Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಪೇಟೆ ಶ್ರೀ ವಿಠ್ಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಪುರುಷೋತ್ತಮ ಮಾಸದ ಅಂಗವಾಗಿ ಶ್ರೀದೇವರ ಪ್ರೀತ್ಯರ್ಥವಾಗಿ ಹಾಗೂ ಸಾನಿಧ್ಯ ಅಭಿವೃದ್ಧಿಗಾಗಿ ಶ್ರೀ ವಿಷ ಸಹಸ್ರನಾಮ ಹವನ, ತತ್ವ ಮಂತ್ರ ಹವನ, ಮಾತೃಕಾ ಮಂತ್ರ ಹವನ, ಶ್ರೀ ವಿಠ್ಠಲ ಮೂಲ ಮಂತ್ರ ಹವನ, ಶ್ರೀ ವೆಂಕಟೇಶ ಮೂಲ ಮಂತ್ರ ಹವನ, ಹನುಮಂತ ಮೂಲ ಮಂತ್ರ ಹವನ, ಗರುಡ ಮೂಲ ಮಂತ್ರ ಹವನ ಬುಧವಾರ ನಡೆಯಿತು. ಬೆಳಿಗ್ಗೆ ದೇವತಾ ಪ್ರಾರ್ಥನೆಯೊಂದಿಗೆ ಹವನದ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡಿತು. ದೇವಳದ ಪ್ರಧಾನ ಅರ್ಚಕ ಜಿ.ಮೋಹನದಾಸ ಭಟ್, ಜಿ. ಪ್ರದೀಪ್ ಭಟ್ ಮತ್ತು ತಾಂತ್ರಿಕ ಜಿ. ರಾಘವೇಂದ್ರ ಆಚಾರ್ಯ ನೇತೃತ್ವದಲ್ಲಿ ಪುರೋಹಿತರಿಂದ ಹವನದ ಧಾರ್ಮಿಕ ಕಾರ್ಯಕ್ರಮಗಳು ಶಾಸ್ತ್ರೋಕ್ತಕವಾಗಿ ಸಂಪನ್ನಗೊಂಡಿತು. ಮಧ್ಯಾಹ್ನ ಪೂರ್ಣಾಹುತಿ, ಶ್ರೀದೇವರಿಗೆ ಮಹಾಪೂಜೆ, ಬ್ರಾಹ್ಮಣ ಪೂಜೆ ಹಾಗೂ ಮಹಾಸಮಾರಾಧನೆ ನಡೆಯಿತು. ದೇವಳದ ಆಡಳಿತ ಮೊಕ್ತೇಸರ ಜಿ.ನರಸಿಂಹ ನಾಯಕ್, ಆಡಳಿತ ಮಂಡಳಿ ಸದಸ್ಯರು, ಅರ್ಚಕರು, ಸೇವಾದಾರರು, ಊರಿನ ಹತ್ತು ಸಮಸ್ತರು, ಸಮಾಜ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಟ್ರಸ್ಟ್ ರಿ, ಮೊಳಹಳ್ಳಿ ಇವರ ಆಶ್ರಯದಲ್ಲಿ ರಾಜ್ಯಮಟ್ಟದಲ್ಲಿ ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ರಾಜ್ಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಸಾಧನೆಗೈದ ಕ್ರೀಡಾಪಟುಗಳಿಗೆ ಗೌರವ ಸನ್ಮಾನ, ಮೊಳಹಳ್ಳಿ ಗ್ರಾಮದ ವಿಶಿಷ್ಟ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಹಾಗೂ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮವು ಬಿದ್ಕಲ್ ಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ (ಪ್ರೌಢಶಾಲಾ ವಿಭಾಗ)ನಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿದ ನಿವೃತ್ತ ಪ್ರಾಂಶುಪಾಲರಾದ ಎಂ. ಬಾಲಕೃಷ್ಣ ಶೆಟ್ಟಿ ಮಾತನಾಡಿ, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಹಾಗೂ ವಿದ್ಯಾರ್ಥಿವೇತನ ನೀಡುವ ಮೂಲಕ ಟ್ರಸ್ಟ್ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ. ಸಾಧನೆಗೈದ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕೆಂಬ ಸಂದೇಶವನ್ನು ಟ್ರಸ್ಟ್ ನೀಡುತ್ತಿದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟ್ರಸ್ಟ್‌ನ ಸಂಸ್ಥಾಪಕರಾದ ಮೊಳಹಳ್ಳಿ ದಿನೇಶ್ ಹೆಗ್ಡೆ ವಹಿಸಿದ್ದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಸುರಭಿ ರಿ. ಬೈಂದೂರು ಮತ್ತು ಚಿತ್ತಾರ ಹಳ್ಳಿಹೊಳೆ ಇವರ ಸಂಯುಕ್ತ ಆಶಯದಲ್ಲಿ ಬೈಂದೂರು ಜಾತ್ರೆಯ ಪ್ರಯುಕ್ತ ಇತ್ತೀಚಿಗೆ ನಡೆದ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸಂಜಿತ್ ಎಂ. ದೇವಾಡಿಗ ಪ್ರಥಮ ಸ್ಥಾನವನ್ನು ಪಡೆದಿರುತ್ತಾನೆ. ಈತ ಗಂಗೊಳ್ಳಿಯ ಚಿತ್ರ ಕಲಾವಿದ ಮಾಧವ ದೇವಾಡಿಗ ಹಾಗೂ ಉಪನ್ಯಾಸಕಿ ಸಾವಿತ್ರಿ ಎಸ್. ದಂಪತಿಯ ಪುತ್ರ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮವು ಮಂಗಳವಾರ ನಡೆಯಿತು. ಪ್ರಾಥಮಿಕ ಅರೋಗ್ಯ ಕೇಂದ್ರ ಕೆದೂರು ಇಲ್ಲಿನ ವೈದ್ಯಾಧಿಕಾರಿ ಡಾ. ರಾಜೇಶ್ವರಿ ಅವರು ವಿದ್ಯಾರ್ಥಿಗಳಿಗೆ ಮಳೆಗಾಲದಲ್ಲಿ ಬರುವ ಆರೋಗ್ಯ ಸಮಸ್ಯೆಗಳ ಕುರಿತು ವಿವರಿಸಿ, ನಮ್ಮನ್ನು ನಾವು ಹೇಗೆ ರಕ್ಷಿಸಿಕೊಳ್ಳಬೇಕು ಎಂಬುದನ್ನು ತಿಳಿಸಿದರು. ವಿದ್ಯಾರ್ಥಿ ವಿದ್ಯಾರ್ಥಿನಿಯರು ಹೇಗೆ ವೈಯಕ್ತಿಕ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು ಎಂದು ಮಾಹಿತಿ ನೀಡಿದರು. ಆರೋಗ್ಯವೇ ಭಾಗ್ಯ ಎಂಬುದನ್ನು ಎಲ್ಲರೂ ಅರಿತು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ದಾನಿಗಳಾದ ಆನಂದ್ ಸಿ. ಕುಂದರ್ ಗೀತಾನಂದ ಫೌಂಡೇಶನ್ ಮಣೂರು, ಪಡುಕೆರೆ ಅವರು ನೀಡಿದ ಉಚಿತ ನೋಟ್ ಬುಕ್ ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮಹಿಳಾ ಆರೋಗ್ಯ ಸಹಾಯಕಿ ಶಾಂತಾ ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು  ಉಪಸ್ಥಿತರಿದ್ದರು. ಶಾಲೆಯ ಮುಖ್ಯೋಪಾಧ್ಯಾಯರಾದ ಉದಯ ಕುಮಾರ್ ಶೆಟ್ಟಿ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಶಿಕ್ಷಕ ರಮೇಶ್ ಕುಲಾಲ್ ಎನ್. ಕಾರ್ಯಕ್ರಮ ನಿರೂಪಿಸಿ,  ಶಿಕ್ಷಕಿ ದೀಪಾವತಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪೌರಾಣಿಕ ಪ್ರಜ್ಞೆ – ವೈಚಾರಿಕ ಧೋರಣೆ – ವ್ಯವಸ್ಥಿತ ನಿರೂಪಣೆ – ಪರಿಸರ ಜಾಗೃತಿಗಳ ಸಮಷ್ಟಿ ಚಿಂತನೆಯ ಫಲವಾಗಿ ಮೂಡಿ ಬಂದ ಅಪೂರ್ವ ಕೃತಿ ’ಆದರ್ಶ ಮಾನವʼ. ಕೃಷ್ಣನನ್ನು ಈ ರೀತಿ ಕಂಡವರು ಕೌನ್ಜೂರು ಚಂದ್ರಶೇಖರ ಅಡಿಗರು ಎಂದೆನ್ನುತ್ತಾ ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಎ.ಪಿ. ಭಟ್ಟರು ಕೌನ್ಜೂರು ಚಂದ್ರಶೇಖರ ಅಡಿಗರ ಕೃತಿ ಲೋಕಾರ್ಪಣೆಗೈದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಇತ್ತೀಚಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕೋಟದ ಮಿತ್ರ ಮಂಡಳಿ ಕೃತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ’ಕಥೆ ಹೇಳುವುದಕ್ಕಿಂತ ಲೇಖಕರದ್ದು ಧಾರ್ಮಿಕ ದತ್ತ ಚಿತ್ತ’ದ ಬಗೆಗೆ ಸುಮನ ಆರ್. ಹೇರಳೆ, ಜಾಣ್ಮೆ’ಯ ಕುರಿತು ಡಾ. ಸರಿತಾ ಸಾಲಿಗ್ರಾಮ, ’ಕೃಷ್ಣನ ಆದರ್ಶ ಮಾನವತ್ವ’ದ ಬಗೆಗೆ ಮಹಾಲಕ್ಷ್ಮಿ ಸೋಮಯಾಜಿ ಅವರು ಮಾತನಾಡಿ, ಕೃತಿಯನ್ನು ಪರಿಚಯಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೀಲಾವರ ಸುರೇಂದ್ರ ಅಡಿಗ ವಹಿಸಿ ಸ್ವಾಗತಿಸಿ, ಕ.ಸಾ.ಪ. ಸಂಸ್ಥಾಪಕ ನಾಲ್ವಡಿ ಕೃಷ್ಣರಾಜ ಒಡೆಯರ ಅದ್ಭುತ ಕಾರ್ಯಕ್ಷಮತೆಯನ್ನು ಕೊಂಡಾಡಿದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಉಡುಪಿ: ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ ಸೊಲ್ಯೂಷನ್ಸ್ ಲಿಮಿಟೆಡ್ ನಲ್ಲಿ ಜೂನ್ 12ರಂದು ಬೆಳಗ್ಗೆ 10.30ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಡಿಪ್ಲೋಮಾ, ಐ.ಟಿ.ಐ. ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕಚೇರಿ ಪ್ರಕಟಣೆ ತಿಳಿಸಿದೆ

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬೆಂಗಳೂರಿನ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಸಂಸ್ಥೆ ವತಿಯಿಂದ  ಜರಗಿದ ಸುರಕ್ಷಾ ಮಾಸಾಚರಣೆ ಅಭಿಯಾನದಲ್ಲಿ ಬಿದ್ಕಲ್ಕಟ್ಟೆ ಸರಕಾರಿ ಐಟಿಐಗೆ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ ಲಭಿಸಿದೆ. 2026ನೇ ಸಾಲಿನ ಈ ಅಭಿಯಾನದಲ್ಲಿ ರಾಜ್ಯಾದ್ಯಂತ ಸರಕಾರಿ ಹಾಗೂ ಖಾಸಗಿ ಐಟಿಐಗಳು ಪಾಲ್ಗೊಂಡಿದ್ದವು. ಈ  ಬಗ್ಗೆ ವಿವಿಧ ಮೌಲ್ಯಯುತ ಕಾರ್ಯಕ್ರಮ ಮತ್ತು ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಪೂರ್ಣಿಮಾ ಶೇಟ್ ಆರೋಗ್ಯ ಕೇಂದ್ರ ಬಿದ್ಕಲ್ ಕಟ್ಟೆ, ಶ್ರೇಯಸ್ ಕುಮಾರ್ ಪ್ರಾದೇಶಿಕ ಸಾರಿಗೆ ಕಚೇರಿ ಉಡುಪಿ, ಬಾಲಕೃಷ್ಣ ಅಗ್ನಿಶಾಮಕ ಠಾಣೆ ಕುಂದಾಪುರ, ನಿಲೇಶ್ ಸೈಬರ್ ಕ್ರೈಂ ಸ್ಟೇಷನ್ ಉಡುಪಿ ಭಾಗವಹಿಸಿದ್ದರು. ಬಿದ್ಕಲ್ಕಟ್ಟೆ ಸಂಸ್ಥೆಯ ಗಣೇಶ್ ಹೆಚ್., ಪ್ರಸನ್ನ ಆಚಾರ್ಯ, ಪ್ರಫುಲ್ಲ ಕೆ.ಎನ್. , ಬಸವ ನಾಯ್ಕ್, ಸುಮಂಗಲ, ರೂಪದೇವಿ, ಸುಮಾರಾಣಿ, ಮನೋಜ್ ಕುಮಾರ್ ಕೆ.ಸಿ., ಅಜಿತ್ ಆಚಾರ್ಯ ಕಾರ್ಯಕ್ರಮಗಳ  ಆಯೋಜನೆಯಲ್ಲಿ ಸಹಕರಿಸಿದ್ದರು. ಪ್ರಭಾರೆ ಪ್ಲೇಸ್ ಮೆಂಟ್ ಅಧಿಕಾರಿ ಮನೋಹರ್ ಶೆಟ್ಟಿ ಕಾರ್ಯಕ್ರಮ ಸಂಯೋಜಿಸಿದ್ದು ಪ್ರಾಚಾರ್ಯ ಹರೀಶ್  ಮಾರ್ಗದರ್ಶನ ನೀಡಿದ್ದರು. ಸರಕಾರಿ ವಿಭಾಗದಲ್ಲಿ ಕಿತ್ತೂರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಮೆಸ್ಕಾಂ ಕಂಪನಿ ಉಡುಪಿ, ಮಂಗಳೂರು ಹಾಗೂ ಶಿವಮೊಗ್ಗ ವಲಯದಲ್ಲಿರುವ ಹಲವಾರು ವಿದ್ಯುತ್ ಜಾಲಗಳನ್ನು ಟಾಟಾ ಪವರ್ ಕಂಪನಿ ಪ್ರೈವೇಟ್ ಲಿಮಿಟೆಡ್ ನವರು ನಡೆಸುವುದಾಗಿ ಕೆಇಆರ್‌ಸಿಗೆ ಅರ್ಜಿ ಸಲ್ಲಿಸಿದ್ದು, ಮುಂದಿನ ದಿನಗಳಲ್ಲಿ ವಿದ್ಯುತ್ ಜಾಲಗಳು ಖಾಸಗಿಕರಣದತ್ತ ತಿರುಗುವ ಸಂಶಯ ಎದುರಾಗಿದೆ. ಈ ಖಾಸಗೀಕರಣದ ವಿರುದ್ಧ ಕುಂದಾಪುರ ವಿಭಾಗದ ಕೋಟ ಉಪವಿಭಾಗದಲ್ಲಿ ಕ.ವಿ.ಪ್ರ.ನಿ ನೌಕರರ ಸಂಘ, ಕೋಟ ಉಪವಿಭಾಗ ಕೋಟ ಶಾಖಾ ಕಛೇರಿಯಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಕಂಪನಿಯ 50ಕ್ಕೂ ಹೆಚ್ಚು ನೌಕರರು ಮತ್ತು ಗುತ್ತಿಗೆದಾರರು, ಗ್ರಾಹಕರು ಸೇರಿ ಖಾಸಗೀಕರಣದ ವಿರುದ್ಧ ಪ್ರತಿಭಟನೆಯಲ್ಲಿ ಭಾಗಿಯಾದರು. ಪ್ರತಿಭಟನೆಯಲ್ಲಿ ಪ್ರಾಥಮಿಕ ಸಮಿತಿ ಅಧ್ಯಕ್ಷ ದಿನೇಶ ಪುತ್ರನ್ ವಿಠಲವಾಡಿ, ಕಾರ್ಯದರ್ಶಿ ಸುಕುಮಾರ ಶೆಟ್ಟಿ, ಕಂಪನಿಗೆ ಆಗುವ ನಷ್ಟಗಳನ್ನು ತಿಳಿಸಿದರು ಜೊತೆಗೆ ಇದರ ವಿರುದ್ಧ ಮುಂದಿನ ಹೋರಾಟಕ್ಕೆ ಅಣಿಯಾಗುವಂತೆ ನೌಕರರಿಗೆ ಕರೆಕೊಟ್ಟರು. ಈ ವೇಳೆ ಕೋಟ ಸಹಾಯಕ ಇಂಜಿನಿಯರ್ ಪ್ರಶಾಂತ ಶೆಟ್ಟಿ, ಶಿರಿಯಾರ ಶಾಖಾಧಿಕಾರಿಗಳಾದ ವೈಭವ ಶೆಟ್ಟಿ, ಸಾಸ್ತಾನ ಶಾಖಾಧಿಕಾರಿ ಮಹೇಶ ಕೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಪ್ರಕೃತಿಯ ಸಂಪನ್ಮೂಲಗಳ ಮೇಲೆ ಸಂಪೂರ್ಣವಾಗಿ ಅವಲಂಬಿತನಾಗಿರುವ ಮಾನವ, ಅವುಗಳನ್ನು ನಿರಂತರವಾಗಿ ಬಳಸುತ್ತಿದ್ದರೂ ಪ್ರಕೃತಿಗೆ ತನ್ನ ಋಣವನ್ನು ತೀರಿಸುವ ಕಿಂಚಿತ್ತು ಪ್ರಯತ್ನ ಮಾಡುತ್ತಿಲ್ಲ ಎಂದು ‘ಗ್ರೀನ್ ಹೀರೋ ಆಫ್ ಇಂಡಿಯಾ’ ಖ್ಯಾತಿಯ ಆರ್.