Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಯಕ್ಷಗಾನ ಸಂಘಟಕ ಗಜೇಂದ್ರ ಆಚಾರ್ ಕೋಣಿ ಸಂಯೋಜನೆಯ ಯಕ್ಷರಾತ್ರಿ ಈ ಬಾರಿ 12 ನೇ ವರ್ಷದ ಅದ್ಧೂರಿ ಕಾರ್ಯಕ್ರಮ ಕೋಣಿ ಮೂರೂರು ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಡಿಸೆಂಬರ್ 12 ಶನಿವಾರ ರಂದು ಶ್ರೀ ಪೆರ್ಡೂರು ಮೇಳದ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಯಕ್ಷರಾತ್ರಿ ಸಾಧಕ ಪುರಸ್ಕಾರವನ್ನು ಹಿರಿಯ ಪತ್ರಕರ್ತ, ಶಿವರಾಮ ಕಾರಂತ್ ವಿಶೇಷ ಪುರಸ್ಕಾರ ಪುರಸ್ಕೃತ ಜಾನ್ ಡಿ ಸೋಜ ಕೋಣಿ ಹಾಗೂ ಹಿರಿಯ ಕೃಷಿಕ, ನಾಟಿ ವೈದ್ಯ ಸಿದ್ದಯ್ಯ ಶೆಟ್ಟಿ ಕಟ್ಕೇರಿ ಅವರಿಗೆ ನೀಡಲಾಗುತ್ತಿದೆ. ಪ್ರತಿಭಾ ಪುರಸ್ಕಾರವಾಗಿ ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ 2025ನೇ ಸಾಲಿನ ಅಂತಿಮ ಪದವಿ ಪರಿಕ್ಷೆಯಲ್ಲಿ ಡಾ. ಬಿ.ಬಿ ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳಾದ 3ನೇ ರ್ಯಾಂಕ್ ಪಡೆದ ಸುಹಾನಿ (ಶಂಕರ ಮೊಗವೀರ ಹಾಗೂ ಶಾಂತ ದಂಪತಿಗಳ ಪುತ್ರಿ), ಹಾಗೂ 8ನೇ ರ್ಯಾಂಕ್ ಪಡೆದ ಶ್ರದ್ದಾ ( ರಮೇಶ ಮೊಗವೀರ ಹಾಗೂ ವನಜ ದಂಪತಿಗಳ ಪುತ್ರಿ), 2025-26 ನೇ ಸಾಲಿನ ದ್ವಿತೀಯ ಪಿಯುಸಿ ವಿಜ್ಞಾನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಗಡಿನಾಡು ಕಾಸರಗೋಡಿನ ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ ವತಿಯಿಂದ ನೀಡಲಾಗುವ 2026ನೇ ಸಾಲಿನ ಅಂತಾರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಡಾ. ಶಿಹಾನ್ ಸುಬ್ರಮಣ್ಯ ಪಿ. ಆಯ್ಕೆಯಾಗಿದ್ದು, ನ.1ರಂದು ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಾಸರಗೋಡು ಕನ್ನಡ ಭವನದ ಕನ್ನಡ ಭುವನೇಶ್ವರಿ ವೇದಿಕೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಂಭ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ವೇಳೆ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು. ಡಾ. ಶಿಹಾನ್ ಸುಬ್ರಮಣ್ಯ ಪಿ. ಅವರು