ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಬೈಂದೂರು ಇವರ ಸಂಯುಕ್ತ ಆಶ್ರಯದಲ್ಲಿ ಶಾಲಾ ಪ್ರಾರಂಭೋತ್ಸವ ಹಾಗೂ ಶಿಕ್ಷಕ, ಪೋಷಕರ ಮಹಾಸಭೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಬೈಂದೂರು ಶಾಸಕ ಗುರುರಾಜ ಗಂಟೆಹೊಳೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಳೆದ ಬಾರಿ ಬೈಂದೂರು ಕ್ಷೇತ್ರದಲ್ಲಿ ಅತ್ಯುತ್ತಮ ಶೈಕ್ಷಣಿಕ ಸಾಧನೆಯಾಗಿರುವ ಸಂತೃಪ್ತಿಯಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರು ಮತ್ತು ಪೋಷಕರ ಪಾತ್ರ ಬಹುಮುಖ್ಯವಾಗಿದೆ.ಬದಲಾಗುತ್ತಿರುವ ವ್ಯವಸ್ಥೆಯಲ್ಲಿ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗಿದೆ.ಶೈಕ್ಷಣಿಕವಾಗಿ ಅವಶ್ಯವಿರುವ ಪ್ರೋತ್ಸಾಹ ನೀಡಬೇಕು.ಎಲ್ಲರ ಸಹಕಾರದಲ್ಲಿ ಪ್ರಸಕ್ತ ಸಾಲಿನಲ್ಲಿ ಉತ್ತಮ ಶೈಕ್ಷಣಿಕ ಸಾಧನೆ ನಮ್ಮೆಲ್ಲರ ಜವಬ್ದಾರಿಯಾಗಿದೆ ಎಂದರು. ಎಸ್.ಡಿ.ಎಮ್.ಸಿ ಅಧ್ಯಕ್ಷ ಉಮೇಶ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ಪಟ್ಟಣ ಪಂಚಾಯತ್ ನಾಮನಿರ್ದೇಶಕ ಸದಸ್ಯರಾದ ಸದಾಶಿವ ಡಿ. ಪಡುವರಿ, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ,ಕಾಲೇಜಿನ ಪ್ರಾಂಶುಪಾಲರು ಹಾಗೂ ಎಸ್.ಡಿ.ಎಮ್.ಸಿ ಸರ್ವ ಸದಸ್ಯರು ಹಾಜರಿದ್ದರು. ಈ ಸಂದರ್ಭದಲ್ಲಿ ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು ಹಾಗೂ ವರ್ಗಾವಣೆಗೊಂಡ ಶಾಲೆಯ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪದವಿಯ ನಂತರ ಉನ್ನತ ಶಿಕ್ಷಣ ಉದ್ಯೋಗಗಳ ಜೊತೆಗೆ ಉದ್ಯಮಶೀಲತೆಯನ್ನು ಬೆಳಸಿಕೊಳ್ಳುವ ಮೂಲಕ ಅವಕಾಶವನ್ನು ಸೃಷ್ಟಿಸಿಕೊಳ್ಳಿ ಆಮುಖೇನ ಸಮಾಜಕ್ಕೆ ಕೊಡುಗೆಯನ್ನು ನೀಡಿ ಎಂದು ಶ್ರೀ ಶಾರದಾ ಕಾಲೇಜು ಬಸ್ರೂರಿನ ನಿವೃತ್ತ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಮುಂದೆಯೂ ಸಂಸ್ಥೆಯೊಡನೆ ಉತ್ತಮ ಸಂಬಂಧವನ್ನು ಬೆಳೆಸಿಕೊಳ್ಳುವ ಮೂಲಕ ಮಾರ್ಗದರ್ಶನವನ್ನು ಪಡೆದುಕೊಳ್ಳಿ ಎಂದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ಕಾಲೇಜಿನ ಆಡಳಿತ ನಿಕಾಯಕ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ಸ್ವಾಗತಿಸಿ, ಪ್ರಸ್ತಾಪಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ವೀಣಾ ವಿ. ಭಟ್, ವ್ಯವಹಾರ ಆಡಳಿತ ವಿಭಾಗದ ಸಹ ಪ್ರಾಧ್ಯಾಪಕ ಪ್ರವೀಣ್ ಮೊಗವೀರ ಗಂಗೊಳ್ಳಿ, ಗಣಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಸೇವಾಸಂಗಮ ಶಿಶುಮಂದಿರ ಇದರ ಪ್ರಾರಂಭೋತ್ಸವ ಸೋಮವಾರ ಹಿಂದೂ ಸಂಪ್ರದಾಯದಂತೆ ಪುಟಾಣಿಗಳನ್ನು ಸ್ವಾಗತಿಸಲಾಯಿತು. ಶಿಶುಮಂದಿರಕ್ಕೆ ಪುಟಾಣಿಗಳನ್ನುಆಗಮಿಸುತ್ತಿದ್ದಂತೆ ಮಾತಾಜಿ ಸಹನಾ ಹಾಗೂ ಶಿಶುಮಂದಿರದ ಸ್ಥಾನೀಯ ಸಮಿತಿ ಪದಾಧಿಕಾರಿಗಳು ದೀಪ ಬೆಳಗಿಸಿ ಆರತಿ ಬೆಳಗಿದರು. ಪೋಷಕರು ಪುಟಾಣಿಗಳಿಗೆ ಪುಷ್ಭ ಸಿಂಚನಗೈದರು. ನಂತರ ಭಾರತಮಾತೆಗೆ ದೀಪ ಬೆಳಗಿಸಿ ಪುಟಾಣಿಗಳು ನಮಿಸಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಶಿಶುಮಂದಿರದ ಅಧ್ಯಕ್ಷ ಶ್ರೀಕಾಂತ್ ಶೆಣೈ ಭಾರತೀಯ ಪರಂಪರೆಯ ಶಿಕ್ಷಣ ವ್ಯವಸ್ಥೆ ಸೇವಾಸಂಗಮ ಶಿಶುಮಂದಿರದಲ್ಲಿ ಸಂಪ್ರದಾಯಬದ್ಧವಾಗಿ ನೀಡಲಾಗುತ್ತಿದೆ.ಮಕ್ಕಳ ಪ್ರಾರಂಭಿಕ ದಿನಗಳ ಶಿಕ್ಷಣ ಸಂಸ್ಕಾರ ನೀಡುವಲ್ಲಿ ಆದ್ಯತೆ ನೀಡಬೇಕು ಈ ನಿಟ್ಟಿನಲ್ಲಿ ಪೋಷಕರಿಗೆ ಕಿವಿಮಾತು ಹೇಳಿದರು. ಈ ಸಂದರ್ಭದಲ್ಲಿ ಸಮಿತಿಯ ಹಿರಿಯ ಸದಸ್ಯೆ ವಸುಧಾ ಪ್ರಭು, ಪ್ರಮೀಳಾ, ಅಮೃತ್ ಜೋಗಿ, ರವೀಂದ್ರ ಕೋಟ, ರೇಣುಕಾ ಮಯ್ಯ,ಮಾತಾಜಿ ಸಹನಾ, ಸಹಾಯಕಿ ಜ್ಯೋತಿ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಮಿತಿ ಕಾರ್ಯದರ್ಶಿ ಕಲಾವತಿ ಅಶೋಕ್ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕಳೆದ 39 ವರ್ಷಗಳಿಂದ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಪುಟಾಣಿಗಳಲ್ಲಿ ಭಾರತೀಯ ಸಂಸ್ಕೃತಿ, ಸಂಸ್ಕಾರ, ಆಚಾರ, ವಿಚಾರಗಳನ್ನು ಬೆಳೆಸುವ ಉದ್ದೇಶದಿಂದ ಮಕ್ಕಳ ಬೆಳವಣಿಗೆಗೆ ಪೂರಕವಾದ ಶಿಕ್ಷಣವನ್ನು ನೀಡುತ್ತಿದೆ. ಮಕ್ಕಳ ಶಿಕ್ಷಣಕ್ಕೆ ಯಾವುದೇ ರೀತಿಯ ಚ್ಯುತಿ ಬಾರದಂತೆ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶಿಶು ಮಂದಿರ ಶ್ರಮಿಸಲಿದೆ ಎಂದು ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ಸಂಚಾಲಕ ಡಾ. ಕಾಶೀನಾಥ ಪೈ ಹೇಳಿದರು. ಅವರು ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ನಗರ ಜಯವಂತ ನಾಯಕ್ ಸಭಾಭವನದಲ್ಲಿ ಸೋಮವಾರ ಜರಗಿದ 2026-27ನೇ ಸಾಲಿನ ಶಿಶು ಮಂದಿರ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಶಿಶು ಮಂದಿರದ ಅಧ್ಯಕ್ಷ ಬಿ. ರಾಘವೇಂದ್ರ ಪೈ ಅಧ್ಯಕ್ಷತೆ ವಹಿಸಿದ್ದರು. ಶಿಶು ಮಂದಿರದಕ್ಕೆ ಆಗಮಿಸಿದ ಪುಟಾಣಿಗಳ ಕಾಲುಗಳನ್ನು ತೊಳೆದು, ಕುಂಕುಮದ ತಿಲಕವನ್ನಿಟ್ಟು, ಆರತಿ ಬೆಳಗಿ ಸಂಪ್ರದಾಯಬದ್ಧವಾಗಿ ಅದ್ದೂರಿಯಾಗಿ ಸ್ವಾಗತಿಸಿಕೊಳ್ಳಲಾಯಿತು. ಶಿಶು ಮಂದಿರದ ಸದಸ್ಯರಾದ ಶ್ರೀನಿವಾಸ ಎಂ., ಉಷಾ ಪಿ.ಮಡಿವಾಳ, ಭಾಸ್ಕರ ಎಚ್.ಜಿ.,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯವರು ನಡೆಸುವ ಅತಿ ಕ್ಲಿಷ್ಟಕರವೆನಿಸಿದ ಪರೀಕ್ಷೆಗಳಲ್ಲೊಂದಾದ ಜೆಇಇ ಅಡ್ವಾನ್ಸ್ – 2026ನೇ ಸಾಲಿನ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ನಾಗದೇವ್ ಎಂ.ಜಿ. ರಾಷ್ಟ್ರಮಟ್ಟದಲ್ಲಿ 196 ನೇ ರ್ಯಾಂಕ್ ಪಡೆದುಕೊಂಡಿದ್ದಾರೆ. ಫಲಿತಾಂಶದ ವಿವರ:ನಾಗದೇವ್ ಎಂ.ಜಿ. 196, ಖುಷಿ ರಾಜ ವಿ. 648, ದಿಶಾಂತ್ ಎಂ.1207, ರಶ್ಮಿ ಆರ್. ಎಚ್. 1754, ಧನುಷ್ ಎಚ್. ಎ. 2193, ನಯನ ಡಿ. ಗೊಂಡ 2638, ಸೃಜನಾ ಎಸ್. 3618, ಶಶಾಂಕ್ ಡಿ. ಎಸ್. 3800, ಹೃತಿಕ್ ಮಹೇಶ್ 3803, ತೇಜಸ್ ಆರ್. ಬಿ. 5124, ಸುಜನ್ ಕೆ. ಎಚ್. 5377, ವಿಶ್ವಾಸ್ ಕೆ. ಎನ್. 5549, ಧ್ರುವ ವಿ. ಬಿ. 6057, ನಮಿತ್ ಕೆ. ಹೆಗ್ಡೆ 8164, ಪ್ರಥಮ್ ಟಿ. 10982, ಧ್ರುಶ್ 11103, ನೀನಾದ್ ರಾಜೇಶ್ ನಾಯ್ಕ್ 12563, ಸಂವಿತ್ ಎ. ಗೋಕರ್ಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಕಾಮರ್ಸ್, ಮ್ಯಾನೇಜ್ಮೆಂಟ್ ಮತ್ತು ಐಟಿ ಅಸೋಸಿಯೇಷನ್ ವತಿಯಿಂದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಭೇಟಿಯನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳನ್ನು ಕುಂದಾಪುರದ ಕೋಸ್ಟಲ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ (ಕೋಸ್ಟಲ್ ಕ್ಯಾಶ್ಯೂಸ್) ಸಂಸ್ಥೆಗೆ ಭೇಟಿ ನೀಡಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕರಾದ ವಿನೋದ್ ಅವರು ಗೋಡಂಬಿ ಬೀಜಗಳ ಸಂಸ್ಕರಣೆಯ ಸಂಪೂರ್ಣ ಪ್ರಕ್ರಿಯೆಯ ಕುರಿತು ವಿದ್ಯಾರ್ಥಿಗಳಿಗೆ ವಿವರವಾದ ಮಾಹಿತಿ ನೀಡಿದರು. ಗೋಡಂಬಿ ಬೀಜಗಳನ್ನು ಎಲ್ಲಿಂದ ಸಂಗ್ರಹಿಸಲಾಗುತ್ತದೆ, ಅವುಗಳನ್ನು ವಿವಿಧ ಹಂತಗಳ ಸಂಸ್ಕರಣೆಗೆ ಹೇಗೆ ಒಳಪಡಿಸಲಾಗುತ್ತದೆ, ಗುಣಮಟ್ಟದ ಆಧಾರದ ಮೇಲೆ ಹೇಗೆ ವಿಂಗಡಿಸಲಾಗುತ್ತದೆ ಹಾಗೂ ಅಂತಿಮವಾಗಿ ಉತ್ತಮ ಗುಣಮಟ್ಟದ ಉತ್ಪನ್ನವಾಗಿ ಹೇಗೆ ತಯಾರಿಸಲಾಗುತ್ತದೆ ಎಂಬುದನ್ನು ವಿವರಿಸಿದರು. ಈ ಕೈಗಾರಿಕಾ ಭೇಟಿಯಲ್ಲಿ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರೀತಿ ಹೆಗ್ಡೆ, ಸತೀಶ್ ಶೆಟ್ಟಿ, ರಜತ್ ಬಂಗೇರ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬದುಕಿನಲ್ಲಿ ಭರವಸೆ ಕಳಕೊಳ್ಳದೇ ಕನಸುಗಳ ಬೆನ್ನತ್ತಿ ಪ್ರಯತ್ನದ ಬೆವರು ಸುರಿಸಿದರೆ ಪರಿಪೂರ್ಣತೆಯನ್ನು ಸಾಧಿಸಬಹುದು. ಬಡತನ, ಸೋಲು, ನೋವು, ನಿರಾಸೆಗಳ ನಡುವೆಯೂ ಛಲ ಮತ್ತು ದಿಟ್ಟತನದಿಂದ ಸವಾಲುಗಳನ್ನು ಎದುರಿಸಿದಲ್ಲಿ ಸಮೃದ್ಧಿಯ ಬದುಕು ನಮ್ಮದಾಗುತ್ತದೆಂದು ಅರಣ್ಯ ಗುತ್ತಿಗೆದಾರ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಜೆ.ಪಿ. ಶೆಟ್ಟಿ ಕಟ್ಕೆರೆ ಹೇಳಿದರು. ಅವರು ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಇಲ್ಲಿ ಸೇವಾ ನಿವೃತ್ತಿ ಹೊಂದಿದ ಪ್ರಾಂಶುಪಾಲ ರಾಮರಾಯ ಆಚಾರ್ಯ ಹಾಗೂ ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ಶೇಖರ ಬಿ. ಅವರನ್ನು ಸನ್ಮಾನಿಸಿ ಮಾತನಾಡಿದರು. ಸೇವಾ ನಿವೃತ್ತಿ ಹೊಂದಿದ ಪ್ರಾಧ್ಯಾಪಕರು ಹಲವು ಇಲ್ಲಗಳ ನಡುವೆ ತಾವು ಸಾಧನೆ ಗೈದ ಬದುಕಿನ ಹಿನ್ನೋಟವನ್ನು ಸ್ಮರಿಸಿ ಜೀವನದ ಯಶೋಗಾಥೆಯನ್ನು ಅರುಹಿ ಸ್ವಾಭಿಮಾನ ಹಾಗೂ ಸ್ವಾವಲಂಬನೆಯ ಬದುಕನ್ನು ಕಟ್ಟಿಕೊಳ್ಳಿರೆಂದು ವಿದ್ಯಾರ್ಥಿಗಳಿಗೆ ಹಿತನುಡಿದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ಧ ಕಾಲೇಜಿನ ನಿಯೋಜಿತ ಪ್ರಾಂಶುಪಾಲ ನಾಗರಾಜ ವೈದ್ಯ ಎಂ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಹೋಬಳಿ ಘಟಕ ಕೋಟ ಇವರ ಆಶ್ರಯದಲ್ಲಿ ಕೋಟ ಸಿಎ ಬ್ಯಾಂಕ್ ಬಿ.ಸಿ ಹೊಳ್ಳ ಸಭಾಂಗಣದಲ್ಲಿ ನಡೆದ ‘ಅಕ್ಷರದಕ್ಕರೆ-2026’ಕಾರ್ಯಕ್ರಮದಲ್ಲಿಸಮುದಾಯ ಸಾಧಕ ಪುರಸ್ಕಾರವನ್ನು ಉಪನ್ಯಾಸಕ ಮಂಜುನಾಥ್, ಬಿಎಸ್ ಎನ್ ಎಲ್ ಪ್ರಮುಖ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಣೂರಿನ ಪ್ರಭಾಕರ್ ಇವರುಗಳಿಗೆ ನೀಡಿ ಗೌರವಿಸಲಾಯಿತು. ಕೋಟ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ. ಕುಂದರ್, ಉದ್ಯಮಿ ಮೊಳಹಳ್ಳಿ ದಿನೇಶ್ ಹೆಗ್ಡೆ,ದಸಂಸ ಅಂಬೇಡ್ಕರ್ ವಾದ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್,ಕೋಟ ಸಿಎ ಬ್ಯಾಂಕ್ ಅಧ್ಯಕ್ಷ ಡಾ. ಕೃಷ್ಣ ಕಾಂಚನ್,ದಸಂಸ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ, ಜಿಲ್ಲಾ ಪ್ರಧಾನ ಸಂಚಾಲಕ ಟಿ.ಮಂಜುನಾಥ್ ಗಿಳಿಯಾರು ಸೇರಿದಂತೆ ಅನೇಕರು ಉಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪ್ರಧಾನಮಂತ್ರಿ ಮತ್ಸಸಂಪದ ಯೋಜನೆಯಡಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಉಪ್ಪುಂದ ಗ್ರಾಮದಲ್ಲಿ ಸುಮಾರು ಎರಡು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ‘ವಿವಿದ್ದೋದ್ದೇಶ ಮೀನುಗಾರಿಕಾ ಕೇಂದ್ರ’ಕ್ಕೆ ಉಪ್ಪುಂದ ಅರಮಕೋಡಿ ಶ್ರೀಈಶ್ವರ ದೇವಸ್ಥಾನದ ಪರಿಸರದಲ್ಲಿ ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶದ ಪ್ರಗತಿಗೆ ಆಧಾರವಾಗಿರುವ ಮೀನುಗಾರರು ಪರಿಶ್ರಮದ ಜತೆಗೆ ಶ್ರದ್ಧೆಯಿಂದ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಉಪ್ಪುಂದದಲ್ಲಿ ವಿವಿಧೋದ್ದೇಶ ಮೀನುಗಾರಿಕಾ ಕೇಂದ್ರ ನಿರ್ಮಾಣಕ್ಕೆ ಅವಕಾಶ ನೀಡಲಾಗಿದೆ ಎಂದರು. ಈ ಭಾಗದ ಮೂಲ ಸೌಕರ್ಯ ಹಾಗೂ ಧಾರ್ಮಿಕ ಪ್ರವಾಸೋದ್ಯಮ ಕ್ಷೇತ್ರ ಮತ್ತಷ್ಟು ಬಲಗೊಳ್ಳಲಿದೆ. ಕೇಂದ್ರ ಸರಕಾರದ ಯೋಜನೆಗಳನ್ನು ತಳಮಟ್ಟದ ಜನರಿಗೂ ತಲುಪಿಸಿ, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಸದಾ ಬದ್ಧರಾಗಿದ್ದೇವೆ ಎಂದು ಹೇಳಿದರು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭ ದೇವಸ್ಥಾನದ ಹಾಗೂ ಮೀನುಗಾರರ ವತಿಯಿಂದ ಸಂಸದರನ್ನು ಶಾಸಕರನ್ನು ಹಾಗೂ ಗುತ್ತಿಗೆದಾರರನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ರಕ್ತದಾನ ಮಾಡುವುದು ಪುಣ್ಯದ ಕಾರ್ಯ. ಇಂದಿನ ಈ ರಜಾದಿನಗಳಲ್ಲಿ ರಕ್ತದಾನ ಮಾಡುವವರ ಸಂಖ್ಯೆ ಕಡಿಮೆಯಿದೆ. ಕುಂದಾಪುರ ರೆಡ್ಕ್ರಾಸ್ ರಕ್ತನಿಧಿ ಕೇಂದ್ರದಲ್ಲಿ ಪ್ರತಿನಿತ್ಯ 20-25 ಯೂನಿಟ್ ರಕ್ತದ ಬೇಡಿಕೆ ಇದೆ. ರಕ್ತದ ಬೇಡಿಕೆ ಹೆಚ್ಚಿದೆ ಜೊತೆಗೆ ರಕ್ತನಿಧಿ ಕೇಂದ್ರಗಳಲ್ಲಿ ರಕ್ತದ ಕೊರತೆ ಕೂಡ ಇದೆ. ಒಂದು ಯೂನಿಟ್ ರಕ್ತ ದಾನ ಮಾಡುವುದರಿಂದ ಮೂರು ಜೀವ ಉಳಿಸಲು ಸಾಧ್ಯವಾಗುತ್ತದೆ. ಆದ್ದರಿಂದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಪುಣ್ಯದ ಕೆಲಸದಲ್ಲಿ ಕೈಜೋಡಿಸಬೇಕು ಎಂದು ಇಂಡಿಯನ್ ರೆಡ್ಕ್ರಾಸ್ ಸೊಸೈಟಿ ಕುಂದಾಪುರ ಘಟಕದ ಕಾರ್ಯದರ್ಶಿ ಸತ್ಯನಾರಾಯಣ ಪುರಾಣಿಕ್ ಹೇಳಿದರು. ಅವರು ಯಕ್ಷಾಭಿಮಾನಿ ರಕ್ತದಾನಿಗಳ ಬಳಗ ಗಂಗೊಳ್ಳಿ ಇದರ 17ನೇ ವರ್ಷದ ಶ್ರೀ ಕ್ಷೇತ್ರ ಧರ್ಮಸ್ಥಳ ಪಾದಯಾತ್ರೆ ಪ್ರಯುಕ್ತ ಗಂಗೊಳ್ಳಿ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಗಂಗೊಳ್ಳಿ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ, ಇಂಡಿಯನ್ ರೆಡ್ಕ್ರಾಸ್ ಸೊಸೈಟಿ ರಕ್ತನಿಧಿ ಕೇಂದ್ರ ಕುಂದಾಪುರ ಇವರ ಸಹಯೋಗದೊಂದಿಗೆ ಗಂಗೊಳ್ಳಿಯ ಶ್ರೀ ವೀರ…
