Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕ್ರೆಡಿಟ್ ಕಾರ್ಡ್‌ನ ಪ್ರೊಟೆಕ್ಷನ್ ಪ್ಲಾನ್ ನವೀಕರಿಸುವುದಾಗಿ ನಂಬಿಸಿ ಸೈಬರ್ ವಂಚಕರು ಮಹಿಳೆಯೊಬ್ಬರ ಕ್ರೆಡಿಟ್ ಕಾರ್ಡ್‌ನಿಂದ ಸುಮಾರು ₹1,99,696.06/ ಲಕ್ಷ ಹಣವನ್ನು ಅಕ್ರಮವಾಗಿ ವರ್ಗಾಯಿಸಿಕೊಂಡಿರುವ ಘಟನೆ ಕೋಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೋಟ ನಿವಾಸಿ ಐಶ್ವರ್ಯ ಅವರು ನೀಡಿದ ದೂರಿನ ಪ್ರಕಾರ, ಜುಲೈ 27ರಂದು ಅವರ ಕ್ರೆಡಿಟ್ ಕಾರ್ಡ್‌ಗೆ ಸಂಬಂಧಿಸಿದ ಕಾರ್ಡ್ ಪ್ರೊಟೆಕ್ಷನ್ ಪ್ಲಾನ್ ಅನ್ನು ಅಪ್‌ಡೇಟ್ ಮಾಡಬೇಕಿದೆ ಎಂದು ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ತಿಳಿಸಿದ್ದಾನೆ. ಬಳಿಕ ಗೂಗಲ್ ಮೂಲಕ icici.helpsuseronline ಎಂಬ ಲಿಂಕ್ ಕಳುಹಿಸಿದ್ದು, ಅದನ್ನು ನಂಬಿ ಮಹಿಳೆ ಕ್ಲಿಕ್ ಮಾಡಿದ ತಕ್ಷಣ ಅವರ ಕ್ರೆಡಿಟ್ ಕಾರ್ಡ್‌ನಿಂದ ಒಟ್ಟು ₹1,99,696.06 ಹಣ ಅಕ್ರಮವಾಗಿ ವರ್ಗಾವಣೆಯಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ಕೋಟೇಶ್ವರ ಘಟಕ ಹಾಗೂ ಮಹಿಳಾ ಸಂಘಟನೆ ಇದರ 21ನೇ ವಾರ್ಷಿಕ ಮಹಾಸಭೆ ಹಾಗೂ ವನಮೋತ್ಸವ ಕಾರ್ಯಕ್ರಮವು ಕೋಟೇಶ್ವರದ ಸರಸ್ವತಿ ಕಲ್ಯಾಣ ಮಂಟಪದಲ್ಲಿ ನಡೆಯಿತು. ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆಯ ಅಧ್ಯಕ್ಷರಾದ ರವೀಶ್ ಎಸ್. ಕೊರವಡಿ ಸಮಾರಂಭವನ್ನು ಉದ್ಘಾಟಿಸಿ, ಮೊಗವೀರ ಯುವ ಸಂಘಟನೆಯ ಕೋಟೇಶ್ವರ ಘಟಕವು ಜಿಲ್ಲೆಯಲ್ಲೇ ಬಲಿಷ್ಠವಾದ ಘಟಕವಾಗಿದ್ದು, ಪ್ರತೀ ವರ್ಷವೂ ಅಗಸ್ಟ್‌ ತಿಂಗಳ ಮೊದಲ ವಾರದಲ್ಲಿ ತನ್ನ ವಾರ್ಷಿಕ ಮಹಾಸಭೆಯನ್ನು ನಡೆಸಿ ಎಲ್ಲರಿಗೂ ಮಾದರಿಯಾಗುವ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಪ್ರಶಂಸೆಯ ಮಾತನ್ನಾಡಿದರು. ಕೋಟೇಶ್ವರ ಘಟಕದ ನಿಕಟಪೂರ್ವ ಅಧ್ಯಕ್ಷರಾದ ನಾಗರಾಜ್ ಬೀಜಾಡಿ ಎಲ್ಲರನ್ನೂ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಮೊಗವೀರ ಯುವ ಸಂಘಟನೆಯ ಕೋಟೇಶ್ವರ ಘಟಕದ ಕಾರ್ಯದರ್ಶಿ ನಾಗರಾಜ್ ತೆಕ್ಕಟ್ಟೆ ವಾರ್ಷಿಕ ವರದಿ ಮಂಡಿಸಿದರು. ಕೋಶಾಧಿಕಾರಿ ರಾಜೇಶ್ ಕಾಂಚನ್ ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ವರದಿ ಮತ್ತು ಲೆಕ್ಕಪತ್ರಗಳಿಗೆ ಸರ್ವ ಸದಸ್ಯರ ಅನುಮೋದನೆ ಪಡೆಯಲಾಯಿತು. ಘಕಟ ವ್ಯಾಪ್ತಿಯ ಪ್ರತಿಭಾವಂತ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಮಣೂರು ಮಹಾಲಿಂಗೇಶ್ವರ ಶ್ರೀ ಹೇರಂಬ ಮಹಾಗಣಪತಿ ದೇವಸ್ಥಾನಕ್ಕೆ ಆಗಮಿಸುವ ಸದ್ಭಕ್ತರ ಅನುಕೂಲಕ್ಕಾಗಿ ನಾಗರಾಜ ಮೈಯ್ಯ ದಂಪತಿಗಳು ಕೊಡುಗೆಯಾಗಿ ನೀಡಿದ ಶುದ್ಧ ಕುಡಿಯುವ ನೀರಿನ ಫಿಲ್ಟರ್ ಅನ್ನು ಭಾನುವಾರ ವಿದ್ಯುಕ್ತವಾಗಿ ಲೋಕಾರ್ಪಣೆಗೊಳಿಸಲಾಯಿತು. ಆರಂಭದಲ್ಲಿ ಶ್ರೀ ದೇವಳದ ಪ್ರಧಾನ ಅರ್ಚಕ ರವಿ ಐತಾಳ್ ನೂತನ ನೀರಿನ ಫಿಲ್ಟರ್‌ಗೆ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು. ತದನಂತರ ನಿವೃತ್ತ ಪ್ರಾಂಶುಪಾಲ ಪಾರಂಪಳ್ಳಿ ರಾಘವೇಂದ್ರ ಭಟ್ ಅವರು ರಿಬ್ಬನ್ ಕತ್ತರಿಸುವ ಮೂಲಕ ವಿದ್ಯುಕ್ತವಾಗಿ ಉದ್ಘಾಟಿಸಿದರು. ಈ ಸಂದಭರ್ದದಲ್ಲಿ ದೇಗುಲದ ಅಧ್ಯಕ್ಷ ಸತೀಶ್ ಎಚ್. ಕುಂದರ್, ವ್ಯವಸ್ಥಾನಾ ಸಮಿತಿ ಸದಸ್ಯರು, ಗ್ರಾಮಸ್ಥರು ಇದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಗುಜ್ಜಾಡಿ-ಕೊಡಪಾಡಿ ರಸ್ತೆಯಲ್ಲಿ ರವಿವಾರ ಎರಡು ಬೈಕ್‌ಗಳು ಮುಖಾಮುಖಿ ಢಿಕ್ಕಿಯಾಗಿ ಇಬ್ಬರು ಸವಾರರು ಗಾಯಗೊಂಡಿದ್ದಾರೆ. ಕರಾವಳಿ ಕಾವಲು ಪಡೆ ಪೊಲೀಸ್ ಸಿಬ್ಬಂದಿ ಚೇತನ್ ಮತ್ತು ಕೊಡಪಾಡಿ ನಿವಾಸಿ ಮಂಜಾಯ್ ಪ್ರಸಾದ್ ಗಾಯಗೊಂಡ ಸವಾರರು. ಚೇತನ್ ಅವರು ಗುಹೇಶ್ವರ ದೇವಸ್ಥಾನದ ಕಡೆಯಿಂದ ಕೊಡಪಾಡಿಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ, ಎದುರಿನಿಂದ ಬರುತ್ತಿದ್ದ ಮಂಜಾಯ್ ಪ್ರಸಾದ್ ಅವರು ಸ್ಕೂಟರ್ ಅನ್ನು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಢಿಕ್ಕಿ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ರೋಟರಿ ಕ್ಲಬ್ ತೆಕ್ಕಟ್ಟೆ ತನ್ನ ಸಮಾಜ ಸೇವಾ ಕಾರ್ಯಕ್ರಮದ ಅಂಗವಾಗಿ ಬೇಳೂರು ಗ್ರಾಮದ ಮೊಗೆಬೆಟ್ಟು ಅಂಗನವಾಡಿಗೆ ಕಚೇರಿ ಬಳಕೆಗೆ ಅಗತ್ಯವಿದ್ದ ಒಂದು ಮೇಜನ್ನು ದಾನವಾಗಿ ನೀಡಿದರು. ಸುಮಾರು ₹5,000 ಮೌಲ್ಯದ ಈ ಕಚೇರಿ ಮೇಜನ್ನು ರೋಟರಿ ವಲಯ–2ರ ಲರ್ನಿಂಗ್ ಫೆಸಿಲಿಟೇಟರ್ ಹಾಗೂ ರೋಟರಿ ಕ್ಲಬ್ ತೆಕ್ಕಟ್ಟೆಯ ಸದಸ್ಯರಾದ ರೋಟೇರಿಯನ್ ಸುರೇಶ್ ಬೇಳೂರು ಅವರು ಪ್ರಾಯೋಜಿಸಿದ್ದರು. ಸಮಾರಂಭದಲ್ಲಿ ಕ್ಲಬ್ ಅಧ್ಯಕ್ಷ ಟಿ. ರಾಜೀವ್ ಶೆಟ್ಟಿ, ವಲಯ–2ರ ಸಹಾಯಕ ಗವರ್ನರ್ ಟಿ. ಸುಧಾಕರ್ ಶೆಟ್ಟಿ, ವಿಜಯಕುಮಾರ್ ಶೆಟ್ಟಿ, ವಲಯ–2ರ ಇಂಟರ್ಯಾಕ್ಟ್ ಸಂಯೋಜಕರಾದ ಗಣಪತಿ ಶ್ರೀಯಾನ್, ವಿಠ್ಠಲ್ ರಾವ್ ಹಾಗೂ ಕ್ಲಬ್ ಜಂಟಿ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಮೇಜನ್ನು ಅಂಗನವಾಡಿಗೆ ಹಸ್ತಾಂತರಿಸಲಾಯಿತು. ಕಾರ್ಯಕ್ರಮದಲ್ಲಿ ಅಂಗನವಾಡಿಯ ಶಿಕ್ಷಕಿಯರು ಹಾಗೂ ಪುಟಾಣಿಗಳು ಭಾಗವಹಿಸಿದ್ದರು. ನಂತರ ಎಲ್ಲರಿಗೂ ಸಿಹಿ ವಿತರಿಸಲಾಯಿತು. ಈ ಕಚೇರಿ ಮೇಜಿನ ಅವಶ್ಯಕತೆ ಅಂಗನವಾಡಿಗೆ ಬಹಳ ದಿನಗಳಿಂದ ಇದ್ದುದರಿಂದ, ಈ ಅಮೂಲ್ಯ ಸಹಾಯಕ್ಕಾಗಿ ಅಂಗನವಾಡಿಯ ಶಿಕ್ಷಕಿಯರು ರೋಟರಿ ಕ್ಲಬ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ದೀರ್ಘಕಾಲದಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ದಿಢೀರ್ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಮೃತಪಟ್ಟಿರುವ ಘಟನೆ ಉಪ್ಪುಂದದಲ್ಲಿ ಸಂಭವಿಸಿದೆ. ಉಪ್ಪುಂದ ಗ್ರಾಮದ ಅಂಬಾಗಿಲು ನಿವಾಸಿ ಗಣೇಶ (41) ಮೃತಪಟ್ಟ ವ್ಯಕ್ತಿ. ಅವರು ಕಳೆದ 15 ವರ್ಷಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಕುಂದಾಪುರ ಹಾಗೂ ಮಂಗಳೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆ.1 ರಂದು ರಾತ್ರಿ ಮನೆಯಲ್ಲಿದ್ದಾಗ ಅವರಿಗೆ ದಿಢೀರ್ ವಾಂತಿ ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ತುರ್ತು ಚಿಕಿತ್ಸೆಗಾಗಿ ಬೈಂದೂರು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕು ತೆಕ್ಕಟ್ಟೆ ಗ್ರಾಮದ ಹರಿಕಾರಬೆಟ್ಟು ನಿವಾಸಿ ಲಕ್ಷ್ಮಣ ಪೂಜಾರಿ (37) ಎಂಬವರು ಕೂಲಿ ಕೆಲಸ ಮಾಡಿಕೊಂಡಿದ್ದು ಜುಲೈ 14 ರಂದು ಕೆಲಸ ಮುಗಿಸಿ ತನ್ನ ಮನೆಗೆ ವಾಪಾಸಾಗಿ ಅಣ್ಣನ ಜೊತೆ ಆನೆಗುಡ್ಡೆ ದೇವಸ್ಥಾನಕ್ಕೆ ಹೋಗುತ್ತೇನೆಂದು ಹೇಳಿ ಹೋದವರು ಇದುವರೆಗೂ ಮನೆಗೆ ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಕೋಲು ಮುಖ, ಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೋಟ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2564155, 9480805454 ಹಾಗೂ ಉಡುಪಿ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂ: 0820-2561966, 9480805432 ಅನ್ನು ಸಂಪರ್ಕಿಸುವಂತೆ ಕೋಟ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ನಗರದ ಮಣಿಪಾಲ ರಜತಾದ್ರಿ ರಸ್ತೆಯ ವಿದ್ಯಾರತ್ನ ನಗರದ ಡಿ.ಸಿ ಆಫೀಸ್ ಬಳಿಯ ಕಂಟ್ರಿ ಇನ್ ಸೂಟ್ಸ್ ಬೈ ರಾಡಿಸನ್ ಮಣಿಪಾಲ್ ಇಲ್ಲಿ ಆಗಸ್ಟ್ 6 ರಂದು ಬೆಳಗ್ಗೆ 10.30ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ  ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8150961875 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಯುವ ಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸಲು, ಸಮಾಜಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಹಾಗೂ ರಾಷ್ಟ್ರ ನಿರ್ಮಾಣ ಕಾರ್ಯಗಳಲ್ಲಿ ಸಕ್ರೀಯವಾಗಿ ಭಾಗವಹಿಸುವಂತೆ ಪ್ರೋತ್ಸಾಹಿಸುವ ಉದ್ದೇಶದಿಂದ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲು ರಾಜ್ಯ ಸರಕಾರ ಆದೇಶಿಸಿದ್ದು, ಸರಕಾರದ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಮಾರ್ಗಸೂಚಿಯನ್ವಯ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.  ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸುವ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯುವಜನತೆಯಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ, ಸಾಮಾಜಿಕ ಸಾಮರಸ್ಯ, ಸಂವಿಧಾನದ ಮೌಲ್ಯಗಳು ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ ರಾಜ್ಯಾದ್ಯಂತ ಗ್ರಾಮ ಪಂಚಾಯತ್ ಹಾಗೂ ನಗರ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹತ್ತು ಸಾವಿರ ಭಾರತ್ ಜೋಡೋ ಯುವಕ ಸಂಘಗಳನ್ನು ಸ್ಥಾಪಿಸಲು ಸರ್ಕಾರ ಮುಂದಾಗಿದ್ದು, ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಟ್ರೀಸ್  ಯೋಜನೆಯಲ್ಲಿ ಕ್ಯಾನ್ ಫಿನ್ ಹೋಮ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ  ಸಿಎಸ್ಆರ್ ನಿಧಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಸಾಡು ಇಲ್ಲಿ ಸುಮಾರು 10 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಬಾಲಕ ಮತ್ತು ಬಾಲಕಿಯರ ಶೌಚಾಲಯದ ಭೂಮಿ ಪೂಜೆಯನ್ನು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ನೆರವೇರಿಸಿದರು. ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪೂಜಾ ಕಾರ್ಯದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕರು, ಸಮಾಜದ ಒಗ್ಗೂಡುವಿಕೆಯಿಂದ ನಮ್ಮ ಊರಿನ ಸರಕಾರಿ ಶಾಲೆಗಳನ್ನು ಇನ್ನಷ್ಟು ಬಲಪಡಿಸಲು ಹಾಗೂ ಸಮಾಜದ ಪ್ರತಿಯೊಬ್ಬ ವಿದ್ಯಾರ್ಥಿಗೂ ಉತ್ತಮ ಶಿಕ್ಷಣ ನೀಡಲು ಸಹಕಾರಿ ಎಂದು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ಶಾಸಕರು ಸೌಲಭ್ಯವನ್ನು ಒದಗಿಸಿದ ಕ್ಯಾನ್ ಫಿನ್ ಹೋಂಮ್ಸ್ ಸಂಸ್ಥೆಗೆ ಅಭಿನಂದನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ರೇಖಾ ಗಣೇಶ್, ಉಪಾಧ್ಯಕ್ಷರಾದ ರಾಘವೇಂದ್ರ ಆಚಾರ್ಯ ಹಾಗೂ ಸರ್ವ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಚಂದ್ರ ಶೇಖರ ಪೂಜಾರಿ…

Read More