ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇಶದ ರಾಜಧಾನಿಯಲ್ಲಿ ನ್ಯಾಯಕ್ಕಾಗಿ ನ್ಯಾಯಯುತ ಹೋರಾಟ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಯುವ ಜನತೆಯನ್ನು ಅತ್ಯಂತ ಅಮಾನುಷವಾಗಿ ನಡೆಸಿಕೊಳ್ಳುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಎನ್.ಡಿ.ಎ. ಸರ್ಕಾರದ ನಡೆ ಯುವಜನ ವಿರೋಧಿ ಹಾಗೂ ಸರ್ವಾಧಿಕಾರಿ ನಡೆಯಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದರು. ಬಿಜೆಪಿ ನಾಯಕರು ಬಾಯಿ ತೆಗೆದರೆ ತಾವು ಯುವ ಜನತೆಯ, ವಿದ್ಯಾರ್ಥಿಗಳ ಪರ ಎನ್ನುವುದು, ಇನ್ನೊಂದು ಕಡೆ ದೇಶದ ಪ್ರಧಾನಿ ಭೇಟಿ ಪಡಾವೋ, ಭೇಟಿ ಭಚಾವೋ ಎನ್ನುವುದು ಆದರೆ ಇಂದು ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ, ವಿದ್ಯಾರ್ಥಿಗಳ ಆತ್ಮಹತ್ಯೆಗಳ ವಿರುದ್ಧ ಯುವ ಜನತೆ ಹಾಗೂ ವಿದ್ಯಾರ್ಥಿಗಳು ನ್ಯಾಯಕೋರಿ ಬೀದಿಗೆ ಇಳಿದು ಹೋರಾಟ ಮಾಡುತ್ತಿದ್ದರೆ, ಕನಿಷ್ಠ ಅವರ ಬೇಡಿಕೆಯಾದ ಶಿಕ್ಷಣ ಸಚಿವ ಧರ್ಮೆಂದ್ರ ಪ್ರಧಾನ್ ರಾಜೀನಾಮೆ ಕೇಳಿ ನಡೆಸುತ್ತಿರುವ ಹೋರಾಟಕ್ಕೆ ಸ್ಪಂದಿಸಬೇಕಾದ ಪ್ರಧಾನಿ ನರೇಂದ್ರ ಮೋದಿಯವರು ವಿದೇಶಿ ಪ್ರವಾಸದಲ್ಲಿ ತಲ್ಲಿನರಾಗಿರುವುದು ದೇಶದ ಸಾರ್ವಕಾಲಿಕ ದುರಂತ. ದೇಶದ ಯುವ ಜನತೆ ಬಿಜೆಪಿಯವರು ವಿದ್ಯಾರ್ಥಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು (IMJISC) ನಲ್ಲಿ 2026-27ನೇ ಸಾಲಿನ ನೂತನ ವಿದ್ಯಾರ್ಥಿಗಳಿಗಾಗಿ ‘ದೀಕ್ಷಾರಂಭ 2026-27’ ವಿದ್ಯಾರ್ಥಿ ಪರಿಚಯ ಕಾರ್ಯಕ್ರಮವನ್ನು ಉತ್ಸಾಹದಿಂದ ಆಚರಿಸಲಾಯಿತು. ಈ ಕಾರ್ಯಕ್ರಮದೊಂದಿಗೆ ಶೈಕ್ಷಣಿಕ ವರ್ಷಕ್ಕೆ ಅಧಿಕೃತ ಚಾಲನೆ ನೀಡಲಾಯಿತು. ಕಾರ್ಯಕ್ರಮವು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸಂಸ್ಥೆಯ ಶೈಕ್ಷಣಿಕ ಸಂಸ್ಕೃತಿ, ಮೌಲ್ಯಗಳು ಮತ್ತು ದೂರದೃಷ್ಟಿಯ ಬಗ್ಗೆ ಅರಿವು ಮೂಡಿಸಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಐಎಂಜೆಐಎಸ್‌ಸಿ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ. ಪಟೇಲ್ ಅವರು, ಉನ್ನತ ಶಿಕ್ಷಣದ ಪ್ರಯಾಣದ ಮೊದಲ ಹೆಜ್ಜೆ ಎಂದೇ ದೀಕ್ಷಾರಂಭ ಎಂದು ಬಣ್ಣಿಸಿದರು. ರಾಷ್ಟ್ರೀಯ ಚೆಸ್ ದಿನದಿಂದ ಸ್ಫೂರ್ತಿ ಪಡೆದು ಮಾತನಾಡಿದ ಅವರು, “ಜೀವನವು ಚೆಸ್ ಆಟದಂತಿದೆ. ಪ್ರತಿ ನಡೆಯಲ್ಲೂ ಯೋಜನೆ, ತಾಳ್ಮೆ, ತಂತ್ರ ಮತ್ತು ದೂರದೃಷ್ಟಿ ಬೇಕು. ವಿದ್ಯಾರ್ಥಿಗಳು ಸವಾಲುಗಳನ್ನು ಆತ್ಮವಿಶ್ವಾಸದಿಂದ ಎದುರಿಸಿ, ಶಿಸ್ತು ಮತ್ತು ಕಲಿಕೆಯ ಬದ್ಧತೆಯನ್ನು ಬೆಳೆಸಿಕೊಳ್ಳಬೇಕು” ಎಂದು ಸಲಹೆ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಣಿಪಾಲದ ಡಾ. ಟಿ.ಎಂ.ಎ. ಪೈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪತ್ರಿಕೋದ್ಯಮದಲ್ಲಿ ಪದವಿ ಪಡೆದ ಪರಿಶಿಷ್ಟ ಜಾತಿ ನಿರುದ್ಯೋಗಿ ಯುವಕ-ಯುವತಿಯರು ಎಲೆಕ್ಟ್ರಾನಿಕ್ಸ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಉದ್ಯಮವನ್ನು ಸ್ಥಾಪಿಸಲು ಘಟಕ ವೆಚ್ಚದ ಶೇ.70 ರಷ್ಟು ಅಥವಾ ಗರಿಷ್ಟ 5 ಲಕ್ಷ ರೂ.ಗಳ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಉಡುಪಿ, ಕಾರ್ಕಳ ಹಾಗೂ ಕುಂದಾಪುರ ಕಚೇರಿಗಳಿಂದ ಪಡೆದು ಭರ್ತಿ ಮಾಡಿ, ದೃಢೀಕೃತ ಅಗತ್ಯ ದಾಖಲೆಗಳೊಂದಿಗೆ ಜುಲೈ 31ರ ಒಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಎಸ್.ಸಿ ಮತ್ತು ಬಿ.ಸಿ.ಎ ವಿದ್ಯಾರ್ಥಿಗಳಿಗೆ ಪರಿಚಯ ಕಾರ್ಯಕ್ರಮ ಸೋಮವಾರ ನಡೆಯಿತು. ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷರಾದ ಕೆ. ಶಾಂತಾರಾಮ ಪ್ರಭು ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿ ಯು.ಎಸ್.ಶೆಣೈ ಮಾತನಾಡಿ, ಕುಂದಾಪುರ ನೆಲೆ ಮತ್ತು ಸಂಸ್ಕೃತಿ ಭಾರತ ದೇಶದಲ್ಲಿಯೇ ವಿಶಿಷ್ಟ ಎನಿಸಿಕೊಂಡಿದೆ. ಅದರಲ್ಲೂ ವಿಶೇಷವಾಗಿ ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿಗಳು ದೇಶಾದ್ಯಂತ ಎಲ್ಲಾ ಕ್ಷೇತ್ರಗಳಲ್ಲೂ ತಮ್ಮ ಛಾಪನ್ನು ಮೂಡಿಸಿದ್ದಾರೆ. ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಗಳು ಹೋಟೆಲ್, ಸಿನೆಮಾ, ಬ್ಯಾಂಕಿಂಗ್, ತಂತ್ರಜ್ಞಾನ, ವೈದ್ಯಕೀಯ ಹೀಗೆ ಹಲವಾರು ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಸಾಧನೆ ಇಂದಿನ ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಲಿ. ಅವರಂತೆ ಕನಸುಗಳನ್ನು ಕಂಡು ಅದರೆಡೆಗೆ ಸತತ ಪ್ರಯತ್ನಪಟ್ಟು ಒಳ್ಳೆಯ ಯಶಸ್ಸು ಪಡೆಯಬೇಕು . ಸಮಾಜದ ಒಳ್ಳೆಯ ನಾಗರಿಕರಾಗಿ ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ವಹಿಸಿದ್ದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಯಲ್ಲಿ ರುಡ್‌ಸೆಟ್ ಆಸರೆ ಸಂಘಟನೆ, ಮೊಗವೀರ ಯುವ ಸಂಘಟನೆ, ಉಡುಪಿ ಜಿಲ್ಲೆ ಉಪ್ಪೂರು ಘಟಕ ಮತ್ತು ವಿವಿಧ ಸಂಘ-ಸಂಸ್ಥೆಗಳ ಅಡಿಯಲ್ಲಿ ಕೆ.ಎಂ.ಸಿ ರಕ್ತನಿಧಿ, ಮಣಿಪಾಲ ಅವರ ಸಾರಥ್ಯದಲ್ಲಿ ಸೋಮವಾರದಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಸಂಸ್ಥೆಯ ಆವರಣದಲ್ಲಿ ನಡೆಸಲಾಯಿತು. ಮಣಿಪಾಲ ಕೆನರಾ ಬ್ಯಾಂಕ್ ವೃತ್ತ ಮಹಾಪ್ರಭಂದಕರಾದ ಗಂಗಾಧರ ಎಚ್.ಕೆ. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರಕ್ತದಾನದ ಮಹತ್ವವನ್ನು ಮತ್ತು ರಕ್ತದಾನದಿಂದ ನಾವು ಸಮಾಜಕ್ಕೆ ಒಂದು ಕೊಡುಗೆ ನೀಡಿದ ಹಾಗೆ ಎಂದು ತಿಳಿಸಿದರು. ಹಾಗೂ ತಾವುಗಳು ಕೂಡ ಸುಮಾರು 53 ಬಾರಿ ರಕ್ತದಾನ ಮಾಡಿದ್ದಾರೆ ಎಂದು ಹೆಮ್ಮೆಯಿಂದ ತಿಳಿಸಿದರು. ಮತ್ತು ಪ್ರತಿಯೊಬ್ಬರು ಕೂಡ ರಕ್ತದಾನ ಮಾಡಿ ಎಂದು ಶುಭ ಹಾರೈಸಿದರು. ಇನ್ನೋರ್ವ ಅತಿಥಿಗಳಾಗಿ ಆಗಮಿಸಿದ್ದ ಉಡುಪಿ ಮೊಗವೀರ ಯುವ ಸಂಘಟನೆ, ಕೊರವಡಿ ಜಿಲ್ಲಾಧ್ಯಕ್ಷ ರವೀಶ್ ಎಸ್. ಮಾತನಾಡಿ, ರುಡ್‌ಸೆಟ್ ಸಂಸ್ಥೆಯ ಆವರಣದಲ್ಲಿ ನಮ್ಮೆಲ್ಲ ಸಂಘಟನೆಗಳು ಕೈ ಜೋಡಿಸಿ ಈ ಒಂದು ಅರ್ಥಪೂರ್ಣವಾದ ಕಾರ್ಯಕ್ರಮವನ್ನು ಸಂಸ್ಥೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಪಾಲಕರ ಶಿಕ್ಷಕರ ಮತ್ತು ಆಡಳಿತ ಮಂಡಳಿಯ ಸಮಾಲೋಚನ ಸಭೆಯು ಇತ್ತೀಚಿಗೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ನಿರ್ವಹಿಸಿದ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಅಧ್ಯಕ್ಷರಾದ ಎಲ್.ಟಿ ತಿಮ್ಮಪ್ಪನವರು ಮಾತನಾಡಿ, ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನವು ಪೋಷಕರ ಬೇಡಿಕೆಯಂತೆ ನೂತನವಾಗಿ ಸದ್ಯೋಜಾತ ವಸತಿ ನಿಲಯವನ್ನು ನಿರ್ಮಿಸಿದ್ದು, ಮುಂದಿನ ವರ್ಷಗಳಲ್ಲಿ ಇನ್ನೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಅವಕಾಶ ಒದಗಿಸಿಕೊಡುವ ಪ್ರಯತ್ನದಲ್ಲಿದ್ದೇವೆ. ಪೋಷಕರ ಮತ್ತು ವಿದ್ಯಾರ್ಥಿಗಳ ಸಹಕಾರಗಳಿಗೆ ಧನ್ಯವಾದಗಳನ್ನು ಅರ್ಪಿಸುತ್ತಿದ್ದೇವೆ. ಶಾಲೆಯ ಊಟೋಪಚಾರವು ಇಲ್ಲಿನ ವಾತಾವರಣಕ್ಕೆ ಹೊಂದಿಕೆಯಾಗುವಂತಿದ್ದು, ಅತಿಖಾರ, ಉಪ್ಪು, ಸಿಹಿಗಳಿಂದ ಮುಕ್ತವಾಗಿದ್ದು, ಆರೋಗ್ಯದಾಯಕವಾಗಿದೆ. ವಿದ್ಯಾರ್ಥಿಗಳು ವಸತಿ ನಿಲಯದಲ್ಲಿ ಯಾವ ಶಿಸ್ತನ್ನು ರೂಢಿಸಿಕೊಂಡಿರುವರೋ ಅದನ್ನು ಮನೆಯಲ್ಲೂ ಮುಂದುವರಿಸಲು ಪಾಲಕರು ಪ್ರೇರೇಪಿಸಬೇಕು. ಮಕ್ಕಳ ಪ್ರೀತಿಯನ್ನು ಉಳಿಸಿ, ಬೆಳೆಸಿಕೊಳ್ಳಿ ಎಂದು ಹಿತವಚನಗಳನ್ನಾಡುತ್ತಾ, ಶಾಲೆಯ ವಾರ್ಷಿಕಪತ್ರಿಕೆ ಜ್ಯೋತಿಷ್ಮತಿಯನ್ನು ಬಿಡುಗಡೆಗೊಳಿಸಿದರು. ಸಭೆಯಲ್ಲಿ ಶ್ರೀ ಸಿದ್ಧಿ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಸಂಸ್ಥೆಯ ಪ್ರಾಂಶುಪಾಲರಾದ ಶರಣ ಕುಮಾರ ಪೋಷಕರ ಅಹವಾಲುಗಳಿಗೆ ಸ್ಪಂದಿಸಿ, ಅವರಿಗೆ ಉತ್ತರಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: 2025ನೇ ಸಾಲಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ನೀಡಲಾಗುವ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿ, ಕರ್ನಾಟಕ ಕ್ರೀಡಾ ರತ್ನ, ನಗದು ಪುರಸ್ಕಾರ ಪ್ರಶಸ್ತಿ, ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ, 2025-26ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿ ಯೋಜನೆ, 2025-26ನೇ ಸಾಲಿನ ವಿದ್ಯಾರ್ಥಿ ವೇತನ ಯೋಜನೆ ಹಾಗೂ 2026-27ನೇ ಸಾಲಿನ ಗುರಿ ಒಲಂಪಿಕ್ ಯೋಜನೆಗೆ ಅರ್ಹ ಅಭ್ಯರ್ಥಿಗಳಿಂದ ಸೇವಾಸಿಂಧು ವೆಬ್‌ಸೈಟ್ https://sevasindhu.