ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಬೂತ್ ಮಟ್ಟದ ಏಜೆಂಟ್‌ಗಳು (BLA), ಬೂತ್ ಅಧ್ಯಕ್ಷರು ಹಾಗೂ ಪಕ್ಷದ ಕಾರ್ಯಕರ್ತರಿಗೆ ವಿಶೇಷ ತರಬೇತಿ ಶಿಬಿರ ಬುಧವಾರ ಕೋಟ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕೋಟ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಶಂಕರ್ ಕುಂದರ್ ಅವರು ಸ್ವಾಗತಿಸಿ ಉದ್ಘಾಟಿಸಿದರು. ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಮತದಾರರ ಪಟ್ಟಿಯ ಶುದ್ಧತೆ ಹಾಗೂ ಪ್ರಜಾಪ್ರಭುತ್ವದ ಬಲವರ್ಧನೆಯಲ್ಲಿ ಬಿಎಲ್‌ಎಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು. ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ ಶೆಟ್ಟಿ ಅವರು ತರಬೇತಿ ನಡೆಸಿಕೊಟ್ಟು, ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ, ಫಾರಂ 6, 6A, 7 ಮತ್ತು 8ರ ಬಳಕೆ, ಮತದಾರರ ಪಟ್ಟಿಯ ಪರಿಶೀಲನೆ, ಅರ್ಹ ಮತದಾರರ ಹೆಸರು ಸೇರ್ಪಡೆ, ತಪ್ಪು ಅಥವಾ ನಕಲಿ ನೋಂದಣಿಗಳ ವಿರುದ್ಧ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾಡಳಿತ-ಜಿಲ್ಲಾ ಪಂಚಾಯತ್, ಉಡುಪಿ ಜಿಲ್ಲೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಜಿಲ್ಲೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಉಡುಪಿ ಜಿಲ್ಲೆ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಮಿಷನ್ ವಾತ್ಸಲ್ಯ ಯೋಜನೆಯಡಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸೇವೆ ಹಾಗೂ ಮಕ್ಕಳ ಸಂಬಂಧಿ ಕಾಯ್ದೆಗಳ ಬಗ್ಗೆ ಮಾಹಿತಿ ಕಾರ್ಯಾಗಾರವು ಅತ್ಯಂತ ಅರ್ಥಪೂರ್ಣವಾಗಿ ಸಂಪನ್ನಗೊಂಡಿತು. ಈ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಉಪಸ್ಥಿತರಿದ್ದ ಉಡುಪಿ ಜಿಲ್ಲಾ ಸಹಾಯಕ ಕಾನೂನು ಅಭಿರಕ್ಷಕರು ಹಾಗೂ ವಕೀಲರಾದ ಭಾನುಮತಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, “ಇಂದಿನ ಮಕ್ಕಳು ಬಾಲ್ಯವಿವಾಹ, ಲೈಂಗಿಕ ದೌರ್ಜನ್ಯ, ಮಾದಕ ವಸ್ತುಗಳ ಸೇವನೆಯಂತಹ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರ ಸಂರಕ್ಷಣೆಗಾಗಿ ಇರುವ ಕಾಯ್ದೆಗಳ ಬಗ್ಗೆಯಾಗಲಿ, ಅವರಿಗಿರುವ ಕಾನೂನು ಸೇವೆಗಳ ಕುರಿತಾಗಲಿ ಅವರಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಭಾರತೀಯರ ಜೀವನದಲ್ಲಿ ಅಂಚೆ ಇಲಾಖೆ ಒಂದು ಜೀವನಾಡಿ ಅಂತೆ. ನಮ್ಮ ಜೀವನದಲ್ಲಿ ಹಾಸು ಹೊಕ್ಕಾಗಿದೆ ಹಾಗೂ ಮೊದಲು ಅಂಚೆ ತಲುಪಿಸುವ ಕಾರ್ಯಕ್ರಮಕ್ಕೆ ಮಾತ್ರ ಸೀಮಿತವಾಗಿದ್ದು, ಇಂದು ಸರ್ಕಾರಿ ಸೇವೆಗಳಲ್ಲಿ ತನ್ನನ್ನು ತೊಡಗಿಸಿಕೊಂಡು ಅತ್ಯಂತ ಮಿತ ದರದಲ್ಲಿ ಸೇವೆಯನ್ನು ನೀಡಿ ನಮಗೆ ಒಂದು ನಂಬಿಕೆಯ ಸಂಸ್ಥೆ ಅಂಚೆ ಇಲಾಖೆ ಆಗಿದೆ ಎಂದು ಸಾಲಿಗ್ರಾಮ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ ಕಾರಂತ್ ಹೇಳಿದರು. ಅವರು ಯುವ ವೇದಿಕೆ ಕೂಟ ಮಹಾಜಗತ್ತು ಸಾಲಿಗ್ರಾಮ ಶ್ರೀ ಗುರು ಫ್ರೆಂಡ್ಸ್ ರಥ ಬೀದಿ ಸಾಲಿಗ್ರಾಮ ಹಾಗೂ ಭಾರತೀಯ ಅಂಚೆ ಇಲಾಖೆ ಉಡುಪಿ ವಿಭಾಗ ಇವರ ಸಹಯೋಗದಲ್ಲಿ ಅಂಚೆ ಜನ ಸಂಪರ್ಕ ಅಭಿಯಾನ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಉಡುಪಿ ವಿಭಾಗ ಅಂಚೆ ಅಧೀಕ್ಷಕ ಜಯರಾಮ್ ಶೆಟ್ಟಿ ಇವರು ಅಂಚೆ ಇಲಾಖೆಯಲ್ಲಿ ಸಿಗುವ ಸೌಲಭ್ಯಗಳ ಮಾಹಿತಿಯನ್ನು ನೀಡಿದರು ಹಾಗೂ ಇದರ ಪ್ರಯೋಜನವನ್ನು ಸಾರ್ವಜನಿಕರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸರಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಯುವತಿಯಿಂದ 10.83 ಲಕ್ಷ ರೂ. ಪಡೆದು ವಂಚನೆ ಎಸಗಿದ ಘಟನೆ ಸಾಸ್ತನದಲ್ಲಿ ಸಂಭವಿಸಿದೆ. ಅಭಿಷೇಕ್ ಪ್ರಕರಣ ಆರೋಪಿ. ಸಾಸ್ತಾನ ಐರೋಡಿ ಗ್ರಾಮದ ಯುವತಿ ವರ್ಷಾಗೆ (23) ಅಭಿಷೇಕ್ ಹಲವು ಸಮಯದಿಂದ ಪರಿಚಯವಿದ್ದು, ಸರಕಾರಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿ 2025ರ ಅಕ್ಟೋಬರ್ 31ರಿಂದ 2026ರ ಮೇ.28ರ ವರೆಗೆ ವಿವಿಧ ಹಂತಗಳಲ್ಲಿ ಯುವತಿಯ ಬ್ಯಾಂಕ್ ಖಾತೆ, ಫೋನ್ ಪೇ ಹಾಗೂ ಗೂಗಲ್ ಪ್ ಮೂಲಕ ಒಟ್ಟು 10,83,000 ಹಣವನ್ನು ಪಡೆದುಕೊಂಡಿದ್ದಾನೆ ಎಂದು ದೂರಲಾಗಿದೆ. ಹಣ ಪಡೆದ ಬಳಿಕ ಸರಕಾರಿ ಉದ್ಯೋಗ ಒದಗಿಸದೆ ನಡೆದ ಹಣವನ್ನೂ ಹಿಂದಿರುಗಿಸದೆ ವಂಚನೆ ಮಾಡಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ಕೆಲಸ ಕೊಡಿಸುವಂತೆ ಅಥವಾ ಹಣವನ್ನು ವಾಪಸ್ ನೀಡುವಂತೆ ಕೇಳಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಒಡ್ಡಿರುವುದಾಗಿಯೂ ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿಯ ಸಮನ್ವಯ ಶಿಕ್ಷಣ ಮಧ್ಯವರ್ತನ ಚಟುವಟಿಕೆಯನ್ನು ಅನುಷ್ಠಾನಗೊಳಿಸಲು ತಾತ್ಕಾಲಿಕವಾಗಿ ವಿಶೇಷ ಶಿಕ್ಷಕರ ಸೇವೆಯನ್ನು ಪಡೆಯಲು ಪ್ರಾಥಮಿಕ/ಪೌಢಶಾಲಾ ಹಂತದ ಖಾಲಿ ಇರುವ ಬಿ.ಐ.ಇ.ಆರ್.ಟಿ ಹುದ್ದೆಗಳನ್ನು ನೇರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ನಿಗದಿತ ವಿದ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಜೂನ್ 23 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪಯೋಜನಾ ಸಮನ್ವಯಾಧಿಕಾರಿ, ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಪ್ರಸ್ತುತವಿರುವ ಕೈಗಾರಿಕಾ ಘಟಕಗಳಲ್ಲಿ ವೃತ್ತಿಯನ್ನು ಕೈಗೊಳ್ಳಲು ಅವಶ್ಯವಿರುವ ವೃತ್ತಿಪರ ಕೌಶಲ್ಯ ತರಬೇತಿಗಳನ್ನು, ಕೈಗಾರಿಕಾ ತರಬೇತಿ ಸಂಸ್ಥೆಗಳು ಯುವಜನರಿಗೆ ನೀಡಿ, ಸ್ಥಳೀಯವಾಗಿ ಉದ್ಯೋಗ ಲಭ್ಯವಾಗುವಂತೆ ಕಾರ್ಯಪ್ರವೃತ್ತರಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ, ಕೈಗಾರಿಕಾ ಸ್ಪಂದನ ಹಾಗೂ ಜಿಲ್ಲಾ ಮಟ್ಟದ ರಫ್ತು ಉತ್ತೇಜನ ಸಮಿತಿಯ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೈಗಾರಿಕೆಗಳ ಸ್ಥಾಪನೆಯಿಂದ ರಾಜ್ಯದ ಆರ್ಥಿಕ ಪ್ರಗತಿ ಆಗುವುದರ ಜೊತೆಗೆ ಸ್ಥಳೀಯರಿಗೆ ಉದ್ಯೋಗ ಅವಕಾಶಗಳು ಲಭ್ಯವಾಗುತ್ತದೆ. ಜಿಲ್ಲೆಯಲ್ಲಿ ಸಣ್ಣ, ಮಧ್ಯಮ ಹಾಗೂ ಬೃಹತ್ ಕೈಗಾರಿಕಾ ಘಟಕಗಳು ಸ್ಥಾಪನೆಯಾದಲ್ಲಿ ಇಲ್ಲಿನವರಿಗೆ ಉದ್ಯೋಗಗಳು ದೊರೆಯುತ್ತವೆ. ಇದರಿಂದ ಉದ್ಯೋಗವನ್ನು ಅರಸಿ ಹೊರ ಜಿಲ್ಲೆಗೆ ತೆರಳುವುದು ಕಡಿಮೆಯಾಗುತ್ತದೆ. ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯ ಮೂಲಸೌಕರ್ಯಗಳನ್ನು ನೀಡಲು ಹೆಚ್ಚು ಒತ್ತು ನೀಡಬೇಕು ಎಂದರು. ಜಿಲ್ಲೆಯಲ್ಲಿರುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಪುರುಷೋತ್ತಮ ಮಾಸದ ಅಂಗವಾಗಿ ಹಮ್ಮಿಕೊಂಡಿರುವ ಮಾಸಾವಧಿ ಅಖಂಡ ಭಜನಾ ಮಹೋತ್ಸವ ಮಂಗಳವಾರ ದೀಪ ವಿಸರ್ಜನೆಯೊಂದಿಗೆ ಸಮಾಪನಗೊಂಡಿತು. ಮಧ್ಯಾಹ್ನ ಮಹಾಪೂಜೆ, ಸಮಾರಾಧಾನೆ, ಸಂಜೆ ಮಾಗಣೆ ಭಜನೆ ಮೊದಲಾದ ಕಾರ್ಯಕ್ರಮಗಳು ನಡೆಯಿತು. ಸೋಮವಾರ ಸಂಜೆ ನಗರ ಭಜನೆ, ರಾತ್ರಿ ವಿಶೇಷ ಪೂಜೆ, ಪ್ರಸಾದ ವಿತರಣೆ ಮೊದಲಾದ ಕಾರ್ಯಕ್ರಮಗಳು ನಡೆಯಿತು. ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರು ದೀಪ ಪ್ರಜ್ವಲನೆಯೊಂದಿಗೆ ಮೇ.17ರಂದು ಚಾಲನೆ ನೀಡಿದ್ದರು. ಈ ಮಹೋತ್ಸವದಲ್ಲಿ ರಾಜ್ಯ ಮತ್ತು ಹೊರರಾಜ್ಯಗಳಿಂದ ವಿವಿಧ ಭಜನಾ ಮಂಡಳಿಗಳು ಹಾಗೂ ಕಲಾವಿದರು ಆಗಮಿಸಿ ಭಜನಾ ಸೇವೆ ಸಮರ್ಪಿಸಿದ್ದಾರೆ. ಅಖಂಡ ಭಜನಾ ಮಹೋತ್ಸವದ ಸಂದರ್ಭ ಅಷ್ಟೋತ್ತರದಿಂದ ಶ್ರೀದೇವರಿಗೆ 108 ಪ್ರದಕ್ಷಿಣಾ ಸೇವೆ, ಗಂಧಲೇಪನ ಸೇವೆ, ಸಾಮೂಹಿಕ ತುಳಸಿ ಅರ್ಚನೆ ಮತ್ತು ಸಾಮೂಹಿಕ ಕುಂಕುಮಾರ್ಚನೆ ಸೇವೆ, ಅಪೂಪ ದಾನ ದೀಪ ದಾನ ಸೇವೆ, ದ್ವಾದಶ ಸ್ತೋತ್ರ ಪೂಜೆ, ದೀಪಾರಾಧನೆ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ದನಕ್ಕೆ ಕಟ್ಟಿದ್ದ ಹಗ್ಗ ಕುತ್ತಿಗೆಗೆ ಸಿಕ್ಕಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಜಡ್ಕಲ್ ಗ್ರಾಮದ ಹೆದ್ದಾರಿ ಮನೆ ಎಂಬಲ್ಲಿ ನಡೆದಿದೆ. ಮೃತರನ್ನು ಸ್ಥಳೀಯ ನಿವಾಸಿ ಮೂಕಾಂಬು (61) ಎಂದು ಗುರುತಿಸಲಾಗಿದೆ. ಅವರು ಜೂ.6ರಂದು ಮಧ್ಯಾಹ್ನ ಮನೆಯ ದನದ ಕುತ್ತಿಗಗೆ ಬಳ್ಳಿಯನ್ನು ಕಟ್ಟಿ ಮೇಯಲು ಕರೆದುಕೊಂಡು ಹೋಗುತಿದ್ದರು. ಆಗ ಎರಡು ದನವು ಗುದ್ದಾಡಿದಾಗ, ಕೈಯಲ್ಲಿದ್ದ ದನಕ್ಕೆ ಕಟ್ಟಿದ್ದ ಹಗ್ಗ ಮೂಕಾಂಬು ಅವರ ಕುತ್ತಿಗೆಗೆ ಸಿಲುಕಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಉಡುಪಿ ಜಿಲ್ಲಾ ಅಜ್ಜರಕಾಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಾಮಾಜಿಕ ಜಾಲತಾಣದ ಮೂಲಕ ವಿವಾಹಿತೆಯ ಗೆಳೆತನ ಬೆಳೆಸಿ, ಅಧಿಕ ಲಾಭ ನೀಡುವ ಆಮಿಷವೊಡ್ಡಿ 84.5 ಲಕ್ಷ ರೂ. ಪಡೆದು ವಂಚಿಸಿದ್ದಲ್ಲದೆ ಅತ್ಯಾಚಾರಗೈದು ಬ್ಲ್ಯಾಕ್‌ಮೇಲ್ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರ ತಾಲೂಕಿನ ಕೂರಾಡಿ ನಿವಾಸಿ ಸಂತೋಷ ಪೂಜಾರಿ (39) ಬಂಧಿತ ಆರೋಪಿ. ಕೋಟ ನಿವಾಸಿ ವಿವಾಹಿತೆಯನ್ನು ಪರಿಚಯ ಮಾಡಿಕೊಂಡು ನಕಲಿ ಖಾತೆಯಲ್ಲಿ ಮಾತುಕತೆ ಮುಂದುವರಿಸಿದ್ದ. ಷೇರು ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಲಾಭ ಬರುವುದಾಗಿ ನಂಬಿಸಿದ್ದ. ಮಹಿಳೆಯು 2024ರ ಸೆಪ್ಟೆಂಬರ್‌ನಲ್ಲಿ 2 ಸಾವಿರ ರೂ. ಗೂಗಲ್‌ಪೇ ಮಾಡಿದ್ದು, ಆಕೆಯ ನಂಬಿಕೆ ಗಳಿಸಲು ಸಂತೋಷ್ 1,91,700 ರೂ. ಕೊಟ್ಟಿದ್ದ. ಅದನ್ನು ನಂಬಿದ ಮಹಿಳೆ ಸಾಲ ಮಾಡಿ ಹಂತ ಹಂತವಾಗಿ 84, 53,500 ರೂ. ವರ್ಗಾಯಿಸಿದ್ದರು. ಹಣ ವಾಪಸ್ ಕೇಳಿದಾಗ ಆರೋಪಿ ಮರಳಿಸುವುದಾಗಿ ಹೇಳಿ ಹೊಟೇಲ್ ಕೊಠಡಿಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ. ವಿಡಿಯೋ ಮಾಡಿಕೊಂಡಿರುವುದಾಗಿ ಬ್ಲ್ಯಾಕ್ ಮೇಲ್ ಮಾಡಿ ಮತ್ತೆ ನಾಲೈದು ಬಾರಿ ಅತ್ಯಾಚಾರ ಎಸಗಿದ್ದಾನೆ. ಘಟನೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಸಾವಿರಾರು ರಕ್ತದಾನಿಗಳಿದ್ದಾರೆ. ಇಂದು ಅವರಿಂದಾಗಿ ಜಿಲ್ಲೆಯಲ್ಲಿ ವೈದ್ಯಕೀಯ ಕ್ಷೇತ್ರವು ಮಹತ್ವವನ್ನು ಪಡೆದಿದೆ. ಜಿಲ್ಲೆಯು ರಾಜ್ಯದಲ್ಲೇ ರಕ್ತದಾನಿಗಳ ಜಿಲ್ಲೆ ಎಂದು ಗುರುತಿಸಲ್ಪಟ್ಟು ಮಾದರಿಯಾಗಿದೆ ಎಂದು ಕರ್ನಾಟಕ ರಾಜ್ಯ ರೆಡ್‌ಕ್ರಾಸ್ ಸಂಸ್ಥೆಯ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಹೇಳಿದರು. ಅವರು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಶಾಖೆ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ರಕ್ತನಿಧಿ ಕೇಂದ್ರ ಕುಂದಾಪುರ ಮತ್ತು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಉಡುಪಿ ಆಶ್ರಯದಲ್ಲಿ ನಡೆದ ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ಉದ್ಘಾಟಿಸಿ ಮಾತಾನಾಡಿದರು. ಕುಂದಾಪುರ ರೆಡ್‌ಕ್ರಾಸ್ ಸಭಾಪತಿ ಜಯಕರ ಶೆಟ್ಟಿ ಮಾತನಾಡಿ, ಜಿಲ್ಲೆಯಲ್ಲಿ ರಕ್ತದ ತೀವ್ರ ಕೊರತೆಯಿದ್ದು ರಕ್ತದಾನದ ಬಗ್ಗೆ ಇನ್ನಷ್ಟು ಅರಿವು ಮೂಡಿಸುವ ಅಗತ್ಯವಿದೆ ಎಂದರು. ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲ್ಯಾಣಾಧಿಕಾರಿ ರತ್ನ ಸುವರ್ಣ ರಕ್ತದಾನದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಹಲವು ಬಾರಿ ರಕ್ತದಾನ ಮಾಡಿ ಅಮೂಲ್ಯ ಜೀವ ಉಳಿಸಿದ ರಕ್ತದಾನಿಗಳಾದ ಸುಕನ್ಯಾ ಎಂ.…
