ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಹಿಂದಿನ ನಮ್ಮ ಹಿರಿಯರು ನೀಡಿದ ಆಹಾರ ಕ್ರಮಗಳನ್ನು ಬಿಟ್ಟು ಆಧುನಿಕ ಆಹಾರ ಪದ್ಧತಿಗೆ ಒಗ್ಗಿಕೊಳ್ಳುತ್ತಿರುವುದು ಬೇಸರದ ಸಂಗತಿ ಅದರಲ್ಲೂ ಇಂದಿನ ಮಕ್ಕಳು ಜಂಕ್ ಪುಡ್ ಸೇವನೆಯಿಂದ ಹಲವಾರು ಖಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ ಎಂದು ಕೋಟ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಮಾಧವ ಪೈ ಹೇಳಿದರು. ಅವರು ಶನಿವಾರ ತೆಕ್ಕಟ್ಟೆ ಕುವೆಂಪು ಮಾದರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೋಟದ ಪಂಚವರ್ಣ ಮಹಿಳಾ ಮಂಡದ ನೇತೃತ್ವದಲ್ಲಿ ಮಾತೃ ಸಂಸ್ಥೆ ಪಂಚವರ್ಣ ಯುವಕ ಮಂಡಲದ ಮಾರ್ಗದರ್ಶನದಲ್ಲಿ ಅರಿವು ನಿಮ್ಮಗಿರಲಿ ನೆರವು ಆರೋಗ್ಯ ಮಾಹಿತಿ 14ನೇ ಸರಣಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಸೊಪ್ಪು ತರಕಾರಿಗಳನ್ನು ಹೆಚ್ಚು ಸೇವಿಸುವುದರ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಿ ಆರೋಗ್ಯದ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮವನ್ನು ಸಮಾಜಸೇವಕ ಮಲ್ಯಾಡಿ ಶಿವರಾಮ ಶೆಟ್ಟಿ ಉದ್ಘಾಟಿಸಿ ಪಂಚವರ್ಣ ಸಂಘಟನೆಯ ಸಾಮಾಜಿಕ ಕಾರ್ಯವನ್ನು ಪ್ರಶಂಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ ಮತ್ತು ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗ ಗಂಗೊಳ್ಳಿ ಇದರ ವತಿಯಿಂದ ಮಕ್ಕಳಿಗೆ ಉಚಿತ ನೋಟ್ಸ್ ಪುಸ್ತಕ ಹಾಗೂ ಶೈಕ್ಷಣಿಕ ಪರಿಕರಗಳನ್ನು ಗಂಗೊಳ್ಳಿಯ ಮಲ್ಯರಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ವಿತರಿಸಲಾಯಿತು. ಮಲ್ಯರಬೆಟ್ಟು ಅಂಗನವಾಡಿಯ ಪ್ರಾರಂಭೋತ್ಸವವನ್ನು ಅಂಗನವಾಡಿಯ ಬಾಲವಿಕಾಸ ಸಮಿತಿ ಅಧ್ಯಕ್ಷೆ ಅನಿತಾ ಖಾರ್ವಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಅಂಗನವಾಡಿಗೆ ಆಗಮಿಸಿದ ಪುಟಾಣಿಗಳಿಗೆ ತಿಲಕವನ್ನಿಟ್ಟು ಆರತಿ ಬೆಳಗಿಸಿ ಸಿಹಿತಿಂಡಿ ನೀಡಿ ಸ್ವಾಗತಿಸಲಾಯಿತು. ಬಿಲ್ಲವರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಜಿ. ಗೋಪಾಲ ಬಿಲ್ಲವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಗ್ರಾಪಂ ಅಧ್ಯಕ್ಷೆ ಜಯಂತಿ ಖಾರ್ವಿ ಅವರು ಪುಸ್ತಕಗಳನ್ನು ಮಕ್ಕಳಿಗೆ ವಿತರಿಸಿ ಶುಭ ಹಾರೈಸಿದರು. ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ಸಮಿತ್ರಾ ಜಿ., ಜಿ.