Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇತ್ತೀಚೆಗೆ ನಡೆದ ನೀಟ್ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಘಟನೆಗಳು ಅತ್ಯಂತ ದುರದೃಷ್ಟಕರ ಮತ್ತು ಯಾರೂ ಸಹಿಸಲಾಗದ್ದು. ಲಕ್ಷಾಂತರ ಶ್ರಮಜೀವಿ ವಿದ್ಯಾರ್ಥಿಗಳು ಈ ಲೋಪಗಳಿಂದಾಗಿ ಸಂಕಟ ಅನುಭವಿಸಿದ ಬಗ್ಗೆ ನಮಗೆ ತೀವ್ರ ನೋವು ಹಾಗೂ ಸಂವೇದನೆ ಇದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಭಾರತ ಸರ್ಕಾರವು ಈಗಾಗಲೇ ಪಾರದರ್ಶಕತೆ ತರಲು ಕಠಿಣ ಕಾನೂನುಗಳು ಹಾಗೂ ಸಮಗ್ರ ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ. ಹೀಗಿರುವಾಗ, ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಅವರ ರಾಜೀನಾಮೆಗೆ ಆಗ್ರಹಿಸುತ್ತಿರುವ ಮಾಜಿ ಶಾಸಕರಾದ ಗೋಪಾಲ್ ಪೂಜಾರಿ ಅವರ ಹೇಳಿಕೆಯು ಕೇವಲ ಅಗ್ಗದ ಪ್ರಚಾರ ಹಾಗೂ ರಾಜಕೀಯ ಅವಕಾಶವಾದಿತನವಾಗಿದೆ ಎಂದು ಕರ್ನಾಟಕ ಬಿಜೆಪಿಯ ರಾಜ್ಯ ಮಾಧ್ಯಮ ಸಮಿತಿ ಸದಸ್ಯ ಹಾಗೂ ಮಾಧ್ಯಮ ವಕ್ತಾರ ರತನ್ ರಮೇಶ್ ಪೂಜಾರಿ ಟೀಕಿಸಿದ್ದಾರೆ. ಕೇಂದ್ರ ಸರಕಾರ ನಾವು ವಿದ್ಯಾರ್ಥಿಗಳ ಪರವಾಗಿ ದೃಢವಾಗಿ ನಿಲ್ಲುತ್ತೇವೆ ಮತ್ತು ಈ ಕೃತ್ಯಕ್ಕೆ ಕಾರಣರಾದವರು ಕಾನೂನಿನ ಸಂಪೂರ್ಣ ಶಿಕ್ಷೆಯನ್ನು ಎದುರಿಸಲೇಬೇಕು.ಸೋರಿಕೆಯಲ್ಲಿ ಭಾಗಿಯಾದ ತಪ್ಪಿತಸ್ಥರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಡಿಕ್ಕಿಯಾಗಿ ಪಾದಚಾರಿ ಸಾವನ್ನಪ್ಪಿದ ಘಟನೆ ನಡೆದಿದೆ. ಉಪ್ಪುಂದ ಗ್ರಾಮದ ಹೊಳೆಬಾಗಿಲು ಬೈಲುಮನೆಯ ಮಾಚ ದೇವಾಡಿಗ ಎಂಬುವವರು ಮೃತ ದುರ್ದೈವಿ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ತೀರಾ ಎಡಕ್ಕೆ ಚಲಾಯಿಸಿದ್ದರಿಂದ ರಸ್ತೆ ಬದಿಯ ಪುಟ್‌ಪಾತಿಗೆಗೆ ಡಿಕ್ಕಿಯಾಗಿ, ನಂತರ ಅಲ್ಲೇ ಮುಂದೆ ರಸ್ತೆ ದಾಟಲು ನಿಂತಿದ್ದ ಮಾಚ ದೇವಾಡಿಗರಿಗೆ ಕಾರು ಡಿಕ್ಕಿಯಾಗಿದೆ. ಕಾರು ಡಿಕ್ಕಿಯ ರಭಸಕ್ಕೆ ಮಾಚ ಅವರು ಸ್ವಲ್ಪ ದೂರಕ್ಕೆ ರಸ್ತೆಗೆ ಎಸೆಯಲ್ಪಟ್ಟು ರಸ್ತೆಯ ಮೇಲೆ ಕವಚಿ ಬಿದ್ದಿದ್ದು, ಪರಿಣಾಮ ಅವರ ಮುಖಕ್ಕೆ ಹಾಗೂ ದೇಹದ ಇತರ ಭಾಗಗಳಿಗೆ ಗಂಬೀರ ಗಾಯವಾಗಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮಾಚ ದೇವಾಡಿಗ ಅವರು ಸ್ವಸಹಾಯ ಸಂಘದ ಹಣವನ್ನು ಕಟ್ಟಲು ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಸ್ಥಳೀಯರು ತಕ್ಷಣದ ಸ್ಪಂದಿಸಿ ಮೃತದೇಹವನ್ನು ಸಾಗಿಸುವ ವ್ಯವಸ್ಥೆ ಮಾಡಿದರು. ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಆಫಘಾತದ ಬಗ್ಗೆ ಬೈಂದೂರು ಪೊಲೀಸ್‌ ಠಾಣೆಯಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ವಿಪ್ರ ಮಹಿಳಾ ಸಾಲಿಗ್ರಾಮ ವಲಯದ ವತಿಯಿಂದ ಗಮ್ಮತ್ತಿನ ಆಷಾಢ’ ಆಡಿ ಚುರ್ಕಾಪ ನೆನ್ಪ್ ಹೊತ್ಕಾಹೋಪ ಎಂಬ ಕಾರ್ಯಕ್ರಮವನ್ನು ಭಾನುವಾರ ಅನಘಾಮೃತ ಗೃಹದಲ್ಲಿ ಆಯೋಜಿಸಲಾಗಿದೆ. ಈ ವಿಶೇಷ ಸೌಹಾರ್ದ ಕೂಟವು ಕುಂದಾಪ್ರ ಭಾಷಿ ಬದ್ಕಿನ್ ಹೆಂಗ್ಸ್ರಿದ್ದಲ್ಲ್ ಮಾತ್, ಮಾತಿದ್ದಲ್ಲ್ ಖುಷಿ, ಖುಷಿಯಿದ್ದಲ್ಲ ಆರೋಗ್ಯ ಆರೋಗ್ಯಯಿದ್ದಲ್ಲ್ ನೆಮ್ಮದಿ ಎಂಬ ಗೆಡ್ಜ್, ಗೌಜ್, ಗಮ್ಮತ್ ಅಲ್ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಕೊಚ್ಚಕ್ಕಿ ಕೂಳ್ ಹುರುಳಿ ಸಾರ್’ ಮುಂತಾದ ಸಾಂಪ್ರದಾಯಿಕ ಆಹಾರ ಪದಾರ್ಥಗಳ ಸವಿಯೊಂದಿಗೆ, ಹೊಟ್ಟೆ ತುಂಬಾ ಉಣ್ಣುವಾ, ಬಾಯಿ ತುಂಬಾ ನಗಾಡ್ವಾ” ಎಂಬ ಸಂದೇಶದೊಂದಿಗೆ ಸಮುದಾಯವನ್ನು ಒಗ್ಗೂಡಿಸುವ ವೇದಿಕೆ ಕಲ್ಪಿಸಿತು. ಕಾರ್ಯಕ್ರಮದಲ್ಲಿ ಕ.ಸಾ.ಪ ತಾಲೂಕು ಅಧ್ಯಕ್ಷ ಗುಂಡ್ಮಿ ರಾಮಚಂದ್ರ ಐತಾಳ್ ಆಷಾಢಿ ತಿಂಗಳ್ ಅದರ ಆಚಾರ ವಿಚಾರಗಳ ಬಗ್ಗೆ ಒಂದಷ್ಟು ವಿಪ್ರ ಮಹಿಳೆಯರನ್ನು ರಸವತ್ತಾಗಿ ಉಣಬಡಿಸಿದರು. ಗ್ರಾಮೀಣ ಕ್ರೀಡೆಗಳು,ತಿಂಡಿ ತಿನಿಸುಗಳು ವಿಶೇಷವಾಗಿ ಗಮನ ಸೆಳೆದವು. ಕ್ರೀಡೆಯಲ್ಲಿ ವಿಜೇತರಾದರಿಗೆ ಬಹುಮಾನವನ್ನು ವಿತರಿಸಲಾಯಿತು.ಸಾಂಸ್ಕೃತಿಕ ಕಾರ್ಯಕ್ರಮ ಗ್ರಾಮ್ಯ ಪ್ರಹಸನಗಳು, ಹಿಂದಿನ ಕಾಲದ ಪರಂಪರೆಗಳನ್ನು ವಿಪ್ರ ಮಹಿಳೆಯರಿಂದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕು ಯುವ ಬಂಟರ ಸಂಘದ ವತಿಯಿಂದ ನೀಡಲಾಗುವ 2026ನೇ ಸಾಲಿನ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾದೀವಿಗೆ ಯೋಜನೆಗಳ ಸಂಚಾಲಕರಾಗಿ ಪ್ರದೀಪ್ ಶೆಟ್ಟಿ ಕಾರಿಕಟ್ಟೆ ಆಯ್ಕೆಯಾಗಿದ್ದಾರೆ. ಉಪ್ಪುಂದ ಜೆಸಿಐ ಸಂಸ್ಥೆಯ ಅಧ್ಯಕ್ಷರಾಗಿ, ಬೈಂದೂರು ರೋಟರಿ ಸಂಸ್ಥೆಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುವ ಇವರು ಬೈಂದೂರು ಉತ್ಸವ, ಕುಂದಾಪುರ ಕನ್ನಡ ಪ್ರತಿಷ್ಠಾನ ಮೊದಲಾದ ಕಾರ್ಯಕ್ರಮಗಳ ಸಂಯೋಜಕರಾಗಿಯೂ ಕೆಲಸ ಮಾಡಿದ್ದಾರೆ. ಪ್ರಸ್ತುತ ಬೈಂದೂರು ಬಂಟರ ಯಾನೆ ನಾಡವರ ಸಂಘದ ಯುವ ವೇದಿಕೆಯ ಸಂಚಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜುಲೈ 31 ಕಡೆಯ ದಿನ:2026ರಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 95% ಕ್ಕಿಂತ ಅಧಿಕ ಅಂಕ ಪಡೆದ ಬಂಟ ಸಮುದಾಯದ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರ ಯೋಜನೆಗೆ ಹಾಗೂ 60%ಕ್ಕಿಂತ ಅಧಿಕ ಅಂಕ ಪಡೆದ ಸರ್ಕಾರಿ, ಅನುದಾನಿತ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ವಿದ್ಯಾದೀವಿಗೆ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 31 ಆಗಿರುತ್ತದೆ ಎಂಬುದಾಗಿ ಸಂಘದ ಅಧ್ಯಕ್ಷ ನಿತೀಶ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಮೂಡುಬಿದಿರೆ: ‘ಆಳ್ವಾಸ್ ಪ್ರಗತಿ’ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ಅತಿದೊಡ್ಡ ಉಚಿತ ಬೃಹತ್ ಉದ್ಯೋಗ ಮೇಳವಾಗಿದ್ದು, ಕಳೆದ ಎರಡು ದಶಕಗಳಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಈ ಅಭೂತಪೂರ್ವ ಉದ್ಯೋಗ ಅಭಿಯಾನವನ್ನು ನಿರಂತರವಾಗಿ ಆಯೋಜಿಸುತ್ತಿದೆ. ಇದೀಗ 16ನೇ ಆವೃತ್ತಿಯ ‘ಆಳ್ವಾಸ್ ಪ್ರಗತಿ 2026’ ಆಗಸ್ಟ್ 7 ಮತ್ತು 8 ರಂದು ಮೂಡುಬಿದಿರೆಯ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ನಡೆಯಲಿದೆ ಎಂದು ಆಳ್ವಾಸ್‌ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಮುಖ್ಯಸ್ಥ ಪ್ರಸಾದ್‌ ಶೆಟ್ಟಿ ಹೇಳಿದರು. ಅವರು ಸೋಮವಾರ ಕುಂದಾಪುರದ ಪ್ರಸ್‌ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, 2007ರಲ್ಲಿ ಆರಂಭಗೊಂಡ ‘ಆಳ್ವಾಸ್ ಪ್ರಗತಿ’ ವಿವಿಧ ಕ್ಷೇತ್ರಗಳ ಪ್ರತಿಷ್ಠಿತ ಉದ್ಯಮ ಸಂಸ್ಥೆಗಳು ಮತ್ತು ಪ್ರತಿಭಾವಂತ ಉದ್ಯೋಗಾಕಾಂಕ್ಷಿಗಳನ್ನು ಒಂದೇ ವೇದಿಕೆಯಲ್ಲಿ ಸಂಪರ್ಕಿಸುವ ರಾಜ್ಯದ ಅತ್ಯಂತ ವಿಶ್ವಾಸಾರ್ಹ ಉದ್ಯೋಗ ಮೇಳಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಾಮಾಜಿಕ ಹೊಣೆಗಾರಿಕೆ ಉಪಕ್ರಮದ ಭಾಗವಾಗಿ ಈ ಬೃಹತ್ ಉದ್ಯೋಗ ಮೇಳವನ್ನು ಸಂಪೂರ್ಣ ಉಚಿತವಾಗಿ ಆಯೋಜಿಸಲಾಗುತ್ತಿದ್ದು, ವಿಶೇಷವಾಗಿ ಗ್ರಾಮೀಣ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೆಂಗಳೂರು: ಇ-ಕಾಮರ್ಸ್ ಆಹಾರ ವಿತರಣಾ ಸಂಸ್ಥೆಗಳಾದ ಸ್ವಿಗ್ಗಿ ಹಾಗೂ ಝೊಮ್ಯಾಟೊ ವಿಧಿಸುತ್ತಿರುವ ಅತಿಯಾದ ಕಮಿಷನ್, ಅಸಮರ್ಪಕ ಪಾವತಿ ವ್ಯವಸ್ಥೆ ಹಾಗೂ ಪೂರ್ವ ಮಾಹಿತಿ ನೀಡದೆ ಏಕಾಏಕಿ ಪಾವತಿಯಲ್ಲಿ ಕಡಿತ ಮಾಡುತ್ತಿರುವ ಕ್ರಮದಿಂದ ಹೋಟೆಲ್ ಉದ್ಯಮಿಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೋಟೆಲ್ ಮಾಲೀಕರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಬೆಳವಣಿಗೆಯಿಂದ ಹೋಟೆಲ್ ಉದ್ಯಮಕ್ಕೆ ಮಾತ್ರವಲ್ಲದೆ, ಇ-ಕಾಮರ್ಸ್ ಸೇವೆಗಳ ಮೂಲಕ ಆಹಾರವನ್ನು ಆರ್ಡರ್ ಮಾಡುವ ಗ್ರಾಹಕರ ಮೇಲೆಯೂ ಹೆಚ್ಚುವರಿ ಆರ್ಥಿಕ ಹೊರೆ ಬೀಳುತ್ತಿದೆ. ಈ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚಿಸಿ, ಸೂಕ್ತ ಪರಿಹಾರ ಕ್ರಮಗಳನ್ನು ರೂಪಿಸುವ ಉದ್ದೇಶದಿಂದ ಬೆಂಗಳೂರು ಹೋಟೆಲ್ ಉದ್ಯಮಿಗಳ ಸಮಾಲೋಚನಾ ಸಭೆಯನ್ನು ಆಯೋಜಿಸಲಾಗಿದೆ. ಈ ಸಭೆಯು ರಾಜಾಜಿನಗರದ ಸ್ವಾತಿ ಹೋಟೆಲ್‌ನಲ್ಲಿ ನಡೆಯಲಿದ್ದು, ಹೋಟೆಲ್ ಉದ್ಯಮಿಗಳು, ಹಿತೈಷಿಗಳು ಹಾಗೂ ಸಂಬಂಧಿತ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹೊಟೇಲ್ ಉದ್ಯಮಿಗಳಾದ ನವೀನ್ ಶೆಟ್ಟಿ ಐರ್‌ಬೈಲು, ಅಜಿತ್ ಶೆಟ್ಟಿ ಕಿರಾಡಿ ಹಾಗೂ ಹರೀಶ್ ಶೆಟ್ಟಿ ಅರೆಶಿರೂರು ಮನವಿ ಮಾಡಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವೀರ ಸೈನಿಕರ ತ್ಯಾಗ ಮತ್ತು ಬಲಿದಾನವನ್ನು ನೆನಪಿಸುವುದರ ಜೊತೆಗೆ ದೇಶದ ಐತಿಹಾಸಿಕ ಗೆಲುವಿಗೆ ಅಭಿನಂದನೆ ಸಲ್ಲಿಸಲು ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಸಿ.ಸಿ. ಘಟಕದ ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಯಿತು. ಭಾರತೀಯ ಸೈನ್ಯದಲ್ಲಿ ಸೇವೆ ಸಲ್ಲಿಸಿದ ಯೋಧ ಯೋಗೀಶ್ ಕಾಂಚನ್ ಅವರು ಮಾತನಾಡಿ, ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತೀಯ ಸೈನಿಕರು ವಿಜಯ ಪತಾಕೆ ಹಾರಿಸಿದ ದಿನವನ್ನು ನೆನಪಿಸಿಕೊಳ್ಳುವುದು, ಸಂಭ್ರಮಿಸುವುದು ಮತ್ತ ಭಾರತೀಯ ಸೈನ್ಯದ ಶೌರ್ಯ ಸಾಹಸವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವುದು ನಮ್ಮ ಕರ್ತವ್ಯ ಎಂದರು. ಇದೇ ಸಂದರ್ಭ ವಿದ್ಯಾರ್ಥಿಗಳು ದೇಶ ಪ್ರೇಮದ ಭಾವನೆಯನ್ನು ಎಲ್ಲಾ ನೆಲೆಯಲ್ಲಿಯೂ ಬೆಳೆಸಿಕೊಳ್ಳಬೇಕಾಗಿರುವುದು ವರ್ತಮಾನದ ತುರ್ತು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ವಹಿಸಿದ್ದರು. ಎನ್.ಸಿ.ಸಿ. ಕೇರ್ ಟೇಕರ್ ಶ್ರೀ ತಿಮ್ಮಪ್ಪ ಡಿ.ಎಸ್. ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಯೋಜಕರಾದ ANO Lt. ಹರೀಶ್ ಬಿ. ಸ್ವಾಗತಿಸಿದರು. ಎನ್.ಸಿ.ಸಿ. ಕೆಡೆಟ್‌ಗಳಾದ ಸಿಂಚನಾ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪ್ರಧಾನಿ ನರೇಂದ್ರ ಮೋದಿ ಅವರ 136ನೇ “ಮನ್ ಕೀ ಬಾತ್” ಕಾರ್ಯಕ್ರಮದ ನೇರ ಪ್ರಸಾರವನ್ನು ಭಾನುವಾರ ಉಡುಪಿ ಜಿಲ್ಲೆಯ ಕುಂದಾಪುರ ವಿಧಾನಸಭಾ ಕ್ಷೇತ್ರದ ಐರೋಡಿಯಲ್ಲಿ ಸಾಮೂಹಿಕವಾಗಿ ವೀಕ್ಷಿಸಲಾಯಿತು. ಮನ್ ಕೀ ಬಾತ್ ಮೂಲಕ ಪ್ರಧಾನಿಯವರು ದೇಶದ ಮೂಲೆ ಮೂಲೆಗಳಲ್ಲಿನ ಸಕಾರಾತ್ಮಕ ಬದಲಾವಣೆಗಳನ್ನು ಜನರೊಂದಿಗೆ ಹಂಚಿಕೊಳ್ಳುತ್ತಿದ್ದಾರೆ. ಇದು ನಮ್ಮ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ತುಂಬಿದೆ ಎಂದು ಶಾಸಕ ಕಿರಣ್ ಕುಮಾರ್ ಕೊಡ್ಗಿ ತಿಳಿಸಿದರು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷೆ ಜ್ಯೋತಿ ಉದಯ ಪೂಜಾರಿ ಅವರ ನಿವಾಸದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಹಾಗೂ ಕುಂದಾಪುರ ಬಿಜೆಪಿ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಮತ್ತು ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ ಎಸ್ ಅವರು ಮನ್ ಕೀ ಬಾತ್ ವೀಕ್ಷಣೆ ಮಾಡಿದರು. ಕಾರ್ಯಕ್ರಮದಲ್ಲಿ ಪ್ರಧಾನಿಯವರು ದೇಶದ ವಿವಿಧ ಕ್ಷೇತ್ರಗಳ ಸಾಧನೆಗಳು, ಜನಸಾಮಾನ್ಯರ ಕಥೆಗಳು