಿ ವಿಧಾತ್ರಿ ಸಂಸ್ಥೆಯ ಪ್ಲಾಟ್ ಫಾಮ್೯ ಬಿಡುಗಡೆ, ಟ್ರೇಡ್ ಮಾಕ್೯ ಅನಾವರಣ ಮತ್ತು ರೈತ ಏಕತಾ ಕೇಂದ್ರ ಉದ್ಘಾಟನೆಗೊಳಿಸಿ ಮಾತನಾಡಿದರು. ರೈತರ ಆದಾಯವನ್ನು ದ್ವಿಗುಣಗೊಳಿಸುವ ಜತೆಗೆ ಉತ್ಪಾದನಾ ವೆಚ್ಚ ಕಡಿಮೆಗೊಳಿಸುವ ಯೋಜನೆ ರೂಪಿಸಬೇಕು ಈ ಮೂಲಕ ಕೃಷಿ ಕೃಷಿ ಕ್ಷೇತ್ರದಲ್ಲಿ ಆಮೂಲಾಗ್ರ ಸುಧಾರಣೆ ತರುವ ಅವಶ್ಯಕತೆ ಸಭೆಯಲ್ಲಿ ಒತ್ತಿ ಹೇಳಿದರು. ಕಾರ್ಯಕ್ರಮದಲ್ಲಿ ವಿಧಾತ್ರಿ ಸಂಸ್ಥೆಗೆ ಸಂಬಂಧಿಸಿದ ಯೂಟ್ಯೂಬ್ ಹಾಗೂ ಇನ್ಸ್ತಗ್ರಮ್,ಇ…

Read More