Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಅಧಿನಿಯಮದಡಿಯಲ್ಲಿ ದಾಖಲಾದ ಪ್ರಮುಖ ಪ್ರಕರಣಗಳಿಗೆ (ಕೊಲೆ, ಅತ್ಯಾಚಾರ, ಪೋಕ್ಸೋ, ಕೊಲೆ ಪ್ರಯತ್ನ, ತೀವ್ರ ಗಾಯ ಹಾಗೂ 7 ವರ್ಷಗಳಿಗೂ ಮೇಲ್ಪಟ್ಟು ಶಿಕ್ಷೆ ಇರುವ ಪ್ರಕರಣಗಳು) ಸಂಬಂಧಿಸಿದಂತೆ ಪ.ಜಾತಿ/ ಪ.ಪಂಗಡಗಳ (ದೌರ್ಜನ್ಯ ತಡೆ) ನಿಯಮಗಳು – 1995 ರಲ್ಲಿನ ನಿಯಮ-4ರ ಅನ್ವಯ ಘನ ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಲು ನುರಿತ ಹಾಗೂ ಅನುಭವಿ ನ್ಯಾಯವಾದಿಗಳನ್ನು ವಿಶೇಷ ಸಾರ್ವಜನಿಕ ಅಭಿಯೋಜಕರನ್ನಾಗಿ ನಿಯಮಾನುಸಾರ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವ-ವಿವರವುಳ್ಳ ಅರ್ಜಿ ಹಾಗೂ ಇತರೆ ವಿವರಗಳನ್ನೊಳಗೊಂಡ ದಾಖಲಾತಿಗಳೊಂದಿಗೆ ಸೆಪ್ಟೆಂಬರ್ 7ರ ಒಳಗಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, 2ನೇ ಮಹಡಿ, ಬಿ ಬ್ಲಾಕ್, ರಜತಾದ್ರಿ, ಮಣಿಪಾಲ ಉಡುಪಿ ಇವರಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಸಲ್ಲಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ. 

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸೈಂಟ್ ಥಾಮಸ್ ಶಾಲೆಯ ಸ್ಕೌಟ್ಸ್ ಆಂಡ್ ಗೈಡ್ಸ್ ವಿದ್ಯಾರ್ಥಿಗಳು ತಾಲೂಕು ಮಟ್ಟದ ದೇಶಭಕ್ತಿಗೀತೆ ಸಮೂಹ ಗಾಯನ ಸ್ಪರ್ಧೆಯಲ್ಲಿ ಪ್ರಥಮ ಮತ್ತು ತೃತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗುವ ಮೂಲಕ ಶಾಲೆಗೆ ಹೆಮ್ಮೆ ತಂದಿದ್ದಾರೆ. ಶಾಲೆಯ ಸ್ಕೌಟ್ಸ್ ತಂಡದ ಅಹಮದ್ ರುಹೈಲ್, ಆದಿಶೇಷ, ಶೋನ್ ರೋಡ್ರಿಗಸ್, ಆರ್ಯನ್ ಪೂಜಾರಿ, ಪ್ರಯಾಗ್ ಎಸ್., ಸಾದ್ವಿನ್ ಎಸ್., ಲಕ್ಷ್ಮೀಶ ಬಿ. ಹಾಗೂ ಉತ್ಕರ್ಷ್ ಅವರು ದೇಶಭಕ್ತಿಯ ಭಾವನೆಗಳನ್ನು ಮೂಡಿಸುವ ಗೀತೆಗಳನ್ನು ಅತ್ಯಂತ ಸುಂದರವಾಗಿ ಹಾಗೂ ಲಯಬದ್ಧವಾಗಿ ಪ್ರಸ್ತುತಪಡಿಸಿದರು. ಇವರ ಮನೋಜ್ಞ ಗಾಯನಕ್ಕೆ ತೀರ್ಪುಗಾರರು ಮೆಚ್ಚುಗೆ ವ್ಯಕ್ತಪಡಿಸಿ ಪ್ರಥಮ ಸ್ಥಾನವನ್ನು ಘೋಷಿಸಿದರು. ತಾಲೂಕು ಮಟ್ಟದಲ್ಲಿ ದೊರೆತ ಈ ಯಶಸ್ಸಿನೊಂದಿಗೆ ವಿದ್ಯಾರ್ಥಿಗಳು ಇದೀಗ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶವನ್ನು ಪಡೆದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆ ಶಾಲೆಯ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಿದೆ. ವಿದ್ಯಾರ್ಥಿಗಳ ಪ್ರತಿಭೆ, ಶಿಸ್ತು, ಪರಿಶ್ರಮ ಹಾಗೂ ತಂಡದ ಮನೋಭಾವವನ್ನು ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಎಲ್ಲಾ ಬೆಳೆಗಳಿಗೆ ಬೆಲೆ ಏರಿಕೆ ಆಗುತ್ತದೆ ಆದರೆ ಭತ್ತದ ಬೆಳೆ ಅಥವಾ ಈ ಕರಾವಳಿಯಲ್ಲಿ ಬೆಳೆಯುವ ಶೇಂಗಾ ಬೆಳೆಗೆ ಬೆಲೆ ಇಲ್ಲದಂತೆ ಖರೀದಿ ನಡೆಯುತ್ತದೆ. ರಾತ್ರಿ ಬೆಳಗಾಗುವುದರೊಳಗೆ ಬೆಲೆ ಪಾತಾಳಕ್ಕೆ ಕುಸಿಯಲ್ಪಡುತ್ತದೆ. ಈ ಬಗ್ಗೆ  ಆಕ್ರೋಶ ವ್ಯಕ್ತಪಡಿಸಿ ಕೋಟ ರೈತಧ್ವನಿ ಸಂಘದ ಅಧ್ಯಕ್ಷ ಜಯರಾಮ ಶೆಟ್ಟಿ ಭತ್ತದ ಬೆಳೆಗೆ ಈಗಲೇ ಬೆಂಬಲ ಬೆಲೆ ನಿಗದಿಪಡಿಸಿ, ರೈತ ಕಷ್ಟಪಟ್ಟು ಬೆಳೆದ ಬೆಳೆಗೆ ನ್ಯಾಯ ನೀಡುವ ದರ ನಿಗದಿಪಡಿಸಿ ಎಂದು ಆಗ್ರಹಿಸಿದರು ಅವರು ಬುಧವಾರ ಗುಂಡ್ಮಿ ಪ್ರಗತಿಪರ ಕೃಷಿಕ ಶೇಖರ್ ಪೂಜಾರಿ ಇವರ ಮನೆಗಯಂಗಳದಿ ಕೋಟದ ಪಂಚವರ್ಣ ಯುವಕ ಮಂಡಲ ಪವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇದರ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಗೆಳೆಯರ ಬಳಗ ಕಾರ್ಕಡ, ಸ್ನೇಹಕೂಟ ಮಣೂರು, ರೈತಧ್ವನಿ ಸಂಘ ಕೋಟ,ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಇವರ ಸಹಯೋಗದೊಂದಿಗೆ ರೋಟರಿ ಕ್ಲಬ್ ಕೋಟ ಬ್ರಿಗೇಡ್ ಸಂಯೋಜನೆಯೊಂದಿಗೆ 56ನೇ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದಲ್ಲಿ ಮಾತನಾಡಿದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತೆಕ್ಕಟ್ಟೆ ವಿಶ್ವ ವಿನಾಯಕ ಸಿ.ಬಿ.ಎಸ್.ಇ. ಆಂಗ್ಲ ಮಾಧ್ಯಮ ಶಾಲೆ ಹಾಗೂ ಪಿಯು ಕಾಲೇಜಿನಲ್ಲಿ ಓಣಂ ಹಬ್ಬವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಶಾಲಾ ಹಿರಿಯ ಶಿಕ್ಷಕಿ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಸಂಯೋಜಕಿ ವಿಲಾಸಿನಿ ಶೆಟ್ಟಿ ಉದ್ಘಾಟಿಸಿದರು. ಶಿಕ್ಷಕರು ಸಾಂಪ್ರದಾಯಿಕ ಉಡುಪಿನಲ್ಲಿ ಭಾಗವಹಿಸಿ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದರು. ಕಾರ್ಯಕ್ರಮದ ಅಂಗವಾಗಿ ಸುಂದರವಾದ ಹೂವಿನ ರಂಗೋಲಿ ರಚಿಸಲಾಯಿತು. ವಿದ್ಯಾರ್ಥಿಗಳಿಗೆ ಓಣಂ ಹಬ್ಬದ ಮಹತ್ವ ಹಾಗೂ ಕೇರಳದ ಸಂಸ್ಕೃತಿ ಮತ್ತು ಪರಂಪರೆಯ ಕುರಿತು ಮಾಹಿತಿ ನೀಡುವುದರ ಜೊತೆಗೆ ವಿವಿಧ ಸಂಸ್ಕೃತಿಗಳ ಬಗ್ಗೆ ಗೌರವ ಮತ್ತು ಅರಿವು ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರು ಸಂದೀಪ್ ಪುತ್ರನ್, ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಶಿಕ್ಷಕೇತರ ವರ್ಗದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ಜಿಲ್ಲೆಯ ಕರಾವಳಿ, ಪ್ರಕೃತಿ ಹಾಗೂ ಜಲ ಪ್ರವಾಸೋದ್ಯಮದ ಸಾಮರ್ಥ್ಯವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು, ಧಾರ್ಮಿಕ ಪ್ರವಾಸೋದ್ಯಮದ ಜತೆಗೆ ಜಿಲ್ಲೆಯ ಇತರೆ ಪ್ರವಾಸಿ ತಾಣಗಳನ್ನೂ ಅಭಿವೃದ್ಧಿಪಡಿಸುವಂತೆ ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ. ರಾಮ್‌ ಪ್ರಸಾತ್‌ ಮನೋಹರ್‌, ಐಎಎಸ್‌ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್‌ ಅವರ ನಿರ್ದೇಶನದಂತೆ ಅಧಿಕಾರಿಗಳ ತಂಡದೊಂದಿಗೆ ಉಡುಪಿ ಜಿಲ್ಲೆಯ ಪ್ರಮುಖ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿ ಹಾಗೂ ಮೂಲಸೌಕರ್ಯ ಕಾಮಗಾರಿಗಳನ್ನು ಪರಿಶೀಲಿಸಿದ ಅವರು, ಪ್ರವಾಸಿಗರು ಜಿಲ್ಲೆಯಲ್ಲಿ ಹೆಚ್ಚಿನ ದಿನಗಳ ಕಾಲ ತಂಗುವಂತೆ ಹೊಸ ಪ್ರವಾಸಿ ಆಕರ್ಷಣೆಗಳು