Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MITK) ಇಂಜಿನಿಯರಿಂಗ್ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಬಿ.ಇ. ವಿದ್ಯಾರ್ಥಿಗಳ ದಿಕ್ಸೂಚಿ ಕಾರ್ಯಕ್ರಮ (Student Induction Programme) ಬುಧವಾರದಂದು ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಭಾಗವಹಿಸಿ ಮಾತನಾಡಿದ ಆರಾಕಲ್ (Oracle) ಸಂಸ್ಥೆಯ ಹೆಚ್.ಆರ್. ಅಲೆಕ್ಸಾಂಡರ್ ಆರ್, “ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದಿಂದ ಉದ್ಯೋಗಗಳು ನಷ್ಟವಾಗುವುದಿಲ್ಲ. ಬದಲಿಗೆ ಅದನ್ನು ಸರಿಯಾಗಿ ಬಳಸಿಕೊಳ್ಳಲು ತಿಳಿದಿರುವವರು ಭವಿಷ್ಯದಲ್ಲಿ ಉದ್ಯೋಗಾವಕಾಶಗಳನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಕೇವಲ ಸಂವಹನ ನಡೆಸುವುದಷ್ಟೇ ಅಲ್ಲದೆ, ಉತ್ತಮ ಬಾಂಧವ್ಯ ಬೆಳೆಸಿಕೊಳ್ಳುವ ಕೌಶಲ್ಯ ಹಾಗೂ ನಿರಂತರ ಕಲಿಕೆಯ ಮನೋಭಾವವನ್ನು ಬೆಳೆಸಿಕೊಳ್ಳಬೇಕು” ಎಂದು ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗ್ಡೆ ಅವರು ಸಂಸ್ಥೆಯ ಧ್ಯೇಯೋದ್ದೇಶಗಳನ್ನು ವಿವರಿಸಿ, “ಸಮಾಜದಲ್ಲಿರುವ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಇಂಜಿನಿಯರಿಂಗ್ ಶಿಕ್ಷಣ ಅತ್ಯಗತ್ಯ. ವಿದ್ಯಾರ್ಥಿಗಳು ಉತ್ತಮ ಇಂಜಿನಿಯರ್ ಆಗಿ ಹೊರಹೊಮ್ಮಿ ಸಮಾಜಕ್ಕೆ ಸಕಾರಾತ್ಮಕ ಕೊಡುಗೆ ನೀಡಬೇಕು” ಎಂದರು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನ ವಹಿಸಿದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ,.ಮೂಡುಬಿದಿರೆ: ದೇಶದ ಯುವಜನರ ಉದ್ಯೋಗ ಕನಸುಗಳಿಗೆ ಬಲ ತುಂಬುತ್ತಿರುವ ರಾಜ್ಯದ ಪ್ರತಿಷ್ಠಿತ ಉಚಿತ ಉದ್ಯೋಗ ಮೇಳ ‘ಆಳ್ವಾಸ್ ಪ್ರಗತಿ-2026’ರ 16ನೇ ಆವೃತ್ತಿ ಆ.7 ಮತ್ತು 8ರಂದು ಮೂಡುಬಿದಿರೆಯ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ನಡೆಯಲಿದೆ ಎಂದು ಆಳ್ವಾಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ತಿಳಿಸಿದ್ದಾರೆ. ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 2007ರಿಂದ ನಿರಂತರವಾಗಿ ಆಯೋಜಿಸಲಾಗುತ್ತಿರುವ ಆಳ್ವಾಸ್ ಪ್ರಗತಿ, ಉದ್ಯೋಗಾಕಾಂಕ್ಷಿಗಳು ಮತ್ತು ವಿವಿಧ ಕ್ಷೇತ್ರಗಳ ಪ್ರತಿಷ್ಠಿತ ಕಂಪನಿ ಗಳನ್ನು ಒಂದೇ ವೇದಿಕೆಯಲ್ಲಿ ಸಂಪರ್ಕಿಸುವ ವಿಶ್ವಾಸಾರ್ಹ ಉದ್ಯೋಗ ಮೇಳವಾಗಿ ಗುರುತಿಸಿಕೊಂಡಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಾಮಾಜಿಕ ಹೊಣೆಗಾರಿಕೆ ಯೋಜನೆಯ ಅಂಗವಾಗಿ ಈ ಮೇಳವನ್ನು ಸಂಪೂರ್ಣ ಉಚಿತ ವಾಗಿ ಆಯೋಜಿಸಲಾಗುತ್ತಿದ್ದು, ಗ್ರಾಮೀಣ ಹಾಗೂ ಹಿಂದುಳಿದ ಭಾಗಗಳ ಯುವಜನರಿಗೆ ಗುಣಮಟ್ಟದ ಉದ್ಯೋಗಾವಕಾಶ ಕಲ್ಪಿಸುವುದು ಇದರ ಪ್ರಮುಖ ಉದ್ದೇಶವಾಗಿದೆ ಎಂದರು. ಈ ವರ್ಷದ ಉದ್ಯೋಗ ಮೇಳದಲ್ಲಿ ಈಗಾಗಲೇ 276ಕ್ಕೂ ಹೆಚ್ಚು ಕಂಪನಿಗಳು ನೋಂದಾಯಿಸಿಕೊಂಡಿದ್ದು, 350ಕ್ಕೂ ಅಧಿಕ ಕಂಪನಿಗಳು ಭಾಗವಹಿಸುವ ನಿರೀಕ್ಷೆಯಿದೆ. ಸುಮಾರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ರೋಟರಿ ಕ್ಲಬ್ ತೆಕ್ಕಟ್ಟೆಯ ಆಶ್ರಯದಲ್ಲಿ ತೆಕ್ಕಟ್ಟೆ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ 2026–27ನೇ ಸಾಲಿನ ಇಂಟರ್ಯಾಕ್ಟ್ ಕ್ಲಬ್ ಅನ್ನು ಮಂಗಳವಾರ ಉದ್ಘಾಟಿಸಲಾಯಿತು. ರೋಟರಿ ಕ್ಲಬ್ ಅಧ್ಯಕ್ಷ ರಾಜೀವ್ ಶೆಟ್ಟಿ ಹಾಗೂ ಗಣ್ಯರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಣಾಮ್ಯಾ ಅವರು 2026–27ನೇ ಸಾಲಿನ ಇಂಟರ್ಯಾಕ್ಟ್ ಕ್ಲಬ್ ಅಧ್ಯಕ್ಷೆಯಾಗಿ ಪ್ರಮಾಣವಚನ ಸ್ವೀಕರಿಸಿ ಸ್ವಾಗತ ಭಾಷಣ ಮಾಡಿದರು. ಸುರೇಶ್ ಬೆಳೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಾಯಕ ಜಿಲ್ಲಾ ಗವರ್ನರ್ ಟಿ. ಸುಧಾಕರ್ ಶೆಟ್ಟಿ ಹಾಗೂ ವಲಯ ಇಂಟರ್ಯಾಕ್ಟ್ ಅಧ್ಯಕ್ಷರು ವಿದ್ಯಾರ್ಥಿಗಳು ಇಂಟರ್ಯಾಕ್ಟ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಕರೆ ನೀಡಿದರು. ಮುಖ್ಯ ಅತಿಥಿಯಾಗಿದ್ದ ಜಿಲ್ಲಾ ಇಂಟರ್ಯಾಕ್ಟ್ ಅಧ್ಯಕ್ಷ ಗಣೇಶ್ ಶೆಟ್ಟಿ ಇಂಟರ್ಯಾಕ್ಟ್ ಕ್ಲಬ್‌ನ ಉದ್ದೇಶ, ಮಹತ್ವ ಹಾಗೂ ವಿದ್ಯಾರ್ಥಿಗಳಲ್ಲಿ ನಾಯಕತ್ವ, ಶಿಸ್ತು, ಸ್ನೇಹಭಾವ ಮತ್ತು ಸಮಾಜಸೇವೆಯ ಮನೋಭಾವ ಬೆಳೆಸುವಲ್ಲಿ ಅದರ ಪಾತ್ರವನ್ನು ವಿವರಿಸಿದರು. ಅಧ್ಯಕ್ಷೀಯ ಭಾಷಣದಲ್ಲಿ ರಾಜೀವ್ ಶೆಟ್ಟಿ ಮಾತನಾಡಿ, ಇಂಟರ್ಯಾಕ್ಟ್ ಕ್ಲಬ್ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವುದರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಕರ್ನಾಟಕ ಅಮೆಚೂರ್ ಮಲ್ಲಕಂಬ ಅಸೋಸಿಯೇಷನ್, ಲಕ್ಷ್ಮೇಶ್ವರ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಬೆಂಗಳೂರು ಗ್ರಾಮಾಂತರ ಮತ್ತು ಧಾರವಾಡ ಜಿಲ್ಲಾ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಜುಲೈ 11 ಮತ್ತು 12ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹಾಗೂ ಜುಲೈ 17 ಮತ್ತು 18ರಂದು ಧಾರವಾಡ ಜಿಲ್ಲೆಯಲ್ಲಿ ನಡೆದ ರಾಜ್ಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ-ಬಾಲಕಿಯರ ಮಲ್ಲಕಂಬ ಕ್ರೀಡೋತ್ಸವದಲ್ಲಿ ಆಳ್ವಾಸ್ ಮಲ್ಲಕಂಬ ತಂಡವು  ಎರಡು  ಕಡೆ ಸಮಗ್ರ ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿತು. ಬೆಂಗಳೂರು ಗ್ರಾಮಾಂತರ ಸ್ಪರ್ಧೆ:ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು 14 ವರ್ಷ ವಯೋಮಿತಿಯ ಬಾಲಕಿಯರ ವಿಭಾಗ ಹಾಗೂ 14 ವರ್ಷ ಮೇಲ್ಪಟ್ಟ ಬಾಲಕ ಮತ್ತು ಬಾಲಕಿಯರ ವಿಭಾಗಗಳಲ್ಲಿ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿತು. ಗುಂಪು ವಿಭಾಗದಲ್ಲಿ 14 ವರ್ಷ ಮೇಲ್ಪಟ್ಟ ಬಾಲಕರ ಹಗ್ಗದ ಮಲ್ಲಕಂಬದಲ್ಲಿ ಪ್ರಥಮ ಹಾಗೂ ಸ್ಥಿರ ಮಲ್ಲಕಂಬದಲ್ಲಿ ದ್ವಿತೀಯ ಸ್ಥಾನ, 14 ವರ್ಷ ಮೇಲ್ಪಟ್ಟ ಬಾಲಕಿಯರ ಹಗ್ಗದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದೆಹಲಿಯ ಜಂತರ್ ಮಂತರ್ ನಲ್ಲಿ ನೀಟ್ ಪೇಪರ್ ಲೀಕ್ ಔಟ್ ವಿಚಾರವಾಗಿ ನಡೆಯುತ್ತಿರುವ ಪ್ರತಿಭಟನೆ ಸಂಪೂರ್ಣ ರಾಜಕೀಯ ಪ್ರೇರಿತವಾಗಿದೆ ಎಂದು ಬಿಜೆಪಿ ಯುವಮೋರ್ಚಾ ಜಿಲ್ಲಾ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಆರೋಪಿಸಿದ್ದಾರೆ.  ನೀಟ್ ಅಕ್ರಮದಲ್ಲಿ ತೊಡಗಿದ ಆರೋಪಿಗಳನ್ನು ಈಗಾಗಲೇ ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಹಾಗೂ ಉನ್ನತ ಮಟ್ಟದ ತನಿಕೆ ಕೂಡ ನಡೆಯುತ್ತಿದೆ ಈತನ್ಮಧ್ಯೆ ಸಿಜೆಪಿ ಪಾರ್ಟಿ ನೀಟ್ ವಿದ್ಯಾರ್ಥಿಗಳ ಹೆಸರಿನಲ್ಲಿ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದು, ಪ್ರತಿಭಟನೆಯ ಹೆಸರಿನಲ್ಲಿ ದೇಶದ್ರೋಹಿ ಚಟುವಟಿಕೆಗಳು, ದೇಶ ವಿರೋಧಿ ಹೇಳಿಕೆಗಳು, ನಿಷೇಧಿತ ಸಂಘಟನೆಗಳ ಭಾಗವಹಿಸುವಿಕೆ,ಮಾರಕಾಸ್ತ್ರ ಗಳನ್ನು ಹಿಡಿದು ಹಿಂಸಾಚಾರದಲ್ಲಿ ತೊಡಗಿರುವುದು ದೇಶದಲ್ಲಿ ಅಶಾಂತಿ ಕದಡುವ ವಾತಾವರಣ ನಿರ್ಮಾಣ ಮಾಡುತಿದ್ದು ದೇಶದ ಆಂತರಿಕ ಭದ್ರತೆಗೆ ಅಪಾಯಕಾರಿಯಾಗಿದೆ ಎಂದರು. ಈ ಎಲ್ಲಾ ಚಟುವಟಿಕೆಗಳ ಮೂಲ ಸೂತ್ರದಾರ ಕಾಂಗ್ರೆಸ್ ಪಕ್ಷ ಎಂಬುದು ಜಗಜ್ಜಾಹೀರಾಗಿದೆ ಇನ್ನಾದರೂ ಕಾಂಗ್ರೆಸ್ ಇಂತಹ ವ್ಯರ್ಥ ಪ್ರಯತ್ನ ನಿಲ್ಲಿಸಲಿ ಎಂದು ಆರೋಪಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕಳೆದ ಎರಡು ದಿನಗಳಿಂದ ಕಾಣೆಯಾಗಿದ್ದ ಹೆಬ್ರಿಯ ಶಿವಪುರ ನಿವಾಸಿ ಶಿವಪ್ರಸಾದ (27) ಅವರ ಮೃತದೇಹ ಬುಧವಾರ ಬೆಳಗ್ಗೆ ಕೋಟ ಸಮೀಪದ ಪಡುಕೆರೆ ಬೀಚ್‌ನಲ್ಲಿ ಪತ್ತೆಯಾಗಿದೆ. ಶಿವಪ್ರಸಾದ ಅವರು ಜು.20ರಂದು ಮನೆಯಿಂದ ತೆರಳಿದ್ದು, ಬಳಿಕ ಮರಳಿ ಬಾರದ ಹಿನ್ನೆಲೆಯಲ್ಲಿ ಅವರ ಸಂಬಂಧಿಕರು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಪೊಲೀಸರು ವಿಚಾರಣೆ ನಡೆಸುವಾಗ ಆತ ತೆರಳಿದ್ದ ಬೈಕ್ ಬಾರ್ಕೂರು ಸೇತುವೆ ಸಮೀಪ ಪತ್ತೆಯಾಗಿತ್ತು. ಬುಧವಾರ ಬೆಳಗ್ಗೆ ಪಡುಕೆರೆ ಬೀಚ್‌ನಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಸಂಬಂಧಿಕರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಮೃತರು ಶಿವಪ್ರಸಾದ ಎಂಬುದು ದೃಢಪಟ್ಟಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನಾಯಕತ್ವವೆಂದರೆ ಜವಾಬ್ದಾರಿಯಾಗಿದ್ದು, ಆ ಗುಣವನ್ನು ಮೈಗೂಡಿಸಿಕೊಳ್ಳಲು ಶಿಸ್ತು ಹಾಗೂ ಬದ್ಧತೆ ಅತ್ಯಗತ್ಯ ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಅಬ್ದುಲ್ ರಹೀಂ ಹುಸೇನ್ ಶೇಕ್ ನುಡಿದರು. ಅವರು ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ಹಾಗೂ ವಿದ್ಯಾರಣ್ಯ ಗ್ಲೋಬಲ್ ಸ್ಕೂಲ್ ನಲ್ಲಿ ಬುಧವಾರದಂದು ನಡೆದ ವಿದ್ಯಾರ್ಥಿಗಳ ಸಂಸತ್ ಪದಗ್ರಹಣ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ನಾಯಕತ್ವದ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸುವುದನ್ನು ಕಲಿಯುವುದು ಮುಖ್ಯ ಎಂದರು. ತನ್ನೊಟ್ಟಿಗೆ ತಂಡವನ್ನು ಬೆಳೆಸಿಕೊಂಡು ಜೊತೆ ಸಾಗುವವನೇ ಲೀಡರ್ ಎನ್ನಿಸಿಕೊಳ್ಳುತ್ತಾನೆ. ವಿದ್ಯಾರ್ಥಿ ದೆಸೆಯಲ್ಲಿಯೇ ಅದರ ಪ್ರಾಮುಖ್ಯ ತಿಳಿಯಲು ನಿಮಗೆ ಇಲ್ಲಿ ಅವಕಾಶ ಸಿಕ್ಕಿದೆ. ಇದನ್ನು