ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಾಲಿಗ್ರಾಮದ ಶ್ರೀ ಗುರು ನರಸಿಂಹ ದೇವಸ್ಥಾನದ ವ್ಯವಸ್ಥಾಪಕರಾಗಿದ್ದಎಚ್. ನಾಗರಾಜ ಹಂದೆ ಅವರು ಮಂಗಳವಾರ ಮಧ್ಯಾಹ್ನ ನಿಧನರಾದರು. ಮೂಲತಃ ಕೋಟತಟ್ಟು–ಪಡುಕರೆ ನಿವಾಸಿಯಾಗಿದ್ದ ನಾಗರಾಜ ಹಂದೆ ಅವರು ಕೋಟ ಸಿಎ ಬ್ಯಾಂಕ್ನಲ್ಲಿ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿ, ನಂತರ ಬ್ಯಾಂಕಿನ ಸಹಾಯಕ ಮಹಾಪ್ರಬಂಧಕರಾಗಿ (AGM) ಪದೋನ್ನತಿ ಹೊಂದಿ ನಿವೃತ್ತರಾಗಿದ್ದರು. ನಿವೃತ್ತಿಯ ನಂತರವೂ ವಿವಿಧ ಸಾಮಾಜಿಕ ಹಾಗೂ ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಅವರು, ಪ್ರಸ್ತುತ ಕೋಟ ಸಹಕಾರಿ ವ್ಯವಸಾಯ ಸಂಘದ ಉಪಾಧ್ಯಕ್ಷರಾಗಿ ಹಾಗೂ ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇವಸ್ಥಾನದ ವ್ಯವಸ್ಥಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸೌಮ್ಯ ಸ್ವಭಾವ, ಕರ್ತವ್ಯನಿಷ್ಠೆ ಮತ್ತು ಸಮಾಜಮುಖಿ ಸೇವೆಯಿಂದ ಗುರುತಿಸಿಕೊಂಡಿದ್ದ ಅವರ ನಿಧನಕ್ಕೆ ಧಾರ್ಮಿಕ, ಸಹಕಾರಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಸಂತಾಪ ವ್ಯಕ್ತವಾಗಿದೆ. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ , ಸಂಸ್ಥೆಯ ಅಧ್ಯಕ್ಷರಾದ ಕೆ. ರಾಮಕೃಷ್ಣ ಕಾಮತ್ ಅವರ ಅಧ್ಯಕ್ಷತೆಯಲ್ಲಿ, ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಹಾಗೂ ಖಜಾಂಚಿ ಕೆ. ಲಕ್ಷ್ಮೀನಾರಾಯಣ ಶೆಣೈ ಅವರ ಉಪಸ್ಥಿತಿಯಲ್ಲಿ 40ನೇ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು. ಬೈಂದೂರು ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಚಂದ್ರ ನಾಯ್ಕ್ ಮತ್ತು ಚಿನ್ಮಯಿ ಆಸ್ಪತ್ರೆಯ ಸುಮಾ ಉಮೇಶ್ ಪುತ್ರನ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಸಮಾರಂಭದಲ್ಲಿ ಎಸ್.ಎಸ್.ಎಲ್.ಸಿಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರಿಗೆ ಸನ್ಮಾನಿಸಿ ಬೆಳ್ಳೆಯ ಲೋಟವನ್ನು ನೆನಪಿನ ಕಾಣಿಕೆಯಾಗಿ ನೀಡಲಾಯಿತು. 600ಕ್ಕಿಂತ ಅಧಿಕ ಅಂಕ ಪಡೆದ 60ವಿದ್ಯಾರ್ಥಿಗಳಿಗೆ 10ಗ್ರಾಂ ಬೆಳ್ಳಿಯ ನಾಣ್ಯವನ್ನು ಹಾಗೂ ಡಿಸ್ಟಿಂಕ್ಷನ್ ಪಡೆದ 129 ವಿದ್ಯಾರ್ಥಿಗಳಿಗೆ 8ಗ್ರಾಂ ಬೆಳ್ಳಿಯ ನಾಣ್ಯವನ್ನು ನೀಡಿ ಪ್ರೋತ್ಸಾಹಿಸಲಾಯಿತು ಹಾಗೂ ಪಿ.ಯು.ಸಿ.ಯ ಸಾಧಕರನ್ನು ಸನ್ಮಾನಿಸಲಾಯಿತು. ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿಯಲ್ಲಿ ಉತ್ತಮ ಫಲಿತಾಂಶಕ್ಕಾಗಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವ ಸುಮಾರು 222 ಬೋಧಕ ಬೋಧಕೇತರ ಸಿಬ್ಬಂದಿಯವರಿಗೆ ನಗದು ಪುರಸ್ಕಾರವನ್ನು ನೀಡಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ”: ಇನ್ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿದ ಸಿಎಂಎ ಫೌಂಡೇಶನ್ ಜೂನ್–2026ರ ಪರೀಕ್ಷೆಯಲ್ಲಿ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳಾದ ಶ್ರಾವ್ಯ, ಶ್ರೇಯಾ, ರಂಜಿತ್ ಹಾಗೂ ನಿಶಾಂತ್ ಕೆ. ಶೆಟ್ಟಿ ಉತ್ತೀರ್ಣರಾಗಿ ಕಾಲೇಜಿಗೆ ಹೆಮ್ಮೆ ತಂದಿದ್ದಾರೆ. ಕಾಲೇಜಿನ ಸಹಯೋಗದಲ್ಲಿ ವಿ-ರೀಚ್ ಅಕಾಡೆಮಿಯ ಮೂಲಕ ನೀಡಲಾದ ಗುಣಮಟ್ಟದ ಪಠ್ಯ-ಪ್ರವಚನಗಳು, ನಿಯಮಿತ ಮಧ್ಯಂತರ ಹಾಗೂ ಮಾದರಿ ಪರೀಕ್ಷೆಗಳು, ಅನುಭವಿ ತರಬೇತುದಾರರ ಸಮರ್ಪಕ ಮಾರ್ಗದರ್ಶನ ಮತ್ತು ವಿದ್ಯಾರ್ಥಿಗಳ ನಿರಂತರ ಪರಿಶ್ರಮದ ಫಲವಾಗಿ ಈ ಸಾಧನೆ ಸಾಧ್ಯವಾಗಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿ, ಮುಂದಿನ ಸಿ.ಎಂ.ಎ. ಹಂತಗಳಲ್ಲಿಯೂ ಇದೇ ರೀತಿಯ ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಪ್ರತಿಯೊಬ್ಬ ಮನುಷ್ಯನು ಅಪಾರ ಸಾಧ್ಯತೆಗಳೊಂದಿಗೆ ಜನಿಸುತ್ತಾನೆ. ಆ ಸಾಧ್ಯತೆಗಳಿಗೆ ಸೂಕ್ತ ಅವಕಾಶ ಮತ್ತು ಸಮಾನತೆ ದೊರೆತಾಗ ವ್ಯಕ್ತಿ ಮಾತ್ರವಲ್ಲ, ಸಮಾಜವೂ ಅಭಿವೃದ್ಧಿಯಾಗುತ್ತದೆ. ಅದರಲ್ಲೂ ಮಹಿಳೆಯರ ಸಬಲೀಕರಣವು ಕುಟುಂಬ ಹಾಗೂ ರಾಷ್ಟ್ರದ ಪ್ರಗತಿಗೆ ಪ್ರಮುಖ ಅಡಿಪಾಯವಾಗಿದೆ ಎಂದು ನಿಟ್ಟೆ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಪ್ರಣಮ್ಯ ಭಟ್ ನುಡಿದರು. ಆಳ್ವಾಸ್ ಪದವಿಪೂರ್ವ ಕಾಲೇಜಿನ ಮಹಿಳಾ ಕ್ಷೇಮಪಾಲನಾ ಸಮಿತಿ ಹಾಗೂ ಆಂತರಿಕ ದೂರು ನಿರ್ವಹಣಾ ಸಮಿತಿಯ ಈ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಇಂದಿನ ಸಮಾಜದಲ್ಲಿ ಮಹಿಳೆಯರಿಗೆ ಶಿಕ್ಷಣ, ಉದ್ಯೋಗ ಹಾಗೂ ನಾಯಕತ್ವದ ಅವಕಾಶಗಳು ಹೆಚ್ಚಾಗುತ್ತಿರುವುದು ಆಶಾದಾಯಕ ಬೆಳವಣಿಗೆ. ಆದರೆ ನೈಜ ಸಮಾನತೆಯನ್ನು ಸಾಧಿಸಲು ಮನೋಭಾವದಲ್ಲಿಯೂ ಬದಲಾವಣೆ ಅಗತ್ಯವಿದೆ. ಪುರುಷರು ಮತ್ತು ಮಹಿಳೆಯರು ದೈಹಿಕ ಹಾಗೂ ಮಾನಸಿಕವಾಗಿ ಭಿನ್ನರಾಗಿದ್ದರೂ, ಹಕ್ಕುಗಳು, ಅವಕಾಶಗಳು ಮತ್ತು ಗೌರವದ ವಿಷಯದಲ್ಲಿ ಯಾವುದೇ ತಾರತಮ್ಯ ಇರಬಾರದು. ಶಿಕ್ಷಣವು ವ್ಯಕ್ತಿಯ ಬದುಕನ್ನು ರೂಪಿಸುವ ಅತ್ಯಂತ ಪ್ರಬಲ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಅರ್ಥಾಂಕುರ ಕಾರ್ಯಕ್ರಮವು ದಿನೇ ದಿನೇ ಪ್ರೇಕ್ಷಕರ ಮನ ಗೆದ್ದು ನೋಡುಗರ ಸಂಖ್ಯೆಯನ್ನು ಹೆಚ್ಚಿಸುತ್ತಾ ಕಳೆಗಟ್ಟಿದೆ. ಪುರಾಣ ಕಥೆಗಳನ್ನು ಮನನ ಮಾಡಿಕೊಳ್ಳುವ ಈ ಕಾರ್ಯಕ್ರಮ ದೇಗುಲಗಳಲ್ಲಿ ಹೆಚ್ಚು ಅಗತ್ಯ. ಕಾರ್ಯಕ್ರಮವೊಂದನ್ನು ಆಯೋಜಿಸುವುದೇ ಕಷ್ಟದ ಪರಿಸ್ಥಿತಿಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಕಲಾವಿದರಿಗೆ ಅವಕಾಶ ಕಲ್ಪಿಸಿಕೊಡುವ ಉಭಯ ಸಂಸ್ಥೆಗಳ ಕಾಯಕ ನಿಜವಾಗಿಯೂ ಸಾಧನೆಯೇ ಸರಿ ಎಂದು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಆಡಳಿತ ಮಂಡಳಿಯ ಸದಸ್ಯ ಕೆ. ತಾರಾನಾಥ ಹೊಳ್ಳ ಹೇಳಿದರು. ಅವರು ಸಾಲಿಗ್ರಾಮ ಗುರುನರಸಿಂಹ ದೇಗುಲದಲ್ಲಿ ಯಶಸ್ವಿ ಕಲಾವೃಂದ ಕೊಮೆ ತೆಕ್ಕಟ್ಟೆ ಹಾಗೂ ಯಕ್ಷ ನುಡಿಸಿರಿ ಬಳಗ ಸಿದ್ಧಾಪುರ ಜಂಟಿ ಸಂಸ್ಥೆಗಳ ಸಹಯೋಗದೊಂದಿಗೆ ’ಅರ್ಥಾಂಕುರ-24’ ಸರಣಿ ತಾಳಮದ್ದಳೆ-3 ಕಾರ್ಯಕ್ರಮದಲ್ಲಿ ಕಲಾವಿದರನ್ನು ಗೌರವಿಸಿ ಮಾತನಾಡಿದರು. ಪ್ರಸಿದ್ಧ ಹಿರಿಯ ಕಲಾವಿದ ಜಬ್ಬಾರ್ ಸಮೋ, ಕುಂದಾಪ್ರ ಕನ್ನಡ ರಾಯಭಾರಿ ಮನು ಹಂದಾಡಿ, ಯಕ್ಷ ಗುರು ಲಂಬೋದರ ಹೆಗಡೆ ನಿಟ್ಟೂರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಬಳಿಕ ತಾಳಮದ್ದಳೆ ’ಸಮರ ಸೌಗಂಧಿಕಾ’ ರಂಗ ಪ್ರಸ್ತುತಿಗೊಂಡಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸೀನಿಯರ್ ಛೆಂಬರ್ ಇಂಟರ್ ನ್ಯಾಷನಲ್ ಕೋಟ ಲಿಜನ್ ಇದರ ಪದಪ್ರಧಾನ ಸಮಾರಂಭವು ಕೋಟೇಶ್ವರದ ಸಹನ ಕನ್ವೆನ್ಷನ್ ಸೆಂಟರ್ನ ಸುಮೇದ ಹಾಲ್ನಲ್ಲಿ ಇತ್ತೀಚಿಗೆ ನಡೆಯಿತು. ಕೋಟ ಲೀಜೆನ್ 2026-27ರ ನೂತನ ಅಧ್ಯಕ್ಷರಾಗಿ ಸೀನಿಯರ್ ಡಾ. ಸರೋಜಾ ಎಂ. ಅವರು ಅಧಿಕಾರವನ್ನು ಸ್ವೀಕರಿಸಿದರು. ಕಾರ್ಯದರ್ಶಿಯಾಗಿ ಅನಿತಾ ನರೇಂದ್ರ ಕುಮಾರ್ ಹಾಗೂ ಖಜಾಂಜಿಯಾಗಿ ಮಲ್ಲಿಕಾ ಜಯಂತಿ ಅಧಿಕಾರ ಸ್ವೀಕರಿಸಿದರು. ಜೆಸಿಐ ಇಂಡಿಯಾ ಪೂರ್ವ ರಾಷ್ಟ್ರೀಯ ಉಪಾಧ್ಯಕ್ಷ ಕಾರ್ತಿಕೇಯ ಮಧ್ಯಸ್ಥ ಕಾರ್ಯಕ್ರಮ ಉದ್ಘಾಟಿಸಿದರು. ಎಸ್ಸಿಐ ಉಪಾಧ್ಯಕ್ಷೆ ಅಕ್ಷತಾ ಆರ್., ಹಾಗೂ ಮುಖ್ಯ ಭಾಷಣಕಾರರಾಗಿ ಜೆಸಿಐ ತರಬೇತುದಾರ ಹುಸೇನ್ ಹೈಕಾಡಿ ಜೇಸಿ ಜೀವನ ಹಾಗೂ ಜೇಸಿಯಿಂದ ಆದ ಉಪಯೋಗದ, ಜೇಸಿ ಕುಟುಂಬದ ಹೊಂದಾಣಿಕೆ ಬಗ್ಗೆ ತಿಳಿಸಿದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸಂಯೋಜಕ ಗಿರೀಶ್ ಶಾನುಭೋಗ, ಸುರೇಶ್ ಅಮೀನ್, ಕೇಶವ ಆಚಾರ್ ಕೋಟ, ಯುವ ಘಟಕದ ಕೃತಿ ದೇವಾಡಿಗ, ಸಪ್ತಮಿ ಶೆಟ್ಟಿ, ಸಿಂಚನ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಅನಿತಾ ನರೇಂದ್ರ ಕಾರ್ಯಕ್ರಮ ನಿರ್ವಹಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಗಂಗನಾಡು ಗ್ರಾಮದ ಒಣಕೊಡ್ಲು ನಿವಾಸಿ ಲಕ್ಷ್ಮೀ (46) ಅವರು ಸೋಮವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲಕ್ಷ್ಮೀ ಮತ್ತು ಪತಿ ಗೋಪಾಲ್ ನಡುವೆ ಯಾವಾಗಲೂ ಜಗಳ ನಡೆಯುತ್ತಿತ್ತು. ಭಾನುವಾರ ಮನೆಯಲ್ಲಿ ಪರಸ್ಪರ ಜಗಳ ಮಾಡಿಕೊಂಡಿದ್ದು ಮನೆಯ ಕೋಣೆಯಲ್ಲಿ ಕುತ್ತಿಗೆಗೆ ನೈಲಾನ್ ಹಗ್ಗ ಕಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪುತ್ರಿ ರಕ್ಷಿತಾ ನೀಡಿದ ದೂರಿನಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ರೋಟರಿ ಕ್ಲಬ್ ಕೋಟ – ಸಾಲಿಗ್ರಾಮ ಇದರ ಮೂಡುಗಿಳಿಯಾರಿನ ರೋಟರಿ ಸಮುದಾಯದಳ ಇವರ ನೇತೃತ್ವದಲ್ಲಿ ಪಂಚವರ್ಣ ಸಂಘಟನೆ ಕೋಟ ಹಾಗೂ ಗೀತಾನಂದ ಫೌಂಡೇಶನ್ ಮಣೂರು ಇವರ ಮಾರ್ಗದರ್ಶನದಲ್ಲಿ ಗಿಡ ನೆಡುವ ಹಸಿರೇ ಉಸಿರು ಎಂಬ ಶೀರ್ಷಿಕೆಯಡಿ ಕಾರ್ಯಕ್ರಮ ಮೂಡುಗಿಳಿಯಾರು ಚಿಕ್ಕು ದೈವಸ್ಥಾನ ವಠಾರ ಹಾಗೂ ಗಿಳಿಯಾರು ಶಾಲಾ ವಠಾರದಲ್ಲಿ ನೆಡೆಯಿತು. ಈ ಸಂದರ್ಭದಲ್ಲಿ ರೋಟರಿ ಸಮುದಾಯದಳ ಮೂಡುಗಿಳಿಯಾರು ಇದರ ಅಧ್ಯಕ್ಷ ದಯಾನಂದ ಪೂಜಾರಿ, ಕಾರ್ಯದರ್ಶಿ ಮಲ್ಲಿಕಾ, ಸಭಾಪತಿ ಗೋಪಾಲ್, ಶರಣಯ್ಯ ಹಿರೇಮಠ್, ರಾಘವೇಂದ್ರ, ರಾಕೇಶ್, ಸಂತೋಷ್, ರವಿ, ಲತಾ, ಗಿರಿಜಾ ಮಾತಾಜಿ, ಜಯ, ರಾಜೇಶ್ವರಿ, ಅವಿನಾಶ್, ಜಲಜ ಟೀಚರ್, ಸದಾ ಹೊನ್ನಾರಿ, ನಾಗ, ಪ್ರಪುಲ್ಲ ಇತರರು ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದದ ಅಳಿವೆಕೋಡಿ ಗ್ರಾಮದಲ್ಲಿ ಮೀನುಗಾರಿಕಾ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಶೀಘ್ರ ದುರಸ್ಥಿ ಮಾಡುವಂತೆ ಸಾರ್ವಜನಿಕರು ಬೈಂದೂರು ತಾಲೂಕು ಆಡಳಿತ ಸೌಧದ ಎದುರು ಸೋಮವಾರ ಧರಣಿ ನಡೆಸಿದರು. ಕರಾವಳಿ ಸಾಂಪ್ರದಾಯಿಕ ಮೀನುಗಾರರ ಸಂಘದ ಅಧ್ಯಕ್ಷ ನಾಗೇಶ ಖಾರ್ವಿ ಉಪ್ಪುಂದ ಧರಣಿಯ ನೇತೃತ್ವ ವಹಿಸಿ ಮಾತನಾಡಿ, ಗ್ರಾಮದ ಮುಖ್ಯ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ರಸ್ತೆಯ ಹಲವೆಡೆ ದೊಡ್ಡ ಗುಂಡಿಗಳು ಉಂಟಾಗಿವೆ. ಇದರಿಂದ ಸಾರ್ವಜನಿಕರು, ವಾಹನ ಸವಾರರು ಹಾಗೂ ಶಾಲಾ ಮಕ್ಕಳಿಗೆ ಪ್ರತಿದಿನ ತೀವ್ರ ತೊಂದರೆಯಾಗುತ್ತಿದೆ ಎಂದರು. ಈ ರಸ್ತೆಯಲ್ಲಿ ಪ್ರತಿದಿನ ಶಾಲಾ ವಾಹನಗಳು ಸಂಚರಿಸುತ್ತಿದ್ದು. ಸುಮಾರು 150 ಶಾಲಾ ಮಕ್ಕಳು ಇದೇ ರಸ್ತೆಯಲ್ಲಿ ನಡೆದುಕೊಂಡು ಶಾಲೆಗೆ ತೆರಳುತ್ತಿದ್ದಾರೆ. ರಸ್ತೆ ಹದಗೆಟ್ಟಿರುವುದರಿಂದ ಅಪಘಾತ ಸಂಭವಿಸುವ ಅಪಾಯ ಹೆಚ್ಚಾಗಿದ್ದು, ಮಕ್ಕಳ ಸುರಕ್ಷತೆಯ ಬಗ್ಗೆ ಗ್ರಾಮಸ್ಥರಲ್ಲಿ ತೀವ್ರ ಆತಂಕ ಉಂಟಾಗಿದೆ. ಮಳೆಗಾಲದಲ್ಲಿ ರಸ್ತೆ ಮತ್ತಷ್ಟು ಹದಗೆಟ್ಟು ಸಂಚಾರ ದುಸ್ತರವಾಗಿದ್ದು ಶೀಘ್ರ ದುರಸ್ಥಿ ಮಾಡಬೇಕೆಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಬೈಂದೂರು ತಹಶೀಲ್ದಾರ್ ರವಿರಾಜ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಆಲೂರು ಹಾಗೂ ಹರ್ಕೂರು ಗ್ರಾಮದ ಭೂಹೀನ ಕೊರಗ (ಪರಿಶಿಷ್ಟ ಪಂಗಡ) ಕುಟುಂಬಗಳಿಗೆ ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ, ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಸೋಮವಾರ ಮಣಿಪಾಲದಲ್ಲಿರುವ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶಾಂತಿಯುತ ಧರಣಿ ಸತ್ಯಾಗ್ರಹ ಹಾಗೂ ಹಕ್ಕೊತ್ತಾಯ ನಡೆಯಿತು. ಧರಣಿಯಲ್ಲಿ ಕೊರಗ ಸಮುದಾಯದ ನೂರಾರು ಸದಸ್ಯರು, ವಿವಿಧ ಜನಪರ ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿ, ಸುಮಾರು ಹತ್ತು ವರ್ಷಗಳಿಂದ ಬಾಕಿ ಉಳಿದಿರುವ ಭೂಮಿ ಮಂಜೂರಾತಿ ಪ್ರಕ್ರಿಯೆಯನ್ನು ಕೂಡಲೇ ಪೂರ್ಣಗೊಳಿಸುವಂತೆ ಒತ್ತಾಯಿಸಿದರು. ಧರಣಿ ನಡೆಯುತ್ತಿರುವ ಸಂದರ್ಭದಲ್ಲಿ ಉಡುಪಿ ಜಿಲ್ಲಾಧಿಕಾರಿಗಳು ಧರಣಿ ನಿರತ ನಿಯೋಗವನ್ನು ತಮ್ಮ ಕಚೇರಿಗೆ ಆಹ್ವಾನಿಸಿ, ಪ್ರಕರಣದ ಕುರಿತು ವಿವರವಾದ ಚರ್ಚೆ ನಡೆಸಿದರು. ಸಂಘಟನೆಯಿಂದ ಸಲ್ಲಿಸಲಾದ ಹಕ್ಕೊತ್ತಾಯ ಮನವಿಯನ್ನು ಸ್ವೀಕರಿಸಿದ ಜಿಲ್ಲಾಧಿಕಾರಿಗಳು, ಆಲೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ ಪ್ರಕರಣದ ಕುರಿತು ತನಗೆ ಸಂಪೂರ್ಣ ಮಾಹಿತಿ ಇದೆ. ಸಂಘಟನೆಯು ಈ ಹಿಂದೆ ಸಲ್ಲಿಸಿರುವ ದಾಖಲೆಗಳು…
