ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಕ್ತದಾನಿ ಬಳಗ ಮರವಂತೆ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ, ರೆಡ್ ಕ್ರಾಸ್ ಕುಂದಾಪುರ ಸಹಕಾರದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮರವಂತೆ ಇಲ್ಲಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ರಕ್ತದ ಆಪತ್ಭಾಂದವ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ ಅಧ್ಯಕ್ಷ ಸತೀಶ್ ಸಾಲ್ಯಾನ್ ಮಣಿಪಾಲ್ ಉದ್ಘಾಟಿಸಿದರು. ಕಳೆದ ಹಲವು ವರ್ಷಗಳಿಂದ ರಕ್ತದಾನ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಅಭಯಹಸ್ತ ಉಡುಪಿ ಇದರ ಸದಸ್ಯರಾದ ಪ್ರಶಾಂತ್ ತಲ್ಲೂರು ಹಾಗೂ ದಿನೇಶ್ ಕಾಂಚನ್ ಬಾರಿಕೆರೆ ಅವರನ್ನು ವೇದಿಕೆಯಲ್ಲಿರುವ ಗಣ್ಯರ ಉಪಸ್ಥಿತಿಯಲ್ಲಿ ಅವರನ್ನು ಸನ್ಮಾನಿಸಲಾಯಿತು. ಈ ಯಶಸ್ವಿ ರಕ್ತದಾನ ಶಿಬಿರದಲ್ಲಿ 86 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು. ಕಳೆದ 6 ವರ್ಷಗಳಿಂದ ಯಶಸ್ವಿ ರಕ್ತದಾನ ಶಿಬಿರವನ್ಮು ಆಯೋಜನೆ ಮಾಡುತ್ತಿರುವ ವಿಘ್ನೇಶ್ ಮರವಂತೆ ಅವರಿಗೆ ಧನ್ಯವಾದ ಅರ್ಪಿಸಲಾಯಿತು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಶೇಕಡ 5ರಷ್ಟು ಏರಿಕೆ ಮಾಡಿದ್ದು ಕೇಂದ್ರ ಸರ್ಕಾರ. ರಾಜ್ಯ ಸರ್ಕಾರ ಅದಕ್ಕೆ ಒಪ್ಪಿಗೆ ಸೂಚಿಸಿದೆಯಷ್ಟೇ. ಈ ವಿಷಯದಲ್ಲಿ ಬಿಜೆಪಿ ನಾಯಕರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಿಡಿ ಕಾರಿದರು. ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಸಚಿವರು, ರಾಜಕಾರಣ ಮಾಡಲು ಬೇರೆ ವಿಚಾರ ಉಳಿದಿಲ್ಲ. ಮೊದಲು ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡಿದರು. ಗ್ಯಾರಂಟಿ ಯೋಜನೆಗಳು ಯಶಸ್ವಿ ಆಗುವುದಿಲ್ಲ ಎಂದರು. ನಾವು 136 ಸೀಟು ಗೆದ್ದರೂ ಆರು ತಿಂಗಳು ಸರ್ಕಾರ ಉಳಿಯಲ್ಲ ಎಂದರು, ಜನರ ಭಾವನೆಗಳ ಜೊತೆ ಬಿಜೆಪಿ ಆಟವಾಡುತ್ತದೆ. ಮಾತನಾಡಲು ಅವರಿಗೆ ಬೇರೇನೂ ಉಳಿದಿಲ್ಲ ಎಂದು ದೂರಿದರು. ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ:ಈ ವರ್ಷ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಲಕ್ಷಣ ಇದೆ. ಹೀಗಾಗಿ ಮಳೆ ಅವಾಂತರ ನಿಯಂತ್ರಿಸಲು ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ. ಯಾವುದೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಸ್ಗಳು, ಆಟೋ ರಿಕ್ಷಾ ಮತ್ತು ಇತರ ವಾಹನಗಳು ಸೇರಿದಂತೆ ಮಕ್ಕಳನ್ನು ಶಾಲೆಗೆ ಸಾಗಿಸುವ ಎಲ್ಲ ವಾಹನಗಳನ್ನು ಪರಿಶೀಲಿಸಲು ಇಡೀ ಜಿಲ್ಲೆಯಲ್ಲಿ ಗುರುವಾರ ನಡೆದ ವಿಶೇಷ ಕಾರ್ಯಾಚರಣೆ ಅಂಗವಾಗಿ ಕುಂದಾಪುರ, ಬೈಂದೂರು, ಹೆಬ್ರಿ ಪ್ರದೇಶಗಳಲ್ಲಿ ತಪಾಸಣೆ ನಡೆಯಿತು. ಎಸ್ಪಿ ಹರಿರಾಮ್ ಶಂಕರ್ ಮಾಹಿತಿ ನೀಡಿದಂತೆ, ಬೈಂದೂರು ಠಾಣೆಯಲ್ಲಿ 45 ವಾಹನಗಳ ತಪಾಸಣೆ ನಡೆಸಿ 3 ಕೇಸು ದಾಖಲಿಸಿ 1,500 ರೂ. ದಂಡ ವಿಧಿಸಲಾಗಿದೆ. ಕೊಲ್ಲೂರು ಠಾಣೆಯಲ್ಲಿ 28 ವಾಹನಗಳ ತಪಾಸಣೆ ನಡೆಸಿ 3 ಕೇಸು ದಾಖಲಿಸಿ 2,000 ರೂ. ದಂಡ, ಗಂಗೊಳ್ಳಿ ಠಾಣೆಯಲ್ಲಿ 25 ವಾಹನಗಳ ತಪಾಸಣೆ ನಡೆಸಿ 3 ಕೇಸು ದಾಖಲಿಸಿ 1,200 ರೂ. ದಂಡ, ಕುಂದಾಪುರ ಠಾಣೆಯಲ್ಲಿ 23 ವಾಹನಗಳ ತಪಾಸಣೆ ನಡೆಸಿ 13 ಕೇಸು ದಾಖಲಿಸಿ 5,300 ರೂ. ದಂಡ, ಕುಂದಾಪುರ ಸಂಚಾರ ಠಾಣೆಯಲ್ಲಿ 62 ವಾಹನಗಳ ತಪಾಸಣೆ ನಡೆಸಿ 23 ಕೇಸು ದಾಖಲಿಸಿ 9,000 ರೂ. ದಂಡ, ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನೇ ಹೊಡೆದು ಕೊಂದು ಪತಿ ಓಡಿ ಹೋದ ಘಟನೆ ಗುರುವಾರ ತಡರಾತ್ರಿ ತಾಲೂಕಿನ ಹಿಲಿಯಾಣ ಎಂಬಲ್ಲಿ ನಡೆದಿದೆ. ಇಲ್ಲಿನ ದರ್ಕಾಸು ನಿವಾಸಿ ಗಣೇಶ್ ಪೂಜಾರಿ (43) ಎಂಬಾತನೇ ಪತ್ನಿಯನ್ನು ಕೊಂದ ಆರೋಪಿ. ಗಣೇಶ್ ಪೂಜಾರಿ ಪತ್ನಿ ರೇಖಾ ಪೂಜಾರಿ (26) ಪತಿಯಿಂದ ಕೊಲೆಯಾದ ದುರ್ದೈವಿ. ಗುರುವಾರ ತಡರಾತ್ರಿ ಮನೆಗೆ ಬಂದ ಗಣೇಶ್, ಹೆಂಡತಿಯೊಂದಿಗೆ ತಕರಾರು ತೆಗೆದು ಗಲಾಟೆ ನಡೆಸಿ ಮಾತಿಗೆ ಮಾತು ಬೆಳೆದು ಸಿಟ್ಟುಗೊಂಡು ಪತ್ನಿಯ ಕುತ್ತಿಗೆಗೆ ಕತ್ತಿಯಿಂದ ಗಣೇಶ್ ಪೂಜಾರಿ ಹೊಡೆದಿದ್ದು ತಲೆಗೆ ಗಂಭೀರ ಗಾಯಗೊಂಡ ರೇಖಾ ಸ್ಥಳದಲ್ಲಿ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ. ಕೊಲೆ ಬಳಿಕ ಮನೆಯಿಂದ ಓಡಿ ಹೋಗಿದ್ದ ಆರೋಪಿ ಗಣೇಶ್ ಪೂಜಾರಿಯನ್ನು ಶಂಕರನಾರಾಯಣ ಪೊಲೀಸರು ಹುಡುಕಾಡಿ ಕೊನೆಗೆ ಶಂಕರನಾರಾಯಣದಲ್ಲಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಗಣೇಶ್ ಪೂಜಾರಿ ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದ. ದಂಪತಿಗಳಿಗೆ ಒಬ್ಬ 6 ವರ್ಷ ಮತ್ತು ಇನ್ನೊಬ್ಬ 3 ವರ್ಷದ ಇಬ್ಬರು ಗಂಡು ಮಕ್ಕಳಿದ್ದಾರೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯೆಯೊಂದಿಗೆ ಸಂಸ್ಕಾರ ಬೆಳೆಸಿಕೊಂಡಾಗ ಮಕ್ಕಳು ಆದರ್ಶ ವಿದ್ಯಾರ್ಥಿಯಾಗಿ ಬೆಳೆಯುತ್ತಾರೆ. ಯಾವುದೇ ವಿಷಯವನ್ನು ಅಧ್ಯಯನ ಮಾಡುವಾಗ ಅದರ ಬಗ್ಗೆ ಚಿಂತನೆ ಮಾಡಬೇಕು ಆಗ ನಿರ್ದಿಷ್ಟ ಗುರಿ ಯಶಸ್ವಿಯಾಗುತ್ತದೆ ಎಂದು ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಅವರು ಆಶೀರ್ವಚನ ನೀಡುತ್ತಾ ಹೇಳಿದರು. ಅವರು ಗುರುವಾರ ಸುಜ್ಞಾನ ಎಜುಕೇಶನಲ್ ಟ್ರಸ್ಟ್, ಸುಜ್ಞಾನ ಪಪೂ ಕಾಲೇಜು ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರಣ್ಯ ಕ್ಯಾಂಪಸ್, ಯಡಾಡಿ-ಮತ್ಯಾಡಿ, ಕುಂದಾಪುರ ಇಲ್ಲಿ ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರ ಶ್ರೀ ಭಾರತೀತೀರ್ಥ ಅನುಗ್ರಹದಿಂದ ನಡೆದ ಅಕ್ಷರಾಭ್ಯಾಸ ಮತ್ತು ಸುವಿದ್ಯಾರಂಭ, ವಾಣಿ ವಿಲಾಸ ವಿದ್ಯಾರ್ಥಿ ನಿಲಯ ಹಾಗೂ ನೂತನ ಕಟ್ಟಡವನ್ನು ದೀಪ ಪ್ರಜ್ವಲನಗೊಳಿಸಿ ಮಾತನಾಡಿದರು. ಪ್ರತಿಯೊಬ್ಬ ಮಗುವಿನಲ್ಲಿಯೂ ಸುಪ್ತವಾದ ಪ್ರತಿಭೆ ಅಡಗಿರುತ್ತದೆ. ಅಂತಹ ಪ್ರತಿಭೆಯ ಅನಾವರಣಕ್ಕೆ ಅವಕಾಶ ಕಲ್ಪಿಸಿದಾಗ, ಆ ಮಗು ಹಾಗೂ ಸಮಾಜ ಅದರ ಪ್ರಯೋಜನ ಪಡೆಯಲು ಸಹಕಾರಿಯಾಗಬಲ್ಲದು ಎಂದರು. ಇದೇ ಸಂದರ್ಭದಲ್ಲಿ ಶಾಲಾ ಕಟ್ಟಡದಲ್ಲಿ ಶಾರದ ದೇವಿಯ ವಿಗ್ರಹವನ್ನು ಪ್ರತಿಷ್ಠಾಪಿಸಿ ವಿಶೇಷ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ ಫಲಾನುಭವಿಗಳ ಮಾಹಿತಿಯನ್ನು ಸರ್ಕಾರ ಪಡೆಯುತ್ತಿರುವುದು ಈ ಯೋಜನೆಯನ್ನು ನಿಲ್ಲಿಸುವ ಉದ್ದೇಶದಿಂದಲ್ಲ. ಆದರೆ ಬಿಜೆಪಿಯವರು ಕಾಂಗ್ರೆಸ್ ಸರ್ಕಾರ ಸಾಮಾಜಿಕ ಪಿಂಚಣಿ ನಿಲ್ಲಿಸುವ ಹುನ್ನಾರ ಮಾಡುತ್ತಿದೆ ಎಂದು ಅಪಪ್ರಚಾರ ಮಾಡುವುದರ ಮೂಲಕ ಜನರ ದಾರಿ ತಪ್ಪುಸುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದರು. ಈಗ ಪ್ರಸ್ತುತ 60 ರಿಂದ 63 ವರ್ಷ ಪ್ರಾಯದವರಿಗೆ 600 ರೂಪಾಯಿ ಪಿಂಚಣಿ, 63 ರಿಂದ 65 ವರ್ಷ ಪ್ರಾಯದವರಿಗೆ 800 ಹಾಗೂ 65 ವರ್ಷ ಪ್ರಾಯ ಮೇಲ್ಪಟ್ಟವರಿಗೆ 1200 ರೂಪಾಯಿ ಪಿಂಚಣಿ ದೊರಕುತ್ತಿದೆ. ಆದರೆ ಪ್ರಾಯ ಹಾಗೂ ಇತರೆ ದಾಖಲೆಗಳಲ್ಲಿನ ಗೊಂದಲಗಳಿಂದ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳ ಮಾಸಿಕ ಪಿಂಚಣಿಯಲ್ಲಿ ಒಂದಷ್ಟು ಗೊಂದಲಗಳು ಏರ್ಪಟ್ಟ ಕಾರಣ ಅಂದರೆ 600 ರೂಪಾಯಿ ಪಿಂಚಣಿ ಪಡೆಯುವವರಿಗೆ 1200 ರೂಪಾಯಿ ಪಿಂಚಣಿ ಅವರ ಖಾತೆಗೆ ಹೋಗುತ್ತಿದ್ದು, 1200 ಪಿಂಚಣಿ ಪಡೆಯುತ್ತಿದ್ದ ಫಲಾನುಭವಿಗಳ ಖಾತೆಗೆ 600 ರೂಪಾಯಿ ಬರುತ್ತಿರುವ ಬಗ್ಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ವೆಬ್ಸೈಟ್ https://shp.karnataka.gov.in/bcwd ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 25 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ಸೈಟ್ https://bcwd.karnataka.gov.in/ ಅಥವಾ ಸಹಾಯವಾಣಿ ಸಂಖ್ಯೆ: 805077004 ಹಾಗೂ 8050770005 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಅಮಾಸೆಬೈಲು: ಹುಲ್ಲು ಕೊಯ್ಯಲು ಹೋಗಿದ್ದ ಯುವತಿ ಕಾಲು ಜಾರಿ ಕಿಂಡಿ ಅಣೆಕಟ್ಟಿನ ನೀರಿಗೆ ಬಿದ್ದು ಮೃತಪಟ್ಟ ಘಟನೆ ಗುರುವಾರ ಅಮಾಸೆಬೈಲು ಗ್ರಾಮದ ಜಡ್ಡಿನಗದ್ದೆಯ ಎಂಬಲ್ಲಿ ನಡೆದಿದೆ. ಜಡ್ಡಿನಗದ್ದೆಯ ಸಂಜೀವ ನಾಯ್ಕ ಮತ್ತು ನರ್ಸಿ ದಂಪತಿಯ ಪುತ್ರಿ ಮೂಕಾಂಬಿಕಾ (24) ಮೃತಪಟ್ಟವರು. ಮೂಕಾಂಬಿಕಾ ಅಮಾಸೆಬೈಲಿನ ಪೆಟ್ರೋಲ್ ಬಂಕ್ನಲ್ಲಿ ಕೆಲಸ ಮಾಡುತ್ತಿದ್ದು, ಬೆಳಿಗ್ಗೆ ಹುಲ್ಲು ತರಲು ಅತ್ತಿಗೆ ಅಶ್ವಿನಿ ಅವರೊಂದಿಗೆ ತೋಟಕ್ಕೆ ಹೋಗಿದ್ದರು. ಮರಳುವಾಗ ಅಶ್ವಿನಿ ಅವರು ಹುಲ್ಲಿನ ಹೊರೆಯನ್ನು ಹೊತ್ತುಕೊಂಡು ಮನೆಯ ಕಡೆಗೆ ಬರುವಾಗ ಕಾಣೆಯಾಗಿದ್ದರು. ಅಶ್ವಿನಿ ಅವರು ಹಿಂದಿರುಗಿ ಹುಡುಕುತ್ತಾ ಹೋದಾಗ ಅಣೆಕಟ್ಟಿನ ದಂಡೆಯ ಮೇಲೆ ಹುಲ್ಲು ಕೊಯ್ಯುವ ಕತ್ತಿ ಕಾಣಿಸಿತು. ಭಯದಿಂದ ಅಶ್ವಿನಿ ಅವರು ಬೊಬ್ಬೆ ಹಾಕಿದಾಗ ಮನೆಯವರು ಬಂದು ಅಣೆಕಟ್ಟಿನಲ್ಲಿ ಹುಡುಕಿದಾಗ ಮೃತದೇಹ ಪತ್ತೆಯಾಯಿತು. ಮೃತರು ತಂದೆ, ತಾಯಿ ಹಾಗೂ 6 ಮಂದಿ ಸಹೋದರಿಯರು ಮತ್ತು ಸಹೋದರರನ್ನು ಅಗಲಿದ್ದಾರೆ ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಯೋಗದಲ್ಲಿ ಮುಖ್ಯವಾಗಿ ಎರಡು ಅಂಶಗಳು. ಒಂದು ತತ್ವಶಾಸ್ತ್ರ ಇನ್ನೊಂದು ಅಭ್ಯಾಸ. ಆದರೆ ಈ ಎರಡು ಅಂಶಗಳು ಒಟ್ಟಿಗೆ ಮೇಳೈಸಬೇಕಾದಾಗ, ಮೊದಲು ತತ್ತ್ವಶಾಸ್ತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಅಭ್ಯಾಸ ಮಾಡಲು ಮೊದಲು ಯೋಗವನ್ನು ಸರಿಯಾಗಿ ಅರ್ಥ ಮಾಡಿಕೊಂಡಿರಬೇಕು ಎಂದು ಉಜಿರೆ ಎಸ್ಡಿಎಂ ನ್ಯಾಚುರೋಪತಿ ಹಾಗೂ ಯೋಗಿಕ್ ಸೈನ್ಸ್ ಕಾಲೇಜಿನ ಉಪಪ್ರಾಂಶುಪಾಲೆ ಹಾಗೂ ಡೀನ್ ಡಾ. ಸುಜಾತ ದಿನೇಶ್ ಹೇಳಿದರು. ಅವರು ಆಳ್ವಾಸ್ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜಿನಲ್ಲಿ, ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಶೋಧನಾ ಕೇಂದ್ರ ಪರಿಷತ್ತು, ಭಾರತ ಸರ್ಕಾರದ ಆಯುಷ್ಯ ಸಚಿವಾಲಯ ಇವುಗಳ ಜಂಟಿ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಜೂನ್ 16 ರಿಂದ 19 ರವರೆಗೆ ‘ಯೂತ್ ಯೋಗ ಫೆಸ್ಟಿವಲ್’ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ನ್ಯಾಚುರೋಪಥಿ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡುವಾಗ ಬರುವ ಅಡೆತಡೆಗಳನ್ನು ಯೋಗತತ್ವಶಾಸ್ತ್ರ ಸಿದ್ಧಾಂತಗಳ ನೆಲೆಯಲ್ಲಿ ಪರಿಹರಿಸಿಕೊಳ್ಳಬೇಕು. ನಮ್ಮ ಭವಿಷ್ಯವನ್ನು ನಮ್ಮ ವರ್ತಮಾನ ನಿರ್ಧರಿಸುತ್ತದೆ. ಆದುದರಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2024-25 ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಕೋರ್ಸುಗಳಿಗೆ ಶುಲ್ಕ ಮರುಪಾವತಿ ಕಾರ್ಯಕ್ರಮಕ್ಕೆ ವೆಬ್ಸೈಟ್ https://ssp.postmatric.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್ 30 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ: 8050770005, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಸಂಖ್ಯೆ: 1902, ಇ-ಮೇಲ್ postmetrichelp@karnataka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
