ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಮಳೆಯಾಶ್ರಿತ ಭತ್ತವನ್ನು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಬೆಳೆ ವಿಮೆ ಯೋಜನೆಯಡಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಹಾಗೂ ಸ್ಥಳಿಯಾಡಳಿತ ಸಂಸ್ಥೆಗಳಲ್ಲಿ ವಿಮಾ ಮೊತ್ತ ಪ್ರತಿ ಹೆಕ್ಟೇರ್ಗೆ 75,600 ರೂ. ಗಳಂತೆ ವಿಮಾ ಕಂತಿನ ದರವನ್ನು ಪ್ರತಿ ಹೆ.ಗೆ 1512 (2%) ರೂ. ಗಳಂತೆ ನಿಗಧಿಪಡಿಸಿದ್ದು, ನೋಂದಣಿಗಾಗಿ ಅಧಿಸೂಚಿಸಲಾಗಿರುತ್ತದೆ. ರೈತರು ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ಜುಲೈ 31 ಕೊನೆ ದಿನವಾಗಿರುತ್ತದೆ. ಬೆಳೆ ಸಾಲ ಪಡೆಯದ ರೈತರು ಪಹಣಿ ಪತ್ರ, ಖಾತೆ ಪಾಸ್ ಪುಸ್ತಕ/ಬ್ಯಾಂಕ್ ಪಾಸ್ ಪುಸ್ತಕ, ಕಂದಾಯ ರಸೀದಿ ಮತ್ತು ಆಧಾರ್ ಸಂಖ್ಯೆಗಳನ್ನು ಒದಗಿಸಿ ವಾಣಿಜ್ಯ ಬ್ಯಾಂಕ್ಗಳು ಅಥವಾ ಗ್ರಾಮೀಣ ಮಟ್ಟದ ವ್ಯವಸಾಯ ಸೇವಾ ಸಹಕಾರ ಸಂಘಗಳು, ಸಾರ್ವಜನಿಕ ಸೇವಾ ಕೇಂದ್ರ, ಗ್ರಾಮ ಒನ್ ಮತ್ತು ವಿಮಾ ಸಂಸ್ಥೆಗಳನ್ನು ಸಂಪರ್ಕಿಸಿ, ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬಹುದಾಗಿದೆ. ಬೆಳೆ ವಿಮೆ ಯೋಜನೆಯಡಿ ಅಧಿಸೂಚಿತ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಉಡುಪಿ ಪ್ರಾದೇಶಿಕ ಕೇಂದ್ರದಲ್ಲಿ ಪ್ರಸಕ್ತ ಸಾಲಿನ ಜುಲೈ ಆವೃತ್ತಿಯಲ್ಲಿ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ. ಬಿ.ಎಸ್.ಡಬ್ಲೂ, ಬಿ.ಲಿಬ್.ಐ.ಎಸ್.ಸ್ಸಿ. ಮತ್ತು ಎಲ್ಲಾ ಬಿ.ಎಸ್ಸಿ, ಸ್ನಾತಕೋತ್ತರ ಪದವಿಗಳಾದ ಎಂ.ಎ /ಎಂ.ಕಾಂ, ಎಂ.ಬಿ.ಎ, ಎಂ.ಸಿ.ಎ, ಎಂ.ಎಸ್.ಡಬ್ಲೂö್ಯ, ಎಂ.ಲಿಬ್ ಐ.ಎಸ್.ಸ್ಸಿ ಮತ್ತು ಎಲ್ಲಾ ಎಂ.ಎಸ್ಸಿ ಪದವಿಗಳು ಮತ್ತು ಡಿಪ್ಲೋಮಾ, ಪಿ.ಜಿ ಡಿಪ್ಲೋಮಾ, ಸರ್ಟಿಫಿಕೇಟ್ ಕೋರ್ಸುಗಳಿಗೆ ಪ್ರವೇಶಾತಿಯು ಆರಂಭವಾಗಿದ್ದು, ಆಸಕ್ತರು ಪ್ರಾದೇಶಿಕ ಕೇಂದ್ರದಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಕ್ರೈಸ್ತ, ಜೈನ, ಭೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮಿತಿ ಇರುವವರು ಅಗತ್ಯ ದಾಖಾಲಾತಿ ಒದಗಿಸಿದಲ್ಲಿ ಉಚಿತ ಪ್ರವೇಶಾತಿಗೆ ಅವಕಾಶವಿರುತ್ತದೆ. ಹೆಚ್ಚಿನ ವಿವರಗಳಿಗೆ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ಸೈಟ್ www.ksoumysuru.ac.in ಅನ್ನು ಅಥವಾ ಮೊ.