Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಗಾಗಿ ‘ವಿದ್ಯಾರ್ಥಿ ಜೀವನದ ಸವಾಲುಗಳು-ಪರಿಹಾರಗಳು’ ಎಂಬ ವಿಷಯದಡಿ ಕಾರ್ಯಾಗಾರ ನಡೆಯಿತು.. ತುಮಕೂರಿನ ರಾಮಕೃಷ್ಣ-ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಕಲಿಯುವುದು ಒಂದು ಸವಾಲಾದರೆ ಕಲಿಯಲೇಬೇಕು ಎಂಬುದು ಅದಕ್ಕೆ ಉತ್ತರ. 25 ವರ್ಷ ನೀವು ಕಷ್ಟಪಟ್ಟರೆ ಮುಂದಿನ 75 ವರ್ಷ ಸುಖವಾಗಿ ಬಾಳಬಹುದು. ಜೀವನದಲ್ಲಿ ಉತ್ತಮ ಗುರಿಯ ಜೊತೆಗೆ ಗುರಿ ತಲುಪುವಲ್ಲಿ ಆಯ್ಕೆ ಮಾಡಿಕೊಂಡ ಮಾರ್ಗ ಉತ್ತಮವಾಗಿರಬೇಕು. ಸಮಯ ಪಾಲನೆ, ವೈಯಕ್ತಿಕ ವೇಳಾಪಟ್ಟಿ, ಉತ್ತಮ ಸ್ನೇಹಿತರ ಆಯ್ಕೆ, ಸ್ವಚ್ಛತೆ, ವ್ಯಾಯಾಮ, ಶಕ್ತಿಯುತ ಆರೋಗ್ಯಕರ ಶರೀರ ಮುಂತಾದ ವಿಷಯಗಳ ಬಗ್ಗೆ ತಿಳಿಸಿ ವಿದ್ಯಾರ್ಥಿಗಳು ಅಜ್ಞಾನದ ಆಕರ್ಷಣೆಗೆ ಒಳಗಾಗದೆ, ಆಷಾಢಭೂತಿ ವ್ಯಕ್ತಿತ್ವ ಬಿಡಬೇಕು ಎಂದು ತಿಳಿಸಿದರು. ವಿದ್ಯಾರ್ಥಿ ಜೀವನದ ಅದ್ಭುತ ಕಾಲಘಟ್ಟ, ಪಠ್ಯ ವಿಷಯಗಳನ್ನು ತಿಳಿಯುವುದರ ಜೊತೆಗೆ ಅದು ಚಾರಿತ್ರ್ಯ ನಿರ್ಮಾಣ ಮಾಡಿಕೊಳ್ಳುವ ಕಾಲ, ಸವಾಲುಗಳನ್ನು ಧೈರ್ಯದಿಂದ ಎದುರಿಸಬೇಕು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಜುಲೈ 18ರಿಂದ 23, 2026ರವರೆಗೆ ನಡೆದ ರಾಷ್ಟ್ರೀಯ ಮಾಸ್ಟರ್ಸ್ ಪುರುಷ ಹಾಗೂ ಮಹಿಳೆಯರ ಕ್ಲಾಸಿಕ್ ಮತ್ತು ಇಕ್ವಿಪ್ಡ್ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಕುಂದಾಪುರದ ನ್ಯೂ ಹರ್ಕ್ಯುಲಸ್ ಜಿಮ್‌ನ ವ್ಯವಸ್ಥಾಪಕರಾದ ಡಾ. ಸತೀಶ್ ಖಾರ್ವಿ ಅವರು ಅಪೂರ್ವ ಸಾಧನೆ ಮಾಡಿದ್ದಾರೆ. ಎಂ–2 ವಿಭಾಗದ ಕ್ಲಾಸಿಕ್ ಹಾಗೂ ಇಕ್ವಿಪ್ಡ್ ಎಂಬ ಎರಡು ವಿಭಾಗಗಳಲ್ಲಿ ಸ್ಪರ್ಧಿಸಿದ ಅವರು ಒಟ್ಟು 4 ಚಿನ್ನದ ಪದಕ, 3 ಬೆಳ್ಳಿ ಪದಕ ಹಾಗೂ 1 ಕಂಚಿನ ಪದಕಗಳನ್ನು ಗೆದ್ದಿದ್ದಾರೆ. ಇದರೊಂದಿಗೆ, ಎರಡು ವಿಭಾಗಗಳಲ್ಲಿ ಒಟ್ಟು 6 ರಾಷ್ಟ್ರೀಯ ಡೆಡ್ಲಿಫ್ಟ್ ನೂತನ ದಾಖಲೆಗಳನ್ನು ನಿರ್ಮಿಸಿ ದೇಶದ ಮಟ್ಟದಲ್ಲಿ ಅಪರೂಪದ ಸಾಧನೆ ಮಾಡಿದ್ದಾರೆ. ಡಾ. ಸತೀಶ್ ಖಾರ್ವಿ ಅವರ ಈ ಸಾಧನೆಯು ಕುಂದಾಪುರ, ಉಡುಪಿ ಜಿಲ್ಲೆ ಹಾಗೂ ಕರ್ನಾಟಕಕ್ಕೆ ಹೆಮ್ಮೆಯನ್ನು ತಂದಿದ್ದು, ಕ್ರೀಡಾಭಿಮಾನಿಗಳು, ಶಿಷ್ಯರು, ಸ್ನೇಹಿತರು ಹಾಗೂ ಸಾರ್ವಜನಿಕರು ಅವರನ್ನು ಹೃತ್ಪೂರ್ವಕವಾಗಿ ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ದೋಹಾ: ಬಂಟ್ಸ್ ಕತಾರ್ ವತಿಯಿಂದ ಆಯೋಜಿಸಲಾದ “ಆಟಿ ಡೊಂಜಿ ದಿನ 2026” ವೈಭವದ ಸಾಂಸ್ಕೃತಿಕ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನೆರವೇರಿತು. ಕತಾರ್‌ನಲ್ಲಿರುವ ಕರ್ನಾಟಕದ ವಿವಿಧ ಸಂಘ-ಸಂಸ್ಥೆಗಳ ಸದಸ್ಯರು ಹಾಗೂ ಕನ್ನಡಿಗರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿದ ಈ ಕಾರ್ಯಕ್ರಮವು ಕರಾವಳಿ ಕರ್ನಾಟಕದ ಶ್ರೀಮಂತ ಸಂಸ್ಕೃತಿ, ಪರಂಪರೆ ಮತ್ತು ಏಕತೆಯ ಪ್ರತೀಕವಾಗಿ ಮೂಡಿಬಂತು. ಆಟಿ ಡೊಂಜಿದಿನವು ಕರಾವಳಿ ಕರ್ನಾಟಕದಲ್ಲಿ ಮಳೆಗಾಲದ ಸಂದರ್ಭದಲ್ಲಿ ಜನರು ಪ್ರಕೃತಿಯಲ್ಲಿ ಲಭ್ಯವಿದ್ದ ಆಹಾರ ಪದಾರ್ಥಗಳನ್ನು ಅವಲಂಬಿಸಿ ಬದುಕುತ್ತಿದ್ದ ಜೀವನಶೈಲಿಯನ್ನು ನೆನಪಿಸುವ ವಿಶಿಷ್ಟ ಆಚರಣೆಯಾಗಿದೆ. ಈ ಕಾರ್ಯಕ್ರಮದ ಮೂಲಕ ಆ ಪಾರಂಪರಿಕ ಜೀವನ ಪದ್ಧತಿ, ಸಂಸ್ಕೃತಿ ಹಾಗೂ ಮೌಲ್ಯಗಳನ್ನು ಅತ್ಯಂತ ಸುಂದರವಾಗಿ ಮರುಸೃಷ್ಟಿಸಿ, ಇಂದಿನ ಯುವ ಪೀಳಿಗೆಗೆ ತಮ್ಮ ಪೂರ್ವಜರ ಜೀವನ ವಿಧಾನವನ್ನು ಅರಿತುಕೊಳ್ಳುವ ಅಪೂರ್ವ ಅವಕಾಶ ಕಲ್ಪಿಸಲಾಯಿತು. ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಬಂಟ್ಸ್ ಕತಾರ್ ಸದಸ್ಯರು ಪ್ರಕೃತಿಯಲ್ಲಿ ಲಭ್ಯವಿರುವ ಋತುಸಹಜ ಪದಾರ್ಥಗಳನ್ನು ಬಳಸಿ ಪ್ರೀತಿಯಿಂದ ಸಿದ್ಧಪಡಿಸಿದ 52 ಬಗೆಯ ಸಾಂಪ್ರದಾಯಿಕ ಕರಾವಳಿ ಕರ್ನಾಟಕದ ಖಾದ್ಯಗಳ ಪ್ರದರ್ಶನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸುರಗಂಗಾ ಕಲಾ-ಸಾಹಿತ್ಯ ಮಹಿಳಾ ವೇದಿಕೆ ಕುಂದಾಪುರ ಆಯೋಜಿಸಿದ ಕರಾವಳಿ ಮಹಿಳಾ ಕಥಾ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದೆ. ವಿಜಯಶ್ರೀ ಎಂ. ಹಾಲಾಡಿ ಅವರ ಮುಂಡಪ್ಪ ಮಾವಿನ ಮರʼ ಕಥೆ ಪ್ರಥಮ ಸ್ಥಾನ ಪಡೆದಿದೆ. ಪೂರ್ಣಿಮಾ ಹೆಗಡೆ ಅವರ ನಾಳೆಗಳನ್ನು