ಮತ್ತು ರಾಷ್ಟ್ರ ನಿರ್ಮಾಣದ ಕುರಿತು ನೀಡಿದ ಸಂದೇಶವನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಕರ್ನಾಟಕ ರಾಜ್ಯ ಬರಹಗಾರರ ಸಂಘ ರಿ. ಹೂವಿನ ಹಡಗಲಿ ವತಿಯಿಂದ ಕೊಡಲ್ಪಡುವ ಕಾವ್ಯಶ್ರೀ ಪ್ರಶಸ್ತಿಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಹಾಗೂ ಲೇಖಕರಾದ ನರೇಂದ್ರ ಎಸ್. ಗಂಗೊಳ್ಳಿ ಆಯ್ಕೆಯಾಗಿರುತ್ತಾರೆ. ವೈವಿಧ್ಯಮಯ ವಿಚಾರಗಳ ಲೇಖಕರಾಗಿ ಗುರುತಿಸಿಕೊಂಡಿರುವ ಹಾಗು ಹೇಳದೆ ಹೋದ ಮಗಳಿಗೆ, ನಾಯಿ ನಾನು, ನಿಭ್ರತ, ರೂಮಿನೊಳಗಿಂದ ಸೇರಿದಂತೆ ಒಟ್ಟು ಏಳು ಕೃತಿಗಳನ್ನು ಹೊರತಂದಿರುವ ನರೇಂದ್ರ ಎಸ್ ಗಂಗೊಳ್ಳಿ ಅವರ ಮುಂದಿನ ಕೃತಿ ಅವಳ ಕೂಗು ಬಿಡುಗಡೆಯ ತಯಾರಿಯಲ್ಲಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಯೋಜಿಸುವ ರಾಷ್ಟ್ರಮಟ್ಟದ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವ ಆಳ್ವಾಸ್ ನುಡಿಸಿರಿ–ವಿರಾಸತ್‌ನ್ನು ಮುಂಬರುವ ವರ್ಷದ ಜನವರಿಯಲ್ಲಿ ಆಯೋಜಿಸಲು ತೀರ್ಮಾನಿಸಲಾಯಿತು. ಈ ಹಿನ್ನೆಲೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವರವರ ಸ್ವಗೃಹದಲ್ಲಿ ನಡೆದ ಪ್ರಥಮ ಸಮಾಲೋಚನಾ ಸಭೆಯಲ್ಲಿ, ಈ ಬಾರಿ ಆಳ್ವಾಸ್ ನುಡಿಸಿರಿ ಹಾಗೂ ಆಳ್ವಾಸ್ ವಿರಾಸತ್ ಉತ್ಸವಗಳನ್ನು ಒಂದೇ ವೇಳೆಯಲ್ಲಿ ಅದ್ದೂರಿಯಾಗಿ ಆಯೋಜಿಸುವ ಕುರಿತು ನಿರ್ಧಾರ ಕೈಗೊಳ್ಳಲಾಯಿತು. ಪ್ರಾಸ್ತಾವಿಕವಾಗಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ಪ್ರತಿವರ್ಷವೂ ಹೊಸ ಆಲೋಚನೆ, ಹೊಸ ಪರಿಕಲ್ಪನೆ ಮತ್ತು ಹೊಸ ತಲೆಮಾರಿನ ಭಾಗವಹಿಸುವಿಕೆಗೆ ಆದ್ಯತೆ ನೀಡುತ್ತಾ ಉತ್ಸವವನ್ನು ವಿಸ್ತರಿಸುತ್ತಿದ್ದೇವೆ. ಜನವರಿಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ನಮ್ಮ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಅನಾವರಣಗೊಳಿಸುವುದರ ಜೊತೆಗೆ, ಯುವಜನತೆ, ಕನ್ನಡದ ಭವಿಷ್ಯ, ದೇಶೀಯತೆ, ಪರಿಸರ ಸಂರಕ್ಷಣೆ ಹಾಗೂ ಸಹಬಾಳ್ವೆಯಂತಹ ಸಮಕಾಲೀನ ವಿಷಯಗಳ ಕುರಿತು ಗಂಭೀರ ಚರ್ಚೆಗಳಿಗೆ ವೇದಿಕೆ ಕಲ್ಪಿಸಲಾಗುವುದು ಎಂದು ತಿಳಿಸಿದರು. ಸಮಾಜದ…

Read More