ನಂ: 8197818807, 8970636111, 8431406150 ಹಾಗೂ 9449499139 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೆ.ಎಸ್.ಓ.ಯು ಉಡುಪಿ ಪ್ರಾದೇಶಿಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಡ್ಡರ್ಸೆ ಗ್ರಾಮ ಪಂಚಾಯತ್ ಜನಸಂಪರ್ಕ ಸಭೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಇತ್ತೀಚಿಗೆ ಜರಗಿತು. ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಜನಸಂಪರ್ಕ ಸಭೆಯ ಮುಖ್ಯ ಉದ್ದೇಶವೇ ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸಿ ಸ್ಥಳದಲ್ಲೇ ಪರಿಹಾರ ಕೊಡುವುದು. ಸರ್ಕಾರದ ಯೋಜನೆಗಳ ಲಾಭ ಕೊನೆಯ ವ್ಯಕ್ತಿಗೂ ತಲುಪುವಂತೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು. ತದನಂತರ ಶಾಸಕರು ಸಾರ್ವಜನಿಕರಿಂದ ವಿವಿಧ ಸಮಸ್ಯೆಗಳ ಅಹವಾಲುಗಳನ್ನು ಸ್ವೀಕರಿಸಿ, ಸ್ಥಳದಲ್ಲಿಯೇ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರಕ್ಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಗ್ರಾಮದ ಮೂಲಸೌಕರ್ಯ, ರಸ್ತೆ, ಕುಡಿಯುವ ನೀರು, ವಸತಿ ಯೋಜನೆ ಹಾಗೂ ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಶಾಸಕರ ಗಮನ ಸೆಳೆದರು. ಅಹವಾಲುಗಳನ್ನು ಆಲಿಸಿದ ಶಾಸಕರು, ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ವೇಗವಾಗಿ ಕಾರ್ಯನಿರ್ವಹಿಸಬೇಕು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿರುವ ಕಾಲುಸಂಕಗಳ ಗುಣಮಟ್ಟವನ್ನು ತಾಂತ್ರಿಕ ತಂಡದೊಂದಿಗೆ ಪರಿಶೀಲಿಸಿ, ಅವುಗಳ ಸ್ಥಿತಿಗತಿಗಳ ಕುರಿತ ಸಮರ್ಪಕ ವರದಿ ನೀಡುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ 600 ಕ್ಕೂ ಹೆಚ್ಚು ಕಾಲುಸಂಕಗಳಿದ್ದು, ಒಂದೊಮ್ಮೆ ಶಿಥಿಲಾವಸ್ಥೆಯಲ್ಲಿರುವ ಕಾಲುಸಂಕಗಳ ಮೇಲೆ ಸಾರ್ವಜನಿಕರು, ವಿದ್ಯಾರ್ಥಿಗಳು, ಸಂಚರಿಸಿದ್ದಲ್ಲಿ ಪ್ರಾಣಹಾನಿ ಆಗುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಆದ್ದರಿಂದ ಹೊಸ ಕಾಲುಸಂಕಗಳ ನಿರ್ಮಾಣದ ಜೊತೆಗೆ ಈಗಾಗಲೇ ಅಸ್ಥಿತ್ವದಲ್ಲಿರುವ ಕಾಲುಸಂಕಗಳ ದುರಸ್ಥಿಗೆ ಆದ್ಯತೆಯ ಮೇಲೆ ಕ್ರಮವಹಿಸುವುದರೊಂದಿಗೆ ಯಾವುದೇ ಅವಘಡಗಳು ಸಂಭವಿಸದAತೆ ಮುನ್ನೆಚ್ಚರಿಕೆ ವಹಿಸಬೇಕೆಂದರು. ಜಿಲ್ಲೆಯಲ್ಲಿ ಪ್ರಸ್ತುತ ವರ್ಷದಲ್ಲಿ ಈವರೆಗೆ ವಾಡಿಕೆಗೆ 1959 ಮಿ.