ಸರಿಯಾಗಿ ಸದುಪಯೋಗಪಡಿಸಿಕೊಳ್ಳಿ ಎಂದು ಕಿವಿಮಾತು ನುಡಿದರು. ಎಲ್ಲಾ ನ್ಯಾಯಾಲಯಕ್ಕಿಂತ ಆತ್ಮಸಾಕ್ಷಿಯ ನ್ಯಾಯಾಲಯ ದೊಡ್ಡದು ಎಂಬ ಗಾಂಧೀಜಿಯವರ ಮಾತನ್ನು ಉಲ್ಲೇಖಿಸಿದ ನ್ಯಾಯಾಧೀಶರು,, “ನಾವೇನೇ ತಪ್ಪು ಮಾಡಿದರೂ ಮೊದಲಿಗೆ ನಮ್ಮನ್ನು ಎಚ್ಚರಿಸುವುದೇ ನಮ್ಮ ಆತ್ಮಸಾಕ್ಷಿ. ಹಾಗಾಗಿ ಆತ್ಮಸಾಕ್ಷಿಗೆ ವಂಚನೆ ಮಾಡಿಕೊಳ್ಳದೇ ಬದುಕಿ” ಎಂದರು. ಕುಂದಾಪುರ ವಕೀಲರ ಸಂಘದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಆನ್ಸ್ ಕ್ಲಬ್ ಕೋಟ ಬ್ರಿಗೇಡ್ ವತಿಯಿಂದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಹಾಗೂ ಆಷಾಢ ಸಂಭ್ರಮ ಕಾರ್ಯಕ್ರಮವು ಇತ್ತೀಚೆಗೆ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಮುಖ್ಯ ಅತಿಥಿಯಾಗಿ ಪದ್ಮಾ ರಾಘವೇಂದ್ರ ಭಾಗವಹಿಸಿ ಮಹಿಳೆಯರ ಸೇವಾ ಮನೋಭಾವ, ಸಂಘಟನಾ ಶಕ್ತಿ ಹಾಗೂ ಸಮಾಜಮುಖಿ ಚಟುವಟಿಕೆಗಳ ಮಹತ್ವದ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಕೋಟ ಬ್ರಿಗೇಡ್ ಅಧ್ಯಕ್ಷ ಪ್ರಕಾಶ್ ಪೂಜಾರಿ ವಹಿಸಿ ಅವರು ನೂತನ ಅಧ್ಯಕ್ಷೆಯಾಗಿ ಆನ್. ಸಂಧ್ಯಾ ಪ್ರಕಾಶ್ ಹಾಗೂ ಕಾರ್ಯದರ್ಶಿಯಾಗಿ ಆನ್. ಪ್ರಮೀಳಾ ಶಿವರಾಜ್ ಅವರಿಗೆ ಪದಪ್ರದಾನ ಮಾಡಿ ಅಧಿಕಾರ ಹಸ್ತಾಂತರಿಸಿದರು. ಬಳಿಕ ನೂತನ ಅಧ್ಯಕ್ಷೆ ಆನ್. ಸಂಧ್ಯಾ ಪ್ರಕಾಶ್ ಸ್ವೀಕೃತಿ ಭಾಷಣ ಮಾಡಿ, ಸದಸ್ಯರ ಸಹಕಾರದೊಂದಿಗೆ ಸೇವಾ ಕಾರ್ಯಗಳನ್ನು ಮತ್ತಷ್ಟು ವಿಸ್ತರಿಸುವ ಸಂಕಲ್ಪ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ವಲಯ ಸೇನಾನಿ ದಯಾನಂದ ಆಚಾರ್, ಆನ್ಸ್ ಕ್ಲಬ್ ಚೇರ್ಮನ್ ಪ್ರಕಾಶ್ ಹಂದಟ್ಟು, ರೋಟರಿ ಕ್ಲಬ್ ಕೋಟ ಬ್ರಿಗೇಡ್ ಕಾರ್ಯದರ್ಶಿ ಶಿವರಾಜ್ ಉಪಸ್ಥಿತರಿದ್ದರು. ಮುಖ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಶ್ರೀ ಗುರುನರಸಿಂಹ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ಸಾಲಿಗ್ರಾಮ ಇದರ 16ನೇಯ ವಾರ್ಷಿಕ ಸಾಮಾನ್ಯ ಸಭೆಯು ಇತ್ತೀಚೆಗೆ ಸಾಲಿಗ್ರಾಮದ ಗಿರಿಜಾ ಕಲ್ಯಾಣ ಮಂಟಪದಲ್ಲಿ ಸಂಘದ ಅಧ್ಯಕ್ಷ ಆನಂದ ಸಿ. ಕುಂದರ್ ಅಧ್ಯಕ್ಷತೆಯಲ್ಲಿ ಜರುಗಿತು. ಗತ ವರ್ಷದಲ್ಲಿ ಸದಸ್ಯರಿಂದ ರೂ. 18.೦೦ ಕೋಟಿಗೂ ಮಿಕ್ಕಿ ಠೇವಣಿ ಸಂಗ್ರಹಿಸಿ ರೂ. 14.