ಈಶ್ವರ, ವೀಣಾ, ಶೋಭಾ, ನಿಹಾಪ್, ರೋಶನಮೀನ್ ಚೌಗುಲೆ, ಅಬೀರಾ, ಕೃಷ್ಣ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು. ಅನಿತಾ ಖಾರ್ವಿ ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆ ರೇಖಾ ಖಾರ್ವಿ ಕಾರ್ಯಕ್ರಮ ನಿರ್ವಹಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಕಾನೂನು ಕಾಲೇಜಿನ ವತಿಯಿಂದ ಮಂಗಳೂರು ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಆಯ್ಕೆಯಾದ ಜಗದೀಶ್ ಶೇಣವ ಹಾಗೂ ಮೂಡುಬಿದಿರೆ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಆಯ್ಕೆಯಾದ ಶರತ್ ಶೆಟ್ಟಿ ಅವರಿಗೆ ಸನ್ಮಾನ ಕಾರ್ಯಕ್ರಮ ಶನಿವಾರ ವಿದ್ಯಾಗಿರಿಯ ಕುವೆಂಪು ಸಭಾಂಗಣದಲ್ಲಿ ನಡೆಯಿತು. ಇಲ್ಲಿ ಬಾಹ್ಯಕಾಶವೇ ಮಿತಿ:ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಮಂಗಳೂರು ಬಾರ್ ಅಸೋಸಿಯೇಷನ್ ಅಧ್ಯಕ್ಷ ಜಗದೀಶ್ ಶೇಣವ ವಕೀಲ ವೃತ್ತಿಯಲ್ಲಿ ದೊರೆಯುವ ಹೆಸರು, ಗೌರವ ಮತ್ತು ಆರ್ಥಿಕ ಯಶಸ್ಸು ಬೇರೆ ಯಾವ ಕ್ಷೇತ್ರಗಳಲ್ಲೂ ಸಿಗಲಾರದು. ಇಲ್ಲಿ ಆಕಾಶವಲ್ಲ, ಬಾಹ್ಯಾಕಾಶವೇ ನಮ್ಮ ಮಿತಿ ಎಂದರು. ಮೂರನೇ ಚುನಾವಣೆಯಲ್ಲಿ ಗೆಲುವು:ವಿದ್ಯಾರ್ಥಿ ಜೀವನದಲ್ಲಿ ಕಾಲೇಜು ನಾಯಕತ್ವ ಚುನಾವಣೆಯಲ್ಲಿ ಸ್ಪರ್ಧಿಸಿದ್ದೆ. ಬಳಿಕ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆಯನ್ನು ಎದುರಿಸಿದ್ದೆ. ಇದೀಗ ಮಂಗಳೂರು ಬಾರ್ ಅಸೋಸಿಯೇಷನ್ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗುವ ಮೂಲಕ ಮೂರನೇ ಪ್ರಮುಖ ಚುನಾವಣೆಯಲ್ಲಿ ಯಶಸ್ಸು ಕಂಡಿದ್ದೇನೆ. ತಾನು ಮೂಲತಃ ವೈದ್ಯನಾಗುವ ಕನಸು ಕಂಡಿದ್ದೆ. ಆದರೆ ಪಿಸಿಎಂಬಿ ವಿಭಾಗದಲ್ಲಿ ಅನುತ್ತೀರ್ಣನಾದ ಬಳಿಕ ಕಲಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರದ ಗಣಕ ವಿಜ್ಞಾನ ವಿಭಾಗದ ಆಶ್ರಯದಲ್ಲಿ “ಜೀವನ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಾಸ” ಕುರಿತ ಕಾರ್ಯಾಗಾರವು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿ MSDC ಮಣಿಪಾಲದ ಐ.ಟಿ. ಕೌಶಲ್ಯ ತರಬೇತುದಾರರಾದ ಸಾವಿತ್ರಿ ಪ್ರಭು ಅವರು ಜೀವನ ಕೌಶಲ್ಯಗಳ ಮಹತ್ವ ಕುರಿತು ತಿಳಿಸಿ, ತಾಂತ್ರಿಕ ಕೌಶಲ್ಯಗಳೊಂದಿಗೆ ಜೀವನ ಕೌಶಲ್ಯಗಳನ್ನು ವರ್ಧಿಸಿಕೊಳ್ಳುವುದು ವರ್ತಮಾನದ ತುರ್ತು ಎಂದರು. ವಿದ್ಯಾರ್ಥಿಗಳ ಉದ್ಯೋಗಾರ್ಹತೆ ಮತ್ತು ವೈಯಕ್ತಿಕ ಬೆಳವಣಿಗೆಗಾಗಿ ಇಂತಹ ಅಭಿವೃದ್ಧಿ ಕಾರ್ಯಕ್ರಮಗಳನ್ನು ಸಂಸ್ಥೆ ನಿರಂತರವಾಗಿ ಆಯೋಜಿಸಿಕೊಂಡು ಬರುತ್ತಿದೆ. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ವಿಭಾಗದ ಮುಖ್ಯಸ್ಥ ಮಹೇಶ್ ಕುಮಾರ್ ಹಾಗೂ ವಿಭಾಗದ ಪ್ರಾಧ್ಯಾಪಕರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ತ್ರಿಷಾ ವಂದಿಸಿ, ಯಕ್ಷಿತಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಕಂದಾಯ, ಸರ್ವೇ ಹಾಗೂ ಅರಣ್ಯ ಇಲಾಖೆ ಸಹಿತ ಇನ್ನಿತರ ಇಲಾಖೆಗಳ ಹಂತದಲ್ಲಿ ಹಲವು ಸಮಯಗಳಿಂದ ಬಾಕಿ ಇರುವ ಕಡತಗಳ ವಿಲೇವಾರಿ ಕುರಿತು ಕುಂದಾಪುರ ಉಪ ವಿಭಾಗಾಧಿಕಾರಿಗಳ ಉಪಸ್ಥಿತಿಯಲ್ಲಿ ಬೈಂದೂರು ತಾಲೂಕು ಕಚೇರಿ ಕೋರ್ಟ್ ಹಾಲ್ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಇಲಾಖೆಗಳ ವಿವಿಧ ವಿಭಾಗಗಳಲ್ಲಿ ಹಲವು ತಿಂಗಳಿಂದ ಬಾಕಿ ಇರುವ ಕಡತಗಳ ತ್ವರಿತ ವಿಲೇವಾರಿ ಮಾಡಲು ಸೂಚನೆ ನೀಡಿದರು. ಅಕ್ರಮ ಸಕ್ರಮ ಅರ್ಜಿಗಳನ್ನು ತಂತ್ರಾಂಶದಲ್ಲಿ ಅಳವಡಿಸಲು ಕ್ರಮ:ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 179 ಅರ್ಜಿಗಳು ಬಗರ್ ಹುಕುಂ ತಂತ್ರಾಂಶದಲ್ಲಿ ಸೇರಿಸಲು ಬಾಕಿ ಇದ್ದು ಇದರಿಂದ ಅರ್ಹ ಫಲಾನುಭವಿಗಳು ಯೋಜನೆಯ ಸೌಲಭ್ಯದಿಂದ ವಂಚಿತರಾಗುತ್ತಿರುವ ಕಾರಣ ಸದರಿ ಅರ್ಜಿಗಳನ್ನು ತಂತ್ರಾಂಶದಲ್ಲಿ ಅಳವಡಿಸಲು ತಹಶೀಲ್ದಾರರಿಗೆ ಸೂಚನೆ ನೀಡಿದರು. ಪ್ಲಾಟಿಂಗ್ ಸಮಸ್ಯೆ ನಿವಾರಣೆಗೆ ಪ್ರಕ್ರಿಯೆ ಚುರುಕುಗೊಳಿಸಿ:ಜಡ್ಕಲ್ ಹಾಗೂ ಮುದೂರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಮಣೂರು ಸ್ನೇಹಕೂಟ, ಶ್ರೀರಾಮ ಭಜನಾ ಮಂಡಳಿ ಮಣೂರು, ಸ್ತೋತ್ರ ಪಠಣ ಸಂಘ ಮಣೂರು ಮತ್ತು ಮಣೂರು ಪರಿಸರದ ಮಹಿಳೆಯರಿಂದ ಅಧಿಕ ಜೇಷ್ಠ ಮಾಸ (ಪುರುಷೋತ್ತಮ ಮಾಸ)ದ ಪ್ರಯುಕ್ತ ಶ್ರೀ ಲಕ್ಷ್ಮಿ ಶೋಭಾನ ಪಠಣ ಹಾಗೂ ಹರಿನಾಮ ಸಂಕೀರ್ತನೆ ಕಾರ್ಯಕ್ರಮ ಗುರುವಾರ ಮಣೂರು ಮಹಾಲಿಂಗೇಶ್ವರ ದೇಗುಲದಲ್ಲಿ ಹಮ್ಮಿಕೊಂಡಿತು. ಮಹಾಲಿಂಗೇಶ್ವರ ದೇವಸ್ಥಾನದ ಹೇರಂಭ ಕಲಾ ವೇದಿಕೆಯಲ್ಲಿ ಅಧಿಕಮಾಸದ ನಾಲ್ಕು ವಾರಗಳಲ್ಲಿ ನಡೆಸಲಾದ ಈ ವಿಶೇಷ ಕಾರ್ಯಕ್ರಮದ ಸಮಾರೋಪ ಕಾರ್ಯಕ್ರಮವನ್ನು ಮಣೂರು ದೇಗುಲದ ಅಧ್ಯಕ್ಷ ಸತೀಶ್ ಹೆಚ್. ಕುಂದರ್ ಉಪಸ್ಥಿತಿಯಲ್ಲಿ ಸಂಪನ್ನಗೊಳಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸ್ನೇಹಕೂಟದ ಅಧ್ಯಕ್ಷ ಭಾರತಿ ವಿ ಮಯ್ಯ ಅವರು ಅಧಿಕ ಮಾಸದ ಬಗ್ಗೆ ಮಾಹಿತಿಯನ್ನು ನೀಡಿದರು.