ಕೆ. ನಾಯರ್ ಅಭಿಪ್ರಾಯಪಟ್ಟರು. ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರೋಸ್ಟ್ರಮ್ ಸ್ಪೀಕರ್ಸ್ ಕ್ಲಬ್ ಹಾಗೂ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಸೋಮವಾರ ನಡೆದ “ಮೈ ಪ್ಲಾನೆಟ್, ಮೈ ಪ್ರೈಡ್” ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಭಾರತದ ಭಾಷಾ ವೈವಿಧ್ಯತೆ ಮತ್ತು ಜೀವ ವೈವಿಧ್ಯತೆಯನ್ನು ಹೋಲಿಕೆ ಮಾಡಿದ ನಾಯರ್, ವಿವಿಧ ಭಾಷೆಗಳು ಹೇಗೆ ಪರಸ್ಪರ ಸಹಬಾಳ್ವೆಯಿಂದ ಬೆಳೆಯುತ್ತವೆಯೋ, ಅದೇ ರೀತಿ ಪರಿಸರ ವ್ಯವಸ್ಥೆಯೂ ವೈವಿಧ್ಯತೆ ಮತ್ತು ಪರಸ್ಪರ ಅವಲಂಬನೆಯ ಮೇಲೆ ನಿಂತಿದೆ. ನಾವು ಉಸಿರಾಡುವ ಗಾಳಿ, ಕುಡಿಯುವ ನೀರು, ಬೆಟ್ಟಗಳು, ನದಿಗಳು, ಕಾಡುಗಳು ಹಾಗೂ ಜೀವಜಗತ್ತು ಯಾವುದನ್ನೂ ಮಾನವ ಸೃಷ್ಟಿಸಿಲ್ಲ. ಇವೆಲ್ಲವೂ ಪ್ರಕೃತಿಯ ಕೊಡುಗೆಗಳು ಎಂದರು.ತಮ್ಮ ಪರಿಸರ ಯೋಜನೆಗಳ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕಂಟೇನ‌ರ್ ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ ಸವಾರ ಮೃತಪಟ್ಟ ಘಟನೆ ಸೋಮವಾರ ಸಂಜೆ ಕೋಟೇಶ್ವರ-ಹಾಲಾಡಿ ರಸ್ತೆಯ ಅಂಡರ್‌ಪಾಸ್‌ ಸಮೀಪದಲ್ಲಿ ನಡೆದಿದೆ. ಮೃತರನ್ನು ಕೋಟೇಶ್ವರ ಮಾರ್ಕೋಡು ನಿವಾಸಿ ಪ್ರದೀಪ್‌ ಪೂಜಾರಿ (35) ಎಂದು ಗುರುತಿಸಲಾಗಿದೆ. ಅವರು ಗಾರೆ ಕೆಲಸ ಮಾಡಿಕೊಂಡಿದ್ದರು. ಉಡುಪಿ ಕಡೆಯಿಂದ ಬಂದಿದ್ದ ಬೃಹತ್ ಕಂಟೇನರ್ ಲಾರಿಯೊಂದು ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯ ಅಂಡರ್‌ಪಾಸ್‌ ಬಳಿ ಯು-ಟರ್ನ್ ಪಡೆಯಲು ಮುಂದಕ್ಕೆ ಸಾಗುತ್ತಿದ್ದ ವೇಳೆ, ಪೇಟೆ ಕಡೆಯಿಂದ ಹಾಲಾಡಿ ರಸ್ತೆಗೆ ತೆರಳುತ್ತಿದ್ದ ಬೈಕ್‌ಗೆ ಢಿಕ್ಕಿ ಹೊಡೆದಿದ್ದು, ಢಿಕ್ಕಿಯ ಪರಿಣಾಮ ಬೈಕ್‌ ಸಹಿತ ಕೆಳಗೆ ಬಿದ್ದ ಪ್ರದೀಪ್‌ ಪೂಜಾರಿ ಅವರ ಮೇಲೆ ಲಾರಿ ಹರಿದ ಪರಿಣಾಮ ಗಂಭೀರ ಗಾಯಗೊಂಡು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಕುಂದಾಪುರ ಸಂಚಾರಿ ಠಾಣೆಯ ಪೊಲೀಸ್‌ ಉಪ ನಿರೀಕ್ಷಕ ಅನೂಪ್ ನಾಯಕ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ., ಈ ಬಗ್ಗೆ ಕುಂದಾಪುರ…

Read More