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೇಲ್ಕಂಡ ಪ್ರಶಸ್ತಿ ಹಾಗೂ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2521324, ಮೊ.ನಂ: 9845432303 ಅಥವಾ ಯುವ ಸಹಾಯವಾಣಿ ಸಂಖ್ಯೆ: 155265 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಮೃದ್ಧ ಬೆಳೆಗಾಗಿ ಸಕಾಲದಲ್ಲಿ ಉತ್ತಮ ಮಳೆಯಾಗಬೇಕು ಹಾಗೂ ವರುಣ ದೇವರ ಅನುಗ್ರಹ ದೊರೆಯಬೇಕು ಎಂಬ ಸಂಕಲ್ಪದೊಂದಿಗೆ ಸೋಮವಾರ ಬೆಳಿಗ್ಗೆ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನ, ಕೋಟೇಶ್ವರದ ಕೋಟಿತೀರ್ಥ ಸರೋವರದಲ್ಲಿ ಪರ್ಜನ್ಯ ಜಪವನ್ನು ಭಕ್ತಿಭಾವದಿಂದ ನೆರವೇರಿಸಲಾಯಿತು. ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಪ್ರಧಾನ ತಂತ್ರಿಗಳಾದ ಪ್ರಸನ್ನ ಕುಮಾರ್ ಐತಾಳರ ನೇತೃತ್ವದಲ್ಲಿ ನಡೆದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ 50ಕ್ಕೂ ಅಧಿಕ ವೈದಿಕರು ಭಾಗವಹಿಸಿ ವೇದಮಂತ್ರಗಳೊಂದಿಗೆ ಪರ್ಜನ್ಯ ಜಪ ನೆರವೇರಿಸಿದರು. ಈ ಕಾರ್ಯಕ್ರಮವನ್ನು ಶಂಕರ ಜಯಂತಿ ಉತ್ಸವ ಸಮಿತಿಯ ಸಹಭಾಗಿತ್ವದಲ್ಲಿ ಆಯೋಜಿಸಲಾಗಿತ್ತು. ಬೆಳಿಗ್ಗೆ 8.00 ಗಂಟೆಗೆ ಆರಂಭವಾದ ಜಪ ಸುಮಾರು 10.00 ಗಂಟೆಯವರೆಗೆ ನಡೆಯಿತು. ಬಳಿಕ ಶ್ರೀ ಕೋಟಿಲಿಂಗೇಶ್ವರ ದೇವರಿಗೆ ಮಂಗಳಾರತಿ ಸಲ್ಲಿಸಿ, ರಾಜ್ಯದಲ್ಲಿ ಉತ್ತಮ ಮಳೆ, ಸಮೃದ್ಧ ಕೃಷಿ, ರೈತರ ಕಲ್ಯಾಣ ಹಾಗೂ ಲೋಕಕ್ಷೇಮಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ವೈದಿಕರು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸರಕಾರಿ ಪ್ರೌಢಶಾಲೆ ಗುಂಡ್ಮಿ ಸಾಸ್ತಾನ ಇಲ್ಲಿ ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಪ್ರವತಿ೯ತ 2026-27ನೇ ಸಾಲಿನ ಇಂಟ್ರ್ಯಾಕ್ಟ್ ಕ್ಲಬ್ ನ ಪದಪ್ರದಾನ ಸಮಾರಂಭವುಇತ್ತೀಚೆಗೆ ನಡೆಯಿತು. ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನದ ಅಧ್ಯಕ್ಷ ಕುಸುಮಾ ಮನೋಜ್ ಅಧ್ಯಕ್ಷತೆ ವಹಿಸಿದ್ದರು. ಇಂಟ್ರ್ಯಾಕ್ಟ್ ಕ್ಲಬ್‌ನ ನೂತನ ಅಧ್ಯಕ್ಷರಾಗಿ ಕೌಸಲ್ಯಾ ಅಧಿಕಾರ ಸ್ವೀಕರಿಸಿದರು. ಉಡುಪಿ ಜಿಲ್ಲಾ ಡಯಟ್‌ನ ಉಪನ್ಯಾಸಕ ಡಾ. ಕಿಶೋರ್ ಕುಮಾರ್ ಶೆಟ್ಟಿ, ಇಂಟ್ರ್ಯಾಕ್ಟ್ ಕೋ ಆಡಿ೯ನೇಟರ್ ಆನಂದ್ ಎಮ್, ಕ್ಲಬ್‌ನ ಕಾರ್ಯದರ್ಶಿ ಕೆ. ರಾಜಾರಾಮ ಐತಾಳ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಸುಜಾತ, ಶಿಕ್ಷಣ ತಜ್ಞ ಗಣೇಶ್ ಜಿ, ಸಮಿತಿ ಸದಸ್ಯರಾದ ಸುಲತಾ ಎಸ್ ಹೆಗ್ಡೆ, ಇಂಟ್ರ್ಯಾಕ್ಟ್ ಮಾರ್ಗದರ್ಶಿ ಶಿಕ್ಷಕಿ ಹೆಲೆನ್ ಬಾಂಝ್ ಹಾಗೂ ಹೆಚ್ಚಿನ ರೋಟರಿ ಸದಸ್ಯರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ 2025-26 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಅಮೃತಾ ಇವರಿಗೆ ನಗದು ಪುರಸ್ಕಾರ ನೀಡಲಾಯಿತು. ಶಾಲೆಯ ಖೋ ಖೋ ಪಂದ್ಯಾಟದ ಕ್ರೀಡಾಳುಗಳಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಮಾಜ ಸೇವೆಯಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳುವುದು ಸಂತೋಷ ಮತ್ತು ಅಭಿನಂದನೀಯ ಸಂಗತಿ. ಈ ನಿಟ್ಟಿನಲ್ಲಿ ಎಸ್.ವಿ ಕಾಮರ್ಸ್ ಕ್ಲಬ್ ಮಾಡುತ್ತಿರುವ ಕಾರ್ಯ ಶ್ಲಾಘನೀಯ ಎಂದು ಗಂಗೊಳ್ಳಿಯ ಖ್ಯಾತ ಉದ್ಯಮಿ ಸೋಮನಾಥ ಮೇಸ್ತ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರೋಟರಿ ಸಭಾಂಗಣದಲ್ಲಿ ನಡೆದ ಎಸ್.ವಿ. ಕಾಮರ್ಸ್ ಕ್ಲಬ್‌ನ ದ್ವಿತೀಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಪರ್ಸಿನ್ ಮೀನುಗಾರರ ಸ್ವಸಹಾಯ ಸಂಘದ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಮಡಿವಾಳ ಶುಭಾ ಸಂಸನೆ ಗೈದರು. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಆಶಾ ಸೌಂಡ್ಸ್ ಎಂಡ್ ಲೈಟ್ಸ್ ಮಾಲೀಕರಾದ ನಾರಾಯಣ ಖಾರ್ವಿ ಮತ್ತು ನಾರಾಯಣ ಗುರು ಜನ ಸೇವಾ ಬಳಗದ ಅಧ್ಯಕ್ಷರಾದ ಜಿ ಗೋಪಾಲ ಪೂಜಾರಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಗಂಗೊಳ್ಳಿ ಗ್ರಾಮ ಪಂಚಾಯತ್ ಪೌರ ಕಾರ್ಮಿಕರಾದ ಅನಿಲ್, ಗಣೇಶ್, ಹರೀಶ್, ಮತ್ತು ಎಸ್.ಎಲ್.ಆರ್. ಎಂ ಘಟಕದ ವಿಜೇತ ಕೆ, ರಮೇಶ್, ಚಂದ್ರ, ಮೂಕಾಂಬಿಕಾ, ಹೇಮಾ, ಗೌರಿ ಮತ್ತು…
