Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಯಡ್ತಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಜನ ಸಂಪರ್ಕ ಸಭೆ ನಡೆಯಿತು. ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಅವರು ಮಾತನಾಡಿ, ಜನಸಂಪರ್ಕ ಎನ್ನುವುದು ಕೇವಲ ಸಭೆಯಲ್ಲ  ಅದು ಜನರ ನೋವನ್ನು ಆಲಿಸುವ ವೇದಿಕೆ. ಅದು ಜನರ ಸಮಸ್ಯೆಗೆ ತಕ್ಷಣ ಪರಿಹಾರ ಕಂಡುಕೊಳ್ಳುವ ಸಂಕಲ್ಪ ಅದು ಪ್ರತಿಯೊಬ್ಬ ನಾಗರಿಕನ ಧ್ವನಿಗೆ ಬೆಲೆ ಕೊಡುವ ಪ್ರಜಾಪ್ರಭುತ್ವದ ಸಂವಾದ ಎಂದರು. ನಂತರ ನಡೆದ ಸಾರ್ವಜನಿಕ ಕುಂದುಕೊರತೆ ಆಲಿಕೆಯಲ್ಲಿ ಗ್ರಾಮಸ್ಥರು ರಸ್ತೆ, ಕುಡಿಯುವ ನೀರಿನ ಸಮಸ್ಯೆ, ವಸತಿ ಯೋಜನೆ, ಮೂಲಸೌಕರ್ಯ ಮತ್ತು ಕಂದಾಯಕ್ಕೆ ಸಂಬಂಧಿಸಿದ ಮನವಿಗಳನ್ನು ಸಲ್ಲಿಸಿದರು. ಅಧಿಕಾರಿಗಳೊಂದಿಗೆ ಚರ್ಚಿಸಿದ ಶಾಸಕರು, ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವೇದಿಕೆಯಲ್ಲಿ ಬ್ರಹ್ಮಾವರ ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ರಾಮದಾಸ್, ವಡ್ಡರ್ಸೆ ಗ್ರಾ.ಪಂ ಆಡಳಿತಾಧಿಕಾರಿ ಸುರೇಶ್ ಬಂಗೇರ, ಗ್ಯಾರಂಟಿ ಸಮಿತಿ ಸದಸ್ಯರಾದ ಡಾ. ಸುನೀತ್…

Read More

ಕುಂದಾಪ್ರ ಡಾಟ್‌ ಕಾಂಸ ಉದ್ದಿ.ಕುಂದಾಪುರ: ಲೋಕಸಭಾ ಚುನಾವಣೆ ಹಾಗೂ ಇತ್ತೀಚಿನ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಸಾಧಿಸಿದ ಗೆಲುವು ಕಾರ್ಯಕರ್ತರಲ್ಲಿ ಹೊಸ ಚೇತನ ಮತ್ತು ಚೈತನ್ಯವನ್ನು ತಂದುಕೊಟ್ಟಿದೆ. ಅದೇ ನೆಲೆಗಟ್ಟಿನಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲೂ ಮುಂದಿನ ದಿನಗಳಲ್ಲಿ ಕಾಂಗ್ರೆಸ್ನ ಗೆಲುವಿನ ಸುವರ್ಣ ಯುಗ ಹಾಗೂ ವಿಜಯಯಾತ್ರೆ ಆರಂಭವಾಗಬೇಕು ಎಂದು ಮಾಜಿ ಸಚಿವರಾದ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು. ಅವರು ಗುರುವಾರ ಬೆಳಿಗ್ಗೆ ಕೋಟೇಶ್ವರದ ಸಹನಾ ಕನ್ವೆನ್ಷನ್ ಹಾಲ್‌ನಲ್ಲಿ ನಡೆದ ಕುಂದಾಪುರ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಕೆ. ಸದಾನಂದ ಶೆಟ್ಟಿ ಅವರ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಅತ್ಯಂತ ಸುಸೂತ್ರವಾಗಿ ಜವಾಬ್ದಾರಿಗಳನ್ನು ಹಂಚಿಕೊಂಡು ಕೆಲಸ ಮಾಡುತ್ತಿದ್ದಾರೆ. ಇದು ನಮಗೆ ಆದರ್ಶಪ್ರಾಯ. ಕೇವಲ ನಾಯಕರೇ ಬಂದು ಎಲ್ಲವನ್ನೂ ಮಾಡುತ್ತಾರೆ ಎಂದು ಕಾರ್ಯಕರ್ತರು ಸುಮ್ಮನೆ ಕೂರಬಾರದು ಎಂದರು. ಇದೇ ವೇಳೆ ಅವರು ಸಂಘಟನೆಗೆ ಮೂರು ಪ್ರಮುಖ ಸಲಹೆ ನೀಡಿದರು. ಸಣ್ಣಪುಟ್ಟ ಗೊಂದಲಗಳಿಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಎಸ್‌ಐಆ‌ರ್ ವಿಚಾರದಲ್ಲಿ ಗ್ರಾಮ ಆಡಳಿತ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕುಂದಾಪುರ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಗುಲ್ವಾಡಿ ನಿವಾಸಿಗಳಾದ ಪಳ್ಳಿ ಸುಲೇಮಾನ್ ಮತ್ತು ಆತನ ಮಗ ಶಫಿ ಬಂಧಿತ ಆರೋಪಿಗಳು. ಜು.15ರಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮ ಪಂಚಾಯತ್ ಆವರಣದಲ್ಲಿರುವ ಗ್ರಾಮ ಆಡಳಿತ ಅಧಿಕಾರಿ ಕಛೇರಿಯಲ್ಲಿ ಅಧಿಕಾರಿ ಪ್ರಕಾಶ ನಾಯ್ಕ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾಗ ಕಛೇರಿಗೆ ಬಂದ ಆರೋಪಿಗಳಾದ ಪಳ್ಳಿ ಸುಲೇಮಾನ್‌ ಹಾಗೂ ಶಫಿ, ಎಸ್‌ಐಆರ್ ಫಾರ್ಮ್ ನೀಡುವ ವಿಚಾರವಾಗಿ ಅಧಿಕಾರಿಯೊಂದಿಗೆ ತಗಾದೆ ತೆಗೆದಿದ್ದಾರೆ. ಫಾರ್ಮ್‌ನ್ನು ತಮಗೆ ನೀಡುವಂತೆ ಅಧಿಕಾರಿ ಹೇಳಿದಾಗ ಆಕ್ರೋಶಗೊಂಡ ಆರೋಪಿಗಳಿಬ್ಬರು, ಅಧಿಕಾರಿಗೆ ಅವಾಚ್ಯವಾಗಿ ಬೈದು, ಜೀವ ಬೆದರಿಕೆ ಹಾಕಿದ್ದಲ್ಲದೆ, ಜಾತಿ ನಿಂದನೆ ಮಾಡಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣ ದಾಖಲಾದ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಪೊಲೀಸರು, ಕುಂದಾಪುರ ಪೊಲೀಸ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ಸೆಟ್) ಸಂಸ್ಥೆ ಬ್ರಹ್ಮಾವರ ವತಿಯಿಂದ ವಿಶ್ವ ಕೌಶಲ್ಯ ದಿನಾಚರಣೆ ಹಾಗೂ ಕೃಷಿ ಉದ್ಯಮಿ ತರಬೇತಿ ಉದ್ಘಾಟನಾ ಸಮಾರಂಭ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉಡುಪಿ ಲೀಡ್ ಡಿಸ್ಟ್ರಿಕ್ಟ್ ಮ್ಯಾನೇಜರ್ ಹರೀಶ್ ಜಿ. ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಮಾತನಾಡಿ, ಯುವಜನತೆಗೆ ಉದ್ಯೋಗ ಮತ್ತು ಸ್ವಾವಲಂಬಿ ಬದುಕಿಗೆ ಅಗತ್ಯವಾದ ಕೌಶಲ್ಯಗಳನ್ನು ತರಬೇತಿಯ ಮೂಲಕ ನೀಡುವುದು ವಿಶ್ವ ಕೌಶಲ್ಯ ದಿನದ ಪ್ರಮುಖ ಉದ್ದೇಶವಾಗಿದೆ. ಪ್ರತಿ ವರ್ಷ ಜುಲೈ 15ರಂದು ಆಚರಿಸುವ ಈ ದಿನವು ಯುವಕರಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದರು. ದೇಶದಲ್ಲಿ ಬಡತನ ನಿರ್ಮೂಲನೆಗೆ ಆರ್ಥಿಕ ಸ್ವಾವಲಂಬನೆ ಅಗತ್ಯವಾಗಿದ್ದು, ಯುವಕರು ಉದ್ಯೋಗ ಅಥವಾ ಸ್ವಂತ ಉದ್ಯಮದಲ್ಲಿ ತೊಡಗಿಸಿಕೊಂಡಾಗ ಮಾತ್ರ ಅದು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ರುಡ್‌ಸೆಟ್‌ ಸಂಸ್ಥೆ ಕೌಶಲ್ಯಾಧಾರಿತ ತರಬೇತಿಗಳನ್ನು ನೀಡಿ ಯುವಕರನ್ನು ಸ್ವ ಉದ್ಯೋಗದತ್ತ ಪ್ರೇರೇಪಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಅವರು ಹೇಳಿದರು. ತರಬೇತಿಯನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕತಾರ್: ಕತಾರ್‌ನಲ್ಲಿರುವ ಕನ್ನಡ ಮಾತನಾಡುವ ಅನಿವಾಸಿ ಭಾರತೀಯರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಆಕಾಂಕ್ಷೆಗಳಿಗೆ ದೊಡ್ಡ ಮಟ್ಟದ ಉತ್ತೇಜನ ಸಿಕ್ಕಂತಾಗಿದೆ. ಕರ್ನಾಟಕ ಸಂಘ ಕತಾರ್ (ಕೆ ಎಸ್ ಕ್ಯೂ) ನೂತನ ವ್ಯವಸ್ಥಾಪನಾ ಸಮಿತಿಯು ಭಾರತೀಯ ರಾಯಭಾರ ಕಚೇರಿಯ ಪ್ರಥಮ ಕಾರ್ಯದರ್ಶಿಗಳಾದ (ಶಿಕ್ಷಣ ಮತ್ತು ಸಾಂಸ್ಕೃತಿಕ) ಮಾನ್ಯ ಹರೀಶ್ ಪಾಂಡೆ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಭಾಷಾ ತರಗತಿಗಳ ಆರಂಭಕ್ಕೆ ಸಂಬಂಧಿಸಿದಂತೆ ಅತ್ಯಂತ ಮಹತ್ವದ ಮತ್ತು ಐತಿಹಾಸಿಕ ಭರವಸೆ ಲಭಿಸಿದೆ. ಸಂಘದ ಅಧ್ಯಕ್ಷರಾದ ಮಾನ್ಯ ಸುಬ್ರಮಣ್ಯ ಹೆಬ್ಬಾಗಿಲು ಅವರ ನೇತೃತ್ವದಲ್ಲಿ ನಡೆದ ಈ ಭೇಟಿಯ ಸಂದರ್ಭದಲ್ಲಿ, 2026-28ನೇ ಸಾಲಿನ ನೂತನ ಸಮಿತಿಯು ತನ್ನ ಪದಾಧಿಕಾರಿಗಳನ್ನು ಪರಿಚಯಿಸಿತಲ್ಲದೆ, ಮುಂಬರುವ ಎರಡು ವರ್ಷಗಳ ಅವಧಿಯಲ್ಲಿ ಕೈಗೊಳ್ಳಲಿರುವ ಶೈಕ್ಷಣಿಕ ಯೋಜನೆಗಳು, ವಿದ್ಯಾರ್ಥಿ ಒಕ್ಕೂಟ ಹಾಗೂ ಕನ್ನಡ ಭಾಷಾ ತರಗತಿಗಳ ಚೌಕಟ್ಟಿನ ಕುರಿತು ವಿವರವಾದ ಸುದೀರ್ಘ ಚರ್ಚೆ ನಡೆಸಿತು. ಈ ಸಭೆಯು ಕನ್ನಡಿಗರಿಗೆ ಅತ್ಯಂತ ಸಕಾರಾತ್ಮಕ ಫಲಿತಾಂಶವನ್ನು