Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಫರೀದ್ ಅವರು ಇಂದು ಬಾರಕೂರಿನ ಸಂತೆಗುಡ್ಡೆ ಮಾಲೀಕ್ ದಿನಾರ್ ಜುಮ್ಮಾ ಮಸೀದಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬಾರಕೂರು ಇತಿಹಾಸ ಪ್ರಸಿದ್ಧವಾದ ಪವಿತ್ರ ಕ್ಷೇತ್ರ. ವಿಜಯನಗರದ ರಾಜರು ಸೇರಿದಂತೆ ಹಲವಾರು ರಾಜರು ಬಾರಕೂರನ್ನು ಆಳಿದರೂ ಸಹ, ರಾಜರೂ ಬದಲಾದರೂ, ಅಧಿಕಾರ ಬದಲಾದರೂ ಸಹ ಬಾರಕೂರಿನ ಸಂಸ್ಕೃತಿ ಮತ್ತು ಮೌಲ್ಯವನ್ನು ಶಾಶ್ವತವಾಗಿ ನೆಲೆನಿಲ್ಲುವಂತೆ ಮಾಡಿರುವುದು ದೊಡ್ಡ ಕೊಡುಗೆ. ಎಷ್ಟೇ ರಾಜರುಗಳು ಇಲ್ಲಿ ಆಡಳಿತ ನಡೆಸಿದರೂ ಸಹ ಇಂದಿಗೂ ಇಲ್ಲಿನ ಪರಂಪರೆಯನ್ನು ಇನ್ನೂ ಉಳಿಸಿಕೊಂಡು ಬರಲಾಗಿದೆ ಎಂದರು. ಇಲ್ಲಿ ಪವಿತ್ರವಾದ ಹಲವಾರು ದೇವಸ್ಥಾನಗಳು, ಮಸೀದಿ, ಚರ್ಚ್ಗಳು ಇದ್ದು, ಎಲ್ಲಾ ಸಮುದಾಯದವರು ಸೌಹಾರ್ದತೆಯಿಂದ ಜೀವನ ನಡೆಸುತ್ತಿದ್ದಾರೆ. ಭಾರತ ದೇಶದ ಸಂಸ್ಕೃತಿಯ ಪ್ರತಿಬಿಂಬ ಇಲ್ಲಿ ನೆಲೆಸಿರುವುದನ್ನು ನಾವು ಕಾಲಿಟ್ಟಾಗಲೇ ಕಾಣಬಹುದಾಗಿದೆ. ಬಾರಕೂರು ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಪ್ರದೇಶ. ಭಾರತದ ನಾಗರಿಕತೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಹಿಂದಿನ ಕಾಲದ ಕಲೆ ಮತ್ತು ಸಂಸ್ಕೃತಿಯನ್ನು ಯುವ ಪೀಳಿಗೆಗೆ ತಲುಪಿಸುವುದು ತರಬೇತಿ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ಶಿಕ್ಷಣ ಎಂದರೆ ಓದು ಮಾತ್ರವಲ್ಲ ಕ್ರೀಡೆ ಸಾಂಸ್ಕೃತಿಕ ಚಟುವಟಿಕೆ ಮತ್ತು ಇನ್ನಿತರ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿಯೂ ಸಹ ಕಲೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಮಾಡಬೇಕು ಎಂದು ಕುಂದಾಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ಸೋಮವಾರ ಕುಂದಾಪುರದ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಸಹಯೋಗದಲ್ಲಿ ನಡೆದ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ಉಪಯೋಜನೆಯಡಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಯರಿಗೆ ನೃತ್ಯ ರೂಪಕ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಕಂಸಾಳೆ ಜಾನಪದ ನೃತ್ಯ ಕಲಾತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕುಂದಾಪುರ ನಗರ ಯೋಜನಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಮಾಜದಲ್ಲಿ ಜಾಗೃತಿ ಮೂಡಿಸುವಲ್ಲಿ ಪತ್ರಿಕಾ ಮಾಧ್ಯಮಗಳು ಜನಮುಖಿಯಾಗಿ ಪರಿಣಾಮಕಾರಿಯಾದ ಪಾತ್ರ ವಹಿಸುತ್ತವೆ. ಪತ್ರಿಕೆಗಳು ನೀಡುವ ಎಚ್ಚರಿಕೆ, ಜಾಗೃತಿ ಹೆಚ್ಚು ಪರಿಣಾಮ ಬೀರುತ್ತದೆ. ಕುಂದಾಪುರದ ಪತ್ರಕರ್ತರು ಧನಾತ್ಮಕವಾದ ಸುದ್ಧಿ ನೀಡುವಲ್ಲಿ ಹೆಚ್ಚು ಆಸಕ್ತಿ ವಹಿಸುತ್ತಿದ್ದು, ಇದು ಎಲ್ಲರಿಗೂ ಮಾದರಿ ಎಂದು ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರೇಮಾನಂದ ಹೇಳಿದರು. ಅವರು ಮಂಗಳವಾರ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಭಂಡಾರ್ಕಾರ್ಸ್ ಕಾಲೇಜಿನ ರಾಧಾಬಾಯಿ ಹಾಲ್‌ನಲ್ಲಿ ಆಯೋಜಿಸಿದ ಪತ್ರಿಕಾ ದಿನಾಚರಣೆಯನ್ನು ಗ್ರಾಮೋಪೋನ್ ನ ಧ್ವನಿಗೆ ಚಾಲನೆ ನೀಡುವ ಮೂಲಕ ಉದ್ಘಾಟಿಸಿ, ಮಾತನಾಡಿದರು. ಇತ್ತೀಚೆಗೆ ಹಂದಿಗಳ ಸರಣಿ ಸಾವಿನ ಬಗ್ಗೆ ಪತ್ರಿಕೆಗಳು ತೋರಿಸಿದ ಕಾಳಜಿಯನ್ನು ಶ್ಲಾಘಿಸಿದ ಅವರು, ಪತ್ರಿಕಾ ವಿತರಕರ ಸಂಖ್ಯೆ ಕಡಿಮೆಯಾಗುತ್ತಿದೆ.  ಹಾಗಾಗಿ ಪತ್ರಿಕೆಗಳ ಓದುಗರ ಸಂಖ್ಯೆಯೂ ಕಡಿಮೆಯಾಗಬಹುದು. ಪತ್ರಿಕಾ ವಿತರಕರಿಗೆ ಉತ್ತೇಜನ, ಜೀವನ ಭದ್ರತೆ ನೀಡುವ ಕಾರ್ಯಗಳು ಆಗಬೇಕಾಗಿದೆ ಎಂದರು. ಹಿರಿಯ ಪತ್ರಕರ್ತ, ವಿಜಯ ಕರ್ನಾಟಕ ಮಂಗಳೂರು ವಿಭಾಗದ ಹಿರಿಯ ವರದಿಗಾರ ಮುಹಮ್ಮದ್ ಆರಿಫ್ ವಿಶೇಷ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಿಬ್ಬಂದಿ ಕ್ಷೇಮಪಾಲನಾ ಸಮಿತಿಯ ಆಶ್ರಯದಲ್ಲಿ ನುಡಿ ನಮನ ಕಾರ್ಯಕ್ರಮ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಕಳೆದ 16 ವರ್ಷಗಳಿಂದ ಕಾಲೇಜಿನಲ್ಲಿ ಹಿಂದಿ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ ಡಾ. ದೀಪಾ ಹಾಗೂ ದ್ವಿತೀಯ ಬಿಸಿಎ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸುದೀಪ್ ಶೆಟ್ಟಿ ಅವರು ಅಕಾಲಿಕವಾಗಿ ಮರಣ ಹೊಂದಿದ ಹಿನ್ನೆಲೆಯಲ್ಲಿ ನುಡಿ ನಮನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅವರು ಮಾತನಾಡಿ, ಸಂಸ್ಥೆಗೆ ಡಾ. ದೀಪಾ ಅವರು ಸಲ್ಲಿಸಿದ ಸೇವೆ ಸ್ಮರಣೀಯ. ನಂದಾದೀಪದAತೆ ಎಲ್ಲರೊಂದಿಗೆ ಬೆರೆತು ಬದುಕಿದ ಅವರ ಬದುಕಿನ ನಡೆ ಉಲ್ಲೇಖನೀಯ. ಮೃತ ವಿದ್ಯಾರ್ಥಿ ಸುದೀಪ್ ಶೆಟ್ಟಿ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದು, ಕಾಲೇಜಿನ ಸಾಂಸ್ಕೃತಿಕ ಮತ್ತು ಇನ್ನಿತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡವರು. ಇಬ್ಬರ ಆತ್ಮಕ್ಕೆ ಸದ್ಗತಿ ದೊರಕಲಿ ಎಂದರು. ಸಂಸ್ಥೆಯ ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಪ್ರಸ್ತಾವಿಸಿ, ನುಡಿ ನಮನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಪದವಿಪೂರ್ವ ಕಾಲೇಜು ದೈಹಿಕ ಶಿಕ್ಷಣ  ಉಪನ್ಯಾಸಕರ ಸಂಘದ ನೂತನ ಅಧ್ಯಕ್ಷರಾಗಿ ಶ್ರೀ ಮೂಕಾಂಬಿಕಾ ದೇವಳದ  ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಸುಕೇಶ ಶೆಟ್ಟಿ ಹೊಸಮಠ ಆಯ್ಕೆಯಾಗಿದ್ದಾರೆ. ಸುಕೇಶ ಶೆಟ್ಟಿ ಅವರು ತಮ್ಮ ನಾಯಕತ್ವ, ಸಂಘಟನಾ ಸಾಮರ್ಥ್ಯ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿನ ಅನುಭವದ ಮೂಲಕ ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘವನ್ನು ಮುನ್ನೆಡಸಲಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೆಂಗಳೂರು: ಇಂದಿನ ಕಾಲಘಟ್ಟದಲ್ಲಿ ಎಲ್ಲಿಯೂ ನಡೆಯದ ಅಪರೂಪದ ಪೂರ್ಣರಾತ್ರಿ ತಾಳಮದ್ದಳೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಸಾಕ್ಷಿಯಾಗಲಿದೆ. ನಾಗರಾಜ್ ಶೆಟ್ಟಿ ನೈಕಂಬ್ಳಿ ಅವರ ಸಂಯೋಜನೆಯಲ್ಲಿ ನಡೆಯುತ್ತಿರುವ *‘ಯಕ್ಷಸಂಕ್ರಾಂತಿ *ಯ ಮೂರನೇ ವರ್ಷದ ಕಾರ್ಯಕ್ರಮವು ಜುಲೈ 25, ಶನಿವಾರ ರಾತ್ರಿ 10ರಿಂದ ಬೆಳಗಿನವರೆಗೆ ನಡೆಯಲಿದೆ. ಇತ್ತೀಚಿನ ದಿನಗಳಲ್ಲಿ ಸಮಯದ ಮಿತಿಯೊಳಗೆ ನಡೆಯುವ ತಾಳಮದ್ದಳೆಗಳ ನಡುವೆ, ಇಡೀ ರಾತ್ರಿ ಅರ್ಥವೈಭವವನ್ನು ಆಸ್ವಾದಿಸುವ ಅವಕಾಶವನ್ನು ಕಲಾರಸಿಕರಿಗೆ ಕಲ್ಪಿಸುತ್ತಿರುವ ‘ನೈಕಂಬ್ಳಿ ಯಕ್ಷಸಂಕ್ರಾಂತಿ’ಈಗಾಗಲೇ ವಿಶಿಷ್ಟ ಗುರುತನ್ನು ಪಡೆದುಕೊಂಡಿದೆ. ರಾಜ್ಯದ ವಿವಿಧ ಭಾಗಗಳಿಂದ ಯಕ್ಷಗಾನಾಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು, ಇದು ತಾಳಮದ್ದಳೆ ಪ್ರಿಯರ ವಾರ್ಷಿಕ ಸಾಂಸ್ಕೃತಿಕ ಹಬ್ಬವಾಗಿ ರೂಪುಗೊಂಡಿದೆ. ಈ ತಾಳಮದ್ದಳೆಯ ಮೊದಲ ಪ್ರಸಂಗವಾಗಿ ಪಾರ್ತಿಸುಬ್ಬ ವಿರಚಿತ ‘ವಾಲಿವಧೆ’ ಹಾಗೂ ಎರಡನೇ ಪ್ರಸಂಗವಾಗಿ ಡಿ. ಎಸ್. ಶ್ರೀಧರರು ರಚಿಸಿದ ‘ಭೃಗುಶಾಪ’ ಪ್ರದರ್ಶನಗೊಳ್ಳಲಿವೆ. ಪ್ರಸಿದ್ಧ ಭಾಗವತರಾದ ಜನ್ಸಾಲೆ ರಾಘವೇಂದ್ರ ಆಚಾರ್ಯ ಹಾಗೂ ಹಿಲ್ಲೂರು ರಾಮಕೃಷ್ಣ ಹೆಗಡೆ ಅವರ ಭಾಗವತಿಕೆಯಲ್ಲಿ ಕಾರ್ಯಕ್ರಮ ನಡೆಯಲಿದೆ. *‘ವಾಲಿವಧೆ’*ಯಲ್ಲಿ ಸುಣ್ಣಂಬಳ ವಿಶ್ವೇಶ್ವರ ಭಟ್ಟರು ಶ್ರೀರಾಮನಾಗಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಕಳೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 623 ಅಂಕ ಗಳಿಸಿ ರಾಜ್ಯಮಟ್ಟದಲ್ಲಿ 3ನೇ ಸ್ಥಾನ ಹಾಗೂ ಶಾಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದ ಸಾತ್ವಿಕ್ ಎಸ್. ಭಟ್ ನನ್ನು ಶಾಲೆಯ 40ನೇ ಸಂಸ್ಥಾಪನಾ ದಿನದಂದು ಪೋಷಕರೊಂದಿಗೆ ಬೆಳ್ಳಿಯ ಲೋಟವನ್ನು ನೀಡಿ ಸನ್ಮಾನಿಸಲಾಯಿತು. ಈ ಸಮಾರಂಭವು ಸಂಸ್ಥೆಯ ಅಧ್ಯಕ್ಷರಾದ ಕೆ. ರಾಮಕೃಷ್ಣಕಾಮತ್ ಅವರ ಅಧ್ಯಕ್ಷತೆಯಲ್ಲಿ, ಕಾರ್ಯದರ್ಶಿ ಕೆ.ರಾಧಾಕೃಷ್ಣ ಶೆಣೈಯವರ ಉಪಸ್ಥಿತಿಯಲ್ಲಿ ನಡೆಯಿತು. ಬೈಂದೂರು ಹಾಗೂ ಕುಂದಾಪುರ ತಾಲೂಕಿನ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರಾದ ಚಂದ್ರ ನಾಯ್ಕ್ ಹಾಗೂ ಸುಮಾ ಉಮೇಶ್ ಪುತ್ರನ್ ರವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಸಂಸ್ಥೆಯ ಖಂಜಾಂಚಿ ಲಕ್ಷೀನಾರಾಯಣ ಶೆಣೈ, ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜಿನ ಮುಖ್ಯಸ್ಥರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬೆಂಗಳೂರಿನಲ್ಲಿ ಗುರುವಾರ ನಡೆದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಂಗನ ಕಾಯಿಲೆ ಹರಡುವಿಕೆ ಹಾಗೂ ನಿಯಂತ್ರಣ ಕ್ರಮಗಳು ಕುರಿತು ನಡೆದ ಸಭೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ರಾಜ್ಯದ ಆರೋಗ್ಯ ಸಚಿವರಾದ ಯು. ಟಿ ಖಾದರ್ ಅವರಿಗೆ ತಾಲೂಕು ಆಸ್ಪತ್ರೆಯ ಅವಶ್ಯಕತೆ ಮನವರಿಕೆ ಮಾಡಿ ನೂರು ಹಾಸಿಗೆಗಳ ತಾಲೂಕು ಆಸ್ಪತ್ರೆ ಮಂಜೂರು ಮಾಡಲು ಮನವಿ ಮಾಡಿದರು. ತಾಲೂಕು ಆಸ್ಪತ್ರೆ ಉದ್ದೇಶಕ್ಕಾಗಿ ಈಗಾಗಲೇ ಜಾಗ ಕಾದಿರಿಸಿ ಈ ಹಿಂದಿನ ಆರೋಗ್ಯ ಸಚಿವರು ಇಲಾಖಾ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಆಗದ ಕ್ರಮಗಳು ಮತ್ತು ಬೈಂದೂರು ತಾಲೂಕಿನಲ್ಲಿ ಆಸ್ಪತ್ರೆಯ ಅಗತ್ಯತೆಯನ್ನು ಅವರು ಸಚಿವರಿಗೆ ಮನವರಿಕೆ ಮಾಡಿದ್ದರು. ಎಂಡೊಸಲ್ಫಾನ್ ಪುನರ್ವಸತಿ ಕೇಂದ್ರ ಮಂಜೂರು ಮಾಡಲು ಕೋರಿಕೆ:ಉಡುಪಿ ಜಿಲ್ಲೆಯಲ್ಲಿ ಸುಮಾರು 2 ಸಾವಿರ ಮಂದಿ ಎಂಡೊಸಲ್ಫಾನ್ ಪೀಡಿತರಿದ್ದು ಹಾಗೂ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಾಧಿತರು ಇರುವ ಕಾರಣ ಬೈಂದೂರು ತಾಲೂಕು ಸೇನಾಪುರ ಗ್ರಾಮದಲ್ಲಿ ಪುನರ್ವಸತಿ ಕೇಂದ್ರ ನಿರ್ಮಾಣ ಮಾಡಲು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖೆಯ ವತಿಯಿಂದ ರಾಜ್ಯ ವಲಯ ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ ಕಂಬೈನ್ಡ್ ಹಾರ್ವೆಸ್ಟರ್ ಹಬ್ ರಚನೆಗೆ ಆಸಕ್ತ ರೈತರಿಂದ ವೈಯಕ್ತಿಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ರೈತರು ಪಹಣಿ, ಆಧಾರ್ ಪ್ರತಿ, ಬ್ಯಾಂಕ್ ಖಾತೆಯ ವಿವರದ ಪ್ರತಿ, ನಿಗಧಿತ ಭಾಷಾ ಕಾಗದದಲ್ಲಿ ಹಬ್ ಪರಬಾರೆ ಮಾಡುವುದಿಲ್ಲ ಎಂದು ಮುಚ್ಚಳಿಕೆ ಪತ್ರ ಇತ್ಯಾದಿ ಅಗತ್ಯ ದಾಖಲಾತಿಗಳೊಂದಿಗೆ ನಿಗಧಿತ ನಮೂನೆಯಲ್ಲಿ ವಿವರ ಭರ್ತಿ ಮಾಡಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಸದ್ರಿ ಯೋಜನೆಯಡಿ ಅರ್ಜಿದಾರರು ಕಂಬೈನ್ಡ್ ಹಾರ್ವೆಸ್ಟರ್ ಹಾಗೂ ಬೇಲರ್‌ಗಳನ್ನು ಕಡ್ಡಾಯವಾಗಿ ಖರೀದಿಸಬೇಕಾಗಿದ್ದು, ಇವುಗಳೊಂದಿಗೆ ಹಾರ್ವೆಸ್ಟರ್ ಹಬ್‌ಗೆ ಅನುಮತಿಸಲಾದ ಇತರೆ ಉಪಕರಣಗಳನ್ನು ಸ್ಥಳೀಯ ಅವಶ್ಯಕತೆಗಳಿಗನುಗುಣವಾಗಿ ಖರೀದಿಸಬಹುದಾಗಿದೆ. ವೈಯಕ್ತಿಕ ಫಲಾನುಭವಿಗಳಿಗೆ ಶೇ. 50ರ ಸಹಾಯಧನದಲ್ಲಿ ಗರಿಷ್ಟ ರೂ. 40 ಲಕ್ಷ ಸಹಾಯಧನವನ್ನು ಪ್ರತಿ ಹಾರ್ವೆಸ್ಟರ್ ಹಬ್ ರಚನೆಗೆ ಉಪಕರಣವಾರು ನಿಗದಿಪಡಿಸಿದ ಗರಿಷ್ಟ ಸಹಾಯಧನದ ಮಿತಿಗೆ ಒಳಪಟ್ಟು Credit Linked Back Ended Subsidy…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕೃಷಿ ವಲಯದ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖಾ ವತಿಯಿಂದ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಕೃಷಿ ಪ್ರಶಸ್ತಿಗೆ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ, ಜಿಲ್ಲಾ ಮತ್ತು ತಾಲೂಕು ಮಟ್ಟದ ಬೆಳೆ ಸ್ಪರ್ಧೆಗೆ ಅನ್ವಯಿಸುವಂತೆ ಒಂದೇ ಅರ್ಜಿಯನ್ನು ಸ್ಪರ್ಧಿಗಳಿಂದ ಪಡೆಯಲಾಗುತ್ತಿದ್ದು, ಮುಂಗಾರು ಹಂಗಾಮಿನ ಮಳೆಯಾಶ್ರಿತ ಭತ್ತದ ಬೆಳೆಯಲ್ಲಿ ಬೆಳೆ ಸ್ಪರ್ಧೆಗೆ ರೈತರು ಹಾಗೂ ರೈತ ಮಹಿಳೆಯರು ಕೆ-ಕಿಸಾನ್ ಪೋರ್ಟಲ್‌ನಡಿ RSK Login ಅಥವಾ Citizen Login ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ, ನಾಗರೀಕ ಸೇವಾ ಕೇಂದ್ರ ಅಥವಾ ಸ್ವತಃ ಆಸಕ್ತ ರೈತ ಹಾಗೂ ರೈತ ಮಹಿಳೆಯರು ಪ್ರತ್ಯೇಕವಾಗಿ ಅಗತ್ಯ ದಾಖಲಾತಿಗಳೊಂದಿಗೆ ರೈತರ ಎಫ್.ಐ.ಡಿ ಯನ್ನು ಬಳಸಿಕೊಂಡು ಆನ್‌ಲೈನ್ ಮೂಲಕ ಆಗಸ್ಟ್ 31 ರ ಒಳಗಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಕಳೆದ 5 ವರ್ಷದ ಅವದಿsಯಲ್ಲಿ ಕೃಷಿ…

Read More