ಇದೇ ವೇಳೆ ದೇಗುಲದ ವತಿಯಿಂದ ಭಾಗವಹಿಸಿದ ಸರ್ವ ಸದಸ್ಯರಿಗೆ ಅಭಿನಂದನೆ ಸಲ್ಲಿಸಿತು. ಸಂಘದ ಮುಖ್ಯಸ್ಥೆ ಭಾರತಿ ಮಯ್ಯ ಅವರಿಗೆ ದೇವಸ್ಥಾನದ ವತಿಯಿಂದ ಸ್ಮರಣೆಕೆಯನ್ನು ನೀಡಿ ಗೌರವಿಸಲಾಯಿತು. ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರಾದ ಅಚ್ಯುತಹಂದೆ, ಸುಫಲ ಶೆಟ್ಟಿ ಹಾಗೂ ಊರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಪ್ರಾಥಮಿಕ ಹಾಗೂ ಪೂರ್ವಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳ ಪಾಲಕ/ಪೋಷಕರಿಗಾಗಿ ಓರಿಯೆಂಟೇಶನ್ ಪ್ರೋಗ್ರಾಂ ಅನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಶೈಕ್ಷಣಿಕ ಸಾಧನೆಗಳು, ಐಸಿಎಸ್‌ಇ ಪಠ್ಯಕ್ರಮದ ವೈಶಿಷ್ಟ್ಯಗಳು, ಮೌಲ್ಯಮಾಪನ ಮತ್ತು ಪರೀಕ್ಷಾ ಪದ್ಧತಿ, ವಿದ್ಯಾರ್ಥಿಗಳ ಅಭ್ಯಾಸ ಕ್ರಮ, ಶಿಸ್ತು ಮತ್ತು ವರ್ತನೆ, ಸಮವಸ್ತ್ರ, ಸಮತೋಲಿತ ಆಹಾರ ಪದ್ಧತಿ, ಶಾಲೆಯಲ್ಲಿ ಒದಗಿಸಲಾಗುವ ಇತರ ಸೌಲಭ್ಯಗಳು, ಶಾಲಾ ಡೈರಿಯ ಅಗತ್ಯತೆ ಮತ್ತು ಅನುಕೂಲತೆಯ ಕುರಿತು ಶಿಕ್ಷಕಿಯರಾದ ರೂಪಾ ಜೆ, ಸ್ವಾತಿ, ದೀಪಾ ಹಾಗೂ ರೇಷ್ಮಾ ಅವರು ಸವಿಸ್ತಾರವಾಗಿ ಮಾಹಿತಿಯನ್ನು ಪಾಲಕರೊಂದಿಗೆ ಹಂಚಿಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರ ಅವರು ಮಾತನಾಡಿ, ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಮಕ್ಕಳ ಲಾಲನೆ-ಪಾಲನೆಯಲ್ಲಿ ಹಲವರು ನೀಡುವ ಸಲಹೆಗಳನ್ನು ವಿವೇಚನೆಯಿಂದ ಪರಿಗಣಿಸಿ, ಅವರ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗುವ ಸಲಹೆಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಬಾಲಕಾರ್ಮಿಕ ಪದ್ಧತಿಯು ಸಮಾಜದ ಅನಿಷ್ಠ ಪದ್ಧತಿಗಳಲ್ಲಿ ಒಂದಾಗಿದ್ದು, ಇದು ಮಕ್ಕಳು ತಮ್ಮ ಬಾಲ್ಯಾವಸ್ಥೆಯನ್ನು ಸವಿಯುವುದನ್ನು ಮೊಟಕುಗೊಳಿಸುವುದರ ಜೊತೆಗೆ ಶಿಕ್ಷಣ ವಂಚಿತರನ್ನಾಗಿ ಮಾಡುತ್ತದೆ. ಬಾಲಕಾರ್ಮಿಕ ಪದ್ಧತಿಯನ್ನು ತಳ ಮಟ್ಟದಲ್ಲಿ ನಿರ್ಮೂಲನೆ ಮಾಡುವ ಮೂಲಕ ಉಡುಪಿಯನ್ನು ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬರೂ ಪಣ ತೊಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಮ್. ಪುರುಷೋತ್ತಮ್ ಹೇಳಿದರು. ಅವರು ಶುಕ್ರವಾರ ನಗರದ ಮಣಿಪಾಲದ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಕ್ಕಳು ತಮ್ಮ ಬಾಲ್ಯವನ್ನು ಮುಕ್ತವಾಗಿ ಅನುಭವಿಸಲು ಹಾಗೂ ಅವರುಗಳ ರಕ್ಷಣೆಗಾಗಿ ಸಂವಿಧಾನವು ಅನೇಕ ಕಾನೂನು ಹಾಗೂ ಕಾಯಿದೆಗಳನ್ನು ಜಾರಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮೂಡಬಿದಿರೆಯ ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೆಜ್‌ಮೆಂಟ್ ಇಲ್ಲಿ ಪ್ರಸಕ್ತ ಸಾಲಿನ ಜುಲೈ 1 ರಿಂದ ಪ್ರಾರಂಭವಾಗುವ 6 ತಿಂಗಳ ಅವಧಿಯ ರೆಗ್ಯುಲರ್ ಮತ್ತು ದೂರಶಿಕ್ಷಣ “ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್” ಪ್ರವೇಶಾತಿಗಾಗಿ ಹತ್ತನೇ ತರಗತಿ ಉತ್ತೀರ್ಣರಾದ ಸಾಮಾನ್ಯ ಹಾಗೂ ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳಿಂದ ಮತ್ತು ಎಲ್ಲಾ ವಿವಿಧ ಸಹಕಾರ ಸಂಘ/ಬ್ಯಾಂಕ್‌ಗಳ ಉದ್ಯೋಗಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಲು ಕೊನೆಯ ದಿನ ಜೂನ್ 30. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08258-236561, 7022429440, 8971361396 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಇನ್ಸಿಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್‌ನ ಪ್ರಾಂಶುಪಾಲರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಟ್ರೀಸ್ ಯೋಜನೆಯಲ್ಲಿ ಸಳ್ಕೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ಇವರ ಸಿಎಸ್ಆರ್ ನಿಧಿಯಿಂದ ನಿರ್ಮಿಸಿರುವ ನೂತನ ಬಾಲಕಿಯರ ಹೈಟೆಕ್ ಶೌಚಾಲಯದ ಉದ್ಘಾಟನೆ ಹಾಗೂ ಕೋಡ್ ಕ್ರಾಫ್ಟ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಇವರ ಸಿಎಸ್ಆರ್ ನಿಧಿಯಿಂದ ನೀಡಿದ ನೂತನ ಶಾಲಾ ಬಸ್ ಇದರ ಹಸ್ತಾಂತರ ಕಾರ್ಯಕ್ರಮವನ್ನು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ನೆರವೇರಿಸಿದರು. ಇದರ ಜೊತೆಗೆ ಜಿಲ್ಲಾ ಪಂಚಾಯತ್ ಅನುದಾನ 2025-26 ವತಿಯಿಂದ ಶಾಲೆಯಲ್ಲಿ ನಿರ್ಮಿಸಿದ ಬಾಲವನ ಹಾಗೂ ದ್ವಿಭಾಷ (ಕನ್ನಡ /ಇಂಗ್ಲಿಷ್ ) ಮಾಧ್ಯಮ ಇದರ ಉದ್ಘಾಟನೆ ನೆರವೇರಿಸಿ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಪಠ್ಯಪುಸ್ತಕಗಳನ್ನು ಶಾಸಕರು ವಿತರಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರಿ. ಇವರ ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಗಿಡ ನೆಡುವುದರ ಮೂಲಕ ಶಾಸಕರು ಚಾಲನೆ ನೀಡಿದರು. ಉದ್ಘಾಟನೆ ನೆರವೇರಿಸಿ ಮಾತನಾಡಿದ ಶಾಸಕರು ಶಿಕ್ಷಕರು, ಪೋಷಕರು ಹಾಗೂ ಗ್ರಾಮಸ್ಥರ ಒಗ್ಗಟ್ಟು ಇಂತಹ…