ಈಗಾಗಲೇ ಶಿಕ್ಷಕ ರತ್ನ ರಾಜ್ಯ ಪ್ರಶಸ್ತಿ, ಕರುನಾಡ ನಿಧಿ ರಾಜ್ಯ ಪ್ರಶಸ್ತಿ, ಹಿಂದೂ ರತ್ನ ರಾಷ್ಟ್ರೀಯ ಪ್ರಶಸ್ತಿ, ಬುಡೋ ಖಾನ್ ಅಂತಾರಾಷ್ಟ್ರೀಯ ಉತ್ತಮ ಕರಾಟೆ ಶಿಕ್ಷಕ ಪ್ರಶಸ್ತಿ, ಮಹಾತ್ಮ ಗಾಂಧಿ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳಿಗೆ ಪಾತ್ರರಾಗಿದ್ದಾರೆ. ಅಲ್ಲದೆ, ಭಾರತ್ ಬುಕ್ ಆಫ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಹೆಸರಾಂತ ಮೊಬೈಲ್ ಮಾರಾಟ ಮಳಿಗೆ ‘ಪ್ರೀತಿ ಮೊಬೈಲ್ಸ್’ನಲ್ಲಿ ‘ದೀಪಾವಳಿ’ ಹಬ್ಬದ ಅಂಗವಾಗಿ ಗ್ರಾಹಕರಿಗೆ ವಿವಿಧ ಕೊಡುಗೆಗಳನ್ನು ನೀಡಲಾಗುತ್ತಿದೆ. ಪ್ರತಿ ಸ್ಮಾರ್ಟ್ ಪೋನ್ ಖರೀದಿಯ ಮೇಲೆಯೂ ಖಚಿತ ಕೊಡುಗೆಗಳು, ಈಸಿ ಇಎಂಐ ಸೌಲಭ್ಯ, ಲಕ್ಕಿ ಕೂಪನ್, ಎಕ್ಸ್’ಚೆಂಚ್ ಆಫರ್,  ಸೇರಿದಂತೆ ಹಲವು ಕೊಡುಗೆಗಳನ್ನು ಒಳಗೊಂಡಿದೆ. ಲಕ್ಕಿ ಕೂಪನ್‌ನಲ್ಲಿ ಕಾರು, ಬೈಕ್, ಇವಿ ಸ್ಕೂಟರ್, ವಾಷಿಂಗ್ ಮಿಷಿನ್,  10 ಲಕ್ಷ ಕ್ಯಾಶ್ ಸಹಿತ ಹಲವು ಕೊಡುಗೆಗಳನ್ನು ಗೆಲ್ಲುವ ಅವಕಾಶವಿದೆ. ಪ್ರೀತಿ ಮೊಬೈಲ್ಸ್ನಲ್ಲಿ ಯಾವುದೇ ಸ್ಮಾರ್ಟ್ ಫೋನ್ ಖರೀದಿಸಿ ಉಚಿತವಾಗಿ ಪಡೆಯಿರಿ. ಟ್ರಾಲ್ ಬ್ಯಾಗ್, ಲ್ಯಾಪ್ಟಾಪ್ ಬ್ಯಾಗ್, ಸ್ಪೀಕರ್, ಸ್ಮಾರ್ಟ್ ವಾಚ್ ಸೇರಿದಂತ ವಿವಿಧ ಉಚಿತ ಉಡುಗೊರೆಗಳನ್ನು ನೀಡಲಾಗುತ್ತಿದೆ. ವಿವೋ, ಒಪ್ಪೋ, ಐಫೋನ್, ಮೋಟೋರೊಲ, ರೆಡ್ಮಿ, ರೀಯಲ ಮೀ, ಸಾಮಸಾಂಗ್, ಐಟೇಲ್, ಲಾವಾ, ಗೂಗಲ್ ಪಿಕ್ಸೆಲ್, ನಥಿಂಗ್ ನೋಕಿಯಾ, ಸೇರಿದಂತೆ ಎಲ್ಲಾ ಸ್ಮಾರ್ಟ್ ಮತ್ತು ನಾರ್ಮಲ್‌ ಮೊಬೈಲ್‌ ಸಹಿತ ಎಸ್ಸರೀಸ್ ಐಟಂಗಳಿಗೆ ಇಎಂಐ ಸೌಲಭ್ಯ 0 ಡೌನ್ ಪೇಮೆಂಟ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಟ್ಕಳದಿಂದ ಕುಂದಾಪುರ ತೆರಳುವ ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ನಿಗದಿತ ಸ್ಥಳಕ್ಕೆ ಟಿಕೇಟ್ ಪಡೆದು ಮಧ್ಯದಲ್ಲೇ ಇಳಿಯುವ ವಿಚಾರಕ್ಕೆ ಪ್ರಯಾಣಿಕರು ಹಾಗೂ ಬಸ್ ನಿರ್ವಾಹಕನ ನಡುವೆ ವಾದ ವಿವಾದ ನಡೆದು, ಬಸ್ ಸಿಬ್ಬಂದಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು – ಪ್ರತಿದೂರು ದಾಖಲಾಗಿದೆ. ಭಟ್ಕಳದಿಂದ ಕುಂದಾಪುರಕ್ಕೆ ತೆರಳುತ್ತಿದ್ದ  ಬಸ್ಸಿಗೆ ಶಿರೂರು ನಿಲ್ದಾಣದಲ್ಲಿ ಇಬ್ಬರು ಮಹಿಳೆಯರು ಹತ್ತಿ ಶಕ್ತಿ ಯೋಜನೆಯಲ್ಲಿ ಟಿಕೇಟನ್ನು ಕುಂದಾಪುರಕ್ಕೆ ಪಡೆದಿರುತ್ತಾರೆ. ನಂತರ ಅದೇ ಮಹಿಳೆಯರು ಉಪ್ಪುಂದದ ನಿಲ್ದಾಣದಲ್ಲಿ ಇಳಿಯುವ ಸಲುವಾಗಿ ಬಸ್ ನಿಲ್ಲಿಸಲು ಹೇಳಿದ್ದಾರೆ. ಆಗ ನಿರ್ವಾಹಕ ಮಂಜುನಾಥ ಅವರು ಬಸ್ ನಿಲ್ಲಿಸಿ ಇಳಿಯವ ಅವಕಾಶ ನೀಡಿರಲಿಲ್ಲ. ಬಳಿಕ ಮಹಿಳೆಯರು ಕುಂದಾಪುರದಲ್ಲಿ ಬಸ್ನಿಂದ ಇಳಿದಿದ್ದರು. ಸಂಸ್ಥೆಯ ನಿಯಮದಂತೆ ಶಕ್ತಿ ಯೋಜನೆಯಲ್ಲಿ ಟಿಕೇಟನ್ನು ಪಡೆದಿದ್ದರೇ, ಎಲ್ಲಿಗೆ ಟಿಕೇಟ್‌ ಮಾಡಿದ್ದಾರೋ ಅಲ್ಲೇ ಇಳಿಯಬೇಕು. ಮದ್ಯದಲ್ಲಿ ಇಳಿಯಬಾರದು ಹಾಗಾಗಿ ನಿರ್ವಾಹಕ ಮಹಿಳೆಯರಿಗೆ ಇಳಿಯಲು ಅವಕಾಶ ನೀಡಿರಲಿಲ್ಲ. ನಂತರ ಹೊಸ ಬಸ್‌ ನಿಲ್ದಾಣದಲ್ಲಿ ಬಸ್ ನಿಲ್ಲಿಸಿದ್ದಾಗ ಅದೇ ಮಹಿಳೆಯರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ತೆಕ್ಕೆಟ್ಟೆಯ ವಿಶ್ವವಿನಾಯಕ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡೋತ್ಸವವನ್ನು ಶುಕ್ರವಾರದಂದು ಅತ್ಯಂತ ಸಂಭ್ರಮ ಹಾಗೂ ಉತ್ಸಾಹದಿಂದ  ಉದ್ಘಾಟಿಸಲಾಯಿತು.  ಕಾರ್ಯಕ್ರಮವು ಗಣ್ಯ ಅತಿಥಿಗಳಾದ ರಂಜಿತ್ ಪೂಜಾರಿ ಅವರ ಉಪಸ್ಥಿತಿಯಲ್ಲಿ ಕ್ರೀಡಾಜ್ಯೋತಿ ಬೆಳಗಿಸುವುದರ ಮೂಲಕ ಆರಂಭಗೊಂಡಿತು. ಕ್ರೀಡಾಜ್ಯೋತಿಯು ಕ್ರೀಡಾಸ್ಪೂರ್ತಿ, ಏಕತೆ, ಶಿಸ್ತು ಮತ್ತು ಗೆಲುವಿನ ಸಂಕೇತವಾಗಿ ಎಲ್ಲರ ಗಮನ ಸೆಳೆಯಿತು. ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು. ವಿವಿಧ ತಂಡಗಳ ವಿದ್ಯಾರ್ಥಿಗಳು ತಮ್ಮ ತಂಡದ ಬಣ್ಣದ ಸಮವಸ್ತ್ರದಲ್ಲಿ ಶಿಸ್ತಿನಿಂದ ಹೆಜ್ಜೆ ಹಾಕಿ ಕ್ರೀಡಾಗೌರವವನ್ನು ಹೆಚ್ಚಿಸಿದರು. ವಿದ್ಯಾರ್ಥಿಗಳು ಕ್ರೀಡಾ ಪ್ರತಿಜ್ಞೆಯನ್ನು ಸ್ವೀಕರಿಸುವ ಮೂಲಕ ಕ್ರೀಡಾ ನಿಯಮಗಳನ್ನು ಪಾಲಿಸುವ ಹಾಗೂ ಪ್ರಾಮಾಣಿಕವಾಗಿ ಸ್ಪರ್ಧಿಸುವ ಸಂಕಲ್ಪ ಮಾಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯ ಅತಿಥಿಗಳು ಕ್ರೀಡೆಯು ಕೇವಲ ಗೆಲುವು ಮತ್ತು ಸೋಲಿನ ಆಟವಲ್ಲ, ಅದು ವಿದ್ಯಾರ್ಥಿಗಳಲ್ಲಿ ಶಿಸ್ತು, ಸಹನೆ, ಸಮಯಪ್ರಜ್ಞೆ, ನಾಯಕತ್ವ, ಆತ್ಮಸ್ಥೈರ್ಯ ಬೆಳೆಸುವ ವೇದಿಕೆಯಾಗಿದೆ. ಸೋಲು ಗೆಲುವಿಗಿಂತ ಭಾಗವಹಿಸುವಿಕೆ ಮತ್ತು ಪ್ರಯತ್ನ ಮುಖ್ಯ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ  ಸಂಸ್ಥೆಯ ಸಿ.