Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಎಸ್.ಸಿ ಮತ್ತು ಬಿ.ಸಿ.ಎ ವಿದ್ಯಾರ್ಥಿಗಳಿಗೆ ಪರಿಚಯ ಕಾರ್ಯಕ್ರಮ ಸೋಮವಾರ ನಡೆಯಿತು. ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷರಾದ ಕೆ. ಶಾಂತಾರಾಮ ಪ್ರಭು ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿ ಯು.ಎಸ್.ಶೆಣೈ ಮಾತನಾಡಿ, ಕುಂದಾಪುರ ನೆಲೆ ಮತ್ತು ಸಂಸ್ಕೃತಿ ಭಾರತ ದೇಶದಲ್ಲಿಯೇ ವಿಶಿಷ್ಟ ಎನಿಸಿಕೊಂಡಿದೆ. ಅದರಲ್ಲೂ ವಿಶೇಷವಾಗಿ ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿಗಳು ದೇಶಾದ್ಯಂತ ಎಲ್ಲಾ ಕ್ಷೇತ್ರಗಳಲ್ಲೂ ತಮ್ಮ ಛಾಪನ್ನು ಮೂಡಿಸಿದ್ದಾರೆ. ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಗಳು ಹೋಟೆಲ್, ಸಿನೆಮಾ, ಬ್ಯಾಂಕಿಂಗ್, ತಂತ್ರಜ್ಞಾನ, ವೈದ್ಯಕೀಯ ಹೀಗೆ ಹಲವಾರು ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಸಾಧನೆ ಇಂದಿನ ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಲಿ. ಅವರಂತೆ ಕನಸುಗಳನ್ನು ಕಂಡು ಅದರೆಡೆಗೆ ಸತತ ಪ್ರಯತ್ನಪಟ್ಟು ಒಳ್ಳೆಯ ಯಶಸ್ಸು ಪಡೆಯಬೇಕು . ಸಮಾಜದ ಒಳ್ಳೆಯ ನಾಗರಿಕರಾಗಿ ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ವಹಿಸಿದ್ದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಯಲ್ಲಿ ರುಡ್‌ಸೆಟ್ ಆಸರೆ ಸಂಘಟನೆ, ಮೊಗವೀರ ಯುವ ಸಂಘಟನೆ, ಉಡುಪಿ ಜಿಲ್ಲೆ ಉಪ್ಪೂರು ಘಟಕ ಮತ್ತು ವಿವಿಧ ಸಂಘ-ಸಂಸ್ಥೆಗಳ ಅಡಿಯಲ್ಲಿ ಕೆ.ಎಂ.ಸಿ ರಕ್ತನಿಧಿ, ಮಣಿಪಾಲ ಅವರ ಸಾರಥ್ಯದಲ್ಲಿ ಸೋಮವಾರದಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಸಂಸ್ಥೆಯ ಆವರಣದಲ್ಲಿ ನಡೆಸಲಾಯಿತು.  ಮಣಿಪಾಲ ಕೆನರಾ ಬ್ಯಾಂಕ್ ವೃತ್ತ ಮಹಾಪ್ರಭಂದಕರಾದ ಗಂಗಾಧರ ಎಚ್.ಕೆ. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರಕ್ತದಾನದ ಮಹತ್ವವನ್ನು ಮತ್ತು ರಕ್ತದಾನದಿಂದ ನಾವು ಸಮಾಜಕ್ಕೆ ಒಂದು ಕೊಡುಗೆ ನೀಡಿದ ಹಾಗೆ ಎಂದು ತಿಳಿಸಿದರು. ಹಾಗೂ ತಾವುಗಳು ಕೂಡ ಸುಮಾರು 53 ಬಾರಿ ರಕ್ತದಾನ ಮಾಡಿದ್ದಾರೆ ಎಂದು ಹೆಮ್ಮೆಯಿಂದ ತಿಳಿಸಿದರು. ಮತ್ತು ಪ್ರತಿಯೊಬ್ಬರು ಕೂಡ ರಕ್ತದಾನ ಮಾಡಿ ಎಂದು ಶುಭ ಹಾರೈಸಿದರು. ಇನ್ನೋರ್ವ ಅತಿಥಿಗಳಾಗಿ ಆಗಮಿಸಿದ್ದ ಉಡುಪಿ ಮೊಗವೀರ ಯುವ ಸಂಘಟನೆ, ಕೊರವಡಿ ಜಿಲ್ಲಾಧ್ಯಕ್ಷ ರವೀಶ್ ಎಸ್. ಮಾತನಾಡಿ, ರುಡ್‌ಸೆಟ್ ಸಂಸ್ಥೆಯ ಆವರಣದಲ್ಲಿ ನಮ್ಮೆಲ್ಲ ಸಂಘಟನೆಗಳು ಕೈ ಜೋಡಿಸಿ ಈ ಒಂದು ಅರ್ಥಪೂರ್ಣವಾದ ಕಾರ್ಯಕ್ರಮವನ್ನು ಸಂಸ್ಥೆಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಪಾಲಕರ ಶಿಕ್ಷಕರ ಮತ್ತು ಆಡಳಿತ ಮಂಡಳಿಯ ಸಮಾಲೋಚನ ಸಭೆಯು ಇತ್ತೀಚಿಗೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ನಿರ್ವಹಿಸಿದ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಅಧ್ಯಕ್ಷರಾದ ಎಲ್.ಟಿ ತಿಮ್ಮಪ್ಪನವರು ಮಾತನಾಡಿ, ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನವು ಪೋಷಕರ ಬೇಡಿಕೆಯಂತೆ ನೂತನವಾಗಿ ಸದ್ಯೋಜಾತ ವಸತಿ ನಿಲಯವನ್ನು ನಿರ್ಮಿಸಿದ್ದು, ಮುಂದಿನ ವರ್ಷಗಳಲ್ಲಿ ಇನ್ನೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಅವಕಾಶ ಒದಗಿಸಿಕೊಡುವ ಪ್ರಯತ್ನದಲ್ಲಿದ್ದೇವೆ. ಪೋಷಕರ ಮತ್ತು ವಿದ್ಯಾರ್ಥಿಗಳ ಸಹಕಾರಗಳಿಗೆ ಧನ್ಯವಾದಗಳನ್ನು ಅರ್ಪಿಸುತ್ತಿದ್ದೇವೆ. ಶಾಲೆಯ ಊಟೋಪಚಾರವು ಇಲ್ಲಿನ ವಾತಾವರಣಕ್ಕೆ ಹೊಂದಿಕೆಯಾಗುವಂತಿದ್ದು, ಅತಿಖಾರ, ಉಪ್ಪು, ಸಿಹಿಗಳಿಂದ ಮುಕ್ತವಾಗಿದ್ದು, ಆರೋಗ್ಯದಾಯಕವಾಗಿದೆ. ವಿದ್ಯಾರ್ಥಿಗಳು ವಸತಿ ನಿಲಯದಲ್ಲಿ ಯಾವ ಶಿಸ್ತನ್ನು ರೂಢಿಸಿಕೊಂಡಿರುವರೋ ಅದನ್ನು ಮನೆಯಲ್ಲೂ ಮುಂದುವರಿಸಲು ಪಾಲಕರು ಪ್ರೇರೇಪಿಸಬೇಕು. ಮಕ್ಕಳ ಪ್ರೀತಿಯನ್ನು ಉಳಿಸಿ, ಬೆಳೆಸಿಕೊಳ್ಳಿ  ಎಂದು ಹಿತವಚನಗಳನ್ನಾಡುತ್ತಾ, ಶಾಲೆಯ ವಾರ್ಷಿಕಪತ್ರಿಕೆ ಜ್ಯೋತಿಷ್ಮತಿಯನ್ನು ಬಿಡುಗಡೆಗೊಳಿಸಿದರು. ಸಭೆಯಲ್ಲಿ ಶ್ರೀ ಸಿದ್ಧಿ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಸಂಸ್ಥೆಯ ಪ್ರಾಂಶುಪಾಲರಾದ ಶರಣ ಕುಮಾರ ಪೋಷಕರ ಅಹವಾಲುಗಳಿಗೆ ಸ್ಪಂದಿಸಿ, ಅವರಿಗೆ ಉತ್ತರಗಳನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: 2025ನೇ ಸಾಲಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ನೀಡಲಾಗುವ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿ, ಕರ್ನಾಟಕ ಕ್ರೀಡಾ ರತ್ನ, ನಗದು ಪುರಸ್ಕಾರ ಪ್ರಶಸ್ತಿ, ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ, 2025-26ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿ ಯೋಜನೆ, 2025-26ನೇ ಸಾಲಿನ ವಿದ್ಯಾರ್ಥಿ ವೇತನ ಯೋಜನೆ ಹಾಗೂ 2026-27ನೇ ಸಾಲಿನ ಗುರಿ ಒಲಂಪಿಕ್ ಯೋಜನೆಗೆ ಅರ್ಹ ಅಭ್ಯರ್ಥಿಗಳಿಂದ ಸೇವಾಸಿಂಧು ವೆಬ್‌ಸೈಟ್ https://sevasindhu.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೇಲ್ಕಂಡ ಪ್ರಶಸ್ತಿ ಹಾಗೂ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2521324, ಮೊ.ನಂ: 9845432303 ಅಥವಾ ಯುವ ಸಹಾಯವಾಣಿ ಸಂಖ್ಯೆ: 155265 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸಮೃದ್ಧ ಬೆಳೆಗಾಗಿ ಸಕಾಲದಲ್ಲಿ ಉತ್ತಮ ಮಳೆಯಾಗಬೇಕು ಹಾಗೂ ವರುಣ ದೇವರ ಅನುಗ್ರಹ ದೊರೆಯಬೇಕು ಎಂಬ ಸಂಕಲ್ಪದೊಂದಿಗೆ ಸೋಮವಾರ ಬೆಳಿಗ್ಗೆ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನ, ಕೋಟೇಶ್ವರದ ಕೋಟಿತೀರ್ಥ ಸರೋವರದಲ್ಲಿ ಪರ್ಜನ್ಯ ಜಪವನ್ನು ಭಕ್ತಿಭಾವದಿಂದ ನೆರವೇರಿಸಲಾಯಿತು. ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಪ್ರಧಾನ ತಂತ್ರಿಗಳಾದ ಪ್ರಸನ್ನ ಕುಮಾರ್ ಐತಾಳರ ನೇತೃತ್ವದಲ್ಲಿ ನಡೆದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ 50ಕ್ಕೂ ಅಧಿಕ ವೈದಿಕರು ಭಾಗವಹಿಸಿ ವೇದಮಂತ್ರಗಳೊಂದಿಗೆ ಪರ್ಜನ್ಯ ಜಪ ನೆರವೇರಿಸಿದರು. ಈ ಕಾರ್ಯಕ್ರಮವನ್ನು ಶಂಕರ ಜಯಂತಿ ಉತ್ಸವ ಸಮಿತಿಯ ಸಹಭಾಗಿತ್ವದಲ್ಲಿ ಆಯೋಜಿಸಲಾಗಿತ್ತು. ಬೆಳಿಗ್ಗೆ 8.00 ಗಂಟೆಗೆ ಆರಂಭವಾದ ಜಪ ಸುಮಾರು 10.00 ಗಂಟೆಯವರೆಗೆ ನಡೆಯಿತು. ಬಳಿಕ ಶ್ರೀ ಕೋಟಿಲಿಂಗೇಶ್ವರ ದೇವರಿಗೆ ಮಂಗಳಾರತಿ ಸಲ್ಲಿಸಿ, ರಾಜ್ಯದಲ್ಲಿ ಉತ್ತಮ ಮಳೆ, ಸಮೃದ್ಧ ಕೃಷಿ, ರೈತರ ಕಲ್ಯಾಣ ಹಾಗೂ ಲೋಕಕ್ಷೇಮಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ವೈದಿಕರು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸರಕಾರಿ ಪ್ರೌಢಶಾಲೆ ಗುಂಡ್ಮಿ ಸಾಸ್ತಾನ ಇಲ್ಲಿ ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಪ್ರವತಿ೯ತ 2026-27ನೇ ಸಾಲಿನ ಇಂಟ್ರ್ಯಾಕ್ಟ್ ಕ್ಲಬ್ ನ ಪದಪ್ರದಾನ ಸಮಾರಂಭವುಇತ್ತೀಚೆಗೆ ನಡೆಯಿತು. ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನದ ಅಧ್ಯಕ್ಷ ಕುಸುಮಾ ಮನೋಜ್ ಅಧ್ಯಕ್ಷತೆ ವಹಿಸಿದ್ದರು. ಇಂಟ್ರ್ಯಾಕ್ಟ್ ಕ್ಲಬ್‌ನ ನೂತನ ಅಧ್ಯಕ್ಷರಾಗಿ ಕೌಸಲ್ಯಾ ಅಧಿಕಾರ ಸ್ವೀಕರಿಸಿದರು. ಉಡುಪಿ ಜಿಲ್ಲಾ ಡಯಟ್‌ನ ಉಪನ್ಯಾಸಕ ಡಾ. ಕಿಶೋರ್ ಕುಮಾರ್ ಶೆಟ್ಟಿ, ಇಂಟ್ರ್ಯಾಕ್ಟ್ ಕೋ ಆಡಿ೯ನೇಟರ್ ಆನಂದ್ ಎಮ್, ಕ್ಲಬ್‌ನ ಕಾರ್ಯದರ್ಶಿ ಕೆ. ರಾಜಾರಾಮ ಐತಾಳ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಸುಜಾತ, ಶಿಕ್ಷಣ ತಜ್ಞ ಗಣೇಶ್ ಜಿ, ಸಮಿತಿ ಸದಸ್ಯರಾದ ಸುಲತಾ ಎಸ್ ಹೆಗ್ಡೆ, ಇಂಟ್ರ್ಯಾಕ್ಟ್ ಮಾರ್ಗದರ್ಶಿ ಶಿಕ್ಷಕಿ ಹೆಲೆನ್ ಬಾಂಝ್ ಹಾಗೂ ಹೆಚ್ಚಿನ ರೋಟರಿ ಸದಸ್ಯರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ 2025-26 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಅಮೃತಾ ಇವರಿಗೆ ನಗದು ಪುರಸ್ಕಾರ ನೀಡಲಾಯಿತು. ಶಾಲೆಯ ಖೋ ಖೋ ಪಂದ್ಯಾಟದ ಕ್ರೀಡಾಳುಗಳಿಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಮಾಜ ಸೇವೆಯಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳುವುದು ಸಂತೋಷ ಮತ್ತು ಅಭಿನಂದನೀಯ ಸಂಗತಿ. ಈ ನಿಟ್ಟಿನಲ್ಲಿ ಎಸ್.ವಿ ಕಾಮರ್ಸ್ ಕ್ಲಬ್ ಮಾಡುತ್ತಿರುವ ಕಾರ್ಯ ಶ್ಲಾಘನೀಯ ಎಂದು ಗಂಗೊಳ್ಳಿಯ ಖ್ಯಾತ ಉದ್ಯಮಿ ಸೋಮನಾಥ ಮೇಸ್ತ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರೋಟರಿ ಸಭಾಂಗಣದಲ್ಲಿ ನಡೆದ ಎಸ್‌.ವಿ. ಕಾಮರ್ಸ್ ಕ್ಲಬ್‌ನ ದ್ವಿತೀಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಪರ್ಸಿನ್ ಮೀನುಗಾರರ ಸ್ವಸಹಾಯ ಸಂಘದ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಮಡಿವಾಳ ಶುಭಾ ಸಂಸನೆ ಗೈದರು. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಆಶಾ ಸೌಂಡ್ಸ್ ಎಂಡ್ ಲೈಟ್ಸ್ ಮಾಲೀಕರಾದ ನಾರಾಯಣ ಖಾರ್ವಿ ಮತ್ತು ನಾರಾಯಣ ಗುರು ಜನ ಸೇವಾ ಬಳಗದ ಅಧ್ಯಕ್ಷರಾದ ಜಿ ಗೋಪಾಲ ಪೂಜಾರಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಗಂಗೊಳ್ಳಿ ಗ್ರಾಮ ಪಂಚಾಯತ್ ಪೌರ ಕಾರ್ಮಿಕರಾದ ಅನಿಲ್, ಗಣೇಶ್, ಹರೀಶ್, ಮತ್ತು ಎಸ್.