Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಹಳ್ಳಿಯ ಎಲ್ಲ ಮಕ್ಕಳಿಗೂ ಶಿಕ್ಷಣ ಸಿಗಬೇಕು. ಆಗ ಮಾತ್ರ ಗಾಂಧಿ ಕಂಡ ಕನಸ್ಸು ಸಾರ್ಥಕತೆ ಪಡೆಯುತ್ತದೆ.ಹಳ್ಳಿಯ ಪ್ರತಿ ಮಗು ಸಮಾಜದ ಮುಖ್ಯ ವಾಹಿನಿಗೆ ಬರಲು ನಾವೆಲ್ಲಾ ಶ್ರಮಿಸಬೇಕು. ವಿದ್ಯಾರ್ಥಿಗಳು ಕೂಡ ವೀರ ಯೋಧರ ತ್ಯಾಗ ಸ್ಮರಿಸಿ ಅವರ ಆದರ್ಶ ಗಳನ್ನುತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಹೇಳಿದರು. ಅವರು ಹೆಮ್ಮಾಡಿಯ ಜನತಾ ಪಿಯು ಕಾಲೇಜು ಹಾಗೂ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲೀಷ್ ಮಿಡಿಯಂ ಸ್ಕೂಲ್ ಇವರ ಆಸರೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ-ಜನತಾ ವಿರಾಟ್ ಕಾರ್ಯಕ್ರಮದಲ್ಲಿ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಬೆಳಿಗ್ಗೆ ನಡೆದ ದ್ವಜಾರೋಹಣ ಕಾರ್ಯಕ್ರಮದಲ್ಲಿ ವಿವಿವಿ ಮಂಡಳಿಯ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಗೋಪಾಲ ಪೂಜಾರಿ ಅವರು ಧ್ವಜಾರೋಹಣಗೈದು ದೇಶ ಭಕ್ತಿ, ದೇಶ ಪ್ರೇಮ ಬೆಳಿಸಿಕೊಂಡು ಆದರ್ಶ ವ್ಯಕ್ತಿಗಳಾಗಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸಾಧಕರಿಗೆ ಸನ್ಮಾನ:ಕಾರ್ಯಕ್ರಮದಲ್ಲಿ  ನಿವೃತ್ತ ಯೋಧರಾದ ಚಂದ್ರಶೇಖರ ನಾವುಡ, ಪ್ರಗತಿ ಪರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೆಸಾ ಶಿಕ್ಷಣ ಸಂಸ್ಥೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿ ಹಾಗೂ ದೇಶಭಕ್ತಿಯಿಂದ ಕೂಡಿದ ಭಾವಭರಿತ ವಾತಾವರಣದಲ್ಲಿ ಆಚರಿಸಲಾಯಿತು. ಈ ಆಚರಣೆಯ ಮುಖ್ಯ ಅತಿಥಿಯಾಗಿ ಕುಂದಾಪುರ ವೃತ್ತ ನಿರೀಕ್ಷಕರಾದ ಜಯರಾಮ್ ಸಿ. ಗೌಡ ಅವರು ಆಗಮಿಸಿ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣದ ಬಳಿಕ, ವಿದ್ಯಾರ್ಥಿಗಳಿಂದ ಶಿಸ್ತುಬದ್ಧವಾದ ಪಥಸಂಚಲನ ನಡೆಯಿತು. ಪಥಸಂಚಲನದ ಗೌರವರಕ್ಷೆಯನ್ನು ಧ್ವಜಾರೋಹಣಗೈದ ಜಯರಾಮ್ ಸಿ.ಗೌಡ ಸ್ವೀಕರಿಸಿದರು. ನಂತರ ಅವರು ವಿದ್ಯಾರ್ಥಿಗಳೊಂದಿಗೆ ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಿ, ವಿದ್ಯಾರ್ಥಿಗಳಿಗೆ ದೇಶಭಕ್ತಿಯ ಮೌಲ್ಯಗಳನ್ನು ಅಂಗೀಕರಿಸುವಂತೆ ಪ್ರೇರಣೆಯ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಸ್ಥಾಪಕರು, ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು, ಉಪನ್ಯಾಸಕರು, ಶಿಕ್ಷಕರು ಮತ್ತು ಶಿಕ್ಷಕಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಧ್ವಜಾರೋಹಣದ ನಂತರ, ಪೂರ್ವ ಪ್ರಾಥಮಿಕ ಹಾಗೂ ಕಿರಿಯ ಪ್ರಾಥಮಿಕ ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರರ ವೇಷಧಾರಣೆ ಮಾಡಿಕೊಂಡು ಏಕಪಾತ್ರಾಭಿನಯವನ್ನು ಅತ್ಯಂತ ಮನೋಜ್ಞವಾಗಿ ಮಾಡಿದರು. ಅದೇ ರೀತಿಯಲ್ಲಿ, ಕಿರಿಯ ಪ್ರಾಥಮಿಕ ವಿಭಾಗದಿಂದ ಹಿಡಿದು ಪದವಿ ಪೂರ್ವ ವಿಭಾಗದವರೆಗೆ ವಿಭಾಗವಾರು ಒಂದೊಂದು ವಿದ್ಯಾರ್ಥಿಗಳನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಹಿಂದು ಜಾಗರಣ ವೇದಿಕೆ ಇದರ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಪಂಜಿನ ಮೆರವಣಿಗೆ ಗಂಗೊಳ್ಳಿಯಲ್ಲಿ ಗುರುವಾರ ಸಂಜೆ ನಡೆಯಿತು. ಗಂಗೊಳ್ಳಿ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಮಾಜಿಕ ಕಾರ್ಯಕರ್ತ ವಿಜಯ ಕೊಡವೂರು ದಿಕ್ಸೂಚಿ ಭಾಷಣ ಮಾಡಿ, ಈ ಹಿಂದಿನ ಕಹಿ ನೆನಪುಗಳನ್ನು ಮುಂದಿನ ಪೀಳಿಗೆಗೆ ಕೊಡಬೇಕು, ನೆನಪಿಡಬೇಕು ಮತ್ತು ಜಾಗೃತರಾಗಿರಬೇಕು ಎಂಬ ಉದ್ದೇಶದಿಂದ ಪ್ರತಿ ವರ್ಷ ಅಖಂಡ ಭಾರತ ಸಂಕಲ್ಪ ಕಾರ್ಯಕ್ರಮವನ್ನು ಮಾಡುತ್ತಾ ಬಂದಿದ್ದೇವೆ. ತುಂಡಾಗಿರುವ ಹಿಂದುಗಳನ್ನು ಮತ್ತೆ ಜೋಡಿಸಬೇಕು, ತುಂಡಾಗಿರುವ ಭೂಪ್ರದೇಶವನ್ನು ಮತ್ತೆ ಜೋಡಿಸಬೇಕು, ನೆನಪು ಹೋಗಿರುವ ಹಿಂದುಗಳನ್ನು ಮತ್ತೆ ಸೇರಿಸಬೇಕು, ನಿದ್ರೆಯಲ್ಲಿರುವ ಹಿಂದುಗಳನ್ನು ಮತ್ತೆ ನೆನಪು ಮಾಡಿಸಿ ಜಾಗೃತಿ ಮಾಡಿಸಬೇಕು, ನೋವುಂಡ ಹಿಂದುಗಳನ್ನು ಮತ್ತೆ ಜಾಗೃತಿ ಮಾಡಬೇಕು ಎಂಬ ಉದ್ದೇಶ ಈ ಕಾರ್ಯಕ್ರಮದ ಹಿಂದಿದೆ ಎಂದು ಹೇಳಿದರು. ನಮ್ಮ ದೇಶದ ಮೇಲೆ ಅದೆಷ್ಟೋ ಅಕ್ರಮಣಗಳು ನಡೆದಿದ್ದರೂ, ದೇವಸ್ಥಾನದ ವಿಗ್ರಹಗಳನ್ನು ಭಗ್ನ ಮಾಡಿದ್ದರೂ, ಅತ್ಯಾಚಾರಗಳು ನಡೆದಿದ್ದರೂ, ಸಾವಿರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ಬಿಕಾಂ ಮತ್ತು ಬಿಬಿಎ ವಿದ್ಯಾರ್ಥಿಗಳಿಂದ ಗುಲ್ವಾಡಿಯ ಪ್ರಭಾಕಿರಣ್ ಟೈಲ್ ವರ್ಕ್ಸ್ ಗೆ ಕೈಗಾರಿಕಾ ಭೇಟಿ ನೀಡಲಾಯಿತು. ಸಂಸ್ಥೆಯು ವಿಸ್ತರಣಾ ಚಟುವಟಿಕೆ ಭಾಗವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ವಿದ್ಯಾರ್ಥಿಗಳು ಕೈಗಾರಿಕಾ ಪ್ರಕ್ರಿಯೆಗಳ ನೇರ ಅನುಭವ ಪಡೆದುಕೊಂಡರು. ಟೈಲ್ಸ್ ಉತ್ಪಾದನಾ ಪ್ರಕ್ರಿಯೆ, ಉಪಕರಣಗಳ ಬಳಕೆ ಹಾಗೂ ನಿರ್ವಹಣೆಯ ಕುರಿತು ಪ್ರಾಯೋಗಿಕ ಜ್ಞಾನವನ್ನು ಪಡೆದುಕೊಂಡರು. ಅಲ್ಲದೆ ಇದರಿಂದ ವಾಣಿಜ್ಯ ಜ್ಞಾನವನ್ನು ವಿಸ್ತರಿಸಿ ಕೊಳ್ಳುವುದರ ಮೂಲಕ ಕೈಗಾರಿಕಾ ಕ್ಷೇತ್ರದ ನೈಜ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡರು. ಕಾಲೇಜಿನ ಉಪ ಪ್ರಾಂಶುಪಾಲರಾದ ಜಯಶೀಲ್ ಕುಮಾರ್, ವಾಣಿಜ್ಯ ಮತ್ತು ಆಡಳಿತ ವಿಭಾಗದ ಮುಖ್ಯಸ್ಥರಾದ ಅರ್ಚನಾ ಉಪಾಧ್ಯ ಹಾಗೂ ವಾಣಿಜ್ಯಶಾಸ್ತ್ರ ಉಪನ್ಯಾಸಕಿ ನಿಧಿ, ಕಾರ್ಖಾನೆಯ ವ್ಯವಸ್ಥಾಪಕರಾದ ರಾಜು ಅವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕೊಲ್ಲೂರು ಗ್ರಾಮದ ಕಲ್ಯಾಣಿಗುಡ್ಡೆ ಎಂಬಲ್ಲಿ ನಡೆದ ಜಾಗ ಮತ್ತು ಮನೆ ಧ್ವಂಸ ಪ್ರಕರಣದ ಸಂತ್ರಸ್ಥೆ ಗಂಗೆ ಕೊರಗರವರ ಕುಟುಂಬಕ್ಕೆ ಪುನರ್ವಸತಿಗಾಗಿ ಹತ್ತು ಸೆಂಟ್ಸ್ ಜಾಗದ ಹಕ್ಕು ಪತ್ರ ಮತ್ತು ಮನೆ ಮಂಜೂರಾತಿ ಪತ್ರವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್‌ ಅವರು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಕಾರ್ಯಗಾರದಲ್ಲಿ ವಿತರಿಸಿದರು. ಸಮಾರಂಭದ ವೇದಿಕೆಯಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.,  ಜಿಲ್ಲಾ ಪಂಚಾಯಿತ್ ಸಿಇಒ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಅಭಿದ್ ಗದ್ಯಾಳ್, ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಹರಿರಾಮ್ ಶಂಕರ್ ಸೇರಿದಂತೆ ಹಲವು ಮಂದಿ ಗಣ್ಯರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಮುದಾಯದ ಬೆಂಬಲವಾಗಿ ಕೊರಗ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಸುಶೀಲ ನಾಡ, ಒಕ್ಕೂಟದ ಸಂಯೋಜಕರಾದ ಪುತ್ರನ್ ಹೆಬ್ರಿ, ನರಸಿಂಹ ಪೆರ್ಡೂರು, ಶೋಭಾ ನಾಡ ಮತ್ತು ಶುಭ ನಾಡ ಭಾಗವಹಿಸಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರಾಜ್ಯದ 4ರಿಂದ 5ಸಾವಿರ ಅಂಗನವಾಡಿಗಳಲ್ಲಿ ಶೀಘ್ರವೇ ಎಲ್‌ಕೆಜಿ/ಯುಕೆಜಿ ತರಗತಿಗಳನ್ನು ಆರಂಭಿಸಲಾಗುವುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ. ಅವರು ಶುಕ್ರವಾರ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಎಲ್‌ಕೆಜಿ/ಯುಕೆಜಿ ತರಗತಿ ನಡೆಸಲು 10,000 ಅಂಗನವಾಡಿ ಕೇಂದ್ರಗಳನ್ನು ಗುರುತಿಸಿದ್ದು, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಎಲ್‌ಜಿ/ಯುಕೆಜಿ ತರಗತಿಗಳನ್ನು ಎಲ್ಲಾ ಕೇಂದ್ರಗಳಿಗೂ ವಿಸ್ತರಿಸಲಾಗುವುದು ಎಂದರು. ಪಂಚ ಗ್ಯಾರಂಟಿ ಯೋಜನೆಯಿಂದ ನಾಡ ಜನರ ಕಷ್ಟ ಕಾರ್ಪಣ್ಯ ತಗ್ಗಿದೆ. ಘನತೆಯ ಬದುಕು ಕಟ್ಟಿಕೊಳ್ಳಲು ಆಸರೆಯಾಗಿದೆ. ಪ್ರತಿಯೊಬ್ಬ ನಾಗರಿಕನೂ ಸಮಾಜದಲ್ಲಿ ಆತ್ಮಗೌರವದಿಂದ ಬಾಳಲು ಯಾರ ಮುಂದೆಯೂ ಕೈಚಾಚದಂತೆ ಬದುಕಿನ ಪ್ರಾಥಮಿಕ ಅಗತ್ಯವನ್ನು ಪೂರೈಸುತ್ತಿದೆ ಎಂದು ಅವರು ಹೇಳಿದರು. ಭೂ ಕುಸಿತ ತಡೆಗೆ ಶಾಶ್ವತ ತಡೆಗೋಡೆ ನಿರ್ಮಿಸಲು ಎನ್‌ಡಿಆರ್‌ಎಫ್ ಮಿಟಿ ಗೇಶನ್ ಯೋಜನೆಯಡಿ 30 ಕೋಟಿ ರೂ. ಕಾಮಗಾರಿ ಪ್ರಸ್ತಾವನೆ ಕೇಂದ್ರಕ್ಕೆ ಸಲ್ಲಿಸಲಾಗಿದೆ. ಸಮುದ್ರ ಕೊರೆತ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಾರ್ವಜನಿಕರ ಹಿತದೃಷ್ಟಿಯಿಂದ ಉಡುಪಿ ನಗರ, ಗ್ರಾಮೀಣ ಪ್ರದೇಶ ಹಾಗೂ ಗಡಿ ಭಾಗಗಳಲ್ಲಿ ಸಿಸಿಟಿವಿ ಅವಳಡಿಕೆಗೆ ಮುಂದಾಗಿರುವ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಅವರು ಉಡುಪಿ ಚೆಂಬರ್ ಆಫ್ ಕಾಮರ್ಸ್ ಸಹಕಾರದೊಂದಿಗೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜಿಲ್ಲೆಯಾದ್ಯಂತ ಅಳವಡಿಸಲು ಉದ್ದೇಶಿಸಲಾಗಿರುವ ಶ್ಯೇನ ದೃಷ್ಟಿ (ಸಿಸಿಟಿವಿ ಅಳವಡಿಕೆ) ಕೇಂದ್ರಕ್ಕೆ ಉಡುಪಿ ಸರ್ವೀಸ್ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಿ ಮಾತನಾಡಿ, ಸಿಸಿಟಿವಿ ಅಳವಡಿಕೆಯಿಂದ ಜಿಲ್ಲೆಯಲ್ಲಿ ಅಹಿತಕರ ಘಟನೆಗಳನ್ನು ತಡೆಗಟ್ಟಬಹುದು ಎಂದರು. ಜಿಲ್ಲೆಯ 207 ಜಂಕ್ಷನ್‌ಗಳಲ್ಲಿ 