ಇ.ಒ ವಿವಿರಾಜ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳ ಜೀವನದಲ್ಲಿ ತಂದೆ, ತಾಯಿ, ಗುರು ಎನ್ನುವ ಮೂರು ಮೌಲ್ಯಗಳನ್ನು ಅರ್ಥೈಸಿಕೊಂಡರೆ ಎಲ್ಲವನ್ನು ಪಡೆಯಲು ಸಾಧ್ಯ. ನಮ್ಮ ನಡುವಿನ ವ್ಯಕ್ತಿಗಳ ವ್ಯಕ್ತಿತ್ವದಿಂದ ಕಲಿಯುವಂತದ್ದು ತುಂಬಾ ಇದೆ. ವಿದ್ಯಾರ್ಥಿಗಳು ಸಮಯ ಪ್ರಜ್ಞೆ, ಮಾನವೀಯ ಗುಣಗಳನ್ನು ಬೆಳೆಸಿಕೊಳ್ಳುವುದರ ಜೊತೆಗೆ ಸಂವೇದನಾಶೀಲತೆಯನ್ನು ಬೆಳೆಸಿಕೊಂಡರೆ ಸತ್ಪ್ರಜೆಗಳಾಗಲು ಸಾಧ್ಯ ಎಂದು ಕುಂದಾಪುರದ ನ್ಯಾಯವಾದಿಗಳಾದ ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ್ದ ʼಜೀವನ ಮೌಲ್ಯ’ಸರಣಿ ಉಪನ್ಯಾಸ ಮಾಲಿಕೆ-4ರ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್‌ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ ಮತ್ತು ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಸುಜನ್‌ ಪ್ರಾರ್ಥಿಸಿ, ರಜತ್‌ ಸ್ವಾಗತಿಸಿ, ಕೃತಿ ಕೆ. ದೇವಾಡಿಗ ಅತಿಥಿಗಳನ್ನು ಪರಿಚಯಿಸಿ, ಧನ್ಯಶ್ರೀ ವಂದಿಸಿ, ಪ್ರಥ್ವಿನಿ ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಬಹುಕಾಲದ ಬೇಡಿಕೆಯಾಗಿದ್ದ ತಾಲೂಕು ಆಸ್ಪತ್ರೆಯ ಬೇಡಿಕೆಗೆ ಸರಕಾರವು ಸ್ಪಂದಿಸಿ ಸದ್ಯ 50 ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆ ಮಂಜೂರಾತಿಗೆ ಆದೇಶ ಮಾಡಿದೆ. ಪ್ರಸ್ತುತವಿರುವ ಸಮುದಾಯ ಆರೋಗ್ಯ ಕೇಂದ್ರವು ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಗೆಜೇರಲಿದೆ. ಇದಕ್ಕಾಗಿ ಒಟ್ಟು 25 ಕೋಟಿ ರೂ ಅನುದಾನ ಮೀಸಲಿರಿಸಿದ್ದು, ಪ್ರಸ್ತುತ ಸಾಲಿನಲ್ಲಿ 2 ಕೋಟಿ ಬಿಡುಗಡೆಯಾಗಲಿದೆ. ಬೈಂದೂರು ತಾಲೂಕಿನ ಬಡ ಜನರು ಆರೋಗ್ಯ ಸಮಸ್ಯೆಗಳಿಗಾಗಿ ಕುಂದಾಪುರ ಹಾಗೂ ಉಡುಪಿ ಭಾಗದ ಆಸ್ಪತ್ರೆಗಳಿಗೆ ಹೆಚ್ಚಿನ ಚಿಕಿತ್ಸೆಗಾಗಿ ತೆರಳಬೇಕಾದ ಅನಿವಾರ್ಯತೆ ಇತ್ತು. ಹೊಸದಾಗಿ ರಚನೆಯಾದ ತಾಲೂಕಿನಲ್ಲಿ ಸಮುದಾಯ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿ ಕನಿಷ್ಠ 100 ಹಾಸಿಗೆಗಳ ಸಾಮರ್ಥ್ಯದ ತಾಲೂಕು ಆಸ್ಪತ್ರೆಯನ್ನಾಗಿಸಬೇಕು ಎಂದು ಬೈಂದೂರು ಶಾಸಕರು ಹಾಗೂ ಮಾಜಿ ಶಾಸಕರುಗಳು ಸೇರಿದಂತೆ ವಿವಿಧ ಸಂಘಟನೆಗಳು ಬೇಡಿಕೆ ಇಟ್ಟಿದ್ದರು. ಇದರ ಫಲವಾಗಿ ಆಸ್ಪತ್ರೆ ಹೆಚ್ಚುವರಿಗೆ ಅಗತ್ಯಕ್ಕೆ ಬೇಕಾಗಿದ್ದ 2.11 ಎಕ್ರೆ ಸರಕಾರಿ ಜಾಗವನ್ನು ಈ ಹಿಂದೆ ಇಲಾಖೆ ಹೆಸರಿಗೆ ಮಂಜೂರು ಮಾಡಿಸಿಕೊಳ್ಳಲಾಗಿತ್ತು. ಬೈಂದೂರು ತಾಲೂಕು ಕೇಂದ್ರಕ್ಕೆ 100 ಹಾಸಿಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನಾಟ್ಯ ಮಯೂರಿ ನೃತ್ಯ ಟ್ರಸ್ಟ್ ರಿ., ವಿರಾಜಪೇಟೆ, ಕೊಡಗು ಜಿಲ್ಲೆ ಇವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದೊಂದಿಗೆ ಸಂಗೀತ ಹಾಗೂ ಚಿತ್ರಕಲೆ ಕ್ಷೇತ್ರದಲ್ಲಿ ಸಾಧನೆ ಮಾಡಿದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಗೀತಾ ನಾಯಕ್ ಅವರಿಗೆ ’ಸ್ವರ್ಣ ಶ್ರೀ’ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ.. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು  ಅಭಿನಂದನೆ ಸಲ್ಲಿಸಿರುತ್ತಾರೆ

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಪಡುವರಿಯ ಹೋಲಿ ಕ್ರಾಸ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಶಿರೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2026-27 ಕಾರ್ಯಕ್ರಮವು ಸಂಭ್ರಮದಿಂದ ಜರುಗಿತು. ವಿದ್ಯಾರ್ಥಿಗಳಲ್ಲಿ ಅಡಗಿರುವ ಸೃಜನಶೀಲತೆ, ಕಲಾತ್ಮಕ ಅಭಿರುಚಿ ಹಾಗೂ ವಿವಿಧ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಮಹತ್ವದ ವೇದಿಕೆಯಾಗಿವೆ. ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಮುಕ್ತವಾಗಿ ಅಭಿವ್ಯಕ್ತಪಡಿಸಲು ಇಂತಹ ಸ್ಪರ್ಧೆಗಳು ಅವಕಾಶ ಕಲ್ಪಿಸುತ್ತವೆ ಎಂದು ಕಾರ್ಯಕ್ರಮದಲ್ಲಿ ಅಭಿಪ್ರಾಯ ವ್ಯಕ್ತವಾಯಿತು. ಶಿರೂರು ಕ್ಲಸ್ಟರ್ ವ್ಯಾಪ್ತಿಯ ಸುಮಾರು 19 ಶಾಲೆಗಳ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಕಾರ್ಯಕ್ರಮವನ್ನು ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಗೌರವಿಸಿದರು. ಬೈಂದೂರಿನ ಹೋಲಿ ಕ್ರಾಸ್ ಶಾಲೆಯ ವ್ಯವಸ್ಥಾಪಕರಾದ ರೆವರೆಂಡ್ ಸಿಸ್ಟರ್ ಆನ್ಸಿ ಪೌಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ಹೋಲಿ ಕ್ರಾಸ್ ಚರ್ಚ್‌ನ ರೆವರೆಂಡ್ ಫಾದರ್ ಡೆನಿಸ್ ಡಿಸೋಜಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬೈಂದೂರು ಸಂಯೋಜಕರಾದ ಪ್ರದೀಪ್ ಕುಮಾರ್ ಶೆಟ್ಟಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕಾಲೇಜಿನ ಅಂಗರಚನಾಶಾಸ್ತ್ರ ವಿಭಾಗದ ವತಿಯಿಂದ ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಿಗಾಗಿ ಶವದೇಹ ಗೌರವ ಪ್ರತಿಜ್ಞಾ ಸಮಾರಂಭವು ಗುರುವಾರ ಮಿಜಾರು ಕ್ಯಾಂಪಸ್‌ನಲ್ಲಿ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಮಂಗಳೂರಿನ ಯೆನೆಪೋಯ ವಿಶ್ವವಿದ್ಯಾಲಯದ ತುರ್ತು ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕಿ ಹಾಗೂ ಸಿಮ್ಯುಲೇಶನ್ ಪ್ರಯೋಗಾಲಯದ ಸಂಯೋಜಕಿ ಡಾ. ಮೇಘನಾ ಮುಕುಂದ್, “ವೈದ್ಯಕೀಯ ವಿದ್ಯಾರ್ಥಿಗಳಿಗೆ ಶವದೇಹವೇ ಮೊದಲ ಗುರು. ಅದನ್ನು ಅತ್ಯಂತ ಗೌರವ ಮತ್ತು ಕೃತಜ್ಞತೆಯಿಂದ ಕಾಣುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಕರ್ತವ್ಯ. ಮಾನವ ದೇಹದ ಅಂಗರಚನೆಯನ್ನು ಅರಿತುಕೊಳ್ಳಲು ಹಾಗೂ ವೈದ್ಯಕೀಯ ಜ್ಞಾನದ ಮೂಲಭೂತ ಅಂಶಗಳನ್ನು ಕಲಿಯಲು ಶವದೇಹಗಳ ಕೊಡುಗೆ ಅಪಾರ. ಈ ಅಪರೂಪದ ಕಲಿಕಾ ಅವಕಾಶವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಆಳ್ವಾಸ್ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಡೀನ್ ಡಾ. ಮಹಾಬಲ ಶೆಟ್ಟಿ ಮಾತನಾಡಿ, “ತಮ್ಮ ದೇಹವನ್ನು ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆಗಾಗಿ ದಾನ ಮಾಡುವುದು ಸಾಮಾನ್ಯ ನಿರ್ಧಾರವಲ್ಲ. ಅದಕ್ಕೆ…

Read More