ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.25: ತಾಲೂಕಿನ ಅರಾಟೆ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಎರಡು ಖಾಸಗಿ ಬಸ್ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 26 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಹೆಮ್ಮಾಡಿ ಅರಾಟೆ ಸೇತುವೆ ಬಳಿ ಭಾನುವಾರ ಬೆಳಗ್ಗೆ ಮಂಗಳೂರಿನತ್ತ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಕುಂದಾಪುರದಿಂದ ಸಾಗರದ ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಗಳ ಮುಖಮುಖಿ ಡಿಕ್ಕಿಯಾಗಿವೆ. ಅಫಘಾತದ ತೀವ್ರತೆಗೆ ಎರಡೂ ಬಸ್ಸಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದರು. ಒಟ್ಟು 26 ಪ್ರಯಾಣಿಕರಿಗೆ ಗಾಯಗಳಾಗಿದ್ದು, ಗಂಭೀರ ಗಾಯಗೊಂಡ ಮೂವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ಹಾಗೂ ಉಳಿದವರನ್ನು ಕುಂದಾಪುರದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಗಂಗೊಳ್ಳಿಯ ಟೀಮ್ ಎಂ.ಎಚ್.ಐ ಆಪತ್ಥಾಂಧವ ಆಂಬುಲೆನ್ಸ್ ತಂಡದ ಇಬ್ರಾಹಿಂ ಗಂಗೊಳ್ಳಿ, ಅಬ್ರಾರ್ ಹಾಗೂ ಸ್ವಯಂಸೇವಕ ವಿಕಾಸ್ ಎರಡು ಆಂಬುಲೆನ್ಸ್ಗಳ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಕಾರ್ಯದಲ್ಲಿ ತೊಡಗಿಸಿಕೊಂಡರು. ಸ್ಥಳೀಯ ರಿಕ್ಷಾ ಚಾಲಕರು ಹಾಗೂ ಸಾರ್ವಜನಿಕರು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾದರು. ಘಟನಾ ಸ್ಥಳಕ್ಕೆ ಪೊಲೀಸರು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿಕ್ಷಣ ಎನ್ನುವುದು ಶೈಕ್ಷಣಿಕ, ಭಾವನಾತ್ಮಕ ಮತ್ತು ಸಾಮಾಜಿಕ ಬುದ್ಧಿಮತ್ತೆಯನ್ನು ಕಲಿಸುತ್ತದೆ ಎಂದು ನಿವೃತ್ತ ಪ್ರಾಧ್ಯಾಪಕ ಕೆ. ಗೋಪಾಲ್ ಹೇಳಿದರು. ಅವರು ಶನಿವಾರ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಆರ್ ಎನ್ ಶೆಟ್ಟಿ ಸಭಾಭವನದಲ್ಲಿ ಕಲಾ ವಿಭಾಗ ಆಯೋಜಿಸಿದ್ದ “ಆದ್ಯತಾ” ಕಲಾ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಶಿಕ್ಷಣ ಎನ್ನುವುದು ಕೇವಲ ಕಲಿಯುವಿಕೆ ಅಥವಾ ಅಂಕಗಳಿಗೆ ಸೀಮಿತವಾಗಿರಬಾರದು. ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕವಾಗಿ ಕ್ರಿಯಾಶೀಲತೆ ಸೃಜನಶೀಲತೆ ಮತ್ತು ಉತ್ತಮ ಅಂಕಗಳನ್ನು ಪಡೆಯುವುದು, ಭಾವನಾತ್ಮಕವಾಗಿ ಆತ್ಮಸ್ಥೈರ್ಯ, ದೃಢ ಮನೋಭಾವ, ನಾಯಕತ್ವದ ಗುಣಗಳನ್ನು ಮತ್ತು ಸಾಮಾಜಿಕವಾಗಿ ಹೊಂದಾಣಿಕೆ, ಕಾರ್ಯಗಳನ್ನು ಸುಸಂಬದ್ಧ ರೀತಿಯಲ್ಲಿ ಮಾಡುವ ಮತ್ತು ನಿಭಾಯಿಸುವ ಪರಿಯನ್ನು ಪರಿಣಾಮಕಾರಿಯಾಗಿ ತಿಳಿಸಬೇಕು ಈ ಮೂರು ಅಂಶಗಳ ಸಮ್ಮಿಲನ ಈ ಕಾರ್ಯಕ್ರಮದಲ್ಲಿ ಕಾಣುತ್ತಿದೆ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲ ಡಾ.ಶುಭಕರಾಚಾರಿ ಮಾತನಾಡಿ ಕಲಾ ವಿಭಾಗದ ವಿದ್ಯಾರ್ಥಿಗಳು ಎಲ್ವಲಾ ಕ್ಷೇತ್ರದಲ್ಲಿ ಮಿಂಚುತ್ತಿದ್ದಾರೆ. ಕಾಲೇಜಿನ ಇತಿಹಾಸದ ಪುಟಗಳನ್ನು ತೆರೆದರೆ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳ ಸಾಲಿನಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಇದರ ವತಿಯಿಂದ 52ನೇ ವರ್ಷದ ಶ್ರೀ ಶಾರದಾ ಮಹೋತ್ಸವವು ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ 10 ದಿನಗಳ ಕಾಲ ನಡೆದು, ಗುರುವಾರ ರಾತ್ರಿ ವೈಭವದ ಶೋಭಾಯಾತ್ರೆಯೊಂದಿಗೆ ಸಂಪನ್ನಗೊಂಡಿತು. ಶ್ರೀ ಶಾರದಾ ಮಂಟಪದ ಬಳಿಯಿಂದ ಆರಂಭಗೊಂಡ ಶ್ರೀ ಶಾರದಾ ದೇವಿಯ ವೈಭವದ ಶೋಭಾಯಾತ್ರೆ ಮುಖ್ಯ ರಸ್ತೆಯಲ್ಲಿ ಮೇಲ್ಗಂಗೊಳ್ಳಿಯ ಬಾವಿಕಟ್ಟೆ ತನಕ ಸಾಗಿ ಬಂದರಿನ ಪೋರ್ಟ್ ಆಫೀಸಿನ ಬಳಿ ಸಮಾಪನಗೊಂಡಿತು. ಬಳಿಕ ಶ್ರೀ ದೇವಿಯ ವಿಗ್ರಹವನ್ನು ಪಂಚಗಂಗಾವಳಿ ನದಿಯಲ್ಲಿ ಜಲಸ್ತಂಭನ ಮಾಡಲಾಯಿತು. ಹುಲಿ ವೇಷ, ವಿವಿಧ ಟ್ಯಾಬ್ಲೋಗಳು, ಛದ್ಮ ವೇಷಗಳು ಮೆರವಣಿಗೆಗೆ ಮತ್ತು ಮೆರುಗು ತಂದಿತ್ತವು. ಈ ಶೋಭಾಯಾತ್ರೆಯನ್ನು ಕಣ್ತುಂಬಿಕೊಳ್ಳಲು ನಗರದಲ್ಲಿ ಅಪಾರ ಸಂಖ್ಯೆಯ ಜನಸ್ತೋಮ ಸೇರಿದ್ದರು. ಈ ಸಂದರ್ಭದಲ್ಲಿ ಪುರೋಹಿತರಾದ ಜಿ.