ನೀಡಿದ್ದು, ಮುಂದಿನ ಪೀಳಿಗೆಯ ಮಕ್ಕಳಲ್ಲಿ ಸಾಂಸ್ಕೃತಿಕ ಬೇರುಗಳನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಅಂತಾರಾಷ್ಟ್ರೀಯ ಸಂಸ್ಥೆಯಾದ ರೋಟರಿ ಸಂಸ್ಥೆ ಸಮಾಜಕ್ಕೆ ತನ್ನದೆ ಆದ ಬಹುದೊಡ್ಡ ಕೊಡುಗೆಗಳನ್ನು ನೀಡುತ್ತಾ ಬಂದಿದೆ ಈ ದಿಸೆಯಲ್ಲಿ ಹಂಗಾರಕಟ್ಟೆ ರೋಟರಿ ಕ್ಲಬ್ ಆರೋಗ್ಯ, ಶಿಕ್ಷಣ ಸೇರಿದಂತೆ ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದೆ ಇದು ಶ್ಲಾಘನೀಯ ಕಾರ್ಯ ಎಂದು ರೋಟರಿ ಕ್ಲಬ್ ನಿಕಟಪೂರ್ವ ಗವರ್ನರ್ ಸಿ.ಎ. ದೇವ್ ಆನಂದ್ ಅಭಿಪ್ರಾಯಪಟ್ಟರು. ಅವರು ಬುಧವಾರ ಬ್ರಹ್ಮಾವರ ಹೋಟೆಲ್ ಅಶ್ರಯದಲ್ಲಿ ನಡೆದ ಹಂಗಾರಕಟ್ಟೆ – ಸಾಸ್ತಾನ ರೋಟರಿಯ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ನೆರವೇರಿಸಿ ಮಾತನಾಡಿದರು. ಇದೇ ವೇಳೆ ಹಂಗಾರಕಟ್ಟೆ- ಸಾಸ್ತಾನ ರೋಟರಿಯ ನೂತನ ಅಧ್ಯಕ್ಷರಾಗಿ ಕುಸುಮಾ ಮನೋಜ್ ಹಾಗೂ ಕಾರ್ಯದರ್ಶಿಯಾಗಿ ಕೆ. ರಾಜಾರಾಮ್ ಐತಾಳ್ ಅಧಿಕಾರ ಸ್ವೀಕರಿಸಿದರು. ಮುಖ್ಯ ಅತಿಥಿಗಳಾಗಿ 2026-27ನೇ ಸಾಲಿನ ಸಹಾಯಕ ಗವರ್ನರ್ ವಿಜಯ ಕುಮಾರ್ ಶೆಟ್ಟಿ, 2026-27ನೇ ಸಾಲಿನ ವಲಯ ಪ್ರತಿನಿಧಿ ಸೀತಾರಾಮ ಎಸ್. ಉಪಸ್ಥಿತರಿದ್ದರು. ನಿಕಟಪೂರ್ವ ಅಧ್ಯಕ್ಷೆ ಜ್ಯೋತಿ ಉದಯ್ ಪೂಜಾರಿ ಸ್ವಾಗತಿಸಿದರು. ನಿಕಟಪೂರ್ವ ಕಾರ್ಯದರ್ಶಿ ಮುರಳಿಧರ ನಾಯರಿ ವರದಿ ಮಂಡಿಸಿದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಮಳೆಯಾಶ್ರಿತ ಭತ್ತವನ್ನು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಬೆಳೆ ವಿಮೆ ಯೋಜನೆಯಡಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಹಾಗೂ ಸ್ಥಳಿಯಾಡಳಿತ ಸಂಸ್ಥೆಗಳಲ್ಲಿ ವಿಮಾ ಮೊತ್ತ ಪ್ರತಿ ಹೆಕ್ಟೇರ್‌ಗೆ 75,600 ರೂ. ಗಳಂತೆ ವಿಮಾ ಕಂತಿನ ದರವನ್ನು ಪ್ರತಿ ಹೆ.