ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಇಂದು ಸ್ವ ಉದ್ಯೋಗದ ಮೂಲಕ ಸ್ವಾವಲಂಬಿ ಬದುಕನ್ನು ರೂಪಿಸಲು ರುಡ್ಸೆಟ್ ಸಂಸ್ಥೆಯ ಕಾರ್ಯ ಶ್ಲಾಘನೀಯವಾಗಿದೆ. ಹಾಗಾಗಿ ಬದುಕಿನಲ್ಲಿ ನಿಷ್ಠೆ ಇದ್ದಲ್ಲಿ ಯಶಸ್ವಿ ಉದ್ಯಮ ಸಾಧ್ಯ ಎಂದು ಉಡುಪಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಅಭಿಪ್ರಾಯಪಟ್ಟರು. ಅವರು ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ, ಉಡುಪಿ, ಜಿಲ್ಲಾ ಕಾರಾಗೃಹ, ಹಿರಿಯಡ್ಕ ಮತ್ತು ರುಡ್ಸೆಟ್ ಸಂಸ್ಥೆ, ಬ್ರಹ್ಮಾವರ ಇವರ ಸಂಯುಕ್ತ ಆಶ್ರಯದಲ್ಲಿ 06 ದಿನಗಳ ಕಾಲ ನಡೆಯುವ ಉಡುಪಿ ಜಿಲ್ಲೆಯ ಕಾರಾಗೃಹ ಜೈಲುವಾಸಿಗಳಿಗೆ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಜೈಲುವಾಸಿಗಳನ್ನು ಉದ್ದೇಶಿಸಿ ಮಾತನಾಡಿದರು. ಅವರು ಉದ್ಯಮದಲ್ಲಿ ಉನ್ನತ ಮಟ್ಟದ ಸಾಧಿಸಲು ಉದ್ಯಮದ ಕುರಿತು ನಿಷ್ಠೆ ಬೆಳೆಸಿಕೊಳ್ಳಬೇಕು ಅಂದಾಗ ಮಾತ್ರ ಅದರಲಿ ಬೆಳವಣಿಗೆ ಹೊಂದಬಹುದು. ಉದ್ಯಮದಲ್ಲಿ ತೊಡಗುವಾಗ ಅದಕ್ಕೆ ತಕ್ಕುದಾದ ರಿಸ್ಕ್ಅನ್ನು ಎದುರಿಸಬೇಕಾಗುತ್ತದೆ. ಆದ್ದರಿಂದ ಇನ್ನಷ್ಟು ಆತ್ಮವಿಶ್ವಾಸ ಹೆಚ್ಚಾಗುತ್ತದೆ ಜೊತೆಗೆ ಹಂತ ಹಂತವಾಗಿ ಉದ್ಯಮ ಬೆಳೆಯುತ್ತದೆ ಎಂದು ಹೇಳಿ ಶುಭ ಹಾರೈಸಿದರು. ಕೆನರಾ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರಚಿಕಿತ್ಸೆ ನಡೆಸಿದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ತಜ್ಞ ವೈದ್ಯರ ತಂಡವು 8 ಕೆ.ಜಿ ಗ್ರಾತದ Fibroid Uterusಗರ್ಭಕೋಶದ ಗಡ್ಡೆಯನ್ನು ತೆಗೆದಿದ್ದಾರೆ. ರೋಗಿಯು ಇದೀಗ ಚೇತರಿಸಿಕೊಳ್ಳುತ್ತಿದ್ದು ಚಿಕಿತ್ಸೆ ಮುಂದುವರಿಸಲಾಗಿದೆ. ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸ್ತ್ರೀ ರೋಗ ತಜ್ಞರಾದ ಡಾ.ಶಶಾಂಕ್ ಕಿಣಿ, ಡಾ. ಜಾಸ್ಮಿನ್, ಡಾ.ಕವಿತಾ, ಡಾ.ಅಮೃತಾಂಶ್ ಇವರ ತಂಡ ಮತ್ತು ಅರವಳಿಕೆ ತಜ್ಞರಾದ ಡಾ. ಸೂರ್ಯನಾರಾಯಣ, ಡಾ.ರಾಜ್ ಗೋಪಾಲ್ ಭಂಡಾರಿ ಹಾಗೂ ಇವರ ಸಹಾಯದಲ್ಲಿ ಶುಶ್ರೂಷಕಧಿಕಾರಿ ರಕ್ಷಿತಾ, ಓ.