೦೦ ಕೋಟಿಗೂ ಅಧಿಕ ಸಾಲ ವಿತರಿಸಿದೆ. ಸದಸ್ಯರ ಮನ ಒಲಿಸೂವುದರ ಮೂಲಕ ಶೇ. 99.75 ರ ವಸೂಲಿ ಸಾಧಿಸಿದೆ. 2025-26ನೇ ಶೈಕ್ಷಣಿಕ ವರ್ಷದಲ್ಲಿ ಪಿ.ಯು.ಸಿ ಮತ್ತು ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಶಾಲಾವಾರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಮತ್ತು ಸದಸ್ಯರ ಮಕ್ಕಳನ್ನು ಪುರಸ್ಕರಿಸಿ ಅಭಿನಂದಿಸಲಾಯಿತು. ಪಿ.ಯು.ಸಿ. ಅಂತಿಮ ಪರೀಕ್ಷೆಯಲ್ಲಿ ರಾಜ್ಯಕ್ಕೆ 5ನೇ ಹಾಗೂ ಜಿಲ್ಲೆಗೆ 3ನೇ ರಾಂಕ್ ಗಳಿಸಿದ ಸಂಘದ ಸದಸ್ಯರೋರ್ವರ ಪುತ್ರಿ ವಿದ್ಯಾರ್ಥಿನಿ ಸಾತ್ವಿಕ ಶ್ರೀಯಾನ್ ಅವರಿಗೆ ನಗದು ಬಹುಮಾನ ನೀಡಿ ಗೌರವಿಸಲಾಯಿತು. ಇತ್ತೀಚಿಗೆ ನಿಧನರಾದ ಸಂಘದ ಸದಸ್ಯರೋರ್ವರು ಅವರ ಉತ್ತರಾಧಿಕಾರಿಗೆ ಸಂಘದಿಂದ ಲಭ್ಯವಿರುವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗರಿಷ್ಠ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಮಾತ್ರವಲ್ಲ, ಕನಿಷ್ಠ ಅಂಕಗಳನ್ನು ಪಡೆಯುವ ಸಾಧಾರಣ ಬುದ್ಧಿಮತ್ತೆಯ ವಿದ್ಯಾರ್ಥಿಗಳಿಗೂ ಉತ್ಕ್ರಷ್ಟ ದರ್ಜೆಯಲ್ಲಿ ಪಾಸಾಗುವಂತೆ ಮಾಡುವ ಕಲಿಕಾ ವ್ಯವಸ್ಥೆ ಈ ವಿದ್ಯಾಸಂಸ್ಥೆಯಲ್ಲಿರುವುದು ಸಂತಸದ ವಿಚಾರ ಎಂದು ಕಂಬದಕೋಣೆಯ ಸರಕಾರಿ ಪದವಿ ಪೂರ್ವ ಕಾಲೇಜಿನ ಅಧ್ಯಾಪಕರಾದ ವಿಶ್ವನಾಥ ಶೆಟ್ಟಿ ಹೇಳಿದರು. ಅವರು ಇಲ್ಲಿನ ಕುಂದಾಪುರದ ಆರ್. ಎನ್.ಶೆಟ್ಟಿ‌ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ‌ ಆಯೋಜಿಸಲಾದ 2025-26ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ  ಯಲ್ಲಿ ಉತ್ಕ್ರಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಅಭಿನಂದಿಸುವ ‘ಪ್ರತಿಭಾ ಪುರಸ್ಕಾರ ‘ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು. ವಿದ್ಯಾರ್ಥಿಗಳು ಜನ ನಾಯಕರ ಕೆಲವು ಮೌಲ್ಯಯುತ ಗುಣಗಳಿಂದ ಪ್ರೇರಣೆ ಪಡೆದು, ಜೀವನದಲ್ಲಿ ಬೇರೆಯವರ ಅಳುವಿಗೆ ಕಾರಣವಾಗದೇ, ಎಲ್ಲರ ನಗುವಿಗೆ ಕಾರಣವಾಗಿ ಸಮಾಜದ ಮುಖ್ಯವಾಹಿನಿಯಲ್ಲಿ ತಮ್ಮ ಅಸ್ತಿತ್ವವನ್ನು ಗುರುತಿಸಿಕೊಳ್ಳಿ ಎಂದರು. ಕುಂದಾಪುರ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ‌ ಪ್ರಾಂಶುಪಾಲರಾದ ನವೀನ್ ಕುಮಾರ ಶೆಟ್ಟಿ…

Read More