ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಅರ್ಥಾಂಕುರ ಕಾರ್ಯಕ್ರಮವು ದಿನೇ ದಿನೇ ಪ್ರೇಕ್ಷಕರ ಮನ ಗೆದ್ದು ನೋಡುಗರ ಸಂಖ್ಯೆಯನ್ನು ಹೆಚ್ಚಿಸುತ್ತಾ ಕಳೆಗಟ್ಟಿದೆ. ಪುರಾಣ ಕಥೆಗಳನ್ನು ಮನನ ಮಾಡಿಕೊಳ್ಳುವ ಈ ಕಾರ್ಯಕ್ರಮ ದೇಗುಲಗಳಲ್ಲಿ ಹೆಚ್ಚು ಅಗತ್ಯ. ಕಾರ್ಯಕ್ರಮವೊಂದನ್ನು ಆಯೋಜಿಸುವುದೇ ಕಷ್ಟದ ಪರಿಸ್ಥಿತಿಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಕಲಾವಿದರಿಗೆ ಅವಕಾಶ ಕಲ್ಪಿಸಿಕೊಡುವ ಉಭಯ ಸಂಸ್ಥೆಗಳ ಕಾಯಕ ನಿಜವಾಗಿಯೂ ಸಾಧನೆಯೇ ಸರಿ ಎಂದು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಆಡಳಿತ ಮಂಡಳಿಯ ಸದಸ್ಯ ಕೆ. ತಾರಾನಾಥ ಹೊಳ್ಳ ಹೇಳಿದರು. ಅವರು ಸಾಲಿಗ್ರಾಮ ಗುರುನರಸಿಂಹ ದೇಗುಲದಲ್ಲಿ ಯಶಸ್ವಿ ಕಲಾವೃಂದ ಕೊಮೆ ತೆಕ್ಕಟ್ಟೆ ಹಾಗೂ ಯಕ್ಷ ನುಡಿಸಿರಿ ಬಳಗ ಸಿದ್ಧಾಪುರ ಜಂಟಿ ಸಂಸ್ಥೆಗಳ ಸಹಯೋಗದೊಂದಿಗೆ ’ಅರ್ಥಾಂಕುರ-24’ ಸರಣಿ ತಾಳಮದ್ದಳೆ-3 ಕಾರ್ಯಕ್ರಮದಲ್ಲಿ ಕಲಾವಿದರನ್ನು ಗೌರವಿಸಿ ಮಾತನಾಡಿದರು. ಪ್ರಸಿದ್ಧ ಹಿರಿಯ ಕಲಾವಿದ ಜಬ್ಬಾರ್ ಸಮೋ, ಕುಂದಾಪ್ರ ಕನ್ನಡ ರಾಯಭಾರಿ ಮನು ಹಂದಾಡಿ, ಯಕ್ಷ ಗುರು ಲಂಬೋದರ ಹೆಗಡೆ ನಿಟ್ಟೂರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಬಳಿಕ ತಾಳಮದ್ದಳೆ ’ಸಮರ ಸೌಗಂಧಿಕಾ’ ರಂಗ ಪ್ರಸ್ತುತಿಗೊಂಡಿತು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸೀನಿಯರ್ ಛೆಂಬರ್ ಇಂಟರ್ ನ್ಯಾಷನಲ್ ಕೋಟ ಲಿಜನ್ ಇದರ ಪದಪ್ರಧಾನ ಸಮಾರಂಭವು ಕೋಟೇಶ್ವರದ ಸಹನ ಕನ್ವೆನ್ಷನ್ ಸೆಂಟರ್ನ ಸುಮೇದ ಹಾಲ್ನಲ್ಲಿ ಇತ್ತೀಚಿಗೆ ನಡೆಯಿತು. ಕೋಟ ಲೀಜೆನ್ 2026-27ರ ನೂತನ ಅಧ್ಯಕ್ಷರಾಗಿ ಸೀನಿಯರ್ ಡಾ. ಸರೋಜಾ ಎಂ. ಅವರು ಅಧಿಕಾರವನ್ನು ಸ್ವೀಕರಿಸಿದರು. ಕಾರ್ಯದರ್ಶಿಯಾಗಿ ಅನಿತಾ ನರೇಂದ್ರ ಕುಮಾರ್ ಹಾಗೂ ಖಜಾಂಜಿಯಾಗಿ ಮಲ್ಲಿಕಾ ಜಯಂತಿ ಅಧಿಕಾರ ಸ್ವೀಕರಿಸಿದರು. ಜೆಸಿಐ ಇಂಡಿಯಾ ಪೂರ್ವ ರಾಷ್ಟ್ರೀಯ ಉಪಾಧ್ಯಕ್ಷ ಕಾರ್ತಿಕೇಯ ಮಧ್ಯಸ್ಥ ಕಾರ್ಯಕ್ರಮ ಉದ್ಘಾಟಿಸಿದರು. ಎಸ್ಸಿಐ ಉಪಾಧ್ಯಕ್ಷೆ ಅಕ್ಷತಾ ಆರ್., ಹಾಗೂ ಮುಖ್ಯ ಭಾಷಣಕಾರರಾಗಿ ಜೆಸಿಐ ತರಬೇತುದಾರ ಹುಸೇನ್ ಹೈಕಾಡಿ ಜೇಸಿ ಜೀವನ ಹಾಗೂ ಜೇಸಿಯಿಂದ ಆದ ಉಪಯೋಗದ, ಜೇಸಿ ಕುಟುಂಬದ ಹೊಂದಾಣಿಕೆ ಬಗ್ಗೆ ತಿಳಿಸಿದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸಂಯೋಜಕ ಗಿರೀಶ್ ಶಾನುಭೋಗ, ಸುರೇಶ್ ಅಮೀನ್, ಕೇಶವ ಆಚಾರ್ ಕೋಟ, ಯುವ ಘಟಕದ ಕೃತಿ ದೇವಾಡಿಗ, ಸಪ್ತಮಿ ಶೆಟ್ಟಿ, ಸಿಂಚನ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಅನಿತಾ ನರೇಂದ್ರ ಕಾರ್ಯಕ್ರಮ ನಿರ್ವಹಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಗಂಗನಾಡು ಗ್ರಾಮದ ಒಣಕೊಡ್ಲು ನಿವಾಸಿ ಲಕ್ಷ್ಮೀ (46) ಅವರು ಸೋಮವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲಕ್ಷ್ಮೀ ಮತ್ತು ಪತಿ ಗೋಪಾಲ್ ನಡುವೆ ಯಾವಾಗಲೂ ಜಗಳ ನಡೆಯುತ್ತಿತ್ತು. ಭಾನುವಾರ ಮನೆಯಲ್ಲಿ ಪರಸ್ಪರ ಜಗಳ ಮಾಡಿಕೊಂಡಿದ್ದು ಮನೆಯ ಕೋಣೆಯಲ್ಲಿ ಕುತ್ತಿಗೆಗೆ ನೈಲಾನ್ ಹಗ್ಗ ಕಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪುತ್ರಿ ರಕ್ಷಿತಾ ನೀಡಿದ ದೂರಿನಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ರೋಟರಿ ಕ್ಲಬ್ ಕೋಟ – ಸಾಲಿಗ್ರಾಮ ಇದರ ಮೂಡುಗಿಳಿಯಾರಿನ ರೋಟರಿ ಸಮುದಾಯದಳ ಇವರ ನೇತೃತ್ವದಲ್ಲಿ ಪಂಚವರ್ಣ ಸಂಘಟನೆ ಕೋಟ ಹಾಗೂ ಗೀತಾನಂದ ಫೌಂಡೇಶನ್ ಮಣೂರು ಇವರ ಮಾರ್ಗದರ್ಶನದಲ್ಲಿ ಗಿಡ ನೆಡುವ ಹಸಿರೇ ಉಸಿರು ಎಂಬ ಶೀರ್ಷಿಕೆಯಡಿ ಕಾರ್ಯಕ್ರಮ ಮೂಡುಗಿಳಿಯಾರು ಚಿಕ್ಕು ದೈವಸ್ಥಾನ ವಠಾರ ಹಾಗೂ ಗಿಳಿಯಾರು ಶಾಲಾ ವಠಾರದಲ್ಲಿ ನೆಡೆಯಿತು. ಈ ಸಂದರ್ಭದಲ್ಲಿ ರೋಟರಿ ಸಮುದಾಯದಳ ಮೂಡುಗಿಳಿಯಾರು ಇದರ ಅಧ್ಯಕ್ಷ ದಯಾನಂದ ಪೂಜಾರಿ, ಕಾರ್ಯದರ್ಶಿ ಮಲ್ಲಿಕಾ, ಸಭಾಪತಿ ಗೋಪಾಲ್, ಶರಣಯ್ಯ ಹಿರೇಮಠ್, ರಾಘವೇಂದ್ರ, ರಾಕೇಶ್, ಸಂತೋಷ್, ರವಿ, ಲತಾ, ಗಿರಿಜಾ ಮಾತಾಜಿ, ಜಯ, ರಾಜೇಶ್ವರಿ, ಅವಿನಾಶ್, ಜಲಜ ಟೀಚರ್, ಸದಾ ಹೊನ್ನಾರಿ, ನಾಗ, ಪ್ರಪುಲ್ಲ ಇತರರು ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದದ ಅಳಿವೆಕೋಡಿ ಗ್ರಾಮದಲ್ಲಿ ಮೀನುಗಾರಿಕಾ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಶೀಘ್ರ ದುರಸ್ಥಿ ಮಾಡುವಂತೆ ಸಾರ್ವಜನಿಕರು ಬೈಂದೂರು ತಾಲೂಕು ಆಡಳಿತ ಸೌಧದ ಎದುರು ಸೋಮವಾರ ಧರಣಿ ನಡೆಸಿದರು. ಕರಾವಳಿ ಸಾಂಪ್ರದಾಯಿಕ ಮೀನುಗಾರರ ಸಂಘದ ಅಧ್ಯಕ್ಷ ನಾಗೇಶ ಖಾರ್ವಿ ಉಪ್ಪುಂದ ಧರಣಿಯ ನೇತೃತ್ವ ವಹಿಸಿ ಮಾತನಾಡಿ, ಗ್ರಾಮದ ಮುಖ್ಯ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ರಸ್ತೆಯ ಹಲವೆಡೆ ದೊಡ್ಡ ಗುಂಡಿಗಳು ಉಂಟಾಗಿವೆ. ಇದರಿಂದ ಸಾರ್ವಜನಿಕರು, ವಾಹನ ಸವಾರರು ಹಾಗೂ ಶಾಲಾ ಮಕ್ಕಳಿಗೆ ಪ್ರತಿದಿನ ತೀವ್ರ ತೊಂದರೆಯಾಗುತ್ತಿದೆ ಎಂದರು. ಈ ರಸ್ತೆಯಲ್ಲಿ ಪ್ರತಿದಿನ ಶಾಲಾ ವಾಹನಗಳು ಸಂಚರಿಸುತ್ತಿದ್ದು. ಸುಮಾರು 150 ಶಾಲಾ ಮಕ್ಕಳು ಇದೇ ರಸ್ತೆಯಲ್ಲಿ ನಡೆದುಕೊಂಡು ಶಾಲೆಗೆ ತೆರಳುತ್ತಿದ್ದಾರೆ. ರಸ್ತೆ ಹದಗೆಟ್ಟಿರುವುದರಿಂದ ಅಪಘಾತ ಸಂಭವಿಸುವ ಅಪಾಯ ಹೆಚ್ಚಾಗಿದ್ದು, ಮಕ್ಕಳ ಸುರಕ್ಷತೆಯ ಬಗ್ಗೆ ಗ್ರಾಮಸ್ಥರಲ್ಲಿ ತೀವ್ರ ಆತಂಕ ಉಂಟಾಗಿದೆ. ಮಳೆಗಾಲದಲ್ಲಿ ರಸ್ತೆ ಮತ್ತಷ್ಟು ಹದಗೆಟ್ಟು ಸಂಚಾರ ದುಸ್ತರವಾಗಿದ್ದು ಶೀಘ್ರ ದುರಸ್ಥಿ ಮಾಡಬೇಕೆಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಬೈಂದೂರು ತಹಶೀಲ್ದಾರ್ ರವಿರಾಜ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಆಲೂರು ಹಾಗೂ ಹರ್ಕೂರು ಗ್ರಾಮದ ಭೂಹೀನ ಕೊರಗ (ಪರಿಶಿಷ್ಟ ಪಂಗಡ) ಕುಟುಂಬಗಳಿಗೆ ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ, ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಸೋಮವಾರ ಮಣಿಪಾಲದಲ್ಲಿರುವ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶಾಂತಿಯುತ ಧರಣಿ ಸತ್ಯಾಗ್ರಹ ಹಾಗೂ ಹಕ್ಕೊತ್ತಾಯ ನಡೆಯಿತು. ಧರಣಿಯಲ್ಲಿ ಕೊರಗ ಸಮುದಾಯದ ನೂರಾರು ಸದಸ್ಯರು, ವಿವಿಧ ಜನಪರ ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿ, ಸುಮಾರು ಹತ್ತು ವರ್ಷಗಳಿಂದ ಬಾಕಿ ಉಳಿದಿರುವ ಭೂಮಿ ಮಂಜೂರಾತಿ ಪ್ರಕ್ರಿಯೆಯನ್ನು ಕೂಡಲೇ ಪೂರ್ಣಗೊಳಿಸುವಂತೆ ಒತ್ತಾಯಿಸಿದರು. ಧರಣಿ ನಡೆಯುತ್ತಿರುವ ಸಂದರ್ಭದಲ್ಲಿ ಉಡುಪಿ ಜಿಲ್ಲಾಧಿಕಾರಿಗಳು ಧರಣಿ ನಿರತ ನಿಯೋಗವನ್ನು ತಮ್ಮ ಕಚೇರಿಗೆ ಆಹ್ವಾನಿಸಿ, ಪ್ರಕರಣದ ಕುರಿತು ವಿವರವಾದ ಚರ್ಚೆ ನಡೆಸಿದರು. ಸಂಘಟನೆಯಿಂದ ಸಲ್ಲಿಸಲಾದ ಹಕ್ಕೊತ್ತಾಯ ಮನವಿಯನ್ನು ಸ್ವೀಕರಿಸಿದ ಜಿಲ್ಲಾಧಿಕಾರಿಗಳು, ಆಲೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ ಪ್ರಕರಣದ ಕುರಿತು ತನಗೆ ಸಂಪೂರ್ಣ ಮಾಹಿತಿ ಇದೆ. ಸಂಘಟನೆಯು ಈ ಹಿಂದೆ ಸಲ್ಲಿಸಿರುವ ದಾಖಲೆಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕು ಮಣಿಪಾಲದಲ್ಲಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ವರ್ಗದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ನವೀಕರಣ ವಿದ್ಯಾರ್ಥಿಗಳ ಸೀಟು ಹಂಚಿಕೆಯಾಗಿ ಉಳಿಕೆ ಸೀಟುಗಳ ಪ್ರವೇಶಾತಿಗೆ ಸ್ಟೇಟ್ ಹಾಸ್ಟೆಲ್ ಪೋರ್ಟಲ್ ತಂತ್ರಾಂಶದ ಮೂಲಕ ಸಾಮಾನ್ಯ ಪದವಿ ಮಟ್ಟದ ಕೋರ್ಸಿನಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಮಾತ್ರ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು ಮಂಜೂರಾತಿ ಸೀಟುಗಳಲ್ಲಿ ಶೇ.75 ಅಲ್ಪಸಂಖ್ಯಾತರು ಮತ್ತು ಶೇ.25 ಇತರೆ ವರ್ಗದ ವಿದ್ಯಾರ್ಥಿಗಳಿಗೆ ಅವಕಾಶವಿದ್ದು, ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಬಯಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ. 