621 ನೈಟ್ ವಿಸನ್ ಕ್ಯಾಮೆರಾಗಳು ಮತ್ತು 10 ಜಿಲ್ಲಾ ಗಡಿ ರಸ್ತೆಗಳಲ್ಲಿ 20 ಸ್ವಯಂಚಾಲಿತ ನಂಬರ್ ಪ್ಲೇಟ್ ರೀಡರ್ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ. ಈ ಯೋಜನೆಗೆ ಸುಮಾರು 2.50 ರಿಂದ 3 ಕೋಟಿ ರೂಪಾಯಿ ವೆಚ್ಚವಾಗುತ್ತಿದ್ದು, ಇದನ್ನು ಸಂಪೂರ್ಣವಾಗಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ದೇಶ ಸೇವೆಗೆ ಹಲವು ದಾರಿಗಳಿರಬಹುದು ಆದರೆ ಸೇನೆಗೆ ಸೇರಿಕೊಳ್ಳುವ ಮೂಲಕ ಯುವ ಜನತೆ ದೇಶದ ಭದ್ರತೆಗೆ ಮುನ್ನುಡಿ ಬರಯಬೇಕು ಎಂದು ವಾಯುಸೇನೆಯ ನಿವೃತ್ತ ಅಧಿಕಾರಿ ಗುಂಡ್ಮಿ ಚಂದ್ರಶೇಖರ ನಾಯರಿ ಕರೆ ನೀಡಿದರು. ಅವರು 79ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಪಂಚವರ್ಣ ಯುವಕ ಮಂಡಲ ರಿ. ಕೋಟ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ಕೋಟ ಇವರ ನೇತೃತ್ವದಲ್ಲಿ ವಾಯು ಸೇನಾಪಡೆಯ ನಿವೃತ್ತ ಅಧಿಕಾರಿ ಗುಂಡ್ಮಿ ಚಂದ್ರಶೇಖರ ನಾಯರಿ ಧ್ವಜಾರೋಹಣ ನೆರವೆರಿಸಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು. ಭಾರತ ಜನತೆ ನಿರಾಳವಾಗಿ ಜೀವನ ಸಾಗಿಸಲು ಸೇನೆ ಪಾತ್ರ ಗಣನೀಯವಾದದ್ದು ಈ ದೇಶದಲ್ಲಿ ಸೇನೆ ಬಲ ಅದರ ಕಾರ್ಯವೈಕರಿಯನ್ನು ಬಿಚ್ಚಿಟ್ಟರು.ದೇಶದ ಯುವ ಸಮೂಹ ಸೈನ್ಯದಲ್ಲಿ ಕಾರ್ಯನಿರ್ವಹಿಸಲು ಪೋಷಕರ ಸಹಕಾರವನ್ನು ಒತ್ತಿ ಹೇಳಿದರಲ್ಲ ಪಂಚವರ್ಣ ಸಂಘಟನೆಯ ಸಾಮಾಜಿಕ ಕಾರ್ಯಗಳು ಶ್ರೇಷ್ಠತೆಯನ್ನು ಪಡೆದುಕೊಂಡಿದೆ ಎಂದರು. ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ. ಕೆ. ಕೃಷ್ಣ ಕಾಂಚನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಘದ ಅಧ್ಯಕ್ಷ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸುಜ್ಞಾನ ಪದವಿಪೂರ್ವ ಕಾಲೇಜು ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನೋತ್ಸವ ಸಂಭ್ರಮ ಸಡಗರದಿಂದ ನಡೆಯಿತು. ಕರ್ನಾಟಕ ಸರಕಾರದ ಮಾಜಿ ಸಚಿವ ಕೆ.ಜಯಪ್ರಕಾಶ ಹೆಗ್ಡೆ ಧ್ವಜಾರೋಹಣ ನೆರವೇರಿಸಿ, ಮಾತನಾಡಿ, ಅತ್ಯಮೂಲ್ಯವಾದ ಸಮಯವನ್ನು ದ್ವೇಷಿಸಲು ಬಳಸಬೇಡಿ; ಇತಿಹಾಸವನ್ನು ಯಾವುದೇ ಕಾರಣಕ್ಕೂ ಮರೆಯಬೇಡಿ; ಇತಿಹಾಸವನ್ನು ಅರಿತಾಗ ಮಾತ್ರ ವರ್ತಮಾನವನ್ನು ಸರಿಯಾಗಿ ಗ್ರಹಿಸಲು ಸಾಧ್ಯವಾಗುತ್ತದೆ ಎಂದರು. ಜನ ಸಮುದಾಯದಲ್ಲಿ ಒಗ್ಗಟ್ಟು ಇದ್ದಾಗ ದೇಶ ಮುಂದುವರಿಯುತ್ತದೆ. ಆಚರಣೆಗಳಲ್ಲಿ ವ್ಯತ್ಯಾಸ ಇರಬಹುದು. ಆದರೆ ನಾವೆಲ್ಲರೂ ಒಂದೇ ಎಂಬ ಭಾವ ಆಳವಾಗಿ ಇರಬೇಕು. ನಾನು ಎಂಬ ಅಹಂ ಭಾವಕ್ಕಿಂತ ನಾವು ಎಂಬ ಭಾವ ಬೆಳೆಸಿಕೊಳ್ಳಲು ಒತ್ತು ನೀಡಬೇಕು. ಬದುಕಿನಲ್ಲಿ ಎದುರಾಗುವ ಯಾವುದೇ ಸಮಸ್ಯೆ ನಮ್ಮೊಳಗೆ ಅಂತರ್ಗತವಾಗಿರುವ ಶಕ್ತಿಗಿಂತ ದೊಡ್ಡದಲ್ಲ. ಅಂಕಗಳಿಕೆಗೆ ಆದ್ಯತೆ ನೀಡುವುದಕ್ಕಿಂತ ಚೆಂದನೆಯ ವ್ಯಕ್ತಿತ್ವ ರೂಪಿಸಿಕೊಳ್ಳುವುದು ಮುಖ್ಯ ಎಂದು ಕಿವಿಮಾತು ನುಡಿದರು. ಮೈದಾನದಲ್ಲಿ ಮೆಲ್ಲನೇ ಬೀಸುತ್ತಿದ್ದ ತಂಗಾಳಿಯ ವಾತಾವರಣದಲ್ಲಿ ವಿದ್ಯಾರ್ಥಿಗಳು ಮೊಳಗಿಸಿದ ’ವಂದೇ ಮಾತರಂ..’ ದೇಶಭಕ್ತಿಯನ್ನು ಉದ್ದೀಪಿಸಿತು. 2ಸಾವಿರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ 79ನೇ ಸಂಭ್ರಮದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಭಾರತೀಯ ಬಾಹ್ಯಾಕಾಶ ವಿಜ್ಞಾನಿ ಮತ್ತು ಇಸ್ರೋ ಮಾಜಿ ಅಧ್ಯಕ್ಷರಾದ ಎ. ಎಸ್ ಕಿರಣ್ ಕುಮಾರ್ ಅವರು ಧ್ವಜಾರೋಹಣವನ್ನು ನೆರವೇರಿಸಿ, ಮಾತನಾಡಿ, ಸ್ವಾತಂತ್ರ್ಯ ಎಂಬುದು ಇಂದು ವಿಜ್ಞಾನದ ಮಾರ್ಗದಲ್ಲಿ ಸ್ವಾಯತ್ತತೆ, ಪ್ರಗತಿ ಮತ್ತು ಜನಕೇಂದ್ರಿತ ಸೇವೆಯ ಸಂಕೇತವಾಗಿದೆ. ನಾವು ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಯ ಮೂಲಕ ಹೊಸ ಸಾಮರಸ್ಯವನ್ನು ರೂಪಿಸುತ್ತಿದ್ದೇವೆ. ಅಂತರಿಕ್ಷ ಕ್ಷೇತ್ರ, ಅಣುಶಕ್ತಿ ಕ್ಷೇತ್ರ, ವೈದ್ಯಕೀಯ ಕ್ಷೇತ್ರ, ಕೃಷಿ ಕ್ಷೇತ್ರ, ಮಾಹಿತಿ ತಂತ್ರಜ್ಞಾನ ಹೀಗೆ ಸ್ವತಂತ್ರ ಭಾರತವು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಆಕಾಶ ಮಟ್ಟದ ಸಾಧನೆಗಳನ್ನು ಕಾಣುತ್ತಿದೆ ಎಂದರು. ಈ ಸಂದರ್ಭದಲ್ಲಿ ಕ್ರಿಯೇಟಿವ್ ಕಾಲೇಜಿನಲ್ಲಿ ಹೊಸದಾಗಿ ಆರಂಭಗೊಂಡ 6/8 ನೌಕಾ ಉಪವಿಭಾಗ – ಎನ್.ಸಿ.ಸಿ ಉಡುಪಿ ಘಟಕ ಇದರ ಪ್ರಾಯೋಜಕರಾದ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕ ಹಾಗೂ ಸಿಟಿಒ ಮಹೇಶ್ ಆರ್. ಶೆಣೈ.…

Read More