ಗೆ 1512 (2%) ರೂ. ಗಳಂತೆ ನಿಗಧಿಪಡಿಸಿದ್ದು, ನೋಂದಣಿಗಾಗಿ ಅಧಿಸೂಚಿಸಲಾಗಿರುತ್ತದೆ. ರೈತರು ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ಜುಲೈ 31 ಕೊನೆ ದಿನವಾಗಿರುತ್ತದೆ. ಬೆಳೆ ಸಾಲ ಪಡೆಯದ ರೈತರು ಪಹಣಿ ಪತ್ರ, ಖಾತೆ ಪಾಸ್ ಪುಸ್ತಕ/ಬ್ಯಾಂಕ್ ಪಾಸ್ ಪುಸ್ತಕ, ಕಂದಾಯ ರಸೀದಿ ಮತ್ತು ಆಧಾರ್ ಸಂಖ್ಯೆಗಳನ್ನು ಒದಗಿಸಿ ವಾಣಿಜ್ಯ ಬ್ಯಾಂಕ್‌ಗಳು ಅಥವಾ ಗ್ರಾಮೀಣ ಮಟ್ಟದ ವ್ಯವಸಾಯ ಸೇವಾ ಸಹಕಾರ ಸಂಘಗಳು, ಸಾರ್ವಜನಿಕ ಸೇವಾ ಕೇಂದ್ರ, ಗ್ರಾಮ ಒನ್ ಮತ್ತು ವಿಮಾ ಸಂಸ್ಥೆಗಳನ್ನು ಸಂಪರ್ಕಿಸಿ, ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬಹುದಾಗಿದೆ. ಬೆಳೆ ವಿಮೆ ಯೋಜನೆಯಡಿ ಅಧಿಸೂಚಿತ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಉಡುಪಿ ಪ್ರಾದೇಶಿಕ ಕೇಂದ್ರದಲ್ಲಿ ಪ್ರಸಕ್ತ ಸಾಲಿನ ಜುಲೈ ಆವೃತ್ತಿಯಲ್ಲಿ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ. ಬಿ.ಎಸ್.ಡಬ್ಲೂ, ಬಿ.ಲಿಬ್.ಐ.ಎಸ್.ಸ್ಸಿ. ಮತ್ತು ಎಲ್ಲಾ ಬಿ.ಎಸ್ಸಿ, ಸ್ನಾತಕೋತ್ತರ ಪದವಿಗಳಾದ ಎಂ.ಎ /ಎಂ.ಕಾಂ, ಎಂ.ಬಿ.ಎ, ಎಂ.ಸಿ.ಎ, ಎಂ.ಎಸ್.ಡಬ್ಲೂö್ಯ, ಎಂ.ಲಿಬ್ ಐ.ಎಸ್.ಸ್ಸಿ ಮತ್ತು ಎಲ್ಲಾ ಎಂ.ಎಸ್ಸಿ ಪದವಿಗಳು ಮತ್ತು ಡಿಪ್ಲೋಮಾ, ಪಿ.ಜಿ ಡಿಪ್ಲೋಮಾ, ಸರ್ಟಿಫಿಕೇಟ್ ಕೋರ್ಸುಗಳಿಗೆ ಪ್ರವೇಶಾತಿಯು ಆರಂಭವಾಗಿದ್ದು, ಆಸಕ್ತರು ಪ್ರಾದೇಶಿಕ ಕೇಂದ್ರದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಕ್ರೈಸ್ತ, ಜೈನ, ಭೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮಿತಿ ಇರುವವರು ಅಗತ್ಯ ದಾಖಾಲಾತಿ ಒದಗಿಸಿದಲ್ಲಿ ಉಚಿತ ಪ್ರವೇಶಾತಿಗೆ ಅವಕಾಶವಿರುತ್ತದೆ. ಹೆಚ್ಚಿನ ವಿವರಗಳಿಗೆ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‌ಸೈಟ್ www.ksoumysuru.ac.in ಅನ್ನು ಅಥವಾ ಮೊ.ನಂ: 8197818807, 8970636111, 8431406150 ಹಾಗೂ 9449499139 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೆ.ಎಸ್.ಓ.ಯು ಉಡುಪಿ ಪ್ರಾದೇಶಿಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಡ್ಡರ್ಸೆ ಗ್ರಾಮ ಪಂಚಾಯತ್ ಜನಸಂಪರ್ಕ ಸಭೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಇತ್ತೀಚಿಗೆ ಜರಗಿತು. ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಜನಸಂಪರ್ಕ ಸಭೆಯ ಮುಖ್ಯ ಉದ್ದೇಶವೇ ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸಿ ಸ್ಥಳದಲ್ಲೇ ಪರಿಹಾರ ಕೊಡುವುದು. ಸರ್ಕಾರದ ಯೋಜನೆಗಳ ಲಾಭ ಕೊನೆಯ ವ್ಯಕ್ತಿಗೂ ತಲುಪುವಂತೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು. ತದನಂತರ ಶಾಸಕರು ಸಾರ್ವಜನಿಕರಿಂದ ವಿವಿಧ ಸಮಸ್ಯೆಗಳ ಅಹವಾಲುಗಳನ್ನು ಸ್ವೀಕರಿಸಿ, ಸ್ಥಳದಲ್ಲಿಯೇ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರಕ್ಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಗ್ರಾಮದ ಮೂಲಸೌಕರ್ಯ, ರಸ್ತೆ, ಕುಡಿಯುವ ನೀರು, ವಸತಿ ಯೋಜನೆ ಹಾಗೂ ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಶಾಸಕರ ಗಮನ ಸೆಳೆದರು. ಅಹವಾಲುಗಳನ್ನು ಆಲಿಸಿದ ಶಾಸಕರು, ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ವೇಗವಾಗಿ ಕಾರ್ಯನಿರ್ವಹಿಸಬೇಕು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿರುವ ಕಾಲುಸಂಕಗಳ ಗುಣಮಟ್ಟವನ್ನು ತಾಂತ್ರಿಕ ತಂಡದೊಂದಿಗೆ ಪರಿಶೀಲಿಸಿ, ಅವುಗಳ ಸ್ಥಿತಿಗತಿಗಳ ಕುರಿತ ಸಮರ್ಪಕ ವರದಿ ನೀಡುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ 600 ಕ್ಕೂ ಹೆಚ್ಚು ಕಾಲುಸಂಕಗಳಿದ್ದು, ಒಂದೊಮ್ಮೆ ಶಿಥಿಲಾವಸ್ಥೆಯಲ್ಲಿರುವ ಕಾಲುಸಂಕಗಳ ಮೇಲೆ ಸಾರ್ವಜನಿಕರು, ವಿದ್ಯಾರ್ಥಿಗಳು, ಸಂಚರಿಸಿದ್ದಲ್ಲಿ ಪ್ರಾಣಹಾನಿ ಆಗುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಆದ್ದರಿಂದ ಹೊಸ ಕಾಲುಸಂಕಗಳ ನಿರ್ಮಾಣದ ಜೊತೆಗೆ ಈಗಾಗಲೇ ಅಸ್ಥಿತ್ವದಲ್ಲಿರುವ ಕಾಲುಸಂಕಗಳ ದುರಸ್ಥಿಗೆ ಆದ್ಯತೆಯ ಮೇಲೆ ಕ್ರಮವಹಿಸುವುದರೊಂದಿಗೆ ಯಾವುದೇ ಅವಘಡಗಳು ಸಂಭವಿಸದAತೆ ಮುನ್ನೆಚ್ಚರಿಕೆ ವಹಿಸಬೇಕೆಂದರು.  ಜಿಲ್ಲೆಯಲ್ಲಿ ಪ್ರಸ್ತುತ ವರ್ಷದಲ್ಲಿ ಈವರೆಗೆ ವಾಡಿಕೆಗೆ 1959 ಮಿ.ಮೀ. ಮಳೆಯಾಗಬೇಕಿತ್ತು. ಆದರೆ 1182 ಮಿ.ಮೀ ನಷ್ಟು ಮಳೆಯಾಗಿ ಶೇ. 40 ರಷ್ಟು ಮಳೆಯ ಕೊರತೆ ಆಗಿದೆ ಎಂದ ಅವರು, ಈಗಾಗಲೇ ಪೂರ್ವ ಮುಂಗಾರು ಮಳೆಯಿಂದ ಮಾನವ ಹಾನಿ…

Read More