ರಾಘವೇಂದ್ರ ಆಚಾರ್ಯ, ಸಮಿತಿಯ ಅಧ್ಯಕ್ಷ ಶೇಖರ ಜಿ., ಪ್ರಧಾನ ಕಾರ್ಯದರ್ಶಿ ಪ್ರಶಾಂತ ಎಸ್ಆರ್ಜಿ, ಕಾರ್ಯದರ್ಶಿ ಎಂ. ಸಂದೀಪ ಖಾರ್ವಿ, ಮಹಿಳಾ ಮಂಡಳಿ ಅಧ್ಯಕ್ಷೆ ರೇಣುಕಾ ವಾಸುದೇವ ಶೇರುಗಾರ್,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಪೂರ್ಣಪ್ರಜ್ಞ ಕಾಲೇಜು ಉಡುಪಿ ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ಆಶ್ರಯದಲ್ಲಿ ಜರುಗಿದ ಮಂಗಳೂರು ವಿ.ವಿ. ಅಂತರ್ ಕಾಲೇಜು ದೇಹದಾಢ್ಯ ಚಾಂಪಿಯನ್ಶಿಪ್ನಲ್ಲಿ ಆಳ್ವಾಸ್ ತಂಡವು 17ನೇ ಬಾರಿ ಸಮಗ್ರ ತಂಡ ಪ್ರಶಸ್ತಿಯನ್ನು ಪಡೆಯಿತು. ಆಳ್ವಾಸ್ ಕಾಲೇಜಿನ ಪ್ರಥಮ್ ಮಿಸ್ಟರ್ ಯೂನಿವರ್ಸಿಟಿ ವೈಯಕ್ತಿಕ ಪ್ರಶಸ್ತಿಯನ್ನು ಪಡೆದುಕೊಂಡರು. 17ನೇ ಬಾರಿ ಸಮಗ್ರ ಪ್ರಶಸ್ತಿಯನ್ನು ಪಡೆಯುತ್ತಾ ಬಂದಿರುವ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವರವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಾಸರಗೋಡು ಕನ್ನಡ ಭವನ ಮತ್ತು ಗ್ರಂಥಾಲಯ ಕನ್ನಡ ಭವನ ಪ್ರಕಾಸನ ಏರ್ಪಡಿಸಿದ ದಸರಾ ಸಾಂಸ್ಕೃತಿಕೋತ್ಸವ 2026ರ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಕೋಟದ ಪ್ರೇರಣಾ ಹಾಗೂ ಸಾನ್ವಿ ಅವರು ಕಲಾಶ್ರೀ ಪ್ರಶಸ್ತಿಗೆ ಭಾಜನರಾದರು. ಇವರು ಕೋಟ ವಿವೇಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಪ್ರೇರಣಾ ಮಣೂರು ಪಡುಕೆರೆ ನಿವಾಸಿಯಾದ ನಾಗೇಶ್ ಮತ್ತು ಪ್ರೇಮ ಅವರ ಪುತ್ರಿಯಾಗಿರುತ್ತಾಳೆ. ಸಾನ್ವಿ ಪಾರಂಪಳ್ಳಿ ನಿವಾಸಿಯಾದ ನಾಗರಾಜ್ ಮತ್ತು ಸರಸ್ವತಿ ಅವರ ಪುತ್ರಿಯಾಗಿದ್ದಾರೆ. ಇವರ ಕಲಾಶ್ರೀ ಪ್ರಶಸ್ತಿ ಸ್ವೀಕರಿಸಿದ ಇರ್ವರಿಗೆ ಶಾಲಾ ಆಡಳಿತ ಮಂಡಳಿ, ಶಾಲಾ ಶಿಕ್ಷಕ ವೃಂದ ಹಾಗೂ ಗ್ರಾಮಸ್ಥರು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮತದಾರರ ಹಕ್ಕುಗಳ ರಕ್ಷಣೆ, ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ಚುನಾವಣಾ ಆಯೋಗದ ಸ್ವಾಯತ್ತತೆಯನ್ನು ಖಾತರಿಪಡಿಸುವಂತೆ ಆಗ್ರಹಿಸಿ ವಿವಿಧ ರಾಜಕೀಯ ಪಕ್ಷಗಳು ಮತ್ತು ಸಮಾನಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ಶುಕ್ರವಾರ ಕುಂದಾಪುರದಲ್ಲಿ ಪ್ರತಿಭಟನೆ ನಡೆಯಿತು. ಇವಿಎಂ ಬದಲಿಗೆ ಮತಪತ್ರಗಳ ಮೂಲಕ ಚುನಾವಣೆ ನಡೆಸುವುದು ಸೇರಿದಂತೆ ಒಂಬತ್ತು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನಾಕಾರರು ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಕುಂದಾಪುರದ ನೆಹರೂ ಮೈದಾನದಿಂದ ಮಧ್ಯಾಹ್ನ ಸುಮಾರು 2 ಗಂಟೆಗೆ ಆರಂಭಗೊಂಡ ವಾಹನ ಜಾಥಾ ಟೆಕ್ಕಟ್ಟೆ, ಕೋಮೆ, ಕೋಡಿ ಹಾಗೂ ವಿನಾಯಕ ಮಾರ್ಗವಾಗಿ ಸಾಗಿತು. ಬಳಿಕ ಶಾಸ್ತ್ರಿ ವೃತ್ತದಲ್ಲಿ ಸಾರ್ವಜನಿಕ ಸಭೆ ನಡೆಯಿತು. ಸಭೆಯ ನಂತರ ಪ್ರತಿಭಟನಾಕಾರರು ಪಾದಯಾತ್ರೆಯ ಮೂಲಕ ಸಹಾಯಕ ಆಯುಕ್ತರ ಕಚೇರಿಗೆ ತೆರಳಿ, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯಪಾಲರಿಗೆ ಉದ್ದೇಶಿಸಿದ ಮನವಿಯನ್ನು ಸಹಾಯಕ ಆಯುಕ್ತರ ಮೂಲಕ ಸಲ್ಲಿಸಿದರು. ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ, ಸಹಬಾಳ್ವೆ ಕುಂದಾಪುರ, I.N.D.I.A. ಒಕ್ಕೂಟದ ವಿವಿಧ ಪಕ್ಷಗಳು, ಸಿಪಿಐ(ಎಂ),…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ರಾಷ್ಟ್ರೀಯ ಹೆದ್ದಾರಿ 66ರ ಮಣೂರು ಗ್ರಾಮದ ಕಿರಿ ಮಹಾಲಿಂಗೇಶ್ವರ ದೇವಸ್ಥಾನದ ಹತ್ತಿರ ಟೆಂಪೊ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ಕುಂದಾಪುರದಿಂದ ಉಡುಪಿ ಕಡೆಗೆ ತೆರಳುತ್ತಿದ್ದ 407 ಟೆಂಪೊ ಚಾಲಕ ಯಾವುದೇ ಸೂಚನೆ ನೀಡದೆ ಏಕಾಏಕಿ ತನ್ನ ವಾಹನವನ್ನು ರಸ್ತೆಯ ಮಧ್ಯಭಾಗದಲ್ಲಿ ನಿಲ್ಲಿಸಿದ್ದಾನೆ. ಇದರಿಂದಾಗಿ ಅದೇ ದಿಕ್ಕಿನಲ್ಲಿ ಹಿಂಬದಿಯಿಂದ ಬರುತ್ತಿದ್ದ ಬೈಕ್ ಸವಾರ ಸಚಿನ್ (42) ನಿಯಂತ್ರಣ ಕಳೆದುಕೊಂಡು ಟೆಂಪೊಗೆ ಹಿಂಬದಿಯಿಂದ ಭೀಕರವಾಗಿ ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ತೀವ್ರತೆಗೆ ಸವಾರ ಸಚಿನ್ ಅವರ ಎದೆ, ತಲೆ ಹಾಗೂ ಹೊಟ್ಟೆಗೆ ತೀವ್ರ ಸ್ವರೂಪದ ರಕ್ತಗಾಯಗಳಾಗಿದ್ದು, ತಕ್ಷಣವೇ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೈಬರ್ ವಂಚಕರಿಂದ ವ್ಯಕ್ತಿಯೊಬ್ಬರು ವಂಚನೆಗೆ ಒಳಗಾಗಿ ಕ್ರೆಡಿಟ್ ಕಾರ್ಡ್ ಮೂಲಕ 2.24 ಲಕ್ಷ ರೂ. ಕಳೆದುಕೊಂಡ ಘಟನೆ ಬುಧವಾರ ಕುಂದಾಪುರದಲ್ಲಿ ಸಂಭವಿಸಿದೆ. ದೂರುದಾರ ಶೇಖರ ವಂಚನೆಗೊಳಗಾದವರು. ಅವರಿಗೆ ಅಪರಿಚಿತ ವ್ಯಕ್ತಿ ಹಿಂದಿ ಭಾಷೆಯಲ್ಲಿ ಕರೆಮಾಡಿ ನೀವು ಸೀನಿಯರ್ ಸಿಟಿಜನ್ ಆಗಿರುವುದರಿಂದ ಕ್ರೆಡಿಟ್ ಕಾರ್ಡ್ ನೀಡುತ್ತಿದ್ದೇವೆ ಎಂದು ಹೇಳಿ ಮಾಹಿತಿ ಪಡೆದು ಎಪಿಕೆ ಫೈಲ್ ಕಳುಹಿಸಿ ಬ್ಯಾಂಕ್ ಆಫ್ ಬರೋಡಾಕ್ಕೆ ಸಂಬಂಧಿಸಿದಂತೆ ವಿವರವನ್ನು ಕೇಳಿದ್ದಾನೆ. ಸಂಜೆ ಮೊಬೈಲ್ ಇನ್ಬಾಕ್ಸ್ ಚೆಕ್ ಮಾಡಿದಾಗ ಅವರ ಬ್ಯಾಂಕ್ ಆಫ್ ಬರೋಡಾ ಕ್ರೆಡಿಟ್ ಕಾರ್ಡ್ನಿಂದ 1,30,490 ರೂ., 22,167 ರೂ., 10,000 ರೂ., ಮತ್ತು ಆರ್ಬಿಎಲ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ನಿಂದ 3,468 ರೂ., 20,000 ರೂ., 37,999 ರೂ. ಸೇರಿ ಒಟ್ಟು 2,24,124 ರೂ. ಹಣವನ್ನು ಸೈಬರ್ ವಂಚಕರು ವರ್ಗಾಯಿಸಿಕೊಂಡಿರುತ್ತಾರೆ. ಶೇಖರ ಅವರು ನೀಡಿದ ದೂರಿನಂತೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಿತ್ತಳೆ ಮಾರಿ ವ್ಯಕ್ತಿಯೊಬ್ಬ ಸರಕಾರಿ ಶಾಲೆಯೊಂದನ್ನು ಕಟ್ಟಿ ಅದನ್ನು ಮುನ್ನಡೆಸಲು ಸಾಧ್ಯ ಎಂದು ತೋರಿಸಿಕೊಟ್ಟವರು ಹರೆಕಳ ಹಾಜಬ್ಬ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಸಾಹೇಬರಕಟ್ಟೆ ಮಹಾತ್ಮ ಗಾಂಧಿ ಪ್ರೌಢಶಾಲೆಯಲ್ಲಿ ಯಡ್ತಾಡಿ ಶ್ರೀ ವಿನಾಯಕ ಯುವಕ ಮಂಡಲದ ನೇತೃತ್ವದಲ್ಲಿ 15ನೇ ವರ್ಷದ ಶಾರದೋತ್ಸವ ನಮ್ಮೂರ ದಸರಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ಶ್ರೀಮಂತರ ಸ್ವತ್ತಾಗಿದ್ದ ಪದ್ಮಶ್ರೀಯಂತಹ ಅತ್ಯುನ್ನತ ಪ್ರಶಸ್ತಿಗಳು ತಳಮಟ್ಟದ ಹರೆಕಳ ಹಾಜಬ್ಬರಂತ ಸಾಮಾನ್ಯ ಸಾಧಕರಿಗೂ ತಲುಪುವಂತೆ ಮಾಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ. ಹರೇಕಳ ಹಾಜಬ್ಬ ಪದ್ಮಶ್ರೀ ಪ್ರಶಸ್ತಿ, ಗೌರವ ಡಾಕ್ಟರೇಟ್ನಂತಹ ಹಲವು ಪ್ರಶಸ್ತಿ, ಪಾರಿತೋಷಕ ಪಡೆದರೂ ಸರಳತೆ, ಸಾಮಾನ್ಯರಲ್ಲಿ ಸಾಮಾನ್ಯರಂತೆ ಬದುಕು ಕಟ್ಟಿಕೊಂಡವರು ಎಂದರು. ಹರೇಕಳ ಹಾಜಬ್ಬರಿಗೆ ಶ್ರೀ ವಿನಾಯಕ ಸಾಧನಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಹರೇಕಳ ಹಾಜಬ್ಬ , ನನ್ನ ಧಣಿ ಅಚ್ಚಣ್ಣ ಶೆಟ್ಟರು ಬಾರ್ಕೂರು ಸೀಮೆಯವರು, ನನ್ನ ತಂದೆ ತಾಯಿ ಅವರಲ್ಲಿ ಕೆಲಸಕ್ಕೆ ಹೋಗುತ್ತಿದ್ದರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿ ವೇದಿಕೆ ‘ಅಭಿವ್ಯಕ್ತಿ’ಯ 2026–27ನೇ ಸಾಲಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಶುಕ್ರವಾರ ಕಾಲೇಜಿನ ಮಲ್ಟಿಮೀಡಿಯಾ ಸ್ಟುಡಿಯೋದಲ್ಲಿ ನಡೆಯಿತು. ನಿರೂಪಕ ನಿತೇಶ್ ಪೂಜಾರಿ ಮಾರ್ನಾಡ್ ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ನಿರೂಪಣೆ ಎನ್ನುವುದು ಕೇವಲ ಮಾತಿನ ಕಲೆಯಲ್ಲ, ಅದಕ್ಕೆ ಜ್ಞಾನ, ಆತ್ಮವಿಶ್ವಾಸ, ಪೂರ್ವಸಿದ್ಧತೆ, ವಿಷಯದ ಮೇಲಿನ ಆಸಕ್ತಿ, ಧ್ವನಿಯ ಏರಿಳಿತ ಮತ್ತು ಬದ್ಧತೆ ಅತ್ಯಗತ್ಯ ಎಂದರು. ನಿರೂಪಣೆ ಸುಲಭದ ಕೆಲಸವಲ್ಲ. ಪ್ರತಿಯೊಂದು ಕಾರ್ಯಕ್ರಮಕ್ಕೂ ಅದರ ಸ್ವರೂಪಕ್ಕೆ ತಕ್ಕ ಸಿದ್ಧತೆ ಅಗತ್ಯ. ಕಾರ್ಯಕ್ರಮದ ಕುರಿತು ಮೂಲಭೂತ ಮಾಹಿತಿಯನ್ನಾದರೂ ನಿರೂಪಕರು ತಿಳಿದುಕೊಂಡಿರಬೇಕು. ವಿಷಯದ ಬಗ್ಗೆ ಆಳವಾದ ಜ್ಞಾನ ಇರಲೇಬೇಕೆಂದಿಲ್ಲವಾದರೂ, ಕಾರ್ಯಕ್ರಮದ ಹಿನ್ನೆಲೆ ಮತ್ತು ಸಂದರ್ಭವನ್ನು ಅರ್ಥಮಾಡಿಕೊಂಡಿರಬೇಕು. ನಿರೂಪಣೆಯ ಸ್ಕ್ರಿಪ್ಟ್ ಅನ್ನು ಕಂಠಪಾಠ ಮಾಡುವುದಕ್ಕಿಂತ ಅದರ ಆಶಯವನ್ನು ಮನಸ್ಸಿನಲ್ಲಿ ಅರ್ಥಮಾಡಿಕೊಂಡು ಸಹಜವಾಗಿ ಪ್ರಸ್ತುತಪಡಿಸುವುದು ಮುಖ್ಯ. ಧ್ವನಿಯ ವಿಭಿನ್ನ ಭಾವಗಳು, ಸೂಕ್ತ ಏರಿಳಿತ ಮತ್ತು ಮಾತಿನ ಶೈಲಿ…