ಬಿತ್ತಿದ ನಿನ್ನೆಗಳು’ಕಥೆ ದ್ವಿತೀಯ, ಶ್ರೀರಂಜಿನಿ ಅವರ ’ಮಂಜುಮಾಮಿಯ ಹೂದೋಟ’ಕಥೆ ತೃತೀಯ ಸ್ಥಾನ ಪಡೆದಿದೆ. ತೀರ್ಪುಗಾರರ ಮೆಚ್ಚುಗೆ ಪಡೆದ ಕಥೆಗಳು:ಶಾಂತಲಾ ರಾವ್ (ಮನೆಯೊಳಗೊಂದು ಮನೆ), ಭಾರತಿ ಮರವಂತೆ (ಗಂಗಿ) ಭವ್ಯ ಹಳೆಯೂರು (ಅವಳ ನಿರ್ಧಾರ), ಯಶಸ್ವಿನಿ  ಶ್ರೀಧರ ಮೂರ್ತಿ (ಕಥೆಯ ಹೂವೊಂದು ಅರಳಿ), ನಿರ್ಮಲಾ ನಾಯಕ್ (ತನು ಸುಟ್ಟ ಬೂದಿಯಲ್ಲಿ ಪುನಃ ಹುಟ್ಟಿ) ಆಶಾ ಮಯ್ಯ ಪುತ್ತೂರು (ಟ್ರಂಕಿನೊಳಗಣ ಬೆಚ್ಚನೆ ಕನಸು). ಈ ಕಥಾಸ್ಪರ್ಧೆಯಲ್ಲಿ 125ಕ್ಕೂ ಹೆಚ್ಚು ಕಥೆಗಳು ಬಂದಿದ್ದವು. ತೀರ್ಪುಗಾರರಾಗಿ ಖ್ಯಾತ ಲೇಖಕರಾದ ಪ್ರೊ.ಉದಯಕುಮಾರ್ ಹುಬ್ಬು,  ಡಾ.ಬಿ.ಜನಾರ್ದನ ಭಟ್ ಬೆಳ್ಮಣ್ಣು, ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಸಹಕರಿಸಿದ್ದರು. ಆಗಸ್ಟ್ 8ರಂದು ಶನಿವಾರ ಮಧ್ಯಾಹ್ನ 2.30ಕ್ಕೆ ಬಹುಮಾನ ವಿತರಣಾ ಕಾರ್ಯಕ್ರಮ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಚಿಕ್ಕಮಗಳೂರಿನ ಸೆಂಟ್ ಮೇರಿಸ್ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ ನಡೆದ (CISCE)ವಲಯ ಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾವಳಿಯಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಈ ಪಂದ್ಯಾವಳಿಯಲ್ಲಿ ಶಾಲೆಯ 14 ವರ್ಷದ ಬಾಲಕಿಯರ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇವರಲ್ಲಿ ಶ್ರಾವಣಿ ಪಾಟೀಲ್, ವರ್ಷಿಣೀ ಐ ಪಿ, ಸನ್ನಿಧಿ ಬಿ, ಹೆಚ್ ಯಾಮಿನಿ, ಲಕ್ಷ್ಮಿ, ಆಷಾ ಎಸ್. ಎಲ್, ವೇದಶ್ರೀ, ಸಹನ ಎಸ್ ಕೆ, ಆರಾಧ್ಯಾ ಆರ್ ಹೆಚ್ ಎಂಬ ೯ ಜನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಹಾಗೆಯೇ, 14 ವರ್ಷದೊಳಗಿನ ಬಾಲಕರ ತಂಡವು ದ್ವಿತೀಯ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದೆ. ಇವರಲ್ಲಿ ವಿಕಾಸ್ ಗೌಡ, ಅಕುಲ್ ಡಿ ಜಿ, ಆಯುಷ್ ಹಿರೇಮಠ ಎಂಬ 3 ಜನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. 17 ವರ್ಷದೊಳಗಿನ ಬಾಲಕರ ತಂಡವು ತೃತೀಯ ಸ್ಥಾನವನ್ನು ಪಡೆದು ಕೊಂಡಿದೆ. ಇವರಲ್ಲಿ ಅಭಿಷೇಕ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೋಡಿಗ್ರಾಮ ಪಂಚಾಯತ್, ಶಿಶು ಅಭಿವೃದ್ಧಿ ಯೋಜನೆ ಬ್ರಹ್ಮಾವರ ಹಾಗೂ ಸಮನ್ವಯ ಸಂಜೀವಿನಿ ಒಕ್ಕೂಟ ಕೋಡಿ ನೇತೃತ್ವದಲ್ಲಿ ಪಂಚವರ್ಣ ಸಂಘಟನೆ ಕೋಟ, ಗೀತಾನಂದ ಫೌಂಡೇಶನ್ ಮಣೂರು ಮಾರ್ಗದರ್ಶನದಲ್ಲಿ ಕೋಡಿಗ್ರಾಮದಲ್ಲಿ ಮೂರನೇ ವರ್ಷದ ಪಂಚವರ್ಣ ಹಸಿರು ಹೆಜ್ಜೆ ಮನೆಗೊಂದು ಗಿಡ ನೆಡುವ ಪ್ರತಿಜ್ಞಾ ವಿಧಿ ಕಾರ್ಯಕ್ರಮ ಕೋಡಿ ಹೊಸಬೇಂಗ್ರೆಯ ಕರ್ನಾಟಕ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಕೊರಗ ಪೂಜಾರಿ ಮನೆಯಿಂದ ಮನೆಗೊಂದು ಪಾರಿಜಾತ, ಲಕ್ಷ್ಮಣ ಫಲ ಹಾಗೂ ವಿವಿಧ ಹಣ್ಣುಗಳ ಗಿಡ ನೆಡುವ ಕಾರ್ಯಕ್ರಮದ ಚಾಲನೆ ನೀಡಲಾಯಿತು. ಕಾರ್ಯಕ್ರಮ ಸಂಯೋಜಕರಾಗಿ ಅಂಗನವಾಡಿ ಕಾರ್ಯಕರ್ತೆ ಯಮುನಾ ಲಕ್ಶ್ಮಣ ಕುಂದರ್ ನೆರೆದಿದ್ದ ಪರಿಸರಾಸಕ್ತರಿಗೆ ಹಸಿರು ಹಸಿರು ಹೆಜ್ಜೆ ಮಹತ್ವ ತಿಳಿಸಿದರು. ಕಾರ್ಯಕ್ರಮ ಸಂಯೋಜಕರಾದ ಕೋಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷಗಳಾದ ಪ್ರಭಾಕರ್ ಮೆಂಡನ್, ಗೀತಾ ಖಾರ್ವಿ ಹಸಿರು ಮಹತ್ವ ಸಾರಿದರು.ಕೋಡಿ ಕನ್ಯಾನ ಅಂಗನವಾಡಿ ಕಾರ್ಯಕರ್ತೆ ಪ್ರೀತಿ ಎಸ್, ಸಮನ್ವಯ ಸಂಜೆವಿನಿ ಮಾಜಿ ಅಧ್ಯಕ್ಷೆ ದೀಪಾ ಆರ್ ಖಾರ್ವಿ, ಸ್ತ್ರೀ ಶಕ್ತಿ ಸಂಘದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಲಯನ್ಸ್‌ ಕ್ಲಬ್‌ ತೆಕ್ಕಟ್ಟೆ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭವು ಕುಂಭಾಶಿಯ ಗ್ರಾಯತ್ರಿ ಸಭಾಂಗಣದಲ್ಲಿ ಬುಧವಾರ ಜರುಗಿತು. ಪದಪ್ರದಾನ ಅಧೀಕಾರಿ MJF Ln ಹೃಷಿಕೇಶ್‌ ಹೆಗ್ಡೆ ಮತ್ತು ಜಿಲ್ಲಾ GAT ಆಫೀಸರ್ ಲಯನ್‌ ಅರುಣ್‌ ಹೆಗ್ಡೆ ಅವರ ನೇತೃತ್ವದಲ್ಲಿ ನೂತನ ಅಧ್ಯಕ್ಷರಾಗಿ ವಕ್ವಾಡಿ ಸಂಪತ್‌ ಕುಮಾರ್‌ ಶೆಟ್ಟಿ, ಕಾರ್ಯದರ್ಶಿಯಾಗಿ ಅರುಣ್‌ ಶೆಟ್ಟಿ ಉಳ್ತೂರು ಮತ್ತು ಖಜಾಂಚಿಯಾಗಿ ಹೆಚ್.