Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲಾದ್ಯಂತ ಮುಂಗಾರು ಪೂರ್ವ ಮಳೆ ಅಬ್ಬರಿಸಿದೆ. ಸೋಮವಾರ ರಾತ್ರಿ ಲಘುವಾಗಿ ಆರಂಭಗೊಂಡ ಮಳೆ ಮಂಗಳವಾರ ಹಾಗೂ ಗುರುವಾರ ಬೆಳಗ್ಗಿನಿಂದ ಎಡೆಬಿಡದೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಮಂಗಳವಾರ ಬೆಳಿಗ್ಗೆಯಿಂದ ಮಧ್ಯಾಹ್ನ ತನಕ ಎಡಬಿಡದೆ ಸುರಿದ ಮಳೆ ಮಧ್ಯಾಹ್ನದ ಬಳಿಕ ವಿರಾಮದಲ್ಲಿ ಬಿಳತೊಡಗಿತ್ತು. ಮಂಗಳವಾರ ರಾತ್ರಿ ಹಾಗೂ ಬುಧವಾರ ಬೆಳಿಗ್ಗೆ ನಿರಂತರ ಮಳೆಯಾಗಿದೆ. ಕುಂದಾಪುರದಲ್ಲಿ ಹೆದ್ದಾರಿ ಹಾಗೂ ಸರ್ವಿಸ್ ರಸ್ತೆಗಳು ನೀರುಮಯವಾಗಿದ್ದು ಸುಗಮ ವಾಹನ ಸಂಚಾರಕ್ಕೆ ಅಡೆತಡೆ ಎದುರಾಗಿದೆ. ಬಸ್ರೂರು ಮೂರುಕೈ ಬಳಿ ಹಾಗೂ ಟಿಟಿ ರಸ್ತೆ ಮುಂಭಾಗದ ಸರ್ವಿಸ್ ರಸ್ತೆಯಲ್ಲಿ ನೀರು ನಿಂತು ಅಡೆಚಣೆ ಉಂಟಾಯಿತು. ತೆಕ್ಕಟ್ಟೆ ಜಂಕ್ಷನ್‌ನಲ್ಲಿ ಹೆದ್ದಾರಿ ಬದಿ ಹೊಳೆಯಂತಾಗಿದ್ದು ಕುಂದಾಪುರ ವಿನಾಯಕ ಪ್ರೈವುಡ್ ಅಂಗಡಿ ಎದುರು ಸರ್ವಿಸ್ ರಸ್ತೆ ಮಳೆ ನೀರಿನಲ್ಲಿ ಮುಳುಗಡೆಯಾಗಿದೆ. ಬೈಂದೂರು-ರಾಣಿಬೆನ್ನೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕೊಲ್ಲೂರು ದೇವಸ್ಥಾನ ಎದುರು ಹಾದು ಹೋಗುತ್ತಿದ್ದು ಇಲ್ಲಿ ನಡೆಯುತ್ತಿರುವ ಅವೈಜ್ಞಾನಿಕ, ನಿಧಾನಗತಿ ಕಾಮಗಾರಿಯಿಂದಾಗಿ ವಾಹನ ಸವಾರರು ಮತ್ತು ಭಕ್ತಾಧಿಗಳು ಪರಿತಪಿಸುವಂತಾಗಿದೆ. ದೇವಸ್ಥಾನದ ಎದುರೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಇಡೂರು-ಕುಂಜ್ಞಾಡಿ ಗ್ರಾಮದ ಜನ್ನಾಲ್ ರಾಜ್ಯ ಹೆದ್ದಾರಿಯಲ್ಲಿ ಮಿನಿ ಗೂಡ್ಸ್ ವಾಹನ ಆಲ್ಟೋ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ಮೃತಪಟ್ಟ ಘಟನೆ ಇತ್ತೀಚಿಗೆ ನಡೆದಿದೆ. ಕೊಲ್ಲೂರಿನಿಂದ ಕುಂದಾಪುರದ ಕಡೆಗೆ ಸಾಗುತ್ತಿದ್ದ ಮಿನಿ ಗೂಡ್ಸ್ ವಾಹನ ಆಲ್ಟೋ ಕಾರಿಗೆ ಎದುರಿನಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ಜೋಸ್ ಪಿಟಿ ಯಾನೆ ರಿನ್ನೊ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಯ ಬಗ್ಗೆ ಇಲ್ಲಿನ ಖಾಸಗಿ ಆಸ್ಪತ್ರೆಗೆ ಕರೆತರಲಾಗಿದ್ದು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ಹೇಳಿದ್ದಾರೆ. ಕಾರಿನಲ್ಲಿ ಪ್ರಯಣಿಸುತ್ತಿದ್ದ ತ್ರೇಸಿಯಮ್ಮ ಯಾನೆ ಶಾಂತಿ ಗಂಭೀರ ಗಾಯಗೊಂಡಿದ್ದು, ಅವರನ್ನು ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಮಿನಿ ಗೂಡ್ಸ್ ವಾಹನ ಚಾಲಕ ಶಬರೀಶ ಕೂಡ ಗಾಯಗೊಂಡಿದ್ದು, ಅವರು ಒಳರೋಗಿಯಾಗಿ ದಾಖಲಾಗಿದ್ದಾರೆ. ಈ ಬಗ್ಗೆ ಕೊಲ್ಲೂರು ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೈಂದೂರಿನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನ ಐ.ಟಿ.ಐ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ವೆಬ್‌ಸೈಟ್ www.cite.karnataka.gov.in ಮೂಲಕ ಅಥವಾ ಸಂಸ್ಥೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಎಲೆಕ್ಟ್ರೀಷಿಯನ್, ಫಿಟ್ಟರ್, ಮೆಕ್ಯಾನಿಕ್ ಎಲೆಕ್ಟಿçಕ್ ವೆಹಿಕಲ್, ಸಿ.ಎನ್.ಸಿ ಮೆಷಿನಿಂಗ್ ಟೆಕ್ನಿಷಿಯನ್, ವರ್ಚುಯಲ್ ಅನಾಲಿಸಿಸ್ ಅಂಡ್ ಡಿಸೈನರ್ – ಎಫ್.ಇ.ಎಮ್, ಇಂಡಸ್ಟ್ರೀಯಲ್ ರೊಬೋಟಿಕ್ಸ್ ಅಂಡ್ ಡಿಜಿಟಲ್ ಮ್ಯಾನ್ಯುಫ್ಯಾಕ್ಚರಿಂಗ್ ಟೆಕ್ನಿಷಿಯನ್, ಮ್ಯಾನ್ಯುಫ್ಯಾಕ್ಚರಿಂಗ್ ಪ್ರೊಸೆಸ್ ಕಂಟ್ರೋಲ್ ಅಂಡ್ ಆಟೋಮೇಷನ್ ಹಾಗೂ ಎಂಜಿನಿಯರಿಂಗ್ ಡಿಸೈನ್ ಟೆಕ್ನಿಷಿಯನ್ ಕೋರ್ಸುಗಳು ಲಭ್ಯವಿದ್ದು, ಅರ್ಜಿ ಸಲ್ಲಿಸಲು ಮೇ 28 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಬೈಂದೂರು ದೂ.ಸಂಖ್ಯೆ : 08254-251009 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಇಡೂರು ಕುಂಜ್ಞಾಡಿ ನಿವಾಸಿ ಲಕ್ಷ್ಮೀ ಅವರ ಮನೆಗೆ ನುಗ್ಗಿದ ಕಳ್ಳರು ಕಪಾಟಿನಲ್ಲಿಟ್ಟಿದ್ದ 16 ಗ್ರಾಂ ತೂಕದ 2 ಚಿನ್ನದ ಬಳೆ ಹಾಗೂ ದೇವರ ಕೋಣೆಯ ಡಬ್ಬಿಯಲ್ಲಿದ್ದ ಚಿಲ್ಲರೆ ಹಣವನ್ನು ಕದ್ದಿದ್ದಾರೆ. ಲಕ್ಷ್ಮೀ ಅವರು ಮೇ. 16ರಂದು ಮನೆಗೆ ಬೀಗ ಹಾಕಿ ಕಾರ್ಯನಿಮಿತ್ತ ಬೇರೆಡೆಗೆ ತೆರಳಿದವರು ಮೇ. 19ರಂದು ಮರಳಿ ಬಂದು ನೋಡಿದಾಗ ಮನೆಯೊಳಗಿನ ಸೊತ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಪರಿಶೀಲಿಸಿದಾಗ ಕಳ್ಳರು ಛಾವಣಿಯ ಹೆಂಚನ್ನು ತೆಗೆದು ಒಳಪ್ರವೇಶಿಸಿ ಕೃತ್ಯ ಎಸಗಿರುವುದು ಕಂಡು ಬಂದಿತು. ಸುಮಾರು 80 ಸಾವಿರ ರೂ. ಮೌಲ್ಯದ ಸೊತ್ತು ಕಳವಾಗಿದೆ ಎಂದು ಕೊಲ್ಲೂರು ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ  ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ಪಿ.ಯು.ಸಿ, ಐ.ಟಿ.ಐ ಹಾಗೂ ಡಿಪ್ಲೋಮಾ ವ್ಯಾಸಾಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in/bcwd ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 20 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8050770004, 8050770005 ಅಥವಾ ಇಲಾಖೆಯ ವೆಬ್‌ಸೈಟ್ https://bcwd.karnataka.gov.in/ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಈಗಾಗಲೇ ಪ್ರಸಕ್ತ ಸಾಲಿನ ಮುಂಗಾರು ಮಳೆ ಪ್ರಾರಂಭವಾಗಿದ್ದು, ಈ ಸಂಧರ್ಭದಲ್ಲಿ ಗುಡುಗು-ಸಿಡಿಲಿನಿಂದ ಹಾಗೂ ಗಾಳಿ-ಮಳೆಯಿಂದ ಸಾರ್ವಜನಿಕ ಮತ್ತು ಜಾನುವಾರು ಪ್ರಾಣಹಾನಿಯಾಗುವ ಸಂಭವವಿರುತ್ತದೆ. ಈ ಹಿಂದಿನ ಸಾಲಿನಲ್ಲಿ ಗುಡುಗು-ಸಿಡಿಲಿನಿಂದ ಮತ್ತು ಗಾಳಿ-ಮಳೆಯಿಂದ ಅಧಿಕ ಪ್ರಮಾಣದಲ್ಲಿ ಜಾನುವಾರು ಹಾಗೂ ಮಾನವ ಹಾನಿ ಸಂಭವಿಸಿದ್ದು, ಅದನ್ನು ತಡೆಗಟ್ಟಲು ಪ್ರಸ್ತುತ ಸಾಲಿನಲ್ಲಿ ಸಾರ್ವಜನಿಕರು ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಹಾಗೂ ಜಿಲ್ಲಾ ಪ್ರಾಧಿಕಾರದಿಂದ ಹೊರಡಿಸುವ ಮುನ್ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಮತ್ತು ಅಂತಹ ಸಂಧರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಆದಷ್ಟೂ ಮನೆಯಲ್ಲಿಯೇ ಇದ್ದು, ಯಾವುದೇ ಅನಾಹುತವಾಗದಂತೆ ಮುನ್ನೆಚ್ಚರಿಕೆ ಕ್ರಮವನ್ನು ವಹಿಸಬೇಕು. ಇದರಿಂದ ಸಂಭವಿಸಬಹುದಾದ ಮಾನವ ಹಾಗೂ ಜಾನುವಾರು ಹಾನಿಯನ್ನು ತಡೆಗಟ್ಟಲು ಸಾಧ್ಯ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರಾಜ್ಯದಲ್ಲಿ ಪ್ರಥಮ ಬಾರಿಗೆ ಆರಂಭಿಸಲಾದ ‘ಡಿಜಿ ಮತ್ತು ಐಜಿಪಿ ಪ್ರಶಂಸಾ ಪದಕ’ 2024-25ನೇ ಸಾಲಿನ ಪ್ರಶಸ್ತಿಗೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ. ಅರುಣ್ ಸೇರಿದಂತೆ ಜಿಲ್ಲೆಯ ನಾಲ್ವರು ಪೊಲೀಸರು ಭಾಜನರಾಗಿದ್ದಾರೆ. ಮಲ್ಪೆ ಕರಾವಳಿ ಕಾವಲು ಪೊಲೀಸ್ನ ಎಸ್ಸೈ ವೈಲೆಟ್ ಫೆಮಿನಾ, ಕುಂದಾಪುರ ಸಂಚಾರ ಪೊಲೀಸ್ ಠಾಣೆಯ ಹೆಡ್‌ ಕಾನ್ಸ್‌ಟೇಬಲ್‌ ಗುರುದಾಸ್, ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆರ್ಮ್ಡ್ ಹೆಡ್ ಕಾನ್ಸ್‌ಟೇಬಲ್ ಸಂತೋಷ್ ಗುಲ್ವಾಡಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಈ ಪದಕವನ್ನು ಮೇ 21ರಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಭಾರತೀಯ ಪ್ರವಾಸಿ ಪರಿಷತ್ ಕುವೈಟ್‌ (ಕರ್ನಾಟಕ ಘಟಕ) ಇದರ ಕರುನಾಡ ಡಿಂಡಿಮ – 2025 ಕಾರ್ಯಕ್ರಮಕ್ಕಾಗಿ ಯಕ್ಷ ಧೀಂಕಿಟ, ಕುವೈಟ್‌ ಯಕ್ಷಗಾನ ತಂಡದ ವತಿಯಿಂದ ಯಕ್ಷಗಾನ ರಂಗಸ್ಥಳ ಮಾದರಿ ಗಮನ ಸೆಳೆಯಿತು. ಈ ಸಂದರ್ಭದಲ್ಲಿ ಕುವೈಟ್‌ ನಿವಾಸಿ ಸುರೇಶ್ ಶ್ಯಾಮ್ ರಾವ್ ನೇರಂಬಳ್ಳಿ ಅವರು ಚಕ್ರತಾಳವನ್ನು  ಹಾಗೂ ರಫೀಕುದ್ದೀನ್ ಮಡಂತ್ಯಾರು ಚಂಡೆಯನ್ನು ನುಡಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವ್ಯಕ್ತಿಯೋರ್ವ ತಮ್ಮದೇ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದ ಘಟನೆ ತಾಲೂಕಿನ ಕುಂಭಾಶಿ ಆನೆಗುಡ್ಡೆ ದೇವಸ್ಥಾನದ ಸಮೀಪ ನಡೆದಿದೆ. ಬೊಬ್ಬೆ ಕೇಳಿದ ಸ್ಥಳೀಯರು ಕೂಡಲೇ ಕುಂದಾಪುರದ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಸುಮಾರು 30 ಅಡಿ ಆಳದ ಬಾವಿಗೆ ಇಳಿದು ವ್ಯಕ್ತಿಯನ್ನು ರಕ್ಷಣೆ ಮಾಡಿದ್ದಾರೆ. ಅಗ್ನಿಶಾಮಕ ಇಲಾಖೆಯ ಸಿಬ್ಬಂದಿಗಳ ಕಾರ್ಯಕ್ಕೆ ಭಾರೀ ಪ್ರಶಂಸೆ ವ್ಯಕ್ತವಾಗಿದೆ. ಕಾರ್ಯಾಚರಣೆಯಲ್ಲಿ ಅಗ್ನಿಶಾಮಕದ ಠಾಣಾಧಿಕಾರಿ ವಿ. ಸುಂದರ ನೇತೃತ್ವದಲ್ಲಿ ಕಾಜಾಹುಸೇನ್, ಸಚಿನ್, ರಿಯಾಜ್ ಹಾಗೂ ಸುಂದರ್ ಪಾಲ್ಗೊಂಡಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ವೈಯಕ್ತಿಕ ವಿಚಾರಗಳನ್ನು ಮೀರಿದ ಸಂಬಂಧವೇರ್ಪಡಿಸಿ ನಮ್ಮನ್ನು ಒಂದುಗೂಡಿಸುವ ಶಕ್ತಿ ಕಲೆ ಮತ್ತು ಸಾಹಿತ್ಯಕ್ಕಿದೆ. ತಾಯಿಯಂತಹ ಕರುಣೆ ಮತ್ತು ಮಗುವಿನಂತಹ ನಿಷ್ಕಪಟ ದೃಷ್ಠಿಯಿಂದ ನೋಡಿದರೆ ನಮಗೆ ಜಗತ್ತು ಸುಂದರ ಹಾಗೂ ಸನಿಹವಾಗುತ್ತದೆ. ಜಾತಿ, ಮತ, ಅಂತಸ್ತುಗಳ ನರಕದಿಂದ ಮೇಲೆತ್ತುವ ಸಾಮರ್ಥ್ಯ ಕೂಡ ಕಲೆಗಿದೆ ಎಂದು ಸುರಭಿ ಅಧ್ಯಕ್ಷ ಆನಂದ ಮದ್ದೋಡಿ ಹೇಳಿದರು. ಅವರುಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ನಟರಾಜ ಡಾನ್ಸ್ ಕಂಪೆನಿಯ ಮೂರನೇ ವರ್ಷದ ಸಮ್ಮರ್ ಕ್ಯಾಂಪ್‌ನ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಬೈಂದೂರು ಸಿಟಿ ಅಧ್ಯಕ್ಷ ರಾಜು ಮೊಗವೀರ ಮಾತನಾಡಿ, ಎಲ್ಲರೂ ಒಟ್ಟಾಗಿ ಕಲೆತು ಭಾಗವಹಿಸುವ ಇಂತಹ ಬೇಸಿಗೆ ಶಿಬಿರಗಳು ಮಕ್ಕಳಲ್ಲಿ ಏಕತಾ ಭಾವನೆ ಮೂಡಿಸುತ್ತದೆ. ಬದುಕಿನಲ್ಲಿ ದೊರೆತ ಇಂತಹ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕಾಗಿರುವುದು ನಮ್ಮೆಲ್ಲರ ಜವಬ್ದಾರಿಯಾಗಿದೆ. ಕ್ರೀಯಾತ್ಮಕ ಚಿಂತನೆಗಳಿಂದ ಹೊಸತನ ಕಾಣಲು ಸಾಧ್ಯವಿದೆ. ಕಲೆ, ಶಿಕ್ಷಣ ಎಲ್ಲದರ ಮೂಲ ಉದ್ದೇಶ ಸಮಾಜವನ್ನು ಪ್ರಗತಿಯತ್ತ ಕೊಂಡೊಯ್ಯುವುದಾಗಿದೆ ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಪ್ರಗತಿಯ ಬಗ್ಗೆ…

Read More