ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗವು ಎಂಎಸ್‌ಡಿಸಿ, ಮಣಿಪಾಲ ಸಹಯೋಗದಲ್ಲಿ ಆಯೋಜಿಸಿದ್ದ “ಪ್ರಾಜೆಕ್ಟ್ ಎಕ್ಸ್ಪೋ – ಸೃಜನಶೀಲತೆ ಮತ್ತು ತಂತ್ರಜ್ಞಾನದ ಸಂಗಮ” ಕಾರ್ಯಕ್ರಮದ ಸಮಾರೋಪ ಸಮಾರಂಭವು ಇತ್ತೀಚಿಗೆ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆ ಮತ್ತು ಸೃಜನಶೀಲತೆಯನ್ನು ಪ್ರೋತ್ಸಾಹಿಸುವಲ್ಲಿ ಇಂತಹ ಕಾರ್ಯಕ್ರಮಗಳು ಅಗತ್ಯ ಎಂದು ವಿವರಿಸಿದರು. ಮುಖ್ಯ ಅತಿಥಿಗಳಾಗಿ ಶ್ರೇಯಸ್ ಸುವರ್ಣ, ಸಾನ್ವಿ ಟೆಕ್ನಾಲಜೀಸ್, ಸಾಲಿಗ್ರಾಮ ಹಾಗೂ ರಾಜಲಕ್ಷ್ಮಿ ಆನಂದನ್, ಸೆಂಟರ್ ಹೆಡ್, ಸ್ಕೂಲ್ ಆಫ್ ಐಟಿ ಸ್ಕಿಲ್ಸ್, ಎಂಎಸ್‌ಡಿಸಿ, ಮಣಿಪಾಲ ಭಾಗವಹಿಸಿದ್ದರು. ಅತಿಥಿಗಳು ವಿದ್ಯಾರ್ಥಿಗಳ ನವೀನ ಯೋಜನೆಗಳನ್ನು ಶ್ಲಾಘಿಸಿ, ತಂತ್ರಜ್ಞಾನ ಕ್ಷೇತ್ರದಲ್ಲಿನ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು. ಸೃಜನಶೀಲತೆ, ನವೀನ ಚಿಂತನೆ, ತಾಂತ್ರಿಕ ಕೌಶಲ್ಯ ಹಾಗೂ ಪರಿಣಾಮಕಾರಿ ಸಂವಹನ ಕೌಶಲ್ಯಗಳು ವೃತ್ತಿಜೀವನದಲ್ಲಿ ಯಶಸ್ಸು ಸಾಧಿಸಲು ಅತ್ಯಗತ್ಯವೆಂದು ತಿಳಿಸಿದರು. ವಿದ್ಯಾರ್ಥಿಗಳು ನಿರಂತರ ಕಲಿಕೆಯ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಧ್ಯಾಪಕರ ಸಂಘದ ದಿನಾಚರಣೆ ಕಾರ್ಯಕ್ರಮವು ಗುರುವಾರ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಉಪನ್ಯಾಸಕರು ಉತ್ತಮ ರೀತಿಯಲ್ಲಿ ಸಾಧನೆ ಮಾಡಬೇಕು. ಹೆಚ್ಚು ಸಂಶೋಧನಾ ಕ್ಷೇತ್ರ ಮತ್ತು ಇತರೆ ಜ್ಞಾನಪೂರ್ಣ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಿ ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತರಾಗಿ ಆಗಮಿಸಿದ್ದ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರೋಜ ಎಮ್. ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಧ್ಯಾಪಕರ ಸಂಘದ ಅಧ್ಯಕ್ಷೆ ನಿಶಾ ಎಮ್. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಅಧ್ಯಾಪಕರ ಸಂಘದ ಉಪಾಧ್ಯಕ್ಷರಾದ ವಿದ್ಯಾಧರ ಪೂಜಾರಿ, ಕಾರ್ಯದರ್ಶಿ ಅರುಣ್ ಎ.ಎಸ್. ಜೊತೆ ಕಾರ್ಯದರ್ಶಿ ದುರ್ಗಾಪ್ರಸಾದ್ ಮಯ್ಯ, ಖಜಾಂಚಿ ಮನೋಹರ ಉಪಾಧ್ಯಾಯ ಉಪಸ್ಥಿತರಿದ್ದರು. ಡಾಕ್ಟರೇಟ್ ಪದವಿ ಪಡೆದ ಆಂಗ್ಲ ಭಾಷಾ ಉಪನ್ಯಾಸಕ ಡಾ. ಶರಣ್ ಎಸ್ .ಜೆ. ಮತ್ತು ಕನ್ನಡ ಭಾಷಾ ಉಪನ್ಯಾಸಕ ಡಾ. ಸುಖಾನಂದ ಶೆಟ್ಟಿ ಮತ್ತು ಕರ್ನಾಟಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಿವೃತ್ತ ಶಿಕ್ಷಕ, ಪತ್ರಕರ್ತ, ಪಂಚಾಯತ್ ರಾಜ್ ಸಂಪನ್ಮೂಲ ವ್ಯಕ್ತಿ, ಮರವಂತೆ ನಿವಾಸಿ ಎಸ್. ಜನಾರ್ದನ ಮರವಂತೆ (88 ವರ್ಷ) ಅವರು ಅಲ್ಪಕಾಲದ ಅಸೌಖ್ಯದಿಂದ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಎಸ್. ಜನಾರ್ದನ ಮರವಂತೆ ಅವರು ರಾಜ್ಯಶಾಸ್ತ್ರ ಮತ್ತು ಆಂಗ್ಲ ಸಾಹಿತ್ಯದಲ್ಲಿ ಪ್ರತ್ಯೇಕ ಸ್ನಾತಕೋತ್ತರ ಪದವಿ, ಶಿಕ್ಷಣದಲ್ಲಿ ಸ್ನಾತಕ ಪದವಿ ಮತ್ತು ಹೈದರಾಬಾದಿನ ಕೇಂದ್ರೀಯ ಆಂಗ್ಲ ಮತ್ತು ವಿದೇಶೀ ಭಾಷೆಗಳ ಅಧ್ಯಯನ ಸಂಸ್ಥೆಯಿಂದ ಆಂಗ್ಲಭಾಷಾ ಬೋಧನೆಯಲ್ಲಿ ಸ್ನಾತಕೋತ್ತರ ಡಿಪ್ಲೋಮಾ ಪಡೆದಿರುವ ಜನಾರ್ದನರು ಖಂಬದಕೋಣೆ, ಕುಂದಾಪುರ, ಬೈಂದೂರು, ಶಂಕರನಾರಾಯಣದಲ್ಲಿ ಪ್ರೌಢಶಾಲಾ ಶಿಕ್ಷಕರಾಗಿ, ಚಿಕ್ಕಮಗಳೂರಿನ ಸಖರಾಯಪಟ್ಟಣ ಮತ್ತು ನಾವುಂದದಲ್ಲಿ ಉಪನ್ಯಾಸಕರಾಗಿ ದುಡಿದು 1999ರಲ್ಲಿ ನಿವೃತ್ತರಾದರು. ಶಿಕ್ಷಕ, ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಬಳಿಕ ತಮ್ಮ ನಿವೃತ್ತಿಯ ಬದುಕನ್ನು ಜನಾರ್ದನ ಮರವಂತೆ ಅವರು ಸಕ್ರೀಯವಾಗಿ ಕಳೆದವರು. ರಾಜಕೀಯ, ಸಾಹಿತ್ಯ, ಸಂಘಟನೆಯಲ್ಲಿ ತೊಡಗಿಸಿಕೊಂಡು ಮಾದರಿ ಕಾರ್ಯಗಳ ಮೂಲಕ ಖ್ಯಾತಿ ಗಳಿಸಿದ್ದರು. ಮರವಂತೆ ಪಂಚಾಯತ್ ಸದಸ್ಯರಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ರಾಷ್ಟ್ರಮಟ್ಟದಲ್ಲಿ ಮರವಂತೆ ಪಂಚಾಯತ್ ಗುರುತಿಸಿಕೊಳ್ಳಲು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕ್ರಿಯಾಶೀಲ ಹಸಿರು