ಮತ್ತು ಪೂರಕ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವ ಅಗತ್ಯವನ್ನು ಒತ್ತಿ ಹೇಳಿದರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಸೇರಿದಂತೆ ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೆ ಆಗಮಿಸುವ ಲಕ್ಷಾಂತರ ಭಕ್ತರು ಹಾಗೂ ಪ್ರವಾಸಿಗರನ್ನು ಜಿಲ್ಲೆಯ ಕರಾವಳಿ ಮತ್ತು ನೈಸರ್ಗಿಕ ತಾಣಗಳತ್ತ ಸೆಳೆಯುವ ರೀತಿಯಲ್ಲಿ ಯೋಜನೆ ರೂಪಿಸುವಂತೆ ಸೂಚಿಸಿದರು. ತ್ರಾಸಿ–ಮರವಂತೆ ಅಭಿವೃದ್ಧಿಗೆ ವೇಗ:ತ್ರಾಸಿ–ಮರವಂತೆ ಬೀಚ್‌ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ವಕ್ವಾಡಿಯ ಗುರುಕುಲ ವಿದ್ಯಾ ಸಂಸ್ಥೆಯಲ್ಲಿ ಶಾಲಾ ಕಾಲೇಜಿನ ವಿದ್ಯಾರ್ಥಿನಿಯರಿಗೋಸ್ಕರ ಯುವ ಮನಸ್ಸು ಮತ್ತು ಡಿಜಿಟಲ್ ಪ್ರಪಂಚ ಎಂಬ ವಿಶೇಷ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಉಡುಪಿ ಎವಿ ಬಾಳಿಗಾ ಮೆಮೋರಿಯಲ್ ಆಸ್ಪತ್ರೆಯ ಆಪ್ತ ಸಮಾಲೋಚಕಿ  ವಿದ್ಯಾಶ್ರೀ ಅವರು ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿ, ಹದಿಹರೆಯವು ವಿದ್ಯಾರ್ಥಿಗಳ ಜೀವನದಲ್ಲಿ ಅತೀ ಸೂಕ್ಷ್ಮಹಾಗೂ ಪರಿವರ್ತನೆಯ ಕಾಲವಾಗಿದೆ. ಆಧುನಿಕ ಕಾಲಘಟ್ಟದಲ್ಲಿ, ಶಿಕ್ಷಣದತ್ತ, ಸಮಾಜದತ್ತ ಮುಖ ಮಾಡುವ ಹೆಣ್ಣು ಜಾಗ್ರತಾವಸ್ಥೆಯಲ್ಲಿ ಇಂದು ಹೆಜ್ಜೆ ಹಾಕಬೇಕಾಗಿದೆ. ಭೌತಿಕವಾಗಿ, ಮಾನಸಿಕವಾಗಿ ಬೆಳೆಯುವ ಈ ಹಂತದಲ್ಲಿ ಬಾಹ್ಯ ಆಕರ್ಷಣೆಗಳಿಗೆ ಒಳಗಾಗದೆ ವಿಚಾರ ವಿಮರ್ಶೆಗಳ ಮೂಲಕ ತನ್ನ ಸ್ಥಾನವನ್ನು ಕಾಯ್ದುಕೊಳ್ಳಬೇಕಾಗಿದೆ. ತಮ್ಮೆದುರಿಗಿರುವ ತಂತ್ರಜ್ಞಾನವನ್ನು ಸದ್ಭಳಕೆ ಮಾಡಿಕೊಂಡು ಶಿಕ್ಷಕರ ಮತ್ತು ಪೋಷಕರ ಮಾರ್ಗದರ್ಶನದೊಂದಿಗೆ ಉತ್ತಮ ಸಾಧನೆ ಮಾಡುತ್ತಾ ಸಮಾಜದಲ್ಲಿ ತಮ್ಮ ಬದುಕನ್ನು ಕಟ್ಟಿಕೊಳ್ಳಬೇಕೆಂದರು. ವಿದ್ಯಾರ್ಥಿನಿಯರೊಂದಿಗೆ ಆಸ್ತ ಸಮಾಲೋಚನೆ ನಡೆಸಿ ಮಕ್ಕಳಿಗೆ ಉಪಯುಕ್ತ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ. ರೂಪಾ ಶೆಣೈ ಅವರು ವಹಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಕಾಲೇಜು ಪ್ರಾಂಶುಪಾಲರಾದ ಸಂದೀಪ್ ನಾಯಕ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿಯಲ್ಲಿ ಉಡುಪಿ ಜಿಲ್ಲೆಯ 5 ಬಿ.ಆರ್.ಸಿ ಕೇಂದ್ರಗಳಲ್ಲಿ ತಲಾ ಒಬ್ಬರಂತೆ ಮಾನಸಿಕ ಆರೋಗ್ಯ ಶೈಕ್ಷಣಿಕ ಸಂಪನ್ಮೂಲ ವ್ಯಕ್ತಿಯನ್ನು ಸಮಾಲೋಚಕ ಆಧಾರದ ಮೇಲೆ ನೇಮಕ ಮಾಡಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ (ಅವಶ್ಯವಿರುವ ಸಂದರ್ಭ ಪ್ರಾಥಮಿಕ ಶಾಲಾ ಮಕ್ಕಳಿಗೂ ಸಹ) ಸೇವೆಯನ್ನು ಒದಗಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 28 ರಿಂದ 40 ವರ್ಷದೊಳಗಿನ, ಮನೋವಿಜ್ಞಾನ, ಕ್ಲಿನಿಕಲ್ ಮನೋವಿಜ್ಞಾನ, ಕೌನ್ಸೆಲಿಂಗ್ ಮನೋವಿಜ್ಞಾನ ಅಥವಾ ಸಂಬಂಧಿತ ವಿಷಯಗಳಲ್ಲಿ ಎಂಎ/ಎಂಎಸ್‌ಸಿ ಪದವಿ ಪಡೆದಿರುವ, ಶಾಲೆ ಅಥವಾ ಸಮುದಾಯ ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಕನಿಷ್ಠ ಒಂದು ವರ್ಷದ ಅನುಭವ ಹಾಗೂ ಕನ್ನಡ, ಇಂಗ್ಲಿಷ್ ಮತ್ತು ಮೂಲಭೂತ ಕಂಪ್ಯೂಟರ್ ಜ್ಞಾನ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 2 ಕೊನೆಯ ದಿನವಾಗಿದ್ದು, ಪ್ರತಿ ಸಮಾಲೋಚಕರಿಗೆ ಮಾಸಿಕ 40,000 ಗೌರವ ಧನ ಹಾಗೂ 10,000 ಪ್ರಯಾಣ ಭತ್ಯೆಯನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು ಹಾಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಪದವಿ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಜೂನ್‌ನಲ್ಲಿ ನಡೆದ ಕಂಪನಿ ಸೆಕ್ರೆಟರೀಸ್ (ಸಿ.ಎಸ್.) ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆ ಮೆರೆದಿದ್ದಾರೆ. ಕಂಪನಿ ಸೆಕ್ರೆಟರಿ ವೃತ್ತಿಪರ ಅರ್ಹತೆಯ ಅಂತಿಮ ಹಂತದ ಪರೀಕ್ಷೆಯಾದ ಸಿ.