2.50 ಲಕ್ಷಗಳ ಒಳಗಿರುವ ವಿದ್ಯಾರ್ಥಿಯು ಅರ್ಜಿ ನಮೂನೆಯ ಜೊತೆಗೆ ವಿದ್ಯಾರ್ಥಿಯ ಜಾತಿ/ಆದಾಯ ಪ್ರಮಾಣ ಪತ್ರ, ಕಳೆದ ಸಾಲಿನ ವಾರ್ಷಿಕ ಪರೀಕ್ಷೆಯ ಅಂಕಪಟ್ಟಿ, ಪಡಿತರ ಚೀಟಿ, ಆಧಾರ್ ಕಾರ್ಡ್, ವರ್ಗಾವಣೆ ಪ್ರಮಾಣ ಪತ್ರದ ದೃಢೀಕೃತ ಪ್ರತಿ, ವಾಸಸ್ಥಳದಿಂದ ಪ್ರವೇಶ ಕೋರಿರುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ರೋಟರಿ ಕ್ಲಬ್ ಕೋಟ ಬ್ರಿಗೇಡ್ ವತಿಯಿಂದ ಬನ್ನಾಡಿ ಗ್ರಾಮದ ಅನಾರೋಗ್ಯದಿಂದ ಬಳಲುತ್ತಿರುವ ಹಾಗೂ ವಿಶೇಷ ಅಗತ್ಯವಿರುವ ಫಲಾನುಭವಿಗಳಿಗೆ ವೀಲ್ಚೇರ್ ಹಾಗೂ ವಿವಿಧ ಆರೋಗ್ಯ ಸಂಬಂಧಿತ ಸಹಾಯಕ ಸಾಧನಗಳನ್ನು ವಿತರಿಸುವ ಸಮಾಜಮುಖಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಪೂಜಾರಿ ಬನ್ನಾಡಿ ಅವರು ಮಾತನಾಡಿ, ಸಮಾಜದ ದುರ್ಬಲ ವರ್ಗದವರಿಗೆ ನೆರವಾಗುವುದು ರೋಟರಿಯ ಪ್ರಮುಖ ಧ್ಯೇಯವಾಗಿದ್ದು, ಅಗತ್ಯವಿರುವವರಿಗೆ ಆರೋಗ್ಯ ಸಹಾಯಕ ಸಾಧನಗಳನ್ನು ಒದಗಿಸುವ ಮೂಲಕ ಅವರ ದೈನಂದಿನ ಬದುಕನ್ನು ಸುಗಮಗೊಳಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಇಬ್ಬರು ಫಲಾನುಭವಿಗಳಿಗೆ ವೀಲ್ಚೇರ್ ಸೇರಿದಂತೆ ಅಗತ್ಯ ಆರೋಗ್ಯ ಪರಿಕರಗಳನ್ನು ಹಸ್ತಾಂತರಿಸಲಾಯಿತು. ಕಾರ್ಯಕ್ರಮದಲ್ಲಿ ಮಾಜಿ ಸಹಾಯಕ ಗವರ್ನರ್ ಚಂದ್ರಶೇಖರ್ ಮೆಂಡನ್, ವಲಯ ಸೇನಾನಿ ದಯಾನಂದ ಆಚಾರ್, ಸದಸ್ಯರಾದ ಡಾ. ಗಣೇಶ್, ವೆಂಕಟೇಶ್ ಆಚಾರ್ , ಭಾಸ್ಕರ್ ಪೂಜಾರಿ, ಪ್ರಕಾಶ್ ಹಂದಟ್ಟು, ಪ್ರಥ್ವಿನ್ ಸಿ. ಮೆಂಡನ್ ಸೇರಿದಂತೆ ಹಲವರು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳು ಒಳಗೊಂಡಂತೆ) 2026-27ನೇ ಶೈಕ್ಷಣಿಕ ಸಾಲಿಗೆ ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗುವ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು (ಅತಿಥಿ ಗ್ರಂಥಪಾಲಕರು ಹಾಗೂ ಅತಿಥಿ ದೈಹಿಕ ಶಿಕ್ಷಣ ನಿರ್ದೇಶಕರು ಒಳಗೊಂಡಂತೆ) ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ನಿಗದಿತ ವೇಳಾಪಟ್ಟಿಯೊಳಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು / ತಿದ್ದುಪಡಿ (EDIT) ಮಾಡಲು ಪ್ರಾರಂಭದ ದಿನಾಂಕ: 11.07.2026, ಅರ್ಜಿ ಸಲ್ಲಿಸಲು / ತಿದ್ದುಪಡಿ ಮಾಡಲು ಕೊನೆಯ ದಿನಾಂಕ: 18.07.2026, ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಿಸುವ ದಿನಾಂಕ: 19.07.2026, ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಿಸಿದ ನಂತರ ಅರ್ಜಿಯನ್ನು EDIT ಮಾಡಲು ಅವಕಾಶ: 19.07.2026 ರಿಂದ 22.07.2026, ತಾತ್ಕಾಲಿಕ ಕಾರ್ಯಭಾರ (Workload) ಪ್ರಕಟಿಸುವ ದಿನಾಂಕ: 25.07.2026, ಕೌನ್ಸಿಲಿಂಗ್ ಮೆರಿಟ್ ಪಟ್ಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ ಶೆಟ್ಟಿ ಅವರ ನೇತ್ರತ್ವದಲ್ಲಿ ಬೈಂದೂರು ರೈತರ ನಿಯೋಗ ಸಚಿವ ಯು.ಟಿ. ಖಾದರ್ ಸೋಮವಾರ ಭೇಟಿ ಮಾಡಿ ಮಾತುಕತೆ ನಡೆಸಿದರು. ರೈತರು ಪಪಂ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈ ಬಿಡಲು ಆಗ್ರಹಿಸಿ ಕಳೆದ 292 ದಿನಗಳಿಂದ ತಾಲೂಕು ಆಡಳಿತ ಕಛೇರಿ ಎದುರು ಧರಣಿ ನಡೆಸುತ್ತಿದ್ದು ಸಚಿವರು ಸಂಪೂರ್ಣ ಮಾಹಿತಿ ಪಡೆದು ರಾಜ್ಯ ಅಧೀನ ಕಾರ್ಯದರ್ಶಿ ಜೊತೆ ಸ್ಥಳದಲ್ಲೆ ಮಾತನಾಡಿದರು ಮತ್ತು ಸರಕಾರದ ಮಟ್ಟದಲ್ಲಿ ಮಾಹಿತಿ ಪಡೆದು ರೈತರ ಹೋರಾಟಕ್ಕೆ ನ್ಯಾಯ ಒದಗಿಸುವ ಭರವಸೆ ನೀಡಿದರು. ಬೈಂದೂರಿಗೆ ತಾಲೂಕು ಆಸ್ಪತ್ರೆ:ಬೈಂದೂರು ಅತ್ಯಂತ ವಿಸ್ತಾರವಾದ ಕ್ಷೇತ್ರವಾಗಿದ್ದು ಬಹುತೇಕ ಗ್ರಾಮೀಣ ಭಾಗಗಳನ್ನು ಹೊಂದಿದೆ ಹೀಗಾಗಿ ಈ ಭಾಗದಲ್ಲಿ ತಾಲೂಕು ಆಸ್ಪತ್ರೆ ಅತ್ಯಗತ್ಯವಾಗಿದೆ ಶೀಘ್ರ ಬೈಂದೂರಿಗೆ ತಾಲೂಕು ಆಸ್ಪತ್ರೆ ಮಂಜೂರು ಮಾಡಲಾಗುವುದು ಎಂದರು. ತಾಲೂಕು ರಕ್ಷಾ ಸಮಿತಿ ಪರವಾಗಿ ವೀರಭದ್ರ ಸಚಿವರಿಗೆ ಮನವಿ ನೀಡಿದರು. ಈ ಸಂಧರ್ಭದಲ್ಲಿ ಮುಖಂಡರಾದ ಅರುಣ್ ಕುಮಾರ ಶಿರೂರು, ಮ್ಯಾಥ್…