ಕ್ರಾಂತಿಯ ಪರಿಸರಸ್ನೇಹಿ ಸಂಘಟನೆಯಾದ ಕೋಟದ ಪಂಚವರ್ಣ ಸಂಘಟನೆಯ ಪ್ರತಿವರ್ಷದ ಜೂನ್ ನಿಂದ ಅಗಸ್ಟ್ ವರೆಗೆ ನಡೆಯುವ ಹಸಿರು ಹೆಜ್ಜೆ ಶೀರ್ಷಿಕೆ ಕಾರ್ಯಕ್ರಮಕ್ಕೆ ಕೋಟದ ಸಹಕಾರಿ ವ್ಯವಸಾಯಕ ಸಂಘದ ವತಿಯಿಂದ 100ಕ್ಕೂ ಅಧಿಕ ಪಾರಿಜಾತ ಗಿಡವನ್ನು ಶುಕ್ರವಾರ ಹಸ್ತಾಂತರಿಸಿತು. ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ. ಕೃಷ್ಣ ಕಾಂಚನ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ,ನಿರ್ದೇಶಕ ತಿಮ್ಮ ಪೂಜಾರಿ ಅವರು ಪಂಚವರ್ಣ ಅಧ್ಯಕ್ಷ ಕೆ.ಮನೋಹರ್ ಪೂಜಾರಿ ಅವರಿಗೆ ಗಿಡವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಪಂಚವರ್ಣ ಯುವಕ ಮಂಡಲದ ಉಪಾಧ್ಯಕ್ಷ ದಿನೇಶ್ ಆಚಾರ್, ಸದಸ್ಯರಾದ ಕೇಶವ ಆಚಾರ್, ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಕೋಟ ಸಹಕಾರಿ ಸಂಘದ ಸಿಬ್ಬಂದಿವರ್ಗ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯವು ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಂದ 6 ವಿಭಾಗಗಳಲ್ಲಿ ಮತ್ತು ಸಂಸ್ಥೆಗಳಿಂದ 9 ವಿಭಾಗಗಳಲ್ಲಿ ರಾಷ್ಟ್ರ ಪ್ರಶಸ್ತಿಗಾಗಿ ವೆಬ್‌ಸೈಟ್ www.award.gov.in ನಲ್ಲಿ ಆನ್‌ಲೈನ್ ಮೂಲಕ ನಾಮ ನಿರ್ದೇಶನ / ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಸಂಕೀರ್ಣ, ಮಣಿಪಾಲ ದೂ.ಸಂ: 0820-2574810 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕಾಸರಗೋಡು: ಕರ್ನಾಟಕದೊಳಗೆ ಎಲ್ಲೂ ಕಾಣಸಿಗದ ಕನ್ನಡ ಗ್ರಾಮ ಗಡಿನಾಡು ಕಾಸರಗೋಡಿನಲ್ಲಿದೆ. ಶಿವರಾಮ ಕಾಸರಗೋಡು ಅವರ ಪರಿಕಲ್ಪನೆಯ ಈ ಕನ್ನಡ ಗ್ರಾಮ ಸಾಹಿತ್ಯ ಸಂಸ್ಕೃತಿ ಕಲೆಗಳಿಗೆ ಆಶ್ರಯ ಧಾಮವಾಗಿದೆ. ಕಾಸರಗೋಡಿನಲ್ಲಿ ಕನ್ನಡವನ್ನು ಉಳಿಸುವ ಬೆಳೆಸುವ ಯೋಜನೆಯನ್ನು ರೂಪಿಸಿ ಸಾಕಾರಗೊಳಿಸುತ್ತಿರುವ ಪ್ರಧಾನ ಕೇಂದ್ರವಾಗಿ ಕನ್ನಡ ಗ್ರಾಮ ಕಾರ್ಯಾಚರಿಸುತ್ತಿರುವುದು ಅಭಿನಂದನೀಯ ಎಂದು ಅಂತರರಾಷ್ಟ್ರೀಯ ಖ್ಯಾತಿಯ ಎಲ್.ಜಿ. ಜ್ಯೋತಿಶ್ವರ ಬೆಂಗಳೂರು ಹೇಳಿದರು. ಮೂರುವರೆ ದಶಕಗಳ ಇತಿಹಾಸವಿರುವ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಸಂಸ್ಥಾಪಕ ಹಾಗೂ ಅಧ್ಯಕ್ಷ ಶಿವರಾಮ ಕಾಸರಗೋಡು ಅವರನ್ನು ಭೇಟಿಯಾಗಲು ಬಂದ ಜ್ಯೋತಿಶ್ವರ ದಂಪತಿ ಅವರನ್ನು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ ಇದರ ವತಿಯಿಂದ ಕನ್ನಡ ಗ್ರಾಮದಲ್ಲಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜ್ಯೋತಿಶ್ವರ ಅವರು ಕಾಸರಗೋಡು ಬಹುಭಾಷಾ ಸಂಸ್ಕೃತಿಯ ನಾಡು. ಭಾಷೆ ಉಳಿದರೆ ಸಂಸ್ಕೃತಿ ಉಳಿಯುತ್ತದೆ. ಭಾಷೆಗಳ ನಡುವೆ ಸೌಹಾರ್ದತೆಯನ್ನು ಕಾಯ್ದುಕೊಳ್ಳುವಲ್ಲಿ ನಾವೆಲ್ಲಾ ಪ್ರಾಮಾಣಿಕ ಪ್ರಯತ್ನ ನಡೆಸಬೇಕಾಗಿದೆ. ಆಂಗ್ಲ ಭಾಷಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೇಳೂರು ಗ್ರಾಮ ಪಂಚಾಯಿತಿ ಸಮುದಾಯ ಭವನದಲ್ಲಿ ಶುಕ್ರವಾರ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರ ನೇತೃತ್ವದಲ್ಲಿ ಜನ ಸಂಪರ್ಕ ಸಭೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಸಭೆಯಲ್ಲಿ ಕುಂದಾಪುರ ತಹಶೀಲ್ದಾರ್ ಪ್ರದೀಪ್ ಕುರುಡೇಕರ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮಹೇಶ್, ಬೇಳೂರು ಗ್ರಾ.ಪಂ ಪಿಡಿಒ ಪ್ರಶಾಂತ್, ಆಡಳಿತಾಧಿಕಾರಿ ರಾಘವೇಂದ್ರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು. ಗ್ರಾಮಸ್ಥರು ರಸ್ತೆ, ಕುಡಿಯುವ ನೀರು, ವಸತಿ ಯೋಜನೆ, ಕಂದಾಯ, ಮೆಸ್ಕಾಂ ಹಾಗೂ ಅರಣ್ಯ ಇಲಾಖೆಗೆ ಸಂಬಂಧಿಸಿದ ಮೂಲಸೌಕರ್ಯ ಸಮಸ್ಯೆಗಳ ಬಗ್ಗೆ ಶಾಸಕರಿಗೆ ಮನವಿ ಸಲ್ಲಿಸಿದರು. ಅಹವಾಲುಗಳನ್ನು ಸ್ವೀಕರಿಸಿದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರು ಸ್ಥಳದಲ್ಲಿಯೇ ಅಧಿಕಾರಿಗಳೊಂದಿಗೆ ಚರ್ಚಿಸಿ, ಶೀಘ್ರ ಪರಿಹಾರ ಕಲ್ಪಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ವಿಳಂಬವಿಲ್ಲದೆ ತಲುಪುವಂತೆ ಅಧಿಕಾರಿಗಳು ತ್ವರಿತವಾಗಿ ಕಾರ್ಯನಿರ್ವಹಿಸಬೇಕು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ನೇರಳಕಟ್ಟೆಯ ಮನೆಯೊಂದರಲ್ಲಿ ಯಾರು ಇಲ್ಲದ ವೇಳೆ ಲಕ್ಷಾಂತರ ರೂ ಮೌಲ್ಯದ ಚಿನ್ನ ಬೆಳ್ಳಿಯನ್ನು ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಇಬ್ಬರು ಆರೋಪಿಗಳನ್ನು ಕುಂದಾಪುರ ಗ್ರಾಮಾಂತರ ಪೊಲೀಸ್ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ವಿಜಯ ಶೆಟ್ಟಿ (32), ಅರ್ಜುನ ಪೂಜಾರಿ (29) ಎಂಬುವರನ್ನು ಬಂಧಿಸಲಾಗಿದ್ದು, ತಲೆಮರೆಸಿಕೊಂಡಿರುವ ಮೊಹಮ್ಮದ್ ಅಶ್ರಫ್ ಎಂಬಾತನಿಗಾಗಿ ಹುಡುಕಾಟ ಮುಂದುವರಿದಿದೆ. ಪ್ರಕರಣದ ವಿವರ:ಮೇ.23ರಂದು ಕರ್ಕುಂಜೆ ಗ್ರಾಮದ ನೇರಳಕಟ್ಟೆಯ ನಿರಂಜನ್ ಭಟ್ ಎಂಬವರ ಮನೆಯ ಬಾಗಿಲಿನ ಬೀಗ ಒಡೆದು ಮನೆಯಲ್ಲಿದ್ದ ಚಿನ್ನ, ಬೆಳ್ಳಿ ಹಾಗೂ ಹಣವನ್ನು ಕಳವು ಮಾಡಿಕೊಂಡು ಹೋಗಿರುವ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ಪ್ರಕರಣದ ತನಿಖೆಯನ್ನು ಹೆ.ಡಿ. ಕುಲಕರ್ಣಿ, ಪೊಲೀಸ್ ಉಪಾಧೀಕ್ಷಕರು, ಕುಂದಾಪುರ ಉಪ ವಿಭಾಗ, ಹಾಗೂ ಸಂತೋಷ ಎ ಕಾಯ್ಕಿಣಿ, ಪೊಲೀಸ್ ವೃತ್ತ ನಿರೀಕ್ಷಕರು, ಕುಂದಾಪುರ ವೃತ್ತ ಅವರ ನೇತೃತ್ವದಲ್ಲಿ ನಿರಂಜನ್ ಗೌಡ, ಪೊಲೀಸ್ ಉಪ ನಿರೀಕ್ಷಕರು (ಕಾ.ಸು), ಚಂದ್ರಕಲಾ ಪತ್ತಾರ ಪೊಲೀಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಸ್ಕೌಟ್ಸ್ , ಗೈಡ್ಸ್ ಮತ್ತು ಎನ್.ಸಿ.ಸಿ ಘಟಕದ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆಯನ್ನು ಶುಕ್ರವಾರ ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ಸಸಿಗಳನ್ನು ಹಂಚುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ವಲಯ ಅರಣ್ಯಾಧಿಕಾರಿ ದಿಲೀಪ್ ಕುಮಾರ್ ಬಿ.ವಿ. ವಿಶ್ವ ಪರಿಸರ ದಿನಾಚರಣೆಯ ಧ್ಯೇಯೋದ್ದೇಶಗಳನ್ನು ತಿಳಿಸುತ್ತಾ ‘ನಮ್ಮ ಭವಿಷ್ಯದ ಭೂಮಿಯ ರಕ್ಷಣೆ ನಮ್ಮ ಹೊಣೆ’ ಎಂದು ಹೇಳಿ ಭವಿಷ್ಯದಲ್ಲಿ ಆಕ್ಸಿಜನ್ ಬ್ಯಾಗ್‌ಗಳನ್ನು ಧರಿಸಿ ಬದುಕುವ ಬದಲು ಈಗಲೇ ಸಸಿಗಳನ್ನು ನೆಡುವ ಅಭ್ಯಾಸ ಬೆಳೆಸಿಕೊಳ್ಳಿ, ನೀರನ್ನು ಹಿತ ಮಿತವಾಗಿ ಬಳಸಿ, ವಾಯು ಮಾಲಿನ್ಯವನ್ನು ತಡೆಗಟ್ಟಲು ಪ್ರಯತ್ನಿಸಿ ಎಂದು ತಿಳಿಸಿದರು. ಉಪವಲಯ ಅರಣ್ಯಾಧಿಕಾರಿ ಪರಮೇಶ್ವರ ಪಟಗಾರ್, ಬೀಟ್ ಅರಣ್ಯ ರಕ್ಷಕರಾದ ಶಿವಣ್ಣ ಆರ್.ವಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ಕೃಷ್ಣ ಅಡಿಗ ಸ್ವಾಗತಿಸಿದರು. ಸಹ ಶಿಕ್ಷಕಿ ರೇಖಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು ಹಾಗೂ ಸಹ ಶಿಕ್ಷಕಿ ಚೈತ್ರಾ ವಂದನಾರ್ಪಣೆ ಸಲ್ಲಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎನ್.ಐ.ಎಫ್.ಟಿ (National institute of fashion technology) ನಲ್ಲಿ ಬಿ ಡಿಸೈನ್ ಮತ್ತು ಬಿ ಫ್ಯಾಶನ್ ಟೆಕ್ನಾಲಜಿ ಕೋರ್ಸ್ ಗಳ ಪ್ರವೇಶಾತಿಗಾಗಿ ನಡೆದ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶವನ್ನು ಪಡೆದುಕೊಂಡಿದ್ದಾರೆ. ದೇಶದ ಪ್ರತಿಷ್ಠಿತ NIFT ಕೇಂದ್ರಗಳಲ್ಲಿ ನಾಲ್ಕು ವರ್ಷದ ಡಿಸೈನ್ ಕೋರ್ಸ್ ಗಳ ಪ್ರವೇಶಾತಿಗಾಗಿ ನಡೆಯುವ ಅರ್ಹತಾ ಪರೀಕ್ಷೆ ಇದಾಗಿದ್ದು, ಫ್ಯಾಶನ್ ಡಿಸೈನ್, ಟೆಕ್ಸ್ ಟೈಲ್ ಡಿಸೈನ್, ಫ್ಯಾಷನ್ ಕಮ್ಯುನಿಕೇಷನ್ ಮುಂತಾದ ಬಹುಬೇಡಿಕೆಯುಳ್ಳ ಕೋರ್ಸ್ ಗಳಿಗೆ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದಾಗಿದೆ. ಬ್ಯಾಚುಲರ್ ಆಫ್ ಫ್ಯಾಶನ್ ಟೆಕ್ನಾಲಜಿ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ಸ್ವಾತಿ ಆರ್. ಹೊಸಮನಿ 166 (ಕೆಟಗರಿ ರ‍್ಯಾಂಕ್), 846 (ಜನರಲ್ ರ‍್ಯಾಂಕ್), ಅಕ್ಷಿತಾ ಜಿ ಕೆ. 246 (ಕೆಟಗರಿ ರ‍್ಯಾಂಕ್), 2715 (ಜನರಲ್ ರ‍್ಯಾಂಕ್), ಭಕ್ತಿ ಪಾಟೀಲ್ 652(ಕೆಟಗರಿ ರ‍್ಯಾಂಕ್), 933 (ಜನರಲ್ ರ‍್ಯಾಂಕ್), ಚೇತನ್ ಸಿ.355 (ಕೆಟಗರಿ ರ‍್ಯಾಂಕ್), 3250 (ಜನರಲ್ ರ‍್ಯಾಂಕ್ ) ಗಾನವಿ ಪಿ.ಸಿ.742 (ಕೆಟಗರಿ…