ಮೀ. ಮಳೆಯಾಗಬೇಕಿತ್ತು. ಆದರೆ 1182 ಮಿ.ಮೀ ನಷ್ಟು ಮಳೆಯಾಗಿ ಶೇ. 40 ರಷ್ಟು ಮಳೆಯ ಕೊರತೆ ಆಗಿದೆ ಎಂದ ಅವರು, ಈಗಾಗಲೇ ಪೂರ್ವ ಮುಂಗಾರು ಮಳೆಯಿಂದ ಮಾನವ ಹಾನಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕಮಲಶಿಲೆಯ ಗಣೇಶ್ ಐತಾಳ ಎಂಬುವವರ ಮನೆಯ ಸಮೀಪ ದೊಡ್ಡದಾದ ಹೆಬ್ಬಾವು ಕಾಣಿಸಿಕೊಂಡಿದ್ದು ಅದನ್ನು ರಕ್ಷಿಸಿ ಕಾಡಿಗೆ ಬಿಡಲಾಯಿತು. ಉರಗಪ್ರೇಮಿ ಅಂಪಾರು ಶಂಕರ ಅವರು ಕಮಲಶಿಲೆಗೆ ತೆರಳಿ ಸುಮಾರು 10ಕೆಜಿಗೂ ಹೆಚ್ಚಿನ ತೂಕದ 8 ಅಡಿ ಉದ್ದದ ಹಾವನ್ನು ಹಿಡಿದಿದ್ದಾರೆ. ಅವರಿಗೆ ಕಮಲಶಿಲೆ ದೇಗುಲದ ಗುಹಾಲಯ ಅರ್ಚಕ ರಾಘವೇಂದ್ರ ಜೋಗಿ ಅವರು ಸಹಕರಿಸಿದರು. ಬಳಿಕ ಅದನ್ನು ಕಾಡಿಗೆ ಬಿಡಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಲೆನಾಡು, ಅರೆ ಮಲೆನಾಡು ಹಾಗು ಬಯಲುಸೀಮೆ – ಕರಾವಳಿ ಭಾಗಕ್ಕೆ ಸಂಪರ್ಕ ಕಲ್ಪಿಸುವ ಆಗುಂಬೆ ಘಾಟ್ ರಸ್ತೆಯ ಸರ್ವಾಂಗೀಣ ಅಭಿವೃದ್ಧಿ ಕೈಗೊಳ್ಳಲು ಖುದ್ದು ಲೋಕೋಪಯೋಗಿ ಇಲಾಖಾ ಸಚಿವರಾದ ಸತೀಶ ಜಾರಕಿಹೊಳಿ ಅವರು ಅಧಿಕಾರಿಗಳ ತಂಡದೊಂದಿಗೆ ಬುಧವಾರ ಮಾಡಿ, ಅಭಿವೃದ್ಧಿ ಕಾರ್ಯಗಳ ಸಾಧಕ-ಬಾಧಕಗಳನ್ನು ಚರ್ಚಿಸಿದರು. ಮಲೆನಾಡು, ಅರೆ ಮಲೆನಾಡು ಹಾಗು ಬಯಲುಸೀಮೆ : ಕರಾವಳಿ ಭಾಗಕ್ಕೆ ಅತೀ ಸಮೀಪದ ಸಂಪರ್ಕ ಕಲ್ಪಿಸುವ ಆಗುಂಬೆ ಘಾಟ್ನಲ್ಲಿ ಹೆಚ್ಚು ಲಘು ವಾಹನಗಳು, ಮಿನಿ ಬಸ್ಗಳು ಸಂಚರಿಸುತ್ತವೆ. ಹೆಚ್ಚಾಗಿ ಘಟ್ಟದ ಮೇಲಿನ ಜನರು ಉತ್ತಮ ಆರೋಗ್ಯ ಸೇವೆ ಹಾಗೂ ಶಿಕ್ಷಣ ಪಡೆಯಲು ಹೆಚ್ಚು ಹೆಚ್ಚು ಜನರು ಇದೇ ಮಾರ್ಗವಾಗಿ ಸಂಚರಿಸುತ್ತಾರೆ. ಈ ಘಾಟ್ ರಸ್ತೆಯ ಕೆಲವೊಂದು ಸ್ಥಳಗಳಲ್ಲಿ ಅಗಲೀಕರಣ, ರಕ್ಷಣಾ ಗೋಡೆಗಳ ನಿರ್ಮಾಣ ಸೇರಿದಂತೆ ಮತ್ತಿತರ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳಲು ಪರಿಶೀಲನೆ ನಡೆಸಿ, ಕೈಗೊಳ್ಳಬೇಕಾಗಿರುವ ಕಾಮಗಾರಿಗಳ ಬಗ್ಗೆ ಅಭಿಯಂತರರುಗಳೊಂದಿಗೆ ಮಾಹಿತಿ ಪಡೆದರು. ಆಗುಂಬೆ ಘಾಟ್ನಲ್ಲಿ ಶಿವಮೊಗ್ಗದ ಕಡೆಯಿಂದ ಬರುವ ಘಾಟ್ನ ಆರಂಭದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನ 26ನೇ ಬ್ಯಾಚ್ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ‘ಸಂಪನ್ನಮ್’’ ಕಾಲೇಜಿನ ವಿಎಸ್ ಆಚಾರ್ಯ ಸಭಾಂಗಣದಲ್ಲಿ ಬುಧವಾರ ನಡೆಯಿತು. ಮುಖ್ಯ ಅತಿಥಿಯಾಗಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ, ಆಯುರ್ವೇದವು ಇಂದು ದೇಶದ ಗಡಿಗಳನ್ನು ಮೀರಿ ಜಾಗತಿಕ ಮಟ್ಟದಲ್ಲಿ ಬೆಳೆಯುತ್ತಿದೆ. ಸುಮಾರು 17 ರಾಷ್ಟ್ರಗಳಿಗೆ ಇದರ ವಿಸ್ತರಣೆ ಆಗಿದ್ದು, 25ಕ್ಕೂ ಹೆಚ್ಚು ಯುರೋಪಿನ ರಾಷ್ಟ್ರಗಳಲ್ಲಿ ಆಯುರ್ವೇದಕ್ಕೆ ಮಾನ್ಯತೆ ದೊರೆಯುತ್ತಿರುವುದು ಈ ವೈದ್ಯ ಪದ್ಧತಿಯ ಬೆಳವಣಿಗೆಯ ಸೂಚಕವಾಗಿದೆ ಎಂದು ತಿಳಿಸಿದರು. ಕೇಂದ್ರ ಸರ್ಕಾರ ಆಯುಷ್ ಕ್ಷೇತ್ರದ ಅಭಿವೃದ್ಧಿಗಾಗಿ ಸುಮಾರು ₹3,500 ಕೋಟಿ ಅನುದಾನ ಮೀಸಲಿಟ್ಟಿದ್ದು, ಪ್ರತ್ಯೇಕ ಆಯುಷ್ ಸಚಿವಾಲಯ ಮತ್ತು ಸಚಿವರ ವ್ಯವಸ್ಥೆಯೂ ಇರುವುದರಿಂದ ಈ ಕ್ಷೇತ್ರಕ್ಕೆ ಸರ್ಕಾರ ನೀಡುತ್ತಿರುವ ಮಹತ್ವ ಸ್ಪಷ್ಟವಾಗುತ್ತದೆ ಎಂದರು. ಆಯುರ್ವೇದದಲ್ಲಿ ಔಷಧ, ಚಿಕಿತ್ಸಾ ವಿಧಾನ ಹಾಗೂ ಸಂಶೋಧನೆ ಕ್ಷೇತ್ರಗಳಲ್ಲಿ ಗಣನೀಯ ಪ್ರಗತಿ ಕಂಡುಬಂದಿದ್ದು, ವೈದ್ಯರು ನಿರಂತರವಾಗಿ ಹೊಸ ಜ್ಞಾನವನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳು ಗೆಳೆಯರು, ಹೆತ್ತವರು ಹಾಗೂ ಗುರುಗಳ ಬಗ್ಗೆ ಸಕಾರಾತ್ಮಕ ಧೋರಣೆಯನ್ನು ಬೆಳೆಸಿಕೊಳ್ಳಬೇಕು. ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಮೈಗೂಡಿಸಿಕೊಂಡು ಜಾತಿ, ಮತ, ಧರ್ಮದ ಎಲ್ಲೆಯನ್ನು ಮೀರಿ ವಿಶ್ವಾತ್ಮಕ ಪ್ರಜ್ಞೆಯನ್ನು ಬೆಳೆಸಿಕೊಂಡಾಗ ವಿದ್ಯಾರ್ಥಿಗಳು ಉತ್ತಮ ಪ್ರಜೆಗಳಾಗಲು ಸಾಧ್ಯ ಎಂದು ಬಸ್ರೂರಿನ ಶ್ರೀ ಶಾರದಾ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಎಮ್. ದಿನೇಶ್ ಹೆಗ್ಡೆ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ .ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಘಟಕ 2026- 27ನೇ ಶೈಕ್ಷಣಿಕ ಸಾಲಿಗೆ ಕಾಲೇಜಿನ ಪ್ರಥಮ ವರ್ಷದ ಪದವಿಗೆ ನೂತನವಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ “ಪ್ರೇರಣಾ” ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಪದವಿ ವ್ಯಾಸಂಗಕ್ಕಾಗಿ ವಿದ್ಯಾರ್ಥಿಗಳು ಯಾವುದೇ ಜ್ಞಾನ ಶಿಸ್ತನ್ನು ಆಯ್ಕೆ ಮಾಡಿಕೊಂಡರೂ, ನಿರಂತರ ಪರಿಶ್ರಮ ಪಟ್ಟರೆ ಯಶಸ್ಸು ಗಳಿಸಲು ಸಾಧ್ಯ ಎಂದರು. ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಸಂಸ್ಥೆಯ ಭಿನ್ನ ಶೈಕ್ಷಣಿಕ ಆಯಾಮಗಳ ಕುರಿತು ತಿಳಿಸಿದರು. ಕಾಲೇಜಿನ ಶೈಕ್ಷಣಿಕ ನಿಕಾಯಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ನೆರಳಕಟ್ಟೆ ಸಮೀಪದ ನಿವಾಸಿ, ವಿಜಯ ಕರ್ನಾಟಕ ಪತ್ರಿಕೆಯ ವರದಿಗಾರ ನಾಗೇಶ್ ಗಾಣಿಗ ಅವರು ಬುಧವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹೃದಯಾಘಾತಕ್ಕೊಳಗಾಗಿದ್ದ ಅವರನ್ನು ತಕ್ಷಣವೇ ಕುಂದಾಪುರದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ನಾಗೇಶ್ ಅವರು ಹಲವು ವರ್ಷಗಳಿಂದ ವಿಜಯ ಕರ್ನಾಟಕ ಪತ್ರಿಕೆಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದು, ಸ್ನೇಹಪರ ವ್ಯಕ್ತಿತ್ವದ ಸಹೃದಯಿ ಪತ್ರಕರ್ತರಾಗಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಮೃದ್ಧ ಬೈಂದೂರು ಪರಿಕಲ್ಪನೆಯ ಅರುಣಾಚಲಂ ಕಾಲುಸಂಕ ಯೋಜನೆಯಲ್ಲಿ ಡಾ. ಆರ್. ಅರುಣಾಚಲಂ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಸಂಸ್ಥೆಯ ಸಹಯೋಗದೊಂದಿಗೆ ಬೈಂದೂರು ಕ್ಷೇತ್ರದ ಶಂಕರನಾರಾಯಣ ಗ್ರಾಮದ ಕುಪ್ಪಾರು ಬಟ್ಟಿಹಕ್ಲು, ಜಡ್ಕಲ್ ಗ್ರಾಮದ ಬಸ್ರಿಬೇರು ಹಾಗೂ ಹೊಸಂಗಡಿ ಗ್ರಾಮದ ಅಯ್ಯಪ್ಪನಜೆಡ್ಡು ಕಕ್ಕನಪಾಲು ಇಲ್ಲಿ ನೂತನ ಕಾಲುಸಂಕದ ಉದ್ಘಾಟನಾ ಕಾರ್ಯಕ್ರಮವನ್ನು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಡಾ. ಆರ್ ಅರುಣಾಚಲಂ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು, ಇದರ ಪ್ರವರ್ತಕರಾದ ಕ್ಯಾಪ್ಟನ್ ರಮೇಶ್ ಅರುಣಾಚಲಂ ಅವರ ಜೊತೆಗೂಡಿ ನೆರವೇರಿಸಿದರು. ಶಂಕರನಾರಾಯಣ ಕುಪ್ಪಾರು ಕಾಲುಸಂಕ:ಶಂಕರನಾರಾಯಣ ಗ್ರಾಮದ ಕುಪ್ಪಾರು ಬಟ್ಟಿ ಹಕ್ಲುವಿನಲ್ಲಿ ಡಾ. ಆರ್ ಅರುಣಾಚಲಂ ಸಂಸ್ಥೆಯ ಸಹಯೋಗದೊಂದಿಗೆ ನಿರ್ಮಿಸಿದ ಅರುಣಾಚಲಂ ಕಾಲುಸಂಕವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು ಅರುಣಾಚಲಂ ಅವರ ಕುಟುಂಬವು ಬೈಂದೂರಿನ ಜನತೆಯ ಮೇಲಿನ ಪ್ರೀತಿಯಿಂದ ತಮ್ಮ ಸ್ವಂತ ದುಡಿಮೆಯಿಂದ ನಿರ್ಮಿಸಿದ ಈ ಕಾಲುಸಂಕಕ್ಕೆ ಬೆಲೆ ಕಟ್ಟಲು ಅಸಾಧ್ಯ, ಬೈಂದೂರಿನ ಜನತೆ ನಿಮ್ಮನ್ನು ಈ ಸಮಾಜಮುಖಿ ಕಾರ್ಯಕ್ಕೆ ಸದಾ ಸ್ಮರಿಸುತ್ತಾರೆ ಎಂದು ಅಭಿಪ್ರಾಯಪಟ್ಟರು. ಇದೇ…