ಟಿ ಸಹಾಯಕಿ ಸಂಗೀತ ಇವರ ನೇತೃತ್ವದಲ್ಲಿ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. 44 ವರ್ಷದ ಈ ಮಹಿಳೆ ಕಳೆದ 1 ವರ್ಷದಿಂದ ಹೊಟ್ಟೆಯಲ್ಲಿ ನೋವು ಕಾಣಿಸಿಕೊಂಡು ಖಾಸಗಿ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯುತ್ತಿದ್ದರು ಗುಣಮುಖರಾಗದ ಕಾರಣ ಈ ಮಹಿಳೆಯು ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಬಂದಿದ್ದು ಆಗ ತಜ್ಞ ವೈದ್ಯರು ಆ ಮಹಿಳೆಯನ್ನು ತಪಾಸಣೆ ಮಾಡಿದಾಗ ರೋಗಿಯ ಹೊಟ್ಟೆಯು (ಒಂದು ಮಕ್ಕಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪ್ರಸ್ತುತ ದಿನಗಳಲ್ಲಿ ಯುವ ಸಮುದಾಯ ಉದ್ಯೋಗ ಅರಸಿ ಸಿಟಿಗಳತ್ತ ಮುಖ ಮಾಡುವ ವ್ಯವಸ್ಥೆಯನ್ನು ನಾವುಗಳು ಕಾಣುತ್ತಿದ್ದೇವೆ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗಗಳಲ್ಲಿ ವಿದ್ಯಾಭ್ಯಾಸ ಮುಗಿಸಿದ ಯುವ ಆಸಕ್ತರಿಗೆ ಚೈತನ್ಯ ತುಂಬುವ ಕಾರ್ಯ ಕೋಟ ಪಡುಕರೆ ಡಿಗ್ರಿ ಕಾಲೇಜು ಹಮ್ಮಿಕೊಂಡಿರುವುದು ಅತ್ಯಂತ ಶ್ಲಾಘನೀಯ ಕಾರ್ಯ ಎಂದು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ಅಭಿಪ್ರಾಯಪಟ್ಟರು. ಅವರು ಕೋಟ ಪಡುಕರೆ ಲಕ್ಷ್ಮೀ ಸೋಮಬಂಗೇರ ಸರಕಾರಿ ಪ್ರಥಮದರ್ಜೆ ಕಾಲೇಜು ಇವರ ಆಶ್ರಯದಲ್ಲಿ ಗೀತಾನಂದ ಫೌಂಡೇಶನ್ ಮಣೂರು ಇವರ ಸಹಯೋಗದೊಂದಿಗೆ ಉದ್ಯೋಗ ಮೇಳ -2026 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರಾಂಶುಪಾಲ ಡಾ. ರಾಜೇಂದ್ರ ಎಸ್. ನಾಯಕ ಮಾತನಾಡಿ, ಯುವ ಜನತೆಗೆ ಶೈಕ್ಷಣಿಕ ವ್ಯವಸ್ಥೆಯ ನಡುವೆ ಉದ್ಯೋಗ ಎಂಬುವುದು ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸಲಿದೆ.ಸುತ್ತಮುತ್ತಲಿನ ವಿದ್ಯಾರ್ಥಿಗಳಿಗೆ ಅದರಲ್ಲೂ ಕರಾವಳಿ ಭಾಗದ ಯುವ ಸಮುದಾಯಕ್ಕೆ ಉದ್ಯೋಗ ಮೇಳ ಸುವರ್ಣಾವಕಾಶ ಕಲ್ಪಿಸುವ ಮೇಳವಾಗಿ ರೂಪುಗೊಂಡು ಭದ್ರ ಭವಿಷ್ಯ ನಿರ್ಮಾಣಕ್ಕೆ ಸಹಕಾರಿಯಾಗಲಿದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ದೇಶದ ಪ್ರತಿಷ್ಠಿತ ಐಐಟಿಗಳಲ್ಲಿ ಇಂಜಿನಿಯರಿಂಗ್ ಶಿಕ್ಷಣದ ಪ್ರವೇಶಕ್ಕಾಗಿ ನಡೆಯುವ ಅಖಿಲ ಭಾರತ ಮಟ್ಟದ ಜೆಇಇ ಅಡ್ವಾನ್ಸ್ 2026 ಪರೀಕ್ಷೆಯ ಫಲಿತಾಂಶದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ 17 ವಿದ್ಯಾರ್ಥಿಗಳು ಅಖಿಲ ಭಾರತ ಮಟ್ಟದಲ್ಲಿ ಶ್ರೇಷ್ಠ ಸಾಧನೆ ಮೆರೆದು ಗಮನ ಸೆಳೆದಿದ್ದಾರೆ. ಜನರಲ್ ಹಾಗೂ ಕೆಟಗರಿ ವಿಭಾಗದ ಅಖಿಲ ಭಾರತ ಮಟ್ಟದಲ್ಲಿ ಸ್ವಾತಿ ತಲವಾರ್ (1513ರ್ಯಾಂಕ್) ಹರ್ಷವರ್ಧನ್ ಕೆಪಿ(1698 ರ್ಯಾಂಕ್), ಮೆಲ್ರೋಯ್ ಕ್ಯಾಸ್ಟಲಿನೋ(1733 ರ್ಯಾಂಕ್), ಕೃತಿಕ್ ಬಿ(1795 ರ್ಯಾಂಕ್), ನೀಲಾಂಬಿಕ(2223 ರ್ಯಾಂಕ್), ಮಾನಸ ಕೆಎಸ್(2935 ರ್ಯಾಂಕ್), ಪಿಯೂಷ್ ಎಚ್(3131 ರ್ಯಾಂಕ್), ಸುಪ್ರಜ್ ಶೆಟ್ಟಿ (3216 ರ್ಯಾಂಕ್), ಪ್ರಥಮ್(3523 ರ್ಯಾಂಕ್), ಹರ್ಷಿತಾ ಬಂಡಿಗೇರಿ(4119 ರ್ಯಾಂಕ್), ಪ್ರಣವ್(4580 ರ್ಯಾಂಕ್), ವಿಜಯ್ ಕುಮಾರ್(5134 ರ್ಯಾಂಕ್)ಹರ್ಷಿತಾ ಎನ್ ಆರ್(5191 ರ್ಯಾಂಕ್), ರಾಹುಲ್(5512 ರ್ಯಾಂಕ್), ಶರತ್ಚಂದ್ರ (6457 ರ್ಯಾಂಕ್), ಶಶಾಂಕ್ (6392 ರ್ಯಾಂಕ್), ಈಶಾನ್ (25722 ರ್ಯಾಂಕ್) ಗಳಿಸಿದ್ದಾರೆ. ಜೆಇಇ ಮೆನ್ಸ್ ಹಾಗೂ ಅಡ್ವಾನ್ಸ್ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ಆಳ್ವಾಸ್ ಪದವಿಪೂರ್ವ ಕಾಲೇಜು ಅನುಭವಿ ಬೋಧಕರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬೈಂದೂರು ಕ್ಷೇತ್ರದಲ್ಲಿ ಮಳೆಗಾಲದಲ್ಲಿ ಪ್ರಾಕೃತಿಕ ವಿಕೋಪದಿಂದ ಉಂಟಾಗಬಹುದಾದ ಸಂಭಾವ್ಯ ಅಪಾಯಗಳನ್ನು ತಡೆಯುವ ನಿಟ್ಟಿನಲ್ಲಿ ಹಾಗೂ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ಸಲುವಾಗಿ ಗ್ರಾಮ ಆಡಳಿತ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಜೊತೆ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆಯವರು ಸಭೆ ನಡೆಸಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕರು ಪ್ರಕೃತಿಯ ಮುಂದೆ ಯಾವ ವ್ಯವಸ್ಥೆಯು ದೊಡ್ಡದಲ್ಲ. ಆದರೆ ಕೆಲವೊಂದು ಬಾರಿ ಅಧಿಕಾರಿಗಳು ಮಳೆಗಾಲದ ಅಪಾಯಗಳನ್ನು ಅರಿತು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದು ಕೊಳ್ಳದೆ ಇರುವ ಸಂದರ್ಭಗಳಲ್ಲಿ ಸಾರ್ವಜನಿಕರು ಪರದಾಡುವಂತಾಗುತ್ತದೆ. ಹಾಗಾಗಿ ಇಂತಹ ಮಳೆಗಾಲದ ಅನಿಶ್ಚಿತತೆಯ ಸಮಯದಲ್ಲಿ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸುವುದರ ಜೊತೆಗೆ ಕಾನೂನಿನ ವ್ಯಾಪ್ತಿಯೊಳಗೆ ಮಾನವೀಯತೆಯನ್ನು ಹೆಚ್ಚು ಪ್ರದರ್ಶಿಸಿ ಕೆಲಸ ಮಾಡಲು ಕಿವಿ ಮಾತು ಹೇಳಿದರು. ಮೆಸ್ಕಾಂ ಮತ್ತು ಅರಣ್ಯ ಇಲಾಖೆ ಹಾಗೂ ಗ್ರಾಮ ಪಂಚಾಯತ್ ಗಳು ಅಗತ್ಯ ಸಮನ್ವಯದೊಂದಿಗೆ ಸಾರ್ವಜನಿಕ ಸ್ಥಳ ಹಾಗೂ ವಿದ್ಯುತ್ ಲೈನ್ ಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಕುಂದಾಪುರ -2 ತಾಲೂಕು ತೆಕ್ಕಟ್ಟೆ ವಲಯದ ತೆಕ್ಕಟ್ಟೆ ಕಾರ್ಯಕ್ಷೇತ್ರದಲ್ಲಿ ವಿಶ್ವ ತಂಬಾಕು ವಿರೋಧ ದಿನಾಚರಣೆಯನ್ನು, (ತಂಬಾಕು ಮುಕ್ತ ಭಾರತ,) ತೆಕ್ಕಟ್ಟೆ ಶಿಶು ಮಂದಿರದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಸುಬ್ರಹ್ಮಣ್ಯ ಶೆಟ್ಟಿ ಅವರು ಭಾಗವಹಿಸಿದ್ದು ತಂಬಾಕು ಸೇವನೆಯಿಂದ ಬರಬಹುದಾದ ಕಾಯಿಲೆಗಳು ಮತ್ತು ಅದರಿಂದಾಗುವ ದುಷ್ಪರಿಣಾಮಗಳು, ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಅವರು ಇಂದಿನ ವಾತಾವರಣದಲ್ಲಿ ತಂಬಾಕು ಮುಕ್ತರಾಗಿ ಹೇಗೆ ಉತ್ತಮ ಭಾರತೀಯ ಪ್ರಜೆಯಾಗಿ ಬಾಳಬೇಕು ಹೇಗೆ ಜೀವನ ಮಾಡಬೇಕು ಅವರನ್ನು ಯಾವ ರೀತಿ ಪಾಲನೆ ಪೋಷಣೆ ಮಾಡಿದರೆ ದುಶ್ಚಟಗಳಿಂದ ಮುಕ್ತರನ್ನಾಗಿಸಬೇಕು ಎಂದು ಪೋಷಕರಿಗೆ ಕಿವಿ ಮಾತನ್ನು ಹೇಳಿದರಲ್ಲದೆ ಶ್ರೀ ಕ್ಷೇತ್ರದ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ಫಲಾನುಭವಿಗಳಿಗೆ ಇದುವರೆಗೆ ದೊರಕಿದ ಹಾಗೂ ಮುಂದೆ ದೊರಕಲಿರುವ ವಿಶೇಷ ಸೌಲಭ್ಯಗಳ ಬಗ್ಗೆ ಹಾಗೂ ಪ್ರಯೋಜನಗಳ ಬಗ್ಗೆ ವಿವರಿಸಿದರು. ಕುಂದಾಪುರ -2 ತಾಲೂಕಿನ ಯೋಜನಾಧಿಕಾರಿ ಸುಧೀರ್ ಹಂಗಳೂರು ಇವರು ಗ್ರಾಮಾಭಿವೃದ್ಧಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಶಾಲೆಯ ಶಿಕ್ಷಕ-ಶಿಕ್ಷಕೇತರ ವೃಂದದವರಿಗೆ ವಿವಿಧ ಕೌಶಲಗಳ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ನಡೆಸಲಾಯಿತು. ಬೇಸ್ನ ನಿರ್ದೇಶಕರಾದ ಡಾ. ರಾಮಪ್ರಸಾದ್ ಎಚ್.