‌ ಚಂದ್ರಕಾಂತ್‌ ಶೆಟ್ಟಿ ಮತ್ತು ಪದಾಧಿಕಾರಿಗಳ ತಂಡ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ವಲಯ II ರ ವಲಯಾಧ್ಯಕ್ಷರಾದ ಲಯನ್‌ ಪ್ರವೀಣ್‌ ಹೆಗ್ಡೆ ಬನ್ನಾಡಿ, ಪ್ರಾಂತ್ಯ 2ರ ಪ್ರಾಂತ್ಯಾಧ್ಯಕ್ಷರಾದ ಲಯನ್‌ ಸರಸ್ವತಿ ಜಿ. ಪುತ್ರನ್‌, ಕಾರ್ಯದರ್ಶಿ ಲಯನ್ ಆಶಾ ಶಿವರಾಮ ಶೆಟ್ಟಿ, ಎಕ್ಸ್ಟೆಂಶನ್‌ ಚೇರ್‌ಪರ್ಸನ್‌ ಮಲ್ಯಾಡಿ ಸೀತಾರಾಮ ಶೆಟ್ಟಿ, ಮುಖ್ಯಅತಿಥಿಯಾಗಿ ಆಗಮಿಸಿದ ಗೌತಮ್‌ ಶೆಟ್ಟಿ ಟಾರ್ಪೊಡಸ್‌ ಸ್ಪೋರ್ಟ್ಸ್‌ ಕ್ಲಬ್‌ ಹಾಗೂ ನಿಕಟಪೂರ್ವ ಅಧ್ಯಕ್ಷರಾದ ಲಯನ್‌ ಕೆ. ಸೀತಾರಾಮ ಶೆಟ್ಟಿ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. 2025-26ನೇ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಾದಕ ದ್ರವ್ಯಗಳ ಸೇವನೆಯು ಯುವಜನತೆಯ ಭವಿಷ್ಯ, ಆರೋಗ್ಯ ಹಾಗೂ ಕುಟುಂಬ ವ್ಯವಸ್ಥೆಯ ಮೇಲೆಯೇ ತೀವ್ರ ಹಾನಿ ಉಂಟು ಮಾಡುತ್ತದೆ. ದುರಭ್ಯಾಸಗಳಿಗೆ ಬಲಿಯಾಗದೆ, ‘ನೋ’ ಹೇಳುವ ಧೈರ್ಯ ಬೆಳೆಸಿಕೊಂಡು ಯುವಜನತೆ ಮಾದಕ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕುಂದಾಪುರದ ಗೌರವಾನ್ವಿತ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರಾದ ಅಬ್ದುಲ್ ರಹೀಮ್ ಹುಸೇನ್ ಶೇಖ್ ಕರೆ ನೀಡಿದರು. ಅವರು ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಉಡುಪಿ ಜಿಲ್ಲಾ ಪೊಲೀಸ್, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಕುಂದಾಪುರ, ಬಾರ್ ಅಸೋಸಿಯೇಷನ್ ರಿ. ಕುಂದಾಪುರ, ಅಭಿಯೋಗ ಇಲಾಖೆ ಕುಂದಾಪುರ, ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಹಾಗೂ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆ (ಕಂಡ್ಲೂರು) ಇವುಗಳ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಮಾದಕ ವ್ಯಸನ ಜಾಗೃತಿ ಕಾರ್ಯಕ್ರಮ-2026 ಅನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಮಾದಕ ವ್ಯಸನವೆಂಬ ಸೈಲೆಂಟ್ ಕಿಲ್ಲರ್‌ನಿಂದ ಯುವ ಜನತೆಯನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಮಳೆಗಾಲದಲ್ಲಿ ಮಲೇರಿಯಾ ಡಂಗ್ಯೂ ಅಂತಹ ಸೊಳ್ಳೆಗಳ ಮೂಲಕ ಹರಡುವ ರೋಗದಿಂಗ ಜಾಗೃತಿ ವಹಿಸಿ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವ ಅಗತ್ಯತೆಗಳನ್ನು ಸಾಸ್ತಾನ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಾಘವೇಂದ್ರ ರಾವ್ ಗ್ರಾಮಸ್ಥರಿಗೆ ಕಿವಿಮಾತು ಹೇಳಿದರು. ಅವರು ಬುಧವಾರ ಪಂಚಾಯತ್ ಸಭಾಂಗಣದಲ್ಲಿ ಪಾಂಡೇಶ್ವರ ಗ್ರಾಮ ಪಂಚಾಯತ್‌ನ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ಯೋಜನೆ ಹಾಗೂ 15ನೇ ಹಣಕಾಸು ಯೋಜನೆಯಡಿ 2025-26ನೇ ಸಾಲಿನ ಸಾಮಾಜಿಕ ಪರಿಶೋಧನೆಗೆ ಸಂಬಂಧಿಸಿದ ವಿಶೇಷ ಗ್ರಾಮ ಸಭೆಯನ್ನುದ್ದೇಶಿಸಿ ಮಾತನಾಡಿದರು. ಪ್ರಸ್ತುತ ಸಾಂಕ್ರಾಮಿಕ ರೋಗಗಳು ನಿಯಂತ್ರಣದಲ್ಲಿದ್ದು ಆಸ್ಪತ್ರೆಗಳ ಸಮ್ಮುಖದಲ್ಲಿ ನಡೆಯುವ ಆರೋಗ್ಯ ಶಿಬಿರಗಳ ಪ್ರಯೋಜನ ಪಡೆಯಿರಿ ಎಂದು ಜನಸಂಖ್ಯಾ ನಿಯಂತ್ರಣ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಬ್ರಹ್ಮಾವರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿಜಯನಾರಾಯಣ ನಾಯ್ಕ್ ಅಧ್ಯಕ್ಷತೆಯನ್ನು ವಹಿಸಿದ್ದರು. ತಾಲೂಕು ಸಂಯೋಜಕ ಹುಸೇನಸಾಬ ಕರನಾಚಿ ವಿ.ಬಿ ರಾಮ್ ಜಿ. ಉದ್ಯೋಗ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಶ್ರೀ ನಾರಾಯಣ ಗುರು ಜನ ಸೇವಾ ಬಳಗದ ವತಿಯಿಂದ ಇಲ್ಲಿನ ಮ್ಯಾಂಗನೀಸ್ ರಸ್ತೆಯ ಅಂಗನವಾಡಿ ಕೇಂದ್ರಕ್ಕೆ ಸೀಲಿಂಗ್ ಫ್ಯಾನ್ ಮತ್ತು ಮಕ್ಕಳಿಗೆ ಕಲಿಕೆಯ ಪರಿಕರಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ನಾರಾಯಣ ಗುರು ಜನಸೇವಾ ಬಳಗದ ಅಧ್ಯಕ್ಷ ಗೋಪಾಲ ಪೂಜಾರಿ, ಉಪಾಧ್ಯಕ್ಷೆ ಮಮತಾ ಪೂಜಾರಿ, ಪ್ರಧಾನ ಕಾರ್ಯದರ್ಶಿ ಹರ್ಷೇಂದ್ರ ಆಚಾರ್ಯ, ನಾಗಭೂಷಣ ಶೇಟ್, ನರೇಂದ್ರ ಎಸ್ ಗಂಗೊಳ್ಳಿ ಮತ್ತು ಅಂಗನವಾಡಿ ಕೇಂದ್ರದ ಸಹಾಯಕಿ ಸೀಮಾ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು. ಅಂಗನವಾಡಿ ಶಿಕ್ಷಕಿ ಸಂಗೀತ ಶುಭ ಹಾರೈಸಿದರು.

Read More