ಎಲ್.ಆರ್. ಎಂ ಘಟಕದ ವಿಜೇತ ಕೆ, ರಮೇಶ್, ಚಂದ್ರ, ಮೂಕಾಂಬಿಕಾ, ಹೇಮಾ, ಗೌರಿ ಮತ್ತು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಿವಮೊಗ್ಗದಲ್ಲಿ 2026ರ ಜುಲೈ 17 ರಿಂದ 19ರವರೆಗೆ ನಡೆದ ಕರ್ನಾಟಕ ರಾಜ್ಯ ಅಂಡರ್-17 ಬಾಲಕಿಯರ ಫಿಡೆ ರೇಟೆಡ್ ಚೆಸ್ ಚಾಂಪಿಯನ್ಶಿಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಆರಾಧ್ಯ ಎಸ್. ಶೆಟ್ಟಿ ಅವರು ಅಂಡರ್-17 ರಾಷ್ಟ್ರೀಯ ಚೆಸ್ ಚಾಂಪಿಯನ್‌ಶಿಪ್‌ಗೆ ಕರ್ನಾಟಕವನ್ನು ಪ್ರತಿನಿಧಿಸಲು ಅರ್ಹತೆ ಪಡೆದಿದ್ದಾರೆ. ರಾಷ್ಟ್ರೀಯ ಮಟ್ಟದಲ್ಲಿ ಈಗಾಗಲೇ ಅಂಡರ್-17 ರಾಷ್ಟ್ರೀಯ ಬೆಳ್ಳಿ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದ ಆರಾಧ್ಯ, ಇದೀಗ ಮತ್ತೊಮ್ಮೆ ರಾಷ್ಟ್ರೀಯ ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆಯುವ ಮೂಲಕ ತಮ್ಮ ಪ್ರತಿಭೆ, ಶಿಸ್ತು, ಪರಿಶ್ರಮ ಮತ್ತು ಸಮರ್ಪಣೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಟೂರ್ನಮ್ನೆಟ್ ಆರಂಭದಿಂದಲೇ ಆರಾಧ್ಯ ಅತ್ಯುತ್ತಮ ಆಟವನ್ನು ಪ್ರದರ್ಶಿಸಿದರು. ಕರ್ನಾಟಕ ಅಂಡರ್-19 ತಂಡವನ್ನು ಪ್ರತಿನಿಧಿಸಿದ್ದ ಹಾಗೂ ಬೆಂಗಳೂರು ಅರ್ಬನ್‌ AFM ದೀಪ್ತಾ ಶ್ರೀನಿವಾಸ್ ಅವರನ್ನು ಸೋಲಿಸುವ ಮೂಲಕ ತಮ್ಮ ಸಾಮರ್ಥ್ಯವನ್ನು ಎಲ್ಲರಿಗೂ ತೋರಿಸಿದರು. 7ನೇ ಸುತ್ತಿನಲ್ಲಿ, ಮಂಗಳೂರಿನ 1884 ರೇಟಿಂಗ್ ಹೊಂದಿರುವ ಆರುಶ್ರಿ ಸೆವೆರಿನ್ ಹೆಲೆನ್ ಡಿ ವಿರುದ್ಧ ಅತ್ಯುತ್ತಮ ಮಧ್ಯದಾಟ (Middlegame) ಪ್ರದರ್ಶಿಸಿದರೂ, ಕೊನೆಯ ಹಂತದಲ್ಲಿ ನಡೆದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬೈಂದೂರು ಗೋಳಿಹೊಳೆ ಬಿಳಿಶಿಲೆ ವಿನಾಯಕ ದೇವಸ್ಥಾನದಲ್ಲಿ ಜು.29 ರಿಂದ ಸೆ.14ರವರೆಗೆ ನಡೆಯುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಚಾತುರ್ಮಾಸ ವೃತಾಚರಣೆಯ ಪೂರ್ವಭಾವಿ ಸಭೆಯು ರವಿವಾರದಂದು ಕುಂದಾಪುರ ಶ್ರೀ ನಾರಾಯಣ ಗುರು ಕಲ್ಯಾಣ ಮಂದಿರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಚಾತುರ್ಮಾಸ ಸಮಿತಿ ಅಧ್ಯಕ್ಷರು, ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಮಾತನಾಡಿ, ಚಾತುರ್ಮಾಸ ಎನ್ನುವುದು ಶುದ್ಧ ಭಕ್ತಿ, ಪುಣ್ಯದ ಕಾರ್ಯ. ಇಡೀ ಸಮುದಾಯವನ್ನು ಒಗ್ಗೂಡಿಸಿಕೊ೦ಡು ಚಾತುರ್ಮಾಸ ವೃತ ಮಾಡುವ ಮೂಲಕ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಉಡುಪಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ಈ ಕೈಂಕರ್ಯ ಮಾಡುತ್ತಿದ್ದಾರೆ. 48 ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮದಲ್ಲಿ ಭಕ್ತಿ-ಭಯ ಸಮ್ಮಿಲನವಾಗಬೇಕಿದೆ. ಬೈಂದೂರು,ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಗ್ಗೆ ಅಗತ್ಯ ತಯಾರಿ ಮಾಡಬೇಕಿದೆ. ಈಗಾಗಾಲೇ ವಿವಿಧ ಸಮಿತಿಗಳು ಸಜ್ಜಾಗಿದೆ. ಪಕ್ಷ, ರಾಜಕೀಯ ಮಿರಿ ಇದೊಂದು ಅಭೂತಪೂರ್ವ ಧಾರ್ಮಿಕ ಸೇವೆಯಾಗಬೇಕು ಎಂದರು. ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಬೈಂದೂರಿನಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಲಾಡಿಯಲ್ಲಿ ಕುಟುಂಬೋತ್ಸವ ಹಾಗೂ ಸಮವಸ್ತ್ರ ವಿತರಣೆ ಕಾರ್ಯಕ್ರಮವು ರವಿವಾರ ನಡೆಯಿತು . ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಹಾಲಾಡಿ ವಾರಾಹಿಯ ಅಧ್ಯಕ್ಷರಾದ ಜೆಸಿ ಪ್ರದೀಪ್ ಹಾಲಾಡಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಂಜುನಾಥ ಕಾಮತ್, ಜೆಸಿ ರಶ್ಮಿ ಭಟ್ ತಲಾರಿ, ಸರ್ವೋತ್ತಮ ಹೆಗ್ಡೆ, ವಿವೇಕ್ ಮಿಥ್ಯಾಂತ ಮೂಡಲಮಕ್ಕಿ, ಜ್ಞಾನೆೇಶ್ ಶೆಟ್ಟಿ ಹಾಲಾಡಿ, ಯೊಗೀಶ್ ಕಾಂಚನ್ ಶಂಕರನಾರಾಯಣ ಹಾಗೂ ಜೆಸಿ ಪ್ರವೀಣ್ ಬಾಳೆಕೊಡ್ಲು ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಜೆಸಿಐ ಸದಸ್ಯ ರಿಗೆ ಸಮವಸ್ತ್ರಗಳನ್ನು ವಿತರಿಸಲಾಯಿತು. ನಂತರ ಕುಟುಂಬ ಸದಸ್ಯರಿಗಾಗಿ ವಿವಿಧ ಮನರಂಜನಾ ಆಟಗಳು, ಸಂಗೀತ ಕುರ್ಚಿ ಸ್ಪರ್ಧೆ, ಲಕ್ಕಿ ಡ್ರಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಅತಿಥಿಗಳು ಮಾತನಾಡಿ, ಜೆಸಿಐ ಸಂಸ್ಥೆಯು ಸಮಾಜಮುಖಿ ಕಾರ್ಯಗಳ ಮೂಲಕ ಜನಸಾಮಾನ್ಯರ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ತರಲು ಶ್ರಮಿಸುತ್ತಿರುವುದನ್ನು ಶ್ಲಾಘಿಸಿದರು. ಶಿಕ್ಷಣ, ಸೇವೆ ಮತ್ತು ಕುಟುಂಬ ಮೌಲ್ಯಗಳ ಬೆಳವಣಿಗೆಯಲ್ಲಿ ಇಂತಹ…

Read More