ಎಸ್. ಪ್ರೊಫೆಷನಲ್‌ನ ಗ್ರೂಪ್–1 ಮತ್ತು ಗ್ರೂಪ್–2 ಪರೀಕ್ಷೆಗಳಲ್ಲಿ ಆಳ್ವಾಸ್ ಬಿ.ಕಾಂ. ವಿದ್ಯಾರ್ಥಿಗಳಾದ ಅನನ್ಯ ಕೆ.ಎ. (382 ಅಂಕ) ಹಾಗೂ ನಾಗನಾಥ್ (353 ಅಂಕ) ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾಗುವ ಮೂಲಕ ಗಮನಾರ್ಹ ಸಾಧನೆ ಮೆರೆದಿದ್ದಾರೆ. ಇದರೊಂದಿಗೆ ಇಬ್ಬರೂ ಕಂಪನಿ ಸೆಕ್ರೆಟರಿ ವೃತ್ತಿಗೆ ಅಗತ್ಯವಾದ ವೃತ್ತಿಪರ ಅರ್ಹತೆಯನ್ನು ಗಳಿಸಿದ್ದಾರೆ. ಸಿ.ಎಸ್. ಪ್ರೊಫೆಷನಲ್‌ನ – ಗ್ರೂಪ್–1 ಪರೀಕ್ಷೆಯಲ್ಲಿ ಬಿ. ಸುಹಾಸ್ ರಾವ್ (248), ಪ್ರತೀಕ್ಷಾ (223), ನಿಶಿತಾ ಸಿ. ಶೆಟ್ಟಿ (200) ಹಾಗೂ ತಸ್ಮಯ್ ಎಂ. ಬಪ್ಪಣವರ್ (200) ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ. ಸಿ.ಎಸ್. ಎಕ್ಸಿಕ್ಯೂಟಿವ್‌ನಲ್ಲೂ ಸಾಧನೆ ಕಂಪನಿ ಸೆಕ್ರೆಟರಿ ವೃತ್ತಿಪರ ಪಯಣದ ಎರಡನೇ ಹಂತವಾದ ಸಿ.ಎಸ್. ಎಕ್ಸಿಕ್ಯೂಟಿವ್ ಪರೀಕ್ಷೆಯಲ್ಲಿಯೂ ಆಳ್ವಾಸ್ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ದಾಖಲಿಸಿದ್ದಾರೆ. ಜೇನ್ ಡಿಸೋಜಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಗಂಗೊಳ್ಳಿ ಸಮುದ್ರ ತೀರದ ಬಳಿ ಮೀನುಗಾರಿಕೆಗೆ ತೆರಳಿದ್ದ ಪರ್ಸೀನ್ ಬೋಟ್‌ ಅಲೆಗಳ ಹೊಡೆತದಿಂದಾಗಿ ಬಿರುಕು ಬಿಟ್ಟು, ಮುಳುಗುವ ಪರಿಸ್ಥಿತಿ ನಿರ್ಮಾಣವಾದ ಘಟನೆ ನಡೆದಿದೆ. ಕರಾವಳಿ ಕಾವಲು ಪಡೆ ಮತ್ತು ಮೀನುಗಾರರ ಸಮಯೋಚಿತ ಕಾರ್ಯಾಚರಣೆಯಿಂದ ಬೋಟ್‌ನಲ್ಲಿದ್ದ 27 ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಗಂಗೊಳ್ಳಿಯಿಂದ ಸುಮಾರು 3 ನಾಟಿಕಲ್ ಮೈಲಿ ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಶ್ರೀ ಬಾಲಾಂಜನೇಯ ಬೋಟ್‌ ಮಧ್ಯಾಹ್ನ 03:30ರ ವೇಳೆಗೆ ಭಾರೀ ಅಲೆಗಳ ಹೊಡೆತದಿಂದ ಬೋಟ್‌ಗೆ ಬಿರುಕು ಕಾಣಿಸಿಕೊಂಡಿದೆ. ಇದರಿಂದ ಬೋಟ್‌ಗೆ ನೀರು ನುಗ್ಗಿ ನಿಧಾನವಾಗಿ ಮುಳುಗಲು ಆರಂಭಿಸಿದೆ. ಘಟನೆಯ ಮಾಹಿತಿ ದೊರೆಯುತ್ತಿದ್ದಂತೆ ಕರಾವಳಿ ಕಾವಲು ಪಡೆ ತಕ್ಷಣ ಕಾರ್ಯಪ್ರವೃತ್ತವಾಗಿದ್ದು, ಕರಾವಳಿ ಮೀಸಲು ಪಡೆಯ ಇನ್ಸ್‌ಪೆಕ್ಟರ್ ರಮೇಶ್ ಕೆ. ಅವರ ನೇತೃತ್ವದಲ್ಲಿ ಪಿಎಸೈ ಸುಬ್ರಹ್ಮಣ್ಯ ಹಾಗೂ ಸಿಬ್ಬಂದಿಗಳಾದ ಯುವರಾಜ,ರಾಘವೇಂದ್ರ, ರಮೇಶ, ನಾಗರಾಜ ಖಾರ್ವಿ, ನಾಗೇಶ್‌ ಖಾರ್ವಿ, ಕಿರಣ್‌ ಮತ್ತು ಕೆ.ಎನ್.ಡಿ ಸದಸ್ಯರಾದ ಸಂತೋಷ ಖಾರ್ಷಿ ಹಾಗೂ ಸಂದೇಶ್‌ ಅವರೊಂದಿಗೆ ಮತ್ಸ್ಯಾಮೃತ ಹಾಗೂ ಸುಮುಖ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಭಟ್ಕಳ: ಅರ್ಹ ಬಿಸಿಎ ವಿದ್ಯಾರ್ಥಿಗಳಿಗೆ ಉದ್ಯಮ ಕೇಂದ್ರೀಕೃತ ತಂತ್ರಜ್ಞಾನ ಕಲಿಕಾ ಕಾರ್ಯಕ್ರಮವನ್ನು ಒದಗಿಸುವ ಉದ್ದೇಶದಿಂದ ಫೋರ್ಥ್‌ಫೋಕಸ್, ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನೊಂದಿಗೆ ಪರಸ್ಪರ ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಿದೆ. ಈ ಕಾರ್ಯಕ್ರಮವನ್ನು ಫೋರ್ಥ್‌ಫೋಕಸ್ ಕಲಿಕಾ ಉಪಕ್ರಮದ ಮೂಲಕ ಜಾರಿಗೆ ತರಲಾಗುತ್ತದೆ. ಫೋರ್ಥ್‌ಫೋಕಸ್‌ನ ಸಂಸ್ಥಾಪಕ ಮತ್ತು ನಿರ್ದೇಶಕ ವಿ. ಗೌತಮ್ ನಾವಡ ಹಾಗೂ ಶ್ರೀ ಗುರು ಸುಧೀಂದ್ರ ಕಾಲೇಜಿನ ಪ್ರಾಂಶುಪಾಲರಾದ ಶ್ರೀನಾಥ್ ಪೈ ಅವರು ಒಪ್ಪಂದಕ್ಕೆ ಸಹಿ ಹಾಕಿದರು. ಈ ಸಂದರ್ಭದಲ್ಲಿ ಶ್ರೀ ಗುರು ಸುಧೀಂದ್ರ ಕಾಲೇಜಿನ ಉಪಪ್ರಾಂಶುಪಾಲರಾದ ವಿಖ್ಯಾತ್ ಪ್ರಭು, ಫೋರ್ಥ್‌ಫೋಕಸ್‌ನ ಕಾರ್ಯಾಚರಣೆ ವ್ಯವಸ್ಥಾಪಕಿ ಚಂದನಾ ಜಿ.ಎಂ. ಹಾಗೂ ಸಾಮಾಜಿಕ ಮಾಧ್ಯಮ ವ್ಯವಸ್ಥಾಪಕಿ ವಿಜಯಲಕ್ಷ್ಮಿ ಉಪಸ್ಥಿತರಿದ್ದರು. ಈ ಸಹಯೋಗದಡಿ ಕಾಲೇಜು ಅನುಮೋದಿತ ಬಿಸಿಎ ವಿದ್ಯಾರ್ಥಿಗಳಿಗಾಗಿ ಉದ್ಯಮ ಮತ್ತು ಶೈಕ್ಷಣಿಕ ಕ್ಷೇತ್ರಗಳ ನಡುವಿನ ತಾಂತ್ರಿಕ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮವನ್ನು ಜಾರಿಗೆ ತರಲಾಗುತ್ತದೆ. ವಿದ್ಯಾರ್ಥಿಗಳ ಶೈಕ್ಷಣಿಕ ಅಧ್ಯಯನಕ್ಕೆ ಪೂರಕವಾಗಿ ಪ್ರಾಯೋಗಿಕ ತಂತ್ರಜ್ಞಾನ ಕಲಿಕೆ ಹಾಗೂ ಪ್ರಸ್ತುತ ವೃತ್ತಿಪರ ಕಾರ್ಯಪದ್ಧತಿಗಳ ಪರಿಚಯ…

Read More