ಎಸ್. ಇಂದಿನ ದಿನಗಳಲ್ಲಿ ಶಿಕ್ಷಕರು ಅಭಿವೃದ್ಧಿಪಡಿಸಿಕೊಳ್ಳಬೇಕಾದ ತಂತ್ರಜ್ಞಾನಗಳ ಬಗ್ಗೆ ಮಾಹಿತಿ ನೀಡಿ, ಶಿಕ್ಷಕರನ್ನು ಅವುಗಳಲ್ಲಿ ತರಬೇತಿಗೊಳಿಸಿದರು. ಇಶಾ ಪೌಂಡೇಶನ್ನ ತರಬೇತಿದಾರರಾದ ಪ್ರವೀಣ್ ಅವರು ಈ ದಿನಗಳಲ್ಲಿ ಉಪಸ್ಥಿತರಿದ್ದು, ಮನಸ್ಸಿನ ನಿಯಂತ್ರಣ, ಒತ್ತಡ ನಿವಾರಣೆ, ದೈಹಿಕ ಆರೋಗ್ಯ- ಮಾನಸಿಕ ನೆಮ್ಮದಿಗಳ ಸಂಪಾದನೆಯನ್ನು ಯೋಗಮಾರ್ಗದ ಮೂಲಕ ಹೇಗೆ ಸಾಧಿಸಿಕೊಳ್ಳಬಹುದೆಂದು ತಿಳಿಸಿಕೊಟ್ಟರು. ಕೆಲವಷ್ಟು ಸಾಮಾನ್ಯ ಯೋಗಗಳ ಪ್ರಕ್ರಿಯೆಗಳಲ್ಲಿ ತರಬೇತಿ ನೀಡಿದರು. ಸುಮಾರು 200 ಜನ ಶಿಕ್ಷಕ- ಶಿಕ್ಷಕೇತರ ಸಿಬ್ಬಂದಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಉತ್ತಮ ಮಾರ್ಗದರ್ಶನವನ್ನು ಪಡೆದುಕೊಂಡರು. ಈ ಸಮಯದಲ್ಲಿ ಶಾಲೆಯ ಪ್ರಾಂಶುಪಾಲರು, ಶ್ರೀ ಸಿದ್ಧಿ ಪ್ರತಿಷ್ಠಾನದ ಕಾರ್ಯದರ್ಶಿಗಳೂ ಆದ ಶರಣ ಕುಮಾರ ಮಾತನಾಡಿ, ಇಂದಿನ ವಿದ್ಯಾರ್ಥಿಗಳು ವಿವಿಧ ಕೌಶಲಗಳನ್ನು ಅರಿತಿದ್ದು, ಬಹಳ ಚುರುಕುತನದಿಂದ ಕೂಡಿರುತ್ತಿದ್ದಾರೆ. ಪ್ರತಿವರ್ಷ ಒಂದೇ ರೀತಿಯ ಪಾಠಪ್ರವಚನಗಳು ಅವರಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪ್ರವಾಸಕ್ಕೆಂದು ಆಗಮಿಸಿದ್ದ ಹಾವೇರಿ ಮೂಲದ ವಿದ್ಯಾರ್ಥಿಯೋರ್ವ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ಶಿರೂರು ಸಂಕದಗುಂಡಿ ಹೊಳೆಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಹಾವೇರಿ ಸಮೀಪದ ಕೃಷಿ ನಗರದ ನಿವಾಸಿ ಆಯುಷ್ (16) ಎಂದು ಗುರುತಿಸಲಾಗಿದೆ. ಹಾವೇರಿ ಸಮೀಪದ ಕೃಷಿ ನಗರದ ಒಟ್ಟು 7 ಜನ ಮುರುಡೇಶ್ವರ, ಕನ್ಯಾಕುಮಾರಿ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿ ಶಿರೂರು ಸಂಕದಗುಂಡಿ ಹೊಳೆ ಬಳಿ ವಿಶ್ರಾಂತಿಗೆ ತಮ್ಮ ವಾಹನ ನಿಲ್ಲಿಸಿದ್ದರು. ಈ ಸಂದರ್ಭ ಮನೆಯವರೆಲ್ಲ ಊಟದ ತಯಾರಿಯಲ್ಲಿರುವ ವೇಳೆ ಇಬ್ಬರು ಮಕ್ಕಳು ಪಕ್ಕದಲ್ಲಿರುವ ಹೊಳೆಗೆ ಸ್ನಾನಕ್ಕೆ ತೆರಳಿದ್ದರು. ಶಿರೂರು ಸಂಕದಗುಂಡಿ ಹೊಳೆಯ ಆಳ ಇರುವ ಜಾಗದಲ್ಲಿ ಈಜಲು ತೆರಳಿದ ಕಾರಣ ನೀರಿನ ಆಳ ತಿಳಿಯದೆ ಬಾಲಕ ಮುಳುಗಿದ್ದಾನೆ. ತತ್ಕ್ಷಣ ಇನ್ನೊಬ್ಬ ಮನೆಯವರಿಗೆ ವಿಷಯ ತಿಳಿಸಿದ್ದು, ಬದುಕಿಸುವ ಪ್ರಯತ್ನ ಮಾಡಿದರು ಕೂಡ ಫಲ ನೀಡಿಲ್ಲ. ಅಜ್ಜನ ಜತೆ ಪ್ರವಾಸಕ್ಕೆ ಹೊರಟಿದ್ದಬಾಲಕನ ನತಂದೆ, ತಾಯಿ ಗುಜರಾತ್ನಲ್ಲಿ ಸಣ್ಣವ್ಯವಹಾರ ನಡೆಸುತ್ತಿದ್ದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಅಸ್ಸಾಂ ಮೂಲದ ಕಾರ್ಮಿಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಸಂಭವಿಸಿದೆ. ಭಕ್ಸಾ ಜಿಲ್ಲೆಯ ತಾಮ್ಮಲ್ಪುರ್ ಭಗಲಾಮರಿ ನಿವಾಸಿ ಅಲೊಂಗಬರ್ ಬೊರೊ ಮೃತಪಟ್ಟ ವ್ಯಕ್ತಿ. ಅವರು ಸೋಮವಾರ ಕೆಲಸಕ್ಕೆ ಹೋಗದೆ ವಿಶ್ರಾಂತಿ ಪಡೆಯುತ್ತಿದ್ದರು. ಬಳಿಕ ಅವರು ಹೊರಗಡೆ ತೆರಳಿದ್ದು, ಬಹಳ ಹೊತ್ತಾದರೂ ವಾಪಸ್ ಬಂದಿರಲಿಲ್ಲ. ಬಳಿಕ ಅವರನ್ನು ಹುಡುಕಲು ತೆರಳಿದಾಗ, ಕಾರ್ಖಾನೆಯ ಸಮೀಪ ಹಾಡಿಯೊಂದರಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಈತ ಮೂರು ವರ್ಷಗಳ ಹಿಂದೆ ಪತ್ನಿಯನ್ನು ಕಳೆದುಕೊಂಡಿದ್ದು, ಒಬ್ಬ ಮಗನ ಜವಾಬ್ದಾರಿ ಅವರ ಮೇಲಿತ್ತು. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಸ್ತೆ ಬದಿಯಲ್ಲಿ ನಿಂತಿರುವ ಹುಡುಗಿಗೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿರುವ ಘಟನೆ ಕಿರಿಮಂಜೇಶ್ವರ ರಾ.ಹೆದ್ದಾರಿ 66ರಲ್ಲಿ ಸಂಭವಿಸಿದೆ. ಸಮೀಕ್ಷಾ (15) ಗಾಯಗೊಂಡ ಹುಡುಗಿ. ಕಿರಿಮಂಜೇಶ್ವರ ಗ್ರಾಮದ ನೂರಿ ಐಸ್ ಪ್ಯಾಕ್ಟರಿ ಎದುರಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಬರುತ್ತಿದ್ದ ಕಾರು ಮತ್ತೊಂದು ವಾಹನವನ್ನು ಓವರ್ ಟೇಕ್ ಮಾಡುವಾಗ ರಸ್ತೆಯ ಬದಿಯಲ್ಲಿ ನಿಂತಿರುವ ಸಮೀಕ್ಷಾಗೆ ಢಿಕ್ಕಿ ಹೊಡೆದ ಪರಿಣಾಮ ತೀವ್ರ ಸ್ವರೂಪದ ಗಾಯಗಾಳಾಗಿದ್ದು ಸ್ಥಳೀಯರು, ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
